Tag: ಪತಿ

  • ಸ್ಕ್ರೂಡ್ರೈವರ್‌ನಲ್ಲಿ ಪತ್ನಿಯ ಕತ್ತು, ಎದೆಗೆ ಚುಚ್ಚಿ ಕೊಲೆಗೆ ಮುಂದಾದ ಪತಿ!

    ಸ್ಕ್ರೂಡ್ರೈವರ್‌ನಲ್ಲಿ ಪತ್ನಿಯ ಕತ್ತು, ಎದೆಗೆ ಚುಚ್ಚಿ ಕೊಲೆಗೆ ಮುಂದಾದ ಪತಿ!

    ಚಿಕ್ಕಬಳ್ಳಾಪುರ: ಸ್ಕ್ರೂಡ್ರೈವರ್ ಮೂಲಕ ಪತ್ನಿಯ ಕತ್ತು, ಎದೆಗೆ ಚುಚ್ಚಿ ಪತಿ ಕೊಲೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ದಲ್ಲಿ ನಡೆದಿದೆ. ಗಾಯಗೊಂಡಾಕೆಯನ್ನು ನಿರ್ಮಲಾ ಎಂದು ಗುರುತಿಸಲಾಗಿದೆ. ಈಕೆಯನ್ನು ಗಂಡ ರಾಜೇಶ್ ಕೊಲೆ ಮಾಡಲು ಯತ್ನಿಸಿದ್ದಾನೆ.

    ಏಮಿದು ಘಟನೆ..?: ಪ್ರೀತಿಸಿ ಮದುವೆ (Nirmala- Rajesh Love Marriage) ಯಾದ ನಿರ್ಮಲಾ, ಪತಿ ರಾಜೇಶ್‍ನನ್ನು ಬಿಟ್ಟು ತಿಂಗಳಿಂದ ನಾಪತ್ತೆಯಾಗಿದ್ದಳು. ಹೆಂಡತಿ ಎಲ್ಲೋ ಹೊದ್ಲು ಅಂತ ಹುಡುಕಾಡ್ತಿದ್ದ ಗಂಡನ ಕಣ್ಣಿಗೆ ಕಂಡಿದ್ದೇ ತಡ, ಹೆಂಡತಿನಾ ಜೊತೆ ಬರುವಂತೆ ಪರಿಪರಿಯಾಗಿ ಕೇಳಿಕೊಂಡಿದ್ದಾನೆ. ಆದರೆ ಹೆಂಡತಿ ನಾನು ಬರಲ್ಲ ಅಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಗಂಡ ಆಕೆಯ ಮುಖಮೂತಿ ನೋಡದೆ ಸ್ಕ್ರೂಡ್ರೈವರ್‍ನಿಂದ ಕುತ್ತಿಗೆಗೆ ಚುಚ್ಚಿ ಹಾಗೂ ಚಾಕುವಿನಿಂದ ಕೊಯ್ದು ಕೊಲೆ ಮಾಡಲು ಯತ್ನಿಸಿದ್ದಾನೆ. ಅದೃಷ್ಟವಶಾತ್ ಆಕೆ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆ ಸೇರಿದ್ದಾಳೆ. ಇತ್ತ ಗಂಡ, ಹೆಂಡತಿ ಸತ್ತೇ ಹೋದಳು ಅನ್ನೋ ಭಯದಿಂದ ಬಾರ್‍ಗೆ ಹೋಗಿ ಎಣ್ಣೆ ಕುಡಿದು ನಶೆಯಲ್ಲಿ ಧೈರ್ಯದಿಂದ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಇದನ್ನೂ ಓದಿ: ಅಂಕೋಲಾ ಬಸ್ ನಿಲ್ದಾಣದಲ್ಲಿ ಕಸ ಸ್ವಚ್ಛ ಮಾಡಿದ ಹಾಲಕ್ಕಿ ಮಹಿಳೆಯನ್ನು ಹೊಗಳಿದ ಆನಂದ್ ಮಹೇಂದ್ರ

    ಮೂಲತಃ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ನಿಮ್ಮಲಕುಂಟೆ ನಿವಾಸಿಯಾಗಿರುವ ರಾಜೇಶ್, ವೃತ್ತಿಯಲ್ಲಿ ಬೋರ್ ಮೋಟಾರ್ ರಿಪೇರಿ ಮಾಡುತ್ತಿದ್ದಾನೆ. ಈತ ಬೆಂಗಳೂರಿನ ಕೆ.ಆರ್ ಪುರಂನ ಲೀಲಾ ಜೊತೆ ಮೊದಲ ಮದುವೆಯಾಗಿದ್ದ. ಆದರೆ ಲೀಲಾ ಬಾಣಂತಿಗೆ ತವರು ಮನೆ ಸೇರಿದಾಗ ಆಕೆಯ ಅಕ್ಕ ನಿರ್ಮಲಾಳನ್ನ ಪ್ರೀತಿಸಿ ಮದುವೆಯಾಗಿದ್ದಾನೆ. ನಂತರ ಕೂಲಿ ಅರಸಿ ಊರೂರು ಅಲೆದು ಸಂಸಾರ ನಡೆಸುತ್ತಿದ್ದರು. ಆದರೆ ಕಳೆದ 1 ತಿಂಗಳ ಹಿಂದೆ ದಿಬ್ಬೂರಹಳ್ಳಿಯಲ್ಲಿ ವಾಸವಿದ್ದಾಗ ನಿರ್ಮಲಾ, ರಾಜೇಶ್ ಗೆ ಏನೂ ಹೇಳದೆ ಹೊರಟು ಹೋಗಿದ್ದಳು. ಹೀಗಾಗಿ ಹೆಂಡತಿ ಹುಡುಕಾಟ ನಡೆಸುತ್ತಿದ್ದ ರಾಜೇಶ್ ಗೆ ನಿನ್ನೆ ಚಿಕ್ಕಬಳ್ಳಾಪುರ ತಾಲೂಕಿನ ಪಟ್ರೇನಹಳ್ಳಿ ಬಳಿ ನಿರ್ಮಲಾ ಕಂಡಿದ್ದಾಳೆ.

    ಸ್ನೇಹಿತೆ ಸುನೀತಾ ಮನೆಯಲ್ಲಿದ್ದ ನಿರ್ಮಲಾಳನ್ನ ಪರಿಪರಿಯಾಗಿ ತನ್ನ ಜೊತೆ ವಾಪಸ್ ಬರುವಂತೆ ಕೇಳಿಕೊಂಡಿದ್ದಾನೆ. ಆದರೆ ನಾನು ನಿನ್ನ ಜೊತೆ ಬರಲ್ಲ ನನ್ನ ಮರ್ಯಾದೆ ತೆಗೀಬೇಡಿ ಅಂತ ಗಲಾಟೆ ಮಾಡಿದ್ದಾಳೆ. ಇದರಿಂದ ರೋಸಿ ಹೋದ ರಾಜೇಶ್, ಸುನೀತಾ ಮನೆಯಲ್ಲಿಯೇ ಇದ್ದ ಸ್ಕ್ರೂಡ್ರೈವರ್ ತಗೊಂಡು ನಿರ್ಮಲಾ ಕುತ್ತಿಗೆಗೆ ಇರಿದಿದ್ದಾನೆ. ತನ್ನ ಬಳಿಯೇ ಇದ್ದ ಚಿಕ್ಕ ಚಾಕುವಿನಿಂದ ಎದೆ ಹಾಗೂ ಕುತ್ತಿಗೆ ಮುಖದ ಮೇಲೆ ಕೊಯ್ದಿದ್ದಾನೆ.

    ನಿರ್ಮಲಾ ಹೇಳೋ ಪ್ರಕಾರ, ಎಡಗೈ ಮೂಳೆ ಸಮಸ್ಯೆಗೆ ಗಂಡ ಚಿಕಿತ್ಸೆ ಕೊಡಿಸ್ತಿಲ್ಲ ಅಂತ ತವರು ಮನೆ ಸೇರಿದ್ದೆ. ಚಿಕಿತ್ಸೆ ಪಡೆಯೋಕೆ ದುಡ್ಡು ಇಲ್ಲ ಅಂತ ಮುದ್ದೇನಹಳ್ಳಿಯ ಪ್ರೀ ಹಾಸ್ಪಿಟಲ್ ಗೆ ಟ್ರೀಟ್ ಮೆಂಟ್ ಗೆ ಅಂತ ಬಂದಿದ್ದೆ. ಈ ವೇಳೆ ಸ್ನೇಹಿತೆ ಸುನೀತಾ ಸಿಕ್ಕಿದರು. ಅವರ ಮನೆಗೆ ಹೋಗಿದ್ದೆ. ಆದರೆ ಅಲ್ಲಿಗೆ ನನ್ನ ಗಂಡ ಬಂದು ಏಕಾಏಕಿ ಗಲಾಟೆ ಮಾಡಿ ಮರ್ಡರ್ ಮಾಡೋಕೆ ಮುಂದಾದನು. ಈ ವೇಳೆ ಸುನೀತಾ ಸಹ ನಿರ್ಮಲಾ ರಕ್ಷಣೆಗೆ ಮುಂದಾಗಿದ್ದು, ಆಕೆಯ ಕೈಗೆ ಗಾಯವಾಗಿದೆ ಎಂದು ತಿಳಿಸಿದ್ದಾಳೆ.

    ಸದ್ಯ ಗಾಯಾಳು ನಿರ್ಮಲಾಳಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

  • ಸೆಕ್ಸ್‌ಗೆ ಒಪ್ಪದ ಪತ್ನಿಯ ಶೀಲ ಶಂಕಿಸಿ ಕೈ-ಕಾಲು ಕಟ್ಟಿ ಕೊಲೆಗೈದ!

    ಸೆಕ್ಸ್‌ಗೆ ಒಪ್ಪದ ಪತ್ನಿಯ ಶೀಲ ಶಂಕಿಸಿ ಕೈ-ಕಾಲು ಕಟ್ಟಿ ಕೊಲೆಗೈದ!

    ತಿರುವನಂತಪುರಂ: ಸೆಕ್ಸ್ ಗೆ ಒಪ್ಪದ ಪತ್ನಿಯ ಮೇಲೆ ಅಕ್ರಮ ಸಂಬಂಧದ ಅನುಮಾನ ಬಂದು ಪತಿ (Husband Killed Wife) ಬರ್ಬರವಾಗಿ ಕೊಲೆಗೈದ ಘಟನೆ ಕೇರಳದ ಎರ್ನಾಕುಲಂನ ಪೆರಿಂತಲ್ಮನ್ನಾ ಎಂಬಲ್ಲಿ ನಡೆದಿದೆ.

    ಘಟನೆಗೆ ಸಂಬಂಧಿಸಿದಂತೆ ಆರೋಪಿ ಮೊಹಮ್ಮದ್ ರಫೀಕ್ (35) ನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಪತ್ನಿ ಫಾತಿಮಾ ಫಹ್ನಾ (30)ಳನ್ನು ಕೊಲೆ ಮಾಡಿದ್ದಾನೆ.

    ರಫೀಕ್ ಶನಿವಾರ ರಾತ್ರಿ ಪತ್ನಿಯನ್ನು ಬಟ್ಟೆಯಿಂದ ಮೂಗು-ಬಾಯಿ ಕಟ್ಟಿ ಸಾಯಿಸಿದ್ದಾನೆ. ನಾಲ್ಕೂವರೆ ವರ್ಷದ ಮಗು ಜೊತೆ ದಂಪತಿ ಮಲಗಿದ್ದ ಸಂದರ್ಭದಲ್ಲಿ ಪತಿ ಈ ಕೃತ್ಯ ಎಸಗಿದ್ದಾನೆ. ಪತ್ನಿ ಸೆಕ್ಸ್ ಗೆ ಒಪ್ಪದಿದ್ದರಿಂದ ಸಿಟ್ಟುಗೊಂಡ ಪತಿ ರಫೀಕ್ ಆಕೆಗೆ ಬೇರೊಬ್ಬನ ಜೊತೆ ಸಂಬಂಧ ಇರಬೇಕು ಎಂದು ಶಂಕಿಸಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹೆಂಡತಿ ಇಬ್ಬರು ಮಕ್ಕಳನ್ನು ಕೊಲೆಗೈದು ವ್ಯಕ್ತಿ ನೇಣಿಗೆ ಶರಣು

    ಕೊಲೆ ಮಾಡಿದ್ದು ಹೇಗೆ..?: ಪತ್ನಿಯ ತಾಯಿ ಪಕ್ಕದ ರೂಮಿನಲ್ಲಿ ಮಲಗಿದ್ದರು. ಇತ್ತ ರಫೀಕ್ ಮೊದಲು ತನ್ನ ಪತ್ನಿಯ ಕೈ-ಕಾಲುಗಳನ್ನು ಕಿಟಕಿಗೆ ಕಟ್ಟಿದ್ದಾನೆ. ಇದನ್ನು ಗಮನಿಸಿದ ಫಾತಿಮಾ ತಾಯಿ ಜೋರಾಗಿ ಕಿರುಚಿಕೊಂಡು ಸಹಾಯಕ್ಕಾ ಅಕ್ಕ-ಪಕ್ಕದ ಮನೆಯವರನ್ನು ಕರೆದಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ದಾಖಲಾಯಿಸಿತಾದರೂ ಆಕೆ ಬದುಕುಳಿಯಲಿಲ್ಲ.

    ಇತ್ತ ಪತ್ನಿ ಮೃತಪಟ್ಟ ಬೆನ್ನಲ್ಲೇ ಪತಿ ರಫೀಕ್, ಆಕೆಯ ಚಿನ್ನಾಭರಣಗಳೊಂದಿಗೆ ತಲೆಮರೆಸಿಕೊಂಡಿದ್ದಾನೆ. ನಂತರ ಆತನನ್ನು ಹುಡುಕಿ ಬಂಧಿಸಲಾಯಿತು.

     

  • ಪತಿ ಚಾಕ್ಲೇಟ್ ತಂದು ಕೊಟ್ಟಿಲ್ಲವೆಂದು ಪತ್ನಿ ಆತ್ಮಹತ್ಯೆ

    ಪತಿ ಚಾಕ್ಲೇಟ್ ತಂದು ಕೊಟ್ಟಿಲ್ಲವೆಂದು ಪತ್ನಿ ಆತ್ಮಹತ್ಯೆ

    ಬೆಂಗಳೂರು: ಪತಿ ಚಾಕ್ಲೇಟ್ (Chocklate) ತಂದು ಕೊಟ್ಟಿಲ್ಲವೆಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಹೆಣ್ಣೂರಿನಲ್ಲಿ ನಡೆದಿದೆ.

    ನಂದಿನಿ (30) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆರು ವರ್ಷದ ಹಿಂದೆ ನಂದಿನಿ ಮದುವೆಯಾಗಿದ್ದಳು. ಈಕೆಯ ಪತಿ ಸಲೂನ್ ನಲ್ಲಿ ಕೆಲಸ ಮಾಡಿಕೊಂಡಿದ್ರು. ಗುರುವಾರ ಬೆಳಗ್ಗೆ ಪತಿ ಕೆಲಸಕ್ಕೆ ಹೊರಟಿದ್ದರು. ಈ ವೇಳೆ ಚಾಕ್ಲೇಟ್ ತಂದು ಕೊಡುವಂತೆ ಪತ್ನಿ ನಂದಿನಿ ಹೇಳಿದ್ದಳು.

    ಇತ್ತ ಮಧ್ಯಾಹ್ನವಾದರು ಪತಿ ಚಾಕ್ಲೇಟ್ ತಂದುಕೊಟ್ಟಿರಲಿಲ್ಲ. ಇದರಿಂದ ಬೇಸತ್ತು ಪತ್ನಿ ನಂದಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಎಂದಿನಂತೆ ಸಂಜೆ ಕೆಲಸ ಮುಗಿಸಿ ಹೊರಡುವಾಗ ಪತಿ ನಂದಿನಿಗೆ ಕರೆ ಮಾಡಿದ್ದಾರೆ. ಈ ವೇಳೆ ಪತ್ನಿ ಕರೆ ಸ್ವೀಕರಿಸಲಿಲ್ಲ. ಮನೆಗೆ ಬಂದು ನೋಡಿದಾಗ ನೇಣು ಹಾಕಿಕೊಂಡಿರೋದು ಬೆಳಕಿಗೆ ಬಂದಿದೆ.

    ಈ ಸಂಬಂಧ ಹೆಣ್ಣೂರು ಪೊಲೀಸ್ ಠಾಣೆ (Hennuru Police Station) ಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಪ್ರಾಪ್ತೆಯ ಅತ್ಯಾಚಾರ- ಕೃತ್ಯದ ವೇಳೆ ಬಳಸಿದ್ದ ಶರ್ಟ್ ಬಣ್ಣದಿಂದ ಆರೋಪಿ ಅರೆಸ್ಟ್

  • ಪತಿಯನ್ನು ಕೊಂದು ಪೀಸ್ ಪೀಸ್ ಮಾಡಿ ಸೂಟ್‍ಕೇಸ್‍ನಲ್ಲಿ ತುಂಬಿದ ಪತ್ನಿ

    ಪತಿಯನ್ನು ಕೊಂದು ಪೀಸ್ ಪೀಸ್ ಮಾಡಿ ಸೂಟ್‍ಕೇಸ್‍ನಲ್ಲಿ ತುಂಬಿದ ಪತ್ನಿ

    ಚೆನ್ನೈ: ಚೆನ್ನೈನ ಗ್ರೌಂಡ್ ಏರ್‌ಪೋರ್ಟ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಆತನ ಪತ್ನಿಯೇ (wife) ಕೊಲೆ ಮಾಡಿದ ಘಟನೆ ತಮಿಳುನಾಡಿನ ( Tamil Nadu) ಪುದುಕೊಟ್ಟೈನಲ್ಲಿ ನಡೆದಿದೆ.

    ಆರೋಪಿ ಮಹಿಳೆಯನ್ನು ಭಾಗ್ಯಲಕ್ಷ್ಮಿ (39) ಎಂದು ಗುರುತಿಸಲಾಗಿದೆ. ವಿಲ್ಲುಪುರಂ ನಿವಾಸಿ ಜಯನಂದನ್ ಮೃತ ವ್ಯಕ್ತಿ. ಜಯನಂದನ್ ತನ್ನ ಸಹೋದರಿಯೊಂದಿಗೆ ನಂಗನಲ್ಲೂರಿನಲ್ಲಿ ವಾಸವಾಗಿದ್ದ. ಆದರೆ ಮಾ. 18ರಂದು ಆತ ತನ್ನ ಮನೆಗೆ ಹೋಗುವುದಾಗಿ ಸಹೋದರಿಗೆ ಹೇಳಿ ಮನೆಯಿಂದ ಹೋಗಿದ್ದಾನೆ.

    crime

    ಅದಾದ ಬಳಿಕ ಜಯನಂದನ್‍ನ ಫೋನ್ ಸ್ವಿಚ್ ಆಫ್ ಆಗಿದ್ದು, ಆತನನ್ನು ಸಂಪರ್ಕಿಸಲು ಆಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಜಯನಂದನ್ ಸಹೋದರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಆಗಿರುವ ಬಗ್ಗೆ ದೂರು ದಾಖಲಿಸಿದ್ದಾಳೆ.

    ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ. ಈ ವೇಳೆ ಜಯನಂದನ್ ಸೆಮ್ಮಲಂಪಟ್ಟಿಯಲ್ಲಿರುವ ಭಾಗ್ಯಲಕ್ಷ್ಮಿಗೆ ಕೊನೆಯ ಕರೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆಕೆಯನ್ನು ತನಿಖೆ ನಡೆಸಿದ್ದಾರೆ. ಈ ವೇಳೆ ಸ್ನೇಹಿತನ ಸಹಾಯದಿಂದ ಕೊಲೆ ಮಾಡಿ ಆತನ ದೇಹವನ್ನು ತುಂಡು ತುಂಡಾಗಿ ಕತ್ತರಿಸಿರುವುದಾಗಿ ಭಾಗ್ಯಲಕ್ಷ್ಮಿ ಒಪ್ಪಿಕೊಂಡಿದ್ದಾಳೆ.

    ಘಟನೆಯೇನು?: ಜಯಂಧನ್ ಮತ್ತು ಭಾಗ್ಯಲಕ್ಷ್ಮಿ ಹಲವಾರು ವರ್ಷಗಳ ಹಿಂದೆ ತಾಂಬರಂನ ಹೋಟೆಲ್‍ನಲ್ಲಿ ಭೇಟಿಯಾಗಿದ್ದರು. ಅದಾದ ನಂತರ 2020ರಲ್ಲಿ ದೇವಸ್ಥಾನದಲ್ಲಿ ವಿವಾಹವಾದರು. ಆದರೆ ದಂಪತಿ 2021ರಲ್ಲಿ ಬೇರೆಯಾಗಿದ್ದರು. ಮಾ.19ರಂದು ಜಯಂಧನ್ ಭಾಗ್ಯಲಕ್ಷ್ಮಿ ಭೇಟಿ ಮಾಡಲು ಬಂದಿದ್ದ. ಈ ವೇಳೆ ಇಬ್ಬರ ನಡುವೆ ಜಗಳ ನಡೆದಿದೆ. ಇದನ್ನೂ ಓದಿ: ರಾಜಸ್ಥಾನದಲ್ಲಿ ತಲೆ ಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ಸೇರಿ ಐವರ ಬಂಧನ

    ಜಯಂಧನನ್ನು ಭಾಗ್ಯಲಕ್ಷ್ಮಿ ಕೊಲೆಗೈದಿದ್ದಾಳೆ. ನಂತರ ಆತನ ದೇಹದ ಭಾಗಗಳನ್ನು ಕತ್ತರಿಸಿ ಸೂಟ್‍ಕೇಸ್ ಹಾಗೂ ಗೋಣಿಚೀಲದಲ್ಲಿ ಸಾಗಿಸಿದ್ದಾಳೆ. ಅದಾದ ಬಳಿಕ ಸ್ನೇಹಿತನ ಸಹಾಯ ಪಡೆದು ಕೋವಲಂ ಬಳಿಯ ನಗರದ ಹೊರವಲಯದಲ್ಲಿ ಜಯಂಧನನ್ನು ಹೂಳಿರುವುದಾಗಿ ಪೊಲೀಸ್‌ ತನಿಖೆಯಲ್ಲಿ ಬಯಲಾಗಿದೆ. ಇದನ್ನೂ ಓದಿ: ಸಿಸಿ ಕ್ಯಾಮೆರಾಗೆ ಬಟ್ಟೆ ಮುಚ್ಚಿ ಹುಂಡಿ ಕಳ್ಳತನ- ಅರ್ಚಕರಿಂದಲೇ ಕೃತ್ಯ ಆರೋಪ

  • ಗಂಡ-ಹೆಂಡ್ತಿ ಒಟ್ಟಿಗೆ ಕೂತು ಎಣ್ಣೆ ಹೊಡೆದ್ರು- ಜಗಳವಾಡಿ 12ನೇ ಪತ್ನಿಯನ್ನೇ ಮುಗಿಸಿದ!

    ಗಂಡ-ಹೆಂಡ್ತಿ ಒಟ್ಟಿಗೆ ಕೂತು ಎಣ್ಣೆ ಹೊಡೆದ್ರು- ಜಗಳವಾಡಿ 12ನೇ ಪತ್ನಿಯನ್ನೇ ಮುಗಿಸಿದ!

    ರಾಂಚಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ 12ನೇ ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಅಚ್ಚರಿಯ ಘಟನೆಯೊಂದು ಜಾರ್ಖಂಡ್‍ (Jharkhand) ನಲ್ಲಿ ನಡೆದಿದೆ.

    ಮೃತಳನ್ನು ಸಾವಿತ್ರಿ ದೇವಿ (40) ಎಂದು ಗುರುತಿಸಲಾಗಿದ್ದು, ಈಕೆಯನ್ನು ಪತಿ ರಾಮಚಂದ್ರ ತುರಿ ಕೊಲೆ ಮಾಡಿದ್ದಾನೆ. ಪತಿ ಹಾಗೂ ಪತ್ನಿ ಇಬ್ಬರೂ ಕೋಣೆಯೊಳಗೆ ಕುಳಿತುಕೊಂಡು ಮದ್ಯಪಾನ (Alcohol) ಮಾಡಿದ್ದಾರೆ. ಹೀಗೆ ಮಾತನಾಡುತ್ತಾ ಇಬ್ಬರ ಮಧ್ಯೆ ವಿಚಾರವೊಂದಕ್ಕೆ ವಾಗ್ವಾದ ನಡೆದಿದೆ. ಪತ್ನಿಯ ಮಾತಿನಿಂದ ರೊಚ್ಚಿಗೆದ್ದ ಪತಿ, ಅಲ್ಲೇ ಇದ್ದ ಕೋಲು ತೆಗೆದುಕೊಂಡು ಚೆನ್ನಾಗಿ ಥಳಿಸಿದ್ದಾನೆ. ಪರಿಣಾಮ ಸಾವಿತ್ರಿ ದೇವಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.

    ಇತ್ತ ಘಟನೆಯ ವಿಚಾರ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಆರೋಪಿ ಪತಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಮೃತಳು ಆರೋಪಿಯ 12ನೇ ಪತ್ನಿಯಾಗಿದ್ದಾಳೆ. ಇದಕ್ಕೂ ಮೊದಲು ಮದುವೆಯಾಗಿರುವ 11 ಮಂದಿ ಪತ್ನಿಯರು ಕೂಡ ಈತ ನೀಡುತ್ತಿದ್ದ ಮಾನಸಿಕ ಹಿಂಸೆಯಿಂದ ಬಿಟ್ಟು ಹೋಗಿದ್ದಾರೆ. ಆರೋಪಿಗೆ ಮೂವರು ಪುತ್ರರು ಹಾಗೂ ಓರ್ವ ಮಗಳಿದ್ದು, ಎಲ್ಲರೂ ಸಾವಿತ್ರಿ ದೇವಿ ಜೊತೆ ವಾಸವಾಗಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.

    ಸಾವಿತ್ರಿ ದೇವಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆರೋಪಿಯ ತನಿಖೆ ನಡೆಯುತ್ತಿದೆ ಎಮದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಡಿಜೆ ಸೌಂಡ್ ನಿಲ್ಲಿಸಲು ಹೇಳಿದ್ದಕ್ಕೆ ಗರ್ಭಿಣಿ ಮೇಲೆ ಗುಂಡು ಹಾರಿಸಿದ ನೆರೆಮನೆಯಾತ

  • ಪತ್ನಿಯನ್ನೇ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ಪತಿ!

    ಪತ್ನಿಯನ್ನೇ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ಪತಿ!

    ಚಾಮರಾಜನಗರ: ಪತಿಯ ಅಕ್ರಮ ಸಂಬಂಧ (Illicit Relationship) ಪ್ರಶ್ನಿಸಿದ್ದಕ್ಕೆ ಪತ್ನಿ ಕೊಲೆಯಾದ ಘಟನೆ ಚಾಮರಾಜನಗರ (Chamarajanagar) ತಾಲೋಕು ಮೂಡ್ನಾಕೂಡು ಗ್ರಾಮದಲ್ಲಿ ನಡೆದಿದೆ.

    ಎಂ.ಸಿ.ಸೌಮ್ಯ (27) ಕೊಲೆಯಾದ ಮಹಿಳೆ. ಏಳು ವರ್ಷಗಳ ಹಿಂದೆ ಸೌಮ್ಯಳನ್ನು ವಿವಾಹವಾಗಿದ್ದ ಮಹೇಶ್ ಚಂದ್ರಗುರು ಪರಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಈ ವಿಚಾರ ತಿಳಿದ ಸೌಮ್ಯಾ, ಪತಿಯನ್ನು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ನೇಣು ಬಿಗಿದುಕೊಂಡು ವಿಲೇಜ್ ಅಕೌಂಟೆಂಟ್ ಆತ್ಮಹತ್ಯೆ

    ಪತ್ನಿ ಪ್ರಶ್ನಿಸಿದ್ದಕ್ಕೆ ಸಿಟ್ಟುಗೊಂಡ ಮಹೇಶ್ ಚಂದ್ರಗುರು, ಸೌಮ್ಯಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಸದ್ಯ ಆರೋಪಿ ಪತಿ ಮಹೇಶ್ ಚಂದ್ರಗುರುವನ್ನು ಪೊಲೀಸರು ಬಂಧಿಸಿದ್ದಾರೆ.

    ದಂಪತಿಗೆ 5 ವರ್ಷದ ಹೆಣ್ಣು ಮಗುವಿದೆ. ಇದೀಗ ಪ್ರಕರಣ ಸಂಬಂಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮಾಂಸ ತರದ್ದಕ್ಕೆ ನಡೆದ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯ

    ಮಾಂಸ ತರದ್ದಕ್ಕೆ ನಡೆದ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯ

    ಲಕ್ನೋ: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಪತ್ನಿ ಬರ್ಬರ ಕೊಲೆ (Husband Murdered Wife) ಯಲ್ಲಿ ಅಂತ್ಯವಾದ ಘಟನೆ ಉತ್ತಪ್ರದೇಶದ ಆಲಿಘರ್ ಜಿಲ್ಲೆಯಲ್ಲಿ ನಡೆದಿದೆ.

    ಮೃತ ದುರ್ದೈವಿ ಪತ್ನಿಯನ್ನು ಗುಡ್ಡೋ(30) ಎಂದು ಗುರುತಿಸಲಾಗಿದೆ. ಈಕೆಯನ್ನು ಪತಿ ಸಾಗಿರ್ ಕೊಲೆಗೈದಿದ್ದಾನೆ. ಈ ದಂಪತಿಗೆ ಮೂವರು ಮಕ್ಕಳಿದ್ದಾರೆ.

    ಇಂದು (ಸೋಮವಾರ) ಮಾಂಸ (Meat) ತರದಿದ್ದಕ್ಕೆ ಪತಿ ಹಾಗೂ ಪತ್ನಿ ನಡುವೆ ಜಗಳ ನಡೆದಿದೆ. ಮಾತಿಗೆ ಮಾತು ಬೆಳೆದು ಸಿಟ್ಟಿನಿಂದ ಸಾಗಿರ್, ಅಲ್ಲೇ ಇದ್ದ ಚಾಕು ತೆಗೆದುಕೊಂಡು ಮಕ್ಕಳ ಮುಂದೆಯೇ ಪತ್ನಿಯ ಕತ್ತು ಸೀಳಿದ್ದಾನೆ. ಇದನ್ನೂ ಓದಿ: ಗಂಡು ಮಗುವಾಗಿಲ್ಲವೆಂದು ಪತ್ನಿ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ

    ಇತ್ತ ಅಮ್ಮನನ್ನು ಕೊಲೆ ಮಾಡಿದ್ದರಿಂದ ಭಯಗೊಂಡ ಮಕ್ಕಳು ಜೋರಾಗಿ ಕಿರುಚಾಡಿವೆ. ಇದರಿಂದ ಅಕ್ಕಪಕ್ಕದ ನಿವಾಸಿಗಳು ಓಡಿಬಂದಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ.

    ಅಲ್ಲದೆ ಆರೋಪಿ ಸಾಗಿರ್ ನ ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ಮೂವರು ಮಕ್ಕಳಲ್ಲಿ ಓರ್ವ ಮಗಳು, ಪೊಲೀಸರಿಗೆ ನಡೆದ ಘಟನೆಯನ್ನು ಎಳೆಎಳೆಯಾಗಿ ವಿವರಿಸಿದ್ದಾಳೆ.

    ಈ ಸಂಬಂಧ ಎಸ್‍ಪಿ ಕುಲ್ದೀಪ್ ಮಾತನಾಡಿ, ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಅಲ್ಲದೆ ಆತ ಕೃತ್ಯಕ್ಕೆ ಬಳಸಿದ್ದ ಆಯುಧವನ್ನು ಕೂಡ ವಶಕ್ಕೆ ಪಡೆದುಕೊಳ್ಳಲಾಗಿದೆ. ಇನ್ನು ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ ಎಂದರು.

  • ಗಂಡು ಮಗುವಾಗಿಲ್ಲವೆಂದು ಪತ್ನಿ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ

    ಗಂಡು ಮಗುವಾಗಿಲ್ಲವೆಂದು ಪತ್ನಿ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ

    ಮೈಸೂರು: ಗಂಡು ಮಗುವಾಗಿಲ್ಲ ಎಂದು ಪಾಪಿ ಪತಿಮಹಾಶಯನೊಬ್ಬ ಪತ್ನಿ (Assault On Wife) ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

    ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲೂಕು ಸೋನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪತಿ ಚಂದ್ರು, ಪತ್ನಿ ಶಿವಮ್ಮ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಗೆ ಮಾವ ರಾಮೇಗೌಡ ಹಾಗೂ ಅತ್ತೆ ಕೆಂಪಮ್ಮ ಸಹಕಾರ ನೀಡಿರುವ ಆರೋಪ ಕೂಡ ಕೇಳಿ ಬಂದಿದೆ. ಇದನ್ನೂ ಓದಿ: ಮೀಸಲಾತಿ ವಿರೋಧಿಸಿ ಪ್ರತಿಭಟನೆ – ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ

    ಶಿವಮ್ಮ ಎರಡು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದರು. ಇದೇ ಕಾರಣವಾಗಿ ಶಿವಮ್ಮಗೆ ಪತಿ ಹಾಗೂ ಮನೆಯವರು ಮಾನಸಿಕ ಹಿಂಸೆ ನೀಡುತ್ತಿದ್ದರು. ಈ ಬಗ್ಗೆ ಹಲವು ಬಾರಿ ನ್ಯಾಯ ಪಂಚಾಯ್ತಿ ಮಾಡಿದ್ರೂ ಪ್ರಯೋಜನವಾಗಿರಲಿಲ್ಲ. ಇತ್ತ ಕಿರುಕುಳ ತಾಳಲಾರದೆ ಶಿವಮ್ಮ ಕಳೆದ ವರ್ಷ ಎಚ್.ಡಿ.ಕೋಟೆ ಪೊಲೀಸರಿಗೆ ದೂರು ನೀಡಿದ್ದರು.

    ಸದ್ಯ ಪತಿ ಚಂದ್ರುವನ್ನು ಪೊಲೀಸರು ಬಂಧಿಸಿದ್ದು, ತಲೆ ಮರೆಸಿಕೊಂಡಿರುವ ಮಾವ ರಾಮೇಗೌಡ ಅತ್ತೆ ಕೆಂಪಮ್ಮಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆ (HD Kote Police Station) ಯಲ್ಲಿ ಪ್ರಕರಣ ದಾಖಲಾಗಿದೆ.

  • ಪತಿ ವಿರುದ್ಧ ದೂರು- ಪತ್ನಿಗೆ ಕೋರ್ಟ್ ಆವರಣದಲ್ಲೇ ಆ್ಯಸಿಡ್ ಎರಚಿದ

    ಚೆನ್ನೈ: ನ್ಯಾಯಾಲಯದ (Court) ಆವರಣದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಗೆ (Wife) ಆ್ಯಸಿಡ್ (Acid) ಎರಚಿದ ಘಟನೆ ತಮಿಳುನಾಡಿನ (Tamil Nadu) ಕೊಯಮತ್ತೂರಿನಲ್ಲಿ (Coimbatore) ನಡೆದಿದೆ.

    ಶಿವಕುಮಾರ್ ಬಂಧಿತ ಆರೋಪಿ. ಶಿವಕುಮಾರ್ ವಿರುದ್ಧ ಆತನ ಪತ್ನಿ ಪ್ರಕರಣ ದಾಖಲಿಸಿದ್ದಳು. ಈ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಸಂತ್ರಸ್ತೆ ನ್ಯಾಯಾಲಯಕ್ಕೆ ಆಗಮಿಸಿದ್ದಳು. ಈ ವೇಳೆ ಶಿವಕುಮಾರ್ ಸಹ ಕೋರ್ಟ್‍ಗೆ ಹಾಜರಾಗಿದ್ದ. ಅಷ್ಟೇ ಅಲ್ಲದೇ ನೀರಿನ ಬಾಟಲಿಯಲ್ಲಿ ಆ್ಯಸಿಡ್ ತೆಗೆದುಕೊಂಡಿದ್ದ. ಅದಾದ ಬಳಿಕ ಪತ್ನಿ ಕಾಣುತ್ತಿದ್ದಂತೆ ಏಕಾಏಕಿ ಶಿವಕುಮಾರ್ ಆಕೆಯ ಮುಖಕ್ಕೆ ಆ್ಯಸಿಡ್ ಎರಚಿದ್ದಾರೆ.

    ಘಟನೆ ನಡೆಯುತ್ತಿದ್ದಂತೆ ಅಲ್ಲಿದ್ದ ವಕೀಲರು ಶಿವಕುಮಾರ್‌ನನ್ನು ಹಿಡಿದು ಥಳಿಸಿದ್ದಾರೆ. ಅದಾದ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ವೇಳೆ ಆರೋಪಿಯ ಪತ್ನಿ ಹಾಗೂ ಇಬ್ಬರು ವಕೀಲರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನೆಲ್ಲ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: RBI ಹೆಸರಲ್ಲಿ ಲಕ್ಷ ಲಕ್ಷ ಹಣ ವಂಚನೆ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್

    ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದಾಳಿಯ ಹಿಂದಿನ ಉದ್ದೇಶವನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು. ಇದನ್ನೂ ಓದಿ: ನಾಳೆ ಕರೆದಿದ್ದ ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್

  • ಮಾರಕಾಸ್ತ್ರದಿಂದ ಹೊಡೆದು ಪತ್ನಿ ಕೊಲೆಗೈದು ತಾನೂ ಆತ್ಮಹತ್ಯೆಗೆ ಶರಣಾದ!

    ಮಾರಕಾಸ್ತ್ರದಿಂದ ಹೊಡೆದು ಪತ್ನಿ ಕೊಲೆಗೈದು ತಾನೂ ಆತ್ಮಹತ್ಯೆಗೆ ಶರಣಾದ!

    ಬೆಳಗಾವಿ: ಪತ್ನಿ ಕೊಲೆಗೈದ ಪತಿಯೊಬ್ಬ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸಾಲಾಪುರ ಗ್ರಾಮದಲ್ಲಿ ನಡೆದಿದೆ.

    ಜಿಲ್ಲೆಯ ರಾಮದುರ್ಗ (Ramadurga) ತಾಲೂಕಿನ ಸಾಲಾಪೂರ ಗ್ರಾಮದ ಜಾನವ್ವ ದ್ಯಾಮನ್ನವರ (50) ಸ್ಥಳದಲ್ಲೇ ಸಾವನ್ನಪ್ಪಿದ ಮಹಿಳೆ. ಮಾರಕಾಸ್ತ್ರದಿಂದ ಹೊಡೆದು ಪತ್ನಿ ಜಾನವ್ವರನ್ನ ಪತಿ ಬಸವಗೌಡ ಶಾಸಪ್ಪನವರ (55) ಕೊಲೆ ಮಾಡಿದ್ದಾನೆ.

    ಪತ್ನಿ ಕೊಲೆಗೈದ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ಪೊಲೀಸರ ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಕಟಕೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಬಸವಗೌಡ, ಜಾನವ್ವ ಮೃತದೇಹ ರಾಮದುರ್ಗ ತಾಲೂಕಾಸ್ಪತ್ರೆಗೆ ರವಾನಿಸಲಾಗಿದ್ದು, ರಾಮದುರ್ಗ ತಾಲೂಕಿನ ಕಟಕೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ವಿವಾಹಿತೆ ಜೊತೆ ಓಡಿಹೋಗಿದ್ದಕ್ಕೆ ವ್ಯಕ್ತಿಯ ಮೂಗನ್ನೇ ಕತ್ತರಿಸಿದ್ರು!