ಮನಿಲಾ: ಸಾಮಾನ್ಯವಾಗಿ ಸ್ನೇಹಿತರೋ, ಸಂಬಂಧಿಕರೋ ಅಥವಾ ಸೋಲೋ ಟ್ರೀಪ್‍ಗಳನ್ನು ಮಾಡಿರೋದನ್ನು ನೀವು ನೋಡಿರಬಹುದು. ಆದರೆ ಇಲ್ಲೊಬ್ಬ ವ್ಯಕ್ತಿ ಪತ್ನಿ ಬದಲಿಗೆ ತನ್ನ ಹೆಂಡತಿಯ ಚಿತ್ರವಿರುವ ದಿಂಬಿನ ಜೊತೆ ರಜೆಯ ಮಜಾವನ್ನು ಕಳೆಯಲು ಪ್ರವಾಸ ಕೈಗೊಂಡಿದ್ದಾನೆ.
ಹೌದು.. ಈ ವ್ಯಕ್ತಿ ಫಿಲಿಪೈನ್ಸ್ ನಿವಾಸಿಯಾಗಿದ್ದಾನೆ. ಈತನ ಹೆಸರು ರೇಮಂಡ್ ಟ್ಯಾನ್ ಫಾರ್ಟುನಾಡೋ. ಈತ ಹಾಗೂ ಈತನ ಪತ್ನಿ ಜೊವಾನ್ನಾಳ ಇಬ್ಬರು ರಜೆಯಲ್ಲಿ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದರು. ಅದರಂತೆ ಎಲ್ಲಾ ರೀತಿಯ ತಯಾರಿಯನ್ನು ನಡೆಸಿದ್ದರು. ಆದರೆ ಕೊನೆ ಕ್ಷಣದಲ್ಲಿ ಜೊವಾನ್ನಾಳಗೆ ಕೆಲಸ ಬಂದಿದ್ದರಿಂದ ಆಕೆ ಕೊನೆ ಕ್ಷಣದಲ್ಲಿ ಪ್ರವಾಸವನ್ನು ರದ್ದು ಪಡಿಸಿದ್ದಳು.
ಇದರಿಂದಾಗಿ ಫಾರ್ಟುನಾಡೋಗೆ ಒಬ್ಬನೇ ಪ್ರವಾಸಕ್ಕೆ ಹೋಗುವ ಪರಿಸ್ಥಿತಿ ಬಂತು. ಆದರೆ ಆತ ತನ್ನ ಪತ್ನಿಯೊಂದಿಗೆ ಸಮಯ ಕಳೆಯಲು ಬಯಸಿದ್ದ. ಇದರಿಂದಾಗಿ ಆತ ಟ್ರಿಪ್‍ಗೆ ಹೋಗುವಾಗ ತನ್ನ ಜೊತೆ ಪತ್ನಿ ಬದಲಿಗೆ ಆಕೆಯ ಫೋಟೋವಿರುವ ಪಿಲ್ಲೊವನ್ನು ತೆಗೆದುಕೊಂಡು ಹೋಗಿದ್ದಾನೆ. ಇದನ್ನೂ ಓದಿ: ಝೀರೋ ಟ್ರಾಫಿಕ್‍ನಲ್ಲಿ ರಸ್ತೆ ದಾಟಿದ ಹುಲಿರಾಯನ ವೀಡಿಯೋ ವೈರಲ್
ತಾನು ಹೋದ ಸ್ಥಳದಲ್ಲೆಲ್ಲಾ ಆ ಪಲ್ಲೊ ಜೊತೆಗೆ ಫೋಟೋವನ್ನು ಹಾಕಿದ್ದಾನೆ. ಅಷ್ಟೇ ಅಲ್ಲದೇ ವಿಮಾನದಲ್ಲಿ ಆ ಪಿಲ್ಲೊಗೆಂದೇ ಪ್ರತ್ಯೇಕ ಸೀಟ್‍ನ್ನು ಕಾಯ್ದಿರಿಸಿದ್ದ. ಅಷ್ಟೇ ಅಲ್ಲದೇ ಆ ಪಿಲ್ಲೊವೊಂದಿಗೆ ಕೋವಿಡ್ ನಿಯಮವನ್ನು ಅನುಸರಿಸಿದ್ದಾನೆ. ಫಾರ್ಟುನಾಡೋ ಶಾಪಿಂಗ್ ಮಾಡುವಾಗ, ಡಾಯಿಂಗ್ ಮಾಡುವಾಗ ಅಷ್ಟೇ ಅಲ್ಲದೇ ತಿಂಡಿ ತಿನ್ನುವಾಗಲೂ ಆ ಪಿಲ್ಲೊವನ್ನು ತೆಗೆದುಕೊಂಡು ಹೋಗಿದ್ದಾನೆ. ಇದನ್ನೂ ಓದಿ:ಸಂಚಾರ ದಟ್ಟಣೆ ತಡೆಗೆ ಟ್ರಾಫಿಕ್ ಡೈವರ್ಟ್- ವರ್ಕೌಟ್ ಆಗ್ತಿಲ್ಲ ಅಂತಿದ್ದಾರೆ ಸವಾರರು!
Live Tv
[brid partner=56869869 player=32851 video=960834 autoplay=true]
ಲಕ್ನೋ: ತನ್ನ ಸ್ವಂತ ಪತ್ನಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ವ್ಯಕ್ತಿಯೊಬ್ಬ ಮನಬಂದಂತೆ ಹಿಗ್ಗಾಮುಗ್ಗಾ ಥಳಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಜುಲೈ 14 ರಂದು ಆಗ್ರಾದ ಸಿಕಂದರಾ ಪೊಲೀಸ್ ಠಾಣೆ ವ್ಯಾಪ್ತಿಯ ಅರ್ಸೇನಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. 22 ಸೆಕೆಂಡ್ ಇರುವ ಈ ವೀಡಿಯೋದಲ್ಲಿ ಕುಸುಮಾ ದೇವಿ ಅವರನ್ನು ಪತಿ ಶಯಂಬಿಹಾರಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾನೆ. ನಂತರ ಆಕೆಯನ್ನು ಸಡಿಲಗೊಳಿಸಿ ತನ್ನ ಹಿಂದೆ ಧರಧರನೇ ಎಳೆದುಕೊಂಡು ಹೋಗಿರುವುದನ್ನು ಕಾಣಬಹುದಾಗಿದೆ.
#WATCH उत्तर प्रदेश: आगरा में एक पति ने अपनी पत्नी को खंबे से बांधकर डंडे से पीटा। घटना का वीडियो वायरल हुआ। (20.07) pic.twitter.com/ND9CbIo9dP
ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಆರೋಪಿ ಹಾಗೂ ಆತನ ತಾಯಿ ವಿರುದ್ಧ ಮಹಿಳೆ ದೂರು ದಾಖಲಿಸಿದ್ದು, ಇದೀಗ ನಾಪತ್ತೆಯಾಗಿದ್ದಾರೆ ಎಂದು ಸಿಕಂದರಾ ಪೊಲೀಸ್ ಠಾಣೆಯ ಉಸ್ತುವಾರಿ ಆನಂದ್ ಕುಮಾರ್ ಶಾಹಿ ತಿಳಿಸಿದ್ದಾರೆ.
ಜುಲೈ 14 ರಂದು ಪತಿ ಮತ್ತು ಅತ್ತೆ ಸೇರಿಕೊಂಡು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಜೊತೆಗೆ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಕುಸುಮಾ ದೇವಿ ಅವರು ದೂರು ನೀಡಿದ್ದರು. ಇದೀಗ ಶ್ಯಾಂಬಿಹಾರಿ ಮತ್ತು ಆತನ ತಾಯಿ ಬರ್ಫಾ ದೇವಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 504 (ಉದ್ದೇಶಪೂರ್ವಕವಾಗಿ ಅವಮಾನಿಸುವುದು), 342 (ತಪ್ಪಾದ ಬಂಧನ) ಮತ್ತು 354 ((ಮಹಿಳೆಯರ ಮೇಲೆ ದೌರ್ಜನ್ಯ ಅಥವಾ ಕ್ರಿಮಿನಲ್ ಬಲದಿಂದ ಆಕೆಯ ನಮ್ರತೆಯನ್ನು ಆಕ್ರೋಶಗೊಳಿಸುವ ಉದ್ದೇಶದಿಂದ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಹಾಸನ: ಪತಿಯೇ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ಪಟ್ಟಣದ ಪಂಪ್‍ಹೌಸ್ ರಸ್ತೆಯಲ್ಲಿ ಬುಧವಾರ ಸಂಜೆ ನಡೆದಿದೆ.
ಅಶ್ವಿನಿ(36) ಕೊಲೆಯಾದ ಮಹಿಳೆಯಾಗಿದ್ದು, ಕೊಲೆ ಮಾಡಿದ ನಂತರ ಪತಿ ಜಗದೀಶ್ ಪರಾರಿಯಾಗಿದ್ದಾನೆ. ಶಾಲೆಯಿಂದ ಬಂದ ಮಕ್ಕಳು ಮನೆ ಬಾಗಿಲು ತೆರೆದು ಒಳಹೋದಾಗ ತಾಯಿ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಅಕ್ಕಪಕ್ಕದವರಿಗೆ ತಿಳಿಸಿದ್ದಾರೆ.
ಏನಿದು ಘಟನೆ?
ಅಶ್ವಿನಿ ಹಾಗೂ ಜಗದೀಶ್ 17 ವರ್ಷದ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಒಂದು ಹೆಣ್ಣು, ಒಂದು ಗಂಡು ಮಗುವಿತ್ತು. ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ ಜಗದೀಶ್ ಅದನ್ನು ಬಿಟ್ಟು ಮೆಡಿಕಲ್ ಶಾಫ್ ಇಟ್ಟುಕೊಂಡಿದ್ದ. ಲಾಸ್ ಆದ ಕಾರಣ ಅಂಗಡಿ ಕ್ಲೋಸ್ ಮಾಡಿದ್ದ.
ಹಣಕಾಸು ವಿಚಾರಕ್ಕೆ ಆಗಾಗ್ಗೆ ಗಂಡ-ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಜಗದೀಶ್ ಒಮ್ಮೆ ಅಶ್ವಿನಿಗೆ ಹಲ್ಲೆ ಮಾಡಿದ್ದ ಪರಿಣಾಮ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಇದಾದ ನಂತರ ಬೇರೊಬ್ಬ ಮಹಿಳೆಯೊಂದಿಗೆ ಜಗದೀಶ್ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ. ಇದನ್ನು ಅಶ್ವಿನಿ ವಿರೋಧಿಸಿದ್ದಕ್ಕೆ ಹಲವು ಬಾರಿ ಹಲ್ಲೆ ನಡೆಸಿದ್ದ. ಇದರಿಂದ ಬೇಸತ್ತ ಅಶ್ವಿನಿ ಜೀವನಾಂಶ ಕೋರಿ ಕೋರ್ಟ್ ಮೆಟ್ಟಿಲೇರಿದ್ದಳು.
ನಾಲ್ಕು ತಿಂಗಳ ಹಿಂದಷ್ಟೇ ಗಂಡನನ್ನು ಬಿಟ್ಟು ಮಗಳೊಂದಿಗೆ ಪ್ರತ್ಯೇಕವಾಗಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಶ್ವಿನಿ ಮೆಡ್‍ಪ್ಲಸ್‍ಗೆ ಕೆಲಸಕ್ಕೆ ಹೋಗುತ್ತಿದ್ದಳು. ಜೀವನಾಂಶ ನೀಡಬೇಕು ಎನ್ನುವ ಕಾರಣಕ್ಕೆ ಮಗನನ್ನು ಕರೆದುಕೊಂಡು ಬಂದ ಜಗದೀಶ್, ಅಶ್ವಿನಿ ಹಾಗೂ ಮಕ್ಕಳ ಜೊತೆಯಲ್ಲಿ ವಾಸವಿದ್ದ.
ಬುಧವಾರ ಬೆಳಗ್ಗೆ ಮಕ್ಕಳನ್ನು ಶಾಲೆಗೆ ಕಳುಹಿಸಿ, ನಂತರ ಪತ್ನಿಯನ್ನು ಕೆಲಸಕ್ಕೆ ಬಿಟ್ಟು ಬಂದಿದ್ದ. ಮಧ್ಯಾಹ್ನ ಊಟಕ್ಕೆಂದು ಪತ್ನಿಯನ್ನು ಬೈಕ್‍ನಲ್ಲಿ ಮನೆಗೆ ಕರೆದುಕೊಂಡು ಬಂದು ಚಾಕುವಿನಿಂದ ಇರಿದು ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾನೆ. ಮಕ್ಕಳು ಶಾಲೆಯಿಂದ ಬಂದು ಮನೆ ಬಾಗಿಲು ತೆರೆದು ನೋಡಿದಾಗ ಅವರ ತಾಯಿ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಗಾಬರಿಯಾಗಿದ್ದಾರೆ. ನಂತರ ಅಕ್ಕಪಕ್ಕದವರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: Sena Vs Sena: ಉದ್ಧವ್ ಶಿಬಿರಕ್ಕೆ ತಕ್ಷಣದ ಪರಿಹಾರವಿಲ್ಲ, ಆಗಸ್ಟ್ 1 ರಂದು ಮುಂದಿನ ವಿಚಾರಣೆ: ಕೋರ್ಟ್
ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಶ್ವಿನಿ ಪೋಷಕರು ಬರುವಿಕೆಗಾಗಿ ಕಾಯುತ್ತಿದ್ದಾರೆ. ಇತ್ತ ತಾಯಿಯನ್ನು ಕಳೆದುಕೊಂಡ ಮಕ್ಕಳು ಅನಾಥವಾಗಿದ್ದು, ಪುಟ್ಟ ತಮ್ಮನನ್ನು ಅಕ್ಕ ಸಂತೈಸುತ್ತಿದ್ದು ಕರುಳು ಹಿಂಡುವಂತಿತ್ತು.
Live Tv
[brid partner=56869869 player=32851 video=960834 autoplay=true]
ಚಂಢೀಗಢ: ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವುದು, ಅದನ್ನು ನೋಡಿ ಜನರು ಕಾಮೆಂಟ್ ಮಾಡುವುದು ಸಾಮಾನ್ಯ. ಆದರೆ ಯುವಕನೊಬ್ಬ ಮಹಿಳೆಯೊಬ್ಬಳಿಗೆ ‘ಐ ಲೈಕ್ ಯೂ’ ಎಂದು ಕಾಮೆಂಟ್ ಮಾಡಿದ್ದಕ್ಕೆ ಪತಿ ಗರಂ ಆಗಿರುವ ಸುದ್ದಿಯೊಂದು ಪಂಜಾಬ್‍ನಲ್ಲಿ ಭಾರೀ ಸದ್ದು ಮಾಡುತ್ತಿದೆ.
ಮುಂಬೈ, ಪುಣೆ, ಪಂಜಾಬ್ ಮತ್ತು ದೆಹಲಿ ಪೊಲೀಸರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ಮೂಲಕ ತಮ್ಮ ಹಾಸ್ಯದ ಚಟಾಕಿ ಹಾರಿಸುವುದರಲ್ಲಿ ಹೆಸರುವಾಸಿ. ಈ ಮೂಲಕ ಅವರು ನಾಗರಿಕರನ್ನು ರಕ್ಷಿಸುವ ಮತ್ತು ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದ್ದಾರೆ. ಈ ಬಾರಿ, ಟ್ವಿಟ್ಟರ್ ಬಳಕೆದಾರರು ಸಮಸ್ಯೆಯೊಂದರ ಕುರಿತು ಪೊಲೀಸರನ್ನು ಸಂಪರ್ಕಿಸಿದಾಗ ಪಂಜಾಬ್ ಪೊಲೀಸರು ಆ ಪೋಸ್ಟ್ ಅನ್ನು ರೀ-ಟ್ವೀಟ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಖರೀದಿ ಹೆಸರಿನಲ್ಲಿ ಲಕ್ಷಾಂತರ ರೂ. ಮೌಲ್ಯದ 26 ಸೀರೆ ಕಳ್ಳತನ ಮಾಡಿದ್ದ ಖತರ್ನಾಕ್ ಗ್ಯಾಂಗ್
ಯುವಕ ಸುಶಾಂತ್ ದತ್ ಟ್ವಿಟ್ಟರ್ ಮಾಡಿದ್ದು, ನಾನು ಮಹಿಳೆಯೊಬ್ಬರಿಗೆ ‘ಐ ಲೈಕ್ ಯೂ’ ಎಂದು ಸಂದೇಶವನ್ನು ಕಳುಹಿಸಿದ ನಂತರ ಆಕೆಯ ಪತಿ ನನಗೆ ಥಳಿಸಿದ್ದಾರೆ. ಅವರು ನನ್ನ ಮೇಲೆ ಹಲ್ಲೆ ಮಾಡುತ್ತಿದ್ದ ವೇಳೆ ಪ್ರತಿಬಾರಿಯೂ ನಾನು ಅವರ ಬಳಿ ಕ್ಷಮೆ ಕೇಳಿದ್ದೇನೆ. ಆದರೂ ಅವರು ನನ್ನನ್ನು ಬಿಟ್ಟಿಲ್ಲ. ಈಗ ನಾನು ನನ್ನ ಸುರಕ್ಷತೆಯ ಬಗ್ಗೆ ಚಿಂತಿತನಾಗಿದ್ದೇನೆ. ಅದಕ್ಕೆ ನಾನು ಪೊಲೀಸರ ಸಹಾಯವನ್ನು ಕೋರುತ್ತಿದ್ದೇನೆ ಎಂದು ಟ್ವೀಟ್ ಮಾಡಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.
Not sure what you were expecting on your unwarranted message to a woman, but they should not have beaten you up. They should have reported you to us and we would have served you right under right sections of law.
— Punjab Police India (@PunjabPoliceInd) July 19, 2022
ಈ ಪೋಸ್ಟ್ ನೋಡಿದ ಪೊಲೀಸರು ತಮ್ಮ ಟ್ವಿಟ್ಟರ್‌ನಲ್ಲಿ ರೀ-ಟ್ವೀಟ್ ಮಾಡಿಕೊಂಡಿದ್ದಾರೆ. ದೂರಿನ ಬಗ್ಗೆ ಪ್ರತಿಕ್ರಿಯಿಸಿದ ಪಂಜಾಬ್ ಪೊಲೀಸರು, ಮಹಿಳೆಗೆ ನೀವು ಕಳುಹಿಸಿರುವ ಅನಗತ್ಯ ಸಂದೇಶದ ಬಗ್ಗೆ ಯಾಕೆ ಯೋಚಿಸುತ್ತಿದ್ದೀರಿ. ಆದರೆ ಅವರು ನಿಮ್ಮನ್ನು ಹೊಡೆಯಬಾರದಿತ್ತು. ಅವರು ನಿಮ್ಮ ಬಗ್ಗೆ ನಮಗೆ ವರದಿ ಮಾಡಿರಬೇಕಿತ್ತು. ಆಗ ನಾವು ಕಾನೂನಿನ ಅಡಿಯಲ್ಲಿ ಸರಿಯಾಗಿ ಕ್ರಮ ತೆಗೆದುಕೊಳ್ಳುತ್ತೀದ್ದೆವು. ಈ ಎರಡೂ ಅಪರಾಧಗಳಿಗೂ ಕಾನೂನಿನ ಪ್ರಕಾರ ಸರಿಯಾದ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಬರೆದು ಟ್ಯಾಗ್ ಮಾಡಿದ್ದಾರೆ. ಇದನ್ನೂ ಓದಿ: ಕಲಾಪ ಅಡ್ಡಿಪಡಿಸುವುದು, ನಂತರ ಸುಳ್ಳು ಹೇಳುವುದು, ಇಷ್ಟೇ ಕಾಂಗ್ರೆಸ್ ಅಜೆಂಡಾ: ಜೋಶಿ ಟೀಕೆ
You can visit the nearest PS and lodge the complaint.
— Punjab Police India (@PunjabPoliceInd) July 19, 2022
ಈ ಪೋಸ್ಟ್ ಬಳಿಕ ಮತ್ತೊಂದು ಟ್ವೀಟ್ ಮಾಡಿದ ಪೊಲೀಸರು, ನೀವು ನಿಮ್ಮ ಹತ್ತಿರದ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಿ ಎಂದು ಹೇಳಿದ್ದಾರೆ. ಈ ಟ್ವೀಟ್ ನೋಡಿದ ನೆಟ್ಟಿಗರು ಮನರಂಜನೆ ರೀತಿ ಎಂಜಾಯ್ ಮಾಡುತ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]
ಚಿಕ್ಕಬಳ್ಳಾಪುರ: ವಿಚ್ಛೇದಿತ ಪತ್ನಿಯನ್ನು ಕೊಲೆ ಮಾಡಿ ಕಳ್ಳತನದ ಕಥೆ ಕಟ್ಟಿದ್ದ ಪತಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಗ್ರಾಮಾಂತರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜುಲೈ 12ರಂದು ಚಿಂತಾಮಣಿ ತಾಲೂಕಿನ ನಾಯನಹಳ್ಳಿ ಗ್ರಾಮದಲ್ಲಿ ನಡೆದಿದ್ದ ಅಂಗನವಾಡಿ ಕಾರ್ಯಕರ್ತೆ ವೆಂಕಟಲಕ್ಷ್ಮಮ್ಮ(51) ಕೊಲೆ ಪ್ರಕರಣಣದಲ್ಲಿ ಆಕೆಯ ವಿಚ್ಚೇದಿತ ಗಂಡ ಅಂಜಪ್ಪನನ್ನ ಬಂಧಿಸಲಾಗಿದೆ.
ಜುಲೈ 12ರಂದು ಅಂಜಪ್ಪ ಅಳಿಯನ ಜೊತೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಗೆ ಆಗಮಿಸಿ ಮನೆಯಲ್ಲಿ ಒಂಟಿಯಾಗಿದ್ದ ನನ್ನ ವಿಚ್ಚೇದಿತ ಪತ್ನಿ ವೆಂಕಟಲಕ್ಷ್ಮಮ್ಮಳನ್ನು ಕೊಲೆ ಮಾಡಿ, ಕತ್ತಲ್ಲಿದ್ದ ಸರ, ಮನೆಯ ಬಿರುವನಲ್ಲಿದ್ದ ಒಡವೆ, ಹಣವನ್ನು ಕದ್ದಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದ. ಇದನ್ನೂ ಓದಿ: ಲುಲು ಮಾಲ್ ವಿವಾದ – ಕಿಡಿಗೇಡಿಗಳ ವಿರುದ್ಧ ಕಟ್ಟುನಿಟ್ಟುನ ಕ್ರಮ: ಆದಿತ್ಯನಾಥ್
ಕೂಡಲೇ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಮೃತ ವೆಂಕಟಲಕ್ಷ್ಮಮ್ಮಳನ್ನು ಆಸ್ಪತ್ರೆ ಶವಾಗಾರಕ್ಕೆ ಸಾಗಿಸಿ, ತನಿಖೆ ನಡೆಸಲು ಪ್ರಾರಂಭಿಸಿದ್ದಾರೆ. ತನಿಖೆಯಲ್ಲಿ ಅಸಲಿ ಕೊಲೆಗಾರ ಅಂಜಪ್ಪ ಎನ್ನುವುದು ಗೊತ್ತಾಗಿದೆ. ಈ ಅಂಜಪ್ಪ ಚಿಂತಾಮಣಿ ತಾಲೂಕು ಕತ್ರಿಗುಪ್ಪೆ ಗ್ರಾಮದವನಾಗಿದ್ದು, ಈತ ನಾಯನಹಳ್ಳಿ ಗ್ರಾಮದ ಕೊಲೆಯಾದ ವೆಂಕಟಲಕ್ಷ್ಮಮ್ಮಳನ್ನ ಮದುವೆಯಾಗಿದ್ದ, ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆದರೆ ಈಕೆಗೆ ವಿಚ್ಚೇದನ ನೀಡಿದ್ದ ಅಂಜಪ್ಪ ಬೇರೊಂದು ಮದುವೆಯಾಗಿದ್ದ.
ಇದರಿಂದ ತವರುಮನೆ ಸೇರಿದ್ದ ವೆಂಕಟಲಕ್ಷ್ಮಮ್ಮ ತನ್ನ ನಾಯನಹಳ್ಳಿ ಗ್ರಾಮದಲ್ಲಿ ತನ್ನ ಹೆಸರಿನಲ್ಲಿದ್ದ 26 ಗುಂಟೆಯ ಜಮೀನನ್ನು ಗಂಡ ಅಂಜಪ್ಪ ಮಧ್ಯಸ್ಥಿಕೆಯಲ್ಲೇ ಒಬ್ಬರಿಗೆ 40 ಲಕ್ಷಕ್ಕೆ ಆಗ್ರಿಮೆಂಟ್ ಕೊಟ್ಟಿದ್ದಳು. ಆದರೆ ಅಗ್ರಿಮೆಂಟ್ ಮಾಡಿಕೊಂಡು ಸುಮ್ಮನಾಗಿದ್ದ ಅವರು ವರ್ಷಗಳೇ ಕಳೆದರೂ ರಿಜಿಸ್ಟರ್ ಮಾಡಿಕೊಂಡಿರಲಿಲ್ಲ. ಹೀಗಾಗಿ ಇತ್ತೀಚೆಗೆ ಅದೇ ಜಮೀನನ್ನು ವೆಂಕಟಲಕ್ಷ್ಮಮ್ಮ ಬೇರೊಬ್ಬರಿಗೆ 60ಲಕ್ಷಕ್ಕೆ ಮಾರಾಟ ಮಾಡಲು ಮುಂದಾಗಿದ್ದಳು. ಇದೇ ವಿಚಾರದಲ್ಲಿ ವಿಚ್ಚೇದಿತ ಗಂಡ ಹೆಂಡತಿ ಮಧ್ಯೆ ಮನಸ್ತಾಪ ಉಂಟಾಗಿ ಅಂಜಪ್ಪ ವೆಂಕಟಲಕ್ಷ್ಮಮ್ಮಳನ್ನು ಕೊಲೆ ಮಾಡಿದ್ದಾನೆ. ಇದನ್ನೂ ಓದಿ:ನಮ್ಮ ಮುದ್ದಿನ ಗಿಳಿ ಕಾಣೆಯಾಗಿದೆ – ಬ್ಯಾನರ್, ಕರಪತ್ರ ಹಂಚಿದ ದಂಪತಿ
Live Tv
[brid partner=56869869 player=32851 video=960834 autoplay=true]
ರಾಂಚಿ: ಮದುವೆಯಾದ ಬಳಿಕ ಜೀನ್ಸ್ ಧರಿಸಲು ಬಿಡದೇ ಇರುವ ಕಾರಣಕ್ಕೆ ತಾಳಿ ಕಟ್ಟಿದ ಪತಿಯನ್ನೇ ಚಾಕುವಿಂದ ಇರಿದು ಪತ್ನಿ ಹತ್ಯೆಗೈದಿರುವ ಘಟನೆ ಜಾರ್ಖಂಡ್‍ನ ಜಮ್ತಾರಾದಲ್ಲಿ ನಡೆದಿದೆ.
ಜಮ್ತಾರಾ ಪೊಲೀಸ್ ಠಾಣಾ ವ್ಯಾಪ್ತಿಯ ಜೋರ್ಭಿತ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಮಹಿಳೆಯನ್ನು ಪುಷ್ಪಾ ಹೆಂಬ್ರೋಮ್ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ಪುಷ್ಪಾ ಹೆಂಬ್ರೋಮ್ ಜೀನ್ಸ್ ಧರಿಸಿ ಗೋಪಾಲಪುರ ಗ್ರಾಮದಲ್ಲಿ ಜಾತ್ರೆಯನ್ನು ನೋಡಲು ಹೋಗಿದ್ದಳು. ನಂತರ ಮನೆಗೆ ಹಿಂದಿರುಗಿದ ಪುಷ್ಪಾಳನ್ನು ಜೀನ್ಸ್ ಧರಿಸಿದ್ದ ಬಗ್ಗೆ ಪತಿ ಪ್ರಶ್ನಿದ್ದಾರೆ ಹಾಗೂ ಇಬ್ಬರ ನಡುವೆ ಇದೇ ವಿಚಾರವಾಗಿ ವಾಗ್ವಾದ ನಡೆದಿದೆ.
ನಂತರ ಜಗಳ ವಿಕೋಪಕ್ಕೆ ತಿರುಗಿ ಪುಷ್ಪಾ ತನ್ನ ಗಂಡನಿಗೆ ಚಾಕುವಿನಿಂದ ಇರಿದಿದ್ದಾಳೆ. ಇದರಿಂದ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಕುಟುಂಬಸ್ಥರು ಧನ್‍ಬಾದ್‍ನಲ್ಲಿರು ಶಾಹಿದ್ ನಿರ್ಮಲ್ ಮಹತೋ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ತಮಿಳುನಾಡು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ – ಪ್ರಾಂಶುಪಾಲರು, ಶಿಕ್ಷಕರು ಸೇರಿ ಐವರು ಅರೆಸ್ಟ್
ಈ ಬಗ್ಗೆ ಮಾಧ್ಯಮದವರೊಂದೊಗೆ ಮಾತನಾಡಿದ ಮೃತರ ತಂದೆ ಕರ್ಣೇಶ್ವರ ತುಡು ಅವರು, ಜೀನ್ಸ್ ಪ್ಯಾಂಟ್ ಹಾಕಿಕೊಂಡಿದ್ದ ವಿಚಾರವಾಗಿ ಮಗ ಮತ್ತು ಸೊಸೆ ನಡುವೆ ಜಗಳ ನಡೆದಿತ್ತು. ಜಗಳದ ವೇಳೆ ಪತ್ನಿಯೇ ಪತಿಯನ್ನು ಚಾಕುವಿನಿಂದ ಇರಿದು ಕೊಂದಿದ್ದಾಳೆ. ಸದ್ಯ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಆರಂಭಿಸಿದ್ದಾರೆ ಮತ್ತು ಕೃತ್ಯಕ್ಕೆ ಬಳಸಿದ್ದ ಚಾಕುವನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ – ವ್ಯಕ್ತಿ ವಿರುದ್ಧ ದೂರು
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತಿಯೇ ಪತ್ನಿಯ ಬರ್ಬರ ಹತ್ಯೆಗೈದಿರುವ ಘಟನೆ ಆನೇಕಲ್ ಪಟ್ಟಣದ ಹೂವಾಡಿಗಾರ ಬೀದಿಯಲ್ಲಿ ನಡೆದಿದೆ.
ಪ್ರೇಮ (25) ಕೊಲೆಯಾದ ಮಹಿಳೆಯಾಗಿದ್ದು, ಆರೋಪಿಯನ್ನು ವೆಂಕಟೇಶಾಚಾರಿ ಎಂದು ಗುರುತಿಸಲಾಗಿದೆ. 9 ವರ್ಷದ ಹಿಂದೆ ಪ್ರೇಮ ಮತ್ತು ವೆಂಕಟೇಶಾಚಾರಿ ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ 7 ವರ್ಷದ ಹೆಣ್ಣು ಮಗುವಿತ್ತು. ಆದರೆ ಶುಕ್ರವಾರ ರಾತ್ರಿ ಅನೈತಿಕ ಸಂಬಂಧದ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ಆಗಿದೆ. ಇದನ್ನೂ ಓದಿ: ಹೂಮಾಲೆಯಲ್ಲಿ ಹುಳು ಇರುತ್ತೆ ನನಗೆ ಹಾಕ್ಬೇಡಿ – ಕಾರ್ಯಕರ್ತರ ವಿರುದ್ಧ ಸಿದ್ದರಾಮಯ್ಯ ಗರಂ
ಪತ್ನಿ ಮೊಬೈಲ್ ನಲ್ಲಿ ಬೇರೊಬ್ಬನ ಜೊತೆ ಮಾತನಾಡುತ್ತಿರುವುದನ್ನು ಕೇಳಿಸಿಕೊಂಡಿದ್ದ ವೆಂಕಟೇಶಾಚಾರಿ ಬೆಳಗ್ಗೆ 6 ಗಂಟೆ ಸುಮಾರಿಗೆ ಪತ್ನಿಯ ಕತ್ತು ಹಾಗೂ ಕೈ ಭಾಗಕ್ಕೆ ಮಚ್ಚಿನಿಂದ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ. ಇದೀಗ ಘಟನಾ ಸ್ಥಳಕ್ಕೆ ಆನೇಕಲ್ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ವೀಡಿಯೋ ಬಂದ್ ವಿಚಾರ – ಯಾರು ಏನೇ ಹೇಳಲಿ, ಈಗ ಮೊದಲಿನಂತೆ ನಿಯಮ ಇರಲಿದೆ: ಸಿಎಂ
Live Tv
[brid partner=56869869 player=32851 video=960834 autoplay=true]
ಲಕ್ನೋ: ವ್ಯಕ್ತಿಯೋರ್ವ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಈ ಕೃತ್ಯವನ್ನು ಆತನ ಪತ್ನಿಯೇ ಚಿತ್ರೀಕರಿಸಿ ನಂತರ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್‍ಲೋಡ್ ಮಾಡಿದ್ದಾಳೆ.
ಈ ಕುರಿತಂತೆ ಬಾಲಕಿ ನೀಡಿದ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಅತ್ಯಾಚಾರ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಐಟಿ ಕಾಯ್ದೆಯ ಅಡಿಯಲ್ಲಿ ಪೊಲೀಸರು ಎಫ್‍ಐಆರ್ ದಾಖಲಿಸಿದ್ದು, ಪತಿ-ಪತ್ನಿ ಇಬ್ಬರನ್ನೂ ಬಂಧಿಸಲಾಗಿದೆ ಎಂದು ಫೈಜ್‍ಗಂಜ್ ಬೆಹ್ತಾ ಪೊಲೀಸ್ ಠಾಣೆ ಪ್ರಭಾರಿ ಚರಣ್ ಸಿಂಗ್ ರಾಣಾ ಹೇಳಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ NDA ಅಭ್ಯರ್ಥಿಗೆ ಜೆಡಿಎಸ್ ಬೆಂಬಲ ಅಧಿಕೃತ ಘೋಷಣೆ
ಜುಲೈ 12 ರಂದು ಗ್ರಾಮದ ವ್ಯಕ್ತಿ ತನ್ನನ್ನು ಮನೆಗೆ ಕರೆದುಕೊಂಡು ಹೋಗಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಈ ಕೃತ್ಯವನ್ನು ಆತನ ಹೆಂಡತಿ ಮೊಬೈಲ್ ಫೋನ್‍ನಲ್ಲಿ ರೆಕಾರ್ಡ್ ಮಾಡಿದ್ದಾಳೆ. ಅಲ್ಲದೇ ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ವೀಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್‍ಲೋಡ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ ಎಂದು ಬಾಲಕಿ ದೂರಿನಲ್ಲಿ ಆರೋಪಿಸಿದ್ದಾಳೆ. ಇದನ್ನೂ ಓದಿ: ನೂಪುರ್ ಶರ್ಮಾ ಫೋಟೋ ಅಪ್ಲೋಡ್ ಮಾಡಿದ್ದ ಉದ್ಯಮಿಗೆ ಕೊಲೆ ಬೆದರಿಕೆ – ಮೂವರ ಬಂಧನ
ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿರುವುದನ್ನು ತಿಳಿದು ದಂಪತಿ ವಿರುದ್ಧ ಬಾಲಕಿ ದೂರು ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಮಾಜಿ ಕಾರ್ಪೋರೇಟರ್ ಪತಿ ಹತ್ಯೆ ಪ್ರಕರಣಕ್ಕೆ ಮತ್ತೊಂದು ಸ್ಫೋಟಕ ತಿರುವು ಸಿಕ್ಕಿದೆ. ಕೊಲೆ ಮಾಡಿ ತಪ್ಪಿಸಿಕೊಂಡಿರುವ ಆರೋಪಿ ಮತ್ತಷ್ಟು ಇಂಟರೆಸ್ಟಿಂಗ್ ಮಾಹಿತಿಗಳನ್ನು ಹೊರಹಾಕಿದ್ದಾನೆ. ಇದರಿಂದ ಪೊಲೀಸರ ತನಿಖೆ ಮೇಲೆಯೇ ಅನುಮಾನ ಮೂಡುವಂತಾಗಿದೆ.
ಜುಲೈ 13 ರಂದು ಬೆಂಗಳೂರಿನ ಚಾಮರಾಜಪೇಟೆ ಬಳಿಯ ಟಿಪ್ಪು ನಗರದ ಮಾಜಿ ಕಾರ್ಪೋರೇಟರ್ ನಾಜಿಮಾ ಖಾನ್ ಪತಿ ಆಯೂಬ್ ಖಾನ್‍ನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಖುದ್ದು ಅಯೂಬ್ ಖಾನ್ ಅಣ್ಣನ ಮಗ ಮತೀನ್ ಖಾನ್ ಎಂಬವನೇ ಚಾಕು ಇರಿದಿದ್ದ. ನಡುರಸ್ತೆಯಲ್ಲೇ ಕುಸಿದುಬಿದ್ದಿದ್ದ ಆಯೂಬ್ ಖಾನ್‍ನನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ರೂ ಬದುಕುಳಿಯಲಿಲ್ಲ.
ಇದೀಗ ಪತಿಯ ಹತ್ಯೆ ವಿರುದ್ಧ ಮಾಜಿ ಕಾರ್ಪೊರೇಟರ್ ನಾಜೀಮಾ ಖಾನ್ ಸಿಡಿದೆದ್ದಿದ್ದಾರೆ. ತನ್ನ ಪತಿ ಹಂತಕರ ತಲೆ ಕಡಿದವರಿಗೆ 10 ಕೋಟಿ ಕೊಡುವುದಾಗಿ ಘೋಷಿಸಿದ್ದಾರೆ ಎಂದು ಖುದ್ದು ಹತ್ಯೆ ಆರೋಪಿ ಪರಾರಿಯಾಗಿರುವ ಮತೀನ್ ಖಾನ್ ಹೇಳಿದ್ದಾನೆ. ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ಒಂದಷ್ಟು ಸ್ಫೋಟಕ ಮಾಹಿತಿಗಳನ್ನು ಹೊರಹಾಕಿದ್ದಾನೆ. ಹತ್ತಾರು ವರ್ಷಗಳಿಂದ ಮಸೀದಿಯನ್ನು ಅಭಿವೃದ್ದಿ ಮಾಡಿದ್ದೆ, ಅಧ್ಯಕ್ಷ ಸ್ಥಾನ ಕೊಡ್ತಿನಿ ಅಂದಿದ್ದ ಚಿಕ್ಕಪ್ಪ ಅಯೂಬ್ ಖಾನ್ ಕೊನೆ ಕ್ಷಣದಲ್ಲಿ ತನ್ನ ಮಗನನ್ನು ಅಧ್ಯಕ್ಷನಾಗಿ ಮಾಡಿದ್ದ. ಆಗಲೂ ನಾನು ಸುಮ್ಮನಿದ್ದೆ. ಆದರೆ ಆಯೂಬ್ ಖಾನ್‍ಗೆ ನಾನು ಏರಿಯಾದಲ್ಲಿರೋದು ಇಷ್ಟ ಇರಲಿಲ್ಲ. ಇದೇ ಕಾರಣಕ್ಕೆ ಗಲಾಟೆ ತೆಗೆದು ನನಗೆ ತೊಂದರೆ ಕೊಡ್ತಿದ್ದ. ಕೊಲೆಯಾದ ದಿನ ಕೂಡ ಆಯೂಬ್ ಖಾನ್ ಮತ್ತು ಮಗ ಇಬ್ಬರು ನನ್ನ ಮೇಲೆ ಲಾಂಗ್‍ನಿಂದ ಹಲ್ಲೆ ಮಾಡೋಕೆ ಮುಂದಾದ್ರು. ಪ್ರಾಣ ರಕ್ಷಣೆ ವೇಳೆ ಚಾಕು ತಗುಲಿ ಆಯೂಬ್ ಖಾನ್ ಸಾವನ್ನಪ್ಪಿದ್ದಾನೆ ಎಂದಿದ್ದಾನೆ. ಅಲ್ಲದೇ ಆಯೂಬ್ ಪತ್ನಿ ನಾಜೀಮಾಖಾನ್ ಸಾರ್ವಜನಿಕವಾಗಿ ಮತೀನ್ ಖಾನ್ ತಲೆ ತೆಗೆದವರಿಗೆ 10 ಕೋಟಿ ಕೊಡ್ತೀನಿ ಅಂತಾ ಘೋಷಿಸಿದ್ದಾರೆ ಅಂತಾ ವೀಡಿಯೋದಲ್ಲಿ ಹೇಳಿದ್ದಾನೆ.
ಆಯೂಬ್ ಖಾನ್ ಹೆಂಡತಿ ನಾಜೀಮಾ, ನನ್ನ ತಲೆ ಕಡಿದು ತಂದವರಿಗೆ ಹತ್ತು ಕೋಟಿ ಕೊಡ್ತೀನಿ ಅಂತಾ ಸಾರ್ವಜನಿಕವಾಗಿ ಘೋಷಣೆ ಮಾಡಿದ್ದಾರೆ. ಆ ಹತ್ತು ಕೋಟಿನಾ, ಯಾರಿಗೆ ಕೊಡ್ತೀರಿ ಹೇಳಲಿ, ದರ್ಗಾದವರಿಗೆ, ನನ್ನ ಕುಟುಂಬದವರಿಗೆ ಕೊಡ್ತೀರಾ..? ಒಂದು ಕೆಲಸ ಮಾಡಿ ಶಾಸಕ ಜಮೀರ್ ಅಹಮದ್ ಖಾನ್‍ಗೆ ಕೊಡಲಿ, ನಾನೇ ತಲೆ ಕಡಿದುಕೊಳ್ತೀನಿ. ಇದನ್ನೂ ಓದಿ: ಕಾಲೇಜು ಯುವತಿಯರಿಗೆ ಕೆಮಿಕಲ್ ಸ್ಪ್ರೇ ಮಾಡ್ತಿದ್ದವನಿಗೆ ಸ್ಥಳೀಯರಿಂದ ಗೂಸಾ – ಪೊಲೀಸರ ವಶಕ್ಕೆ
ಶಾಸಕ ಜಮೀರ್ ಕೈಗೆ ಹತ್ತು ಕೋಟಿ ಕೊಡಿ: ಈ ಬಗ್ಗೆ ಸ್ಟಷ್ಟನೆ ನೀಡಿರುವ ಆರೋಪಿ ಮತೀನ್ ಖಾನ್, ನನ್ನ ತಲೆಗೆ ಹತ್ತು ಕೋಟಿ ಬೆಲೆ ಕಟ್ಟಲಾಗಿದೆ. ಆ ಹಣವನ್ನು ಶಾಸಕ ಜಮೀರ್ ಅಹ್ಮದ್ ಕೈಗೆ ಕೊಡಿ, ಆ ಹಣದಿಂದ ಜನರಿಗೆ ಸಹಾಯ ಮಾಡಲಿ. ನಾನೇ ನನ್ನ ತಲೆಯನ್ನು ಕಡಿದುಕೊಳ್ತೀನಿ ಅಂತಾ ಸವಾಲು ಹಾಕಿದ್ದಾರೆ. ಇದೇ ವೇಳೆ ಮಾತು ಮುಂದುವರಿಸಿರುವ ಮತೀನ್, ಘಟನೆ ಸ್ಥಳದಲ್ಲಿ ಸಿಸಿಟಿವಿ ಇದೆ ಅದನ್ನು ಪರಿಶೀಲನೆ ನಡೆಸಿ, ಮೊದಲಿಗೆ ಯಾರು ಹಲ್ಲೆ ಮಾಡಿದ್ದು, ಕೊಲೆಗೆ ಕಾರಣ ಏನು ಅನ್ನೋದು ತಿಳಿಯಲಿದೆ. ಯಾಕೆ ಪೊಲೀಸರು ಆ ಸಿಸಿಟಿವಿ ಬಹಿರಂಗ ಪಡಿಸ್ತಿಲ್ಲ. ಕಾರ್ಪೋರೇಟರ್ ಪರವಾಗಿ ಪೊಲೀಸರು ತನಿಖೆ ನಡೆಸ್ತಿದ್ದಾರೆ. ನಾನೇ ಪೊಲೀಸರ ಮುಂದೆ ಶರಣಾಗ್ತಿನಿ ಅಂತಾ ವೀಡೀಯೋದಲ್ಲಿ ಕೊಲೆ ಹಿಂದಿನ ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾನೆ.
ಯಾರು ಏನೇ ಹೇಳಲಿ, ಅದ್ರಲ್ಲಿ ನನಗೆ ಯಾವುದೇ ವ್ಯತ್ಯಾಸ ಬರಲ್ಲ. ನಂಗೆ ಏರಿಯಾದಲ್ಲಿ ಏನೆಲ್ಲಾ ತೊಂದರೆ ಮಾಡಿದ್ರು ಅಂತಾ ನಮ್ಮ ಮೊಹಲ್ಲಾದ ಪ್ರತಿಯೊಬ್ಬರಿಗೂ ಗೊತ್ತಿದೆ. ಗಲಾಟೆ ನಡೆದ ಜಾಗದಲ್ಲಿ ಸಿಸಿಟಿವಿ ಇತ್ತು. ಕ್ಯಾಮೆರಾವನ್ನು ಪೊಲೀಸರು ಯಾಕೆ ತನಿಖೆಗೊಳಪಡಿಸುತ್ತಿಲ್ಲ? ಅವತ್ತು ನಾನು ಮಸೀದಿಗೆ ಹೋಗಿ ಬರ್ತಿದ್ದೆ. ಆ ಬಿಲ್ಡಿಂಗ್‍ನ ಕೆಳಗಡೆಯಿರುವ ಬೇಕರಿಯವರನ್ನು ಮಾಧ್ಯಮವರು ಹಿಡಿದು ಪ್ರಶ್ನಿಸಬೇಕು. ಮಸೀದಿ ಮುಂದಿರುವ ಡಿಪೋದಲ್ಲಿರುವವರನ್ನೂ ಪ್ರಶ್ನಿಸಿ ಇವನು ಹೇಗೆ ಬಂದ ಅಂತಾ. ನಾನು ಸರೆಂಡರ್ ಆಗ್ತೀನಿ. ನನಗೆ ಯಾವುದೇ ರೀತಿಯ ಭಯವಿಲ್ಲ. ಆದರೆ ಕೊಲೆಯಾದ ಜಾಗದಲ್ಲಿ ಸಿಸಿಟಿವಿ ಬಗ್ಗೆ ಕೇಳಿದ್ರೆ, ಅದು ವರ್ಕ್ ಆಗ್ತಾ ಇರಲಿಲ್ಲ ಅಂತಿದ್ದಾರೆ. ಹಾಗಾಗಿ ಪೊಲೀಸರ ತನಿಖೆ ಮೇಲೂ ಒಂದಷ್ಟು ಅನುಮಾನ ಮೂಡಿದ್ರೆ, ಮತ್ತೊಂದು ಕಡೆ ಆರೋಪಿಯನ್ನು ರಕ್ಷಣೆ ಮಾಡ್ತಿರೋದು ಯಾರು ಅನ್ನೋ ಅನುಮಾನ ಕೂಡ ಬರುತ್ತಿದೆ.
Live Tv
[brid partner=56869869 player=32851 video=960834 autoplay=true]
ಇಸ್ಲಾಮಾಬಾದ್: ವ್ಯಕ್ತಿಯೋರ್ವ ತನ್ನ ಆರು ಮಕ್ಕಳ ಮುಂದೆಯೇ ಪತ್ನಿಯನ್ನು ಕೊಂದು ಕಡಾಯಿಯಲ್ಲಿ ಬೇಯಿಸಿರುವ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ.
ನಗರದ ಗುಲ್ಶನ್-ಎ-ಇಕ್ಬಾಲ್ ಪ್ರದೇಶದ ಖಾಸಗಿ ಶಾಲೆಯ ಅಡುಗೆಮನೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಆಕೆಯ ಪತಿಯೇ ಕೊಂದಿರುವ ವಿಚಾರ ತಿಳಿದುಬಂದಿದೆ. ಆರೋಪಿಯನ್ನು ಆಶಿಕ್ ಎಂದು ಗುರುತಿಸಲಾಗಿದ್ದು, ಬಜಾರ್ ಎಜೆನ್ಸಿಯ ಶಾಲೆಯಲ್ಲಿ ವಾಚ್‍ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಆಶಿಕ್, ಸುಮಾರು 8-9 ತಿಂಗಳಿಂದ ಮುಚ್ಚಲಾಗಿದ್ದ ಈ ಶಾಲೆಯ ಸೇವಕ ಕ್ವಾರ್ಟರ್ಸ್‍ನಲ್ಲಿ ವಾಸಿಸುತ್ತಿದ್ದನು.
ಘಟನೆ ಸಂಬಂಧ ಮಕ್ಕಳ ಹೇಳಿಕೆ ಪಡೆದಿರುವ ಪೊಲೀಸರು, ಆರೋಪಿ ಮೊದಲು ತನ್ನ ಪತ್ನಿಯನ್ನು ದಿಂಬಿನಿಂದ ಕತ್ತು ಹಿಸುಕಿ ಕೊಂದಿದ್ದಾನೆ. ನಂತರ ಮಕ್ಕಳ ಮುಂದೆಯೇ ಕಡಾಯಿಯಲ್ಲಿ ಬೇಯಿಸಿದ್ದಾನೆ. ಅಲ್ಲದೇ ಮಹಿಳೆಯ ಒಂದು ಕಾಲು ಕೂಡ ಆಕೆಯ ದೇಹದಿಂದ ಬೇರ್ಪಟ್ಟಿದೆ ಎಂದು ತಿಳಿಸಿದ್ದಾರೆ. ಆದರೆ ಈ ಘಟನೆ ಹಿಂದಿನ ಕಾರಣವೇನು ಎಂಬುವುದು ತಿಳಿದುಬಂದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಲಾಡ್ಜ್‌ನಲ್ಲಿ ಸಲಿಂಗಿಗಳ ಕಿತ್ತಾಟ – ಓರ್ವ ಸಾವು, ಇನ್ನೊಬ್ಬ ಜೈಲಿಗೆ
ಆರೋಪಿ ತನ್ನ ಹೆಂಡತಿಗೆ ಅಕ್ರಮ ಸಂಬಂಧಗಳಲ್ಲಿ ತೊಡಗಿಸಿಕೊಳ್ಳಲು ಬಲವಂತಪಡಿಸಿದ್ದು, ಇದಕ್ಕೆ ಮಹಿಳೆ ನಿರಾಕರಿಸಿದ್ದರಿಂದ ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]