Tag: ಪತ್ನಿ ವಿಜಯಲಕ್ಷ್ಮಿ

  • ಜೈಲಲ್ಲಿ ದರ್ಶನ್‌ ಸ್ಥಿತಿ ಕಂಡು ಪತ್ನಿ ವಿಜಯಲಕ್ಷ್ಮಿ ಕಣ್ಣೀರು

    ಜೈಲಲ್ಲಿ ದರ್ಶನ್‌ ಸ್ಥಿತಿ ಕಂಡು ಪತ್ನಿ ವಿಜಯಲಕ್ಷ್ಮಿ ಕಣ್ಣೀರು

    – ಪತ್ನಿ ವಿಜಯಲಕ್ಷ್ಮಿ ಮುಂದೆ ದಾಸನ ಗೋಳಾಟ
    -ಹಣೆಬರಹದಲ್ಲಿ ಇದ್ದಂಗೆ ಆಗುತ್ತೆ, ಜೈಲಿಗೆ ಬರಬೇಡ ಎಂದು ಪತ್ನಿಗೆ ಹೇಳಿದ ದರ್ಶನ್‌

    ಬೆಂಗಳೂರು: ರೇಣುಕಾಸ್ವಾಮಿ ಕೇಸ್‌ಲ್ಲಿ (Renukaswamy Case) ಎರಡನೇ ಬಾರೀ ಜೈಲು ಸೇರಿರುವ ನಟ ದರ್ಶನ್‌ಗೆ ಒಂದರ ಮೇಲೊಂದರಂತೆ ಸಂಕಷ್ಟ ಎದುರಾಗುತ್ತಿದೆ. ಸೌಲಭ್ಯದಿಂದ ವಂಚಿತರಾಗಿ ಪರಿತಪಿಸುತ್ತಿರುವ ಪತಿಯ ಕಂಡು ಪತ್ನಿ ವಿಜಯಲಕ್ಷ್ಮಿ ಕಣ್ಣೀರಿಟ್ಟಿದ್ದಾರೆ.

    ಪರಪ್ಪನ ಅಗ್ರಹಾರ ಜೈಲು ಸೇರಿದಾಗಿನಿಂದಲೂ ನಟ ದರ್ಶನ್‌ಗೆ ಒಂದಿಲ್ಲೊಂದು ಸಮಸ್ಯೆ ಕಾಡುತ್ತಲೇ ಇದೆ. ಹಾಸಿಗೆ, ದಿಂಬು ಇಲ್ಲದೇ ಪರದಾಡುವಂತಾಗಿದ್ದು, ಜೈಲಧಿಕಾರಿಗಳ ಮುಂದೆ ಅಂಗಲಾಚಿದರೂ ಕೂಡ ಏನು ಲಾಭವಿಲ್ಲ. ಇನ್ನೂ ಕೂರಲು ಖುರ್ಚಿಯೂ ಇಲ್ಲದೇ ಒದ್ದಾಡುವಂತಾಗಿದೆ. ಜೊತೆಗೆ ದೇಹಕ್ಕೆ ಆಕ್ಟಿವಿಟಿಯಿಲ್ಲದೆ ಕಷ್ಟವಾಗುತ್ತಿದೆ ಎಂದು ವಿಜಯಲಕ್ಷ್ಮಿ ಮುಂದೆ ಸಂಕಷ್ಟ ತೋಡಿಕೊಂಡಿದ್ದಾರೆ.ಇದನ್ನೂ ಓದಿ: ಪ್ರಿಯಕರ ಸ್ನೇಹಿತೆಯೊಟ್ಟಿಗೆ ಓಯೋ ರೂಂನಲ್ಲಿ ಇದ್ದಿದ್ದನ್ನ ಕಂಡು ಮನನೊಂದು ಮಹಿಳೆ ಆತ್ಮಹತ್ಯೆ

    ಇತ್ತ ಪತ್ನಿ ವಿಜಯಲಕ್ಷ್ಮಿ ಜೈಲಿಗೆ ಬರಲು ಕಷ್ಟ ಎದುರಿಸುವಂತಾಗಿದೆ. ಜೈಲಿಗೆ ಬಂದು ಗಂಟೆಗಟ್ಟಲೇ ಕಾದು ಬಳಿಕ ದರ್ಶನ್ ಭೇಟಿಯಾಗಬೇಕು. ಹೀಗಾಗಿ ನಟ ದರ್ಶನ್ ನಮ್ಮ ಹಣೆಬರಹ ಇರೋಹಂಗೆ ಆಗುತ್ತೆ. ನೀನು ಇನ್ಮುಂದೆ ಜೈಲಿಗೆ ಬರಬೇಡ ಎಂದು ಹೇಳಿಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ ಜೈಲಲ್ಲಿ ದರ್ಶನ್ ಕೂಡ ಕಷ್ಟ ಅನುಭವಿಸುತ್ತಿದ್ದು, ಇದನ್ನು ಕಂಡು ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ.

    ಇನ್ನೂ ಪ್ರಕರಣದ ಸಹ ಆರೋಪಿಗಳು ಕೂಡ ದರ್ಶನ್ ವಿರುದ್ಧ ಮುನಿಸಿಕೊಂಡಿದ್ದಾರೆ. ದರ್ಶನ್ ಮಾತು, ಸ್ನೇಹ ಅಷ್ಟಕಷ್ಟೇ ಎನ್ನುತ್ತಿದ್ದಾರೆ.

    ಸುಪ್ರೀಂಕೋರ್ಟ್ ಆದೇಶದ ಬಳಿಕ ಮತ್ತೆ ಜೈಲುಪಾಲಾಗಿರುವ ಡಿ-ಗ್ಯಾಂಗ್‌ನ ಆರೋಪಿಗಳು ಪರದಾಡುವಂತಾಗಿದೆ. ಯಾವುದೇ ರಾಜಾತಿಥ್ಯ ನೀಡುವಂತಿಲ್ಲ. ಸಾಮಾನ್ಯ ಖೈದಿಗಳಂತೆ ಸೌಲಭ್ಯ ನೀಡಬೇಕು ಎಂದು ಕಟ್ಟುನಿಟ್ಟಿನ ಆದೇಶ ನೀಡಿತ್ತು.ಇದನ್ನೂ ಓದಿ: Belagavi | ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ – ಪ್ರಶ್ನಿಸಿದ್ದಕ್ಕೆ ಕಲ್ಲು ತೂರಾಟ

     

     

  • ಪತ್ನಿ ಜೊತೆ ತಿರುನಲ್ಲರ್ ಶನೇಶ್ವರನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್

    ಪತ್ನಿ ಜೊತೆ ತಿರುನಲ್ಲರ್ ಶನೇಶ್ವರನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ ರಾಬರ್ಟ್ ಚಿತ್ರೀಕರಣ ಮುಗಿಸಿ ಬ್ರೇಕ್ ಪಡೆದಿದ್ದು, ಪತ್ನಿ ವಿಜಯಲಕ್ಷ್ಮಿ ಜೊತೆ ಟೆಂಪಲ್ ರನ್ ಮಾಡುತ್ತಿದ್ದಾರೆ.

    ಹೌದು. ದರ್ಶನ್ ದಂಪತಿ ಈಗ ತಮಿಳುನಾಡಿನ ತಿರುನಲ್ಲರ್ ನ ಪ್ರಸಿದ್ಧ ಶನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಶನೇಶ್ವರನಿಗೆ ದರ್ಶನ್ ವಿಶೇಷ ಪೂಜೆ ಕೂಡ ಸಲ್ಲಿಸಿದ್ದಾರೆ. ದರ್ಶನ್ ತಿರುನಲ್ಲರ್ ಗೆ ಭೇಟಿ ನೀಡಿರುವುದು ಇದೆ ಮೊದಲ ಬಾರಿ ಅಲ್ಲ. ಪ್ರತಿವರ್ಷ ಕೂಡ ತಿರುನಲ್ಲರ್ ಗೆ ಬಂದು ದರ್ಶನ್ ದಂಪತಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸುತ್ತ ಬಂದಿದ್ದಾರೆ.

    ಈ ಹಿಂದೆ ಶನೇಶ್ವರನ ದರ್ಶನಕ್ಕೆ ಬಂದಾಗ ಡಿ ಬಾಸ್ ತುಲಾಭಾರ ಮಾಡಿಸಿದ್ದರು. ಆದರೆ ಈ ಬಾರಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ತಮ್ಮ ಸ್ನೇಹಿತರ ಜೊತೆ ನಿಂತು ದರ್ಶನ್ ಫೋಟೋ ತೆಗೆಸಿಕೊಂಡಿದ್ದಾರೆ. ಈ ವೇಳೆ ದರ್ಶನ್ ಪತ್ನಿ ಕೂಡ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಇಷ್ಟು ದಿನ ರಾಬರ್ಟ್ ಚಿತ್ರದ ಶೂಟಿಂಗ್‍ನಲ್ಲಿ ಬ್ಯುಸಿಯಿದ್ದ ದರ್ಶನ್ ಈಗ ರಾಜವೀರ ಮದಕರಿ ನಾಯಕ ಚಿತ್ರದಲ್ಲಿ ಬ್ಯುಸಿಯಾಗಲಿದ್ದಾರೆ. ಸಿನಿಮಾಗಾಗಿ ಚಿತ್ರತಂಡ ಭರ್ಜರಿ ತಯಾರಿ ಮಾಡಿಕೊಂಡಿದ್ದು, ಫೆಬ್ರವರಿ 10ರಿಂದ ಚಿತ್ರೀಕರಣ ಶುರುವಾಗಲಿದೆ ಎನ್ನಲಾಗಿದೆ. ಈ ಚಿತ್ರಕ್ಕೆ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಆ್ಯಕ್ಷನ್ ಕಟ್ ಹೇಳಲಿದ್ದಾರೆ.

    ಇತ್ತೀಚಿಗಷ್ಟೆ ಉತ್ತರಾಖಂಡ ಅರಣ್ಯದಲ್ಲಿ ವೈಲ್ಡ್ ಲೈಫ್ ಫೋಟೋಗ್ರಾಫಿ ಮಾಡಲು ಹೋಗಿದ್ದ ದರ್ಶನ್ ಕೆಲ ದಿನಗಳ ಹಿಂದೆ ಬೆಂಗಳೂರಿಗೆ ವಾಪಸ್ ಆಗಿದ್ದರು. ವನ್ಯಜೀವಿ ಮತ್ತು ಪ್ರಾಣಿಪಕ್ಷಿಗಳನ್ನು ಅತಿಯಾಗಿ ಪ್ರೀತಿಸುವ ದರ್ಶನ್ ಇತ್ತೀಚೆಗೆ ಉತ್ತರಾಖಂಡ್ ಅರಣ್ಯ ಪ್ರದೇಶದಲ್ಲಿ ವನ್ಯಜೀವಿ ಛಾಯಾಗ್ರಹಣ ಮಾಡಿದ್ದರು. ದೊಡ್ಡ ಕ್ಯಾಮೆರಾ ಹೆಗಲಿಗೆ ಹಾಕೊಂಡು ವೈಲ್ಡ್‍ಲೈಫ್ ಫೋಟೋಗ್ರಾಫರ್ ಟೀಂ ಜೊತೆ ಕಲ್ಲು, ಬಂಡೆಯ ನಡುವೆ ಸಾಗಿ ಕಾಡು ಸುತ್ತಿದ್ದರು. ಆ ದಟ್ಟಕಾಡಿನಲ್ಲಿ ದಾಸ ಮಾಡಿರುವ ಸಾಹಸಮಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಲಾಗಿತ್ತು. ಈ ವಿಡಿಯೋ ಕೂಡ ಸಖತ್ ವೈರಲ್ ಆಗಿತ್ತು.

  • ನಟ ದರ್ಶನ್ ಪತ್ನಿಗೆ ಕಿರುಕುಳ- ಪೊಲೀಸ್ ಠಾಣೆ ಮೆಟ್ಟಿಲೇರಿದ ವಿಜಯಲಕ್ಷ್ಮಿ

    ನಟ ದರ್ಶನ್ ಪತ್ನಿಗೆ ಕಿರುಕುಳ- ಪೊಲೀಸ್ ಠಾಣೆ ಮೆಟ್ಟಿಲೇರಿದ ವಿಜಯಲಕ್ಷ್ಮಿ

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ಪತ್ನಿ ವಿಜಯಲಕ್ಷ್ಮಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ತಮಗೆ ಕಿರುಕುಳ ನೀಡುತ್ತಿದವರ ವಿರುದ್ಧ ದೂರು ದಾಖಲಿಸಿದ್ದಾರೆ.

    ಕಿಡಿಗೇಡಿಗಳು ದರ್ಶನ್ ಪತ್ನಿ ವಿಜಯಲಕ್ಷ್ಮಿ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿ ಮಾಡಿ ಕಿರುಕುಳ ನೀಡುತ್ತಿದ್ದಾರೆ. ವಿಜಯಲಕ್ಷ್ಮಿ ಜೊತೆಯಿರುವ ಫೋಟೋಗೆ ‘ಮೈ ಲೈಫ್’ ಎಂದು ಕಿಡಿಗೇಡಿಯೊಬ್ಬ ಟ್ಯಾಗ್ ಮಾಡಿದ್ದಾನೆ. ಅಲ್ಲದೇ ಫೋಟೋ ಟ್ಯಾಗ್ ಮಾಡಿ ಕೀಳುಮಟ್ಟದ ಅಶ್ಲೀಲ ಪದ ಬಳಸಿದ್ದಾನೆ.

    ನಕಲಿ ಖಾತೆ ಮೂಲಕ ನನ್ನ ಹಾಗೂ ಕುಟುಂಬಸ್ಥರ ಫೋಟೋಗಳನ್ನು ದುರ್ಬಳಕೆ ಆಗುತ್ತಿದೆ ಎಂದು ಆರೋಪಿಸಿ ವಿಜಯಲಕ್ಷ್ಮಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಕಿಡಿಗೇಡಿ ವಿರುದ್ಧ ದೂರು ನೀಡಿದ್ದಾರೆ. ಐಪಿಸಿ ಸೆಕ್ಷನ್ 354(ಆ),354ಂ(1)(iv),(505)(507)(420)ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

    ದೂರಿನಲ್ಲಿ ಏನಿದೆ?
    ತನ್ನ ಹೆಸರು, ಫೋಟೋ ಹಾಗೂ ಕುಟುಂಬದವರ ಫೋಟೋಗಳನ್ನು ಬಳಸಿಕೊಂಡು ನಕಲಿ ಖಾತೆಯನ್ನು ತೆರೆಯಲಾಗಿದೆ. ನಕಲಿ ಖಾತೆ ತೆರೆದು ಅದರಲ್ಲಿ ಅಶ್ಲೀಲ ಪದಗಳನ್ನು ಬಳಸಿರುವುದಲ್ಲದೇ ಮೈ ಲೈಫ್ ಎಂದು ಬರೆದಿದ್ದಾನೆ. ಆ ಖಾತೆಯಲ್ಲಿ ನನ್ನ ಫೋಟೋ ಹಾಕಿ ಅಸಲಿ ಖಾತೆಯಂತೆ ನಂಬಿಸಿ ಅಶ್ಲೀಲ ಹಾಗೂ ಅನುಚಿತ ಪದಗಳನ್ನು ಬಳಸಿ ಸಾರ್ವಜನಿಕ ವಲಯದಲ್ಲಿ ಮಹಿಳೆಯ ಘನತೆಗೆ ಮತ್ತು ವ್ಯಕ್ತಿತ್ವಕ್ಕೆ ಕುಂದು ಉಂಟಾಗುವಂತೆ ಕೃತ್ಯ ಎಸಯಲಾಗಿದೆ. ಈ ಕೃತ್ಯವೆಸಗಿದವರನ್ನು ಪತ್ತೆ ಮಾಡಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv