Tag: ಪತ್ನಿ

  • Andhra Pradesh| ಕತ್ತು ಹಿಸುಕಿ 8 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಂದ ಪಾಪಿ ಪತಿ

    Andhra Pradesh| ಕತ್ತು ಹಿಸುಕಿ 8 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಂದ ಪಾಪಿ ಪತಿ

    ಅಮರಾವತಿ: ಗಂಡ-ಹೆಂಡತಿಯ ನಡುವೆ ಜಗಳ ನಡೆದು, ಪತಿ 8 ತಿಂಗಳ ಗರ್ಭಿಣಿ ಪತ್ನಿಯನ್ನು (Preganant Wife) ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಆಂಧ್ರಪ್ರದೇಶದ (Andhra Pradesh) ವಿಶಾಖಪಟ್ಟಣದಲ್ಲಿ ಸೋಮವಾರ ನಡೆದಿದೆ.

    ಅನುಷಾ (27) ಮೃತ ಪತ್ನಿ. ಪತಿ ಜ್ಞಾನೇಶ್ವರ್ ಹಾಗೂ ಪತ್ನಿ ಅನುಷಾ ಸೋಮವಾರ ಬೆಳಗ್ಗೆ ಜಗಳವಾಡಿದ್ದು, ಈ ಜಗಳ ತಾರಕಕ್ಕೇರಿ ಜ್ಞಾನೇಶ್ವರ್ ತನ್ನ ಪತ್ನಿಯ ಕತ್ತು ಹಿಸುಕಿದ್ದಾನೆ. ಈ ಸಂದರ್ಭ ಅನುಷಾ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಕೂಡಲೇ ಪತಿ, ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಆದರೆ ಅಷ್ಟರಲ್ಲಾಗಲೇ ಆಕೆಯ ಪ್ರಾಣಪಕ್ಷಿ ಹಾರಿಹೋಗಿತ್ತು. ಇದನ್ನೂ ಓದಿ: ತುಮಕೂರು | ಬೀದಿ ದೀಪ ಆರಿಸಲು ಹೋಗಿ ವಿದ್ಯುತ್ ಸ್ಪರ್ಶಿಸಿ ಶಿಕ್ಷಕ ಸಾವು

    ವಿಶಾಖಪಟ್ಟಣಂನ (Visakhapatnam) ಪಿಎಂ ಪಾಲೆಂನ ಉಡಾ ಕಾಲೋನಿಯಲ್ಲಿ ಘಟನೆ ನಡೆದಿದೆ. ಆರೋಪಿ ಪತಿ ನಗರದ ಸ್ಕೌಟ್ಸ್ ಮತ್ತು ಸಾಗರ್‌ನಗರ ವೀಕ್ಷಣಾ ಕೇಂದ್ರದ ಬಳಿ ಫಾಸ್ಟ್ ಫುಡ್ ಸೆಂಟರ್ ನಡೆಸುತ್ತಿದ್ದರು. ಕಳೆದ ಮೂರು ವರ್ಷಗಳ ಹಿಂದೆ ಅನುಷಾಳೊಂದಿಗೆ ಪ್ರೇಮ ವಿವಾಹವಾಗಿದ್ದರು. ಬಳಿಕ ಹಲವಾರು ವಿಷಯಗಳಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗಿ ದಂಪತಿ ಆಗಾಗ ಜಗಳವಾಡುತ್ತಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಸೆಂಚುರಿ ಬಾರಿಸಿದ್ದಕ್ಕೆ ಪಾಕ್‌ ಸೂಪರ್‌ ಲೀಗಲ್ಲಿ ಸಿಕ್ಕಿದ್ದು ಹೇರ್ ಡ್ರೈಯರ್‌!

    ಘಟನೆಯ ಬಳಿಕ ಆರೋಪಿ ಪತಿ ಪೊಲೀಸರಿಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪತ್ನಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಮುಸ್ಲಿಮರದ್ದು ಕಾಂಟ್ರ್ಯಾಕ್ಟ್‌ ಮ್ಯಾರೇಜ್, ಹಿಂದೂಗಳ ರೀತಿ ಏಳು ಜನ್ಮದ ಅನುಬಂಧ ಅಲ್ಲ: ರಾಯರೆಡ್ಡಿ

  • ಇನ್‌ಸ್ಟಾ ಲವ್ | ಎರಡನೇ ಮದುವೆಯಾದ ಪತ್ನಿ – ವಿಡಿಯೋ ನೋಡಿ ಮೊದಲ ಪತಿ ಶಾಕ್

    ಇನ್‌ಸ್ಟಾ ಲವ್ | ಎರಡನೇ ಮದುವೆಯಾದ ಪತ್ನಿ – ವಿಡಿಯೋ ನೋಡಿ ಮೊದಲ ಪತಿ ಶಾಕ್

    ನೆಲಮಂಗಲ: ಮದುವೆಯಾಗಿ 13 ವರ್ಷದ ನಂತರ ಇನ್‌ಸ್ಟಾದಲ್ಲಿ ಪರಿಚಯವಾದವನೊಂದಿಗೆ ಪತ್ನಿ ಎಸ್ಕೇಪ್ ಆಗಿ, ಎರಡನೇ ಮದುವೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ (Nelamangala) ನಡೆದಿದೆ.

    ನೇತ್ರಾವತಿ ಜಕ್ಕಸಂದ್ರದ ರಾಘವೇಂದ್ರನಗರ ನಿವಾಸಿಯಾದ ರಮೇಶ್ ಎಂಬುವವರನ್ನು ಮದುವೆಯಾಗಿ 13 ವರ್ಷವಾಗಿತ್ತು. ಒಬ್ಬ ಮಗ ಕೂಡ ಇದ್ದಾನೆ. ಇದನ್ನೂ ಓದಿ: ವಿಚಾರಣೆ ನೆಪದಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಎಸ್‌ಪಿ ಹಲ್ಲೆ ಆರೋಪ – ಭಟ್ಕಳದಲ್ಲಿ ಹೆದ್ದಾರಿ ತಡೆದು ಠಾಣೆಗೆ ಮುತ್ತಿಗೆ

    ಕಳೆದ 1 ವಾರದ ಹಿಂದೆ ಇನ್‌ಸ್ಟಾದಲ್ಲಿ ನೇತ್ರಾವತಿಗೆ ಸಂತೋಷ್ ಎಂಬಾತನ ಪರಿಚಯವಾಗಿತ್ತು. ಈ ಪರಿಚಯವು ಪ್ರೀತಿಗೆ ತಿರುಗಿತ್ತು. ನೇತ್ರಾವತಿಯು ಕೆಲವೇ ದಿನಗಳ ಪ್ರೀತಿಗಾಗಿ ಮೊದಲ ಪತಿಗೆ ಕೈಕೊಟ್ಟು, ಸಂತೋಷ್ ಜೊತೆ ದೇವಾಲಯಲ್ಲಿ ಎರಡನೇ ಮದುವೆಯಾಗಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ಈ ಮದುವೆಯ ವೀಡಿಯೋವನ್ನು ನೋಡಿ ಮೊದಲ ಪತಿ ಶಾಕ್ ಆಗಿದ್ದಾರೆ. ಇದನ್ನೂ ಓದಿ: ಸೌದೆ ತಗೊಂಡ್ರೇ ಮಾತ್ರ ಹೆಣ ಸುಡಲು ಸ್ಲಾಟ್ – ಬೆಂಗಳೂರಿನ ಸ್ಮಶಾನದಲ್ಲೂ ಬ್ರೋಕರ್‌ಗಳ ಹಾವಳಿ!

    ಪೊಲೀಸರ ಭದ್ರತೆಯಲ್ಲಿ ಬಟ್ಟೆ ಹಾಗೂ ಇನ್ನಿತರ ವಸ್ತುಗಳನ್ನ ತೆಗೆದುಕೊಂಡು ಹೋಗಲು ಮನೆ ಬಳಿ ಬಂದ ನೇತ್ರಾವತಿಗೆ ಸ್ಥಳೀಯರು ಕ್ಲಾಸ್ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲಯಾಳಂ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ – ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ

    ನೇತ್ರಾವತಿ ವಿರುದ್ಧ ನೆಲಮಂಗಲ ಟೌನ್ ಪೋಲೀಸ್ ಠಾಣೆಯಲ್ಲಿ (Nelamangala Town Police Station) ಪ್ರಕರಣ ದಾಖಲಾಗಿದ್ದು, ಪತಿ ಹಾಗೂ ಆತನ ಕುಟುಂಬ ದೂರು ನೀಡಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಡೀಸೆಲ್ ಬೆಲೆ ಏರಿಕೆ – ಖಾಸಗಿ ಬಸ್ ಪ್ರಯಾಣ ದರ ದುಬಾರಿ!

    ಈ ಹಿಂದೆ ನೇತ್ರಾವತಿಯು ಪತಿ ಕುಡಿದು ಹೊಡೆಯುತ್ತಾನೆ ಎಂದು ದೂರು ನೀಡಿ, ಪತಿಯನ್ನು ಮನೆಯಿಂದ ಹೊರಗೆ ಹಾಕಿರುವ ವಿಷಯವೂ ಬೆಳಕಿಗೆ ಬಂದಿದೆ.

  • ಗಂಡನ ಕೊಲೆಯನ್ನ ವಿಡಿಯೋ ಕಾಲ್ ಮೂಲಕ ವೀಕ್ಷಿಸಿದಾಕೆ ಜೈಲುಪಾಲು

    ಗಂಡನ ಕೊಲೆಯನ್ನ ವಿಡಿಯೋ ಕಾಲ್ ಮೂಲಕ ವೀಕ್ಷಿಸಿದಾಕೆ ಜೈಲುಪಾಲು

    ಬೆಳಗಾವಿ: ವಿಡಿಯೋ ಕಾಲ್ ಮಾಡಿ ಗಂಡನ ಹತ್ಯೆಯನ್ನು ಕಣ್ಣಾರೆ ಕಂಡಿದ್ದ ಪಾಪಿ ಪತ್ನಿಯನ್ನು ಖಾನಾಪುರ ಪೊಲೀಸರು(Khanapura Police) ಬಂಧಿಸಿದ್ದಾರೆ.

    ಬೆಳಗಾವಿ(Belagavi) ಜಿಲ್ಲೆಯ ಖಾನಾಪುರ ತಾಲೂಕಿನ ಗಾಡಿಕೊಪ್ಪ ಗ್ರಾಮದಲ್ಲಿ ಬಲೋಗಿ ನಿವಾಸಿ ಶಿವನಗೌಡ ಪಾಟೀಲ್ ಎಂಬಾತನನ್ನು ಕೊಲೆ ಮಾಡಲಾಗಿತ್ತು. ಕೊಲೆಯಾದ ಶಿವನಗೌಡ ಅವರ ಪತ್ನಿ ಶೈಲಾ ಪಾಟೀಲ್‌ಗೆ ಹಾಗೂ ಕೊಲೆ ಆರೋಪಿ ರುದ್ರಪ್ಪ ಹೊಸಟ್ಟಿ ಜೊತೆಗೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದೆ. ಇದನ್ನೂ ಓದಿ: ಪ್ರಸಿದ್ಧ ವಿದೇಶಿ ವೈದ್ಯರಂತೆ ನಟಿಸಿ ಹಾರ್ಟ್‌ ಆಪರೇಷನ್‌ – ನಕಲಿ ವೈದ್ಯನ ಹುಚ್ಚಾಟಕ್ಕೆ 7 ಜನ ಬಲಿ

    ರುದ್ರಪ್ಪ ಮತ್ತು ಶೈಲಾ ನಡುವಿನ ಈ ಸಂಬಂಧದ ಬಗ್ಗೆ ಪತಿ ಶಿವನಗೌಡನಿಗೆ ಗೊತ್ತಾಗಿತ್ತು. ಇದೇ ಕಾರಣಕ್ಕೆ ಆತನ ಸಹವಾಸ ಬಿಡು ಎಂದು ಶಿವನಗೌಡ ತನ್ನ ಪತ್ನಿಗೆ ಬುದ್ಧಿ ಹೇಳಿದ್ದರು.

    ಶಿವನಗೌಡ ಅವರು ಪತ್ನಿಯನ್ನು ತವರು ಮನೆಗೆ ಬಿಟ್ಟು ವಾಪಾಸ್ ಆಗುತ್ತಿದ್ದಾಗ, ರುದ್ರಪ್ಪ ಎಣ್ಣೆ ಪಾರ್ಟಿ ಮಾಡಿಸಿ ಶಿವನಗೌಡರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ. ಇದನ್ನು ಪತ್ನಿ ಶೈಲಾ ವಿಡಿಯೋ ಕಾಲ್ ಮೂಲಕ ವೀಕ್ಷಣೆ ಮಾಡಿದ್ದಳು ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಇದನ್ನೂ ಓದಿ: ಪತ್ನಿಗೆ ಅಕ್ರಮ ಸಂಬಂಧ ಶಂಕೆ – ಸುತ್ತಿಗೆಯಿಂದ ಇಂಜಿನಿಯರ್‌ ತಲೆ ಒಡೆದು ಹತ್ಯೆಗೈದ ಪತಿ

    ಗಂಡ ತೀರಿ ಹೋದಾಗ ಆತನ ಪಾರ್ಥಿವ ಶರೀರದ ಮುಂದೆ ಕುಳಿತು ಹಾಡಾಡಿ ಅತ್ತ ಪತ್ನಿಯ ಕಾಲ್ ಹಿಸ್ಟರಿಯಲ್ಲಿ ಆಕೆಯ ಕರಾಳ ಸಂಬಂಧದ ಕುರುಹುಗಳು ಪತ್ತೆಯಾಗಿವೆ. ಈ ಕುರಿತು ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೊಲೆಯ ಆರೋಪಿಗಳಾದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

  • ಬೆಂಗಳೂರಲ್ಲಿ ಪತಿಯಿಂದ ಪತ್ನಿಯ ಬರ್ಬರ ಹತ್ಯೆ – ನಡು ರಸ್ತೆಯಲ್ಲಿ ಕೊಲೆಗೈದು ಪರಾರಿ

    ಬೆಂಗಳೂರಲ್ಲಿ ಪತಿಯಿಂದ ಪತ್ನಿಯ ಬರ್ಬರ ಹತ್ಯೆ – ನಡು ರಸ್ತೆಯಲ್ಲಿ ಕೊಲೆಗೈದು ಪರಾರಿ

    – ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

    ಬೆಂಗಳೂರು: ನಡುರಸ್ತೆಯಲ್ಲೇ ಪತ್ನಿಯನ್ನು ಬರ್ಬರ ಹತ್ಯೆಗೈದು ಪತಿ ಪರಾರಿಯಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ (Electronic City) ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಗತಿ ನಗರದಲ್ಲಿ ನಡೆದಿದೆ.

    ಬಾಗೇಪಲ್ಲಿ (Bagepalli) ಮೂಲದ ಶಾರದ (35) ಮೃತ ಪತ್ನಿ. ಕೃಷ್ಣ ಪತ್ನಿಯನ್ನು ಕೊಂದ ಪಾಪಿ ಪತಿ. ಅಕ್ರಮ ಸಂಬಂಧ ಹಿನ್ನೆಲೆ ಕೊಲೆ ಶಂಕೆ ವ್ಯಕ್ತವಾಗಿದೆ. ನಡು ರಸ್ತೆಯಲ್ಲಿ ಪತ್ನಿಗೆ ಚಾಕುವಿನಿಂದ ಕುತ್ತಿಗೆ ಕುಯ್ದು ಪತಿ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಆಗ್ನೇಯ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಸೋಕೋ ಟೀಂ ಆಗಮಿಸಿದೆ. ಮೃತದೇಹವನ್ನು ಸೆಂಟ್ ಜಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಯಾವುದೇ ಮಸೀದಿ, ಕಬ್ರಸ್ತಾನ್‌ ಮುಟ್ಟಲ್ಲ: ವಕ್ಫ್‌ ಮಸೂದೆ ಬಗ್ಗೆ ಬಿಜೆಪಿ ಸಂಸದ ಪ್ರತಿಕ್ರಿಯೆ

    ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಪತ್ನಿ ಕೆಲಸ ಮುಗಿಸಿ ನಿರ್ಜನ ರಸ್ತೆಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಪತಿ ದಾಳಿ ನಡೆಸಿದ್ದಾನೆ. ಆರೋಪಿ ಪತ್ನಿಯನ್ನು ಕೊಲ್ಲಲು ಎರಡು ಚಾಕು ತಂದಿದ್ದ. ಚಾಕುವಿನಿಂದ ಕುತ್ತಿಗೆ ಸೀಳಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿ ಎಸ್ಕೇಪ್ ಆಗುತ್ತಿದ್ದ ಆರೋಪಿ ಪತಿಯನ್ನು ಸ್ಥಳೀಯರು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಕೇಸ್‌ – ಶಾಸಕ ಪೊನ್ನಣ್ಣ & ವಿನಯ್‌ ಸೋಮಯ್ಯ ವಾಟ್ಸಪ್‌ ಚಾಟ್‌ನಲ್ಲೇನಿದೆ?

    ಘಟನೆ ಸಂಬಂಧ ಆಗ್ನೇಯ ವಿಭಾಗದ ಡಿಸಿಪಿ ಸಾರ ಫಾತಿಮಾ ಮಾಧ್ಯಮದವರೊಂದಿಗೆ ಮಾತನಾಡಿ, ಸುಮಾರು 8 ಗಂಟೆಯ ಸಮಯದಲ್ಲಿ ನಮ್ಮ ಕಂಟ್ರೋಲ್ ರೂಮಿಗೆ ಮಾಹಿತಿ ಬಂತು. ನಮ್ಮ ಎಲೆಕ್ಟ್ರಾನಿಕ್ ಸಿಟಿ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಹೋಗಿದ್ದಾರೆ. ಶಾರದಾ ಎಂಬ ಮಹಿಳೆಯ ಕೊಲೆಯಾಗಿದೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೂಡಲೇ ನಮ್ಮ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಯಾವ ವಿಚಾರಕ್ಕೆ ಕೊಲೆಯಾಗಿದೆ ಎಂದು ತನಿಖೆ ನಡೆಯುತ್ತಿದೆ. ಮರಣೋತ್ತರ ಪರೀಕ್ಷೆ ಬಂದ ನಂತರ ಸಂಪೂರ್ಣ ವಿಚಾರ ಗೊತ್ತಾಗಬೇಕಾಗಿದೆ. ಇದನ್ನೂ ಓದಿ: Bengaluru | ಅನಾರೋಗ್ಯಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ

  • ಕೊಲೆಗೈದು ಅಂತ್ಯಸಂಸ್ಕಾರ ಮಾಡಿ ಜೈಲುಪಾಲಾಗಿದ್ದ ಪತಿಗೆ ಶಾಕ್‌ – 4 ವರ್ಷದ ಬಳಿಕ ಪ್ರಿಯಕರನ ಜೊತೆ ಪತ್ನಿ ಪ್ರತ್ಯಕ್ಷ!

    ಕೊಲೆಗೈದು ಅಂತ್ಯಸಂಸ್ಕಾರ ಮಾಡಿ ಜೈಲುಪಾಲಾಗಿದ್ದ ಪತಿಗೆ ಶಾಕ್‌ – 4 ವರ್ಷದ ಬಳಿಕ ಪ್ರಿಯಕರನ ಜೊತೆ ಪತ್ನಿ ಪ್ರತ್ಯಕ್ಷ!

    ಮಡಿಕೇರಿ: ಪತ್ನಿ (Wife) ನಾಪತ್ತೆಯಾಗಿದ್ದಾಳೆ ಪತಿಯಿಂದ ದೂರು. ಮೃತ ಪತ್ನಿಯ ಶವಕ್ಕೆ ಪತಿಯಿಂದ ಅಂತ್ಯಸಂಸ್ಕಾರ. ಪತ್ನಿಯನ್ನು ಕೊಲೆಗೈದ ಆರೋಪದ ಅಡಿ ಪತಿ (Husband) ಜೈಲುಪಾಲು. ಜೈಲು ಶಿಕ್ಷೆಯಿಂದ ಹೇಗೋ ಪಾರಾಗಿ ಬಂದಿದ್ದ ಪತಿಗೆ 4 ವರ್ಷದ ನಂತರ ʼಮೃತ ಪತ್ನಿʼಯನ್ನು ನೋಡಿ ಶಾಕ್‌!

    ಇದು ಯಾವುದೋ ಸಿನಿಮಾ ಕಥೆಯಲ್ಲ. ಕೊಡಗಿನ ಕುಶಾಲನಗರ (Kushalnagar) ತಾಲ್ಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ನಡೆದ ನೈಜ ಘಟನೆ. ಪತಿಯಿಂದ ʼಕೊಲೆʼಯಾಗಿದ್ದ ಪತ್ನಿ 4 ವರ್ಷದ ಬಳಿಕ ದಿಢೀರ್‌ ಪ್ರತ್ಯಕ್ಷವಾಗುವ ಮೂಲಕ ನಾಪತ್ತೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌ ಸಿಕ್ಕಿದೆ.

    ಪತಿಯಿಂದ ದೂರು:
    ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿ ಗ್ರಾಮದ ಆದಿವಾಸಿ ಜನಾಂಗದ ಸುರೇಶ್‌ ಮತ್ತು ಮಲ್ಲಿಗೆಯ ಸಂಸಾರ ಚೆನ್ನಾಗಿ ಸಾಗುತ್ತಿತ್ತು. ದಂಪತಿಗೆ ಇಬ್ಬರು ಮಕ್ಕಳು ಜನಿಸಿದ್ದರು. ಈ ಮಧ್ಯೆ ಒಂದು ದಿನ ಮಲ್ಲಿಗೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು. ಸುರೇಶ್‌ ಅವರು ಕುಟುಂಬದ ಸಂಬಂಧಿಕರಲ್ಲಿ ವಿಚಾರಿಸಿದಾಗ ಆಕೆಗೆ ಅಕ್ರಮ ಸಂಬಂಧ ಇರುವುದು ಬೆಳಕಿಗೆ ಬಂದಿದೆ. ದೂರವಾಣಿ ಮೂಲಕ ಸುರೇಶ್‌ ಕರೆ ಮಾಡಿ ತನ್ನೊಂದಿಗೆ ಜೀವನ ಮಾಡದೇ ಇದ್ದರೂ ಪರವಾಗಿಲ್ಲ ತನ್ನ ಮಕ್ಕಳಿಗೆ ತಾಯಿಯಾಗಿ ಇರು ಎಂದು ಪರಿ ಪರಿಯಾಗಿ ಮನವಿ ಮಾಡಿದ್ದರೂ ಆಕೆ ಮಾತ್ರ ಬರಲೇ ಇಲ್ಲ.

    ಮುಂದೆ ನನ್ನ ಮೇಲೆ ಯಾವುದೇ ಆರೋಪ ಬರಬಾರದು ಎಂದು ಸುರೇಶ್‌ ಅವರು 2021 ರಲ್ಲಿ ಕುಶಾಲನಗರ ಠಾಣೆಗೆ ಹೋಗಿ ನಾಪತ್ತೆ ದೂರು ನೀಡಿ ಪೊಲೀಸರ ಬಳಿ ನಡೆದ ಎಲ್ಲಾ ವಿಚಾರವನ್ನು ತಿಳಿಸುತ್ತಾರೆ. ಹೀಗಾಗಿ ಕುಶಾಲನಗರ ಗ್ರಾಮಾಂತರ ಠಾಣೆಯ ಪೊಲೀಸರು ಕಾಣೆಯಾಗಿದ್ದ ಸುರೇಶ್ ಪತ್ನಿ ಮಲ್ಲಿಗೆಯನ್ನು ಪತ್ತೆ ಮಾಡಲು ಹೋಗಲಿಲ್ಲ.

    ಮೃತದೇಹಕ್ಕೆ ಅಂತ್ಯಸಂಸ್ಕಾರ
    ಕುಶಾಲನಗರ ಗ್ರಾಮಾಂತರ ಠಾಣೆಯ ಪೊಲೀಸರು 2022 ರಲ್ಲಿ ಸುರೇಶ್ ಗೆ ಕರೆ ಮಾಡಿ ನಿಮ್ಮ ಪತ್ನಿಯ ಶವ ಪತ್ತೆಯಾಗಿದೆ ಎಂದು ಹೇಳಿ ಠಾಣೆಗೆ ಬರಲು ಹೇಳಿದ್ದರು. ಈ ವೇಳೆ ಠಾಣೆಗೆ ಬಂದಿದ್ದ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದ ಪೊಲೀಸರು ಸುರೇಶ್ ಮತ್ತು ಆತನ ಅತ್ತೆ ಗೌರಿಯನ್ನು ಜೀಪಿನಲ್ಲಿ ಕರೆದುಕೊಂಡು ಹೋಗಿದ್ದರು. ಇದನ್ನೂ ಓದಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಗೆ ಶಿಕ್ಷಕಿ ಬಲಿ

    ಬೆಟ್ಟದಪುರದಲ್ಲಿ ಸುರೇಶ್‌ ಅವರಿಗೆ ಒಂದು ಅಸ್ಥಿಪಂಜರ ತೋರಿಸಿ,”ಇದು ನಿಮ್ಮ ಪತ್ನಿಯ ಅಸ್ಥಿಪಂಜರ. ಅಂತ್ಯ ಸಂಸ್ಕಾರ ಮಾಡಿ” ಎಂದು ಅಲ್ಲೇ ಅರಣ್ಯದಲ್ಲಿ ಶವ ಸಂಸ್ಕಾರ ಮಾಡಿಸಿದ್ದರು. ನಂತರ ಸುರೇಶ್‌ ಅವರೇ ಪತ್ನಿ ಮಲ್ಲಿಗೆಯನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಜೈಲಿಗೆ ಅಟ್ಟಿದ್ದರು. ಈ ವೇಳೆ ಸುರೇಶ್‌ ಅವರು ನಾನು ಪತ್ನಿಯನ್ನು ಕೊಲೆ ಮಾಡಿಲ್ಲ ಎಂದು ಪರಿ ಪರಿಯಾಗಿ ಬೇಡಿಕೊಂಡರೂ ಪೊಲೀಸರು ನೀನೇ ಕೃತ್ಯ ಎಸಗಿದ್ಯಾ ಎಂದು ಹೇಳಿ ಬಲವಂತವಾಗಿ ಜೈಲಿಗೆ ಕಳುಹಿಸಿದ್ದರು.

    ಜೈಲಿನಿಂದ ರಿಲೀಸ್‌
    ಎರಡು ವರ್ಷದ ಬಳಿಕ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಅಂತ್ಯಸಂಸ್ಕಾರಗೊಂಡ ಮೃತದೇಹದ ಡಿಎನ್‌ಎ ವರದಿ ಬರುತ್ತದೆ. ಮೃತ ವ್ಯಕ್ತಿಯ ಡಿಎನ್‌ಎಗೂ ಮಲ್ಲಿಗೆ ಕುಟುಂಬಕ್ಕೂ ಯಾವುದೇ ಸಾಮ್ಯತೆ ಇಲ್ಲದ ಕಾರಣ ಸುರೇಶ್‌ ಅವರು ಜೈಲಿನಿಂದ ಬಿಡುಗಡೆಯಾಗುತ್ತಾರೆ. ಇದನ್ನೂ ಓದಿ: ಗ್ರಾಹಕರ ಸೋಗಿನಲ್ಲಿ ಬಂದು 1.13 ಕೋಟಿ ಮೌಲ್ಯದ ಚಿನ್ನಾಭರಣ ಕದ್ದೊಯ್ದ ಬುರ್ಖಾಧಾರಿ ಮಹಿಳೆಯರು!

    ಪ್ರಿಯತಮನೊಂದಿಗೆ ಸಿಕ್ಕಿಬಿದ್ಳು:
    4 ವರ್ಷದಿಂದ ನಾಪತ್ತೆಯಾಗಿದ್ದ ಮಲ್ಲಿಗೆ ಏ.1 ರಂದು ಮಡಿಕೇರಿಯ ಹೋಟೆಲಿಗೆ ಪ್ರಿಯಕರನೊಂದಿಗೆ ಬಂದಿದ್ದಾಳೆ. ಈ ವೇಳೆ ಅಲ್ಲಿ ಸುರೇಶ್‌ ಅವರ ಸ್ನೇಹಿತರು ಆಕೆಯ ಫೋಟೋವನ್ನು ತೆಗೆದು ಸುರೇಶ್‌ ಅವರಿಗೆ ಮತ್ತು ಪೊಲೀಸರಿಗೆ ನೀಡಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಅಲರ್ಟ್‌ ಆಗಿ ಮಲ್ಲಿಗೆ ನೆಲೆಸಿರುವ ಜಾಗವವನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದು ಮೈಸೂರು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

    ಮೃತದೇಹ ಯಾರದ್ದು?
    ಅಂದು ಸುರೇಶ್ ‌ಅಂತ್ಯ ಸಂಸ್ಕಾರ ಮಾಡಿದ ಆ ಅಸ್ಥಿಪಂಜರ ಯಾರದ್ದು? ಯಾವುದೇ ಸಾಕ್ಷ್ಯಗಳು ಇಲ್ಲದೇ ಇದ್ದರೂ ಪೊಲೀಸರು ಉದ್ದೇಶಪೂರ್ವಕವಾಗಿ ಸುರೇಶ್‌ ಅವರನ್ನು ಕೊಲೆ ಪ್ರಕರಣದಲ್ಲಿ ಸಿಲುಕಿಸಿದ್ದು ಹೇಗೆ ಎಂಬ ಗಂಭೀರ ಪ್ರಶ್ನೆ ಎದ್ದಿದೆ.

     

  • Bengaluru | ಪತ್ನಿಯ ಶೀಲ ಶಂಕಿಸಿ ಕತ್ತು ಹಿಸುಕಿ ಕೊಲೆ – ಪೊಲೀಸರ ಮುಂದೆ ಶರಣಾದ ಪತಿ

    ಬೆಂಗಳೂರು: ಪತ್ನಿಯ (Wife) ಶೀಲ ಶಂಕಿಸಿ ಪತಿ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಹೆಗ್ಗಡೆ ನಗರದ (Hegde Nagar) 1ನೇ ಕ್ರಾಸ್‌ನಲ್ಲಿ ನಡೆದಿದೆ.

    ವೇಲಾರಮಣಿ (35) ಕೊಲೆಯಾದ ಪತ್ನಿ. ಗಂಡ ಚಂದ್ರಶೇಖರ್ ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ. ಮಂಗಳವಾರ ಬೆಳಗ್ಗೆ 11 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: Exclusive | ರನ್ಯಾ ಗೋಲ್ಡ್ ಸ್ಮಗ್ಲಿಂಗ್‌ ಕೇಸ್‌ – ಮೊದಲು ಚಿನ್ನ ಸಾಗಿಸಿದ್ದು ದಕ್ಷಿಣಾ ಆಫ್ರಿಕಾದಿಂದ ದುಬೈಗೆ!

    11 ವರ್ಷದ ಹಿಂದೆ ವೇಲಾರಮಣಿ ಹಾಗೂ ಚಂದ್ರಶೇಖರ್‌ಗೆ ಮದುವೆಯಾಗಿತ್ತು. ಇವರ ಮದುವೆಗೆ ಸಾಕ್ಷಿ ಎಂಬಂತೆ ಇಬ್ಬರು ಮಕ್ಕಳಿದ್ದರು. ಚಂದ್ರಶೇಖರ್ ಕ್ಯಾಬ್ ಡ್ರೈವರ್ ಆಗಿದ್ದು, ಪತ್ನಿ ವೇಲಾರಮಣಿ ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿದ್ದಳು. ಹೆಂಡತಿ ಫೋನ್‌ನಲ್ಲಿ ಯಾವಾಗಲೂ ಮಾತನಾಡುತ್ತಿರುವುದನ್ನು ನೋಡಿ ಚಂದ್ರಶೇಖರ್ ಹಲವು ದಿನಗಳಿಂದ ಆಕೆಯ ಬಗ್ಗೆ ಅನುಮಾನಿಸಿದ್ದ. ಇದನ್ನೂ ಓದಿ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ SSLC ವಿದ್ಯಾರ್ಥಿ ನೀರುಪಾಲು

    ಮಂಗಳವಾರ ಇಬ್ಬರು ಮಕ್ಕಳು ಶಾಲೆಗೆ ಹೋದ ಮೇಲೆ ಗಂಡ-ಹೆಂಡತಿ ನಡುವೆ ಗಲಾಟೆಯಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಚಂದ್ರಶೇಖರ್ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಆರೋಪಿ ಗಂಡ ಸಂಪಿಗೆಹಳ್ಳಿ ಠಾಣೆಗೆ ಹೋಗಿ ಪೊಲೀಸರ ಮುಂದೆ ಶರಣಾಗಿದ್ದಾನೆ. ನಂತರ ಸ್ಥಳಕ್ಕೆ ತೆರಳಿದ ಸಂಪಿಗೆಹಳ್ಳಿ ಪೊಲೀಸರು, ಕೊಲೆ ಮಾಡಿದ ಸ್ಥಳ ಪರಿಶೀಲನೆ ನಡೆಸಿ, ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ಮಂಗಳವಾರವೇ ಮೃತ ದೇಹ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇದನ್ನೂ ಓದಿ: ಮುಸ್ಲಿಮರಿಗೆ ಮೀಸಲಾತಿ ಮೋದಿ ಕೊಟ್ರೆ ಸರಿ, ನಾವು ಕೊಟ್ರೆ ತಪ್ಪಾ? – ಯತೀಂದ್ರ

    ಸದ್ಯ ಆರೋಪಿ ಚಂದ್ರಶೇಖರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಿಜೆಪಿಯಲ್ಲೇ ಹನಿಟ್ರ್ಯಾಪ್‌ಗಳು ನಡೆದಿವೆ – ಯತೀಂದ್ರ ಸಿದ್ದರಾಮಯ್ಯ ಬಾಂಬ್‌

  • ಚಾಮರಾಜನಗರ | ತಲೆಯಲ್ಲಿ ಕೂದಲು ಇಲ್ಲ ಎಂದು ಪತ್ನಿಯ ಟಾರ್ಚರ್ – ಮನನೊಂದು ಪತಿ ಆತ್ಮಹತ್ಯೆ

    ಚಾಮರಾಜನಗರ | ತಲೆಯಲ್ಲಿ ಕೂದಲು ಇಲ್ಲ ಎಂದು ಪತ್ನಿಯ ಟಾರ್ಚರ್ – ಮನನೊಂದು ಪತಿ ಆತ್ಮಹತ್ಯೆ

    – ನೀನು ಚನ್ನಾಗಿಲ್ಲ, ನನಗೆ ಸರಿಯಾದ ಜೋಡಿಯಲ್ಲ ಎಂದು ಅವಮಾನ

    ಚಾಮರಾಜನಗರ: ನಿನ್ನ ತಲೆಯಲ್ಲಿ ಕೂದಲು (Hairs) ಇಲ್ಲ ಎಂದು ಪತ್ನಿ ನೀಡುತ್ತಿದ್ದ ಟಾರ್ಚರ್‌ಗೆ ಮನನೊಂದು ಪತಿ (Husband) ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ (Chamarajanagar) ತಾಲೂಕಿನ ಉಡಿಗಾಲ (Udigala) ಗ್ರಾಮದಲ್ಲಿ ನಡೆದಿದೆ.

    ಪರಶಿವ (32) ಆತ್ಮಹತ್ಯೆ ಮಾಡಿಕೊಂಡ ಪತಿ. ನೀನು ಚನ್ನಾಗಿಲ್ಲ, ನನಗೆ ಸರಿಯಾದ ಜೋಡಿಯಲ್ಲ ಎಂದು ಪತ್ನಿ ಎಲ್ಲರ ಎದುರೇ ಅವಮಾನ ಮಾಡುತ್ತಿದ್ದಳು. ಶೊಕಿವಾಲೆಯಾಗಿದ್ದ ಪತ್ನಿ ಹೈಫೈ ಜೀವನ ಮಾಡಲು ಬಯಸಿದ್ದಳು. ಅಲ್ಲದೇ ರೀಲ್ಸ್ ಗೀಳು ಕೂಡ ಇತ್ತು. ಇದನ್ನೂ ಓದಿ: ಶ್ರೀಕೃಷ್ಣ ದೇಗುಲಕ್ಕೆ ಭೇಟಿ ನೀಡಿದ ಪ್ರೇಮ್‌, ಶರಣ್ಯ ಶೆಟ್ಟಿ

    ಒಳ್ಳೆ ಬಟ್ಟೆ ಕೊಡಿಸು, ಆಭರಣ ಕೊಡಿಸು, ಬೇರೆಮನೆ ಮಾಡು ಎಂದು ಪತ್ನಿ ಪತಿಗೆ ಮಾನಸಿಕ ಹಾಗು ದೈಹಿಕ ಕಿರುಕುಳ ನೀಡುತ್ತಿದ್ದಳು. ಇಷ್ಟು ಮಾತ್ರವಲ್ಲದೇ ಸುಳ್ಳು ವರದಕ್ಷಿಣೆ ಕೇಸ್ ಹಾಕಿ ಪತಿಯನ್ನು ಒಂದೂವರೆ ತಿಂಗಳು ಜೈಲಿಗೆ ಕೂಡ ಕಳಿಸಿದ್ದಳು. ಪತ್ನಿಯ ಕಿರುಕುಳದಿಂದ ಬೇಸತ್ತು ಪತಿ ಪರಶಿವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪುಲ್ವಾಮಾ ಸ್ಟೈಲ್‌ ದಾಳಿ – ಪಾಕ್‌ 90 ಸೈನಿಕರ ಹತ್ಯೆ: ಬಲೂಚ್ ಲಿಬರೇಶನ್ ಆರ್ಮಿ ಘೋಷಣೆ

  • ಹಾಸನ| ಪ್ರಿಯಕರನ ಜೊತೆ ಪತ್ನಿ ಪರಾರಿ – ನದಿಗೆ ಹಾರಿ ಪತಿ ಆತ್ಮಹತ್ಯೆ

    ಹಾಸನ| ಪ್ರಿಯಕರನ ಜೊತೆ ಪತ್ನಿ ಪರಾರಿ – ನದಿಗೆ ಹಾರಿ ಪತಿ ಆತ್ಮಹತ್ಯೆ

    ಹಾಸನ: ಪ್ರಿಯಕರನ ಜೊತೆ ಪತ್ನಿ ಪರಾರಿಯಾದ ಹಿನ್ನೆಲೆ ಮನನೊಂದ ಪತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ (Hassan) ಜಿಲ್ಲೆ ಹೊಳೆನರಸೀಪುರ (Holenarasipura) ತಾಲೂಕಿನ ಮಾಕವಳ್ಳಿ ಗ್ರಾಮದ ಬಳಿ ನಡೆದಿದೆ.

    ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಗ್ರಾಮದ ರವಿ (38) ಆತ್ಮಹತ್ಯೆಗೆ ಶರಣಾದ ಪತಿ. ರವಿಯ ಪತ್ನಿ ಕೆಲ ದಿನಗಳ ಹಿಂದೆ ಗಂಡನನ್ನು ಬಿಟ್ಟು ಮಗುವಿನೊಂದಿಗೆ ಹೊನ್ನವಳ್ಳಿ ಗ್ರಾಮದ ಪ್ರದೀಪ್ ಜೊತೆ ಪರಾರಿಯಾಗಿದ್ದಳು. ಇದರಿಂದ ಮನನೊಂದ ರವಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಸರಿಯಾಗಿ ಸ್ಪಂದಿಸದ ಕಾರಣ ಎಸ್ಪಿಗೂ ದೂರು ನೀಡಿದ್ದರು. ಇದನ್ನೂ ಓದಿ: ಹರ್ಲೀನ್ ಡಿಯೋಲ್‍ ಅಬ್ಬರದ ಬ್ಯಾಟಿಂಗ್‌ಗೆ ಡೆಲ್ಲಿ ಬರ್ನ್‌ – ಗುಜರಾತ್‌ಗೆ 5 ವಿಕೆಟ್‌ಗಳ ರೋಚಕ ಜಯ

    ಆದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಮನನೊಂದ ರವಿ ಶನಿವಾರ ಮಾಕವಳ್ಳಿ ಬಳಿ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೊಲೀಸರು ಹಾಗೂ ಅಗ್ನಿಶಾಮಕ ದಳದಿಂದ ರವಿಯ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿಯುತ್ತಿದೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಗ್ಯಾರಂಟಿಗೆ ಅನುದಾನ ಕಳೆದ ಬಾರಿ ಎಷ್ಟಿತ್ತು? ಈ ಬಾರಿ ಎಷ್ಟು ಹಂಚಿಕೆಯಾಗಿದೆ? ಸಾಲ ಎಷ್ಟು?

  • Bidar | ಮದ್ಯ ಸೇವಿಸಿ ಕಿರುಕುಳ – ಪೋಷಕರ ಜೊತೆ ಸೇರಿ ಪತಿಯ ಹತ್ಯೆಗೈದ ಪತ್ನಿ

    Bidar | ಮದ್ಯ ಸೇವಿಸಿ ಕಿರುಕುಳ – ಪೋಷಕರ ಜೊತೆ ಸೇರಿ ಪತಿಯ ಹತ್ಯೆಗೈದ ಪತ್ನಿ

    ಬೀದರ್: ಪ್ರತಿದಿನ ಮದ್ಯ (Alcohol) ಸೇವಿಸಿ ಬಂದು ಕಿರುಕುಳ ನೀಡುತ್ತಿದ್ದ ಪತಿಯನ್ನು (Husband) ಪೋಷಕರ ಜೊತೆ ಸೇರಿ ಪತ್ನಿ ಕೊಲೆ ಮಾಡಿದ ದಾರುಣ ಘಟನೆ ಬೀದರ್ (Bidar) ಜಿಲ್ಲೆಯ ಔರಾದ್ (Aurad) ತಾಲೂಕಿನ ಬಾಚೆಪಳ್ಳಿ ಗ್ರಾಮದಲ್ಲಿ ನಡೆದಿದೆ.

    ಶ್ರೀಧರ್ ಶಿವರಾಜ್ (30) ಕೊಲೆಯಾದ ಪತಿ. ಕುಡಿದು ಬಂದು ಈತ ನೀಡುತ್ತಿದ್ದ ಕಿರುಕುಳಕ್ಕೆ ಮನನೊಂದು ಪೋಷಕರ ಜೊತೆ ಸೇರಿ ಪತಿಯನ್ನು ಪತ್ನಿ ಸವಿತಾ ಕೊಲೆ ಮಾಡಿದ್ದಾಳೆ. ಇದನ್ನೂ ಓದಿ: ಖರ್ಜೂರದೊಳಗೆ ಇಟ್ಟು ಸಾಗಿಸುತ್ತಿದ್ದ 172 ಗ್ರಾಂ ಚಿನ್ನ ಏರ್‌ಪೋರ್ಟ್‌ನಲ್ಲಿ ವಶಕ್ಕೆ

    ಕಳೆದ ಐದಾರು ವರ್ಷಗಳ ಹಿಂದೆ ಪ್ರೀತಿಸಿ ಇಬ್ಬರೂ ಮದುವೆಯಾಗಿದ್ದರು. ಚಾಲಕನ ಕೆಲಸ ಮಾಡುತ್ತಿದ್ದ ಪತಿ ಶ್ರೀಧರ್ ಕುಡಿದು ಬಂದು ಪ್ರತಿ ದಿನ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ಪತ್ನಿ ಪೋಷಕರನ್ನು ಕರೆಸಿಕೊಂಡು ಹಗ್ಗದಿಂದ ಪತಿಯ ಕೈಕಾಲು ಕಟ್ಟಿ ಹಾಕಿ ಕಬ್ಬಿಣದ ಸಲಾಕೆಯಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಇದನ್ನೂ ಓದಿ: ಮಡಿಕೇರಿಯ ಇಗ್ಗುತಪ್ಪ, ನಾಲಾಡಿ ಬೆಟ್ಟದಲ್ಲಿ ಕಾಡ್ಗಿಚ್ಚು – 20 ಎಕ್ರೆಗೆ ಬೆಂಕಿ

    ಹಲ್ಲೆ ಮಾಡಿದ ಬಳಿಕ ಮೂವರೂ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಪತಿ ಶ್ರೀಧರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಕುರಿತು ಸಂತಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಆಹಾರ ಪ್ರಿಯರಿಗೆ ಶಾಕ್‌ – ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್‌ನಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ

  • Bengaluru | ಪತಿಗೆ ಅಕ್ರಮ ಸಂಬಂಧ – ಮಗಳನ್ನು ಕೊಲೆಗೈದು ಪತ್ನಿ ಆತ್ಮಹತ್ಯೆ

    Bengaluru | ಪತಿಗೆ ಅಕ್ರಮ ಸಂಬಂಧ – ಮಗಳನ್ನು ಕೊಲೆಗೈದು ಪತ್ನಿ ಆತ್ಮಹತ್ಯೆ

    ಬೆಂಗಳೂರು: ಗಂಡನ ಅಕ್ರಮ ಸಂಬಂಧಕ್ಕೆ (Illicit Relationship) ಬೇಸತ್ತ ಪತ್ನಿ 5 ವರ್ಷದ ಮಗಳನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಬಗಲಗುಂಟೆಯಲ್ಲಿ (Bagalgunte) ನಡೆದಿದೆ.

    ಶೃತಿ (33) ಆತ್ಮಹತ್ಯೆ ಮಾಡಿಕೊಂಡ ಪತ್ನಿ. ಪಾವಘಡದ ಗುಂಡಾರನಹಳ್ಳಿ ಗ್ರಾಮಪಂಚಾಯ್ತಿ ಅಧ್ಯಕ್ಷೆಯಾಗಿದ್ದ ಶೃತಿ ಮಗಳು ರೋಶಿಣಿಯನ್ನು (5) ಫ್ಯಾನ್‌ಗೆ ನೇಣು ಹಾಕಿ ಬಳಿಕ ಅದೇ ಫ್ಯಾನಿಗೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ದಾವಣಗೆರೆ| ಜಾತ್ರೆಗೆ ಒಂದು ದಿನ ಇರುವಾಗಲೇ ದೇವಾಲಯದ ಹುಂಡಿ ಕಳವು!

    ಶೃತಿ, ಈ ಹಿಂದೆ ಪಂಚಾಯತ್ ಕಚೇರಿಯಲ್ಲಿ ಆಡಿಟಿಂಗ್ ಕೆಲಸ ಮಾಡುತ್ತಿದ್ದ ಗೋಪಾಲಕೃಷ್ಣನನ್ನ ಪ್ರೀತಿಸಿ ಹತ್ತು ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಭಾನುವಾರ ಸಂಜೆ ಪತಿ ಮನೆಯಿಂದ ಹೊರಗಡೆ ಹೋಗಿದ್ದ ಸಂದರ್ಭ ಶೃತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗ ಮನೆಯ ಹೊರಗಡೆ ಆಟವಾಡುತ್ತಿದ್ದ. ಮಗ ಮನೆಯೊಳಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಕೆಲಸ ಮಾಡದ ಮೋದಿಯನ್ನು ಕೆಳಗಿಳಿಸಿ, ಗಡ್ಕರಿಯನ್ನು ಪ್ರಧಾನಿ ಮಾಡಿ: ಸಂತೋಷ್‌ ಲಾಡ್‌

    ಗಂಡ ಗೋಪಾಲಕೃಷ್ಣನ ಅಕ್ರಮ ಸಂಬಂಧಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಶೃತಿ ಡೆತ್ ನೋಟ್ ಬರೆದಿದ್ದಾರೆ. ಭಾನುವಾರ ಸಂಜೆ ಘಟನೆ ನಡೆದಿದೆ. ಸ್ಥಳಕ್ಕೆ ಬಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಮುಗಿಸಿ ಕುಟುಂಬಸ್ಥರಿಗೆ ಮೃತದೇಹಗಳನ್ನು ಪೊಲೀಸರು ಒಪ್ಪಿಸಿದ್ದಾರೆ. ಸದ್ಯ ಪತಿಯನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: 17ರ ಬಾಲಕಿ ಮೇಲೆ ಅತ್ಯಾಚಾರ – ಮೃತ ವ್ಯಕ್ತಿಯ ವಿರುದ್ಧ ಪೋಕ್ಸೋ ಕೇಸ್‌