Tag: ಪತ್ನಿ

  • ಹಣ-ಆಸ್ತಿ ಹಾಳು ಮಾಡಬೇಡವೆಂದು ಬುದ್ಧಿ ಹೇಳಿದ ಪತ್ನಿಯನ್ನೇ ಕೊಂದ ಪತಿ

    ಹಣ-ಆಸ್ತಿ ಹಾಳು ಮಾಡಬೇಡವೆಂದು ಬುದ್ಧಿ ಹೇಳಿದ ಪತ್ನಿಯನ್ನೇ ಕೊಂದ ಪತಿ

    ಚಿತ್ರದುರ್ಗ: ಹಣ-ಆಸ್ತಿ ಕಳೆಯಬೇಡ, ದುಂದುವೆಚ್ಚ ಮಾಡಬೇಡ ಎಂದು ಬುದ್ಧಿ ಹೇಳಿದ ಪತ್ನಿಯನ್ನೇ ಪಾಪಿ ಪತಿ ಉಸಿರುಗಟ್ಟಿಸಿ ಕೊಂದಿರುವ ಪ್ರಕರಣ ಚಿತ್ರದುರ್ಗ (Chitradurga) ತಾಲ್ಲೂಕಿನ ಮೆದೇಹಳ್ಳಿ (Medehalli) ಗ್ರಾಮದಲ್ಲಿ ನಡೆದಿದೆ.

    ಈ ಗ್ರಾಮದ ಉಮಾಪತಿ ಎಂಬ ಆಸಾಮಿ ಶ್ರೀದೇವಿ (48) ಜೊತೆ ವಿವಾಹವಾಗಿ, ಅನ್ಯೋನ್ಯವಾಗಿದ್ದರು. ಆದರೆ ಉಮಾಪತಿ ತನ್ನ ಜಮೀನು ಮಾರಾಟದಿಂದಾಗಿ ಬಂದ ಹಣವನ್ನೆಲ್ಲಾ ಮನಬಂದಂತೆ ಖರ್ಚು ಮಾಡುತ್ತಾನೆಂಬ ಹಿನ್ನೆಲೆ ಪತ್ನಿ ಶ್ರೀದೇವಿ ಆಗಾಗ್ಗೆ ಎಚ್ಚರಿಸುತಿದ್ದಳು. ಈ ವಿಚಾರಕ್ಕೆ ಇಬ್ಬರ ಮಧ್ಯೆ ಕಲಹ ನಿರಂತರವಾಗಿತ್ತು. ಇದನ್ನೂ ಓದಿ: ದೆಹಲಿ ಸಿಎಂ ಅತಿಶಿಗೆ ಗೆಲುವು – ಕಲ್ಕಾಜಿ ಕ್ಷೇತ್ರ ಉಳಿಸಿಕೊಂಡ ಆಪ್ ನಾಯಕಿ

    ಇನ್ನು ಉಳಿದ ಜಮೀನನ್ನು ತನ್ನ ಹೆಸರಿಗೆ ಹಾಗೂ ಮಗಳ ಹೆಸರಿಗೆ ಮಾಡಿಸಿಕೊಡಿ ಎಂದು ಒತ್ತಾಯ ಸಹ ಮಾಡುತ್ತಿದ್ದರು. ಇದರಿಂದಾಗಿ ಆಕ್ರೋಶಗೊಂಡ ಉಮಾಪತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸ್ಕೆಚ್ ಹಾಕಿ, ಫೆಬ್ರವರಿ 7 ರಂದು ಬೆಳಗ್ಗೆ ಶ್ರೀದೇವಿ ಮನೆಯಲ್ಲಿ ಪೂಜೆ ಮಾಡುತ್ತಿದ್ದಾಗ, ಆಕೆಯ ಸೀರೆಯಿಂದ ಕೊರಳಿಗೆ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಇದನ್ನೂ ಓದಿ: KSRTC, ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು

    ಹೀಗಾಗಿ ಬಾಯಲ್ಲಿ ರಕ್ತ ಬಂದಿದೆ. ಆದರೆ ಈ ಪ್ರಕರಣದಿಂದ ಜಾರಿಕೊಳ್ಳುವ ನಿಟ್ಟಿನಲ್ಲಿ ಉಮಾಪತಿ ಅಕ್ಕಪಕ್ಕದ ಮನೆಯವರನ್ನೆಲ್ಲಾ ಮನೆಗೆ ಕರೆದು, ನನ್ನ ಪತ್ನಿ ಪೂಜೆ ಮಾಡುವಾಗ ನೆಲಕ್ಕೆ ಬಿದ್ದಿದ್ದಾಳೆಂದು ನಂಬಿಸಿ ಆಸ್ಪತ್ರೆಗೆ ದಾಖಲಿಸಿದ್ದ. ಅಷ್ಟರಲ್ಲಿ ಶ್ರೀದೇವಿ ಮೃತಪಟ್ಟಿದ್ದಾರೆಂದು ಧೃಡವಾಗಿತ್ತೆಂದು ಮೃತ ಶ್ರೀದೇವಿಯ ಸಹೋದರ ರಂಗಸ್ವಾಮಿ ಆರೋಪಿಸಿದ್ದಾರೆ. ಇದನ್ನೂ ಓದಿ: ಹೆಂಡತಿ ತವರಿಗೆ ಹೋಗಿದ್ದಕ್ಕೆ ಖುಷಿಯಾಗಿದೆ – ಪೋಸ್ಟರ್ ಹಾಕಿ, ಬಿಸ್ಕತ್ ಹಂಚಿ ಸಂಭ್ರಮಿಸಿದ ಗಂಡ!

    ಈ ಸಂಬಂಧ ಚಿತ್ರದುರ್ಗದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಆರೋಪಿ ಉಮಾಪತಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ. ಇದನ್ನೂ ಓದಿ: ನಕಾರಾತ್ಮಕ ತಂತ್ರಗಳಿಂದ ರಾಜಕೀಯ ಮಾಡ್ತಿದ್ದವರಿಗೆ ದೆಹಲಿ ಜನರಿಂದ ತಕ್ಕ ಪಾಠ: ಜೋಶಿ

  • Bengaluru| ಹಣಕಾಸು ವಿಚಾರವಾಗಿ ಗಲಾಟೆ – ಪತ್ನಿಯನ್ನು ಉಸಿರುಗಟ್ಟಿಸಿ ಕೊಂದ ಟೆಕ್ಕಿ

    Bengaluru| ಹಣಕಾಸು ವಿಚಾರವಾಗಿ ಗಲಾಟೆ – ಪತ್ನಿಯನ್ನು ಉಸಿರುಗಟ್ಟಿಸಿ ಕೊಂದ ಟೆಕ್ಕಿ

    – ಅನಾರೋಗ್ಯದಿಂದ ಅಸ್ವಸ್ಥ ಎಂದು ಹೈಡ್ರಾಮ

    ಬೆಂಗಳೂರು: ಹಣಕಾಸಿನ ವಿಚಾರದಲ್ಲಿ ಗಲಾಟೆ ನಡೆದು ಪತಿಯೇ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ವೈಯಾಲಿಕಾವಲ್‌ನಲ್ಲಿ (Vyalikaval) ನಡೆದಿದೆ.

    ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ಶರತ್ ಮತ್ತು ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕಿ ಆಗಿರುವ ಚೇತನಾ ಕಳೆದ ಮೂರು ವರ್ಷಗಳಿಂದ ಇಲ್ಲಿ ವಾಸವಾಗಿದ್ದರು. ಆಗಾಗ ಹಣಕಾಸಿನ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಮಂಗಳವಾರ ರಾತ್ರಿ ಕೂಡ ಇಬ್ಬರ ನಡುವೆ ಇದೇ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ಪತ್ನಿ ಚೇತನಾಳನ್ನು ಪತಿ ಶರತ್ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.‌ ಇದನ್ನೂ ಓದಿ: ವರ್ಗಾವಣೆಯಾಗಿ ಅಥವಾ VRS ತೆಗೆದುಕೊಳ್ಳಿ- ಹಿಂದೂಯೇತರ 18 ಸಿಬ್ಬಂದಿ ವಿರುದ್ಧ ಕಠಿಣ ಕ್ರಮ: ತಿರುಪತಿ ಬೋರ್ಡ್‌

    ನಂತರ ತಡರಾತ್ರಿ ಮೂರು ಗಂಟೆ ಹೊತ್ತಿಗೆ ಅನಾರೋಗ್ಯದಿಂದ ಪತ್ನಿ ಪ್ರಜ್ಞೆ ತಪ್ಪಿದ್ದಾಳೆ ಎಂದು ಆಸ್ಪತ್ರೆಗೆ ಸೇರಿದ್ದಾನೆ. ಆ ವೇಳೆಗಾಗಲೇ ಪತ್ನಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದರಿಂದ ಅನುಮಾನಗೊಂಡ ಪೊಲೀಸರು, ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಕೃತ್ಯ ಬೆಳಕಿಗೆ ಬಂದಿದೆ. ಸದ್ಯ ಪತಿ ಶರತ್‌ನನ್ನ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಗಾಯಕ್ಕೆ ಹೊಲಿಗೆ ಬದಲು ಫೆವಿಕ್ವಿಕ್ ಹಾಕಿದ್ದ ನರ್ಸ್ ಅಮಾನತು

  • ಶಿವಮೊಗ್ಗ| ಪತಿಯ ಸಾವಿನ ಸುದ್ದಿ ತಿಳಿದು ಪತ್ನಿ ನೇಣಿಗೆ ಶರಣು

    ಶಿವಮೊಗ್ಗ| ಪತಿಯ ಸಾವಿನ ಸುದ್ದಿ ತಿಳಿದು ಪತ್ನಿ ನೇಣಿಗೆ ಶರಣು

    ಶಿವಮೊಗ್ಗ: ಬೈಕ್ ಅಪಘಾತದಲ್ಲಿ ಪತಿ (Husband) ಮೃತಪಟ್ಟ ಸುದ್ದಿ ತಿಳಿದು ಪತ್ನಿ (Wife) ನೇಣಿಗೆ ಶರಣಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ಹೊಸನಗರ (Hosanagara) ತಾಲೂಕಿನ ಬೆಸಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಿಲ್ಲೆ ಕ್ಯಾತರ ಕ್ಯಾಂಪ್‌ನಲ್ಲಿ ನಡೆದಿದೆ.

    ಮಂಜುನಾಥ್ (25), ಅಮೃತ (21) ಮೃತ ದುರ್ದೈವಿಗಳು. ಮಂಜುನಾಥ್‌ಗೆ ಮಂಗಳವಾರ ಶಿಕಾರಿಪುರದ ಬಳಿ ಅಪಘಾತವಾಗಿತ್ತು. ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಂಜುನಾಥ್ ಚಿಕಿತ್ಸೆ ಫಲಿಸದೇ ಇಂದು (ಬುಧವಾರ) ಮೃತಪಟ್ಟಿದ್ದಾರೆ. ಪತಿ ಮಂಜುನಾಥ್ ಸಾವಿನಿಂದ ಮನನೊಂದ ಪತ್ನಿ ಅಮೃತ ಮನೆಗೆ ಬಂದು ತನ್ನ ವೇಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಸಕಲ ಸೇನಾ ಗೌರವದೊಂದಿಗೆ ಹುಟ್ಟೂರಲ್ಲಿ ಹುತಾತ್ಮ ಯೋಧ ದಿವಿನ್‌ ಅಂತ್ಯಕ್ರಿಯೆ

    ಮಂಜುನಾಥ್ ಹಾಗೂ ಅಮೃತ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಇದೀಗ ದಂಪತಿ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಹೊಸನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಯುಎಸ್‌ನಲ್ಲಿ ಕಾರು ಹರಿದು 10 ಮಂದಿ ಸಾವು – 35ಕ್ಕೂ ಹೆಚ್ಚು ಮಂದಿಗೆ ಗಾಯ

  • ಅನೈತಿಕ ಸಂಬಂಧ; ಪ್ರಿಯಕರನೊಂದಿಗೆ ಸೇರಿ ಗಂಡನನ್ನೇ ಮುಗಿಸಿದ ಪತ್ನಿ

    ಅನೈತಿಕ ಸಂಬಂಧ; ಪ್ರಿಯಕರನೊಂದಿಗೆ ಸೇರಿ ಗಂಡನನ್ನೇ ಮುಗಿಸಿದ ಪತ್ನಿ

    – ಆರೋಪಿಗಳು ಅರೆಸ್ಟ್

    ಹಾವೇರಿ: ಪ್ರಿಯಕರನೊಂದಿಗೆ ಅನೈತಿಕ ಸಂಬಂಧ (Immoral relationship) ಹೊಂದಿದ್ದ ಪತ್ನಿ ತನ್ನ ಗಂಡನ ಪ್ರಾಣವನ್ನೇ ತೆಗೆದ ಘಟನೆ ಹಾವೇರಿ (Haveri) ಜಿಲ್ಲೆ ಹಿರೆಕೆರೂರು (Hirekerur) ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ನಡೆದಿದೆ.

    ಸಾಧಿಕ್ ಮತ್ತೂರ್ (30) ಕೊಲೆಯಾದ ಪತಿ. ಚಿಕ್ಕೇರೂರು ಗ್ರಾಮದ ಸಾಧಿಕ್ ಮತ್ತೂರು ಜೀವನೋಪಾಯಕ್ಕಾಗಿ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಸಾಧಿಕ್ ನಾಲ್ಕು ವರ್ಷದ ಹಿಂದೆ ಸಲ್ಮಾ ಎಂಬ ಸ್ವಗ್ರಾಮದ ಯುವತಿಯನ್ನೇ ಮದುವೆಯಾಗಿದ್ದ. ಪ್ರಾರಂಭದಲ್ಲಿ ಅನೋನ್ಯವಾಗಿದ್ದ ದಂಪತಿ ನಡುವೆ ಕೌಟುಂಬಿಕ ಕಲಹ ಪ್ರಾರಂಭವಾಗಿತ್ತು. ಆ ಕೌಟುಂಬಿಕ ಕಲಹದ ಹಿಂದೆ ಇದ್ದಿದ್ದು ಅನೈತಿಕ ಸಂಬಂಧ. ಸಲ್ಮಾ, ಜಾಫರ್ ಎಂಬ 28 ವರ್ಷದ ಯುವಕನ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು. ಇಬ್ಬರು ಸೇರಿ ಗಂಡನನ್ನು ಕೊಲೆ ಮಾಡಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಕನ್ನಡದಲ್ಲೇ ರೈಲ್ವೆ ಪರೀಕ್ಷೆ: ಸೋಮಣ್ಣ ಘೋಷಣೆ

    ಕೊಲೆಯಾದ ಪತಿ

    ಸಾಧಿಕ್‌ನನ್ನು ಮದುವೆ ಆಗುವ ಮೊದಲೇ ಜಾಫರ್ ಹಾಗೂ ಸಲ್ಮಾ ನಡುವೆ ಪ್ರೇಮ ಕಹಾನಿ ನಡೆದಿತ್ತಂತೆ. ಆದರೆ ಅದನ್ನು ಗುಟ್ಟಾಗಿಯೇ ಇಟ್ಟಿದ್ದ ಸಲ್ಮಾ ಮದುವೆ ಆದ ಬಳಿಕವೂ ಪ್ರಿಯಕರ ಜಾಫರ್ ಜೊತೆ ಸರಸ ಸಲ್ಲಾಪ ನಡೆಸಿದ್ದಳು. ಹೆಂಡತಿಯ ಕಾಮಪುರಾಣ ಗೊತ್ತಾಗಿ ಪತಿ ಸಾಧಿಕ್ ಎಚ್ಚರಿಕೆ ನೀಡಿದ್ದ. ನೀವೇನಾದರೂ ಈ ಸಂಬಂಧ ಮುಂದುವರಿಸಿದರೆ ನಿಮ್ಮಿಬ್ಬರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಮನನೊಂದು ಎಚ್ಚರಿಕೆ ಕೂಡಾ ನೀಡಿದ್ದ. ಹೆಂಡತಿ ಬಳಿ ಇದ್ದ ಮೊಬೈಲ್ ಕೂಡಾ ಕಸಿದುಕೊಂಡಿದ್ದ. ಇದನ್ನೂ ಓದಿ: ಇಸ್ರೇಲ್‌ ದಾಳಿಗೆ ಹಿಜ್ಬುಲ್ಲಾ ಭದ್ರಕೋಟೆಯೇ ಛಿದ್ರ – ತುರ್ತು ಸಭೆಗೆ ವಿಶ್ವಸಂಸ್ಥೆ ತಯಾರಿ

    ಇಬ್ಬರ ಹೆಸರು ಬರೆದಿಟ್ಟು ಸತ್ತರೆ ನಾವು ಜೈಲುಪಾಲಾಗಬಹುದು ಎಂದು ಯೋಚಿಸಿ ಸಲ್ಮಾ ಪ್ರಿಯಕರನ ಜೊತೆ ಸೇರಿ ಗಂಡನ ಸಾವಿಗೆ ಮುಹೂರ್ತ ಫಿಕ್ಸ್ ಮಾಡಿದ್ದಳು. ಇದೀಗ ಪೊಲೀಸ್ ತನಿಖೆಯ ಬಳಿಕ ಪತ್ನಿ ಹಾಗೂ ಪ್ರಿಯಕರ ಜೈಲು ಪಾಲಾಗಿದ್ದಾರೆ. ಹಂಸಭಾವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಆರ್‌.ಅಶೋಕ್‌ ವಿರುದ್ಧ ಸಚಿವ ಪರಮೇಶ್ವರ್‌ ನೂರಾರು ಕೋಟಿ ಭೂ ಹಗರಣ ಬಾಂಬ್‌

  • ಅಶ್ಲೀಲ ವೀಡಿಯೋ ತೋರಿಸಿ ಹೀಗೆ ಸಹಕರಿಸು ಅಂತ ಗಂಡ ಟಾರ್ಚರ್ – ಪೆಟ್ರೋಲ್ ಸುರಿದುಕೊಂಡು ಮಹಿಳೆ ಆತ್ಮಹತ್ಯೆ

    ಅಶ್ಲೀಲ ವೀಡಿಯೋ ತೋರಿಸಿ ಹೀಗೆ ಸಹಕರಿಸು ಅಂತ ಗಂಡ ಟಾರ್ಚರ್ – ಪೆಟ್ರೋಲ್ ಸುರಿದುಕೊಂಡು ಮಹಿಳೆ ಆತ್ಮಹತ್ಯೆ

    – ಹೆಂಡ್ತಿ ಮುಂದೆಯೇ ಇನ್ನೊಂದು ಹುಡುಗಿ ಜೊತೆ ಸಲುಗೆ

    ಬೆಂಗಳೂರು: ನಿತ್ಯ ಅಶ್ಲೀಲ ವೀಡಿಯೋ ತೋರಿಸಿ ಕಿರುಕುಳ ನೀಡುತ್ತಿದ್ದ ಗಂಡನ ನಡೆಗೆ ಬೇಸತ್ತು ಮಹಿಳೆ (Woman) ಪೆಟ್ರೋಲ್ (Petrol) ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಹುಳಿಮಾವು (Hulimavu) ಅಕ್ಷಯನಗರದಲ್ಲಿ ನಡೆದಿದೆ.

    ಅನುಷಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆಯ ಪತಿ ಶ್ರೀಹರಿ ಮೊಬೈಲ್‌ನಲ್ಲಿ ಅಶ್ಲೀಲ ವೀಡಿಯೋ ತೋರಿಸಿ ಹೀಗೆ ಸಹಕರಿಸು ಎಂದು ಟಾರ್ಚರ್ ಕೊಡುತ್ತಿದ್ದ. ಅಲ್ಲದೇ ಆಕೆಯ ಮುಂದೆಯೇ ಇನ್ನೊಂದು ಹುಡುಗಿಯ ಜೊತೆ ಸಲುಗೆ ಬೆಳೆಸಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಹೆಂಡತಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಎರಡು ತಿಂಗಳಿಂದ ಡೈವರ್ಸ್ ಕೊಡುವಂತೆ ಪೀಡಿಸುತ್ತಿದ್ದ. ಇದರಿಂದ ಬೇಸತ್ತು ಅನುಷಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕೊಲೆಗೂ ಮುನ್ನ ರೇಣುಕಾಸ್ವಾಮಿಯನ್ನು ದರೋಡೆ ಮಾಡಿತ್ತು ‘ಡಿ’ಗ್ಯಾಂಗ್!

    ಶ್ರೀಹರಿ ಹಾಗೂ ಅನುಷಾಗೆ ಮದುವೆಯಾಗಿ 5 ವರ್ಷ ಆಗಿತ್ತು. ಒಂದು ಮಗು ಕೂಡ ಇತ್ತು. ಹಾಗಿದ್ದರೂ ಪತಿ ಶ್ರೀಹರಿ ಇತರೆ ಹುಡುಗಿಯರ ಜೊತೆ ಸಹವಾಸ ಮಾಡಿದ್ದ. ಮನೆಯ ವಾಶ್ ರೂಂನಿಂದ ಗಂಡನಿಗೆ ವೀಡಿಯೋ ಕಾಲ್ ಮಾಡಿ ಪೆಟ್ರೋಲ್ ಸುರಿದುಕೊಳ್ಳುತ್ತೇನೆ ಎಂದು ಹೆಂಡತಿ ಹೇಳಿದ್ದಳು. ಈ ವೇಳೆ ರಕ್ಷಣೆ ಮಾಡದೇ ನಿರ್ಲಕ್ಷ್ಯ ಮಾಡಿರುವುದಾಗಿ ಮೃತ ಅನುಷಾ ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಬಲಮುರಿ ಹಾಗೂ ಎಡಮುರಿ ಗಣಪತಿಗೆ ಇರುವ ವ್ಯತ್ಯಾಸವೇನು?

  • ಬೆಳಗಾವಿ: ಸಾಲಗಾರ ಪತಿಯನ್ನು ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ್ದ ಪತ್ನಿ, ಅತ್ತೆ ಅರೆಸ್ಟ್

    ಬೆಳಗಾವಿ: ಸಾಲಗಾರ ಪತಿಯನ್ನು ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ್ದ ಪತ್ನಿ, ಅತ್ತೆ ಅರೆಸ್ಟ್

    – ಪೋಸ್ಟ್ ಮಾರ್ಟಮ್ ರಿಪೋರ್ಟ್‌ನಿಂದ ಕೊಲೆ ರಹಸ್ಯ ಬಯಲು

    ಬೆಳಗಾವಿ: ಪತ್ನಿ ಹಾಗೂ ಅತ್ತೆ ಸೇರಿಕೊಂಡು ಸಾಲಗಾರ ಪತಿಯನ್ನು (Husband) ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.

    ಬೆಳಗಾವಿಯ ಪೀರವನಾಡಿ ನಿವಾಸಿ ವಿನಾಯಕ್ ಜಾಧವ್ (48) ಕೊಲೆಯಾದ ಪತಿ. ಜುಲೈ 29ರಂದು ರಾತ್ರಿ ಅಮ್ಮ-ಮಗಳು ಸೇರಿಕೊಂಡು ಸಾಲಗಾರ ಪತಿಯನ್ನು ಹತ್ಯೆ ಮಾಡಿದ್ದಾರೆ. ವಿನಾಯಕ್ ಜಾಧವ್ ಉದ್ಯಮಬಾಗದಲ್ಲಿ ಸ್ವಂತ ಉದ್ಯಮ ಹೊಂದಿದ್ದ. ಉದ್ಯಮದಲ್ಲಿ ನಷ್ಟವಾದ ಹಿನ್ನೆಲೆ ವಿಪರೀತ ಸಾಲ ಮಾಡಿಕೊಂಡಿದ್ದ. ಬಳಿಕ ಸಾಲಗಾರರ ಕಾಟಕ್ಕೆ ಬೇಸತ್ತು ಮನೆಯನ್ನು ಸಾಲಕ್ಕೆ ಅಡಮಾನವಾಗಿ ಇಟ್ಟು ಜನರ ಕಿರುಕುಳಕ್ಕೆ ನೊಂದು ಬೆಳಗಾವಿ ಬಿಟ್ಟು ಮೂರು ವರ್ಷಗಳಿಂದ ಪರಾರಿಯಾಗಿದ್ದ. ಇದನ್ನೂ ಓದಿ: ಹಗರಣಗಳಿಂದಾಗಿ ಕಾಂಗ್ರೆಸ್ ಸರ್ಕಾರ ಕೋಮಾಗೆ ಜಾರಿದೆ, ಅಭಿವೃದ್ಧಿ ನಡೆಯುತ್ತಿಲ್ಲ: ಅಶೋಕ್

    ಜುಲೈ 29ರಂದು ವಿನಾಯಕ್ ಜಾಧವ್ ರಾತ್ರಿ ಮದ್ಯಪಾನ ಮಾಡಿ ಮನೆಗೆ ಬಂದಿದ್ದ. ಮನೆಯಲ್ಲಿ ಪತ್ನಿ ರೇಣುಕಾ ಜೊತೆಗೆ ವಿಪರೀತ ಜಗಳ ಮಾಡಿದ್ದ. ಬಳಿಕ ಪತಿಯನ್ನು ಹಗ್ಗದಿಂದ ಕುತ್ತಿಗೆ ಕಟ್ಟಿ, ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಹತ್ಯೆಗೆ ಪತ್ನಿ ರೇಣುಕಾಗೆ ಆಕೆಯ ತಾಯಿ ಶೋಭಾ ಸಾಥ್ ನೀಡಿದ್ದರು. ಹತ್ಯೆ ಬಳಿಕ ಶವವನ್ನು ಮನೆಯ ಮುಂಭಾಗದಲ್ಲಿ ಬಿಸಾಡಿದ್ದರು. ಬೆಳಗ್ಗೆ ಅಕ್ಕಪಕ್ಕದ ಮನೆಯವರನ್ನು ಕರೆದು ಪತಿ ಮದ್ಯಪಾನ ಮಾಡಿ ಬಿದ್ದಿದ್ದಾನೆ. ಇದು ಕೊಲೆಯಲ್ಲ, ಸಹಜ ಸಾವು ಎಂದು ತಾಯಿ, ಮಗಳು ಬಿಂಬಿಸಿದ್ದರು. ಆದರೆ ವಿನಾಯಕ್ ಜಾಧವ್ ಸಹೋದರ ಅರುಣ್ ಸಾವಿನಲ್ಲಿ ಶಂಕೆ ಇದೆ ಎಂದು ದೂರು ನೀಡಿದ್ದರು. ಪೋಸ್ಟ್ ಮಾರ್ಟಮ್ ರಿಪೋರ್ಟ್‌ನಿಂದ ಕೊಲೆ ರಹಸ್ಯ ಬಯಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸರು ಕೊಲೆಯ ರಹಸ್ಯ ಬಯಲು ಮಾಡಿದ್ದಾರೆ. ಪ್ರಕರಣ ಸಂಬಂಧ ಪತ್ನಿ ರೇಣುಕಾ ಹಾಗೂ ಆಕೆಯ ತಾಯಿ ಶೋಭಾಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: Shivamogga Airport| 20 ದಿನಕ್ಕಷ್ಟೇ ಲೈಸೆನ್ಸ್‌- ಷರತ್ತು ಪೂರೈಸದಿದ್ದರೆ ವಿಮಾನ ಹಾರಾಟಕ್ಕೆ ತೊಡಕು

  • ದುಂದುವೆಚ್ಚಕ್ಕೆ ಬೇಸತ್ತ ಗಂಡ – ಗೆಳೆಯರಿಗೆ ಸುಪಾರಿ ಕೊಟ್ಟು ಪತ್ನಿಯ ಕೊಲೆ

    ದುಂದುವೆಚ್ಚಕ್ಕೆ ಬೇಸತ್ತ ಗಂಡ – ಗೆಳೆಯರಿಗೆ ಸುಪಾರಿ ಕೊಟ್ಟು ಪತ್ನಿಯ ಕೊಲೆ

    ಭೋಪಾಲ್: ಪತ್ನಿಯ ದುಂದುವೆಚ್ಚಕ್ಕೆ ಬೇಸತ್ತ ಪತಿಯು ತನ್ನ ಗೆಳೆಯರಿಗೆ ಸುಪಾರಿ ನೀಡಿ ಪತ್ನಿಯನ್ನು ಕೊಲೆ ಮಾಡಿಸಿರುವ ಘಟನೆ ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್‌ನಲ್ಲಿ ನಡೆದಿದೆ.

    ದುರ್ಗಾವತಿ ಕೊಲೆಯಾದ ಮಹಿಳೆ. ಮಧ್ಯಪ್ರದೇಶದ ಗ್ವಾಲಿಯರ್ ಮೂಲದ ಹೇಮಂತ್ ಶರ್ಮಾ ಎಂಬಾತ ತನ್ನ ಪತ್ನಿಯು ದುಂದುವೆಚ್ಚ ಮಾಡುತ್ತಿರುವುದಕ್ಕೆ ಬೇಸತ್ತಿದ್ದ. ಗೆಳೆಯರಿಗೆ 2.5 ಲಕ್ಷ ರೂ. ಗೆ ಪತ್ನಿಯ ಕೊಲೆ ಮಾಡಲು ಸುಪಾರಿ ನೀಡಿದ್ದ. ಇದನ್ನೂ ಓದಿ: ಎಸ್‌ಸಿಒ ಸಭೆಗೆ ಮೋದಿಗೆ ಆಹ್ವಾನ ನೀಡಿದ ಪಾಕ್‌ – ಪ್ರಧಾನಿ ಭಾಗವಹಿಸೋದು ಡೌಟ್‌

    ಆ.13 ರಂದು ದುರ್ಗಾವತಿ ತನ್ನ ಸಹೋದರ ಸಂದೇಶನ ಜೊತೆಗೆ ಬೈಕ್ ಮೇಲೆ ದೇವಸ್ಥಾನಕ್ಕೆ ಹೋಗಿದ್ದಳು. ದೇವಸ್ಥಾನದಿಂದ ವಾಪಸ್ ಬರುವ ಸಮಯದಲ್ಲಿ ಹೇಮಂತ್ ಶರ್ಮಾನಿಗೆ ಪರಿಚಯವಿದ್ದವರು ಕಾರಿನಲ್ಲಿ ಬಂದು ಉದ್ದೇಶಪೂರ್ವಕವಾಗಿ ದುರ್ಗಾವತಿ ಚಲಿಸುತ್ತಿದ್ದ ಬೈಕ್‌ಗೆ ಗುದ್ದಿದ್ದಾರೆ.

    ತಕ್ಷಣವೇ ದುರ್ಗಾವತಿಯನ್ನು ಆಸ್ಪತ್ರೆಗೆ ದಾಖಲಿಸಿದರೂ ಆಕೆ ಮೃತಪಟ್ಟಿದ್ದಾಳೆ. ಆಕೆಯ ಸಹೋದರ ಸಂದೇಶ ಗಂಭೀರವಾಗಿ ಗಾಯಗೊಂಡಿದ್ದಾನೆ. ನಂತರ ಶರ್ಮಾ, ಭಾರೀ ವಾಹನವೊಂದು ವೇಗವಾಗಿ ಬಂದು ಅಪಘಾತ ಮಾಡಿದೆ ಎಂದು ತಿಳಿಸಿ ಸುಮ್ಮನಾಗಿದ್ದ. ಇದನ್ನೂ ಓದಿ: ಬಾಂಗ್ಲಾದಿಂದ ಭಾರತಕ್ಕೆ ಹಿಂದೂಗಳೇ ಬರ್ತಿಲ್ಲ, ಆದ್ರೆ 35 ಮುಸ್ಲಿಂ ನುಸುಳುಕೋರರನ್ನು ಬಂಧಿಸಿದ್ದೇವೆ: ಅಸ್ಸಾಂ ಸಿಎಂ

    ಘಟನೆಯಾದ 10 ದಿನದ ನಂತರ ಪೊಲೀಸರು ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಹೇಮಂತ್ ಶರ್ಮಾನಿಗೆ ಪರಿಚಯವಿದ್ದ ವ್ಯಕ್ತಿಯ ಕಾರು ಬೈಕಿಗೆ ಉದ್ದೇಶಪೂರ್ವಕವಾಗಿ ಗುದ್ದಿದ್ದು ಗೊತ್ತಾಗಿದೆ.

    ತನಿಖೆ ವೇಳೆ ದುರ್ಗಾವತಿಯು ಹೇಮಂತ್ ಶರ್ಮಾನ ಎರಡನೇ ಹೆಂಡತಿ ಎಂದು ಗೊತ್ತಾಗಿದ್ದು, ಅವರಿಬ್ಬರು 2021 ರಿಂದ ಸಂಪರ್ಕದಲ್ಲಿದ್ದರು. ನಂತರ ಅವರು 2023ರಲ್ಲಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು ಎಂದು ತಿಳಿದು ಬಂದಿದೆ.

    ಕೊಲೆ ಮಾಡುವಾಗ ಮೂವರು ಆರೋಪಿಗಳು ಭಾಗಿಯಾಗಿರುವುದು ಖಚಿತವಾಗಿದೆ. ಸದ್ಯಕ್ಕೆ ಹೇಮಂತ್ ಶರ್ಮಾ ಮತ್ತು ಕಾರು ಚಾಲಕನನ್ನು ಬಂಧಿಸಲಾಗಿದೆ. ಇನ್ನಿಬ್ಬರ ಬಂಧನಕ್ಕೆ ಹುಡುಕಾಟ ನಡೆದಿದೆ ಎಂದು ಪೊಲೀಸ್ ಅಧಿಕಾರಿ ನಿರಂಜನ್ ಶರ್ಮಾ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ಬರೋಬ್ಬರಿ 2,100 ಕೋಟಿ ರೂ. ಚೆಕ್‌ ಕೊಟ್ಟ ದಾನಿ

  • ಮಂಡ್ಯದಲ್ಲಿ ಪತಿ-ಪತ್ನಿ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಹೆಂಡತಿ ಶವ ಪತ್ತೆ – ಕೆರೆಗೆ ಹಾರಿ ಗಂಡ ಆತ್ಮಹತ್ಯೆ

    ಮಂಡ್ಯದಲ್ಲಿ ಪತಿ-ಪತ್ನಿ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಹೆಂಡತಿ ಶವ ಪತ್ತೆ – ಕೆರೆಗೆ ಹಾರಿ ಗಂಡ ಆತ್ಮಹತ್ಯೆ

    – ಗಂಡನ ಮನೆಗೆ ಬೆಂಕಿ ಇಟ್ಟು ಮೃತ ಮಹಿಳೆ ಸಂಬಂಧಿಕರು ಆಕ್ರೋಶ

    ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಗದ್ದೆಹೊಸೂರು ಗ್ರಾಮದಲ್ಲಿ ಪತಿ, ಪತ್ನಿ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ.

    ಸ್ವಾತಿ (21), ಮೋಹನ್ ಮೃತ ದುರ್ದೈವಿಗಳು. ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾತಿ ಮೃತದೇಹ ಪತ್ತೆಯಾಗಿದೆ. ಮಹಿಳೆ ಸಾವಿನ ಬೆನ್ನಲ್ಲೇ ಸ್ವಾತಿ ಪತಿ ಹಾಗೂ ಆತನ ಪೋಷಕರು ಪರಾರಿಯಾಗಿದ್ದರು. ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತ ಮಹಿಳೆ ಸಾವಿನಿಂದ ಆಕ್ರೋಶಿತರಾದರ ಸಂಬಂಧಿಗಳು ಮನೆಗೆ ಬೆಂಕಿ ಇಟ್ಟು, ಪೀಠೋಪಕರಣ ಧ್ವಂಸ ಮಾಡಿ ದಾಂಧಲೆ ಸೃಷ್ಟಿಸಿದ್ದಾರೆ.

    ಮರಣೋತ್ತರ ಪರೀಕ್ಷೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. ಪೊಲೀಸರು ನಾಪತ್ತೆಯಾಗಿರುವ ಗಂಡ ಹಾಗೂ ಅವನ ಮನೆಯವರಿಗಾಗಿ ಶೋಧಕ್ಕೆ ಮುಂದಾದರು.

    ಪತ್ನಿ ಸಾವಿನ ಬೆನ್ನಲ್ಲೇ ಮೋಹನ್ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೆರೆಯಿಂದ ಮೋಹನ್ ಶವ ಹೊರತೆಗೆಯಲಾಗಿದೆ. ಗ್ರಾಮಸ್ಥರ ಸಹಾಯದೊಂದಿಗೆ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

    ಪತಿ, ಪತ್ನಿ ಸಾವಿನ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದ ಹಿನ್ನೆಲೆ ಪೊಲೀಸರ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಮೃತ ಸ್ವಾತಿ ಗಂಡನ ಮನೆ, ಕೊಬ್ಬರಿ ಗೋಡೌನ್‌ಗೆ ಬೆಂಕಿ ಬಿದ್ದಿದೆ. ಗೋಡೌನ್‌ನಲ್ಲಿದ್ದ ಲಕ್ಷಾಂತರ ಮೌಲ್ಯದ ಕೊಬ್ಬರಿ ಸುಟ್ಟು ಕರಕಲಾಗಿದೆ.

    ಎರಡು ವರ್ಷದ ಹಿಂದೆಯಷ್ಟೆ ಸ್ವಾತಿ-ಮೋಹನ್ ಇಬ್ಬರೂ ಮದುವೆಯಾಗಿದ್ದರು. ಮೃತ ದಂಪತಿಗೆ ಒಂದು ವರ್ಷದ ಹೆಣ್ಣು ಮಗುವಿದೆ. ತಂದೆ, ತಾಯಿ, ಪತ್ನಿ ಜೊತೆ ತೋಟದ ಮನೆಯಲ್ಲಿಯೇ ಮೋಹನ್ ವಾಸವಿದ್ದ. ಸಣ್ಣ-ಪುಟ್ಟ ವಿಚಾರಕ್ಕೆ ಆಗಾಗ ಪತಿ-ಪತ್ನಿ ನಡುವೆ ಜಗಳವಾಗುತ್ತಿತ್ತು. ನಿನ್ನೆ ಸಂಜೆ ತವರು ಮನೆಯಿಂದ ಪತ್ನಿ ಸ್ವಾತಿಯನ್ನ ತನ್ನ ಮನೆಗೆ ಕರೆತಂದಿದ್ದ. ಮಗುವನ್ನ ಅತ್ತೆ ಮನೆಯಲ್ಲಿಯೇ ಬಿಟ್ಟು ಬಂದಿದ್ದ. ಮನೆಗೆ ಬಂದ ಕೆಲ ಹೊತ್ತಲ್ಲೆ ಗಂಡ-ಹೆಂಡತಿ ನಡುವೆ ಜಗಳವಾಗಿದೆ. ಒಂದು ಗಂಟೆ ಬಳಿಕ ಬಾವನ ಮನೆಗೆ ಮಗು ಕರೆದುಕೊಂಡು ಬಂದಿದ್ದ ಸ್ವಾತಿ ಸಹೋದರನಿಗೆ ಶಾಕ್ ಕಾದಿತ್ತು.

    ಈ ವೇಳೆ ನೇಣುಬಿಗಿದ ಸ್ಥಿತಿಯಲ್ಲಿ ಸ್ವಾತಿ ಮೃತದೇಹವಿತ್ತು. ಅತ್ತ ಪತಿ ಮೋಹನ್ ಪರಾರಿಯಾಗಿದ್ದ. ಮನೆ ಬಳಿಗ ಬಂದ ಸ್ವಾತಿ ಕುಟುಂಸ್ಥರು ದಾಂಧಲೆ ನಡೆಸಿದ್ದಾರೆ. ಮನೆಗೆ ನುಗ್ಗಿ ಪೀಠೋಪಕರಣ ಧ್ವಂಸ ಮಾಡಿದ್ದಾರೆ. ಮನೆಯ ಕಿಟಕಿ ಗಾಜು ಹೊಡೆದು ಆಕ್ರೋಶ ಹೊರಹಾಕಿದ್ದಾರೆ. ಆಕ್ರೋಶಿತ ಗುಂಪಿನಿಂದ ಕೊಬ್ಬರಿ ಶೇಖರಿಸಿದ್ದ ಮನೆಗೆ ಬೆಂಕಿ ಹಚ್ಚಲಾಗಿದೆ. 10 ಲಕ್ಷಕ್ಕೂ ಅಧಿಕ ಮೌಲ್ಯದ ಕೊಬ್ಬರಿ ಸುಟ್ಟು ಕರಕಲಾಗಿದೆ. ಈ ನಡುವೆ ಬೆಳಗ್ಗೆ ಮನೆ ಸಮೀಪದ ಕೆರೆಯಲ್ಲಿಯೇ ಮೋಹನ್ ಶವ ಪತ್ತೆಯಾಗಿದೆ.

  • ಹೆಂಡತಿಯ ಹತ್ಯೆಗೈದು ಮನೆಯ ಬಾತ್‌ರೂಂನಲ್ಲಿ ಪೆಟ್ರೋಲ್ ಸುರಿದು ಸುಟ್ಟ ಪತಿ

    ಹೆಂಡತಿಯ ಹತ್ಯೆಗೈದು ಮನೆಯ ಬಾತ್‌ರೂಂನಲ್ಲಿ ಪೆಟ್ರೋಲ್ ಸುರಿದು ಸುಟ್ಟ ಪತಿ

    ನೆಲಮಂಗಲ: ಕೆಲ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತಿದ್ದ ಪತಿ (Husband) ಕ್ಷುಲ್ಲಕ ವಿಚಾರದಲ್ಲಿ ಪತ್ನಿಯನ್ನ (Wife) ಕೊಲೆ ಮಾಡಿ ಮನೆಯಲ್ಲೇ ಪೆಟ್ರೋಲ್ ಸುರಿದು ಸುಟ್ಟಿರುವ ಘಟನೆ ಬೆಂಗಳೂರು (Bengaluru) ಹೊರವಲಯ ನೆಲಮಂಗಲ (Nelamangala) ತಾಲೂಕಿನ ದಾಬಸ್ ಪೇಟೆಯಲ್ಲಿ (Dabaspet) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಈ ಘಟನೆ ಎರಡು ಮೂರು ದಿನಗಳ ಹಿಂದೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾವ್ಯ (27) ಮೃತ ಗೃಹಿಣಿ. ಈಕೆಯ ಶವ ಮನೆಯ ಬಾತ್‌ರೂಂನಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ: ಮೊಘಲ್‌ ದೊರೆ ಹುಮಾಯೂನ್-ರಾಣಿ ಕರ್ಣಾವತಿಯಿಂದ ಬಂತಾ ‘ರಾಖಿ ಹಬ್ಬ’; ಚರ್ಚೆ ಹುಟ್ಟುಹಾಕಿದ ಸಂಸದೆ ಸುಧಾಮೂರ್ತಿ ಪೋಸ್ಟ್‌

    ಪತಿ ಶಿವಾನಂದ್ ಅಲಿಯಾಸ್ ದಿಲೀಪ್ ಮೂಲತಃ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಮಣಿಪುರ ಗ್ರಾಮದವನಾಗಿದ್ದು, ಕೊಲೆಯಾದ ಕಾವ್ಯ ಹೊಳೆನರಸೀಪುರ ತಾಲೂಕು ಮಾವಿನಕೆರೆ ಗ್ರಾಮದವರಾಗಿದ್ದಳು. ಇವರಿಬ್ಬರು ಕಳೆದ ಐದು ವರ್ಷಗಳ ಹಿಂದೆ ಮದುವೆಯಾಗಿದ್ದರು. ಇತ್ತೀಚೆಗೆ ಮನೆಯಲ್ಲಿ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಇದನ್ನೂ ಓದಿ: ಹೆತ್ತ ಮಗನ ಮುಂದೆಯೇ ತಾಯಿಯ ಗುಪ್ತಾಂಗಕ್ಕೆ ಖಾರದಪುಡಿ ಹಾಕಿದ ದುರುಳರು!

    ಪತಿ ವಿಪರೀತವಾಗಿ ಮದ್ಯಪಾನ ಮಾಡುತ್ತಿದ್ದ. ಇದರಿಂದ ಇಬ್ಬರ ನಡುವೆ ಸಾಕಷ್ಟು ಬಾರಿ ಗಲಾಟೆ ನಡೆದಿದೆ. ಕುಡಿದ ಅಮಲಿನಲ್ಲಿ ಮನೆಯ ಬಾತ್ ರೂಮ್‌ನಲ್ಲಿ ಪತ್ನಿಯನ್ನು ಕೊಲೆ ಮಾಡಿ ನಂತರ ಪೆಟ್ರೋಲ್ ಸುರಿದು ಸುಟ್ಟಿರುವ ಆರೋಪಿ ಪತಿಯನ್ನು ದಾಬಸ್ ಪೇಟೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಕಾವ್ಯ ಫೋನ್ ತೆಗೆಯದ ಹಿನ್ನೆಲೆ ಮನೆಯವರು ಬಂದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ತಂದೆ ಮಾಡದ ತಪ್ಪಿಗೆ ಈ ರೀತಿ ಆರೋಪಕ್ಕೆ ಗುರಿಯಾಗಿದ್ದು ಬೇಸರ ತರಿಸಿದೆ: ಯತೀಂದ್ರ ಭಾವುಕ

  • ನನ್ನ ಹೆಂಡತಿಗೆ ಹಂಚಿಕೆ ಆಗಿರೋ ಮುಡಾ ನಿವೇಶನ ಕಾನೂನು ಬದ್ದ:  ಸಿದ್ದರಾಮಯ್ಯ

    ನನ್ನ ಹೆಂಡತಿಗೆ ಹಂಚಿಕೆ ಆಗಿರೋ ಮುಡಾ ನಿವೇಶನ ಕಾನೂನು ಬದ್ದ: ಸಿದ್ದರಾಮಯ್ಯ

    ಬೆಂಗಳೂರು:  ತಮ್ಮ ಪತ್ನಿಗೆ ಮೂಡಾದಲ್ಲಿ ನೀಡಿರುವ ನಿವೇಶನ ಕಾನೂನು ಪ್ರಕಾರವೇ ನೀಡಲಾಗಿದೆ. ಬಿಜೆಪಿ ಅವಧಿಯಲ್ಲಿ ಈ ನಿವೇಶನ ಹಂಚಿಕೆ ಆಗಿದೆ ಅಂತ ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.

    ತಮ್ಮ ಪತ್ನಿ ಹೆಸರಿಗೆ ಮೂಡಾ ನಿವೇಶನ ಹಂಚಿಕೆ ಆಗಿರೋ ವಿಚಾರ ವಿವಾದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ. ಬಿಜೆಪಿ ಅವಧಿಯಲ್ಲಿ ಕೊಟ್ಟಿರೋ ನಿವೇಶನ ಇದು. ನನ್ನ ಬಾಮೈದ ತನ್ನ ಜಾಗವನ್ನ ನನ್ನ ಹೆಂಡತಿಗೆ ಅರಿಶಿನ-ಕುಂಕುಮಕ್ಕೆ ಅಂತ ಗಿಫ್ಟ್ ಡೀಡ್ ಮಾಡಿದ್ರು. ಈ ಜಾಗವನ್ನ ಮುಡಾದವರು ಯಾವುದೇ ಮಾಹಿತಿ ಇಲ್ಲದೆ ಅಕ್ವೈರ್ ಮಾಡಿಕೊಂಡು ಸೈಟ್ ಮಾಡಿದ್ರು.ಆಗ ನಮ್ಮ ಜಮೀನಿಗೆ ಪರಿಹಾರ ಕೊಡಿ ಅಂತ ನಾವು ಕೇಳಿದಾಗ ಬದಲಿ ನಿವೇಶನ ಕೊಡೋದಾಗಿ ಹೇಳಿದ್ರು.ಅದರಂತೆ 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ಆಗಿದೆ. ಇದು ತಪ್ಪಾ?ಅಂತ ಪ್ರಶ್ನೆ ಮಾಡಿದ್ರು.

    ನಿವೇಶನ ಹಂಚಿಕೆಯಲ್ಲಿ ಯಾವುದೇ ಕಾನೂನು ಉಲ್ಲಂಘನೆ ಆಗಿಲ್ಲ.ಕಾನೂನು ‌ಪ್ರಕಾರವೇ ಇದು ಹಂಚಿಕೆ ಆಗಿದೆ. ನಿವೇಶನ ಹಂಚಿಕೆಯಲ್ಲಿ ಯಾವುದೇ ಅಕ್ರಮ ಆಗಿಲ್ಲ ಅಂತ ತಮ್ಮ ಪತ್ನಿಗೆ ಹಂಚಿಕೆ ಆಗಿರೋ ನಿವೇಶನದ ವಿಷಯವನ್ನು ಸಮರ್ಥನೆಯನ್ನ ಸಿದ್ದರಾಮಯ್ಯ ಮಾಡಿಕೊಂಡ್ರು.ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಪತ್ನಿಗೂ ಮುಡಾದಲ್ಲಿ ಬದಲಿ ನಿವೇಶನ!