Tag: ಪತ್ರಕರ್ತ

  • ಮೈಸೂರು | ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ನಿಧನ

    ಮೈಸೂರು | ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ನಿಧನ

    ಮೈಸೂರು: ಹಿರಿಯ ಪತ್ರಕರ್ತರಾದ ಕೆ.ಬಿ ಗಣಪತಿ (KB Ganapathy) ಅವರಿಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.‌

    88 ವರ್ಷದ ಕೆ.ಬಿ. ಗಣಪತಿ ಅವರು ತಮ್ಮ ಬದುಕಿನ ಕಡೆಯ ದಿನದವರೆಗೂ ಪತ್ರಿಕಾಲಯದಲ್ಲಿ ಸಕ್ರಿಯರಾಗಿದ್ದರು. ಕೆಬಿ ಗಣಪತಿ ಅವರು ತಮ್ಮ ಒಡೆತನದ ಕನ್ನಡದ ʻಮೈಸೂರು ಮಿತ್ರʼ ಹಾಗೂ ಇಂಗ್ಲೀಷ್‌ನ ಸ್ಟಾರ್ ಆಫ್ ಮೈಸೂರು (Star of Mysore) ಪತ್ರಿಕೆಗಳ ಮೂಲಕ ಹಳೇ ಮೈಸೂರು ಪ್ರಾಂತ್ಯದಲ್ಲಿ ದೊಡ್ಡ ಓದುಗ ವರ್ಗವನ್ನು ಸೃಷ್ಟಿಸುವಲ್ಲಿ ಯಶಸ್ವಿಯಾದವರು. ಇದರ ಜೊತೆಗೆ ನೂರಾರು ಪತ್ರಕರ್ತರನ್ನ ಈ ನಾಡಿಗೆ ಕೊಡುಗೆ ನೀಡಿದ ಹಿರಿಮೆ ಗಣಪತಿ ಅವರಿಗೆ ಸಲ್ಲುತ್ತದೆ.

    ತಮ್ಮ ಅಂಕಣ ಬರಹಗಳ ಮೂಲಕ ಪತ್ರಕರ್ತರ (Journalists) ಸಾಮಾಜಿಕ ಬದ್ಧತೆಯನ್ನ ಸಮಾಜಕ್ಕೆ ತೋರಿಸಿದವರು ಗಣಪತಿ. ಯಶಸ್ವಿ ಪತ್ರಿಕೋದ್ಯಮದ ಮೂಲಕ ಇಡೀ ರಾಜ್ಯದ ಪತ್ರಿಕ ಸಮೂಹ ಮೈಸೂರಿನ ಕಡೆ ನೋಡುವ ಹಾಗೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಸುಮಾರು 50 ವರ್ಷಗಳ ನಿರಂತರ ಪತ್ರಿಕೋದ್ಯಮದಲ್ಲಿ ಮೈಲಿಗಲ್ಲಿನಂತಹ ನೂರಾರು ಸಾಧನೆಗಳನ್ನು ಗಣಪತಿ ಅವರು ಮಾಡಿದ್ದಾರೆ. ಅವರನ್ನು ಕಳೆದುಕೊಳ್ಳುವ ಮೂಲಕ ಪತ್ರಿಕೋದ್ಯಮ ಶೂನ್ಯ ಸೃಷ್ಟಿಸಿಕೊಂಡಿದೆ.

    ಕೆಬಿಜೆ ಎಂದು ಖ್ಯಾತಿ ಪಡೆದಿದ್ದ ಕೆಬಿ ಗಣಪತಿ ಅವರು ಮೈಸೂರಿನಲ್ಲಿ ಸಂಜೆಯ ದಿನಪತ್ರಿಕೆ ‘ಸ್ಟಾರ್ ಆಫ್ ಮೈಸೂರು’ ಪತ್ರಿಕೆಯನ್ನು 1978ರಲ್ಲಿ ಆರಂಭಿಸಿದರು. ಇದು ಇಂಗ್ಲಿಷ್ ಪತ್ರಕರ್ತರಾಗುವ ಯುವಕರ ಪಾಲಿಗೆ ಅಕ್ಷರಶಃ ಕಾಲೇಜ್ ಆಗಿತ್ತು. ಇದರ ಜೊತೆಗೆ 1980ರಲ್ಲಿ ‘ಮೈಸೂರು ಮಿತ್ರ’ ದಿನಪತ್ರಿಕೆ ಆರಂಭಿಸಿದರು.

    ಕೆಬಿಜೆ ಅವರು ಬರೆಯುತ್ತಿದ್ದ ʻಛೂಮಂತ್ರ, ಅಬ್ರಕಡಬ್ರʼ ಅಂಕಣಗಳು ಪ್ರಸಿದ್ಧವಾಗಿದ್ದವು. ಕೆಬಿಜೆ ಪತ್ರಿಕೋದ್ಯಮಕ್ಕೆ ಬರುವ ಮುನ್ನ ಬೆಂಗಳೂರಿನಲ್ಲಿ ಕಾನೂನು ಪದವಿ ಪಡೆದ ನಂತರ ಮುಂಬೈಗೆ ತೆರಳಿ ಅಲ್ಲಿಯ ಭಾರತೀಯ ವಿದ್ಯಾಭವನದಲ್ಲಿ ಪತ್ರಿಕೋದ್ಯಮದಲ್ಲಿ ಡಿಪ್ಲೊಮಾ ಪದವಿ ಗಳಿಸಿದರು. ಮುಂಬೈನಲ್ಲಿ ಪ್ರಿ-ಪ್ರೆಸ್ ಜರ್ನಲ್, ಎಕನಾಮಿಕ್ ಅಂಡ್ ಪೊಲಿಟಿಕಲ್ ವೀಕ್ಲಿ ಹಾಗೂ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದರು. ಬಳಿಕ ಮೈಸೂರಿಗೆ ಬಂದು ಪತ್ರಿಕೆಗಳನ್ನು ಆರಂಭಿಸಿದ್ದು ಈಗ ಇತಿಹಾಸ.

    ಆದರ್ಶವಾದಿ ಕಾದಂಬರಿ, ಅಮೆರಿಕ- ಆ್ಯನ್ ಏರಿಯಾ ಆಫ್ ಲೈಟ್ ಪ್ರವಾಸ ಕಥನ, ದಿ ಕ್ರಾಸ್ ಆ್ಯಂಡ್ ದಿ ಕೂರ್ಗ್‌ ಇಂಗ್ಲಿಷ್ ಕಾದಂಬರಿ, ಸ್ಟಾರ್ ಆಫ್ ಮೈಸೂರು- ಸ್ಟಾರ್ ‌ಆಫ್ ಎ ಯೂನಿಕ್ ಇವನಿಂಗ್ ಇಂಗ್ಲಿಷ್ ನ್ಯೂಸ್ ಪೇಪರ್, ಸ್ವಾಡ್೯ ಆಫ್ ಶಿವಾಜಿ ಜೀವನಚರಿತ್ರೆ ಇವರು ಬರೆದ ಕೃತಿಗಳಾಗಿವೆ.

    ಗಣ್ಯರಿಂದ ಸಂತಾಪ
    ಹಿರಿಯ ಪತ್ರಕರ್ತ ಗಣಪತಿ ಅವರ ನಿಧನಕ್ಕೆ ಮುಖ್ಯಮಂತ್ರಿಗಳು ಸೇರಿದಂತೆ ಸಂತಾಪ ಸೂಚಿಸಿದ್ದಾರೆ. ಎಕ್ಸ್‌ ಖಾತೆಯಲ್ಲಿ ಫೋಟೋ ಜೊತೆಗೆ ಚುಟುಕು ಸಂದೇಶ ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ.

    ಸಿಎಂ ಸಂತಾಪ: ನನ್ನೂರಿನ‌ ಹಿರಿಯ ಪತ್ರಕರ್ತ ಮಿತ್ರರಾದ ಕೆ.ಬಿ.ಗಣಪತಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಗಣಪತಿಯವರ ಅಗಲಿಕೆಯಿಂದ ನಾಡಿನ‌ ಪತ್ರಿಕಾರಂಗ ಬಡವಾಗಿದೆ. ಸುಮಾರು ಐದು ದಶಕಗಳ ಕಾಲ ಪತ್ರಿಕೋದ್ಯಮದಲ್ಲಿ ಅವಿರತ ದುಡಿದ ಗಣಪತಿ ಅವರು ವಸ್ತುನಿಷ್ಠ ಹಾಗೂ ವೃತ್ತಿಪರ ಬರಹಗಳಿಗೆ ಹೆಸರುವಾಸಿ. “ಸ್ಟಾರ್ ಆಫ್ ಮೈಸೂರು” ಪತ್ರಿಕೆಯ ಮೂಲಕ‌ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಪಾರ ಓದುಗ ಬಳಗ ಸೃಷ್ಟಿಸಿದ ಗಣಪತಿಯವರು “ಮೈಸೂರು ಮಿತ್ರ” ದಿನಪತ್ರಿಕೆಯ ಸ್ಥಾಪಕ ಸಂಪಾದಕರಾಗಿ ಕೂಡ ಸೇವೆ ಸಲ್ಲಿಸಿದ್ದರು. ಪತ್ರಿಕೋದ್ಯಮದಲ್ಲಿ ಅವರು ಮೂಡಿಸಿರುವ ಹೆಜ್ಜೆಗುರುತುಗಳು ಯುವ ಪತ್ರಕರ್ತರಿಗೆ ಸ್ಪೂರ್ತಿ ಮತ್ತು ಮಾದರಿಯಾಗಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ.

    ನಿಖಿಲ್‌ ಕುಮಾರಸ್ವಾಮಿ ಸಂತಾಪ: ಮೈಸೂರು ಮಿತ್ರ, ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕ ಸಂಪಾದಕರು ಹಾಗೂ ಹಿರಿಯರೂ ಆಗಿದ್ದ ಶ್ರೀ ಕೆ.ಬಿ ಗಣಪತಿ ಅವರು ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಮಧ್ಯಮ ಲೋಕದಲ್ಲಿ ಅಪಾರ ಸೇವೆ ಸಲ್ಲಿಸಿದ್ದ ಅವರು, ತಮ್ಮ ಗರಡಿಯಲ್ಲಿ ಅನೇಕ ಶ್ರೇಷ್ಠ ಪತ್ರಕರ್ತರನ್ನು ರೂಪಿಸಿದ್ದಾರೆ. ಅವರ ಆತ್ಮಕ್ಕೆ ಭಗವಂತ ಸದ್ಗತಿ ನೀಡಲಿ. ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ಕರುಣಿಸಲೆಂದು ಪ್ರಾರ್ಥಿಸುವೆ ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

  • ಯೆಮೆನ್ ಮೇಲೆ ಅಮೆರಿಕ ದಾಳಿಗೂ ಮುನ್ನವೇ ರಹಸ್ಯ ಲೀಕ್

    ಯೆಮೆನ್ ಮೇಲೆ ಅಮೆರಿಕ ದಾಳಿಗೂ ಮುನ್ನವೇ ರಹಸ್ಯ ಲೀಕ್

    ವಾಷಿಂಗ್ಟನ್: ಅಮೆರಿಕ (America) ಸೇನೆ ಇತ್ತೀಚಿಗೆ ಯೆಮೆನ್ (Yemen) ದೇಶದ ಮೇಲೆ ಭೀಕರ ದಾಳಿಗಳನ್ನು ನಡೆಸಿತ್ತು. ಆದರೆ ಈ ದಾಳಿಯ ಮೊದಲೇ, ಇದಕ್ಕೆ ಸಂಬಂಧಿಸಿದ ಯೋಜನೆಯ ರಹಸ್ಯ ಲೀಕ್ ಆಗಿತ್ತು ಎನ್ನುವ ವಿಚಾರ ಸಂಚಲನ ಮೂಡಿಸಿದೆ.

    ಉಪಾಧ್ಯಕ್ಷ ಜೆಡಿ ವಾನ್ಸ್, ರಕ್ಷಣಾ ಮಂತ್ರಿ ಪೀಟ್ ಹೆಗ್ಸತ್ ಸೇರಿ ಪ್ರಮುಖ ಗಣ್ಯರು ಇರುವ ಸಿಗ್ನಲ್ ಆಪ್ ಗ್ರೂಪ್ ಚಾಟ್‌ನಲ್ಲಿ ಪತ್ರಕರ್ತರೊಬ್ಬರು ಇದ್ದರು. ಹೀಗಾಗಿ ದಾಳಿಗೆ ಸಂಬಂಧಿಸಿದ ವಿಷಯಗಳು ಆ ಪತ್ರಕರ್ತನಿಗೆ ಮೊದಲೇ ಗೊತ್ತಿತ್ತು ಎಂಬುದನ್ನು ಶ್ವೇತಭವನ ಒಪ್ಪಿಕೊಂಡಿದೆ. ಇದನ್ನೂ ಓದಿ: ಶಿಸ್ತು ಉಲ್ಲಂಘನೆ – ಬಿಜೆಪಿಯ ಐದು ನಾಯಕರಿಗೆ ನೋಟಿಸ್

    ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಆಕಸ್ಮಿಕವಾಗಿ ಅಮೆರಿಕದ ಪ್ರಮುಖ ರಾಜಕೀಯ ಪತ್ರಕರ್ತ ಜೆಫ್ರಿ ಗೋಲ್ಡ್‌ಫೀಲ್ಡ್‌ರನ್ನ ಸಿಗ್ನಲ್ ಆಪ್ ಗ್ರೂಪ್‌ಚಾಟ್‌ಗೆ ಸೇರಿಸಿದ್ದರು ಎನ್ನಲಾಗಿದೆ. ಇದನ್ನು ಗಂಭೀರ ಸ್ವರೂಪದ ಭದ್ರತಾ ವೈಫಲ್ಯ ಎನ್ನಲಾಗುತ್ತಿದೆ. ಇದನ್ನೂ ಓದಿ: ರಾಜ್ಯದ ಹಲವೆಡೆ ಭಾರೀ ಮಳೆ | ಮರ ಬಿದ್ದು ಕಳಸ – ಮೂಡಿಗೆರೆ ಮಾರ್ಗ ಬಂದ್‌

  • ‘ಪಬ್ಲಿಕ್ ಟಿವಿ’ ವರದಿಗಾರ ಕೆ.ಪಿ ನಾಗರಾಜ್‌ಗೆ ರಾಜ್ಯ ಪ್ರಶಸ್ತಿ

    ‘ಪಬ್ಲಿಕ್ ಟಿವಿ’ ವರದಿಗಾರ ಕೆ.ಪಿ ನಾಗರಾಜ್‌ಗೆ ರಾಜ್ಯ ಪ್ರಶಸ್ತಿ

    ತುಮಕೂರು: ‘ಪಬ್ಲಿಕ್ ಟಿವಿ’ಯ (PUBLiC TV) ಮೈಸೂರು ಜಿಲ್ಲಾ ವರದಿಗಾರ ಕೆ.ಪಿ ನಾಗರಾಜ್ (KP Nagaraj) ಅವರು ರಾಜ್ಯಮಟ್ಟದ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

    ವಿದ್ಯುನ್ಮಾನ ವಿಭಾಗದಲ್ಲಿ ಅತ್ಯುತ್ತಮ ಸಾಮಾಜಿಕ ಹಾಗೂ ಮಾನವೀಯ ವರದಿಗಾಗಿ ರಾಜ್ಯ ಮಟ್ಟದ ಪ್ರಶಸ್ತಿ ಪಡೆದಿದ್ದಾರೆ. ತುಮಕೂರಿನಲ್ಲಿ (Tumakuru) ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ 39ನೇ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಜೊತೆಗೆ ಪಬ್ಲಿಕ್ ಟಿವಿ ತುಮಕೂರು ಜಿಲ್ಲಾ ಪ್ರತಿನಿಧಿ ಮಂಜುನಾಥ ತಾಳಮಕ್ಕಿ ರಾಜ್ಯ ಸಮ್ಮೇಳದ ಖಜಾಂಚಿಯಾಗಿ, ಪ್ರಚಾರ ಸಮಿತಿ, ಸ್ವಾಗತಸಮಿತಿ ಪ್ರಮುಖರಾಗಿ ಅತ್ಯುತ್ತಮ ಕಾರ್ಯನಿರ್ವಹಣೆ ಮಾಡಿದ್ದಕ್ಕೆ ರಾಜ್ಯ ಸಮ್ಮೇಳನದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಇದನ್ನೂ ಓದಿ: Kodagu | ಹುಲಿ ದಾಳಿಗೆ ಎರಡು ಹಸುಗಳು ಬಲಿ

    ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್, ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಜೆಡಿಎಲ್‌ಪಿ ನಾಯಕ ಸುರೇಶ್ ಬಾಬು ಹಾಜರಿದ್ದರು. ಇದನ್ನೂ ಓದಿ: ರಾಜ್ಯಕ್ಕೆ ಕಡಿಮೆ ದರದಲ್ಲಿ ಅಕ್ಕಿ ಕೊಡಲು ಕೇಂದ್ರ ಸರ್ಕಾರ ಸಿದ್ಧ – ಜೋಶಿ

  • ಭೀಕರ ಕಾರು ಅಪಘಾತ – ಯುವ ಪತ್ರಕರ್ತ ದಾರುಣ ಸಾವು

    ಭೀಕರ ಕಾರು ಅಪಘಾತ – ಯುವ ಪತ್ರಕರ್ತ ದಾರುಣ ಸಾವು

    ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಅಫಘಾತಕ್ಕೀಡಾಗಿ (Car Accident) ಯುವ ಪತ್ರಕರ್ತ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗುಡಿಬಂಡೆ ತಾಲೂಕಿನ ಮಾಚಹಳ್ಳಿ ಬಳಿ ನಡೆದಿದೆ.

    ಮೂಲತಃ ಗುಡಿಬಂಡೆ ನಿವಾಸಿ ಭರತ್ (32) ಮೃತ ದುರ್ದೈವಿ. ಬೆಂಗಳೂರಿನ ಹೊಸದಿಗಂತ ಪತ್ರಿಕೆಯಲ್ಲಿ ವಿಶೇಷ ವರದಿಗಾರರಾಗಿ ಭರತ್ ಕೆಲಸ ಮಾಡುತ್ತಿದ್ದರು. ಬೆಂಗಳೂರಿನಲ್ಲೇ (Bengaluru) ವಾಸವಿದ್ದ ಭರತ್, ವಾರಾಂತ್ಯದ ಹಿನ್ನೆಲೆ ಸ್ವಗ್ರಾಮ ಗುಡಿಬಂಡೆಗೆ ಆಗಮಿಸಿದ್ದರು. ತಡರಾತ್ರಿ ಬಾಗೇಪಲ್ಲಿಗೆ ತೆರಳುವಾಗ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಹಿಂದೂ ಅನ್ನೋದು ಅವಮಾನಕರ ಶಬ್ದ – ಚಿಂತಕ ಕೆ.ಎಸ್ ಭಗವಾನ್ ಮತ್ತೆ ವಿವಾದಾತ್ಮಕ ಹೇಳಿಕೆ

    ಮಾಚಹಳ್ಳಿ ಕೆರೆಯ ಏರಿಯ ಮೇಲೆ ಇದ್ದ ದೇವರ ಕಲ್ಲಿನ ಗುಡಿಗೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ದೇವರ ಗುಡಿಯ ಮೇಲಿನ ಚಪ್ಪಡಿ ಕಲ್ಲು ಕಾರಿನೊಳಗೆ ತೂರಿದೆ. ಪರಿಣಾಮ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಭರತ್ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ನೈಋತ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ – ರಾಜ್ಯದ ಹಲವು ಜಿಲ್ಲೆಗಳಿಗೆ ಇಂದು ಮಳೆ ಅಲರ್ಟ್

    ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.  ಭರತ್ 9 ತಿಂಗಳ ಮಗಳ ನಾಮಕರಣ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದರು. ಆದ್ರೆ ದುರದೃಷ್ಟವಶಾತ್ ಭರತ್ ಸಾವನ್ನಪ್ಪಿದ್ದು ಮೃತನ ಆಗಲಿಕೆಗೆ ಪತ್ರಕರ್ತ ಮಿತ್ರರು ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ: ಗೋಹತ್ಯೆ ಮಾಡಲು, ಗೋಮಾಂಸ ತಿನ್ನಲು ಅವಕಾಶ ಕೊಡ್ಬೇಕಾ – ಅಶ್ವಥ್ ನಾರಾಯಣ ಪ್ರಶ್ನೆ

  • ರಸ್ತೆ ಹಗರಣ ಬಗ್ಗೆ ವರದಿ ಮಾಡಿದ್ದ ಪತ್ರಕರ್ತನ ಶವ ಕಂಟ್ರಾಕ್ಟರ್‌ ಮನೆಯಲ್ಲಿ ಪತ್ತೆ

    ರಸ್ತೆ ಹಗರಣ ಬಗ್ಗೆ ವರದಿ ಮಾಡಿದ್ದ ಪತ್ರಕರ್ತನ ಶವ ಕಂಟ್ರಾಕ್ಟರ್‌ ಮನೆಯಲ್ಲಿ ಪತ್ತೆ

    – ಕೊಲೆ ಕೇಸ್‌ನಲ್ಲಿ ಮೂವರ ಬಂಧನ; ಗುತ್ತಿಗೆದಾರ ಪರಾರಿ

    ರಾಯ್ಪುರ: ರಸ್ತೆ ಹಗರಣಕ್ಕೆ ಸಂಬಂಧಿಸಿದಂತೆ ವರದಿ ಮಾಡಿದ ಮರುದಿನವೇ ಗುತ್ತಿಗೆದಾರನೊಬ್ಬನ ಮನೆ ಬಳಿ ಪತ್ರಕರ್ತನ ಶವ ಪತ್ತೆಯಾಗಿರುವ ಘಟನೆ ಛತ್ತೀಸಗಢದಲ್ಲಿ (Chattisgarh) ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

    ಮುಕೇಶ್‌ ಚಂದ್ರಾಕರ್ (Mukesh Chandrakar) ಕೊಲೆಯಾದ ಪತ್ರಕರ್ತ. ಶುಕ್ರವಾರ ಛತ್ತೀಸ್‌ಗಢದ ಬಸ್ತಾರ್ ವಿಭಾಗದಲ್ಲಿ ಗುತ್ತಿಗೆದಾರರ ಒಡೆತನದ ಶೆಡ್‌ನಲ್ಲಿನ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಶವ ಪತ್ತೆಯಾಗಿದೆ. ಇವರು ಗುತ್ತಿಗೆದಾರರೊಬ್ಬರ ಭ್ರಷ್ಟಾಚಾರದ ಬಗ್ಗೆ ರಸ್ತೆ ಹಗರಣದ ವರದಿ ಮಾಡಿದ್ದರು. ಇದನ್ನೂ ಓದಿ: ಮಂಗಳೂರಿನಲ್ಲಿ ಜಲಸಿರಿ ಕಾಮಗಾರಿ ಕಿರಿಕಿರಿ – ನಗರದಲ್ಲಿ ಕೊಳವೆ ಅಳವಡಿಸಲು ಅಲ್ಲಲ್ಲಿ ರಸ್ತೆ ಅಗೆತ

    ಪತ್ರಕರ್ತ ಚಂದ್ರಾಕರ್ ಅವರು ಹೊಸ ವರ್ಷದ ದಿನದಂದು ಬಿಜಾಪುರದ ಪೂಜಾರಿ ಪಾರಾದಲ್ಲಿರುವ ತಮ್ಮ ಮನೆಯಿಂದ ಹೊರಟಿದ್ದರು. ಮರುದಿನ ಅವರ ಸಹೋದರ ಯುಕೇಶ್ ಕಾಣೆಯಾದ ದೂರನ್ನು ದಾಖಲಿಸಿದ್ದರು. ತನಿಖೆಯನ್ನು ಪ್ರಾರಂಭಿಸಿದ ನಂತರ, ಪೊಲೀಸರು 32 ವರ್ಷದ ವ್ಯಕ್ತಿಯ ಶವವನ್ನು ಅವರ ಮನೆಯಿಂದ ಬಹಳ ದೂರದಲ್ಲಿರುವ ಛತನ್ ಪಾರಾ ಬಸ್ತಿಯಲ್ಲಿ ಪತ್ತೆ ಮಾಡಿದ್ದರು.

    ಮುಕೇಶ್ ಅವರ ಸೋದರ ಸಂಬಂಧಿ ರಿತೇಶ್ ಚಂದ್ರಾಕರ್‌ನನ್ನು ಶನಿವಾರ ರಾಯ್‌ಪುರ ವಿಮಾನ ನಿಲ್ದಾಣದಿಂದ ಬಂಧಿಸಲಾಗಿದ್ದು, ಮೇಲ್ವಿಚಾರಕ ಮಹೇಂದ್ರ ರಾಮ್‌ಟೆಕೆ ಮತ್ತು ಮುಕೇಶ್ ಅವರ ಇನ್ನೊಬ್ಬ ಸಂಬಂಧಿ ದಿನೇಶ್ ಚಂದ್ರಾಕರ್‌ನನ್ನು ಬಿಜಾಪುರದಿಂದ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಕೊಲೆಯ ಹಿಂದಿನ ಮಾಸ್ಟರ್ ಮೈಂಡ್ ಎನ್ನಲಾದ ಗುತ್ತಿಗೆದಾರ ಸುರೇಶ್ ಚಂದ್ರಾಕರ್ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಶಬರಿಮಲೆ ಯಾತ್ರೆಯಲ್ಲಿ ಮಸೀದಿ ಭೇಟಿ ಬೇಡ: ಬಿಜೆಪಿ ಶಾಸಕ ರಾಜಾ ಸಿಂಗ್‌

    ಚಂದ್ರಾಕರ್ ತನ್ನ ಸೋದರ ಸಂಬಂಧಿ ರಿತೇಶ್ ಮತ್ತು ಮಹೇಂದ್ರ ರಾಮ್‌ಟೆಕೆ ಅವರೊಂದಿಗೆ ಸುರೇಶ್ ಎಂಬಾತನ ಶೆಡ್‌ನಲ್ಲಿ ರಾತ್ರಿ ಊಟ ಮಾಡಿದ್ದರು. ಈ ವೇಳೆ ಪರಸ್ಪರರ ನಡುವೆ ವಾಗ್ವಾದ ಶುರುವಾಗಿದೆ. ರಿತೇಶ್ ಮತ್ತು ಮಹೇಂದ್ರ ಇಬ್ಬರೂ ಚಂದ್ರಾಕರ್ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ, ಸ್ಥಳದಲ್ಲೇ ಕೊಂದಿದ್ದಾರೆ. ನಂತರ ಆತನ ದೇಹವನ್ನು ಸೆಪ್ಟಿಕ್ ಟ್ಯಾಂಕ್‌ನಲ್ಲಿ ಬಚ್ಚಿಟ್ಟು, ಅಪರಾಧವನ್ನು ಮರೆಮಾಚಲು ಸಿಮೆಂಟ್‌ನಿಂದ ಮುಚ್ಚಿದ್ದಾರೆ. ಮುಖೇಶ್ ಫೋನ್ ಹಾಗೂ ಕೊಲೆಗೆ ಬಳಸಿದ್ದ ಆಯುಧವನ್ನೂ ವಿಲೇವಾರಿ ಮಾಡಿದ್ದಾನೆ.

  • ಪತ್ರಕರ್ತ ಪ್ರಸಾದ್ ಹೆಗ್ಡೆ ನಿಧನ

    ಪತ್ರಕರ್ತ ಪ್ರಸಾದ್ ಹೆಗ್ಡೆ ನಿಧನ

    ಬೆಂಗಳೂರು: ಪತ್ರಕರ್ತ ಪ್ರಸಾದ್ ಹೆಗ್ಡೆ (Prasad Hegde) (45) ಶನಿವಾರ ನಿಧನರಾಗಿದ್ದಾರೆ.

    ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆ (Apollo Hospital) ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದರು. ಮೃತರ ಅಂತ್ಯಕ್ರಿಯೆ ಇಂದು ಸಂಜೆ ಸಿರಸಿಯ ಸದ್ಗತಿ ನೆಮ್ಮದಿ ಕುಟೀರದಲ್ಲಿ ನೆರವೇರಲಿದೆ.

    ಮೂಲತಃ ಉತ್ತರಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಬೆಳಗುಂದ್ಲಿಯವರಾದ ಪ್ರಸಾದ್ ಹೆಗ್ಡೆ ಪ್ರಸ್ತುತ ರಾಜ್ ನ್ಯೂಸ್ ಔಟ್ ಪುಟ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮುಗಿಸಿದ್ದ ಪ್ರಸಾದ್, ರಂಗಭೂಮಿಯಲ್ಲಿ ಅಪಾರ ಆಸಕ್ತಿ ಹೊಂದಿದ್ದರು. ಇದನ್ನೂ ಓದಿ: ಅಕಾಲಿಕ ಮಳೆಗೆ ಮಹಾರಾಷ್ಟ್ರದಲ್ಲಿ 5 ಸಾವು- ಹಿಮಾಚಲ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

    ಮೈಸೂರಿನ ಹಿರಿಯ ಕಲಾವಿದರು, ಸಾಹಿತಿಗಳ ಪ್ರಭಾವಕ್ಕೆ ಒಳಗಾಗಿದ್ದ ಪ್ರಸಾದ್ ಹೆಗ್ಡೆ, ರಂಗಭೂಮಿಯಲ್ಲಿ ತನ್ನ ಭವಿಷ್ಯವನ್ನು ರೂಪಿಸಿಕೊಳ್ಳುವ ಇಚ್ಛೆ ಹೊಂದಿದ್ದರು. ಆದರೆ ಪದವಿ ಬಳಿಕ ಮಾಧ್ಯಮದೆಡೆಗೆ ವಾಲಿದರು. ಮೈಸೂರು ದಿಗಂತ ಪತ್ರಿಕೆಯಲ್ಲಿ ಪತ್ರಕರ್ತ ವೃತ್ತಿಯನ್ನು ಆರಂಭಿಸಿದ ಪ್ರಸಾದ್, ಬಳಿಕ ಹಲೋ ಮೈಸೂರು ಮತ್ತು ಮೈಸೂರು ಮಿತ್ರ ಪತ್ರಿಕೆಯಲ್ಲಿ ಕೆಲ ಮಾಡಿದ್ದಾರೆ. ನಂತರ ರಾಜಧಾನಿ ಬೆಂಗಳೂರಿಗೆ ಬಂದು ದೃಶ್ಯ ಮಾಧ್ಯಮದಲ್ಲಿ ತನ್ನ ವೃತ್ತಿಯನ್ನು ಮುಂದುವರಿಸಿದರು, ಕಸ್ತೂರಿ ಟಿವಿಯಲ್ಲಿ ರಾಜಕೀಯ ವರದಿಗಾರರಾಗಿ, ನಿರೂಪಕರಾಗಿ, ರಾಜಕೀಯ ವಿಶ್ಲೇಷಕರಾಗಿ ಹಲವು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದರು. ಬಳಿಕ ಪ್ರಜಾ ಟಿವಿ, ದಿಗ್ವಿಜಯ ನ್ಯೂಸ್, ನ್ಯೂಸ್ ಫಸ್ಟ್ ಸಂಸ್ಥೆಗಳಲ್ಲಿಯೂ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು.

    ಹೆಗ್ಡೆ ನಿಧನಕ್ಕೆ ಗಣ್ಯರು, ಹಿರಿಯ ಪತ್ರಕರ್ತರು ಸಂತಾಪ ಸೂಚಿಸಿದ್ದಾರೆ.

  • ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘ ಉದ್ಘಾಟನೆ: ಗಿರೀಶ್ ಕಾಸರವಳ್ಳಿ ಮೆಚ್ಚುಗೆ

    ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘ ಉದ್ಘಾಟನೆ: ಗಿರೀಶ್ ಕಾಸರವಳ್ಳಿ ಮೆಚ್ಚುಗೆ

    ನ್ನಡದ ಒಟ್ಟು ಸಿನಿಮಾ ಬೆಳವಣಿಗೆ, ಇತಿಹಾಸವನ್ನು ರಾಷ್ಟ್ರೀಯ ನೆಲೆಯಲ್ಲಿ ವಿಶ್ಲೇಷಣೆ ಮಾಡುವುದು ತುರ್ತು ಅಗತ್ಯವಿದೆ ಎಂದು ಹಿರಿಯ ನಿರ್ದೇಶಕ ಪದ್ಮಶ್ರೀ ಗಿರೀಶ್ ಕಾಸರವಳ್ಳಿ ಇಂದಿಲ್ಲಿ ಹೇಳಿದರು. ‘ಸಂಸ್ಕಾರ’ , ‘ಸ್ಕೂಲ್ ಮಾಸ್ಟರ್ ‘ ರೀತಿಯ ಚಿತ್ರಗಳನ್ನು ಸರಿಯಾಗಿ ಬಿಂಬಿಸುವ ಕೆಲಸ ಆಗಿಲ್ಲ. ರೌಡಿಸಂ ಮಾದರಿಯ ಸಿನಿಮಾಗಳನ್ನು‌ ಹೆಚ್ಚು ಹೆಚ್ಚು ಪ್ರೊಜೆಕ್ಟ್ ಮಾಡಿ ರಾಜ್ಯದ ಹೊರಗೂ ಕನ್ನಡ ಚಿತ್ರಗಳ ಕುರಿತಂತೆ ನಾವೇ ತಪ್ಪು ಕಲ್ಪನೆ ಮೂಡಿಸಿದ್ದೇವೆ,  ಅದನ್ನು ಹೋಗಲಾಡಿಸುವ ಅಗತ್ಯವಿದೆ’ ಎಂದರು. ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘವನ್ನು  ಉದ್ಘಾಟಿಸಿ, ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಕನ್ನಡದ ಅಸ್ಮಿತೆ, ಕಲಾತ್ಮಕ ಹೆಗ್ಗಳಿಕೆ ತೋರಿಸಬೇಕು, ಆ ಕೆಲಸ ಆಗಬೇಕು. ಬೆಂಗಳೂರು ಅಲ್ಲದೆ ರಾಜ್ಯದ  ಆಚೆಗೂ  ಕನ್ನಡದಲ್ಲಿ ಈ ರೀತಿ ಸಾಧನೆ ಆಗಿದೆ ಎನ್ನುವುದು ತಿಳಿಸಬೇಕು’ ಎಂದು ಅವರು ಸಲಹೆ ನೀಡಿದರು.

    ‘ಕನ್ನಡದಲ್ಲಿ  ಒಳ್ಳೆಯ ಸಿನಿಮಾಗಳನ್ನು ಪ್ರೊಜೆಕ್ಟ್ ಮಾಡುತ್ತಿಲ್ಲ. ‘‌ಕಾಂತಾರ ‘ ತನ್ನ ಅಸ್ಮಿತೆಯಿಂದ ದೇಶವಿದೇಶಗಳಲ್ಲಿ ಯಶಸ್ಸು ಗಳಿಸಿತು. ಆದರೆ ‘ಕೆಜಿಎಫ್’ ಹಾಗಲ್ಲ, ಅದರ ಗೆಲುವಿಗೆ ಬೇರೆಯದೇ  ಆದ ಕಾರಣ ಇದೆ. ಕನ್ನಡದಲ್ಲಿ ಬೇರೆಯೇ ರೀತಿಯ ಚಿತ್ರಗಳು ಕಳೆದ ನಾಲ್ಕೈದು ವರ್ಷಗಳಲ್ಲಿ ಆಗಿದೆ. ‘ಬಳೆ ಕೆಂಪ’,  ‘ಪಿಂಕಿ ಎಲ್ಲಿ’, ‘ನಾನು ಕುಸುಮ’, ‘ಪೆದ್ರೋ’, ‘ಶಿವಮ್ಮ’ ಮುಂತಾದ ಚಿತ್ರಗಳು ಜಗತ್ತಿನಾದ್ಯಂತ  ಸದ್ದು ಮಾಡುತ್ತಿವೆ. ಅವುಗಳು ಜನರಿಗೆ ತಲುಪುತ್ತಿಲ್ಲ ಅಷ್ಟೇ’ ಎಂದು ಅವರು ಹೇಳಿದರು.  ಇದನ್ನೂ ಓದಿ: ಸತತ ಸೋಲಿನಿಂದ ಬೇಸತ್ತ ಪೂಜಾಗೆ ನಿರ್ದೇಶಕ ತ್ರಿವಿಕ್ರಮ್ ಸಲಹೆ

    ದಲಿತ, ಬಂಡಾಯ ಸಾಹಿತ್ಯ ಕನ್ನಡ ಚಿತ್ರರಂಗದಲ್ಲಿ ಚಿತ್ರ ಗೀತೆಯಲ್ಲಿ ಬಂದಿದೆ. ಆದರೆ  ಸಿನಿಮಾದಲ್ಲಿ ಬಂದಿಲ್ಲ. ‌ಅದನ್ನು ದಾಖಲು ಮಾಡವ ಅಗತ್ಯವಿದೆ ಎಂದ ಅವರು, ‘ಕೃತಿಯನ್ನು ಸಮಾಜದ ಬೆಳವಣಿಗೆ, ಕಾಲ ಮತ್ತು ಕಾಲಾತೀತವಾಗಿ ನೋಡಬೇಕಾಗಿದೆ. ಪುಟ್ಟಣ್ಣ ಅವರು ಸಾಂಸ್ಕೃತಿಕ, ಧಾರ್ಮಿಕ ನಿಲುವು ಇಟ್ಟುಕೊಂಡು ವಿಶ್ಲೇಷಣೆ ಮಾಡಬೇಕು. ಸಿನಿಮಾ ಶೂನ್ಯದಲ್ಲಿ ಸೃಷ್ಠಿ ಆಗುವುದಿಲ್ಲ’ ಎಂದು ಹೇಳಿದರು.

    ‘ನಾನು ಚಿತ್ರರಂಗ ಪ್ರವೇಶಿಸಿದ್ದು 1975ರಲ್ಲಿ.  ಆಗ ಚಲನಚಿತ್ರ ಪತ್ರಕರ್ತಕರು ಬೆನ್ನೆಲುಬಾಗಿದ್ದರಿಂದ ಈ ಮಟ್ಟಕ್ಕೆ ಬೆಳೆಯಲು ಸಹಕಾರಿಯಾಯಿತು.  ಕೃತಿಕಾರ ಇಲ್ಲದಿದ್ದರೆ ವಿಮರ್ಶಕನ ಅಗತ್ಯವಿಲ್ಲ. ವಿಮರ್ಶಕ ಆಮ್ಲಜನಕದ ರೀತಿ ಕೆಲಸ ಮಾಡುತ್ತಾರೆ. ಸಿನಿಮಾ ವಿಮರ್ಶೆ ಮಾಡದಿದ್ದರೆ ನನ್ನನ್ನು ನಾನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ’ ಎಂದು ಹಿಂದೆ ಪತ್ರಕರ್ತರ ಪರಿಷತ್ ಪ್ರತಿ ವಾರ ನಡೆಸುತ್ತಿದ್ದ ವಿಮರ್ಶೆಗಳ ವಿಮರ್ಶೆ ಸಂವಾದ ಕಾರ್ಯಕ್ರಮ ನಿರ್ದೇಶಕರನ್ನು ಉತ್ತೇಜಿಸುತ್ತಿದ್ದುದನ್ನು ಹೇಳಿದರು.   ‘ವಿಮರ್ಶಕರಿಂದ ಮಾಧ್ಯಮ, ಉದ್ಯಮ ಬೆಳೆಯಲಿದೆ. ಇಲ್ಲದಿದ್ದರೆ ಸ್ಥಗಿತವಾಗಲಿದೆ. ಚಲನಚಿತ್ರ  ಪತ್ರಕರ್ತರ ಸಂಘ ಮತ್ತೊಮ್ಮೆ ಉದ್ಘಾಟನೆಯಾಗಿರುವುದು ಖುಷಿಕೊಟ್ಟಿದೆ’  ಎಂದರು.

    ಹಿರಿಯ ಪರ್ತಕರ್ತೆ ಡಾ. ವಿಜಯಾ ಮಾತನಾಡಿ, ‘ಹಿಂದಿನ ಸಂಘಟನೆಗಳು, ತಮ್ಮ ವೈಯಕ್ತಿಕ ಹಿತಾಸಕಿಗಳನ್ನು ಮರೆತು,  ಚಿತ್ರರಂಗದ ಬೆಳವಣಿಗೆಯನ್ನಷ್ಟೇ ಬಯಸಿದವು, ಇಲ್ಲಿ ಹಾಗಾಗದಂತೆ ಗಮನಹರಿಸಿದ್ದೀರಿ’ ಎಂದು ಕನ್ನಡ ಚಿತ್ರರಂಗದ ಬೆಳವಣಿಗೆಯಲ್ಲಿ ಪತ್ರಕರ್ತರ ಕೊಡುಗೆ ಮತ್ತು ವಿವಿಧ ವಿಷಯಗ‌ಳ‌ ಮೇಲೆ ಬೆಳಕು ಚೆಲ್ಲಿದರು.

    ಸಂಘದ ಅಧ್ಯಕ್ಷ ಬಾ.ನಾ. ಸುಬ್ರಹ್ಮಣ್ಯ ಸಂಘದ ಕಾರ್ಯ ಚಟುವಟಿಕೆ ಉದ್ದೇಶಗಳ ಕುರಿತು ವಿವರಿಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್, ಚಲನಚಿತ್ರ ಅಕಾಡಮಿ ಅಧ್ಯಕ್ಷ ಅಶೋಕ್ ಕಶ್ಯಪ್,  ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್,  ನಿರ್ದೇಶಕರ ಸಂಘದ ಅಧ್ಯಕ್ಷ ನಾಗೇಂದ್ರ ಅರಸ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಅಖಿಲ ಬಾರತ ಕಾರ್ಯನಿರತ  ಒಕ್ಕೂಟದ ಅಧ್ಯಕ್ಷ ಬಿ.ವಿ ಮಲ್ಲಿಕಾರ್ಜುನಯ್ಯ, ಮಾಧ್ಯಮ ತಜ್ಞ ಜಿ.ಎನ್. ಮೋಹನ್,  ಹಿರಿಯ ಚಲನಚಿತ್ರ ಪತ್ರಕರ್ತರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

    ಸಂಸ್ಥಾಪಕ ಆಡಳಿತ ಮಂಡಳಿ : 

    ಬಿ.ಎನ್. ಸುಬ್ರಹ್ಮಣ್ಯ – ಅಧ್ಯಕ್ಷರು

    ಸುನಯನಾ ಸುರೇಶ್ – ಉಪಾಧ್ಯಕ್ಷರು

    ನಾಡಿಗೇರ್ ಚೇತನ್ – ಕಾರ್ಯಾಧ್ಯಕ್ಷರು

    ಅರುಣ್ ಕುಮಾರ್. ಜಿ – ಪ್ರಧಾನ ಕಾರ್ಯದರ್ಶಿ

    ಜಗದೀಶ್ ಕುಮಾರ್ ಎಸ್ –  ಕಾರ್ಯದರ್ಶಿ

    ಹರೀಶ್ ಸೀನಪ್ಪ – ಸಹ ಕಾರ್ಯದರ್ಶಿ

    ಕೆ.ಎಸ್.ವಾಸು – ಖಜಾಂಚಿ

    ಕಾರ್ಯಕಾರಿ ಸಮಿತಿಯ ಸದಸ್ಯರು

    ಮನೋಹರ್‌ ಆರ್

    ಮಂಜುನಾಥ್ ಎನ್

    ದೇಶಾದ್ರಿ ಹೆಚ್

    ಲಕ್ಷ್ಮೀನಾರಾಯಣ

    ಸಿ.ಜಿ. ರಮೇಶ್

    ವಿಜಯ್ ಆರ್

    ಅವಿನಾಶ್ ಜಿ.ಆರ್

    ಹರ್ಷವರ್ಧನ್ ಎಸ್‌.ಆರ್‌

    ಮಾಲತೇಶ ಹೆಚ್. ಜಗ್ಗೇನ್

    ಶಶಿಧರ ಚಿತ್ರದುರ್ಗ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಂಚಭೂತಗಳಲ್ಲಿ ಲೀನವಾದ ಹಿರಿಯ ಪತ್ರಕರ್ತ ಕೆ.ಸತ್ಯನಾರಾಯಣ

    ಪಂಚಭೂತಗಳಲ್ಲಿ ಲೀನವಾದ ಹಿರಿಯ ಪತ್ರಕರ್ತ ಕೆ.ಸತ್ಯನಾರಾಯಣ

    ಬೆಂಗಳೂರು: ಹಿರಿಯ ಪತ್ರಕರ್ತ (Senior Journalist), ಕನ್ನಡಪ್ರಭ ಪತ್ರಿಕೆಯ ಮಾಜಿ ಸಂಪಾದಕರಾಗಿದ್ದ ಕೆ. ಸತ್ಯನಾರಾಯಣ (K Sathyanarayana) ಅವರ ಅಂತ್ಯಕ್ರಿಯೆ ಬೆಂಗಳೂರಿನ ಚಾಮರಾಜಪೇಟೆಯ ಹಿಂದೂ ರುದ್ರಭೂಮಿಯಲ್ಲಿ ಭಾನುವಾರ ನೆರವೇರಿತು.

    ಶ್ರೀಯುತರ ಪಾರ್ಥೀವ ಶರೀರವನ್ನು ಜಯನಗರ ನಿವಾಸದಿಂದ ಚಾಮರಾಜಪೇಟೆ ರುದ್ರಭೂಮಿಗೆ ತರಲಾಯ್ತು. ಬ್ರಾಹ್ಮಣ ಸಂಪ್ರದಾಯದಂತೆ ಸತ್ಯನಾರಾಯಣ ಅವರ ಅಣ್ಣನ ಮಗ ವಾಸುದೇವ್ ಅಂತಿಮ ವಿಧಿವಿಧಾನಗಳನ್ನ ನೆರವೇರಿಸಿದ್ರು. ಚಿತೆಗೆ ಅಗ್ನಿ ಸ್ಪರ್ಶ ಮಾಡುವ ಮೂಲಕ ಸತ್ಯನಾರಾಯಣ ಅವ್ರು ಪಂಚಭೂತಗಳಲ್ಲಿ ಲೀನವಾದ್ರು. ಇದನ್ನೂ ಓದಿ: ಹಿರಿಯ ಪತ್ರಕರ್ತ ಕೆ.ಸತ್ಯನಾರಾಯಣ ನಿಧನಕ್ಕೆ ಗಣ್ಯರ ಸಂತಾಪ

    ಇದಕ್ಕೂ ಮುನ್ನ ಸಕಲ ಪೊಲೀಸ್ ಗೌರವಗಳೊಂದಿಗೆ ಶ್ರೀಯುತರಿಗೆ ಗೌರವ ಸಮರ್ಪಣೆ ಮಾಡಲಾಯ್ತು. ಸತ್ಯನಾರಾಯಣ ಅವರ ಪತ್ನಿ, ಮಗಳು, ಕುಟುಂಬಸ್ಥರು, ಶಿಷ್ಯಂದಿರು ಹಾಗೂ ಅಪಾರ ಪ್ರಮಾಣದ ಓದುಗ ಬಳಗವನ್ನ ಬಿಟ್ಟು ಇಹಲೋಕ ತ್ಯಜಿಸಿದ್ದಾರೆ. ಇದನ್ನೂ ಓದಿ: ಹಿರಿಯ ಪತ್ರಕರ್ತ ಕೆ.ಸತ್ಯನಾರಾಯಣ ನಿಧನ

    ಕೆ. ಸತ್ಯನಾರಾಯಣ ಅವರು ಭಾನುವಾರ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಜಯನಗರದ ಅದೇ ರೆಡ್ ಆಕ್ಸೈಡ್ ನೆಲವಿರುವ ಮನೆಯಲ್ಲಿ ವಾಸವಿದ್ದ ಅವರು ಆದರ್ಶ ಜೀವನ ನಡೆಸುತ್ತಿದ್ದರು. ಇಳಿವಯಸ್ಸಿನಲ್ಲೂ ವೆಂಕಮ್ಮ, ಸತ್ಯನಾರಾಯಣ ದಂಪತಿ ಸರಳ ಸಜ್ಜನಿಕೆಯಲ್ಲಿ ಆದರ್ಶಪ್ರಾಯವಾದ ಬದುಕು ಬದುಕುತ್ತಿದ್ದರು. ಕನ್ನಡದ ಹಲವು ಹೆಸರಾಂತ ಪತ್ರಕರ್ತರನ್ನ ಸತ್ಯನಾರಾಯಣ ಅವರು ಬೆಳೆಸಿದ್ದರು. ಸತ್ಯನಾರಾಯಣ ಅವರ ಮನೆಯಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಪತ್ನಿ ವೆಂಕಮ್ಮ, ಮಗಳು ಅಪೂರ್ವರನ್ನು ಅಗಲಿದ್ದಾರೆ. ಸಾವಿನಲ್ಲೂ ನೇತ್ರದಾನ ಮಾಡುವ ಮೂಲಕ ಇಬ್ಬರ ಬಾಳಿಗೆ ಬೆಳಕಾಗಿದ್ದಾರೆ.

    ಶ್ರೀಯುತರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಪಬ್ಲಿಕ್ ಟಿ.ವಿ (Public TV) ಮುಖ್ಯಸ್ಥರಾದ ಹೆಚ್.ಆರ್. ರಂಗನಾಥ್ (HR Ranganath) ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹಿರಿಯ ಪತ್ರಕರ್ತ ಕೆ.ಸತ್ಯನಾರಾಯಣ ನಿಧನಕ್ಕೆ ಗಣ್ಯರ ಸಂತಾಪ

    ಹಿರಿಯ ಪತ್ರಕರ್ತ ಕೆ.ಸತ್ಯನಾರಾಯಣ ನಿಧನಕ್ಕೆ ಗಣ್ಯರ ಸಂತಾಪ

    ಬೆಂಗಳೂರು: ಕನ್ನಡಪ್ರಭ ದಿನಪತ್ರಿಕೆಯ ಸಂಪಾದಕರಾಗಿದ್ದ ಕೆ.ಸತ್ಯನಾರಾಯಣ (K Sathyanarayana) ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹಾಗೂ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಸೇರಿದಂತೆ ಅನೇಕ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

    ಸತ್ಯನಾರಾಯಣ ಅವರು ತಾಯಿನಾಡು ಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಕಾಲಿರಿಸಿ ಕನ್ನಡಪ್ರಭ ಪತ್ರಿಕೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಕಾರ್ಯನಿರ್ವಹಿಸಿದ್ದರು. ಸತ್ಯನಾರಾಯಣ ಅವರು ಇಳಿವಯಸ್ಸಿನಲ್ಲೂ ಬರೆಯುತ್ತಿದ್ದ ಅಂಕಣಗಳ ಮೂಲಕ ಸಮಕಾಲೀನ ರಾಜಕೀಯ, ವಾಣಿಜ್ಯ ವಿಷಯಗಳ ಮೇಲೆ ಬೆಳಕು ಚೆಲ್ಲುತ್ತಿದ್ದರು. ಮೌಲ್ಯಾಧಾರಿತ ಪತ್ರಿಕೋದ್ಯಮದ ಸಂಕೇತವಾಗಿದ್ದ ಅವರು ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆಗಾಗಿ ಟಿ.ಎಸ್.ಆರ್ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಅವರ ನಿಧನ ಕನ್ನಡ ಪತ್ರಿಕೋದ್ಯಮಕ್ಕೆ ದೊಡ್ಡ ನಷ್ಟವಾಗಿದ್ದು, ಹಳೆ ತಲೆಮಾರಿನ ಪತ್ರಿಕೋದ್ಯಮದ ಕೊಂಡಿಯೊಂದು ಕಳಚಿಕೊಂಡತಾಗಿದೆ. ಶ್ರೀಯುತರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಪರಮಾತ್ಮ ಅವರ ಕುಟುಂಬದ ಸದಸ್ಯರಿಗೆ ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಹಿರಿಯ ಪತ್ರಕರ್ತ ಕೆ.ಸತ್ಯನಾರಾಯಣ ನಿಧನ

    ಪ್ರತಿಭೆ, ಬದ್ಧತೆ ಮತ್ತು ಕಸಬುಗಾರಿಕೆಗೆ ಹೆಸರಾದ ಹಿರಿಯ ಪತ್ರಕರ್ತ ಕೆ.ಸತ್ಯನಾರಾಯಣ ಅವರ ನಿಧನದಿಂದ ಬಹುಕಾಲದ ಆತ್ಮೀಯ ಸ್ನೇಹಿತರನ್ನು ಕಳೆದುಕೊಂಡಿದ್ದೇನೆ. ಸತ್ಯನಾರಾಯಣ ಅವರ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ‌ ಕೋರುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

    ಕನ್ನಡದ ಹಿರಿಯ ಪತ್ರಕರ್ತ (Senior Journalist) ಕೆ. ಸತ್ಯನಾರಾಯಣ ಅವರು ಭಾನುವಾರ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಇದನ್ನೂ ಓದಿ: 6ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹಿರಿಯ ಪತ್ರಕರ್ತ ಕೆ.ಸತ್ಯನಾರಾಯಣ ನಿಧನ

    ಹಿರಿಯ ಪತ್ರಕರ್ತ ಕೆ.ಸತ್ಯನಾರಾಯಣ ನಿಧನ

    ಬೆಂಗಳೂರು: ಕನ್ನಡದ ಹಿರಿಯ ಪತ್ರಕರ್ತ (Senior Journalist) ಕೆ. ಸತ್ಯನಾರಾಯಣ (K Sathyanarayana) ಅವರು ಭಾನುವಾರ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ.

    ಕನ್ನಡಪ್ರಭ ಪತ್ರಿಕೆಯ ಮಾಜಿ ಸಂಪಾದಕರಾಗಿದ್ದ ಕೆ. ಸತ್ಯನಾರಾಯಣ ಭಾನುವಾರ ಬೆಳಗ್ಗೆ ಜಯನಗರದ ಎಲ್‍ಐಸಿ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ತಾಯ್ನಾಡು ಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಕಾಲಿರಿಸಿದ ಅವರು, ಕನ್ನಡಪ್ರಭ ಪತ್ರಿಕೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಸುದೀರ್ಘ ಅವಧಿಗೆ ನಾನಾ ಹಂತದಲ್ಲಿ ದುಡಿದಿದ್ದಾರೆ. ತಮ್ಮ ಬದುಕನ್ನು ಸುದ್ದಿ ಮನೆಗೆ ಸಮರ್ಪಣೆ ಮಾಡಿದ ಹಿರಿಯ ಚೇತನ. ಇಳಿವಯಸ್ಸಿನಲ್ಲೂ ಅಂಕಣ ಬರೆಯುತ್ತಾ ತಮ್ಮೊಳಗಿನ ಪತ್ರಕರ್ತನನ್ನು ಜಾಗೃತವಾಗಿ ಕಾಪಿಟ್ಟುಕೊಂಡಿದ್ದರು. ಇದನ್ನೂ ಓದಿ: ಇಂದು ಕೂಡಲಸಂಗಮ, ಗೋಕರ್ಣದಲ್ಲಿ ಸಿದ್ದೇಶ್ವರ ಶ್ರೀ ಅಸ್ಥಿ ವಿಸರ್ಜನೆ

    ಇಂಗ್ಲೀಷ್ ಮತ್ತು ಕನ್ನಡದಲ್ಲಿ ಸುಲಲಿತ, ಸರಳವಾಗಿ ಬರೆಯುತ್ತಿದ್ದ ಅವರು ವಾಣಿಜ್ಯ, ವ್ಯವಹಾರ ವರದಿಗಾರಿಕೆಯಲ್ಲಿ ಪರಿಣಿತರಾಗಿದ್ದರು. ಬಜೆಟ್ ವರದಿಗಾರಿಕೆಯಲ್ಲಿ ಸತ್ಯನಾರಾಯಣ ಎತ್ತಿದ ಕೈ. ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿಯೂ ವರದಿಗಾರರಾಗಿ ಕೆಲಸ ಮಾಡಿದ್ರು. ಕನ್ನಡಪ್ರಭದಲ್ಲಿ ನಗರಪ್ರದಕ್ಷಿಣೆ, ವ್ಯಕ್ತಿ ವಿಚಾರ ಎಂಬ ಅಂಕಣ ಬರೆಯುತ್ತ ಜನಮನ ಗೆದ್ದಿದ್ದರು.

    ಜಯನಗರದ ಅದೇ ರೆಡ್ ಆಕ್ಸೈಡ್ ನೆಲವಿರುವ ಮನೆಯಲ್ಲಿ ವಾಸವಿದ್ದ ಅವರು ಆದರ್ಶ ಜೀವನ ನಡೆಸುತ್ತಿದ್ದರು. ಇಳಿವಯಸ್ಸಿನಲ್ಲೂ ವೆಂಕಮ್ಮ, ಸತ್ಯನಾರಾಯಣ ದಂಪತಿ ಸರಳ ಸಜ್ಜನಿಕೆಯಲ್ಲಿ ಆದರ್ಶಪ್ರಾಯವಾದ ಬದುಕು ಬದುಕುತ್ತಿದ್ದರು. ಕನ್ನಡದ ಹಲವು ಹೆಸರಾಂತ ಪತ್ರಕರ್ತರನ್ನು ಸತ್ಯನಾರಾಯಣ ಅವರು ಬೆಳೆಸಿದ್ದರು. ಸತ್ಯನಾರಾಯಣ ಅವರ ಮನೆಯಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಪತ್ನಿ ವೆಂಕಮ್ಮ, ಮಗಳು ಅಪೂರ್ವರನ್ನು ಅಗಲಿದ್ದಾರೆ. ಸಾವಿನಲ್ಲೂ ನೇತ್ರದಾನ ಮಾಡುವ ಮೂಲಕ ಇಬ್ಬರ ಬಾಳಿಗೆ ಬೆಳಕಾಗಿದ್ದಾರೆ.  ಇದನ್ನೂ ಓದಿ: ರಾಜಕೀಯದಲ್ಲಿ ರಾಡಿ ಎಬ್ಬಿಸಿದ ಸ್ಯಾಂಟ್ರೋ ರವಿ ಯಾರು? ಮಂಡ್ಯ ಟು ಬೆಂಗಳೂರು ಜರ್ನಿಯ ರೋಚಕ ಕಹಾನಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k