Tag: ಪತ್ರಕರ್ತರು

  • ಗ್ರಾಮೀಣ ಪತ್ರಕರ್ತರ ಕನಸು ನನಸು- ಬಜೆಟ್‍ನಲ್ಲಿ ಉಚಿತ ಬಸ್ ಪಾಸ್ ಘೋಷಣೆ

    ಗ್ರಾಮೀಣ ಪತ್ರಕರ್ತರ ಕನಸು ನನಸು- ಬಜೆಟ್‍ನಲ್ಲಿ ಉಚಿತ ಬಸ್ ಪಾಸ್ ಘೋಷಣೆ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ತಮ್ಮ ಬಜೆಟ್‍ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ (Free Bus Pass) ಘೋಷಣೆ ಮಾಡಿದ್ದಾರೆ. ಈ ಮೂಲಕ ಗ್ರಾಮೀಣ ಭಾಗದ ಪತ್ರಕರ್ತರ ದಶಕಗಳ ಕನಸು ನನಸಾಗಿದೆ.

    ಗ್ರಾಮೀಣ ಪತ್ರಕರ್ತರಿಗೆ (Rural Journalist) ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಸೌಲಭ್ಯ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ. ಇದನ್ನೂ ಓದಿ: Karnataka Budget: ರಾಜ್ಯದ ಗ್ರಾಮೀಣ ರಸ್ತೆಗಳಿನ್ನು ಪ್ರಗತಿ ಪಥ, ಕಲ್ಯಾಣ ಪಥ.!

    ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ವಿಶೇಷ ಕಾರ್ಯಕ್ರಮ ಆಯೋಜನೆಗೆ 2 ಕೋಟಿ ರೂ. ಅನುದಾನ ನೀಡಲಾಗುವುದು. ಜೊತೆಗೆ ಸಾಮಾಜಿಕ ನ್ಯಾಯದ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಪತ್ರಕರ್ತರಿಗೆ “ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ” ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

  • ನ್ಯೂಸ್‌ಕ್ಲಿಕ್ ಆನ್‌ಲೈನ್ ಪೋರ್ಟಲ್ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸ್ ದಾಳಿ

    ನ್ಯೂಸ್‌ಕ್ಲಿಕ್ ಆನ್‌ಲೈನ್ ಪೋರ್ಟಲ್ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸ್ ದಾಳಿ

    ನವದೆಹಲಿ: ಚೀನಾ (China) ಜೊತೆಗೆ ಆರ್ಥಿಕ ಸಂಬಂಧ ಹೊಂದಿರುವ ಆರೋಪದ ಮೇಲೆ ನ್ಯೂಸ್‌ಕ್ಲಿಕ್ (NewsClick) ಆನ್‌ಲೈನ್ ಪೋರ್ಟಲ್‌ಗೆ (Online Portal) ಸಂಬಂಧಿಸಿದ ಪತ್ರಕರ್ತರು (Journalist) ಮತ್ತು ಉದ್ಯೋಗಿಗಳ ಮನೆಗಳ ಮೇಲೆ ಮಂಗಳವಾರ ಬೆಳಗ್ಗೆ ದೆಹಲಿ ಪೊಲೀಸರ ವಿಶೇಷ ತಂಡ ದಾಳಿ (Raid) ನಡೆಸಿದೆ. 100ಕ್ಕೂ ಹೆಚ್ಚು ಸ್ಥಳಗಳಲ್ಲಿ 500ಕ್ಕೂ ಹೆಚ್ಚು ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

    ಅಕ್ಟೋಬರ್ 2 ರಂದು ದೆಹಲಿ ಪೊಲೀಸ್ (Delhi Police) ವಿಶೇಷ ಕೋಶದ ಹಿರಿಯ ಅಧಿಕಾರಿಗಳ ಸಭೆ ನಡೆದಿದ್ದು, ಪ್ರಕರಣವನ್ನು ಮುಂದಕ್ಕೆ ಕೊಂಡೊಯ್ಯುವ ಬಗ್ಗೆ ನಿರ್ಧರಿಸಿತ್ತು. ಅಂತಯೇ ದೆಹಲಿ, ನೋಯ್ಡಾ, ಗಾಜಿಯಾಬಾದ್, ಗುರುಗ್ರಾಮ್ ಮತ್ತು ಮುಂಬೈನ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಲಾಯಿತು. ಇದನ್ನೂ ಓದಿ: ಬಾಲ್ಯ ವಿವಾಹದ ವಿರುದ್ಧ ಸಮರ – ಮತ್ತೆ 800ಕ್ಕೂ ಅಧಿಕ ಮಂದಿಯ ಬಂಧನ

    ಮೂಲಗಳ ಪ್ರಕಾರ ದಾಳಿಗೆ ಒಳಗಾದವರ ಹೆಸರುಗಳನ್ನು ಎ, ಬಿ, ಸಿ ಎಂದು ವರ್ಗಗಳಾಗಿ ವಿಂಗಡಿಸಲಾಗಿತ್ತು. ಎ ವರ್ಗಕ್ಕೆ ಸೇರಿದವರನ್ನು ಬಂಧಿಸಲಾಗಿದೆ. ಬಿ ಮತ್ತು ಸಿ ನ್ಯೂಸ್ ಪೋರ್ಟಲ್‌ನ ಪತ್ರಕರ್ತರ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್‌ಗಳಿಂದ ಡೇಟಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನ್ಯೂಸ್‌ಕ್ಲಿಕ್‌ನ ಸಂಸ್ಥಾಪಕ ಮತ್ತು ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರನ್ನು ವಿಚಾರಣೆಗಾಗಿ ದೆಹಲಿ ಪೊಲೀಸ್ ವಿಶೇಷ ಸೆಲ್ ಕಚೇರಿಗೆ ಕರೆತರಲಾಯಿತು. ಇದನ್ನೂ ಓದಿ: ಇರುವುದೊಂದೇ ಸನಾತನ ಧರ್ಮ, ಉಳಿದೆಲ್ಲವೂ ಪಂಥಗಳು: ಯೋಗಿ

    ಆಗಸ್ಟ್ 17ರಂದು ಕಟ್ಟುನಿಟ್ಟಾದ ಭಯೋತ್ಪಾದನಾ-ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ದಾಖಲಾದ ಪ್ರಕರಣವನ್ನು ಆಧರಿಸಿ ದೆಹಲಿಯ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ದೆಹಲಿ ಮತ್ತು ನೋಯ್ಡಾ ಮತ್ತು ಗಾಜಿಯಾಬಾದ್‌ನ ನೆರೆಯ ಪ್ರದೇಶಗಳಲ್ಲಿ ದೆಹಲಿ ಪೊಲೀಸರ ವಿಶೇಷ ಸೆಲ್ ದಾಳಿ ನಡೆಸಿತು. ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಆದರೆ ಕೆಲವು ಪತ್ರಕರ್ತರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬಿಹಾರ ಜಾತಿ ಸಮೀಕ್ಷೆ ವರದಿ ಬಿಡುಗಡೆ; ಜಾತಿ ಹೆಸರಲ್ಲಿ ದೇಶ ವಿಭಜಿಸುವ ಪ್ರಯತ್ನವೆಂದು ಮೋದಿ ವಾಗ್ದಾಳಿ

    ಮೂರು ವರ್ಷಗಳ ಅವಧಿಯಲ್ಲಿ ಚೀನಾದೊಂದಿಗೆ ಸಂಪರ್ಕ ಹೊಂದಿದ ಸಂಸ್ಥೆಗಳಿಂದ ನ್ಯೂಸ್ ಪೋರ್ಟಲ್ 38.05 ಕೋಟಿ ರೂ.ಗಳನ್ನು ಪಡೆದಿದೆ ಎಂದು ಇಡಿ ಈ ಹಿಂದೆ ಆರೋಪಿಸಿತ್ತು. ಹೀಗೆ ಸ್ವೀಕರಿಸಿದ ಹಣವನ್ನು ಗೌತಮ್ ನವ್ಲಾಖಾ ಮತ್ತು ಹಕ್ಕುಗಳ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಸಹಚರರು ಸೇರಿದಂತೆ ಹಲವಾರು ವಿವಾದಾತ್ಮಕ ಪತ್ರಕರ್ತರಿಗೆ ಹಂಚಲಾಗಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಭಯೋತ್ಪಾದಕರಿಗೆ ಕಾಂಗ್ರೆಸ್‌ ಮುಕ್ತ ಅವಕಾಶ ಕೊಟ್ಟಿದೆ; ಉದಯಪುರ ಟೈಲರ್‌ ಹತ್ಯೆ ಖಂಡಿಸಿದ ಮೋದಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಕಾಡೆಮಿ ಪ್ರಶಸ್ತಿ ವಿಜೇತರಿಗೆ ವರದಿಗಾರರ ಕೂಟ ಅಭಿನಂದನೆ

    ಅಕಾಡೆಮಿ ಪ್ರಶಸ್ತಿ ವಿಜೇತರಿಗೆ ವರದಿಗಾರರ ಕೂಟ ಅಭಿನಂದನೆ

    ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ (Karnataka Media Academy) ಪ್ರಶಸ್ತಿ ವಿಜೇತ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮ ಬೆಂಗಳೂರಿನಲ್ಲಿ (Bengaluru) ನಡೆಯಿತು.

    ಬೆಂಗಳೂರು ವರದಿಗಾರರ ಕೂಟ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ ಮಾಧ್ಯಮ ಅಕಾಡೆಮಿ ಪ್ರಶಸ್ತಿ ವಿಜೇತರನ್ನು ಸಚಿವ ಗೋಪಾಲಯ್ಯ ಗೌರವಿಸಿ ಪುರಸ್ಕರಿಸಿದರು. ಅಕಾಡೆಮಿಯ ಪ್ರಶಸ್ತಿಗೆ ಭಾಜನರಾದ ಬೆಂಗಳೂರು ವರದಿಗಾರರ ಕೂಟದ ಸದಸ್ಯರನ್ನು ಗೌರವಿಸಲಾಯಿತು. ಇದನ್ನೂ ಓದಿ: ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಭವಿಷ್ಯ- ಆದೇಶ ಕಾಯ್ದಿರಿಸಿದ ಹೈಕೋರ್ಟ್

    ಪ್ರಶಸ್ತಿ ವಿಜೇತರಾದ ಎಸ್‌.ರಾಜಶೇಖರ್‌, ಅ.ಮ.ಸುರೇಶ್‌, ಸೋಮಸುಂದರ್‌ ರೆಡ್ಡಿ, ಕೆ.ಎನ್.ಪಂಕಜಾ, ಕೆಂಚೇಗೌಡ, ಹೆಚ್‌.ವಿ.ಕಿರಣ್‌, ಎ.ಎಂ.ಸುರೇಶ್‌, ಆರ್‌.ಹೆಚ್‌.ಜಯಪ್ರಕಾಶ್‌, ವಿ.ಎಸ್‌.ಸುಬ್ರಹ್ಮಣ್ಯ, ವಿಜಯ್‌ ಜೊನ್ನಹಳ್ಳಿ, ಶಿವಣ್ಣ, ಚಿದಾನಂದ ಪಟೇಲ್‌, ಬೇಲೂರು ಹರೀಶ್‌, ರವಿಶಂಕರ್‌, ಶಿವರಾಮ್‌, ರಾಮನಾಥ ಶೆಣೈ, ಎಂ.ಚಂದ್ರಶೇಖರ್‌, ಆರ್‌.ಶ್ರೀಧರ್ ಇವರಿಗೆ ಸಚಿವರು ಗೌರವ ಸಮರ್ಪಣೆ ಮಾಡಿದರು.

    ಇದೇ ವೇಳೆ ರಂಜಾನ್‌ ಸಾಬ್‌ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಬೆಲಗೂರು ಸಮೀವುಲ್ಲಾ ಅವರನ್ನೂ ಗೌರವಿಸಲಾಯಿತು.‌ ಇದನ್ನೂ ಓದಿ: ಇತಿಹಾಸದ ಪುಟ ತೆರೆದು ನೋಡಿದ್ರೆ ಉರಿಗೌಡ, ನಂಜೇಗೌಡನ ಹೆಸರಿದೆ: ಶೋಭಾ ಕರಂದ್ಲಾಜೆ

    ಹಿರಿಯ ಬಿಜೆಪಿ ಮುಖಂಡ ಕೆ.ಎನ್.ಚಕ್ರಪಾಣಿ, ಪ್ರೆಸ್‌ಕ್ಲಬ್‌ ಪ್ರಧಾನ ಕಾರ್ಯದರ್ಶಿ ಪಿ.ಬಿ.ಮಲ್ಲಪ್ಪ, ವರದಿಗಾರರ ಕೂಟದ ಉಪಾಧ್ಯಕ್ಷ ಆರ್‌.ಟಿ.ವಿಠಲಮೂರ್ತಿ, ಮಾಧ್ಯಮ ಅಕಾಡೆಮಿ ಸದಸ್ಯರಾದ ಕೆ.ಎಂ.ಶಿವರಾಜು, ಲಕ್ಷ್ಮೀ ನಾರಾಯಣ್‌, ಬದ್ರುದ್ದೀನ್‌ ಕೆ.ಮಾಣಿ, ಹಿರಿಯ ಪತ್ರಕರ್ತ ಸೋಮಣ್ಣ, ದೊಡ್ಡಬೊಮ್ಮಯ್ಯ ಸೇರಿದಂತೆ ಹಲವು ಹಿರಿಯ ಪತ್ರಕರ್ತರು ಈ ಸರಳ ಸಮಾರಂಭಕ್ಕೆ ಸಾಕ್ಷಿಯಾದರು.

    ಕರ್ನಾಟಕ ಮಾಧ್ಯಮ ಅಕಾಡೆಮಿ ಮಾರ್ಚ್‌ 13 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 2019, 2020, 2021 ಹಾಗೂ 2022 ಸಾಲಿನ ಪ್ರಶಸ್ತಿಗಳನ್ನು ನೀಡಿ ಗೌರವಿಸಿತ್ತು. ಇದನ್ನೂ ಓದಿ: ಉರಿಗೌಡ-ನಂಜೇಗೌಡ ಸಿನಿಮಾ : ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಿಡಿ

  • ಪತ್ರಕರ್ತರಿಗೆ ದೀಪಾವಳಿ ಗಿಫ್ಟ್ – ಕೊಟ್ಟಿರಬಹುದೇನೋ ಎಂದ ಆರಗ ಜ್ಞಾನೇಂದ್ರ

    ಪತ್ರಕರ್ತರಿಗೆ ದೀಪಾವಳಿ ಗಿಫ್ಟ್ – ಕೊಟ್ಟಿರಬಹುದೇನೋ ಎಂದ ಆರಗ ಜ್ಞಾನೇಂದ್ರ

    ಶಿವಮೊಗ್ಗ: ನನಗೆ ಗೊತ್ತಿರುವ ಹಾಗೆ ಸ್ವೀಟ್ಸ್, ಈ ಗಿಫ್ಟ್‌ಗಳನ್ನ (Diwali Gift) ಎಲ್ಲಾ ಸರ್ಕಾರದಲ್ಲೂ (Government) ಯಾವುದಾರೂ ಒಂದು ಸಂದರ್ಭದಲ್ಲಿ ಕೊಡ್ತಾರೆ. ಹಾಗೆ ಕೊಟ್ಟಿರಬಹುದೇನೋ ನನಗೆ ಏನೂ ಅರಿವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದ್ದಾರೆ.

    ಸಿಎಂ ಕಚೇರಿಯಿಂದ ಪತ್ರಕರ್ತರಿಗೆ (Journalists) ಗಿಫ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಮಾತನಾಡಿದ ಸಚಿವರು, ಗಿಫ್ಟ್ ವಿಚಾರದ ಬಗ್ಗೆ ಮುಖ್ಯಮಂತ್ರಿಗಳು (Chief Minister) ಈಗಾಗಲೇ ಎಲ್ಲಾ ಹೇಳಿದ್ದಾರೆ, ನಾನೇನು ಪ್ರತಿಕ್ರಿಯೆ ನೀಡಲ್ಲ. ಅದರ ಬಗ್ಗೆ ನನಗೆ ಮಾಹಿತಿಯೂ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ನಾನು ಯಾರಿಗೂ ಹಣ ನೀಡುವಂತೆ ಸೂಚನೆ ಕೊಟ್ಟಿಲ್ಲ : ಬೊಮ್ಮಾಯಿ

    ನನಗೆ ಗೊತ್ತಿರುವ ಹಾಗೆ ಸ್ವೀಟ್ಸ್ (Sweets), ಅದು-ಇದು ಗಿಫ್ಟ್‌ಗಳನ್ನ ಎಲ್ಲಾ ಸರ್ಕಾರಗಳು ನೀಡಿವೆ. ಯಾವುದಾರೂ ಸಂದರ್ಭದಲ್ಲಿ ಕೊಡ್ತಾರೆ. ಹಾಗೇ ಕೊಟ್ಟಿರಬಹುದೇನೋ ನನಗೆ ಏನೂ ಅರಿವಿಲ್ಲ. ಹಣ ಕೊಟ್ಟಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

    ಇನ್ಸ್ಪೆಕ್ಟರ್ ನಂದೀಶ್ ಹೃದಯಾಘಾತ (Heart Attack) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ, ಸಿಪಿಐ (CPI) ಅನಾರೋಗ್ಯದಿಂದ ತೀರಿ ಹೋಗಿದ್ದಾರೆ. ನನಗೆ ಬಂದಿರೋ ಮಾಹಿತಿ ಪ್ರಕಾರ, ಅವರ ಆರೋಗ್ಯ ಸರಿ ಇರಲಿಲ್ಲ ಎಂದು ಜಾರಿಕೊಂಡಿದ್ದಾರೆ.

    ಇನ್ನೂ `ಪೊಲೀಸ್ (Polic) ಹುದ್ದೆಗೆ 70-80 ಲಕ್ಷಕೊಟ್ಟು ಬರಬೇಕಿದೆ’ ಎನ್ನುವ ಎಂಟಿಬಿ ನಾಗರಾಜ್ ಆಡಿಯೋ ಹೇಳಿಕೆ ಬಗ್ಗೆ ಅವರೇ ಹೇಳಬೇಕು. ಲಂಚ ಕೊಟ್ಟಿರೋ ಬಗ್ಗೆ ನಿರ್ದಿಷ್ಟವಾಗಿ ಯಾರಾದರೂ ದೂರು ಕೊಟ್ಟರೆ ಪೊಲೀಸರಿಂದ ತನಿಖೆ ಮಾಡಿಸಬಹುದು ಎಂದು ಹಾರಿಕೆ ಉತ್ತರ ನೀಡಿದರು. ಇದನ್ನೂ ಓದಿ: ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ಕಿಡ್ನ್ಯಾಪ್ ನಾಟಕವಾಡಿದ 12ರ ಬಾಲಕ

    ಶಿವಮೊಗ್ಗದಲ್ಲಿನ ಗಲಾಟೆ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವರು, ಇಲ್ಲಿನ ಕೆಲವು ಶಕ್ತಿಗಳಿಗೆ ಕಾನೂನು ಅಂದ್ರೆ ಭಯ ಇಲ್ಲದಂತಾಗಿದೆ. ಅವರನ್ನು ಕಾನೂನು ವ್ಯಾಪ್ತಿಗೆ ತಂದು ಧಮನ ಮಾಡುವ ಎಲ್ಲ ಪ್ರಯತ್ನಗಳು ನಡೆಯುತ್ತಿವೆ. ಹಿಂದೆ ಶಿವಮೊಗ್ಗ ರೌಡಿಗಳ ಟ್ರೈನಿಂಗ್‌ ಸೆಂಟರ್ ಆಗಿತ್ತು. ಈಗ ಕಡಿಮೆ ಆಗಿದೆ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಭಾರತ್‌ ಜೋಡೋ ಯಾತ್ರೆ ವೇಳೆ ಪತ್ರಕರ್ತರ ಮೇಲೆ ಪೊಲೀಸರಿಂದ ಹಲ್ಲೆ

    ಭಾರತ್‌ ಜೋಡೋ ಯಾತ್ರೆ ವೇಳೆ ಪತ್ರಕರ್ತರ ಮೇಲೆ ಪೊಲೀಸರಿಂದ ಹಲ್ಲೆ

    ಮಂಡ್ಯ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ನೇತೃತ್ವದಲ್ಲಿ ಮಂಡ್ಯದಲ್ಲಿ ನಡೆಯುತ್ತಿರುವ ʼಭಾರತ್‌ ಜೋಡೋ ಪಾದಯಾತ್ರೆʼ (Bharat Jodo Yatra) ವರದಿ ಮಾಡುತ್ತಿದ್ದ ಪತ್ರಕರ್ತರ ಮೇಲೆ ಪೊಲೀಸರು ಹಲ್ಲೆ ಮಾಡಿರುವ ಘಟನೆ ನಡೆದಿದೆ.

    ಭಾರತ್‌ ಜೋಡೋ ಯಾತ್ರೆಗೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳು ಸುದ್ದಿ ವರದಿ ಮಾಡುತ್ತಿದ್ದಾಗ ಪೊಲೀಸರು ಹಲ್ಲೆ ಮಾಡಿದ್ದಾರೆ. ವರದಿಗಾರರು, ಕ್ಯಾಮೆರಾಮ್ಯಾನ್‌ ಮೇಲೆ ಮಂಡ್ಯ (Mandya) ಜಿಲ್ಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ಅಮ್ಮನ ಶೂ ಲೇಸ್ ಕಟ್ಟಿದ ರಾಹುಲ್

    ಘಟನೆಯಲ್ಲಿ ಹಲವರಿಗೆ ಗಾಯವಾಗಿದೆ. ಪೊಲೀಸರ ಗೂಂಡಾವರ್ತನೆಗೆ ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (D.K.Shivakumar) ಸೇರಿದಂತೆ ಅನೇಕ ಜನಪ್ರತಿನಿಧಿಗಳು ಖಂಡನೆ ವ್ಯಕ್ತಪಡಿಸಿದ್ದಾರೆ.

    ಹಲ್ಲೆ ಬಗ್ಗೆ ಮಂಡ್ಯ ಎಸ್‌ಪಿ ಮಾತನಾಡಿ, ನೂಕಾಟದ ಸಂದರ್ಭದಲ್ಲಿ ಪತ್ರಕರ್ತರು ಹಾಗೂ ನಮ್ಮ ಪೊಲೀಸರು ಬಿದ್ದಿದ್ದಾರೆ. ಈ ವೇಳೆ ನಾನು ಕೂಡ ಕೆಳಗೆ ಬಿದ್ದು, ಯೂನಿಫಾರ್ಮ್‌ನಲ್ಲಿದ್ದ ಹೆಸರಿನ ಪ್ಲೇಟ್‌ ಕೂಡ ಹರಿದಿದೆ. ನಮ್ಮ ಪೊಲೀಸರು ಹಲ್ಲೆ ನಡೆಸಿಲ್ಲ. ಸಾರ್ವಜನಿಕ ಸೇವೆ ಮಾಡುತ್ತಿರುವ ಪೊಲೀಸರು, ಪತ್ರಕರ್ತರು ಪರಸ್ಪರ ಸಹಕಾರದಿಂದಲೇ ಪಾದಯಾತ್ರೆ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಹಾಗೇನಾದರೂ ನಮ್ಮ ಪೊಲೀಸರು ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದರೆ, ವೀಡಿಯೋಗಳಿದ್ದರೆ ಸಾಕ್ಷಿಯನ್ನು ಪರಿಗಣಿಸಿ ಸಂಬಂಧಿತ ಅಧಿಕಾರಿ ವಿರುದ್ಧ ಶಿಸ್ತುಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಂದಿನಿಂದ ಭಾರತ್ ಜೋಡೋ ಪುನಾರಂಭ- ರಾಹುಲ್ ಜೊತೆ ಹೆಜ್ಜೆ ಹಾಕಲಿರೋ ಸೋನಿಯಾ

    ಘಟನೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಪ್ರತಿಕ್ರಿಯೆ, ಹಲ್ಲೆ ವಿಚಾರ ತಿಳಿದಿಲ್ಲ. ಸಂಬಂಧಪಟ್ಟವರಿಂದ ವಿವರಗಳನ್ನು ತರಿಸಿಕೊಂಡು ಪರಿಶೀಲಿಸುತ್ತೇನೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

    ರಾಹುಲ್‌ ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೋ ಯಾತ್ರೆಯು ಸದ್ಯ ಮಂಡ್ಯದಲ್ಲಿ ಸಾಗುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಜನ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಇಂದು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಕೂಡ ಪಾದಯಾತ್ರೆಯಲ್ಲಿ ಪಾಲ್ಗೊಂಡು ಪುತ್ರ ರಾಹುಲ್‌ ಗಾಂಧಿ ಸಾಥ್‌ ನೀಡಿದರು.

  • ಪತ್ರಕರ್ತರಿಗೆ ಉಚಿತ ಲ್ಯಾಪ್‌ಟಾಪ್ ಕೊಡುಗೆ

    ಪತ್ರಕರ್ತರಿಗೆ ಉಚಿತ ಲ್ಯಾಪ್‌ಟಾಪ್ ಕೊಡುಗೆ

    ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಮತ್ತು ವಾರ್ತಾ ಇಲಾಖೆ ಸಹಯೋಗದಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಅಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ ಮಾಡಲಾಯಿತು.

    ಇಲ್ಲಿನ ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಅನ್ನೋದೊಂದು ಶಕ್ತಿ: ಬಸವರಾಜ್ ರಾಯರೆಡ್ಡಿ

    Laptop

    ಬಳಿಕ ಮಾತನಾಡಿದ ಅವರು, ಸಮಾಜ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಲೋಪವಾದಾಗ ಅದನ್ನು ಎತ್ತಿ ಹಿಡಿದು ಸರಿಪಡಿಸುವ ಕೆಲಸ ಮಾಧ್ಯಮದವರು ಮಾಡಿದ್ದಾರೆ. ಮಾಧ್ಯಮದವರಿಗೆ ಇತಂಹ ಕಾರ್ಯಕ್ರಮಗಳನ್ನು ನೀಡುವುದರಿಂದ ಅವರು ತಮ್ಮ ಕೆಲಸದಲ್ಲಿ ಮತ್ತಷ್ಟು ಶಕ್ತರಾಗುತ್ತಾರೆ. ಲ್ಯಾಪ್‌ಟಾಪ್ ಪಡೆದ ಪತ್ರಕರ್ತರು ಅದನ್ನು ಉತ್ತಮವಾಗಿ ಬಳಸಿಕೊಳ್ಳಬೇಕು. ಪ.ಜಾತಿ, ಪಂಗಡದವರಿಗೆ ಎಲ್ಲ ರೀತಿಯ ಸವಲತ್ತುಗಳು ಸಿಗಬೇಕು ಎಂಬ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳು ಅತ್ಯವಶ್ಯ ಎಂದು ಹೇಳಿದರು.

    ಇದೇ ವೇಳೆ ರಾಜ್ಯದ ವಿವಿಧ ಜಿಲ್ಲೆಗಳ ಪ.ಜಾತಿ ಮತ್ತು ಪ.ಪಂಗಡ 25 ಪತ್ರಕರ್ತರಿಗೆ ಸಚಿವರು ಲ್ಯಾಪ್‌ಟಾಪ್ ವಿತರಣೆ ಮಾಡಿದರು. ಇದನ್ನೂ ಓದಿ: ಯುಗಾದಿ ವೇಳೆ ಹಲಾಲ್ ಮಾಂಸ ಬಹಿಷ್ಕರಿಸಿ – ಹಿಂದೂ ಜನಜಾಗೃತಿ ಸಮಿತಿ ಕರೆ 

    LAptop

    ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ, ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಆಯುಕ್ತ ಡಾ.ಪಿ.ಎಸ್ ಹರ್ಷ, ಅಕಾಡೆಮಿ ಕಾರ್ಯದರ್ಶಿ ರೂಪಾ, ಸದಸ್ಯರಾದ ಶಿವಾನಂದ ತಗಡೂರು, ಬದ್ರುದ್ದೀನ್, ಕೆ.ಎಂಶಿವರಾಜ್, ಶಿವಕುಮಾರ ಬೆಳ್ಳಿತಟ್ಟೆ, ಲಕ್ಷ್ಮೀನಾರಾಯಣ, ದೇವೇಂದ್ರ ಕಪನೂರು, ನಾಗಾರ್ಜುನ್, ಜಗನ್ನಾಥ ಶೆಟ್ಟಿ, ಗೋಪಾಲ ಯಡಗೆರೆ, ಕಂಕಂ ಮೂರ್ತಿ ಸೇರಿದಂತೆ ಹಲವು ಹಿರಿಯ ಪತ್ರಕರ್ತರು ಉಪಸ್ಥಿತರಿದ್ದರು.

     

  • ರಷ್ಯಾ-ಉಕ್ರೇನ್ ಯುದ್ಧ: ಕನಿಷ್ಟ 12 ಮಂದಿ ಪತ್ರಕರ್ತರ ಹತ್ಯೆ

    ರಷ್ಯಾ-ಉಕ್ರೇನ್ ಯುದ್ಧ: ಕನಿಷ್ಟ 12 ಮಂದಿ ಪತ್ರಕರ್ತರ ಹತ್ಯೆ

    ಕೀವ್: ಫೆಬ್ರವರಿ 24 ರಂದು ಉಕ್ರೇನ್‍ನಲ್ಲಿ ರಷ್ಯಾ ನಡೆಸಿದ ಭೀಕರ ಮಿಲಿಟರಿ ದಾಳಿ ಪ್ರಾರಂಭವಾದಾಗಿನಿಂದ 12 ಪತ್ರಕರ್ತರು ಮತ್ತು ಮಾಧ್ಯಮ ವೃತ್ತಿಪರರು ಉಕ್ರೇನ್‍ನಲ್ಲಿ ಕೊಲ್ಲಲ್ಪಟ್ಟಿದ್ದಾರೆ ಎಂದು ಉಕ್ರೇನ್‍ನ ಪ್ರಾಸಿಕ್ಯೂಟರ್ ಜನರಲ್ ಐರಿನಾ ವೆನೆಡಿಕ್ಟೋವಾ ಹೇಳಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಯುದ್ಧದಿಂದಾಗಿ ಹಾನಿಗೊಳಗಾದ ರಾಷ್ಟ್ರದ ದುರಾವಸ್ಥೆಯ ಪೋಸ್ಟ್‍ವೊಂದನ್ನು ಹಂಚಿಕೊಂಡ ಅವರು, ಯುದ್ಧದ ಸಮಯದಲ್ಲಿ ಕನಿಷ್ಟ 12 ಮಂದಿ ಪತ್ರಕರ್ತರು ಬಲಿಪಶುಗಳಾಗಿದ್ದಾರೆ. ಇದರೊಂದಿಗೆ ಯುದ್ಧದ ತಿವ್ರತೆಯಿಂದಾಗಿ ಗಂಭೀರ ಗಾಯಗಳನ್ನು ಅನುಭವಿಸುತ್ತಿರುವ ಇತರ 10 ಪತ್ರಕರ್ತರು ಕೂಡಾ ಇದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ದಿಗ್ವಿಜಯ್ ಸಿಂಗ್ ಸಹಿತ 6 ಮಂದಿಗೆ 1 ವರ್ಷ ಜೈಲು ಶಿಕ್ಷೆ

    ಪ್ರಾಸಿಕ್ಯೂಟರ್ ಜನರಲ್ ಪ್ರಕಾರ, ರಷ್ಯಾದ ಮಿಲಿಟರಿಯು ಒಟ್ಟು 56 ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದು, ಅದರಲ್ಲಿ 15 ಅನ್ಯ ದೇಶದ ಪತ್ರಕರ್ತರಿದ್ದಾರೆ. 15 ರಲ್ಲಿ, ನಾಲ್ವರು ಯುಕೆಯಿಂದ ಬಂದವರು. ಜೆಕ್ ರಿಪಬ್ಲಿಕ್, ಡೆನ್ಮಾರ್ಕ್, ಯುಎಸ್, ಯುನೈಟೆಡ್ ಅರಬ್ ಎಮಿರೇಟ್ಸ್‍ನಿಂದ ತಲಾ ಎರಡು, ಮತ್ತು ಸ್ವಿಟ್ಜಲೆರ್ಂಡ್‍ನ ಒಬ್ಬರು ಎಂದು ವರದಿ ನೀಡಿದ್ದಾರೆ.

    ಉಕ್ರೇನ್‍ನಲ್ಲಿ ನಡೆದ ಇತ್ತೀಚಿನ ಘಟನೆಯೊಂದರಲ್ಲಿ, ಉಕ್ರೇನ್‍ನ ಇಬ್ಬರು ಪ್ರಜೆಗಳು ಮತ್ತು ಟರ್ಕಿಶ್ ಟಿಆರ್‍ಟಿ ವಲ್ರ್ಡ್ ಟಿವಿ ಚಾನೆಲ್‍ಗಳ ಕ್ಯಾಮರಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಕಾರು ಶುಕ್ರವಾರ ಯುದ್ಧ ರಹಿತ ನಗರವಾದ ಚೆರ್ನಿಹಿವ್‍ನಿಂದ ಚಿತ್ರೀಕರಣವನ್ನು ಸ್ಥಳಾಂತರಿಸುವ ಸಮಯದಲ್ಲಿ ಗುಂಡಿನ ದಾಳಿಗೆ ಒಳಗಾಯಿತು. ಈ ವೇಳೆ ವರದಿಗಾರ ಆಂಡ್ರಿ ತ್ಸಾಪ್ಲಿಯೆಂಕೊ ದಾಳಿಗೆ ಒಳಗಾಗಿದ್ದು, ಅದೃಷ್ಟವಶಾತ್ ಚಿಕ್ಕ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

    ರಷ್ಯಾದ ಪಡೆಗಳು ಯುದ್ಧದ ಕಾನೂನುಗಳನ್ನು ಮರೆತಿದ್ದು, ಈಗಾಗಲೇ ಶೆಲ್ ದಾಳಿ ನಡೆಸಿ ಅನೇಕ ಟಿವಿ ಟವರ್‍ಗಳು ಮತ್ತು ಟಿವಿ ಮತ್ತು ರೇಡಿಯೊ ಕಂಪನಿಗಳನ್ನು ಧ್ವಂಸ ಮಾಡಿದ್ದಾರೆ. ಇನ್ಸ್ಟಿಟ್ಯೂಟ್ ಆಫ್ ಮಾಸ್ ಮೀಡಿಯಾದ ಸಹಕಾರದೊಂದಿಗೆ ಪ್ರಾಸಿಕ್ಯೂಟರ್ ಕಚೇರಿಯು ಈಗಾಗಲೇ ಪತ್ರಕರ್ತರ ವಿರುದ್ಧದ ಅಪರಾಧಗಳನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ವೆನೆಡಿಕ್ಟೋವಾ ಹೇಳಿದರು.

    ಅವರ ಮೇಲ್ವಿಚಾರಣೆಯ ಪ್ರಕಾರ, ರಷ್ಯಾದ ಪೂರ್ಣ ಪ್ರಮಾಣದ ಆಕ್ರಮಣದ ಆರಂಭದಿಂದಲೂ ಉಕ್ರೇನ್‍ನಲ್ಲಿ ಪತ್ರಕರ್ತರು ಮತ್ತು ಮಾಧ್ಯಮಗಳ ವಿರುದ್ಧ 148 ಕಾನೂನುಬಾಹಿರ ಕ್ರಮಗಳನ್ನು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ತರಬೇತಿ ನಿರತ ಐಆರ್‌ಬಿ ಪೊಲೀಸ್ ಹೃದಯಾಘಾತದಿಂದ ಸಾವು

    ಫೆಬ್ರವರಿ 24 ರಂದು ರಷ್ಯಾ ಉಕ್ರೇನಿಯನ್ ನೆಲದಲ್ಲಿ ‘ಮಿಲಿಟರಿ ಕಾರ್ಯಾಚರಣೆ’ ಪ್ರಾರಂಭಗೊಂಡಿದೆ. ಇಲ್ಲಿಯವರೆಗೆ, ವಿಶ್ವಸಂಸ್ಥೆಯ ವರದಿಯ ಪ್ರಕಾರ 6.5 ಮಿಲಿಯನ್‍ಗಿಂತಲೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ. ಹೆಚ್ಚುವರಿಯಾಗಿ, ಸಂಘರ್ಷ ಪ್ರಾರಂಭವಾದಾಗಿನಿಂದ ಉಕ್ರೇನ್‍ನಲ್ಲಿ ಕನಿಷ್ಠ 816 ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ ಎಂದು ವರದಿ ನೀಡಿದೆ.

  • ಪತ್ರಕರ್ತರ ಕಲ್ಯಾಣಕ್ಕೆ ಸರ್ಕಾರ ಬದ್ಧ: ಕೆ.ಗೋಪಾಲಯ್ಯ

    ಪತ್ರಕರ್ತರ ಕಲ್ಯಾಣಕ್ಕೆ ಸರ್ಕಾರ ಬದ್ಧ: ಕೆ.ಗೋಪಾಲಯ್ಯ

    ಬೆಂಗಳೂರು: ಪತ್ರಕರ್ತರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದೆ. ಪತ್ರಕರ್ತರ ಕಲ್ಯಾಣಕ್ಕೆ ಸರ್ಕಾರ ಬದ್ಧ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಅಭಿಪ್ರಾಯಪಟ್ಟಿದ್ದಾರೆ.

    ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಗಪುರದಲ್ಲಿರುವ ಶಾಸಕರ ಕಚೇರಿಯಲ್ಲಿಂದು ಪತ್ರಕರ್ತರಿಗೆ ಇ-ಶ್ರಮ ಕಾರ್ಡ್‍ಗಳನ್ನು ವಿತರಿಸಿ ಮಾತನಾಡಿದ ಅವರು, ಸಾಮಾಜಿಕ ಭದ್ರತೆ ಸೇರಿದಂತೆ ಸರ್ಕಾರದ ವಿವಿಧ ಪ್ರಯೋಜನಗಳನ್ನು ಇ-ಶ್ರಮ ಮೂಲಕ ಪಡೆಯಬಹುದಾಗಿದೆ. ರಾಜ್ಯದ ಶ್ರಮಿಕ ವರ್ಗದ ಜನರ ಅಭ್ಯುದಯಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಇ-ಕಾರ್ಡ್‍ನ ಪ್ರಯೋಜನವನ್ನು ಪ್ರತಿಯೊಬ್ಬ ಪತ್ರಕರ್ತರು ಪಡೆದುಕೊಳ್ಳಬೇಕೆಂದು ಸಚಿವರು ಮನವಿ ಮಾಡಿದರು. ಇದನ್ನೂ ಓದಿ: ತಾಜ್ ಮಹಲ್‌ಗೆ 3 ದಿನಗಳ ಉಚಿತ ಪ್ರವೇಶ

    ಬಳಿಕ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಜನರಿಗೆ ಲೇಬರ್ ಕಾರ್ಡ್ ವಿತರಿಸಿದರು. ಜನರಿಗೆ ಇದು ಒಂದೇ ಅಲ್ಲ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಸಾಕಷ್ಟು ಸೌಲಭ್ಯ ಒದಗಿಸಲಾಗಿದೆ ಅದನ್ನು ಸದುಪಯೋಗ ಪಡಿಸಿಕೊಳ್ಳಿ ಎಂದರು.

    ಕಾರ್ಯಕ್ರಮದಲ್ಲಿ ಬಿಬಿಎಂಪಿ ಮಾಜಿ ಉಪಮೇಯರ್ ಹೇಮಲತಾ ಕೆ.ಗೋಪಾಲಯ್ಯ, ರಾಜ್ಯ ಕಾರ್ಯನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಇತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ – PSI ನೇಮಕಾತಿಗೆ ತಡೆ: ಆರಗ ಜ್ಞಾನೇಂದ್ರ

  • ದ.ಕ.ಪತ್ರಕರ್ತರ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ನಟಿ ರಚಿತಾ ರಾಮ್

    ದ.ಕ.ಪತ್ರಕರ್ತರ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ನಟಿ ರಚಿತಾ ರಾಮ್

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಸ್ಯಾಂಡಲ್‍ವುಡ್ ನಟಿ ರಚಿತಾ ರಾಮ್ ಬಿಡುಗಡೆಗೊಳಿಸಿದ್ದಾರೆ.

    ಪತ್ರಕರ್ತರ ಸಂಘದ ವತಿಯಿಂದ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಡಿಸೆಂಬರ್ 28 ರಂದು ಪತ್ರಕರ್ತರ ಜಿಲ್ಲಾ ಸಮ್ಮೇಳನ ನಡೆಯಲಿದೆ. ಸಾಧನ ಸಂಭ್ರಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕನ್ನಡ ಚಲನಚಿತ್ರ ನಟಿ ರಚಿತಾ ರಾಮ್  ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬಿಡುಗಡೆಗೊಳಿಸಿ, ಸಮ್ಮೇಳನ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಇದನ್ನೂ ಓದಿ: ರಾಯನ್ ರಾಜ್ ಸರ್ಜಾ ಕ್ರಿಸ್‍ಮಸ್ ಸಂಭ್ರಮ ಹೇಗಿತ್ತು ಗೊತ್ತಾ?

    ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಉಪ ಪೊಲೀಸ್ ಆಯುಕ್ತರಾದ ಹರಿರಾಮ್ ಶಂಕರ್, ದಿನೇಶ್, ಅನಘ ರಿಫೈನರೀಸ್ ಆಡಳಿತ ನಿರ್ದೇಶಕ ಸಾಂಬಶಿವ ರಾವ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ್ ರೈ ಕಟ್ಟ ಉಪಸ್ಥಿತರಿದ್ದರು. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ: ನಳಿನ್ ಕುಮಾರ್ ಕಟೀಲ್

  • ವಿಶ್ವದಲ್ಲಿ 488 ಪತ್ರಕರ್ತರಿಗೆ ಜೈಲು ವಾಸ- ಚೀನಾ ನಂ.1

    ವಿಶ್ವದಲ್ಲಿ 488 ಪತ್ರಕರ್ತರಿಗೆ ಜೈಲು ವಾಸ- ಚೀನಾ ನಂ.1

    ನವದೆಹಲಿ: ತಮ್ಮ ವರದಿಗಳ ಕಾರಣದಿಂದಾಗಿ ವಿಶ್ವದಲ್ಲಿ 488 ಪತ್ರಕರ್ತರು ಜೈಲು ವಾಸ ಅನುಭವಿಸುತ್ತಿದ್ದಾರೆ. ಅಲ್ಲದೇ 46 ಪತ್ರಕರ್ತರು ಹತ್ಯೆಯಾಗಿದ್ದಾರೆ ಎಂಬ ಆಘಾತಕಾರಿ ವಿಚಾರ ರಿಪೋರ್ಟರ್ಸ್ ವಿತೌಟ್ ಬಾರ್ಡರ್ಸ್ (ಆರ್‍ಎಸ್‍ಎಫ್) ಬಿಡುಗಡೆ ಮಾಡಿರುವ ವರದಿಯಿಂದ ಬೆಳಕಿಗೆ ಬಂದಿದೆ.

    jail

    ಅತಿ ಹೆಚ್ಚು ಪತ್ರಕರ್ತರನ್ನು ಜೈಲಿಗೆ ಹಾಕಿರುವ ಚೀನಾ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿದೆ. ಚೀನಾ ದೇಶದಲ್ಲೇ 127 ಪತ್ರಕರ್ತರು ಸೆರೆವಾಸ ಅನುಭವಿಸುತ್ತಿದ್ದಾರೆ. ಇದನ್ನೂ ಓದಿ: ವುಹಾನ್‍ ಕೊರೊನಾದ ಭೀಕರತೆಯ ವರದಿ – ಗಟ್ಟಿಗಿತ್ತಿ ಪತ್ರಕರ್ತೆಗೆ 4 ವರ್ಷ ಜೈಲು ಶಿಕ್ಷೆ

    ಮೆಕ್ಸಿಕೊ ದೇಶದಲ್ಲಿ 7, ಅಫ್ಘಾನಿಸ್ತಾನದಲ್ಲಿ 6 ಪತ್ರಕರ್ತರು ಹತ್ಯೆಗೀಡಾಗಿದ್ದು, ಅಪಾಯಕಾರಿ ದೇಶಗಳು ಎಂದು ಕರೆಸಿಕೊಂಡಿವೆ. ತಲಾ ನಾಲ್ಕು ಪತ್ರಕರ್ತರು ಹತ್ಯೆಯಾಗಿರುವ ಯೆಮನ್, ಭಾರತ ದೇಶಗಳು ಸಹ ಇದೇ ಸಾಲಿನಲ್ಲಿವೆ.

    ಮ್ಯಾನ್ಮಾರ್, ಬೆಲಾರಸ್ ಮತ್ತು ಹಾಂಗ್‍ಕಾಂಗ್‍ನಲ್ಲಿ ಮಾಧ್ಯಮಗಳ ಮೇಲಿನ ದಬ್ಬಾಳಿಕೆ ಹೆಚ್ಚಿದ್ದು, ಬಂಧಿತ ಪತ್ರಕರ್ತರ ಸಂಖ್ಯೆಯು ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ. 20ರಷ್ಟು ಹೆಚ್ಚಾಗಿದೆ. ಹತ್ಯೆಗೀಡಾದ ಪತ್ರಕರ್ತರಲ್ಲಿ ಶೇ. 64ರಷ್ಟು ಮಂದಿ ಉದ್ದೇಶಿತ ಕಾರಣಗಳಿಗೆ ಟಾರ್ಗೆಟ್ ಆದವರಾಗಿದ್ದಾರೆ ಎಂಬ ವಿಚಾರವನ್ನು ವರದಿ ಬಹಿರಂಗಪಡಿಸಿದೆ. ಇದನ್ನೂ ಓದಿ: 2 ತಿಂಗಳ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಂಡ ವುಹಾನ್ ಪತ್ರಕರ್ತ