Tag: ಪತ್ರಿಕೆ

  • ಪತ್ರಿಕಾ ವಿತರಕರಿಗೆ ಸಾಮಾಜಿಕ ಭದ್ರತೆ: ಅಶ್ವಥ್ ನಾರಾಯಣ ಭರವಸೆ

    ಪತ್ರಿಕಾ ವಿತರಕರಿಗೆ ಸಾಮಾಜಿಕ ಭದ್ರತೆ: ಅಶ್ವಥ್ ನಾರಾಯಣ ಭರವಸೆ

    ಬೆಂಗಳೂರು: ಬಹಳ ರಿಸ್ಕ್ ತೆಗೆದುಕೊಂಡು ಮನೆ ಮನೆಗೂ ಬೆಳಗ್ಗೆಯೇ ಪತ್ರಿಕೆ ಮುಟ್ಟಿಸುವ ಪತ್ರಿಕಾ ವಿತರಕರಿಗೆ ಸಾಮಾಜಿಕ ಭದ್ರತೆ ಬಹಳ ಮುಖ್ಯ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ವಹಿಸುತ್ತದೆ ಎಂದು ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದರು.

    ಬೆಂಗಳೂರಿನಲ್ಲಿ ಶನಿವಾರ ಪತ್ರಿಕಾ ವಿತರಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಮಳೆ ಇರಲಿ, ಚಳಿ ಇರಲಿ ಅಥವಾ ಯಾವುದೇ ತುರ್ತು ಸಂದರ್ಭವೂ ಇರಲಿ. ಬೆಳಗ್ಗೆ ನಾವು ನಿದ್ದೆಯಿಂದ ಏಳುವುದಕ್ಕೆ ಮುನ್ನವೇ ಪತ್ರಿಕೆ ನಮ್ಮ ಮನೆಯ ಅಂಗಳದಲ್ಲಿರುತ್ತದೆ. ಇದಕ್ಕೆ ಕಾರಣರಾದವರನ್ನು ಅಲಕ್ಷ್ಯ ಮಾಡುವಂತಿಲ್ಲ ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ಇನ್ನೆರಡು ದಿನ ಮಳೆ- ಹವಾಮಾನ ಇಲಾಖೆ ಮುನ್ಸೂಚನೆ

    ಕೋವಿಡ್ ಸಮಯದಲ್ಲಿಯೂ ನಮ್ಮ ಮನೆಗೆ ಪತ್ರಿಕೆ ಬರುವುದು ನಿಲ್ಲಲಿಲ್ಲ. ತಮ್ಮ ಜೀವವನ್ನೂ ಲೆಕ್ಕಿಸದೇ ಮನೆಮನೆಗೂ ಪತ್ರಿಕೆ ಮುಟ್ಟಿಸಿದ್ದು ವಿತರಕರ ವೃತ್ತಿ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೊಚ್ಚೆ ನೀರೇ ಕುಡಿದಿದ್ದೇನೆ – ಹೆಚ್‍ಡಿಕೆಗೆ ಜೆಡಿಎಸ್ ಶಾಸಕ ಟಾಂಗ್

    ಸಾಮಾಜಿಕವಾಗಿ ವೃತ್ತಿ ತಾರತಮ್ಯ ಇರಬಾರದು. ಮನೆ ಮನೆಗೂ ಪತ್ರಿಕೆ ತಲುಪಿಸುವ ಪತ್ರಿಕಾ ವಿತರಕರನ್ನು ನಾವು ಮುಖ್ಯವಾಹಿನಿಯಲ್ಲಿ ಎಲ್ಲ ವೃತ್ತಿಪರರಿಗೂ ಸಿಗುವಂಥ ಸೌಲಭ್ಯಗಳು ಸಿಗಬೇಕು. ಸರ್ಕಾರದಿಂದ ಸಿಗಬಹುದಾದ ಎಲ್ಲ ಅನುಕೂಲಗಳನ್ನು ಮಾಡಿಕೊಡಲಾಗುವುದು. ಪ್ರತಿದಿನ ಬೆಳಗ್ಗೆ ಸೂರ್ಯೋದಯಕ್ಕೆ ಮುನ್ನವೇ ನಮಗೆ ಪತ್ರಿಕೆ ತಲುಪಿಸುವ ವಿತರಕರು, ಬಹುಬೇಗ ನಿದ್ದೆಯಿಂದ ಎದ್ದು, ನಿಷ್ಠೆಯಿಂದ ಕೆಲಸ ಮಾಡುತ್ತಾರೆ. ಅವರಿಗೆ ರಜೆ ಎಂಬುದೇ ಅಪರೂಪ. ಇವರ ಕಷ್ಟಕ್ಕೆ ನಾವು ಮಿಡಿಯಬೇಕು ಎಂದು ಸಚಿವರು ನುಡಿದರು.

    ಅಸಂಘಟಿತ ವಲಯಕ್ಕೆ ಪತ್ರಿಕಾ ವಿತರಕರು:
    ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಮಾತನಾಡಿ, ವಿತರಕರನ್ನು ಕಾರ್ಮಿಕ ಇಲಾಖೆ ವ್ಯಾಪ್ತಿಗೆ ತಂದು ಅವರನ್ನು ಅಸಂಘಟಿತ ವಲಯಕ್ಕೆ ಸೇರ್ಪಡೆ ಮಾಡುವುದಾಗಿ ಭರವಸೆ ನೀಡಿದರು. ವಸತಿ ಸಚಿವ ವಿ.ಸೋಮಣ್ಣ ಮಾತನಾಡಿ, ಪತ್ರಿಕಾ ವಿತರಕರ ಪರವಾಗಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

  • ಪತ್ರಕರ್ತರು ಜನರ ಧ್ವನಿಯಾಗಿ ಕೆಲಸ ಮಾಡಬೇಕು: ಎಸ್.ಪಿ ಋಷಿಕೇಶ್ ಸೋನಾವಣೆ

    ಪತ್ರಕರ್ತರು ಜನರ ಧ್ವನಿಯಾಗಿ ಕೆಲಸ ಮಾಡಬೇಕು: ಎಸ್.ಪಿ ಋಷಿಕೇಶ್ ಸೋನಾವಣೆ

    -“ಪತ್ರಿಕಾ ದಿನಾಚರಣೆ- ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ”

    ಮಂಗಳೂರು: ಪ್ರಜಾಪ್ರಭುತ್ವದ ಪ್ರಮುಖ ಅಂಗವಾಗಿರುವ ಪತ್ರಕರ್ತರು ಸಮಾಜದಲ್ಲಿ ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡಿದಾಗ ಅದಕ್ಕೆ ಪೂರಕವಾಗಿ ಇಲಾಖೆಯಿಂದಲೂ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಅಭಿಪ್ರಾಯಪಟ್ಟಿದ್ದಾರೆ.

    ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್‍ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ನ ಸಹಕಾರದಲ್ಲಿ ಆಯೋಜಿಸಲಾದ ಪತ್ರಿಕಾ ದಿನಾಚರಣೆ ಹಾಗೂ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಋಷಿಕೇಶ್ ಸೋನಾವಣೆ ಅವರು, ಧನಾತ್ಮಕ ಪ್ರತಿಕ್ರಿಯೆಯ ಕಾರ್ಯವಿಧಾನ ಸಮಾಜದಲ್ಲಿ ಅಭಿವೃದ್ಧಿಯ ದಿಕ್ಕಿನಲ್ಲಿ ಅತೀ ಅಗತ್ಯವಾಗಿದ್ದು, ಪತ್ರಕರ್ತರು ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು.

    ಈ ಸಂದರ್ಭ ಕನ್ನಡ ಪ್ರಭ ಪತ್ರಿಕೆಯ ಹಿರಿಯ ವರದಿಗಾರ ಡಾ. ಸಂದೀಪ್ ವಾಗ್ಲೆ ಅವರಿಗೆ ಪ್ರಸಕ್ತ ಸಾಲಿನ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಮಾಡಲಾಯಿತು.

    ನಾಳೆಯ ಪತ್ರಕರ್ತರು: ಉಪನ್ಯಾಸ
    ಹಿರಿಯ ಪತ್ರಕರ್ತ ಜೋಗಿ (ಗಿರೀಶ್ ರಾವ್ ಹತ್ವಾರ್) ಅವರು ನಾಳೆಯ ಪತ್ರಕರ್ತರು ಎಂಬ ವಿಷಯದ ಕುರಿತು ಮಾತನಾಡಿ, ಪತ್ರಿಕೋದ್ಯಮದಲ್ಲಿ ಮುಂದಿನ 10 ವರ್ಷಗಳಲ್ಲಿ ನಿರೀಕ್ಷಿಸಲಾಗಿದ್ದ ಸ್ಥಿತ್ಯಂತರವನ್ನು ಕೊರೊನದಿಂದಾಗಿ ಕಳೆದ ಎರಡು ವರ್ಷಗಳಲ್ಲೇ ಅನುಭವಿಸುವಂತಾಗಿದೆ. ಕೊರೊನ ಸಾಂಕ್ರಾಮಿಕದಿಂದಾಗಿ ಬಹಳಷ್ಟು ಪತ್ರಿಕೆಗಳ ಮುದ್ರಣ ನಿಂತು ಹೋಗಿ ಆನ್‍ಲೈನ್ ಪತ್ರಿಕೆಯಾಗಿ ಹೊಸ ಸ್ವರೂಪವನ್ನು ಪಡೆಯುತ್ತಿದೆ. ಕಳೆದ ಹಲವು ವರ್ಷಗಳಿಂದಲೂ ಮುದ್ರಣ ಮಾಧ್ಯಮ ಕೊನೆಯಾಗುತ್ತದೆ ಎಂಬ ಭೀತಿಯನ್ನೇ ಎದುರಿಸುತ್ತಿದೆ. ಆದರೆ ವಾಸ್ತವದಲ್ಲಿ ಮುದ್ರಣ ಮಾಧ್ಯಮ ಕಾಲಕ್ಕನುಸಾರವಾಗಿ ಹೊಸ ಸ್ವರೂಪ, ವಿನ್ಯಾಸದೊಂದಿಗೆ ನಮಗೆ ಲಭ್ಯವಾಗುತ್ತದೆ. ಮುದ್ರಣ ಮಾಧ್ಯಮಕ್ಕೆ ಇರುವ ನಂಬಿಕೆ ಇದಕ್ಕೆ ಕಾರಣ ಎಂದು ಸಂವಾದದ ವೇಳೆ ಕಿರಿಯ ಪತ್ರಕರ್ತರೊಬ್ಬರ ಪ್ರಶ್ನೆಗೆ ಜೋಗಿಯವರು ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಅಂಬುಲೆನ್ಸ್‌ಗೆ ದಾರಿ ಬಿಡದೇ ಕಿ.ಮೀಗಟ್ಟಲೇ ಚಾಲನೆ – ಕಾರು ಚಾಲಕ ಅರೆಸ್ಟ್

    ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿರಾಜ್ ಎಚ್.ಜಿ, ಮಂಗಳೂರು ಪ್ರೆಸ್‍ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಿ.ಬಿ ಹರೀಶ್ ರೈ ಕಾರ್ಯಕ್ರಮ ನಿರೂಪಿಸಿದರು. ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು.

  • ಗೆಳೆಯನಿಗೆ ಮದ್ವೆ ಆಮಂತ್ರಣ ಪತ್ರಿಕೆ ನೀಡಿದ ಚಂದನ್

    ಗೆಳೆಯನಿಗೆ ಮದ್ವೆ ಆಮಂತ್ರಣ ಪತ್ರಿಕೆ ನೀಡಿದ ಚಂದನ್

    ಬೆಂಗಳೂರು: ‘ಬಿಗ್‍ಬಾಸ್ ಸೀಸನ್ 5’ ವಿನ್ನರ್ ಚಂದನ್ ಶೆಟ್ಟಿ ತಮ್ಮ ಮದುವೆಗೆ ‘ಬಿಗ್‍ಬಾಸ್ ಸೀಸನ್ 7’ ರ ವಿನ್ನರ್ ಶೈನ್ ಶೆಟ್ಟಿಯನ್ನು ಆಹ್ವಾನಿಸಿದ್ದಾರೆ.

    ಶೈನ್ ಮತ್ತು ಚಂದನ್ ಶೆಟ್ಟಿ ಇಬ್ಬರು ಸ್ನೇಹಿತರು. ಇದೀಗ ಗೆಳೆಯರಿಬ್ಬರು ಬಹುದಿನಗಳ ನಂತರ ಭೇಟಿಯಾದ ಸಂತಸವನ್ನು ಶೈನ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. “ಬಿಗ್‍ಬಾಸ್-5 ವಿನ್ನರ್ ಚಂದನ್ ಶೆಟ್ಟಿ ಜೊತೆ” ಎಂದು ಬರೆದುಕೊಂಡಿದ್ದು, ಜೊತೆಗೆ ಅವರೊಟ್ಟಿರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ.

    ಚಂದನ್ ಹಾಗೂ ನಿವೇದಿತಾ ಇದೇ ತಿಂಗಳು 25 ಮತ್ತು 26 ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಇವರ ಮದುವೆ ಮೈಸೂರಿನ ಕನ್ವೆನ್ಶನ್ ಹಾಲ್‍ನಲ್ಲಿ ನಡೆಯಲಿದೆ. ಚಂದನ್ ಸದ್ಯಕ್ಕೆ ಮದುವೆ ಆಮಂತ್ರಣ ನೀಡುವಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾರಂಗದವರಿಗೆ ತಮ್ಮ ಮದುವೆಯ ಆಮಂತ್ರಣ ಪತ್ರಿಯನ್ನು ನೀಡುತ್ತಿದ್ದಾರೆ.

    ಇತ್ತೀಚೆಗೆಷ್ಟೆ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ,  ದರ್ಶನ್ ಅವರನ್ನು ಭೇಟಿ ಮಾಡಿ, ತಮ್ಮ ಮದುವೆಗೆ ಆಹ್ವಾನಿಸಿದ್ದರು. ದರ್ಶನ್ ಅವರನ್ನು ಭೇಟಿಯಾಗಿದ್ದ ಸಂತಸವನ್ನು ಚಂದನ್ ಮತ್ತು ನಿವೇದಿತಾ ಇನ್‍ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದರು.

    https://www.instagram.com/p/B8ZI__1nCyx/

    ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ಅಭಿಮಾನಿಗಳ ಮುಂದೆ ಗೆಳತಿ ನಿವೇದಿತಾರಿಗೆ ಪ್ರಪೋಸ್ ಮಾಡಿದ್ದರು. ವೇದಿಕೆಯಲ್ಲಿಯೇ ರಿಂಗ್ ತೊಡಿಸಿ ತಮ್ಮ ಪ್ರೇಮ ವಿಚಾರವನ್ನು ಚಂದನ್ ಅಧಿಕೃತವಾಗಿ ಹೇಳಿಕೊಂಡಿದ್ದರು. ಬಳಿಕ ಅಕ್ಟೋಬರ್ 21ರಂದು ಚಂದನ್ ಶೆಟ್ಟಿ ತಮ್ಮ ಆತ್ಮೀಯ ಗೆಳತಿ ಬಾರ್ಬಿ ಗರ್ಲ್ ನಿವೇದಿತಾ ಗೌಡ ಜೊತೆ ಮೈಸೂರಿನ ಖಾಸಗಿ ಹೋಟೆಲಿನಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.