ಕನ್ನಡ ಚಿತ್ರೋದ್ಯಮದ ಚುಟುಚುಟು ಹುಡುಗಿ ಎಂದೇ ಖ್ಯಾತಿಯಾಗಿರುವ ಆಶಿಕಾ ರಂಗನಾಥ್(Ashika Ranganath), ಇಂದು ಹುಟ್ಟು ಹಬ್ಬವನ್ನು (Birthday) ಆಚರಿಸಿಕೊಳ್ಳುತ್ತಿದ್ದಾರೆ. ಪ್ರತಿ ಬಾರಿಯೂ ಅಭಿಮಾನಿಗಳ ಜೊತೆ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದ ಸುಂದರಿ, ಈ ಬಾರಿ ಊರಲ್ಲಿ ಇರದೇ ಇರುವ ಕಾರಣಕ್ಕಾಗಿ ಅಭಿಮಾನಿಗಳಿಗೆ ಕ್ಷಮೆ ಕೇಳಿದ್ದಾರೆ.
ಕಳೆದ ಬಾರಿ ನಿಮ್ಮೊಂದಿಗೆ ನಾನು ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದೆ. ಆ ನೆನಪು ಇನ್ನೂ ಹಾಗೆಯೇ ಇದೆ. ಕ್ಷಮಿಸಿ, ಈ ಬಾರಿಯ ಹುಟ್ಟುಹಬ್ಬಕ್ಕೆ ನಿಮ್ಮ ಜೊತೆ ಇರಲು ನನಗೆ ಸಾಧ್ಯವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಒಳ್ಳೆಯ ಪ್ಲ್ಯಾನ್ ಮಾಡೋಣ’ ಎಂದು ಆಶಿಕಾ ಅಭಿಮಾನಿಗಳಿಗೆ (Fans) ತಿಳಿಸಿದ್ದಾರೆ. ಇದನ್ನೂ ಓದಿ:‘ರಾ’ ಏಜೆಂಟ್ ಆಗಿ ಬಾಲಿವುಡ್ ಪ್ರವೇಶ ಮಾಡಲಿದ್ದಾರೆ ‘ಪಾಕ್ ಪ್ರೇಮಿ’ ಸೀಮಾ
ಪ್ರತಿ ಬಾರಿಯೂ ನೆಚ್ಚಿನ ನಟಿಯ ಹುಟ್ಟು ಹಬ್ಬಕ್ಕಾಗಿ ಮನೆ ಮುಂದೆ ಜಮಾಯಿಸುತ್ತಿದ್ದ ಅಭಿಮಾನಿಗಳಿಗೆ ‘ಮನೆಗೆ ಬರಬೇಡಿ. ನಾನು ಇರುವುದಿಲ್ಲ’ ಎಂದು ಬರೆದ ಪತ್ರ ನಿರಾಸೆ ಮೂಡಿಸಿದೆ. ಆದರೂ, ಕೆಲವರು ಆಶಿಕಾ ಮನೆ ಮುಂದೆ ಬಂದು ನಿರಾಸೆಯಿಂದ ವಾಪಸ್ಸಾಗಿದ್ದಾರೆ.
ಇತ್ತೀಚೆಗೆ ಆಶಿಕಾ ರಂಗನಾಥ್ ಯಾವುದೇ ಸಿನಿಮಾ ಒಪ್ಪಿಕೊಂಡಂತೆ ಕಾಣುತ್ತಿಲ್ಲ. ಹಾಗಾಗಿ ಈ ಬಾರಿ ಯಾವುದೇ ಸಿನಿಮಾದ ಪೋಸ್ಟರ್ ಕೂಡ ರಿಲೀಸ್ ಆಗಿಲ್ಲ. ಆದರೂ, ಖುಷಿಯಿಂದ ಇರುವ ಆಶಿಕಾ ಈ ಬಾರಿಯ ಹುಟ್ಟು ಹಬ್ಬವನ್ನು ಎಲ್ಲಿ ಆಚರಿಸಿಕೊಂಡಿದ್ದಾರೆ ಎನ್ನುವ ಕುತೂಹಲ ಅವರ ಅಭಿಮಾನಿಗಳದ್ದು.
ತಮ್ಮ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ನಟ ಸುದೀಪ್ (Sudeep) ಸುದೀರ್ಘವಾಗಿ ಚಲನಚಿತ್ರ ವಾಣಿಜ್ಯ ಮಂಡಳಿ (Film Chamber), ಚಲನಚಿತ್ರ ನಿರ್ಮಾಪಕರ ಸಂಘ ಮತ್ತು ಕಲಾವಿದರ ಸಂಘಕ್ಕೆ ಪತ್ರ ಬರೆದರೂ, ಆರೋಪಗಳು ಮಾತ್ರ ನಿಲ್ಲುತ್ತಿಲ್ಲ. ವಾರದ ಹಿಂದೆಯಷ್ಟೇ ನಿರ್ಮಾಪಕ ಎನ್.ಎಂ. ಕುಮಾರ್ (NM Kumar) ತಮಗೆ ಸುದೀಪ್ ಕಾಲ್ ಶೀಟ್ ನೀಡುತ್ತಿಲ್ಲವೆಂದು ಆರೋಪ ಮಾಡಿದ್ದರೆ, ನಿನ್ನೆಯಷ್ಟೇ ಮತ್ತೋರ್ವ ನಿರ್ಮಾಪಕ ರೆಹಮಾನ್ (Rahman) ಕೂಡ ಸುದೀಪ್ ಅವರಿಂದ ತಮಗೆ ಹಾನಿಯಾಗಿದೆ ಎಂದು ಪತ್ರಿಕಾಗೋಷ್ಠಿ ನಡೆಸಿದ್ದರು.
ಇವತ್ತು ಸುದೀಪ್ ಅವರ ಆಪ್ತ ಜಾಕ್ ಮಂಜು (Jack Manju) ಮತ್ತೊಂದು ಪತ್ರಿಕಾಗೋಷ್ಠಿಯನ್ನು ಆಯೋಜನೆ ಮಾಡಿದ್ದಾರೆ. ಸುದೀಪ್ ಬಗ್ಗೆ ಆರೋಪ ಮಾಡಿದ ರೆಹಮಾನ್ ಜೊತೆಯಲ್ಲೇ ಪತ್ರಿಕಾಗೋಷ್ಠಿ ಮಾಡುವುದಾಗಿ ತಿಳಿಸಿದ್ದಾರೆ. ರೆಹಮಾನ್ ಬರುತ್ತಾರೋ ಅಥವಾ ಇಲ್ಲವೋ ಗೊತ್ತಿಲ್ಲ. ಆದರೆ, ಸುದೀಪ್ ಮೇಲಿನ ಆರೋಪಗಳಿಗೆ ತಾವು ಉತ್ತರಿಸುವುದಾಗಿ ಜಾಕ್ ಮಂಜು ಹೇಳಿದ್ದಾರೆ. ಜೊತೆಗೆ ಸುದೀಪ್ ಅವರ ಅಭಿಮಾನಿಗಳು ಕೂಡ ಇಂದು ವಾಣಿಜ್ಯ ಮಂಡಳಿಗೆ ಮುತ್ತಿಗೆ ಹಾಕುವುದಾಗಿ ಸಂದೇಶವನ್ನು ರವಾನಿಸಿದ್ದಾರೆ.
ಕುಮಾರ್ ಅವರು ಮಾಡಿದ ಆರೋಪಕ್ಕೆ ಈಗಾಗಲೇ ಸುದೀಪ್ ಕಾನೂನು ಮೂಲಕವೇ ಉತ್ತರಿಸಿದ್ದಾರೆ. ತಮ್ಮ ಮೇಲೆ ಸುಖಾಸುಮ್ಮನೆ ಆರೋಪ ಮಾಡಿ, ತಮ್ಮ ವ್ಯಕ್ತಿತ್ವಕ್ಕೆ ಕುಮಾರ್ ಧಕ್ಕೆ ತರುತ್ತಿದ್ದಾರೆ ಎಂದು ಮಾನನಷ್ಟ ನೋಟಿಸ್ ಕಳುಹಿಸಿದ್ದಾರೆ. ಬರೋಬ್ಬರಿ 10 ಕೋಟಿ ರೂಪಾಯಿ ಮಾನನಷ್ಟ ಕಟ್ಟಿಕೊಡಬೇಕು ಎಂದು ನೋಟಿಸ್ ನಲ್ಲಿ ಉಲ್ಲೇಖಿಸಿದ್ದಾರೆ. ನೋಟಿಸ್ ಕಳುಹಿಸುತ್ತಿದ್ದಂತೆಯೇ ಕುಮಾರ್ ಮತ್ತೆ ಪತ್ರಿಕಾಗೋಷ್ಠಿ ನಡೆಸಿ ಸುದೀಪ್ ತಮಗೆ ಮೋಸ ಮಾಡಿದ್ದು ನಿಜ ಎಂದು ಮತ್ತೆ ನುಡಿದಿದ್ದರು.
ಈ ಎಲ್ಲ ಆರೋಪ ಪ್ರತ್ಯಾರೋಪಕ್ಕೆ ಉತ್ತರ ಎನ್ನುವಂತೆ ಸುದೀಪ್, ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ ಮತ್ತು ಕಲಾವಿದರ ಸಂಘಕ್ಕೆ ಪತ್ರ ಬರೆದಿದ್ದಾರೆ. ಮೂರು ಸಂಸ್ಥೆಗಳು ನಿರ್ಮಾಪಕರ ಪರ ನಿಲ್ಲಬೇಕೋ ಅಥವಾ ಕಲಾವಿದರ ಪರ ನಿಲ್ಲಬೇಕೋ ಎನ್ನುವ ಸಂದಿಗ್ಧತೆಗೆ ಒಳಗಾಗದೇ ನನ್ನ ಮೇಲೆ ಬಲವಂತದ ಒತ್ತಡ ಹಾಕದೆ, ನ್ಯಾಯಾಲಯದಲ್ಲೇ ಇದನ್ನು ಬಗೆಹರಿಸಿಕೊಳ್ಳಲು ಬಿಡಿ. ನಾನೇನಾದರೂ ತಪ್ಪು ಮಾಡಿದ್ದರೆ, ನ್ಯಾಯಾಯಲದಲ್ಲೇ ಶಿರಬಾಗಿ ಒಪ್ಪಿಕೊಂಡು ದಂಡ ಕಟ್ಟುತ್ತೇನೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
‘ವಾಣಿಜ್ಯ ಮಂಡಳಿಗೆ ನಿರ್ಮಾಪಕರೊಬ್ಬರು ಮೊರೆ ಬಂದಿರುವುದು ಸರಿ ಅಷ್ಟೇ. ಸ್ಪಂದಿಸಬೇಕಾದದ್ದು ನಿಮ್ಮ ಕರ್ತವ್ಯ. ನೀವು ಸ್ಪಂದಿಸಿದ್ದೀರಿ. ಆ ಬಗ್ಗೆ ನನಗೆ ಯಾವುದೇ ತಕರಾರು ಇರುವುದಿಲ್ಲ. ಯಾವುದೇ ನಿರ್ಮಾಪಕರು, ಯಾರೇ ಕಲಾವಿದರು, ತಂತ್ರಜ್ಞರ ಮೇಲೆ ನಿರಾಧಾರ ಸುಳ್ಳು ಆರೋಪಗಳನ್ನು ಮಾಡುವಾಗ, ಕನಿಷ್ಠ ದಾಖಲಾತಿಗಳನ್ನು ಪರಿವೀಕ್ಷಿಸುವುದು ಮಾತೃ ಸಂಸ್ಥೆಗಳಾದ ನಿಮ್ಮದೂ ಜವಾಬ್ದಾರಿ ಆಗಿರುತ್ತದೆಂದು ವಿನಮ್ರತೆಯಿಂದ ಮನವಿ ಮಾಡುತ್ತೇನೆ ಎಂದು ಮಾತೃ ಸಂಸ್ಥೆಗಳಿಗೂ ಕಿಚ್ಚ ಪಾಠ ಮಾಡಿದ್ದಾರೆ.
27 ವರ್ಷಗಳ ಕಾಲ ನಾನೂ ಎಂದಾದರೂ ಒಂದೇ ಒಂದು ಕಪ್ಪು ಚುಕ್ಕೆ ಬೀಳುವಂತೆ ನಡೆದುಕೊಂಡಿಲ್ಲ. 80 ವರ್ಷಗಳ ಕಾಲ ಚಿತ್ರರಂಗದ ರಥ ಎಳೆದು ಬಂದಿರುವುದು, ಈ ನಂಬಿಕೆ ಎಂಬ ಹಗ್ಗದ ಮೇಲೇಯೆ. ಆ ನಂಬಿಕೆಯ ಹಗ್ಗದ ಮೇಲೆಯೇ ನಾನು ವಿಶೇಷ ಪಾತ್ರಗಳನ್ನು ಹೊರತು ಪಡಿಸಿ, 45 ಸಿನಿಮಾಗಳಲ್ಲಿ ದಾಖಲೆಯಾಗಿ ಉಳಿದಿದ್ದೇನೆ. ನನಗೂ ಬಹುಪಾಲು ನಿರ್ಮಾಪಕರಿಂದ ಹಣ ಬರಬೇಕಿದೆ. ಎಂದಾದರೂ ಮಂಡಳಿಯ ಕದ ತಟ್ಟಿದ್ದೇನೆಯೇ? ಈವರೆಗೂ ಈ ನಿಮ್ಮ ಪ್ರೀತಿಯ ಸುದೀಪ ಒಳ್ಳೆತನಕ್ಕೆ ಉದಾಹರಣೆ ಆಗಿದ್ದಾನೆ ಹೊರತು ಕೆಟ್ಟತನಕ್ಕಲ್ಲ ಎಂದು ಹೇಳುವ ಮೂಲಕ ತಮಗೂ ನಿರ್ಮಾಪಕರಿಂದ ಬಾಕಿ ಬರಬೇಕಾಗಿದ್ದನ್ನೂ ನೆನಪಿಸಿದ್ದಾರೆ.
ಚಿತ್ರರಂಗದ ಮುಂದಿನ ಭವಿಷ್ಯಕ್ಕೆ ಕೆಟ್ಟ ಉದಾಹರಣೆ ದಕ್ಕಬಾರದು ಎಂದು ಇಷ್ಟು ಕಠಿಣವಾದ ಹೋರಾಟ ಮಾಡುತ್ತಿರುವುದಾಗಿ ಕಿಚ್ಚ ಪತ್ರದಲ್ಲಿ ಬರೆದಿದ್ದಾರೆ. ಯಾರದ್ದೋ ಆಗಲಿ ಜೀವನ-ಜೀವ ಉಳಿಸಲು ಪ್ರಯತ್ನಿಸಿದ್ದೇನೇ ಹೊರತು, ಯಾರ ಜೀವ ಹೋಗಲೂ ನಾನು ಬದುಕಿನುದ್ದಕ್ಕೂ ಸಾಕ್ಷಿಯಾಗಲಾರೆ ಎಂದು ಹೇಳುವ ಮೂಲಕ ಎನ್.ಎಂ. ಸುರೇಶ್ ಅವರಿಗೂ ಇದೇ ಪತ್ರದಲ್ಲಿ ಉತ್ತರ ನೀಡಿದ್ದಾರೆ.
ಕಿಚ್ಚ ಸುದೀಪ್ ಮೇಲೆ ನಿರ್ಮಾಪಕ ಎನ್.ಎಮ್. ಕುಮಾರ್ (NM Kumar) ಗುರುತರ ಆರೋಪ ಮಾಡಿದ್ದರು. ತಮ್ಮಿಂದ ಸಿನಿಮಾ ಮಾಡಲು ಮುಂಗಡ ಹಣ ತೆಗೆದುಕೊಂಡು ಕಾಲ್ ಶೀಟ್ ನೀಡುತ್ತಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ನೋವು ಹೊರಹಾಕಿದ್ದರು. ಹಲವು ವರ್ಷಗಳಿಂದ ತಾವು ಸುದೀಪ್ ಅವರ ಕಾಲ್ ಶೀಟ್ ಗಾಗಿ ಕಾಯುತ್ತಿದ್ದರೂ, ಅವರು ಪರಭಾಷಾ ನಿರ್ಮಾಪಕರಿಗೆ ಕಾಲ್ ಶೀಟ್ ನೀಡಿ ತಮಗೆ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.
ಈ ಆರೋಪಕ್ಕೆ ಸುದೀಪ್ (Sudeep) ಕಾನೂನು ಮೂಲಕವೇ ಉತ್ತರಿಸಿದ್ದರು. ತಮ್ಮ ಮೇಲೆ ಸುಖಾಸುಮ್ಮನೆ ಆರೋಪ ಮಾಡಿ, ತಮ್ಮ ವ್ಯಕ್ತಿತ್ವಕ್ಕೆ ಕುಮಾರ್ ಧಕ್ಕೆ ತರುತ್ತಿದ್ದಾರೆ ಎಂದು ಮಾನನಷ್ಟ ನೋಟಿಸ್ ಕಳುಹಿಸಿದ್ದರು. ಬರೋಬ್ಬರಿ 10 ಕೋಟಿ ರೂಪಾಯಿ ಮಾನನಷ್ಟ ಕಟ್ಟಿಕೊಡಬೇಕು ಎಂದು ನೋಟಿಸ್ ನಲ್ಲಿ ಉಲ್ಲೇಖಿಸಿದ್ದರು. ನೋಟಿಸ್ ಕಳುಹಿಸುತ್ತಿದ್ದಂತೆಯೇ ಕುಮಾರ್ ಮತ್ತೆ ಪತ್ರಿಕಾಗೋಷ್ಠಿ ನಡೆಸಿ ಸುದೀಪ್ ತಮಗೆ ಮೋಸ ಮಾಡಿದ್ದು ನಿಜ ಎಂದು ಮತ್ತೆ ನುಡಿದಿದ್ದರು. ಇದನ್ನೂ ಓದಿ:ವಿಶೇಷ ಆಮ್ಲಜನಕ ಚಿಕಿತ್ಸೆಯ ಮೊರೆ ಹೋದ ಸಮಂತಾ
ಈ ಎಲ್ಲ ಆರೋಪ ಪ್ರತ್ಯಾರೋಪಕ್ಕೆ ಉತ್ತರ ಎನ್ನುವಂತೆ ಸುದೀಪ್, ಚಲನಚಿತ್ರ ವಾಣಿಜ್ಯ ಮಂಡಳಿ (Film Chamber), ನಿರ್ಮಾಪಕರ ಸಂಘ ಮತ್ತು ಕಲಾವಿದರ ಸಂಘಕ್ಕೆ ಪತ್ರ (Letter) ಬರೆದಿದ್ದಾರೆ. ಮೂರು ಸಂಸ್ಥೆಗಳು ನಿರ್ಮಾಪಕರ ಪರ ನಿಲ್ಲಬೇಕೋ ಅಥವಾ ಕಲಾವಿದರ ಪರ ನಿಲ್ಲಬೇಕೋ ಎನ್ನುವ ಸಂದಿಗ್ಧತೆಗೆ ಒಳಗಾಗದೇ ನನ್ನ ಮೇಲೆ ಬಲವಂತದ ಒತ್ತಡ ಹಾಕದೆ, ನ್ಯಾಯಾಲಯದಲ್ಲೇ ಇದನ್ನು ಬಗೆಹರಿಸಿಕೊಳ್ಳಲು ಬಿಡಿ. ನಾನೇನಾದರೂ ತಪ್ಪು ಮಾಡಿದ್ದರೆ, ನ್ಯಾಯಾಯಲದಲ್ಲೇ ಶಿರಬಾಗಿ ಒಪ್ಪಿಕೊಂಡು ದಂಡ ಕಟ್ಟುತ್ತೇನೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
‘ವಾಣಿಜ್ಯ ಮಂಡಳಿಗೆ ನಿರ್ಮಾಪಕರೊಬ್ಬರು ಮೊರೆ ಬಂದಿರುವುದು ಸರಿಯಷ್ಟೇ. ಸ್ಪಂದಿಸಬೇಕಾದದ್ದು ನಿಮ್ಮ ಕರ್ತವ್ಯ. ನೀವು ಸ್ಪಂದಿಸಿದ್ದೀರಿ. ಆ ಬಗ್ಗೆ ನನಗೆ ಯಾವುದೇ ತಕರಾರು ಇರುವುದಿಲ್ಲ. ಯಾವುದೇ ನಿರ್ಮಾಪಕರು, ಯಾರೇ ಕಲಾವಿದರು, ತಂತ್ರಜ್ಞರ ಮೇಲೆ ನಿರಾಧಾರ ಸುಳ್ಳು ಆರೋಪಗಳನ್ನು ಮಾಡುವಾಗ, ಕನಿಷ್ಠ ದಾಖಲಾತಿಗಳನ್ನು ಪರಿವೀಕ್ಷಿಸುವುದು ಮಾತೃ ಸಂಸ್ಥೆಗಳಾದ ನಿಮ್ಮದೂ ಜವಾಬ್ದಾರಿ ಆಗಿರುತ್ತದೆಂದು ವಿನಮ್ರತೆಯಿಂದ ಮನವಿ ಮಾಡುತ್ತೇನೆ ಎಂದು ಮಾತೃ ಸಂಸ್ಥೆಗಳಿಗೂ ಕಿಚ್ಚ ಪಾಠ ಮಾಡಿದ್ದಾರೆ.
27 ವರ್ಷಗಳ ಕಾಲ ನಾನೂ ಎಂದಾದರೂ ಒಂದೇ ಒಂದು ಕಪ್ಪು ಚುಕ್ಕೆ ಬೀಳುವಂತೆ ನಡೆದುಕೊಂಡಿಲ್ಲ. 80 ವರ್ಷಗಳ ಕಾಲ ಚಿತ್ರರಂಗದ ರಥ ಎಳೆದು ಬಂದಿರುವುದು, ಈ ನಂಬಿಕೆ ಎಂಬ ಹಗ್ಗದ ಮೇಲೇಯೆ. ಆ ನಂಬಿಕೆಯ ಹಗ್ಗದ ಮೇಲೆಯೇ ನಾನು ವಿಶೇಷ ಪಾತ್ರಗಳನ್ನು ಹೊರತು ಪಡಿಸಿ, 45 ಸಿನಿಮಾಗಳಲ್ಲಿ ದಾಖಲೆಯಾಗಿ ಉಳಿದಿದ್ದೇನೆ. ನನಗೂ ಬಹುಪಾಲು ನಿರ್ಮಾಪಕರಿಂದ ಹಣ ಬರಬೇಕಿದೆ. ಎಂದಾದರೂ ಮಂಡಳಿಯ ಕದ ತಟ್ಟಿದ್ದೇನೆಯೇ? ಈವರೆಗೂ ಈ ನಿಮ್ಮ ಪ್ರೀತಿಯ ಸುದೀಪ ಒಳ್ಳೆತನಕ್ಕೆ ಉದಾಹರಣೆ ಆಗಿದ್ದಾನೆ ಹೊರತು ಕೆಟ್ಟತನಕ್ಕಲ್ಲ ಎಂದು ಹೇಳುವ ಮೂಲಕ ತಮಗೂ ನಿರ್ಮಾಪಕರಿಂದ ಬಾಕಿ ಬರಬೇಕಾಗಿದ್ದನ್ನೂ ನೆನಪಿಸಿದ್ದಾರೆ.
ಚಿತ್ರರಂಗದ ಮುಂದಿನ ಭವಿತವ್ಯಕ್ಕೆ ಕೆಟ್ಟ ಉದಾಹರಣೆ ದಕ್ಕಬಾರದು ಎಂದು ಇಷ್ಟು ಕಠಿಣವಾದ ಹೋರಾಟ ಮಾಡುತ್ತಿರುವುದಾಗಿ ಕಿಚ್ಚ ಪತ್ರದಲ್ಲಿ ಬರೆದಿದ್ದಾರೆ. ಯಾರದ್ದೋ ಆಗಲಿ ಜೀವನ-ಜೀವ ಉಳಿಸಲು ಪ್ರಯತ್ನಿಸಿದ್ದೇನೇ ಹೊರತು, ಯಾರ ಜೀವ ಹೋಗಲೂ ನಾನು ಬದುಕಿನುದ್ದಕ್ಕೂ ಸಾಕ್ಷಿಯಾಗಲಾರೆ ಎಂದು ಹೇಳುವ ಮೂಲಕ ಎನ್.ಎಂ. ಸುರೇಶ್ ಅವರಿಗೂ ಇದೇ ಪತ್ರದಲ್ಲಿ ಉತ್ತರ ನೀಡಿದ್ದಾರೆ.
ಬೆಂಗಳೂರು: ಚುನಾವಣಾ ಮೂಡ್‌ನಲ್ಲಿರುವ ಪ್ರಧಾನಿ ಮೋದಿ (Narendra Modi) ಅವರು ಸರ್ಕಾರದ ಅಧಿಕೃತ ಕಾರ್ಯಕ್ರಮಗಳನ್ನು ವಿಪಕ್ಷಗಳನ್ನು ಹಳಿಯೋಕೆ ಬಳಸುತ್ತಿರುವುದು ಎಷ್ಟು ಸರಿ? ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಪ್ರಶ್ನಿಸಿದ್ದಾರೆ. ಈ ಕುರಿತಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಗೆ ಗುಂಡೂರಾವ್ ಪತ್ರ ಬರೆದಿದ್ದಾರೆ.
ಪತ್ರದಲ್ಲೆನಿದೆ?
ಸಿಕಲ್ ಸೆಲ್ ರಕ್ತಹೀನ ನಿವಾರಣೆ ಮಿಷನ್‌ಗೆ ಚಾಲನೆ ನೀಡುವ ಸರ್ಕಾರಿ ಕಾರ್ಯಕ್ರಮವನ್ನು ಪ್ರಧಾನಿ ಮೋದಿಯವರು ವಿಪಕ್ಷಗಳನ್ನು ಹಳಿಯಲು ಬಳಸಿಕೊಂಡರು ಎಂದು ಗುಂಡೂರಾವ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ವರ್ಚುವಲ್ ಮೂಲಕ ಕಾರ್ಯಕ್ರಮಕ್ಕೆ ಪ್ರಧಾನಿ ಅವರು ಚಾಲನೆ ನೀಡಿಲಿದ್ದು, ರಾಜ್ಯದ ಆರೋಗ್ಯ ಸಚಿವರ ಜೊತೆ ವೀಡಿಯೋ ಕಾನ್ಫರೆನ್ಸ್ನಲ್ಲಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸರ್ಕಾರ ನಮಗೆ ಆಹ್ವಾನಿಸಿತ್ತು. ರಾಜ್ಯದ ಆರೋಗ್ಯ ಸಚಿವನಾಗಿ ನಾನು ವಿಕಾಸ ಸೌಧದಿಂದ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ್ದೆ. ಆದರೆ ಮೋದಿಯವರು ಯಾರೊಂದಿಗೂ ಚರ್ಚಿಸದೇ ವಿಪಕ್ಷಗಳನ್ನು ದೂಷಿಸುವ ಭಾಷಣ ಮಾಡಿದರು.
ಸಿಕಲ್ ಸೆಲ್ ರಕ್ತಹೀನ ಕಾಯಿಲೆ ನಿವಾರಣೆ ಕುರಿತು ಪ್ರಧಾನಿ ಮೋದಿಯವರು ಈಗ ಮಾತಾಡುತ್ತಿದ್ದಾರೆ. ಆದರೆ ಸಿಕಲ್ ಸೆಲ್ ನಿವಾರಣೆ ಕುರಿತು ದೇಶದಲ್ಲೇ ಮೊದಲು ಜಾಗೃತಗೊಂಡಿದ್ದ ರಾಜ್ಯ ಕರ್ನಾಟಕ. 2016 ರಿಂದಲೇ ಕರ್ನಾಟಕ ಸರ್ಕಾರ ಸಿಕಲ್ ಸೆಲ್ ಕಾಯಿಲೆ ವಿರುದ್ಧ ಕಾರ್ಯಕ್ರಮಗಳನ್ನು ಹಾಕಿಕೊಂಡು ಬಂದಿದೆ. 2016 ರಲ್ಲಿ ರಾಜ್ಯದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೈಸೂರು ಭಾಗದ ಬುಡಕಟ್ಟು ಜನರ ತಪಾಸಣೆ ನಡೆಸಿ ಪಾಸಿಟಿವ್ ಬಂದವರಿಗೆ ಉಚಿತ ಆರೋಗ್ಯ ಚಿಕಿತ್ಸೆ ನೀಡುತ್ತಿದೆ. ಇದನ್ನೂ ಓದಿ: ಇಂದು ಬಾಂಬ್ ಹಾಕಿದವರ ದೇಶಕ್ಕೆ ನುಗ್ಗಿ ಹೊಡೆಯೋ ಸಾಮರ್ಥ್ಯ ನಮ್ಮಲ್ಲಿದೆ: ಜೋಶಿ
ಸಿಕಲ್ ಸೆಲ್ ಕಾಯಿಲೆಯನ್ನು ಕರ್ನಾಟಕ ರಾಜ್ಯ ತಡೆಗಟ್ಟುತ್ತಿರುವ ಕ್ರಮಗಳ ಬಗ್ಗೆ ಪ್ರಧಾನಿ ಮೋದಿಯವರು ರಾಜ್ಯ ಸರ್ಕಾರದ ಅಭಿಪ್ರಾಯ ಕೇಳುತ್ತಾರೆ ಎಂಬ ನಿರೀಕ್ಷೆಯಲ್ಲಿ ರಾಜ್ಯದ ಆರೋಗ್ಯ ಸಚಿವನಾಗಿ ನಾನು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಆದರೆ ಪ್ರಧಾನಿ ಅವರು ತಮ್ಮ ಪಕ್ಷದ ಚುನಾವಣಾ ಭಾಷಣಕ್ಕೆ ನಮ್ಮ ಸಮಯ ವ್ಯರ್ಥಮಾಡಿದರು. ಮೋದಿಯವರು ಎಲ್ಲರಿಗೂ ನಿರಾಶೆ ಉಂಟುಮಾಡಿದರು ಎಂದು ಪತ್ರದಲ್ಲಿ ಗುಂಡೂರಾವ್ ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಜಾತಿಗಣತಿ ವರದಿಯನ್ನು ಸ್ವೀಕರಿಸುತ್ತೇವೆ, ಎಷ್ಟೇ ಕಷ್ಟ ಬಂದರೂ ಐದು ಗ್ಯಾರಂಟಿಗಳನ್ನು ಜಾರಿ ಮಾಡುತ್ತೇನೆ: ಸಿಎಂ
ಕೊಪ್ಪಳ: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಸಿದ್ದರಾಮಯ್ಯ (Siddaramaiah) ಕೊಪ್ಪಳದ ವಿದ್ಯಾರ್ಥಿನಿ (Student) ತಮಗೆ ಬರೆದಿರುವ ಅಭಿನಂದನಾ ಪತ್ರ (Letter) ಓದಿ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿನಿಯ ಸಾಮಾಜಿಕ ಕಾಳಜಿ ಕೊಂಡಾಡಿರುವ ಅವರು, ಮರಳಿ ವಿದ್ಯಾರ್ಥಿನಿಗೆ ಪತ್ರ ಬರೆದು ತಮ್ಮ ಆನಂದವನ್ನು ವ್ಯಕ್ತಪಡಿಸಿದ್ದಾರೆ.
ಕೊಪ್ಪಳ (Koppal) ನಗರದ ಮಾಸ್ತಿ ಪಬ್ಲಿಕ್ ಸ್ಕೂಲ್‌ನ 8ನೇ ತರಗತಿ ವಿದ್ಯಾರ್ಥಿನಿ ಶ್ರೆಯಾಂಕ ವಿ ಮೆಣಸಗಿ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2ನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆ ಇತ್ತೀಚೆಗೆ ಅಭಿನಂದನಾ ಪತ್ರ ಬರೆದಿದ್ದಳು.
ಪತ್ರದ ಮುಖೇನ ವಿದ್ಯಾರ್ಥಿನಿ ಸಿದ್ದರಾಮಯ್ಯ 2013ರ ಅವಧಿಯಲ್ಲಿ ಸಿಎಂ ಆಗಿದ್ದಾಗ ಮಾಡಿದ ಕಾರ್ಯಗಳಾದ ಅನ್ನಭಾಗ್ಯ, ಶೂ ಭಾಗ್ಯ ಸೇರಿದಂತೆ ಹಲವು ಜನಪರ ಕಾರ್ಯಗಳನ್ನು ಪ್ರಸ್ತಾಪಿಸಿ, ಇದೇ ರೀತಿಯಾಗಿ ಈ ಬಾರಿಯೂ ಉತ್ತಮ ಆಡಳಿತ ನೀವು ನೀಡಬೇಕು ಎಂದು ಅಭಿಲಾಷೆ ವ್ಯಕ್ತಪಡಿಸಿದ್ದಳು.
ಪ್ರೀತಿಯ ಶ್ರೇಯಾಂಕ, ತಾವು ಬರೆದ ಅಭಿನಂದನಾ ಪತ್ರ ತಲುಪಿದೆ. 8ನೇ ತರಗತಿ ಓದುತ್ತಿರುವ ನಿನಗಿರುವ ಸಾಮಾಜಿಕ ಕಳಕಳಿ ಮೆಚ್ಚುವಂತಹದ್ದು. ಈ ಎಳೆಯ ವಯಸ್ಸಿನಲ್ಲಿ ಬಡವರು, ದೀನ-ದಲಿತರು, ರೈತರ ಬಗೆಗಿನ ನಿನ್ನ ಕಾಳಜಿ ಬೆರಗು ಮೂಡಿಸುವಂತಹದ್ದು. ಜೀವನದಲ್ಲಿ ಶ್ರದ್ಧೆ ಮತ್ತು ಪರಿಶ್ರಮದಿಂದ ವಿದ್ಯೆ ಕಲಿತು, ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಮೂಲಕ ಇತರರಿಗೆ ಮಾದರಿಯಾಗು ಎಂದು ಹಾರೈಸಿ ಮರಳಿ ಪತ್ರ ಬರೆದಿದ್ದು, ಗಮನ ಸೆಳೆದಿದೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಚಿತ್ರೋದ್ಯಮದ ಗಣ್ಯರು
ಕನ್ನಡದ ಖ್ಯಾತ ನಿರ್ದೇಶಕ ಶಶಾಂಕ್ (Shashank), ಬೆಂಗಳೂರು ಅಭಿವೃದ್ಧಿ ಕುರಿತಾಗಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ (D.K. Shivakumar) ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ. ತುರ್ತಾಗಿ ಬೆಂಗಳೂರಿಗೆ ಆಗಬೇಕಾಗಿದ್ದೇನು ಎನ್ನುವುದನ್ನು ಆ ಪತ್ರದಲ್ಲಿ ತಿಳಿಸಿದ್ದಾರೆ. ಆ ಪತ್ರವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಶಶಾಂಕ್ ಪತ್ರಕ್ಕೆ ಬೆಂಗಳೂರಿಗರು ಮೆಚ್ಚುಗೆ ಸೂಚಿಸಿದ್ದಾರೆ.
ಡಿ.ಕೆ. ಶಿವಕುಮಾರ್ ಅವರಿಗೆ ಬರೆದ ಪತ್ರದಲ್ಲಿ ‘ನಮ್ಮೆಲ್ಲರ ಹೆಮ್ಮೆಯ ಬೆಂಗಳೂರು ನಗರ, ಹಲವಾರು ಮೂಲಭೂತ ಸೌಲಭ್ಯಗಳ ಕೊರತೆಯಿಂದ ನರಳುತ್ತಿರುವುದು ತಮಗೆ ಗೊತ್ತೇ ಇದೆ. ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ಇದರ ನಿವಾರಣೆಯ ಕುರಿತಾಗಿ ಕಾರ್ಯಪ್ರವೃತ್ತರಾಗಿರುವುದು ನಿಜಕ್ಕೂ ಶ್ಲ್ಯಾಘನೀಯ. ಇದೀಗ, ಕನ್ನಡಿಗರು ಅತ್ಯಂತ ತುರ್ತಾಗಿ ಎದುರು ನೋಡುತ್ತಿರುವ ಎರಡು ಯೋಜನೆಗಳನ್ನು ನಿಮ್ಮ ಗಮನಕ್ಕೆ ತರುವುದು ನನ್ನ ಈ ಪತ್ರದ ಮೂಲಕ ಉದ್ದೇಶ’ ಎಂದು ಶಶಾಂತ್ ಪತ್ರ ಶುರು ಮಾಡಿದ್ದಾರೆ. ಇದನ್ನೂ ಓದಿ:ಖ್ಯಾತ ಕಥೆಗಾರ ಟಿ.ಕೆ. ದಯಾನಂದ್ ಬರೆದ ಕಥೆಯೇ ‘ಟೋಬಿ’ ಸಿನಿಮಾ
ಮುಂದುವರೆದು, ‘ಮೊದಲನೆಯದು- ನೆಲಮಂಗಲ ರಸ್ತೆಯ ಗೊರಗುಂಟೆ ಪಾಳ್ಯ ಜಂಕ್ಷನ್. ರಾಜಧಾನಿಯಿಂದ ಮುಕ್ಕಾಲು ಭಾಗ ಕರ್ನಾಟಕಕ್ಕೆ ಹೋಗಲು, ಇದೇ ಹೆಬ್ಬಾಗಿಲು. ಹಲವಾರು ವರ್ಷಗಳಿಂದ ಇಲ್ಲಿ ಆಗುತ್ತಿರುವುದು ಟ್ರಾಫಿಕ್ ಜಾಮ್. ಅಸಹನೀಯವಾಗಿದೆ. ಶೀಘ್ರವೇ ಇದಕ್ಕೆ ಪರಿಹಾರ ಕಲ್ಪಿಸಿ’ ಎಂದು ಮೊದಲ ಬೇಡಿಕೆಯನ್ನು ಇಟ್ಟಿದ್ದು, ನಂತರ ಮತ್ತೊಂದು ಮಹತ್ವದ ಯೋಜನೆ ಬಗ್ಗೆಯೂ ಬರೆದುಕೊಂಡಿದ್ದಾರೆ.
ಎರಡನೆಯದು ‘ ನೆಲಮಂಗಲ ಫ್ಲೈ ಓವರ್ ಮೇಲಿನ ಹೊರೆತಗ್ಗಿಸಲು ಅಭಿವೃದ್ಧಿಪಡಿಸಲಾಗುತ್ತಿರುವ ಮಾಗಡಿ ರಸ್ತೆ ವಿಚಾರ. ಒಮ್ಮೆ ಈಗಿನ ರಸ್ತೆ ಕಾಮಗಾರಿ ಪೂರ್ತಿಯಾಗಿ ಸಂಚಾರಕ್ಕೆ ಮುಕ್ತಗೊಂಡರೆ, ಅದೇ ರಸ್ತೆಯಲ್ಲಿರುವ ಸುಂಕದಕಟ್ಟಿ ಈಗಿನ ಗೊರಗುಂಟೆ ಪಾಳ್ಯ ಜಂಕ್ಷನಂತೆ ಮುಂದಿನ ದಿನಗಳಲ್ಲಿ ಟ್ರಾಫಿಕ್ ಸಮಸ್ಯೆಗಳನ್ನು ಸೃಷ್ಟಿಸುವುದು ಪಕ್ಕಾ. ಆದ್ದರಿಂದ ಈಗಲೇ ಅದಕ್ಕೆ ಪರಿಹಾರ ಕಂಡುಕೊಳ್ಳುವುದು ಸೂಕ್ತ. ಈ ಎರಡೂ ಯೋಜನೆಗಳು ರಾಜಧಾನಿಯನ್ನು ಬಹುತೇಕ ಕರ್ನಾಟಕಕ್ಕೆ ಸಂಪರ್ಕಿಸುವ ಮತ್ತು ಕನ್ನಡಿಗರು ಅತೀ ಹೆಚ್ಚು ವಾಸವಿರುವ ಭಾಗಗಳು. ಇವುಗಳ ಅನುಷ್ಠಾನ, ಆ ಭಾಗದ ಕನ್ನಡಿಗರಿಗೆ ನೀವು ನೀಡುವ ಉತ್ತಮ ಕಾಣಿಕೆಯಾಗುತ್ತವೆ’ ಎಂದು ಶಶಾಂಕ್ ಪತ್ರದಲ್ಲಿ ಬರೆದಿದ್ದಾರೆ.
ನವದೆಹಲಿ: ಒಡಿಶಾದ (Odisha) ಬಾಲಸೋರ್‌ನಲ್ಲಿ (Balasore) ಸರಣಿ ರೈಲು ಅಪಘಾತದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಎಐಸಿಸಿ (AICC) ಅಧ್ಯಕ್ಷ, ಮಾಜಿ ರೈಲ್ವೇ ಸಚಿವ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪತ್ರ ಬರೆದಿದ್ದು, ಇಲಾಖೆ ಮೇಲಿನ ನಿರ್ಲಕ್ಷ್ಯಗಳನ್ನು ಉಲ್ಲೇಖಿಸಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ನಾಲ್ಕು ಪುಟಗಳ ಪತ್ರ (Letter) ಬರೆದಿರುವ ಮಲ್ಲಿಕಾರ್ಜುನ ಖರ್ಗೆ, ನೇಮಕಾತಿ, ತಾಂತ್ರಿಕ ಸಮಸ್ಯೆ ಮತ್ತು ಹಿಂದಿನ ತನಿಖೆಗಳನ್ನು ಉಲ್ಲೇಖಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರೈಲ್ವೇ ಇಲಾಖೆಯಲ್ಲಿ (Railway Department) ಖಾಲಿ ಹುದ್ದೆಗಳ ಸಂಖ್ಯೆ ಹೆಚ್ಚುತ್ತಿದೆ. ಪ್ರಸ್ತುತ ಭಾರತೀಯ ರೈಲ್ವೇಯಲ್ಲಿ ಸುಮಾರು 3 ಲಕ್ಷ ಹುದ್ದೆಗಳು ಖಾಲಿ ಇವೆ. ಅಪಘಾತದ ನಡೆದ ವಿಭಾಗದಲ್ಲೂ ಸುಮಾರು 8,278 ಹುದ್ದೆಗಳು ಖಾಲಿ ಇವೆ. 90ರ ದಶಕದಲ್ಲಿ 18 ಲಕ್ಷಕ್ಕೂ ಹೆಚ್ಚು ರೈಲ್ವೇ ಉದ್ಯೋಗಿಗಳಿದ್ದು, ಈಗ ಅದನ್ನು ಸುಮಾರು 12 ಲಕ್ಷಕ್ಕೆ ಇಳಿಸಲಾಗಿದೆ. ಅದರಲ್ಲೂ 3.18 ಲಕ್ಷ ಮಂದಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಇಷ್ಟೊಂದು ಹೆಚ್ಚಿನ ಸಂಖ್ಯೆಯ ಖಾಲಿ ಹುದ್ದೆಗಳನ್ನು ಏಕೆ ಭರ್ತಿ ಮಾಡಲಾಗಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ, ತನ್ನದೇ ಆದ ಕ್ರಮ ತೆಗೆದುಕೊಳ್ಳಲಿ- ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ
ಲೊಕೊ ಪೈಲಟ್‌ಗಳು ಓವರ್ ಟೈಮ್ ಡ್ಯೂಟಿ ಮಾಡುತ್ತಿದ್ದಾರೆ ಎಂದು ಮಂಡಳಿ ಹೇಳಿದೆ. ಲೊಕೊ ಪೈಲಟ್‌ಗಳ ನೇಮಕಾತಿ ಯಾಕೆ ನಡೆದಿಲ್ಲ? ಅವರ ಮೇಲೆ ಹೊರೆ ಹಾಕುವುದು ಜನರ ಸುರಕ್ಷತೆ ಸವಾಲು ಸ್ವೀಕರಿಸಿದಂತೆ. ಮೈಸೂರಿನಲ್ಲಿ ಎರಡು ರೈಲುಗಳ ಡಿಕ್ಕಿ ಸಾಧ್ಯತೆ ಉಲ್ಲೇಖಿಸಿ ಸಿಗ್ನಲ್ ಸಮಸ್ಯೆ ಕ್ರಮಕ್ಕೆ ಒತ್ತಾಯಿಸಿತ್ತು. ಈವರೆಗೂ ಯಾಕೆ ಕ್ರಮ ತೆಗೆದುಕೊಂಡಿಲ್ಲ? ಸಾರಿಗೆ, ಪ್ರವಾಸೋದ್ಯಮ ಮತ್ತು ಸಂಸ್ಕೃತಿಯ ಸಂಸದೀಯ ಸ್ಥಾಯಿ ಸಮಿತಿಯು ರೈಲ್ವೇ ಮಂಡಳಿಯ ಸಂಪೂರ್ಣ ನಿರಾಸಕ್ತಿ ಮತ್ತು ನಿರ್ಲಕ್ಷ್ಯವನ್ನು ಟೀಕಿಸಿದೆ. ಇದರ ವಿರುದ್ಧ ಯಾವ ಕ್ರಮ ತೆಗೆದುಕೊಳ್ಳಲಾಗಿದೆ? ರೈಲ್ವೆ ಸುರಕ್ಷತೆ ನಿರ್ಲಕ್ಷ್ಯದ ಬಗ್ಗೆ ಸಿಎಜಿ ಕೂಡ ವರದಿ ನೀಡಿದೆ. 68% ಪ್ರಕರಣಗಳಲ್ಲಿ ತಡವಾಗಿ ತನಿಖಾ ವರದಿ ಸಲ್ಲಿಸಿದ್ದು, ಸೂಕ್ತ ಕ್ರಮವೂ ತೆಗೆದುಕೊಂಡಿಲ್ಲ. ಈ ಬಗ್ಗೆ ತೀವ್ರ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಒಡಿಶಾ ರೈಲು ದುರಂತ – ಅಪಘಾತವಾಗಿ 51 ಗಂಟೆಗಳ ಬಳಿಕ ಮೊದಲ ರೈಲು ಸಂಚಾರ
2011ರ ಹಿಂದಿನ ಸರ್ಕಾರದ ಅವಧಿಯಲ್ಲಿ ರಿಸರ್ಚ್ ಡಿಸೈನ್ಸ್ ಅಂಡ್ ಸ್ಟ್ಯಾಂಡರ್ಡ್ಸ್ ಆರ್ಗನೈಸೇಶನ್ (RDSO) ಯಶಸ್ವಿಯಾಗಿ ರಕ್ಷಾ ಕವಚ್ ಪರೀಕ್ಷಿಸಿತು. ಇದು ರೈಲುಗಳ ಘರ್ಷಣೆಯನ್ನು ತಡೆಯಲು ಉದ್ದೇಶಿಸಲಾಗಿತ್ತು. ನಿಮ್ಮ ಸರ್ಕಾರ ಕವಚ್ ಮರು ನಾಮಕರಣ ಮಾಡಿತು. ಇದಾದ ಮೇಲೂ ಈವರೆಗೂ ಕೇವಲ 4% ಅನುಷ್ಠಾನವಾಗಿದೆ. 100% ತಂತ್ರಜ್ಞಾನ ಅಳವಡಿಕೆಗೆ ವಿಫಲವಾಗಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತ ವಿಧ್ವಂಸಕ ಕೃತ್ಯವೇ? – ಪ್ರಾಥಮಿಕ ತನಿಖೆಯ ಬೆನ್ನಲ್ಲೇ ಎದ್ದಿವೆ ಹಲವು ಪ್ರಶ್ನೆಗಳು
ಇನ್ನೂ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav) ಜವಾಬ್ದಾರಿ ಹೊರದೆ ಸಿಬಿಐ (CBI) ತನಿಖೆಗೆ ನೀಡಿದ್ದಾರೆ. ಸಿಬಿಐ ಅಪರಾಧಗಳ ತನಿಖೆಗಿದೆ. ಸಿಬಿಐ ಅಥವಾ ಯಾವುದೇ ಇತರ ಕಾನೂನು ಜಾರಿ ಸಂಸ್ಥೆಯು ತಾಂತ್ರಿಕ, ಸಾಂಸ್ಥಿಕ ಮತ್ತು ರಾಜಕೀಯ ವೈಫಲ್ಯಗಳಿಗೆ ಹೊಣೆಗಾರಿಕೆಯನ್ನು ಸರಿಪಡಿಸಲು ಸಾಧ್ಯವಿಲ್ಲ. ಅವರಿಗೆ ರೈಲ್ವೇ ಸಿಗ್ನಲ್ ಬಗ್ಗೆ ಜ್ಞಾನವೂ ಇರುವುದಿಲ್ಲ. ಅವರಿಂದ ತನಿಖೆ ಹೇಗೆ ನಿರೀಕ್ಷಿಸಬಹುದು? 2016ರಲ್ಲಿ ಕಾನ್ಪುರದಲ್ಲಿ ರೈಲು ಹಳಿ ತಪ್ಪಿ 150 ಮಂದಿ ಪ್ರಾಣ ಕಳೆದುಕೊಂಡರು. ಚುನಾವಣೆ ವೇಳೆ ಪಿತೂರಿ ಎಂದು ಆರೋಪಿಸಿ ಎನ್‌ಐಎ (NIA) ತನಿಖೆಗೆ ನೀಡಿದ್ದಿರಿ. 2018ರಲ್ಲಿ ಎನ್‌ಐಎ ತನಿಖೆಯನ್ನು ಮುಕ್ತಾಯಗೊಳಿಸಿತು. ಆದರೆ ಆರೋಪ ಪಟ್ಟಿ ಸಲ್ಲಿಸಲು ನಿರಾಕರಿಸಿತು. 150 ಮಂದಿಯ ಸಾವಿಗೆ ಹೊಣೆ ಯಾರು ಎಂದು ಕೇಳಿದವರು ಇನ್ನಾದರೂ ಜನರ ಸುರಕ್ಷತೆ ಕುರಿತು ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತದ ತನಿಖೆ ಸಿಬಿಐ ಹೆಗಲಿಗೆ
ಕರ್ನಾಟಕದ ರೆಬಲ್ ಸ್ಟಾರ್ ಅಂಬರೀಶ್ (Ambarish) ಅವರ 71ನೇ ಜನ್ಮದಿನಕ್ಕೆ ಅನೇಕರು ಶುಭಾಶಯಗಳನ್ನು ತಿಳಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮಂತ್ರಿ ಸುಧಾಕರ್, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವಾರು ರಾಜಕೀಯ ಗಣ್ಯರು ಅಂಬರೀಶ್ ಹುಟ್ಟು ಹಬ್ಬಕ್ಕೆ (Birthday) ಶುಭಾಶಯ ಹೇಳಿದ್ದಾರೆ. ಅಂಬರೀಶ್ ಪತ್ನಿ, ನಟಿ, ಸಂಸದೆ ಸುಮಲತಾ ಅಂಬರೀಶ್ (Sumalatha) ಭಾವುಕ ಪತ್ರವೊಂದನ್ನು (Letter) ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಫೇಸ್ ಬುಕ್ ಹಾಗೂ ಟ್ವೀಟರ್ ನಲ್ಲಿ ಭಾವುಕ ಪೋಸ್ಟ್ ಮಾಡಿರುವ ಸುಮಲತಾ, ‘ನಿಮ್ಮ ಬಾಲ್ಯದ ದಿನಗಳನ್ನು ಆಗಾಗ್ಗೆ ಹೇಳುತ್ತಿದ್ದಿರಿ. ಬಾಲ್ಯದ ಆ ತುಂಟತನ ಅದು ನಿಮ್ಮಲ್ಲಿ ಕೊನೆವರೆಗೂ ಇತ್ತು. ಹಾಗಾಗಿ ನಿಮ್ಮ ಹುಟ್ಟು ಹಬ್ಬ ಅದೊಂದು ಸಡಗರವಾಗಿರುತ್ತಿತ್ತು. ಅದು ನಮಗಷ್ಟೇ ಅಲ್ಲ, ಅಭಿಮಾನಿಗಳ ಪಾಲಿಗೆ ನಿಜವಾದ ಹಬ್ಬ. ಭೌತಿಕವಾಗಿ ನಮ್ಮೊಂದಿಗೆ ನೀವು ಇದ್ದಿದ್ದರೆ, ಇಂದು 71ನೇ ವರ್ಷದ ಹುಟ್ಟು ಹಬ್ಬವನ್ನೂ ಅಭಿಮಾನಿಗಳ ಜೊತೆಯಾಗಿ ಮತ್ತಷ್ಟು ಅದ್ಧೂರಿಯಾಗಿ ಆಚರಿಸುತ್ತಿದ್ದೆವು’ ಎಂದು ಬರೆದಿದ್ದಾರೆ.
ಮುಂದುವರೆದ ಪತ್ರದಲ್ಲಿ, ‘ಮನೆ ಮುಂದೆ ಜನಸಾಗರ, ನಿಮ್ಮ ಆರ್ಭಟ, ಹಾಸ್ಯ ಪ್ರಜ್ಞೆಯ ಮಾತು, ರಾತ್ರಿ ಇಡೀ ಕಾಯುತ್ತಾ ನಿಂತಿದ್ದ ಅಭಿಮಾನಿಗಳ ಘೋಷಣೆ ಇನ್ನೂ ಹಾಗೆಯೇ ಇದೆ. ಇವತ್ತೂ ಕೂಡ ಅವೆಲ್ಲವೂ ನಿಮಗೆ ಶುಭಾಶಯ ಹೇಳುತ್ತಿವೆ. ಸ್ವೀಕರಿಸಿ. ಹ್ಯಾಪಿ ಬರ್ತಡೇ ಮೈ ಅಂಬಿ. ಜತೆಗಿರದ ಜೀವ ಎಂದೆಂದಿಗೂ ಜೀವಂತ’ ಎಂದು ಸುಮಲತಾ ಪೋಸ್ಟ್ ಮಾಡಿದ್ದಾರೆ.
ಅಂಬರೀಶ್ ಸಿನಿಮಾ ರಂಗದ ಅಜಾತಶತ್ರು. ಹಿರಿ ಕಿರಿಯರ ಜೊತೆ ಒಳ್ಳೆಯ ಬಾಂಧವ್ಯವನ್ನು ಇಟ್ಟುಕೊಂಡಿದ್ದರು. ಸಿನಿಮಾ ರಂಗದಲ್ಲಿ ಏನೇ ಸಮಸ್ಯೆಯಾದರೂ ಅದನ್ನು ಬಗೆಹರಿಸುವ ತಾಕತ್ತು ಕೇವಲ ಅಂಬರೀಶ್ ಅವರಿಗೆ ಮಾತ್ರವಿತ್ತು. ನೂರಾರು ಚಿತ್ರಗಳಲ್ಲಿ ನಟಿಸಿ, ಅನೇಕರ ಬದುಕಿಗೆ ಆಸರೆಯಾಗಿದ್ದರು. ಹಾಗಾಗಿ ಸಿನಿಮಾ ರಂಗ ಕೂಡ ಅಂಬಿ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿದೆ.
ಇಂದು ಪುನೀತ್ ರಾಜ್ ಕುಮಾರ್ (Puneeth RajKumar) ಇಲ್ಲದ ಅವರ ಎರಡನೇ ವರ್ಷದ ಹುಟ್ಟು ಹಬ್ಬವನ್ನು (Birthday) ಆಚರಿಸಲಾಗುತ್ತಿದೆ. ನಿನ್ನೆ ಮಧ್ಯರಾತ್ರಿಯಿಂದಲೇ ಪುನೀತ್ ಅಭಿಮಾನಿಗಳು ಅಪ್ಪು ಸಮಾಧಿಗೆ ಬಂದು ಪೂಜೆ ಸಲ್ಲಿಸುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸುತ್ತಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಕಂಠೀರವ ಸ್ಟುಡಿಯೋಗೆ ಬಂದಿದ್ದಾರೆ ಅಪ್ಪು (Appu) ಅಭಿಮಾನಿಗಳು. ಈ ಸಂದರ್ಭದಲ್ಲಿ ಸಹೋದರನನ್ನು ನೆನಪಿಸಿಕೊಂಡು ನಟ ಶಿವರಾಜ್ ಕುಮಾರ್ (Shivraj Kumar) ಭಾವುಕವಾಗಿ ಪತ್ರ ಬರೆದಿದ್ದಾರೆ. ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
‘ನೀನು ಹುಟ್ಟಿದಾಗ ನಮ್ಮ ಮನೆಯಲ್ಲಿ ಉಲ್ಲಾಸ ಉಕ್ಕಿ ಹರಿಯುತ್ತಿತ್ತು. ನಿನ್ನ ಕಣ್ಣಲ್ಲಿದ್ದ ಹೊಳಪು ನೀನು ಪವರ್ ಸ್ಟಾರ್ ಆಗೋದನ್ನ ಆವಾಗ್ಲೇ ಹೇಳ್ತಾ ಇತ್ತು. ನೀನು ನಕ್ಕರೆ ಎಲ್ರು ನಗ್ತಾ ಇದ್ರು. ನೀನು ಕುಣಿದರೆ ಎಲ್ಲರೂ ರೋಮಾಂಚನದಿಂದ ನೋಡ್ತಾ ಇದ್ರು, ನೀನು ಕುಣಿದರೆ ಎಲ್ಲರೂ ರೋಮಾಂಚನದಿಂದ ನೋಡ್ರಾ ಇದ್ರು, ಮನೆಗೆ ಬಂದ ಅತಿಥಿ ನೆಂಟರುಗಳಿಗೆಲ್ಲ ನೀನೇ ಬೇಕು. ಅಂತಹ ಪುಟ್ಟ ಅಪ್ಪು ಮಿಂಚಿನಂತೆ ತೆರೆಯ ಮೇಲೆ ಬಂದು ಹೆಮ್ಮರವಾಗಿ, ಕೋಟ್ಯಾಂತರ ಜನರಿಗೆ ನೆರಳಾಗಿದ್ದನ್ನು ಹತ್ತಿರದಿಂದ ನೋಡಿದ ನಾನೇ ಪುನೀತ. ನಿನ್ನನು ಎತ್ತಿ ಆಡಿಸಿದ ಅಣ್ಣನಾಗಿ, ನಿನ್ನ ಜೊತೆ ಕೂಡಿ ಆಡಿದ ಸ್ನೇಹಿತನಾಗಿ, ನಿನ್ನ ಕೆಲಸಗಳನ್ನು ಮೆಚ್ಚಿ ಅಪ್ಪಿಕೊಂಡ ಕನ್ನಡಿಗನಾಗಿ, ಹಬ್ಬ ಯಾವುದೇ ಆಗಿದ್ರೂ ನಿನ್ನ ಹೆಸರಿನಲ್ಲಿ ಪಟಾಕಿಗಳನ್ನು ಹಚ್ಚೋ ಅಭಿಮಾನಿಗಳಲ್ಲಿ ಒಬ್ಬನಾಗಿ ಹೇಳ್ತಾ ಇದೀನಿ, ನೀನು ಹುಟ್ಟಿದ್ದೇ ಒಂದು ಉತ್ಸವ. ನೀನು ಬೆಳೆದಿದ್ದು ಇತಿಹಾಸ, ನಿನ್ನ ಜೀವನ ಒಂದು ದಂತಕಥೆ. ನಿನ್ನ ನೆನಪುಗಳು ಎಂದಿಗೂ ಅಮರ. ಹುಟ್ಟುಹಬ್ಬದ ಶುಭಾಶಯಗಳು ಅಪ್ಪು’ ಎಂದು ಬರೆದುಕೊಂಡಿದ್ದಾರೆ ಶಿವಣ್ಣ.
ರಾಜ್ಯದ ನಾನಾ ಕಡೆಗಳಲ್ಲಿ ಅಪ್ಪು ಪುತ್ಥಳಿ ಅನಾವರಣ, ಅನ್ನ ಸಂತರ್ಪಣೆ, ಅನಾಥಾಶ್ರಮದಲ್ಲಿ ಹುಟ್ಟು ಹಬ್ಬ ಸೇರಿದಂತೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಧಾರವಾಡದಲ್ಲಿ ಅಪ್ಪು ಹೆಸರಿನಲ್ಲೇ ಚಂದ್ರಶೇಖರ್ ಮಾಡಲಗೇರಿ ಮತ್ತು ತಂಡ ಚಿತ್ರೋತ್ಸವವನ್ನು ಆಯೋಜನೆ ಮಾಡಲಾಗಿದೆ. ಮೂರು ದಿನಗಳ ಕಾಲ ಅಪ್ಪು ಹೆಸರಿನಲ್ಲೇ ಈ ಚಿತ್ರೋತ್ಸವ ನಡೆಯಲಿದೆ. ಅಪ್ಪು ಹೆಸರಿನಲ್ಲಿ ಪ್ರಶಸ್ತಿಗಳನ್ನೂ ನೀಡಲಾಗುತ್ತಿದೆ. ಇದನ್ನೂ ಓದಿ: ನಟ ಜಗ್ಗೇಶ್ ಹುಟ್ಟು ಹಬ್ಬಕ್ಕೆ ಡಬಲ್ ಧಮಾಕಾ
ಬೆಂಗಳೂರಿನ ಅನೇಕ ಕಡೆ ಇಂದು ಅಪ್ಪು ಹೆಸರಿನಲ್ಲಿ ಸಾಕಷ್ಟು ಕಾರ್ಯಕ್ರಮಗಳು ನಡೆಯಲಿವೆ. ಅಲ್ಲದೇ, ಪುನೀತ್ ಅವರ ಹುಟ್ಟು ಹಬ್ಬದ ದಿನದಂದೆ ಆರ್.ಚಂದ್ರು ನಿರ್ದೇಶನದ ಉಪೇಂದ್ರ, ಸುದೀಪ್ ಮತ್ತು ಶಿವರಾಜ್ ಕುಮಾರ್ ಕಾಂಬಿನೇಷನ್ ನ ಕಬ್ಜ ಚಿತ್ರ ರಿಲೀಸ್ ಆಗಿದೆ. ಬಿಡುಗಡೆಯಾದ ಅಷ್ಟೂ ಚಿತ್ರಮಂದಿರಗಳಲ್ಲೂ ಅಪ್ಪು ಕಟೌಟ್ ಹಾಕಿದೆ ಚಿತ್ರತಂಡ.
ನವದೆಹಲಿ: ಆಮ್ ಆದ್ಮಿ ಪಕ್ಷದ (AAP) ನಾಯಕ ಮನೀಶ್ ಸಿಸೋಡಿಯಾ (Manish Sisodia) ಅವರ ಬಂಧನ ವಿಚಾರವಾಗಿ ರಾಜಕೀಯ ಯುದ್ಧ ಏರ್ಪಟ್ಟಿದೆ. ಇದರ ನಡುವೆ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಎಂಟು ವಿರೋಧ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಪತ್ರ ಬರೆದಿವೆ.
ಮುಖ್ಯಮಂತ್ರಿಗಳಾದ ಕೆ.ಚಂದ್ರಶೇಖರ್ ರಾವ್, ಮಮತಾ ಬ್ಯಾನರ್ಜಿ, ಭಗವಂತ್ ಮಾನ್ ಮತ್ತು ಅರವಿಂದ್ ಕೇಜ್ರಿವಾಲ್ ಸೇರಿದಂತೆ ವಿರೋಧ ಪಕ್ಷದ ನಾಯಕರ ಸಹಿ ಇರುವ ಪತ್ರವನ್ನು ಮೋದಿ ಅವರಿಗೆ ಕಳುಹಿಸಲಾಗಿದೆ. ಆದರೆ ಈ ಪತ್ರದಲ್ಲಿ ಕಾಂಗ್ರೆಸ್ ಸಹಿ ಇಲ್ಲ. ಡಿಎಂಕೆ, ನಿತೀಶ್ ಕುಮಾರ್ ಅವರ ಜೆಡಿಯು ಮತ್ತು ಹೆಚ್.ಡಿ.ಕುಮಾರಸ್ವಾಮಿ ಅವರ ಜೆಡಿಎಸ್ ಪಕ್ಷ ಕೂಡ ಈ ಕ್ರಮಕ್ಕೆ ಕೈಜೋಡಿಸಿಲ್ಲ. ಇದನ್ನೂ ಓದಿ: ಹಿಂಸೆಗೆ ಪ್ರಚೋದನೆ – ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು
ಈ ಕ್ರಮದಿಂದ ಹೊರಗುಳಿದ ಕಾಂಗ್ರೆಸ್ ವಿರುದ್ಧ ಎಎಪಿ ವಾಗ್ದಾಳಿ ನಡೆಸಿದೆ. “ರಾಷ್ಟ್ರೀಯ ಸಮಸ್ಯೆಗಳನ್ನು ಎತ್ತಿದಾಗ ಕಾಂಗ್ರೆಸ್ ಕಣ್ಮರೆಯಾಗುತ್ತದೆ. ಕಾಂಗ್ರೆಸ್ ಎಂದಿಗೂ ಪ್ರತಿಪಕ್ಷಗಳ ಜೊತೆ ನಿಂತಿಲ್ಲ. ಇದು ಅದರ ಇತಿಹಾಸ. ರಾಹುಲ್ ಗಾಂಧಿ ಮತ್ತು ರಾಬರ್ಟ್ ವಾದ್ರಾ ಅವರನ್ನು ಜೈಲಿಗೆ ಹಾಕುತ್ತೇವೆ ಎಂಬ ಬಿಜೆಪಿಯ ಹೇಳಿಕೆಯನ್ನು ನಾವು ಕೇಳುತ್ತಿದ್ದೇವೆ. ಇದು ಕೇವಲ ವಾಗ್ಯುದ್ಧವಾಗಿದೆ. ರಾಷ್ಟ್ರೀಯ ಸಮಸ್ಯೆಗಳು ಬಂದಾಗ ಕಾಂಗ್ರೆಸ್ ತಪ್ಪಿಸಿಕೊಳ್ಳುತ್ತಿದೆ ಎಂದು ಎಎಪಿ ವಕ್ತಾರ ಸೌರಭ್ ಭಾರದ್ವಾಜ್ ಟೀಕಾಪ್ರಹಾರ ನಡೆಸಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್‌ನ ಫಾರೂಕ್ ಅಬ್ದುಲ್ಲಾ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಶಿವಸೇನೆಯ ಉದ್ದವ್ ಠಾಕ್ರೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಪತ್ರಕ್ಕೆ ಸಹಿ ಹಾಕಿದ್ದಾರೆ. ಇದನ್ನೂ ಓದಿ: ಮಂಗಳೂರು, ಕೊಯಮತ್ತೂರಲ್ಲಿ ಸ್ಫೋಟ ಮಾಡಿದ್ದು ನಾವೇ- ಹೊಣೆ ಹೊತ್ತ ಐಎಸ್‍ಕೆಪಿ
ಪತ್ರದಲ್ಲೇನಿದೆ?
“ಭಾರತ ಇನ್ನೂ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ ಎಂಬುದನ್ನು ನೀವು ಒಪ್ಪುತ್ತೀರಿ ಎಂದು ನಾವು ಭಾವಿಸುತ್ತೇವೆ. ವಿರೋಧ ಪಕ್ಷದ ಸದಸ್ಯರ ವಿರುದ್ಧ ಕೇಂದ್ರೀಯ ಸಂಸ್ಥೆಗಳ ದುರ್ಬಳಕೆಯಾಗುತ್ತಿದೆ. ಇದು ನಾವು ಪ್ರಜಾಪ್ರಭುತ್ವದಿಂದ ನಿರಂಕುಶಪ್ರಭುತ್ವಕ್ಕೆ ಪರಿವರ್ತನೆಯಾಗಿದ್ದೇವೆ ಎಂಬುದನ್ನು ಸೂಚಿಸುತ್ತದೆ. ಕೇಂದ್ರೀಯ ತನಿಖಾ ದಳವು (ಸಿಬಿಐ) ಮನೀಶ್ ಸಿಸೋಡಿಯಾ ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲದಿದ್ದರೂ ಅಕ್ರಮವೆಸಗಿರುವ ಆರೋಪದಲ್ಲಿ ಬಂಧಿಸಿದೆ. 2014 ರಿಂದ ನಿಮ್ಮ ಆಡಳಿತದಲ್ಲಿರುವ ತನಿಖಾ ಸಂಸ್ಥೆಗಳು ಬುಕ್ ಮಾಡಿದ, ಬಂಧಿಸಿದ, ದಾಳಿ ಮಾಡಿದ ಅಥವಾ ವಿಚಾರಣೆಗೆ ಒಳಪಡಿಸಿದ ಒಟ್ಟು ಪ್ರಮುಖ ರಾಜಕಾರಣಿಗಳ ಪೈಕಿ, ಗರಿಷ್ಠ ಮಂದಿ ವಿರೋಧ ಪಕ್ಷಕ್ಕೆ ಸೇರಿದವರಾಗಿದ್ದಾರೆ. ಬಿಜೆಪಿಗೆ ಸೇರಿದ ವಿರೋಧ ಪಕ್ಷದ ರಾಜಕಾರಣಿಗಳ ವಿರುದ್ಧ ತನಿಖಾ ಸಂಸ್ಥೆಗಳು ಮೃದು ಧೋರಣೆ ಹೊಂದಿವೆ ಎಂದು ಪತ್ರದಲ್ಲಿ ಬೇಸರ ವ್ಯಕ್ತಪಡಿಸಲಾಗಿದೆ.