ನವದೆಹಲಿ: ದೇಶದಲ್ಲಿ ಓಮಿಕ್ರಾನ್ ಸೋಂಕು ಹರಡುವಿಕೆ ತೀವ್ರವಾಗುತ್ತಿರುವ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ಸೋಂಕು ಹೆಚ್ಚಾಗುತ್ತಿರುವ ಎಂಟು ರಾಜ್ಯಗಳಿಗೆ ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ ಪತ್ರ ಬರೆದಿದ್ದು ಎಚ್ಚರವಹಿಸುವಂತೆ ಸೂಚನೆ ನೀಡಿದ್ದಾರೆ.
ದೆಹಲಿ, ಹರಿಯಾಣ, ತಮಿಳುನಾಡು, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಗುಜರಾತ್, ಕರ್ನಾಟಕ ಮತ್ತು ಜಾರ್ಖಂಡ್‌ಗೆ ಪತ್ರ ಬರೆಯಲಾಗಿದ್ದು ವ್ಯಾಕ್ಸಿನೇಷನ್ ವ್ಯಾಪ್ತಿ ಹೆಚ್ಚಿಸಬೇಕು. ಟೆಸ್ಟಿಂಗ್ ಹೆಚ್ಚು ಮಾಡಬೇಕು ಮತ್ತು ಆಸ್ಪತ್ರೆಗಳಲ್ಲಿ ಬೆಡ್‌ಗಳನ್ನು ಸಿದ್ಧವಾಗಿಡಬೇಕು ಎಂದು ಸೂಚಿಸಲಾಗಿದೆ. ಇದನ್ನೂ ಓದಿ: 4 ಬಾರಿ ಕೋವಿಡ್ ಲಸಿಕೆ ಪಡೆದಿದ್ದ ಮಹಿಳೆಗೆ ಕೊರೊನಾ ಪಾಸಿಟಿವ್
ದೇಶದ ಎಲ್ಲ ರಾಜ್ಯಗಳಲ್ಲಿ ಸದ್ಯ ಓಮಿಕ್ರಾನ್ ಪತ್ತೆಯಾಗುತ್ತಿದ್ದು, ಮುಂಬೈ, ದೆಹಲಿ ಸೇರಿದಂತೆ 14 ಮಹಾನಗರಗಳಲ್ಲಿ ಸೋಂಕು ಹೆಚ್ಚುತ್ತಿದೆ. ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ ಓಮಿಕ್ರಾನ್ ಹರಡುವಿಕೆ ವೇಗವಾಗುತ್ತಿರುವ ಹಿನ್ನೆಲೆಯಲ್ಲಿ ಈ ಪತ್ರವನ್ನು ಬರೆಯಲಾಗಿದ್ದು ತಕ್ಷಣದ ಕ್ರಮಕ್ಕೆ ಸಲಹೆ ನೀಡಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಶ್ಲೇಷಿಸಲಾದ 115 ಕೋವಿಡ್ -19 ಮಾದರಿಗಳಲ್ಲಿ ಶೇ.46 ರಷ್ಟು ಓಮಿಕ್ರಾನ್ ಸೋಂಕು ಪತ್ತೆಯಾಗಿದೆ. ವೇಗವಾಗಿ ಹರಡುತ್ತಿರುವ ರೂಪಾಂತರವು ಕ್ರಮೇಣ ಸಮುದಾಯದಲ್ಲಿ ಹರಡುತ್ತಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಹೇಳಿದ್ದಾರೆ. ದೆಹಲಿ ಆಸ್ಪತ್ರೆಗಳಲ್ಲಿ 200 ಕೋವಿಡ್ ರೋಗಿಗಳಿದ್ದು, ಅವರ ಪೈಕಿ 102 ಮಂದಿ ನಗರಕ್ಕೆ ಸೇರಿದವರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಐವರಿಗೆ ಓಮಿಕ್ರಾನ್ ದೃಢ – 43ಕ್ಕೇರಿದ ಸೋಂಕಿತರ ಸಂಖ್ಯೆ
24 ಗಂಟೆಗಳ ಅವಧಿಯಲ್ಲಿ ಮುಂಬೈನಲ್ಲಿ 2,510 ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದು ಶೇ. 82 ಕ್ಕೆ ಜಿಗಿದಿದೆ. ದೆಹಲಿಯಲ್ಲಿ ಬುಧವಾರ 923 ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿನ ಪ್ರಮಾಣ ಶೇ. 86 ರಷ್ಟು ಹೆಚ್ಚಿದೆ. ರಾತ್ರಿ ಕರ್ಫ್ಯೂ, ಸೆಕ್ಷನ್ 144 ಮತ್ತು ಕಡ್ಡಾಯ ವ್ಯಾಕ್ಸಿನೇಷನ್ ನಿರ್ಧಾರಗಳನ್ನು ಹಲವು ರಾಜ್ಯಗಳು ಕೈಗೊಂಡಿವೆ. ಪ್ರಕರಣಗಳು ಹೆಚ್ಚಾದಂತೆ ಹೊಸ ವರ್ಷದ ಸಂಭ್ರಮಾಚರಣೆಯನ್ನು ನಿಯಂತ್ರಣದಲ್ಲಿಡಲು ಹಲವಾರು ರಾಜ್ಯಗಳು ಕಠಿಣ ನಿರ್ಬಂಧಗಳನ್ನು ವಿಧಿಸಿವೆ.
ಲಕ್ನೋ: ಕದ್ದಿರುವ ವಸ್ತುಗಳನ್ನು ವಾಪಸ್ ಮಾಡಿದ ಕಳ್ಳರು ಕ್ಷಮಾಪಣೆಯ ಪತ್ರವನ್ನು ಬರೆದಿಟ್ಟು ಹೋಗಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದ ಬಂದಾ ಜಿಲ್ಲೆಯಲ್ಲಿ ನಡೆದಿದೆ.
ಚಂದ್ರಾಯಕ್ ಗ್ರಾಮದ ನಿವಾಸಿ ದಿನೇಶ್ ತಿವಾರಿ ಬಂದಾ ಜಿಲ್ಲೆಯ ಗ್ರಾಮದ ಬಳಿ ವೆಲ್ಡಿಂಗ್ ಶಾಪ್ ಆರಂಭಿಸಲು ಸಿದ್ಧತೆ ನಡೆಸಿದ್ದರು. ಸಾಲ ಮಾಡಿ ಅಂಗಡಿಗೆ ಕೆಲವು ವಸ್ತುಗಳನ್ನು ಖರೀದಿಸಿದ್ದರು. ಅಂಗಡಿಯ ಬೀಗ ಒಡೆದು ಒಳನುಗ್ಗಿರುವ ಕಳ್ಳರು ವೆಲ್ಡಿಂಗ್ ಯಂತ್ರ, ಕಟ್ಟರ್ ಹೀಗೆ ಹಲವು ವಸ್ತುಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ. ಇದನ್ನೂ ಓದಿ: ಕೋವಿಡ್‌ನಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ಡಿ.27 ರಂದು ಪರಿಹಾರ ವಿತರಣೆ
ಪತ್ರದಲ್ಲಿ ಏನಿದೆ?: ನಿಮ್ಮ ಅಂಗಡಿಯ ಬಗ್ಗೆ ನಮಗೆ ತಪ್ಪಾಗಿ ಮಾಹಿತಿ ನೀಡಲಾಗಿತ್ತು. ಮಾಲೀಕರು ಶ್ರೀಮಂತರಾಗಿದ್ದು, ಅಲ್ಲಿ ನಮಗೆ ಹಲವು ಬೆಲೆಬಾಳುವ ವಸ್ತುಗಳು ಸಿಗುತ್ತವೆ ಎಂದು ಹೇಳಿ ನಿಮ್ಮ ಅಂಗಡಿಗೆ ನುಗ್ಗಿದ್ದೇವೆ, ಕ್ಷಮಿಸಿ ಎಂದು ಪತ್ರದಲ್ಲಿ ಬರೆಯಲಾಗಿತ್ತು. ಪತ್ರದ ಜೊತೆಗೆ ಕದ್ದಿರುವ ವಸ್ತುಗಳನ್ನು ತಂದಿಟ್ಟು ಹೋಗಿದ್ದರು.
ನಡೆದಿದ್ದೇನು?: ಅಂಗಡಿಯಲ್ಲಿ ವಸ್ತುಗಳು ಕಳುವಾದ ನಂತರ ಜಿಲ್ಲೆಯ ಚಂದ್ರಾಯಕ್ ಗ್ರಾಮದ ನಿವಾಸಿ ತಿವಾರಿ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಕಳುವಾಗಿದ್ದ ವಸ್ತುಗಳಿಗಾಗಿ ಹುಡುಕಾಟವನ್ನು ಪೊಲೀಸರು ಪ್ರಾರಂಭಿಸಿದ್ದರು. ಈ ಘಟನೆ ನಡೆದು ಮೂರು ದಿನದ ನಂತರ ಗ್ರಾಮದ ನಿವಾಸಿಯೊಬ್ಬರು ಸಮೀಪದ ಹೊಲಗಳಲ್ಲಿ, ವೆಲ್ಡಿಂಗ್ ಯಂತ್ರಗಳು ಬಿದ್ದಿವೆ ಎಂದು ತಿಳಿಸಿದ್ದಾರೆ. ದನ್ನೂ ಓದಿ: ಸಿಲಿಂಡರ್ ಸ್ಪೋಟ – ಬೆಂಗಳೂರಿನ ಮಸೀದಿ ಕಾಂಪ್ಲೆಕ್ಸ್‌ನಲ್ಲಿ ಬೆಂಕಿ
ತಿವಾರಿ ಹೊಲಕ್ಕೆ ಹೋಗಿ ನೋಡಿದಾಗ ಅವರ ಅಂಗಡಿಯಲ್ಲಿ ಕದ್ದಿದ್ದೆಲ್ಲ ವಸ್ತುಗಳು ಅಲ್ಲಿ ಇದ್ದವು. ಎಲ್ಲಾ ವಸ್ತುಗಳನ್ನು ಅಚ್ಚುಕಟ್ಟಾಗಿ ಪ್ಯಾಕ್ ಮಾಡಿ ಹಗ್ಗದಿಂದ ಕಟ್ಟಲಾಗಿತ್ತು. ಅಲ್ಲದೇ ಅಲ್ಲೇ ಒಂದು ಪತ್ರ ಕೂಡ ಇತ್ತು. ಇದರಲ್ಲಿ ಕಳ್ಳರು ಕದ್ದಿದ್ದಕ್ಕಾಗಿ ತಿವಾರಿಯವರಲ್ಲಿ ಕ್ಷಮೆಯಾಚಿಸಿದ್ದರು. ಅಲ್ಲದೇ ನೀವು ಬಡವನೆಂದು ತಿಳಿದಿದ್ದರೆ ನಾವು ಹೀಗೆ ಮಾಡುತ್ತಿರಲಿಲ್ಲ ಎಂದು ಪತ್ರದಲ್ಲಿ ಬರೆಯಲಾಗಿತ್ತು ಎಂದು ತಿಳಿದು ಬಂದಿದೆ.
ಕಲಬುರಗಿ: ಆ ಯುವತಿ ಯಾರು ಎಂದು ನನಗೆ ಗೊತ್ತಿಲ್ಲ. ನನ್ನ ಮಾನಹಾನಿಯಾಗುತ್ತಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರೂ ಆಗಿರುವ ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ಹೇಳಿದ್ದಾರೆ.
ಮದುವೆಯಾಗುವುದಾಗಿ ನಂಬಿಸಿ ವಂಚಿಸಿರುವುದಾಗಿ ಯುವತಿಯೊಬ್ಬಳು ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ವಿರುದ್ಧ ಗಂಭೀರವಾಗಿ ಆರೋಪಿಸಿದ್ದಳು. ಯುವತಿ ದೆಹಲಿ ಮೂಲದವಳಾಗಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಮುರುಗೇಶ್ ನಿರಾಣಿ ಅವರಿಗೆ ಟ್ವಿಟ್ಟರ್ ಮೂಲಕ ಪತ್ರ ಬರೆದು ಲಗತ್ತಿಸಿದ್ದಾಳೆ. ಆ ಪತ್ರದಲ್ಲಿ 2017ರ ಬ್ಯಾಚ್‍ನ ಐಎಎಸ್ ಅಧಿಕಾರಿ ಲೋಖಂಡೆಯು ತನ್ನ ಜೊತೆಗೆ ಹೋಟೆಲ್‍ಗಳಲ್ಲಿ ಕಾಲ ಕಳೆದ, ಹೊರಗಡೆ ಸುತ್ತಾಡಿದ, ವಾಟ್ಸಾಪ್‍ಗಳಲ್ಲಿ ಚಾಟ್ ಮಾಡಿದ್ದ ಬಗ್ಗೆ ದಿನಾಂಕ, ಸ್ಥಳ ಸಮೇತ ವಿವರಿಸಿದ್ದು, ವಾಟ್ಸಾಪ್ ಚಾಟ್ ಅನ್ನು ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಳು. ಇದನ್ನೂ ಓದಿ: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮೋಸ – ಕಲಬುರಗಿ ಪಾಲಿಕೆ ಆಯುಕ್ತ ಸ್ನೇಹಲ್ ವಿರುದ್ಧ ದೂರು
ಈ ಕುರಿತಂತೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಆ ಯುವತಿ ಯಾರು ಎಂದು ನನಗೆ ಗೊತ್ತಿಲ್ಲ. ನನ್ನ ಮಾನಹಾನಿಯಾಗುತ್ತಿದೆ. ನಾನು ಈ ಕುರಿತಂತೆ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸುತ್ತೇನೆ. ಕಲಬುರಗಿ ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದೇನೆ. ಮಾಹಿತಿ ಕೂಡ ನೀಡಿದ್ದೇನೆ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುವತಿ ನನ್ನ ವಿರುದ್ಧ ಮಾಡಿರುವ ಆರೋಪಗಳೆಲ್ಲಾ ಸುಳ್ಳು. ವಾಟ್ಸಾಪ್ ಚಾಟ್, ಫೋಟೋ ಎಲ್ಲವೂ ಕೂಡ ಫೇಕ್. ನನ್ನ ಫೋಟೋ ಅವರಿಗೆ ಹೇಗೆ ಸಿಕ್ಕಿತು ನನಗೆ ಗೊತ್ತಿಲ್ಲ. ಆ ಯುವತಿ ಬರೆದಿರುವ ಪತ್ರವನ್ನು ಓದಿದ್ದೇನೆ. ಅದೆಲ್ಲಾವೂ ಕೂಡ ಸುಳ್ಳು. ಕುಟುಂಬಸ್ಥರಾಗಲಿ, ಜಿಲ್ಲಾಧಿಕಾರಿ ಮತ್ತು ಪೊಲೀಸ್ ಕಮೀಷನರ್ ಯಾರು ಕೂಡ ಸಂಧಾನ ಮಾಡಲು ಪ್ರಯತ್ನಿಸಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ:ಮದುವೆ ಆಗುವಂತೆ ಯುವತಿಗೆ ಬ್ಲಾಕ್‍ಮೇಲ್- ಠಾಣೆ ಮೆಟ್ಟಿಲೇರಿದ ಪ್ರಕರಣ
ಮತ್ತೊಂದೆಡೆ ಕಲಬುರಗಿ ಪೊಲೀಸ್ ಆಯುಕ್ತ ರವಿಕುಮಾರ್ ಅವರು, ಯುವತಿ ನಮಗೆ ಲಿಖಿತ ದೂರು ನೀಡಿಲ್ಲ. ಆದರೆ ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ದೂರು ನೀಡಿದ್ದಾರೆ. `ಯುವತಿ, ಆಕೆಯ ತಂದೆ-ತಾಯಿ ನಮ್ಮನ್ನು ಭೇಟಿ ಆಗಿದ್ದರು. ಆದರೆ ಈ ಘಟನೆ ದೆಹಲಿಯಲ್ಲಿ ಆಗಿರುವ ಕಾರಣ, ದೆಹಲಿಯಲ್ಲಿಯೇ ದೂರು ನೀಡಬೇಕೆಂದು ಹೇಳಿದ್ದೇವೆ ಎಂದು ಹೇಳಿದ್ದಾರೆ.
ಕಲಬುರಗಿ: ಐಎಎಸ್ ಅಧಿಕಾರಿಯೊಬ್ಬರು ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿರುವ ಗಂಭೀರ ಆರೋಪ ಕೇಳಿಬಂದಿದೆ.
ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರೂ ಆಗಿರುವ ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ಮದುವೆಯಾಗುವುದಾಗಿ ನಂಬಿಸಿ ಆಕೆಗೆ ವಂಚನೆ ಮಾಡಿರುವುದಾಗಿ ಯುವತಿ ಗಂಭೀರವಾಗಿ ಆರೋಪಿಸಿದ್ದಾಳೆ.
ಯುವತಿ ದೆಹಲಿ ಮೂಲದವಳಾಗಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಮುರುಗೇಶ್ ನಿರಾಣಿ ಅವರಿಗೆ ಟ್ವಿಟ್ಟರ್ ಮೂಲಕ ಪತ್ರ ಬರೆದು ಲಗತ್ತಿಸಿದ್ದಾಳೆ. ಆ ಪತ್ರದಲ್ಲಿ 2017ರ ಬ್ಯಾಚ್‍ನ ಐಎಎಸ್ ಅಧಿಕಾರಿ ಲೋಖಂಡೆಯು ತನ್ನ ಜೊತೆಗೆ ಹೋಟೆಲ್‍ಗಳಲ್ಲಿ ಕಾಲ ಕಳೆದ, ಹೊರಗಡೆ ಸುತ್ತಾಡಿದ, ವಾಟ್ಸಾಪ್‍ಗಳಲ್ಲಿ ಚಾಟ್ ಮಾಡಿದ್ದ ಬಗ್ಗೆ ದಿನಾಂಕ, ಸ್ಥಳ ಸಮೇತ ವಿವರಿಸಿದ್ದು, ವಾಟ್ಸಾಪ್ ಚಾಟ್‍ನ್ನು ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾಳೆ.
ಯುವತಿ ಬರೆದಿರುವ ಪತ್ರದಲ್ಲಿ ಏನಿದೆ:
`ಯುಪಿಎಸ್‍ಸಿ ಪರೀಕ್ಷೆ ಬರೆಯುತ್ತಿದ್ದಾಗ ಫೇಸ್‍ಬುಕ್‍ನಲ್ಲಿ ಪರಿಚಯವಾಗಿದ್ದ ಸ್ನೇಹಲ್ ಲೋಖಂಡೆ ನನ್ನ ಮೇಲೆ ಆಸಕ್ತಿ ತೋರಿಸಿದರು. ಮೇ 26, 2019ರಂದು ದೆಹಲಿಯಲ್ಲಿ ನನ್ನನ್ನು ಭೇಟಿ ಆಗಿದ್ದ ಸ್ನೇಹಲ್ ಮೂರು ದಿನ ನನ್ನ ಜೊತೆಗೆ ಇದ್ದರಲ್ಲದೇ ನನ್ನ ಮದ್ವೆ ಆಗುವುದಾಗಿ ಮಾತುಕೊಟ್ಟಿದ್ದರು. ನನ್ನ ಜೊತೆಗೆ ಇರುವ ಸಲುವಾಗಿಯೇ ಟ್ರೈನಿಂಗ್‍ಗಾಗಿ ದೆಹಲಿಗೆ ಬಂದಿದ್ದ ಸ್ನೇಹಲ್ ಬಸ್ ಮಿಸ್ ಮಾಡ್ಕೊಂಡು ದೆಹಲಿಯಲ್ಲೇ ನನ್ನ ಒಂದು ದಿನ ಇದ್ದರು. ನನ್ನ ಹುಟ್ಟುಹಬ್ಬ ಆಚರಿಸಲು ನನ್ನ ತಾಯಿಯ ಅನುಮತಿ ಪಡೆದು ಜುಲೈ 8ರಂದು ಹೌನ್ಜ್ ಖಾಸ್‍ಗೆ ಮಧ್ಯರಾತ್ರಿ ಹೋಗಿದ್ದೆವು. ಜುಲೈ 20, 2019ರಂದು ನನ್ನನ್ನು ಮದ್ವೆ ಆಗುವುದಾಗಿ ಹೇಳಿದ್ದ ಅವರು, ಕೆ ಜಿ ಮಾರ್ಗ್‍ನಲ್ಲಿರುವ ತನ್ನ ಹಾಸ್ಟೆಲ್‍ಗೆ ಬರುವಂತೆ ಹೇಳಿ ಅಲ್ಲಿ ನಾವಿಬ್ಬರೂ ಒಂದು ರಾತ್ರಿ ಜೊತೆಯಾಗಿ ಕಳೆದಿದ್ವಿ. ಮರು ದಿನ ನನ್ನನ್ನು ಭೇಟಿ ಆಗಿದ್ದ ಅವರು ಐ-ಪಿಲ್ ಮಾತ್ರೆ ತೆಗೆದುಕೊಳ್ಳುವಂತೆ ಹೇಳಿದ್ದರು.
ಆಗಸ್ಟ್ 4ರಂದು ರಾಯಲ್ ಪ್ಲಾಜಾದಲ್ಲಿ ಅವರು ರೂಂ ಬುಕ್ ಮಾಡಿದ್ದರು, ಅವತ್ತು ಅಲ್ಲಿ ಒಟ್ಟಿಗೆ ಉಳಿದುಕೊಂಡೆವು. ದೆಹಲಿಯಲ್ಲಿ ತರಬೇತಿಗೆ ಬಂದಿದ್ದ ವೇಳೆ ಅವರು ನನ್ನನ್ನು ಪ್ರತಿನಿತ್ಯ ಭೇಟಿ ಆಗುತ್ತಿದ್ದರು. ನಾನು ಎಲ್ಲವನ್ನೂ ನನ್ನ ತಾಯಿಗೆ ಹೇಳಿದ ಬಳಿಕ ನನ್ನ ತಾಯಿ ಅವರ ಹಾಸ್ಟೆಲ್‍ನಲ್ಲಿ ಭೇಟಿ ಆಗಿ ಮದ್ವೆ ಬಗ್ಗೆ ಮಾತಾಡಿದರು ಮತ್ತು ಆಗ ಮದುವೆಗೆ ನನಗೆ ಸ್ವಲ್ಪ ಟೈಂ ಬೇಕು ಎಂದು ಹೇಳಿದ್ದರು. ಕರ್ನಾಟಕದ ಇಂಡಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಆದ ಬಳಿಕ ಅವರು ನನ್ನನ್ನು ದೂರವಿರಿಸಲು ಶುರು ಮಾಡಿದರು, ನಾನು ಕರೆ ಮಾಡಿದಾಗಲೆಲ್ಲ ಬ್ಯುಸಿ ಇರುವುದಾಗಿ ಹೇಳುತ್ತಿದ್ದರು. 2020ರ ಜನವರಿ 26ರಂದು ನನ್ನ ಹೆತ್ತವರು ಇಂಡಿಗೆ ತೆರಳಿ ಅವರ ತಂದೆ ಸುಧಾಕರ್ ಲೋಖಂಡೆ ಜೊತೆಗೆ ಮಾತಾಡಿದರು ಮತ್ತು ಅವರು ನಾಗ್ಪುರದಲ್ಲಿರುವ ತಮ್ಮ ಸಹೋದರನ ಜೊತೆಗೆ ಆದಷ್ಟು ಬೇಗ ಮಾತಾಡುವುದಾಗಿಯೂ ಮತ್ತು ಶೀಘ್ರವೇ ದೆಹಲಿಗೆ ಬರುವುದಾಗಿಯೂ ಹೇಳಿದ್ದರು. 15 ದಿನಗಳ ಬಳಿಕ ನನ್ನ ತಂದೆ ಸುಧಾಕರ್ ಲೋಖಂಡೆಗೆ ಕರೆ ಮಾಡಿದಾಗ ಅವರು ಕೆಟ್ಟದಾಗಿ ಮಾತಾಡಿದರು ಮತ್ತು ನಿಮ್ಮ ಮಗಳು ನನ್ನ ಮಗನ ಎದುರು ನಿಲ್ಲಲು ಯೋಗ್ಯಳಲ್ಲ ಎಂದರು. ಆ ಬಳಿಕ ಸ್ನೇಹಲ್ ಲೋಖಂಡೆಯಾಗಲೀ ಅವರ ತಂದೆಯಾಗಲೀ ನಮಗೆ ಕರೆ ಮಾಡಿಲ್ಲ. ನನ್ನನ್ನು ಬಳಸಿಕೊಂಡು ನನ್ನ ಜೀವನ ಹಾಳು ಮಾಡಿರುವುದು ಇದರಿಂದ ಸ್ಪಷ್ಟವಾಗುತ್ತದೆ. ಇದನ್ನೂ ಓದಿ: ಒಳ್ಳೆ ಬುದ್ಧಿ ಕಲಿಯಿರಿ ಎಂದಿದ್ದಕ್ಕೆ ಸಾಮಾಜಿಕ ಕಾರ್ಯಕರ್ತನ ಕೊಲೆಗೈದ ಬಾಲಕರು!
ಅವರಿಗೆ (ಸ್ನೇಹಲ್‍ಗೆ) ಈ ಮೊದಲು ಒಂದು ಸಂಬಂಧವಿತ್ತು ಮತ್ತು ಅವರ ಸ್ನೇಹಿತೆ ಆ ಸಂಬಂಧದ ಅವಧಿಯಲ್ಲಿ ಐ-ಪಿಲ್ ಮಾತ್ರೆಗಳನ್ನು ತೆಗೆದುಕೊಳ್ಳುತ್ತಲೇ ಇದ್ದರು. ಆಕೆ ಮದುವೆ ಆಗುವಂತೆ ಕೇಳಿದಾಗ ಆಕೆಯಿಂದ ದೂರ ಆಗಿದ್ದಾಗಿ ಅವರೇ ನನಗೆ ಆರಂಭದಲ್ಲಿ ಹೇಳಿದ್ದರು. ಹುದ್ದೆ ಮತ್ತು ಪ್ರತಿಷ್ಠೆ ಬಳಸಿಕೊಂಡು ಹುಡುಗಿಯರನ್ನು ಆಕರ್ಷಿಸಿ ಅವರನ್ನು ಬಳಸಿಕೊಳ್ಳುತ್ತಿದ್ದಾರೆ. ನನ್ನ ಜೊತೆಗೆ 2 ವರ್ಷ ಸಂಬಂಧದಲ್ಲಿದ್ದ ನನಗೂ ಹಾಗೇ ಮಾಡಿದ್ದಾರೆ. ಮದ್ವೆಯ ನೆಪದಲ್ಲಿ ನನ್ನನ್ನು ಬಳಸಿಕೊಂಡಿದ್ದಾರೆ. ಇತರ ವೈಯಕ್ತಿಕ, ದೈಹಿಕ ಮತ್ತು ಮಾನಸಿಕ ಜೀವನದಲ್ಲಿ ಆಟ ಆಡುವ ಈ ವ್ಯಕ್ತಿಯನ್ನು ಶಿಕ್ಷಿಸಬೇಕು. ಅವರು ಜೈಲಿನಲ್ಲಿರಬೇಕು, ಇಲ್ಲವಾದರೆ ಅವರು ಇಂತಹ ಕೆಲಸಗಳನ್ನು ಮಾಡುತ್ತಲೇ ಇರುತ್ತಾರೆ. ಇಂತಹ ಅಪರಾಧಕ್ಕಾಗಿ ಅವರು ಜೈಲಿನಲ್ಲಿರಬೇಕು.
ಈ ಹಿನ್ನೆಲೆಯಲ್ಲಿ ನಾನು ಗೌರವಾನ್ವಿತ ಪ್ರಾಧಿಕಾರದಿಂದ ನ್ಯಾಯವನ್ನು ನಿರೀಕ್ಷಿಸುತ್ತಿದ್ದೇನೆ ಮತ್ತು ಪ್ರಾಧಿಕಾರ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಯುವತಿ ಮನವಿ ಮಾಡಿದ್ದಾಳೆ.
ಬೆಂಗಳೂರು: ಇತ್ತೀಚೆಗಷ್ಟೇ ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆಯೊಂದನ್ನು ನೀಡಿದ ಬಳಿಕ ಕ್ಷಮೆ ಕೇಳಿದ್ದ ಹಂಸಲೇಖ ಅವರು ತಮ್ಮ ಆರೋಗ್ಯದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವದಂತಿ ಕುರಿತು ಸ್ಪಷ್ಟನೆ ನೀಡಿದ್ದಾರೆ.
ಪೋಸ್ಟ್‌ನಲ್ಲಿ ಏನಿದೆ?
ಪೂಜ್ಯ ಕರ್ನಾಟಕವೇ.. ನಾನು ಆರೋಗ್ಯವಾಗಿದ್ದೇನೆ. ನನಗೆ ಆರೋಗ್ಯ ತಪ್ಪಿದೆ ಎಂದು ಇಡೀ ಕರ್ನಾಟಕದಿಂದ ಕರೆಗಳು ಬರುತ್ತಿವೆ. ಎಲ್ಲರೂ ಆರೋಗ್ಯದ ಕುರಿತು ವಿಚಾರಿಸುತ್ತಿದ್ದಾರೆ. ನನಗೆ ಗೊತ್ತಾಗಿದೆ ನಿಮ್ಮ ಪ್ರೀತಿ ಎಷ್ಟು ವಿಶಾಲವಾಗಿದೆ ಎಂದು. ಈ ಪ್ರೀತಿಯನ್ನು ಪಡೆಯೋಕೆ ನಾನು ತುಂಬಾನೇ ಸವೆದಿದ್ದೀನಿ. ಸಹಿಸಿದ್ದೀನಿ. ಇದರ ಸುಖ ಇವತ್ತು ಅನುಭವಿಸುತ್ತಿದ್ದೀನಿ.
ನಾನು ಕೇಳದೆ ನನ್ನ ಮನೆಗೆ ಸರ್ಕಾರ ಭದ್ರತೆಯನ್ನು ಕೊಟ್ಟಿದೆ. ಇಡೀ ಕರ್ನಾಟಕದ ಲಕ್ಷಾಂತರ ಜನ ಅಭಿಮಾನಿಗಳು ನನ್ನ ಪರವಾಗಿ ಮಾತನಾಡುತ್ತಿದ್ದಾರೆ. ನನ್ನ ಉದ್ಯಮದ ಆತ್ಮೀಯರು ನನಗೆ ಧೈರ್ಯ ತೋರಿದ್ದಾರೆ. ಈಗ ಇಡೀ ಕರ್ನಾಟಕವೇ ನನ್ನನ್ನು ಪ್ರೀತಿಯಲ್ಲಿ ಮುಳುಗಿಸಿ ಅಭಿಮಾನದಲ್ಲಿ ತೇಲಿಸಿದ್ದಾರೆ. ಇದನ್ನೂ ಓದಿ: ಇಳಕಲ್ ಸೀರೆಯುಟ್ಟು ಹಾಟ್ ಪೋಸ್ ಕೊಟ್ಟ ರಾಗಿಣಿ
ಅಭಿಮಾನ ಆವೇಶವಾಗಬಾರದು, ಆವೇಶ ಅವಗಢಗಳಿಗೆ ಕಾರಣವಾಗಬಾರದು. ಅಭಿಮಾನ ಹಾಡಿನಂತಿರಬೇಕು. ಹಾಡು ಕೇಳಿಸುತ್ತದೆ. ಹಾಡು ಮುಟ್ಟುಸುತ್ತದೆ ಎಂದು ಹಂಸಲೇಖ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.
ಬೆಂಗಳೂರು: ನಾದ ಬ್ರಹ್ಮ, ಸಂಗೀತ ಮಾಂತ್ರಿಕ ಹಂಸಲೇಖ ಅವರ ಹೇಳಿಕೆಯನ್ನು ಬೆಂಬಲಿಸಿ ಇಂದು ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಚಂದಾಪುರ ವೃತ್ತದಲ್ಲಿ ಪ್ರತಿಭಟನಾ ಚಳುವಳಿಯನ್ನು ಹಮ್ಮಿಕೊಂಡು ಅವರಿಗೆ ಬೆಂಬಲ ಸೂಚಿಸಿದ್ದಾರೆ.
ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಈ ಚಳುವಳಿಯನ್ನು ಹಮ್ಮಿಕೊಂಡಿದ್ದು ತಟ್ಟೆ ಕಾಸು ಎಂಬುವ ಶೀರ್ಷಿಕೆಯನ್ನಿಟ್ಟು ಈ ಚಳುವಳಿಯನ್ನು ನಡೆಸಲಾಯಿತು. ಪ್ರತಿಭಟನಾಕಾರರು ತಟ್ಟೆಯನ್ನು ಹಿಡಿದು ವಿಭಿನ್ನವಾಗಿ ಜಾತಿ ಪರ ಬ್ರಾಹ್ಮಣತ್ವವನ್ನು ವಿರೋಧಿಸಿ ಪ್ರತಿಭಟನಾ ರ‍್ಯಾಲಿಯನ್ನು ನಡೆಸಿ ಬ್ರಾಹ್ಮಣತ್ವದ ಹಾಗೂ ಹಂಸಲೇಖ ಅವರ ವಿರುದ್ಧ ದೂರನ್ನು ನೀಡಿದವರ ವಿರುದ್ಧ ಘೋಷಣೆ ಕೂಗಿ ನೂರಾರು ಮಂದಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ದಲಿತರು ಕೋಳಿ ಕೊಟ್ಟರೆ ತಿನ್ನುತ್ತಾರಾ?: ಕ್ಷಮೆ ಕೇಳಿದ ಹಂಸಲೇಖ
ದಲಿತ ಹಾಗೂ ಪ್ರಗತಿಪರ ಒಕ್ಕೂಟಗಳ ಅಧ್ಯಕ್ಷ ರಾವಣ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದ್ದು. ಹಂಸಲೇಖ ಅವರು ಯಾವುದೇ ರೀತಿಯ ವಿವಾದಾತ್ಮಕ ಹೇಳಿಕೆಯನ್ನು ನೀಡಿಲ್ಲ ಅಸಮಾನತೆ ಹಾಗೂ ತಾರತಮ್ಯದ ಬಗ್ಗೆ ಮಾತನಾಡಿರುವುದು ತಪ್ಪೇನಿಲ್ಲ ಇದರಲ್ಲಿ ವಿರೋಧಿಸುವುದು ಏನು ಇಲ್ಲ. ಹಂಸಲೇಖ ಅವರಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದ್ದಾರೆ. ಇದೇ ಸಮಯದಲ್ಲಿ ಹಂಸಲೇಖ ಅವರ ವಿರುದ್ಧ ದೂರು ದಾಖಲು ಮಾಡಿದಂತಹ ವ್ಯಕ್ತಿಯ ವಿರುದ್ಧ ಸೂರ್ಯಸಿಟಿ ಪೊಲೀಸರಿಗೆ ಕ್ರಮ ತೆಗೆದುಕೊಳ್ಳುವಂತೆ ದೂರನ್ನು ನೀಡಲಾಗಿದೆ. ಇದನ್ನೂ ಓದಿ: ಪೇಜಾವರ ಶ್ರೀ ವಿರುದ್ಧದ ಹಂಸಲೇಖ ಹೇಳಿಕೆಗೆ ಪ್ರತಾಪ್ ಸಿಂಹ ಗರಂ
ಏನಿದು ವಿವಾದ? ಮೈಸೂರಿನ ಮಾನಸಗಂಗೋತ್ರಿಯಲ್ಲಿಯಲ್ಲಿ ನಡೆದಿದ್ದ ಪ್ರಶಸ್ತಿ ಸಮಾರಂಭವೊಂದರ ಕಾರ್ಯಕ್ರಮದಲ್ಲಿ ಮಾತಾಡಿದ್ದ ಹಂಸಲೇಖ, ಪೇಜಾವರ ಶ್ರೀಗಳು ದಲಿತರ ಮನೆಗೆ ಹೋಗಿ ಕುಳಿತುಕೊಂಡು ಬಂದಿದ್ದಾರೆ. ಆದರೆ ದಲಿತರು ಕೋಳಿ ಕೊಟ್ರೆ ತಿಂತಾರಾ..? ಕುರಿ ರಕ್ತ ಪ್ರೈ ಮಾಡಿ ಕೊಟ್ರೆ ತಿಂತಾರಾ..? ಲಿವರ್ ಕೊಟ್ರೆ ತಿಂತಾರಾ..? ದಲಿತರ ಮನೆಗೆ ಹೋಗುವುದು ದೊಡ್ಡ ವಿಷಯ ಅಲ್ಲ, ತಮ್ಮ ಮನೆಗೆ ಕರೆದುಕೊಂಡು ಹೋಗಿ ಅವರು ತಿಂದ ಲೋಟ, ತಟ್ಟೆ ತೊಳೆಯೋದು ದೊಡ್ಡ ವಿಷಯ ಎಂದು ಹೇಳಿದ್ದರು.
ನವದೆಹಲಿ: ಹಾಲು ಹಲ್ಲು ಬಿದ್ದು ಹೊಸ ಹಲ್ಲು ಇನ್ನೂ ಹುಟ್ಟಿಲ್ಲ ಅಂತ ಪ್ರಧಾನಿಗೆ ಪುಟಾಣಿಗಳು ಅಸ್ಸಾಂನ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಮತ್ತು ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದಿರುವುದು ಎಲ್ಲಡೆ ಸುದ್ದಿಯಾಗುತ್ತಿದೆ.
ಪ್ರತದಲ್ಲಿ ಏನಿದೆ?
ಪ್ರೀತಿಯ ಹಿಮಾಂತ ಮಾಮ ನನ್ನ ಹಲ್ಲುಗಳು ಬಿದ್ದು ಹೋಗಿವೆ. ಇದುವರೆಗೂ ಬಂದಿಲ್ಲ. ಆದ ಕಾರಣ ನಾನು ನನ್ನ ಇಷ್ಟದ ಆಹಾರವನ್ನು ಸೇವಿಸಲು ಆಗುತ್ತಿಲ್ಲ. ದಯವಿಟ್ಟು ಏನಾದರೂ ಕ್ರಮ ಕೈಗೊಳ್ಳಿ. ಪ್ರೀತಿಯ ಮೋದಿಜೀ, ನನ್ನ ಮೂರು ಹಲ್ಲುಗಳು ಉದುರಿ ಹೋಗಿವೆ. ದಯವಿಟ್ಟು ನನ್ನ ಹಲ್ಲು ಇದುವರೆಗೂ ಬಾರದೇ ಇರುವುದಕ್ಕೆ ಏನಾದರೂ ಒಂದು ಕ್ರಮ ತೆಗೆದುಕೊಳ್ಳಿ. ನನ್ನ ಇಷ್ಟದ ಆಹಾರವನ್ನು ಜಗಿಯಲು, ತಿನ್ನಲು ಬಹಳ ಕಷ್ಟಪಡುತ್ತಿದ್ದೇನೆ.
ಈ ರೀತಿಯ ಪತ್ರ ಬರೆದ ಇಬ್ಬರು ಮಕ್ಕಳು, ಸ್ವಂತ ಅಕ್ಕ-ತಮ್ಮನಾಗಿದ್ದಾರೆ. ಆರು ವರ್ಷದ ರಾವ್ಜ ಮತ್ತು ಐದು ವರ್ಷದ ಆರ್ಯನ್ ಮೂಲತಃ ಅಸ್ಸಾಮಿನವರು. ಇವರಿಬ್ಬರು ಸೇರಿಕೊಂಡು ಅಸ್ಸಾಂನ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಇವರು ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮುದ್ದಾದ ಬರವಣಿಗೆ ಮತ್ತು ವಿಚಾರಕ್ಕೆ ನೆಟ್ಟಿಗರ ಮನಸ್ಸನ್ನು ಗೆದ್ದಿದ್ದಾರೆ ಈ ಪುಟಾಣಿಗಳು.
ಈ ಪತ್ರಗಳನ್ನು ಅವರ ತಾಯಿಯ ಚಿಕ್ಕಪ್ಪ ಮುಖ್ತರ್ ಅಹಮದ್ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈಗ ಅವು ವೈರಲ್ ಆಗಿದ್ದು, ನೆಟ್ಟಿಗರ ಹೃದಯ ಗೆದ್ದಿವೆ. ಅವರ ಚಿಕ್ಕಪ್ಪ ಪತ್ರಗಳ ಫೋಟೋ ತೆಗೆದು, ಹಿಮಂತ ಬಿಸ್ವ ಶರ್ಮ, ನರೇಂದ್ರ ಮೋದಿಯವರಿಗೆ ನನ್ನ ಸೊಸೆ ರಾವ್ಜಾ (6 ವರ್ಷ) ಮತ್ತು ಸೋದರಳಿಯ ಆರ್ಯನ್ (5 ವರ್ಷ) ನನ್ನ ಸೊಸೆ ಮತ್ತು ಸೋದರಳಿಯರು ತಮ್ಮದೇ ಆದ ರೀತಿಯಲ್ಲಿ ಬರೆದಿದ್ದಾರೆ. ದಯವಿಟ್ಟು ಅವರ ಹಲ್ಲುಗಳಿಗೆ ಏನಾದರೂ ಸಲಹೆ ಸೂಚನೆ ನೀಡಿ, ಏಕೆಂದರೆ ಅವರು ತಮ್ಮ ನೆಚ್ಚಿನ ಆಹಾರವನ್ನು ಜಗಿಯಲು ಸಾಧ್ಯವಾಗುತ್ತಿಲ್ಲ ಎಂದು ಬರೆದು ಶೇರ್ ಮಾಡಿಕೊಂಡಿದ್ದಾರೆ.
ಮೈಸೂರು: ಸಾಮಾನ್ಯವಾಗಿ ಮೊಬೈಲ್ ಕಳೆದು ಹೋದರೆ ಪೊಲೀಸ್ ಠಾಣೆಗೆ ದೂರು ನೀಡುವುದನ್ನು ನೋಡಿದ್ದೇವೆ. ಆದರೆ ವ್ಯಕ್ತಿಯೊಬ್ಬರು ಕಳುವಾದ ಮೊಬೈಲ್ ಹುಡುಕಿಸಿಕೊಡುವಂತೆ ರಾಜ್ಯದ ಮುಖ್ಯಮಂತ್ರಿಗೆ ಪತ್ರ ಬರೆದಿರುವ ವಿಚಿತ್ರ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಕುಂದನಹಳ್ಳಿಯಲ್ಲಿ ನಡೆದಿದೆ. ಇದನ್ನೂ ಓದಿ: ಸಿಧು ನೇತೃತ್ವದಲ್ಲೇ 2022ರ ಪಂಜಾಬ್ ಚುನಾವಣೆ: ಹರೀಶ್ ರಾವತ್
ಗ್ರಾಮದ ಜನತಾ ಬಡಾವಣೆ ನಿವಾಸಿ ಶಿವಣ್ಣ ಸಿಎಂಗೆ ಪತ್ರ ಬರೆದವರು. ಆಗಸ್ಟ್ 28 ರಂದು ಗ್ರಾಮಾಂತರ ಬಸ್ ನಿಲ್ದಾಣದಿಂದ ವುಡ್ ಲ್ಯಾಂಡ್ಸ್ ಚಿತ್ರಮಂದಿರದ ಕಡೆ ನಡೆದುಕೊಂಡು ಹೋಗುವಾಗ ವ್ಯಕ್ತಿಯೊಬ್ಬ ಮೊಬೈಲ್ ಕಿತ್ತುಕೊಂಡು ಹೋಗಿದ್ದಾನೆ. ಬಳಿಕ ಈ ಕುರಿತಂತೆ ತಾನು ಮೊಬೈಲ್ ಹುಡುಕಿಕೊಡುವಂತೆ ಲಷ್ಕರ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಆದರೆ ಇನ್ನೂ ಮೊಬೈಲ್ ಹುಡುಕಿಕೊಟ್ಟಿಲ್ಲ ಎಂದು ಆರೋಪಿಸಿದ್ದಾರೆ.
-ಆಚಾರ್ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ ರಾಯರೆಡ್ಡಿ ವಿರುದ್ಧ ತೀವ್ರ ಆಕ್ರೋಶ
ಕೊಪ್ಪಳ: ಸಚಿವ ಹಾಲಪ್ಪ ಆಚಾರ್ ರವರ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ ಹೇಳಿಕೆಗೆ ಎಲ್ಲೆಡೆ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಕುಟುಂಬದವರಿಗೆ ನಾನು ಯಾವುದೇ ರೀತಿಯ ಮನಸ್ಸಿಗೆ ನೋವು ಉಂಟುಮಾಡುವ ಉದ್ದೇಶವಿರಲಿಲ್ಲ ಎಂದು ಪತ್ರ ಬರೆದು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ಬಸವರಾಜ್ ರಾಯರೆಡ್ಡಿಯವರು, ಹಾಲಪ್ಪ ಆಚಾರ್ ಅವರಿಗೆ ಬರೆದಿರುವ ಪತ್ರದಲ್ಲಿ ವಿಷಾದವನ್ನು ವ್ಯಕ್ತಪಡಿಸಿದ್ದು, ನಾನು ಏನು ಕ್ಷೇತ್ರಕ್ಕೆ ಅಭಿವೃದ್ಧಿಯನ್ನು ಮಾಡಿಲ್ಲವೆನ್ನುವಂತಹ ಪ್ರಶ್ನೆ ಬಂತು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ನೀವು ಹಳ್ಳಿಯಲ್ಲಿ ಏನಂತಿರಲ್ಲಾ ಎಂದು ಕೇಳಿದಾಗ, ಸಭೆಯಲ್ಲಿ ಒಬ್ಬ ವ್ಯಕ್ತಿ ಆರು ಹಡೆದವರ ಮುಂದೆ ಮೂರು ಹಡೆದಾಕಿ ಏನು ಹೇಳತಾಳ ಎಂದು ಹೇಳಿದ ನಾನು ಹಡೆಯದೇ ಇರುವವರು ಇರುತ್ತಾರೆ ಎಂದೆ, ಆದರೆ ಈ ಮಾತು ನಿಮ್ಮನ್ನು ಉದ್ದೇಶಿಸಿ ಮಾತನಾಡಿದ್ದಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಪಂಚಮಸಾಲಿ ಸಮುದಾಯ
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಬಸವರಾಜ ರಾಯರೆಡ್ಡಿಯವರು, ಹಾಲಪ್ಪ ಆಚಾರ್ ವೈಯಕ್ತಿಕ ಬದುಕಿನ ಬಗ್ಗೆ ಬಹಿರಂಗವಾಗಿ ಮಾತನಾಡಿದ ‘ಆರು ಹಡೆದಾಕೆ ಮುಂದೆ ಮೂರು ಹಡೆದಾಕೆ ಏನು ಮಾಡುತ್ತಾಳೆ’ ಎಂದು ಮಾತಿನ ಭರದಲ್ಲಿ ಹಾಲಪ್ಪ ಆಚಾರ್ ವೈಯಕ್ತಿಕ ಜೀವನವನ್ನು ಟೀಕಿಸಿದ್ದರು. ಇದು ಪರೋಕ್ಷವಾಗಿ ಹಾಲಪ್ಪ ಆಚಾರ್ಗೆ ಮಕ್ಕಳು ಇಲ್ಲ ಎಂದು ವ್ಯಂಗ್ಯವಾಗಿ ಮಾತನಾಡಿದ್ದರು. ಈ ಮಾತಿಗೆ ಹಾಲಪ್ಪ ಆಚಾರ್ ಬೆಂಬಲಿಗರು, ಕ್ಷೇತ್ರದ ಜನರಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.
ಸದ್ಯ ಮನೆ ಬಿಟ್ಟು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಸ್ನೇಹಿತರ ಮನೆಯಲ್ಲಿ ಬಾಲಕಿ ಉಳಿದುಕೊಂಡಿದ್ದಾಳೆ. ನಂತರ ಪಿರಿಯಾಪಟ್ಟಣ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಂಪರ್ಕಿಸಿ, ಪತ್ರ ನೀಡಿದ್ದಾಳೆ. ಇದೀಗ ಬಾಲಮಂದಿರಲ್ಲಿ ಆಶ್ರಯ ಕೊಡಲು ಅಧಿಕಾರಿಗಳು ಮುಂದಾಗಿದ್ದಾರೆ. ಬಾಲ್ಯವಿವಾಹ ಮಾಡಲು ಯತ್ನಿಸುತ್ತಿದ್ದಾರೆ ಎಂದು ಬಾಲಕಿ ದೂರಿದ್ದಾಳೆ.