Tag: ಪದ್ಮನಾಭ ರೆಡ್ಡಿ

  • 4 ವರ್ಷದ ಬಳಿಕ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ  ಗೆದ್ದು ಬೀಗಿದ ಬಿಜೆಪಿ

    4 ವರ್ಷದ ಬಳಿಕ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಗೆದ್ದು ಬೀಗಿದ ಬಿಜೆಪಿ

    ಬೆಂಗಳೂರು: ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆದ್ದಿದ್ದರೂ ಅಧಿಕಾರದಿಂದ ವಂಚಿತಗೊಂಡಿದ್ದ ಬಿಜೆಪಿ ಈ ಬಾರಿ ಬಿಬಿಎಂಪಿ ಮೇಯರ್ ಸ್ಥಾನವನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ.

    ಇಂದು ನಡೆದ ಚುನಾವಣೆಯಲ್ಲಿ ಒಟ್ಟು 129 ಮತಗಳನ್ನು ಪಡೆಯುವ ಮೂಲಕ ಜೋಗುಪಾಳ್ಯ ವಾರ್ಡಿನ ಬಿಜೆಪಿ ಸದಸ್ಯ ಗೌತಮ್ ಕುಮಾರ್ ಜೈನ್ ಮೇಯರ್ ಆಗಿ ಆಯ್ಕೆ ಆಗಿದ್ದರೆ, ಬೊಮ್ಮನಹಳ್ಳಿ ವಾರ್ಡ್​ನ  ರಾಮ್ ಮೋಹನ್ ರಾಜು ಉಪ ಮೇಯರ್ ಆಗಿ ಆಯ್ಕೆ ಆಗಿದ್ದಾರೆ.

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸಿದ್ದರೂ ಕೊನೆ ಕ್ಷಣದಲ್ಲಿ ಪಕ್ಷೇತರ ಪಾಲಿಕೆ ಸದಸ್ಯರ ಜೊತೆಗಿನ ಮಾತುಕತೆ ಯಶಸ್ವಿಯಾಗದ ಪರಿಣಾಮ ಮೇಯರ್ ಹುದ್ದೆ ಕೈ ತಪ್ಪಿತ್ತು. ಆದರೆ ಈ ಬಾರಿ ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿದ ಪರಿಣಾಮ ಬಿಜೆಪಿ ಬಿಬಿಎಂಪಿ ಅಧಿಕಾರವನ್ನು ಹಿಡಿದಿದೆ.

    ಮೇಯರ್, ಉಪ ಮೇಯರ್ ಚುನಾವಣೆಯಲ್ಲಿ 257 ಮಂದಿ ಮತ ಚಲಾಯಿಸುವ ಹಕ್ಕು ಹೊಂದಿದ್ದರೂ 249 ಮಂದಿ ಹಾಜರಾಗಿದ್ದರು. 8 ಮಂದಿ ಗೈರಾಗಿರುವ ಕಾರಣ ಬಹುಮತಕ್ಕೆ 125 ಸದಸ್ಯರ ಬೆಂಬಲ ಬೇಕಿತ್ತು. ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದ ಪದ್ಮನಾಭ ರೆಡ್ಡಿ ನಾಮಪತ್ರವನ್ನು ಹಿಂದಕ್ಕೆ ಪಡೆದಿದ್ದರು.

    ಪಕ್ಷೇತರ ಸದಸ್ಯರು ಬಿಜೆಪಿ ಕೈ ಹಿಡಿಯಲಿರುವ ಕಾರಣ ಚುನಾವಣೆಗೂ ಮೊದಲೇ ಈ ಬಾರಿ ಮೇಯರ್ ಪಟ್ಟ ಸಿಗಲಿದೆ ಎನ್ನುವ ನಿರೀಕ್ಷೆ ಇತ್ತು. ನಿರೀಕ್ಷಿಸಿದಂತೆ 5 ಮಂದಿ ಪಕ್ಷೇತರ ಸದಸ್ಯರು ಬಿಜೆಪಿಯನ್ನು ಬೆಂಬಲಿಸಿದ್ದರು. ಪ್ರಾದೇಶಿಕ ಚುನಾವಣಾ ಆಯುಕ್ತ ಹರ್ಷ ಗುಪ್ತಾ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

    ಗೆದ್ದಿದ್ದು ಹೇಗೆ?
    ಕಳೆದ 4 ವರ್ಷಗಳಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳನ್ನು ಮೇಯರ್, ಉಪ ಮೇಯರ್ ಸ್ಥಾನಕ್ಕೆ ಗೆಲ್ಲಿಸಲು ರಣತಂತ್ರ ರೂಪಿಸಿ, ಯಶಸ್ವಿಯಾಗುತ್ತಿದ್ದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್ ಮತ್ತು ಮುನಿರತ್ನ ಶಾಸಕ ಸ್ಥಾನದಿಂದ ಅನರ್ಹಗೊಂಡು, ಕಾಂಗ್ರೆಸ್‍ನಿಂದ ದೂರ ಉಳಿದಿದ್ದರು.

    ರಾಜ್ಯಮಟ್ಟದಲ್ಲಿಮೈತ್ರಿ ಮುರಿದುಕೊಂಡಿದ್ದರೂ ಬಿಬಿಎಂಪಿಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಮಾಡಿಕೊಂಡಿತ್ತು. ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮೇಯರ್ ಸ್ಥಾನಕ್ಕೆ ಸತ್ಯನಾರಾಯಣ ನಾಮಪತ್ರ ಸಲ್ಲಿಕೆ ಮಾಡಿದ್ದರೆ ಉಪಮೇಯರ್ ಸ್ಥಾನಕ್ಕೆ ಗಂಗಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್‍ನಿಂದ ಅನರ್ಹಗೊಂಡಿರುವ ಶಾಸಕ ಗೋಪಾಲಯ್ಯ ಅವರ ಪತ್ನಿ ಹೇಮಲತಾ ಅವರು ಮೈತ್ರಿ ಅಭ್ಯರ್ಥಿ ಸತ್ಯನಾರಾಯಣ ಅವರನ್ನು ಬೆಂಬಲಿಸಿದ್ದರು.

    ಗೈರಾದವರು ಯಾರು?
    ಕಾಂಗ್ರೆಸ್‍ನಿಂದ ಸಂಸದ ಡಿ.ಕೆ ಸುರೇಶ್, ರಾಜ್ಯಸಭಾ ಸದಸ್ಯರಾದ ಕೆ.ಪಿ ರಾಮಮೂರ್ತಿ, ಜೈರಾಮ್ ರಮೇಶ್, ಪರಿಷತ್ ಸದಸ್ಯ ರಘು ಆಚಾರ್, ಹೇರೋಹಳ್ಳಿ ವಾರ್ಡಿನ ರಾಜಣ್ಣ ಗೈರಾಗಿದ್ದರೆ ಬಿಜೆಪಿಯಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಜೆಡಿಎಸ್‍ನಿಂದ ದಾಸರಹಳ್ಳಿ ಶಾಸಕ ಮಂಜುನಾಥ್ ಗೈರು ಹಾಜರಿ ಹಾಕಿದ್ದರು.

  • ಬಿಬಿಎಂಪಿ ಮೇಯರ್ ಅಭ್ಯರ್ಥಿ – ಬಿಎಸ್‍ವೈ ವಿರುದ್ಧ ಸೆಡ್ಡು ಹೊಡೆದು ಗೆದ್ದ ಕಟೀಲ್

    ಬಿಬಿಎಂಪಿ ಮೇಯರ್ ಅಭ್ಯರ್ಥಿ – ಬಿಎಸ್‍ವೈ ವಿರುದ್ಧ ಸೆಡ್ಡು ಹೊಡೆದು ಗೆದ್ದ ಕಟೀಲ್

    ಬೆಂಗಳೂರು: ಬಿಬಿಎಂಪಿ ಮೇಯರ್ ಅಭ್ಯರ್ಥಿ ಆಯ್ಕೆಯಲ್ಲೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬಿಎಸ್‍ವೈ ವಿರುದ್ಧ ಸೆಡ್ಡು ಹೊಡೆದು ಗೆದ್ದಿದ್ದಾರೆ.

    ಹೌದು. ಕಳೆದ 4 ವರ್ಷಗಳಿಂದ ವಿರೋಧ ಪಕ್ಷದ ನಾಯಕರಾಗಿದ್ದ ಪದ್ಮನಾಭ ರೆಡ್ಡಿ ಅಥವಾ ಎಲ್ ಶ್ರೀನಿವಾಸ್ ಅವರನ್ನು ಮೇಯರ್ ಅಭ್ಯರ್ಥಿಯನ್ನಾಗಿ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದರು. ಆದರೆ ಜೋಗುಪಾಳ್ಯದ ಕಾರ್ಪೊರೇಟರ್ ಗೌತಮ್ ಕುಮಾರ್ ಜೈನ್ ಪರ ನಳೀನ್ ಕುಮಾರ್ ಬ್ಯಾಟಿಂಗ್ ನಡೆಸಿದ್ದರು. ಅಂತಿಮವಾಗಿ ಹೈಕಮಾಂಡ್ ಗೌತಮ್ ಹೆಸರು ಆಯ್ಕೆ ಮಾಡಿದ್ದು ಮೇಯರ್ ಆಯ್ಕೆ ವಿಚಾರದಲ್ಲೂ ಬಿಎಸ್‍ವೈಗೆ ಹಿನ್ನಡೆಯಾಗಿದೆ. ಪಕ್ಷ ಸಂಘ ನಿಷ್ಠೆ ಹೊಂದಿದವರಿಗೆ ಮೇಯರ್ ಪಟ್ಟ ನೀಡಲು ಮುಂದಾದ ಹಿನ್ನೆಲೆಯಲ್ಲಿ ಗೌತಮ್ ಕುಮಾರ್ ಹೆಸರನ್ನು ಅಂತಿಮಗೊಳಿಸಲಾಗಿದೆ.

    ಸರ್ಕಾರ ಬಿಬಿಎಂಪಿ ಮೇಯರ್ ಚುನಾವಣೆಯನ್ನು ಮುಂದೂಡಲು ಪ್ರಯತ್ನ ನಡೆಸಿತ್ತು. ಆದರೆ ಪ್ರಾದೇಶಿಕ ಚುನಾವಣಾ ಆಯುಕ್ತ ಹರ್ಷ ಗುಪ್ತಾ ಇಂದೇ ಚುನಾವಣೆ ನಡೆಸುವುದಾಗಿ ಹೇಳಿದ್ದರು. ಹೀಗಾಗಿ ಸೋಮವಾರ ರಾತ್ರಿ ಯಡಿಯೂರಪ್ಪ ಮೇಯರ್ ಚುನಾವಣೆ ಸಂಬಂಧ ಚರ್ಚೆ ನಡೆಸಲು ಬೆಂಗಳೂರಿಗೆ ಬರಬೇಕಿತ್ತು. ಆದರೆ ತಾನು ಸೂಚಿಸಿದ ವ್ಯಕ್ತಿಗಳಿಗೆ ಬೆಂಬಲ ಸಿಗುತ್ತಿಲ್ಲ ಎನ್ನುವುದು ತಿಳಿಯುತ್ತಿದ್ದಂತೆ ಶಿಕಾರಿಪುರದಲ್ಲೇ ಇರಲು ನಿರ್ಧರಿಸಿದರು ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಪದ್ಮನಾಭ ರೆಡ್ಡಿ ಸೋತಿದ್ದು ಎಲ್ಲಿ?
    ಕಳೆದ ನಾಲ್ಕು ವರ್ಷವೂ ಬಿಬಿಎಂಪಿ ವಿಪಕ್ಷ ನಾಯಕನಾಗಿದ್ದೂ ಮಾತ್ರವಲ್ಲದೇ ಈ ಸ್ಥಾನವನ್ನು ಯಾರಿಗೂ ಬಿಟ್ಟುಕೊಟ್ಟಿರಲಿಲ್ಲ. ಪಕ್ಷದ ಪಾಲಿಕೆ ಸದಸ್ಯರಲ್ಲಿ ವಿಶ್ವಾಸ ಕಳೆದುಕೊಂಡ ಹಿನ್ನೆಲೆಯಲ್ಲಿ ಮೇಯರ್ ಅಭ್ಯರ್ಥಿಯಾಗುವುದು ತಪ್ಪಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೆಜೆ ಜಾರ್ಜ್ ವಿರುದ್ಧ ಸರ್ವಜ್ಞನಗರ ಕ್ಷೇತ್ರದಲ್ಲಿ ಸ್ಪರ್ಧೆಗೆ ನಿಲ್ಲುವಂತೆ ಸೂಚಿಸಲಾಗಿತ್ತು. ಖುದ್ದು ಹೈಕಮಾಂಡ್ ಸೂಚನೆ ನೀಡಿದ್ದರೂ ಪದ್ಮನಾಭ ರೆಡ್ಡಿ ಸ್ಪರ್ಧಿಸಲು ಹಿಂದೇಟು ಹಾಕಿದ್ದರು. ಮುಖ್ಯವಾಗಿ ಪದ್ಮನಾಭ ರೆಡ್ಡಿ ಯಡಿಯೂರಪ್ಪ ತಂಡದಲ್ಲಿ ಗುರುತಿಸಿಕೊಂಡಿದ್ದಾರೆ. ಇದರ ಜೊತೆ ಇವರು ಮೂಲ ಬಿಜೆಪಿಯವರಲ್ಲ. ಜೆಡಿಎಸ್‍ನಿಂದ ವಲಸೆ ಬಂದಿದ್ದಾರೆ ಎನ್ನುವುದನ್ನು ಪರಿಗಣಿಸಿ ಆಯ್ಕೆ ಮಾಡಿಲ್ಲ ಎಂಬ ವಿಚಾರ ತಿಳಿದುಬಂದಿದೆ.

    ಗೌತಮ್ ಆಯ್ಕೆಗೆ ಕಾರಣ:
    ಮೊದಲನೆಯದು ಸಂಘದ ನಿಷ್ಠರಾಗಿರುವುದು ಪ್ರಮುಖ ಕಾರಣ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹ್ಯಾರಿಸ್ ವಿರುದ್ಧ ಸ್ಪರ್ಧಿಸಲು ಶಾಂತಿನಗರ ಕ್ಷೇತ್ರದ ಟಿಕೆಟ್ ಕೇಳಿದ್ದರು. ಆದರೆ ಯಡಿಯೂರಪ್ಪ ಮತ್ತು ತಂಡ ಟಿಕೆಟ್ ನೀಡಲು ಒಪ್ಪಿಗೆ ಸೂಚಿಸಿರಲಿಲ್ಲ. ಬೆಂಗಳೂರು ಕೇಂದ್ರ ಕ್ಷೇತ್ರದ ಸಂಸದ ಪಿಸಿ ಮೋಹನ್ ಬೆಂಬಲ ಗೌತಮ್ ಅವರಿಗೆ ಇದೆ. ಮೂಲ ಬಿಜೆಪಿಯವರಿಗೆ ಹೆಚ್ಚು ಪ್ರಾಧನ್ಯತೆ ನೀಡಬೇಕೆಂಬ ನಿರ್ಧಾರದ ಹಿನ್ನೆಲೆಯಲ್ಲಿ ಗೌತಮ್ ಅವರನ್ನೇ ಆಯ್ಕೆ ಮಾಡಲಾಗಿದೆ ಎನ್ನುವ ವಿಚಾರ ತಿಳಿದು ಬಂದಿದೆ.

    ಈ ಎಲ್ಲ ಕಾರಣದ ಜೊತೆಗೆ ನಳೀನ್ ಕುಮಾರ್ ಕಟೀಲ್ ಬೆಂಗಳೂರಿನ ನಾಯಕರ ಮಾತನ್ನು ಆಲಿಸಿದರೂ ಸಂಘ ಪರಿವಾರದ ಮುಖಂಡರ ನಿರ್ಧಾರ ಕೇಳಿದರೂ ಅಂತಿಮವಾಗಿ ಹೈಕಮಾಂಡ್ ತೀರ್ಮಾನವನ್ನೇ ಒಪ್ಪಿಕೊಳ್ಳುತ್ತಾರೆ. ಹೀಗಾಗಿ ಮೇಯರ್ ಅಭ್ಯರ್ಥಿಯನ್ನಾಗಿ ಗೌತಮ್ ಕುಮಾರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.

  • ಡಿಸಿಎಂ ಪರಮೇಶ್ವರ್ ಸುಳ್ಳಿನ ಸರದಾರ – ಬಿಬಿಎಂಪಿ ಸಾಲದ ಬಗ್ಗೆ ಶ್ವೇತಪತ್ರ ಹೊರಡಿಸಿ ಪದ್ಮನಾಭರೆಡ್ಡಿ ಸವಾಲು

    ಡಿಸಿಎಂ ಪರಮೇಶ್ವರ್ ಸುಳ್ಳಿನ ಸರದಾರ – ಬಿಬಿಎಂಪಿ ಸಾಲದ ಬಗ್ಗೆ ಶ್ವೇತಪತ್ರ ಹೊರಡಿಸಿ ಪದ್ಮನಾಭರೆಡ್ಡಿ ಸವಾಲು

    ಬೆಂಗಳೂರು: ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಸುಳ್ಳಿನ ಸರದಾರರಾಗಿದ್ದು, ಅವರಿಗೆ ತಾಕತ್ತು ಇದ್ದರೆ ಶ್ವೇತಪತ್ರ ಬಿಬಿಎಂಪಿ ಸಾಲದ ಬಗ್ಗೆ ಬಿಡುಗಡೆ ಮಾಡಲಿ ಎಂದು ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ ಸವಾಲು ಹಾಕಿದ್ದಾರೆ.

    ಬಿಬಿಎಂಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪದ್ಮಾನಾಭ ರೆಡ್ಡಿ, ಬೆಂಗಳೂರಿನ ಅಭಿವೃದ್ಧಿ ಸಚಿವರು ಮತ್ತು ಉಪಮುಖ್ಯಮಂತ್ರಿಗಳು ನಿನ್ನೆ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಅಡವಿಟ್ಟಿದ್ದ ಪುರಾತನ ಕಟ್ಟಡಗಳನ್ನ ಬಿಡಿಸಿಕೊಂಡಿದ್ದೇವೆ ಎಂದು ಹೇಳಿ ನಮ್ಮ ಪಕ್ಷದ ವಿರುದ್ಧ ಟೀಕೆ ಮಾಡಿದ್ದಾರೆ. ಆದರೆ ಬಿಬಿಎಂಪಿ ಆಡಳಿತ ನಡೆಸಿದ ಅವಧಿಯಲ್ಲಿ ಪಾಲಿಕೆಯ ಆಸ್ತಿಗಳನ್ನ ಅಡವಿಟ್ಟ ಕುರಿತು ಹಾಗೂ ಸಾಲ ಪಡೆದಿರುವ ಕುರಿತು ನಿಮಗೆ ತಾಕತ್ತಿದ್ದರೆ ಶ್ವೇತಪತ್ರ ಹೊರಡಿಸಿ ಎಂದು ಸವಾಲು ಎಸೆದರು.

    ಸಿದ್ದರಾಮಯ್ಯ ಅವರು ಬಿಬಿಎಂಪಿ ಗೆ 7 ಸಾವಿರ ಕೋಟಿ ರೂ. ಬಿಡುಗಡೆ ಮಾಡಿದರು ಎಂದು ಹೇಳಿ ಸುಮ್ಮನೆ ಪ್ರಚಾರ ಪಡೆದುಕೊಳ್ಳುತ್ತಿದ್ದೀರಾ. ಆದರೆ ಕಾಂಗ್ರೆಸ್ ಅಧಿಕಾರದಲ್ಲಿ ಬಿಬಿಎಂಪಿಯಲ್ಲಿ ಹೆಚ್ಚಿನ ಸಾಲ ಮಾಡಿದ್ದು, ಆ ಸಾಲ ತೀರಿಸಲು ಕಟ್ಟಡಗಳ ಅಡ ಇಡಬೇಕಾಯಿತು. ಹೀಗೆ ಇಲ್ಲ ಸಲ್ಲದ ಆರೋಪ ಮಾಡಿ ಟೀಕೆ ಮಾಡುತ್ತಿದ್ದಾರೆ ಎಂದು ಡಿಸಿಎಂ ಪರಮೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದರು.

    ಬಿಬಿಎಂಪಿಯಲ್ಲಿ 1,800 ಕೋಟಿ ರೂ.ಗೂ ಹೆಚ್ಚಿನ ಪೆಂಡಿಂಗ್ ಬಿಲ್ ಇವೆ. ಸಿದ್ದರಾಮಯ್ಯ ಅವರ ಆಡಳಿತ ಬಂದಾಗಿನಿಂದ ಕಸ ವಿಲೇವಾರಿಗೆ ಟೆಂಡರ್ ಕರೆಯದೆ 1 ಸಾವಿರ ಕೋಟಿ ರೂ.ಗೂ ಹೆಚ್ಚಿನ ಕಾಮಗಾರಿ ನಡೆದಿದೆ. ಕಸ ವಿಲೇವಾರಿ ಸಂಸ್ಕರಣಾ ಘಟಕಗಳಿಗೆ ಸುಮಾರು 500 ಕೋಟಿ ರೂ. ಸಾರ್ವಜನಿಕ ಹಣವನ್ನು ಖರ್ಚು ಮಾಡಿದ್ರೂ ಕೂಡ ಸರಿಯಾಗಿ ನಿರ್ವಹಣೆಯಾಗಿಲ್ಲ. ಬಿಬಿಎಂಪಿಯಲ್ಲಿ ಗುತ್ತಿಗೆದಾರರಿಗೆ ಬಿಲ್ ಪಾವತಿಯಾಗಿಲ್ಲ. ಬಿಜೆಪಿ ಪಕ್ಷದ ಆಡಳಿತದಲ್ಲಿ ಆದ ಅಭಿವೃದ್ಧಿ ಕಾರ್ಯಗಳನ್ನ ನಿಮ್ಮ ಸರ್ಕಾರದ ಹುಳುಕನ್ನು ಮುಚ್ಚಿಕೊಳ್ಳಲು ಟೀಕೆ ಮಾಡುತ್ತಿದ್ದೀರಾ. ನಿಮಗೆ ತಾಕತ್ತಿದ್ದರೆ 1989 ರಿಂದ ಇಲ್ಲಿಯವರೆಗೂ ಬಿಜೆಪಿ ಅವಧಿಯಲ್ಲಿ ಎಷ್ಟು ಸಾಲ ಮಾಡಿದ್ದೇವೆ ಎಂದು ಶ್ವೇತಾ ಪತ್ರ ಹೊರಡಿಸಿ ಎಂದರು. ಅಲ್ಲದೇ ಈ ಕುರಿತು ಡಿಸಿಎಂ ಅವರಿಗೆ ನೇರ ಪತ್ರ ಬರೆದು ನನ್ನ ಪ್ರಶ್ನೆಗಳಿಗೆ ಉತ್ತರಿಸುವಂತೆ ಹೇಳುವುದಾಗಿ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಪರಿಷತ್ ಸದಸ್ಯ ಅಲ್ಲಂ ವೀರಭದ್ರಪ್ಪರಿಂದ ಎರಡೆರಡು ಕಡೆ ಮತದಾನ- ಪದ್ಮನಾಭ ರೆಡ್ಡಿ ಆರೋಪ

    ಪರಿಷತ್ ಸದಸ್ಯ ಅಲ್ಲಂ ವೀರಭದ್ರಪ್ಪರಿಂದ ಎರಡೆರಡು ಕಡೆ ಮತದಾನ- ಪದ್ಮನಾಭ ರೆಡ್ಡಿ ಆರೋಪ

    ಬೆಂಗಳೂರು: ಬಳ್ಳಾರಿ ಪಾಲಿಕೆ ಮೇಯರ್-ಉಪಮೇಯರ್ ಆಯ್ಕೆ ಚುನಾವಣೆಯಲ್ಲಿ ವಿಧಾನ ಪರಿಷತ್ ಸದಸ್ಯ ಅಲ್ಲಂ ವೀರಭದ್ರಪ್ಪ ಅಕ್ರಮ ಮತದಾನ ಮಾಡಿದ್ದಾರೆ ಅನ್ನೋದಾಗಿ ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ ಆರೋಪಿಸಿದ್ದಾರೆ.

    ವಿಧಾನ ಪರಿಷತ್ ಸದಸ್ಯರಾದ ಅಲ್ಲಂ ವೀರಭದ್ರಪ್ಪ ಅವರು ಕಳೆದ ಸೆಪ್ಟೆಂಬರ್‍ನಲ್ಲಿ ನಡೆದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಮೇಯರ್- ಉಪಮೇಯರ್ ಚುನಾವಣೆಯಲ್ಲಿ ತಮ್ಮ ಮತದಾನದ ಹಕ್ಕನ್ನು ಬೆಂಗಳೂರಿನ ವಿಳಾಸಕ್ಕೆ ವರ್ಗಹಿಸಿಕೊಂಡಿದ್ರು. ಮಾತ್ರವಲ್ಲ ಬಿಬಿಎಂಪಿ ಮೇಯರ್- ಉಪಮೇಯರ್ ಚುನಾವಣೆಯಲ್ಲಿ ಮತದಾನ ಸಹ ಮಾಡಿದ್ರು.

    ಇದೀಗ ಬಳ್ಳಾರಿ ಪಾಲಿಕೆಯಲ್ಲಿಯೂ ಮೇಯರ್-ಉಪಮೇಯರ್ ಆಯ್ಕೆಗೆ ಮತದಾನ ಮಾಡಿದ್ದಾರೆ. ಈ ಮೂಲಕ ಜನ ಪ್ರತಿನಿಧಿಯಾದವರು ಎರಡೆರೆಡು ಕಡೆ ಅಕ್ರಮ ಮತದಾನ ಮಾಡಿದ್ದು, ಚುನವಣಾ ಆಯೋಗ ಅಲ್ಲಂ ಪ್ರಭು ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಪದ್ಮನಾಭ ರೆಡ್ಡಿ ಆಗ್ರಹಿಸಿದ್ರು.