Tag: ಪದ್ಮಶ್ರೀ ಪ್ರಶಸ್ತಿ

  • ರಾಜ್ಯದ ಮೂವರಿಗೆ ಪದ್ಮಶ್ರೀ ಪ್ರಶಸ್ತಿ ಗರಿ

    ರಾಜ್ಯದ ಮೂವರಿಗೆ ಪದ್ಮಶ್ರೀ ಪ್ರಶಸ್ತಿ ಗರಿ

    ನವದೆಹಲಿ: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಶ್ರೀ ಪ್ರಶಸ್ತಿ ಘೋಷಿಸಿದ್ದಾರೆ. ಕರ್ನಾಟಕ ರಾಜ್ಯದ ಮೂವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

    ಡಾ. ವಿಜಯಲಕ್ಷ್ಮಿ ದೇಶಮಾನೆ, ವೆಂಕಪ್ಪ ಅಂಬಾಜೀ ಸುಗಟ್ಕೇರ್ ಹಾಗೂ ಭೀಮವ್ವ ದೊಡ್ಡ ಬಾಲಪ್ಪಗೆ ಪ್ರಶಸ್ತಿ ಲಭಿಸಿದೆ.

    ಯಾರ‍್ಯಾರಿಗೆ ಪ್ರಶಸ್ತಿ?
    ನರೇನ್ ಗುರುಂಗ್ (ಜಾನಪದ ಗಾಯಕ) – ನೇಪಾಳ, ಹರಿಮನ್ ಶರ್ಮಾ (ಸೇಬು ಬೆಳೆಗಾರ) – ಹಿಮಾಚಲ ಪ್ರದೇಶ, ಜುಮ್ಡೆ ಯೊಮ್ಗಮ್ ಗಾಮ್ಲಿನ್ (ಸಾಮಾಜಿಕ ಕಾರ್ಯಕರ್ತ) – ಅರುಣಾಚಲ ಪ್ರದೇಶ, ವಿಲಾಸ್ ಡಾಂಗ್ರೆ (ಹೋಮಿಯೋಪತಿ ವೈದ್ಯ) – ಮಹಾರಾಷ್ಟ್ರ, ಜೋನಾಸ್ ಮಾಸೆಟ್ಟಿ (ವೇದಾಂತ ಗುರು) ಬ್ರೆಜಿಲ್, ಹರ್ವಿಂದರ್ ಸಿಂಗ್ (ಪ್ಯಾರಾಲಿಂಪಿಯನ್ ಚಿನ್ನದ ಪದಕ ವಿಜೇತ) ಹರಿಯಾಣ, ಭೀಮ್ ಸಿಂಗ್ ಭಾವೇಶ್ (ಸಮಾಜ ಕೆಲಸ) ಬಿಹಾರ, ಪಿ.ದಕ್ಷಿಣ ಮೂರ್ತಿ (ಡೋಲು ಕಲಾವಿದ) ಪುದುಚೇರಿ, ಎಲ್. ಹ್ಯಾಂಗ್‌ಥಿಂಗ್ (ಕೃಷಿ-ಹಣ್ಣುಗಳು) ನಾಗಾಲ್ಯಾಂಡ್, ಬೇರು ಸಿಂಗ್ ಚೌಹಾಣ್ (ಜಾನಪದ ಗಾಯಕ) – ಮಧ್ಯಪ್ರದೇಶ, ಶೇಖಾ ಎ.ಜೆ. ಅಲ್ ಸಬಾಹ್ (ಯೋಗ) – ಕುವೈತ್

  • ಬಜರಂಗ್‌ ಪುನಿಯಾ ಬೆನ್ನಲ್ಲೇ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ ಕುಸ್ತಿಪಟು ವೀರೇಂದ್ರ ಸಿಂಗ್‌

    ಬಜರಂಗ್‌ ಪುನಿಯಾ ಬೆನ್ನಲ್ಲೇ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ ಕುಸ್ತಿಪಟು ವೀರೇಂದ್ರ ಸಿಂಗ್‌

    ನವದೆಹಲಿ: ಭಾರತದ ಕುಸ್ತಿ ಅಖಾಡದಲ್ಲಿ ಪ್ರಶಸ್ತಿ ವಾಪ್ಸಿ ಚಳುವಳಿ ಮುಂದುವರಿದಿದೆ. ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ (Brij Bhushan Sharan Singh) ಆಪ್ತ ಸಂಜಯ್‌ ಸಿಂಗ್‌ (Sanjay Singh) ಭಾರತೀಯ ಕುಸ್ತಿ ಫೆಡರೇಷನ್‌ (WFI) ಅಧ್ಯಕ್ಷರಾಗಿ ಆಯ್ಕೆ ಮಾಡಿರುವುದು ವಿರೋಧಿಸಿ ಕುಸ್ತಿಪಟು ವೀರೇಂದ್ರ ಸಿಂಗ್ ಪದ್ಮಶ್ರೀ ಪ್ರಶಸ್ತಿಯನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ.

    ನನ್ನ ಸಹೋದರಿ ಮತ್ತು ದೇಶದ ಪುತ್ರಿಗಾಗಿ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾನು ಪದ್ಮಶ್ರೀಯನ್ನು ಹಿಂದಿರುಗಿಸುತ್ತೇನೆ. ನಿಮ್ಮ ಮಗಳು ಮತ್ತು ನನ್ನ ಸಹೋದರಿ ಸಾಕ್ಷಿ ಮಲಿಕ್ (Sakshee Malikkh) ಅವರ ಬಗ್ಗೆ ನನಗೆ ಹೆಮ್ಮೆ ಇದೆ. ನೀವೂ ನಿರ್ಧಾರ ಕೈಗೊಳ್ಳಿ ಎಂದು ನಾನು ದೇಶದ ಅಗ್ರ ಆಟಗಾರರಿಗೂ ಸಹ ವಿನಂತಿಸುತ್ತೇನೆ ಎಂದು ವೀರೇಂದ್ರ ಸಿಂಗ್‌ (Virender Singh), ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ. ಇದನ್ನೂ ಓದಿ: ಬ್ರಿಜ್‌ ಭೂಷಣ್‌ ಆಪ್ತನಿಗೆ ಕುಸ್ತಿ ಅಧ್ಯಕ್ಷ ಪಟ್ಟ – ವಿರೋಧಿಸಿ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ ಕುಸ್ತಿಪಟು ಬಜರಂಗ್‌ ಪುನಿಯಾ

    ಕುಸ್ತಿಪಟು ಬಜರಂಗ್‌ ಪುನಿಯಾ ಅವರು ಶುಕ್ರವಾರ ಸರ್ಕಾರಕ್ಕೆ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ್ದರು. ಅವರ ಬೆನ್ನಲ್ಲೇ ವೀರೇಂದ್ರ ಸಿಂಗ್‌ ಇಂದು ಪ್ರಶಸ್ತಿ ವಾಪಸ್‌ ಮಾಡಿದ್ದಾರೆ. ಸಂಜಯ್‌ ಸಿಂಗ್‌ ಆಯ್ಕೆ ವಿರೋಧಿಸಿ ಸಾಕ್ಷಿ ಮಲಿಕ್‌ ನಡೆಸುತ್ತಿರುವ ಹೋರಾಟಕ್ಕೆ ಎಲ್ಲರೂ ಬೆಂಬಲ ಸೂಚಿಸಿದ್ದಾರೆ.

    ಕುಸ್ತಿಪಟು ಸಾಕ್ಷಿ ಮಲಿಕ್‌ ಅವರು ಗುರುವಾರ ಕುಸ್ತಿಗೆ ವಿದಾಯ ಹೇಳಿದ್ದಾರೆ. ಸುದ್ದಿಗೋಷ್ಠಿ ವೇಳೆ ಶೂಗಳನ್ನು ಬಿಚ್ಚಿ ಟೇಬಲ್‌ ಮೇಲಿಟ್ಟು ಕಣ್ಣೀರಿಡುತ್ತಾ ಕುಸ್ತಿಗೆ ಸಾಕ್ಷಿ ವಿದಾಯ ಹೇಳಿದ್ದರು. ಇದನ್ನೂ ಓದಿ: ಬ್ರಿಜ್‌ ಭೂಷಣ್‌ ಆಪ್ತ ಕುಸ್ತಿ ಅಧ್ಯಕ್ಷ: ಶೂ ಬಿಚ್ಚಿಟ್ಟು‌, ಕಣ್ಣೀರಿಡುತ್ತಾ ಕುಸ್ತಿಗೆ ವಿದಾಯ ಹೇಳಿದ ಸಾಕ್ಷಿ ಮಲಿಕ್!

    ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತದ ಮೊದಲ ಬಾಕ್ಸರ್ ವಿಜೇಂದರ್ ಸಿಂಗ್ ಕೂಡ ನಿನ್ನೆ ಮಲಿಕ್‌ಗೆ ಬೆಂಬಲ ಘೋಷಿಸಿದ್ದಾರೆ. ಒಲಿಂಪಿಕ್ ಪದಕ ವಿಜೇತರಿಗೆ ನ್ಯಾಯ ನೀಡದಿದ್ದರೆ, ನಾವು ಅದನ್ನು ಹೇಗೆ ಪಡೆಯೋದು ಎಂದು ಹೆಣ್ಣುಮಕ್ಕಳ ಪೋಷಕರು ಚಿಂತಿತರಾಗಿದ್ದಾರೆ. ಪ್ರಧಾನಿ, ಉಪರಾಷ್ಟ್ರಪತಿ ಮತ್ತು ರಾಷ್ಟ್ರಪತಿ ಎಲ್ಲರೂ ಬಂದು ಇದು ಏಕೆ ಸಂಭವಿಸಿತು ಎಂದು ಉತ್ತರಿಸಬೇಕು. ಇಂಥ ಬೆಳವಣಿಗೆಗಳು ನ್ಯಾಯ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ರಚನೆಯ ಮೇಲೆ ಸಾಕಷ್ಟು ಪ್ರಶ್ನೆ ಹುಟ್ಟುಹಾಕುತ್ತದೆ ಎಂದು ವಿಜೇಂದರ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

  • ಸುರಂಗ ಕೊರೆದು ನೀರು ಹರಿಸಿದ ಮಹಾಲಿಂಗ ನಾಯ್ಕರಿಗೆ ಪದ್ಮಶ್ರೀ

    ಸುರಂಗ ಕೊರೆದು ನೀರು ಹರಿಸಿದ ಮಹಾಲಿಂಗ ನಾಯ್ಕರಿಗೆ ಪದ್ಮಶ್ರೀ

    ಬೆಂಗಳೂರು: ಕೃಷಿ ಕಾಯಕದ ಮೂಲಕ ಸ್ವಾವಲಂಬಿ, ಕರಾವಳಿ ಭಾಗದ ಭಗೀರಥ ಎಂದೇ ಗುರುತಿಸಿಕೊಂಡ ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ಮಹಾಲಿಂಗ ನಾಯ್ಕ (76) ಅವರು ಕೃಷಿ ಕ್ಷೇತ್ರದ ಸಾಧನೆಗಾಗಿ 2022ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರ ಸಾಧನೆಯ ಹಿಂದೆನ ಕಥೆ ರೋಚಕವಾಗಿದೆ.

    ಮಹಾಲಿಂಗ ನಾಯ್ಕ ಕೃಷಿಯೇ ಬದುಕಿಗೆ ಮೂಲಾಧಾರವೆಂಬ ಕಲ್ಪನೆಯನ್ನು ಬಿತ್ತುತ್ತಿರುವ ಸಾಧಕ. ಕೃಷಿ ಕಾಯಕದ ಮೂಲಕ ಸ್ವಾವಲಂಬಿ ಜೀವನ ಸಾಧ್ಯ, ಆಧುನಿಕ ತಲೆಮಾರಿಗೆ ತೋರಿಸಿಕೊಟ್ಟವರು. ಕೃಷಿಗೆ ನೀರು ಹಾಯಿಸಲು ಪಂಪ್ ಸೆಟ್‍ಗಳ ಸೌಲಭ್ಯಗಳೇ ಇಲ್ಲದ ಕಾಲದಲ್ಲಿ ಹಿಂದಿನ ತಲೆಮಾರಿನವರು ಅವಲಂಬಿಸಿದ್ದ ಸುರಂಗ ನೀರಿನ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು, ಇದೇ ವ್ಯವಸ್ಥೆಯಲ್ಲಿ ವಿದ್ಯುತ್ ರಹಿತವಾಗಿ ಗುರುತ್ವಾಕರ್ಷಣೆಯ ನೆರವಿನಲ್ಲಿ ಕೃಷಿಗೆ ತುಂತುರು ನೀರಾವರಿ, ಹನಿ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಸಾಧನೆಯ ಹಿನ್ನೆಲೆ: ಅಡಿಕೆ, ತೆಂಗಿನ ಮರ ಏರುವುದರಲ್ಲಿ ಪರಿಣತಿ ಹೊಂದಿದ್ದ ಕೃಷಿ ಕೂಲಿ ಕಾರ್ಮಿಕರಾಗಿದ್ದ ಮಹಾಲಿಂಗ ನಾಯ್ಕ 40 ವರ್ಷಗಳ ಹಿಂದೆ ಕೃಷಿಕರ ತೋಟಗಳಲ್ಲಿ ದುಡಿಯುವಾಗ ಸ್ವಂತ ತೋಟ ಮಾಡುವ ಸ್ವಾವಲಂಬಿ ಜೀವನದ ಕನಸು ಕಂಡಿದ್ದರು. ಅವರಲ್ಲಿ ಜಮೀನು ಇರಲಿಲ್ಲ. ಭೂಮಾಲೀಕ ಅಮೈ ಮಹಾಬಲ ಭಟ್ಟರ ತೋಟಕ್ಕೆ ದಿನಾ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಈ ಆದಾಯದಲ್ಲಿ ಅವರ ಸಂಸಾರದ ರಥ ಸಾಗುತ್ತಿತ್ತು. ಒಂದು ದಿನ ಮಹಾಬಲ ಭಟ್ ಅವರು ಮಹಾಲಿಂಗ ನಾಯ್ಕರಿಗೆ ಎರಡು ಎಕರೆ ಜಮೀನು ನೀಡಲು ಒಪ್ಪಿಕೊಂಡರು. 1978ರಲ್ಲಿ ಮಹಾಬಲ ಭಟ್ಟರ ಬೆಂಬಲದಿಂದಾಗಿ ಎರಡು ಎಕರೆ ಗುಡ್ಡ ದರ್ಖಾಸ್ತು ರೂಪದಲ್ಲಿ ಮಹಾಲಿಂಗ ನಾಯ್ಕರಿಗೆ ನೀಡಲಾಗಿತ್ತು.

    ಸುರಂಗ ಕೊರೆದ ಕಥೆ: ಮನೆ ಕಟ್ಟಲು ಅಸಾಧ್ಯವಾದ, ನೀರಿಲ್ಲದ ಇಳಿಜಾರು ಬೋಳು ಗುಡ್ಡದಲ್ಲಿ ಕೃಷಿ ತೋಟ ಮಾಡುವುದು ಮಹಾಲಿಂಗ ನಾಯ್ಕರಿಗೆ ಸವಾಲಾಗಿತ್ತು. ಆದರೂ ಇವರ ಪ್ರಯತ್ನ ಬಿಟ್ಟಿರಲಿಲ್ಲ. ಕುಡಿಯುವ ನೀರಿಗಾಗಿ ಪಕ್ಕದ ಮನೆಯವರನ್ನು ಆಶ್ರಯಿಸಿದ್ದ ಮಹಾಲಿಂಗ ನಾಯ್ಕರಿಗೆ ಬಾವಿ ತೋಡಿಸಲು ಕೈಯಲ್ಲಿ ದುಡ್ಡಿರಲಿಲ್ಲ. ಬಾವಿ ತೋಡಿದರೆ ನೀರು ದೊರೆಯುವ ಸಾಧ್ಯತೆ ಕಡಿಮೆ ಇತ್ತು. ಏಕಾಂಗಿಯಾಗಿ ಬಾವಿ ತೋಡುವುದು ಅಸಾಧ್ಯ ಮಾತು. ಆಗ ಅವರಿಗೆ ಹೊಳೆದದು ಸುರಂಗ ಕೊರೆತ. ಅರ್ಧ ದಿನ ಕೂಲಿ ಕೆಲಸ, ಉಳಿದರ್ಧ ದಿನ ಮತ್ತು ರಾತ್ರಿ ಹೊತ್ತು ಸುರಂಗ ಕೊರೆಯುವ ಮೂಲಕ ಜೀವಜಲ ಹುಡುಕುವ ಪ್ರಯತ್ನವನ್ನು ಮಾಡಲು ಮಂದಾಗಿದ್ದರು. ಇದನ್ನೂ ಓದಿ: ಸಾಲ ವಸೂಲಿಯಲ್ಲೂ ಗುರು ರಾಘವೇಂದ್ರ ಬ್ಯಾಂಕ್ ವಂಚನೆ: ಎಎಪಿ ಆರೋಪ

    30 ಮೀ. ಉದ್ದದ ಸುರಂಗ ಕೊರೆದರೂ ನೀರು ಸಿಗಲಿಲ್ಲ. ಇದರಿಂದ ನಿರಾಸೆಯಾಗದ ಅವರು ಪ್ರಯತ್ನ ಮುಂದುವರಿಸಿ ಸೀಮೆಎಣ್ಣೆ , ತೆಂಗಿನೆಣ್ಣೆ ದೀಪದ ಬೆಳಕಿನಲ್ಲಿ ಪ್ರತಿ ವರ್ಷ ತಲಾ ಒಂದರಂತೆ 25-30 ಮೀಟರ್ ಉದ್ದದ ಸತತ ಐದು ಸುರಂಗಗಳನ್ನು ಕೊರೆದರು. ಪ್ರಯತ್ನಕ್ಕೆ ಫಲ ದೊರೆಯಲಿಲ್ಲ. ಅವರ ಪ್ರಯತ್ನವನ್ನು ನೋಡಿ ಹಲವರು ಗೇಲಿ ಮಾಡಿದ್ದರು. ಮಹಾಲಿಂಗ ನಾಯ್ಕರಿಗೆ ಆರನೇ ಪ್ರಯತ್ನ ಫಲ ನೀಡಿತು.ಇದೀಗ ಕೇಂದ್ರ ಸರ್ಕಾರ ಇವರ ಸಾಧನೆಗೆ ಮೆಚ್ಚಿ 2022ನೇ ಸಾಲಿನ ಪದ್ಮಶ್ರೀ ಪ್ರಶಶ್ತಿಯನ್ನು ನೀಡಿ ಗೌರವಿಸುತ್ತಿದೆ.  ಇದನ್ನೂ ಓದಿ: ಬಿಪಿನ್‌ ರಾವತ್‌ಗೆ ಪದ್ಮವಿಭೂಷಣ – ರಾಜ್ಯದ ಐವರಿಗೆ ಪದ್ಮಶ್ರೀ

    ಆರನೇ ಸುರಂಗದ ಪಕ್ಕದಲ್ಲಿ ಇನ್ನೊಂದು ಸುರಂಗ ಕೊರೆದರು. 25 ಮೀ. ತಲುಪುವಾಗ ನೀರು ಕಾಣಿಸಿಕೊಂಡಿತು. ಮತ್ತೆ ಮುಂದುವರಿಸಿ 75 ಮೀ. ಉದ್ದದ ಸುರಂಗವಾಗುವ ಹೊತ್ತಿಗೆ ಯೆಥೇಚ್ಛ ನೀರು ಸಿಕ್ಕಿತು. ಆಗ ಅವರ ತೋಟದ ಕನಸು ಮತ್ತೆ ಗರಿಗೆದರಿತು. ಸುರಂಗದ ನೀರನ್ನು ಸಂಗ್ರಹಿಸಲು ಮಣ್ಣಿನ ಟ್ಯಾಂಕ್ ನಿರ್ಮಿಸಿದರು. ನೀರಿನ ಸಂಪನ್ನತೆಯಿಂದಾಗಿ ತೋಟ ಮಾಡುವ ಕನಸು ನನಸಾಯಿತು. ಗುಡ್ಡವನ್ನು ಸಮತಟ್ಟು ಮಾಡಿ ಭತ್ತ, ಅಡಕೆ, ತೆಂಗು, ಬಾಳೆ ಕೃಷಿ ಕೈಗೊಂಡರು. ಮಡದಿ ಲಲಿತ ಮೂವರು ಮಕ್ಕಳು ಪ್ರಯತ್ನಕ್ಕೆ ಕೈಜೋಡಿಸಿದ್ದಾರೆ.

  • ನನಗೆ ಜನರ ಪ್ರೀತಿಯೇ ದೊಡ್ಡ ಪ್ರಶಸ್ತಿ: ಸೋನು ಸೂದ್

    ನನಗೆ ಜನರ ಪ್ರೀತಿಯೇ ದೊಡ್ಡ ಪ್ರಶಸ್ತಿ: ಸೋನು ಸೂದ್

    ಮುಂಬೈ: ಬೇರೆ ಬೇರೆ ಕ್ಷೇತ್ರದಲ್ಲಿ ಸಧನೆ ಮಾಡಿದ ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿದೆ. ಸೋನುಗೆ ಪದ್ಮಶ್ರೀ ಸಿಕ್ಕಿಲ್ಲ ಎನ್ನುವುದಕ್ಕೆ ಬೇಸರವಾಗಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದವು. ಈ ವಿಚಾರವಾಗಿ ನಟ ಸೋನು ಸೂದ್ ಮಾತನಾಡಿದ್ದಾರೆ.

    ಪ್ರಾಮಾಣಿಕವಾಗಿ ಹೇಳೋದಾದರೆ ಇದನ್ನು ನಾನು ನಿರೀಕ್ಷಿಸಿರಲಿಲ್ಲ. ನನಗೆ ಜನರ ಪ್ರೀತಿಯೇ ದೊಡ್ಡ ಪ್ರಶಸ್ತಿ. ನನ್ನ ಮನೆಯ ಕೆಳಗೆ ನನ್ನನ್ನು ಭೇಟಿಯಾಗಲು ಈಗಲೂ ಜನರು ಕಾಯುತ್ತಿದ್ದಾರೆ ಎಂದಿದ್ದಾರೆ. ಈ ಮೂಲಕ ಜನರ ಅಭಿಮಾನ ಹಾಗೂ ಪ್ರೀತಿಯೇ ದೊಡ್ಡದು ಎಂದು ರಿಯಲ್ ಹೀರೋ ಹೇಳಿದ್ದಾರೆ. ಇದನ್ನೂ ಓದಿ:  ಕಂಗನಾಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿ ವಾಪಸ್ ಪಡೆಯುವಂತೆ ನವಾಬ್ ಮಲ್ಲಿಕ್ ಒತ್ತಾಯ

    ಮುಂದೆಯೂ ತಮ್ಮ ಕೆಲಸವನ್ನು ಮುಂದುವರಿಸಿಕೊಂಡು ಹೋಗುವ ಉದ್ದೇಶ ಇದೆ. ಈ ಬಗ್ಗೆ ಅವರು ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲ. ಜನರು ಸಹಾಯಕ್ಕಾಗಿ ನನ್ನ ಬಳಿಗೆ ಬರುವವರೆಗೂ, ಅವರಿಗೆ ನನ್ನಿಂದ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇನೆ. ನನ್ನ ಪ್ರಯತ್ನಗಳಿಗೆ ಮನ್ನಣೆ ಇದೆಯೋ ಇಲ್ಲವೋ ಎಂಬುದು ಮುಖ್ಯವಲ್ಲ. ಯಾರೋ ಗುರುತಿಸಬೇಕು ಎಂದು ನಾನು ಇದನ್ನು ಮಾಡುತ್ತಿಲ್ಲ. ನಾನು ಪ್ರತಿ ರಾತ್ರಿ ಚಿಂತೆ ಇಲ್ಲದೆ ಸುಖ ನಿದ್ರೆ ಪಡೆಯುತ್ತಿದ್ದೇನಲ್ಲ ಅದನ್ನು ಯಾರಿಂದಲೂ ವಿವರಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ:  ನನ್ನ ತಪ್ಪು ಸಾಬೀತಾದರೆ ಪದ್ಮಶ್ರೀ ಹಿಂದಿರುಗಿಸುವೆ: ಕಂಗನಾ ರಣಾವತ್

    ಸೋನು ಸೂದ್ ಅವರು ಕೊರೊನಾ ಸಂಕಷ್ಟ ಬಂದಾಗಿನಿಂದನೂ ಒಂದಲ್ಲಾ ಒಂದು ರೀತಿ ಜನರಿಗೆ ಸಹಾಯವನ್ನು ಮಾಡುತ್ತಾ ಜನರ ಬಾಕಿಗೆ ಬೆಳಕಾಗಿದ್ದಾರೆ. ಕೊರೊನಾ ಸಂಕಷ್ಟದಿಂದ ಕೆಲಸ ಕಳೆದುಕೊಂಡಿದ್ದ ಬಡ ಜನರಿಗೆ ಉದ್ಯೋಗ ಮಾಡಲು ತಮ್ಮ ಕೈಲಾದಷ್ಟು ಸಹಾಯವನ್ನು ಮಾಡುತ್ತಿದ್ದಾರೆ.

  • ಕಂಗನಾಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿ ವಾಪಸ್ ಪಡೆಯುವಂತೆ ನವಾಬ್ ಮಲ್ಲಿಕ್ ಒತ್ತಾಯ

    ಕಂಗನಾಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿ ವಾಪಸ್ ಪಡೆಯುವಂತೆ ನವಾಬ್ ಮಲ್ಲಿಕ್ ಒತ್ತಾಯ

    ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್‍ಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕೆಂದು ಮಹಾರಾಷ್ಟ್ರದ ಸಚಿವ ಮತ್ತು ಎನ್‍ಸಿಪಿ ನಾಯಕ ನವಾಬ್ ಮಲ್ಲಿಕ್ ಹೇಳಿದ್ದಾರೆ.

    ಸದಾ ಒಂದಲ್ಲಾ ಒಂದು ವಿವಾದಗಳಿಂದ ಸುದ್ದಿಯಾಗುವ ನಟಿ ಕಂಗನಾ ರಣಾವತ್ ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ 1947ರಲ್ಲಿ ದೇಶಕ್ಕೆ ಸಿಕ್ಕಿದ್ದು ಸ್ವಾತಂತ್ರ್ಯ ಅಲ್ಲ, ಅದು ಭಿಕ್ಷೆ. 2014ರಲ್ಲಿ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂದು ಪರೋಕ್ಷವಾಗಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸ್ವಾತಂತ್ರ್ಯ ಸಿಕ್ಕಿತು ಎಂದು ಹೇಳುವ ಮೂಲಕ ವಿವಾದಕ್ಕೆ ಸಿಲುಕಿದರು. ಕಂಗನಾರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣ ಸೇರಿದಂತೆ ಹಲವೆಡೆ ಭಾರೀ ಆಕ್ಷೇಪ ವ್ಯಕ್ತವಾಗಿತ್ತು. ಇದನ್ನೂ ಓದಿ: ಮನೆಯಲ್ಲಿದ್ರೆ ಮಕ್ಕಳ ಸಂಖ್ಯೆ ಹೆಚ್ಚಾಗುತ್ತೆ ಅನ್ನೋ ಭಯವಿದೆ: ಸೈಫ್ ಆಲಿ ಖಾನ್

    ಇದೀಗ ಕಂಗನಾ ಹೇಳಿಕೆ ವಿರುದ್ಧ ನವಾಬ್ ಮಲ್ಲಿಕ್ ಸಿಡಿದೆದ್ದಿದ್ದು, 2014ರಲ್ಲಿ ಸ್ವಾತಂತ್ರ್ಯ ಸಿಕ್ಕಿದೆ ಎಂಬ ಕಂಗನಾ ಹೇಳಿಕೆ ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿದೆ. ಹೀಗಾಗಿ ಆಕೆಗೆ ನೀಡುವ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಇದು ಹುಚ್ಚುತನವೋ ಅಥವಾ ದೇಶದ್ರೋಹವೋ – ಕಂಗನಾ ವಿರುದ್ಧ ವರುಣ್ ಗಾಂಧಿ ಕಿಡಿ

    ಈ ಕುರಿತಂತೆ ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಕೂಡ ಟ್ವೀಟ್ ಮಾಡಿದ್ದು, ಮಹಾತ್ಮ ಗಾಂಧಿ ಅವರ ತ್ಯಾಗ ಬಲಿದಾನಕ್ಕೆ ಅವಮಾನಗೊಳಿಸಿಸಲಾಗಿದೆ, ಶಹೀದ್ ಮಂಗಲ್ ಪಾಂಡೆಯಿಂದ ರಾಣಿ ಲಕ್ಷ್ಮೀಬಾಯಿಯವರೆಗೆ , ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನವನ್ನು ತಿರಸ್ಕರಿಸಲಾಗಿದೆ. ಈ ಆಲೋಚನೆಗೆ ಹುಚ್ಚುತನ ಎಂದು ಕರೆಯಬೇಕೋ, ದೇಶದ್ರೋಹ ಎನ್ನಬೇಕೋ’ ಎಂದು ಪ್ರಶ್ನಿಸಿದ್ದರು. ಅಲ್ಲದೇ ಕಂಗನಾ ವಿರುದ್ಧ ಆಮ್ ಆದ್ಮಿ ಪಾರ್ಟಿ ಮುಂಬೈ ಪೊಲೀಸರ ಬಳಿ ದೂರು ದಾಖಲಿಸಿದ್ದಾರೆ.  ಇದನ್ನೂ ಓದಿ: ಡೆಸರ್ಟ್ ಸಫಾರಿ ಬಳಿಕ ಬಿಕಿನಿಯಲ್ಲಿ ಜಾನ್ವಿ, ಖುಷಿ ಕಪೂರ್ ಮೋಜು, ಮಸ್ತಿ

  • ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ

    ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ

    ನವದೆಹಲಿ: ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.

    ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹರೇಕಳ ಹಾಜಬ್ಬರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

    ಹಾಜಬ್ಬ ಕಳೆದ 20 ವರ್ಷಗಳಿಂದ ದಕ್ಷಿಣ ಕನ್ನಡದ ಕೊಣಾಜೆ ಸಮೀಪದ ಹರೇಕಳ ನ್ಯೂ ಪಡ್ಪು ಗ್ರಾಮದಲ್ಲಿ ಬಡ ಮಕ್ಕಳಿಗೆ ಶಿಕ್ಷಣವನ್ನು ನೀಡುತ್ತಿದ್ದಾರೆ. ವಿಶೇಷವೆಂದರೆ ತನಗಿಲ್ಲದ ಶಿಕ್ಷಣ ತನ್ನ ಊರಿನ ಮಕ್ಕಳಿಗೆ ಸಿಗಬೇಕು ಎನ್ನುವ ಮಹದಾಸೆಯಿಂದ ಕಿತ್ತಳೆ ಮಾರುತ್ತಿದ್ದ ಹರೇಕಳ ಹಾಜಬ್ಬ, ಕಿತ್ತಳೆ ಮಾರಿ ಜೀವನ ಸಾಗಿಸಿ ಉಳಿದ ಹಣದಿಂದಲೇ ಅಂಗನವಾಡಿ ಆರಂಭಿಸುವ ಮೂಲಕ ಶಿಕ್ಷಣ ನೀಡುತ್ತಿದ್ದಾರೆ.

    ಪ್ರಶಸ್ತಿ: 2004ರಲ್ಲಿ ಕನ್ನಡ ಪತ್ರಿಕೆಯೊಂದು ಹಾಜಬ್ಬರನ್ನು ವರ್ಷದ ವ್ಯಕ್ತಿ ಎಂದು ಪ್ರಶಸ್ತಿ ನೀಡಿ ಗುರುತಿಸುವ ಮೂಲಕ ಹಾಜಬ್ಬ ಬೆಳಕಿಗೆ ಬಂದಿದ್ದರು. ಬಳಿಕ ದೆಹಲಿಯ ಸಿಎನ್‍ಎನ್-ಐಬಿಎನ್ ರಿಯಲ್ ಹೀರೋ ಪ್ರಶಸ್ತಿ ನೀಡಿ ಗೌರವಿಸಿತ್ತು. ಮಂಗಳೂರು ವಿಶ್ವವಿದ್ಯಾನಿಲಯ ಇರುವ ಕೊಣಾಜೆ ಸಮೀಪದ ಹರೇಕಳದಲ್ಲಿ ಗ್ರಾಮೀಣ ಮಕ್ಕಳಲ್ಲಿ ಶಾಲೆಯ ಸೌಲಭ್ಯ ಇರಲಿಲ್ಲ. ಮಂಗಳೂರಿನ ಕೇಂದ್ರ ಪ್ರದೇಶ ಸ್ಟೇಟ್ ಬ್ಯಾಂಕ್ ಸರ್ಕಲಿನಲ್ಲಿ ಕಿತ್ತಳೆ ಹಣ್ಣು ಮಾರಾಟ ಮಾಡುವ ಕಾಯಕ ಮಾಡುತ್ತಿದ್ದ ಹಾಜಬ್ಬ ತಾವೇ ಶಾಲೆಯೊಂದನ್ನು ತನ್ನೂರಿನಲ್ಲಿ ನಿರ್ಮಿಸಿದ್ದರು.

    ಕಿತ್ತಳೆ ಮಾರಾಟ ಮಾಡುತ್ತಿದ್ದಾಗ ವಿದೇಶಿ ಮಹಿಳೆಯ ಆಂಗ್ಲ ಭಾಷೆಯ ಪ್ರಶ್ನೆಗೆ ಉತ್ತರ ನೀಡಲಾಗದ ಹಾಜಬ್ಬರಿಗೆ ಶಿಕ್ಷಣದ ಮಹತ್ವ ಅರಿವಾಗಿತ್ತು. ಈ ಹಿನ್ನೆಲೆಯಲ್ಲಿಯೇ ತನ್ನೂರಿನ ಮಕ್ಕಳಿಗೆ ಶಾಲೆ ತೆರೆಯಲು ಕಚೇರಿಯಿಂದ ಕಚೇರಿಗೆ ಅಲೆದು ಶಾಲೆ ನಿರ್ಮಾಣ ಮಾಡಿದ್ದರು. ಇವರ ಸಾಧನೆಯ ವಿಚಾರ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದರೂ ಹೆಚ್ಚಿನ ಪ್ರಚಾರ ಪಡೆದುಕೊಂಡಿರಲಿಲ್ಲ. ಇದೀಗ ಅವರು ತನ್ನೂರಿನಲ್ಲಿ ಕಾಲೇಜು ಆರಂಭಿಸುವ ಆಶಯ ಹೊಂದಿದ್ದಾರೆ.

  • ಪುನೀತ್‍ಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕು: ಮುನಿರತ್ನ

    ಪುನೀತ್‍ಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕು: ಮುನಿರತ್ನ

    ಕೋಲಾರ: ಪುನೀತ್ ಒಬ್ಬ ನಾಯಕ ನಟನಲ್ಲದೆ, ಸೇವೆಯಲ್ಲಿ ಅವರ ಕಾರ್ಯ ಶ್ಲಾಘನೀಯವಾದುದು. ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದರೆ ಅದಕ್ಕಿಂತ ದೊಡ್ಡ ಸಂತೋಷ ಮತ್ತೊಂದಿಲ್ಲ. ಕೇಂದ್ರ ಸರ್ಕಾರ ಅವರಿಗೆ ಪ್ರಶಸ್ತಿಯನ್ನು ನೀಡಬೇಕು ಎಂದು ತೋಟಗಾರಿಕಾ ಸಚಿವ ಮುನಿರತ್ನ ಆಗ್ರಹಿಸಿದ್ದಾರೆ.

    ಕೋಲಾರದ ಕೋಟಿಲಿಂಗ ದೇಗುಲಕ್ಕೆ ಭೇಟಿ ನೀಡಿದ ವೇಳೆ ಅವರು ಮಾತನಾಡಿದರು. ಇದೇ ವೇಳೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾಡಿದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಅವರು ಸಂತಸ ವ್ಯಕ್ತಪಡಿಸಿದರು. ಉಪಚುನಾವಣೆ ಸೋಲಿನಿಂದ ತೈಲ ಬೆಲೆ ಇಳಿಕೆಯಾಗಿಲ್ಲ. ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗಿದ್ದರಿಂದ ಇಷ್ಟು ದಿನ ದುಬಾರಿಯಾಗಿತ್ತು. ಬದಲಿಗೆ ಉಪಚುನಾವಣೆಯಲ್ಲಿ ಸೋತಿದ್ದರಿಂದ ಬೆಲೆ ಇಳಿಕೆಯಾಗಿಲ್ಲ ಎಂದರು. ಇದನ್ನೂ ಓದಿ: ಅಪ್ಪು ಸದಾ ನಮ್ಮ ಹೃದಯದಲ್ಲಿ ನಗುತ್ತಿರುತ್ತಾರೆ – ಪುನೀತ್ ನೆನೆದು ಬಿಕ್ಕಿ, ಬಿಕ್ಕಿ ಅತ್ತ ಸೂರ್ಯ

    ಉಪಚುನಾವಣೆಯ ಸೋಲಿನಿಂದ ಬಿಜೆಪಿಗೆ ಹಿನ್ನಡೆಯಾಗಿಲ್ಲ. ಆದರೆ ಕಳೆದ ಉಪ ಚುನಾವಣೆಯಲ್ಲಿ ಸೋತಿದ್ದನ್ನು ಕಾಂಗ್ರೆಸ್‍ನವರು ಮರೆತಿದ್ದಾರೆ. ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ವಿಚಾರ ಊಹಾಪೋಹ. ಯೋಗೇಶ್ವರ್ ಅವರನ್ನು ಕಾಂಗ್ರೆಸ್‍ಗೆ ಸೇರಿಸಿಕೊಳ್ಳಲು ಇನ್ನೊಬ್ಬರು ಬಯಸ್ತಿದ್ದಾರೆ. ಆದರೆ ಯೋಗೇಶ್ವರ್ ಬಿಜೆಪಿ ಬಿಡುವುದಿಲ್ಲ. ಅವರಿಗೆ ಸಚಿವ ಸ್ಥಾನ ನೀಡುವುದು ಹೈಕಮಾಂಡ್‍ಗೆ ಬಿಟ್ಟ ವಿಚಾರ ಎಂದು ಹೇಳಿದರು. ಇದನ್ನೂ ಓದಿ: ನನ್ನ ಮಗುವನ್ನು ಕಳೆದುಕೊಂಡಿದ್ದೇನೆ – ಬಿಕ್ಕಿ ಬಿಕ್ಕಿ ಅತ್ತ ಶಿವಣ್ಣ

  • ಪುನೀತ್‌ ರಾಜ್‌ಕುಮಾರ್‌ಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಬೇಕು: ಸಿದ್ದರಾಮಯ್ಯ

    ಪುನೀತ್‌ ರಾಜ್‌ಕುಮಾರ್‌ಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಬೇಕು: ಸಿದ್ದರಾಮಯ್ಯ

    ಬೆಂಗಳೂರು: ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

    ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ಯಾವ ಪ್ರಶಸ್ತಿ ಗೌರವಗಳಿಗಿಂತಲೂ ಪುನೀತ್ ರಾಜ್‌ಕುಮಾರ್‌ ಜನತೆಯಿಂದ ಗಳಿಸಿರುವ ಪ್ರೀತಿ-ಅಭಿಮಾನ ದೊಡ್ಡದು. ಹೀಗಿದ್ದರೂ, ಪುನೀತ್ ಬದುಕಿದ್ದರೆ ತನ್ನ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದಾಗಿ ಖಂಡಿತ ಪಡೆಯುತ್ತಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ಅವರಿಗೆ ಮರಣೋತ್ತರವಾಗಿ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಿಂದಗಿ ಉಪ ಚುನಾವಣೆ: 4,031 ಮತಗಳ ಅಂತರದಲ್ಲಿ ಬಿಜೆಪಿ ಮುನ್ನಡೆ

    ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ರಾಜ್ಯ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಎಂಬ ಒತ್ತಾಯವೂ ಕೇಳಿಬಂದಿದೆ. ಅವರಿಗೆ ಸರ್ಕಾರದಿಂದ ಯಾವ ಪ್ರಶಸ್ತಿ ನೀಡಬೇಕು ಎಂಬ ಬಗ್ಗೆ ಉಪ ಚುನಾವಣೆ ಫಲಿತಾಂಶದ ನಂತರ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದರು. ಇದನ್ನೂ ಓದಿ: ಮಗ ಮನೆಗೆ ಹಿಂದಿರುಗುತ್ತಿದ್ದಂತೆ ಶಾರೂಖ್ ನಿವಾಸದಲ್ಲಿ ಕಳೆಕಟ್ಟಿದ ದೀಪಾವಳಿ ಹಬ್ಬದ ಸಂಭ್ರಮ

     

    PUNEET RAJKUMAR

    ನಟ ಪುನೀತ್‌ ರಾಜ್‌ಕುಮಾರ್‌ ಅವರು ಹೃದಯ ಸ್ತಂಭನದಿಂದ ಶುಕ್ರವಾರ ನಿಧನರಾದರು. ಅವರ ನಟನೆ, ಸಾಮಾಜಿಕ ಸೇವೆಯನ್ನು ಪರಿಗಣಿಸಿ ಮರಣೋತ್ತರ ಗೌರವ ಸಲ್ಲಿಸಬೇಕು ಎಂದು ಸಾರ್ವಜನಿಕರ ಒತ್ತಾಯವಾಗಿದೆ.

  • ಕರಣ್‌ಗೆ ನೀಡಿದ್ದ ಪದ್ಮಶ್ರೀಯನ್ನು ಹಿಂಪಡೆಯಬೇಕು – ಸಿಡಿದ ಕಂಗನಾ

    ಕರಣ್‌ಗೆ ನೀಡಿದ್ದ ಪದ್ಮಶ್ರೀಯನ್ನು ಹಿಂಪಡೆಯಬೇಕು – ಸಿಡಿದ ಕಂಗನಾ

    ನವದೆಹಲಿ: ನಿರ್ಮಾಪಕ ಕರಣ್‌ ಜೋಹರ್‌ಗೆ ನೀಡಲಾಗಿರುವ ಪದ್ಮಶ್ರೀ ಪ್ರಶಸ್ತಿಯನ್ನು ಭಾರತ ಸರ್ಕಾರ ವಾಪಸ್‌ ಪಡೆಯಬೇಕೆಂದು ನಟಿ ಕಂಗನಾ ರಣಾವತ್‌ ಮನವಿ ಮಾಡಿದ್ದಾರೆ.

    ನಟ ಸುಶಾಂತ್‌ ಸಿಂಗ್‌ ಆತ್ಮಹತ್ಯೆ ಪ್ರಕರಣದಲ್ಲಿ ಬಾಲಿವುಡ್‌ ಸ್ವಜನಪಕ್ಷಪಾತದ ಬಗ್ಗೆ ಧ್ವನಿ ಎತ್ತುತ್ತಿರುವ ಕಂಗನಾ ಈಗ ನೇರವಾಗಿಯೇ ಕರಣ್‌ ಜೋಹರ್‌ ವಿರುದ್ಧ ಸಿಡಿದೆದ್ದಿದ್ದಾರೆ.

    ಟ್ವೀಟ್‌ ಮಾಡಿರುವ ಕಂಗನಾ, ಕರಣ್‌ ಜೋಹರ್‌ ಅವರಿಗೆ ನೀಡಿದ ಪದ್ಮಶ್ರೀ ಪ್ರಶಸ್ತಿಯನ್ನು ಭಾರತ ಸರ್ಕಾರ ವಾಪಸ್‌ ಪಡೆದುಕೊಳ್ಳಬೇಕು. ಅಂತರಾಷ್ಟ್ರೀಯ ವೇದಿಕೆಯಲ್ಲೇ ಸಿನಿಮಾ ರಂಗವನ್ನು ತೊರೆಯುವಂತೆ ನನಗೆ ಬೆದರಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ವಿರುದ್ಧ ಪಿತೂರಿ ನಡೆಸಿ ಅವರ ವೃತ್ತಿಜೀವನವನ್ನು ನಾಶಮಾಡಲು ಪ್ರಯತ್ನಿಸಿದ್ದಾರೆ. ಉರಿ ಹೋರಾಟದ ಸಮಯದಲ್ಲಿ ಪಾಕಿಸ್ತಾನ ಪರವಾಗಿದ್ದ ಕರಣ್‌ ಈಗ ರಾಷ್ಟ್ರ ವಿರೋಧಿ ಸಿನಿಮಾ ಮಾಡಿದ್ದಾರೆ ಎಂದು ಹರಿಹಾಯ್ದಿದ್ದಾರೆ.

    ನೆಟ್‌ ಫ್ಲಿಕ್ಸ್‌ನಲ್ಲಿ ತೆರೆ ಕಂಡಿರುವ ಗುಂಜನ್‌ ಸಕ್ಸೆನಾ ಸಿನಿಮಾವನ್ನು ಕರಣ್‌ ಜೋಹರ್‌ ಅವರ ಧರ್ಮ ಪ್ರೊಡಕ್ಷನ್‌ ನಿರ್ಮಿಸಿದೆ. ಈ ಚಿತ್ರದ ಬಗ್ಗೆ ಭಾರೀ ಟೀಕೆ ವ್ಯಕ್ತವಾಗಿದೆ.

    ಚಿತ್ರದ ಬಗ್ಗೆ ಸೌಮ್ಯದೀಪ್ತ ಎಂಬವರು, ಫ್ಲೈಟ್‌ ಲೆಫ್ಟಿನೆಂಟ್‌ ಶ್ರೀ ವಿದ್ಯಾ ರಾಜನ್‌ ಗುಂಜನ್‌ ಸಕ್ಸೆನಾ ಅವರ ಜೊತೆ ಸಹಪಾಠಿ ಆಗಿದ್ದರು. ಕಾರ್ಗಿಲ್‌ ಮೇಲೆ ವಿಮಾನ ಹಾರಿಸಿದ ಮೊದಲ ಮಹಿಳೆ ಶ್ರೀವಿದ್ಯಾ ಆಗಿದ್ದ ಗುಂಜನ್‌ ಸಕ್ಸೆನಾ ಅಲ್ಲ. ಗುಂಜನ್‌ ಸಕ್ಸೆನಾ ಸಿನಿಮಾದಲ್ಲಿ ವಿಷಯಗಳನ್ನು ತಿರುಚಲಾಗಿದೆ ಎಂದು ಟ್ವೀಟ್‌ ಮಾಡಿದ್ದರು. ಈ ಟ್ವೀಟ್‌ ಅನ್ನು ರಿಟ್ವೀಟ್‌ ಮಾಡಿ ಕರಣ್‌ ಜೋಹರ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕರಾವಳಿಯ ಪತ್ರೋಡೆ ಸವಿದ ನಟಿ ಕಂಗನಾ ಫಿದಾ

    ಕರಣ್‌ ಜೋಹರ್‌ ಮತ್ತು ಕಂಗನಾ ರಣಾವತ್‌ ಅವರಿಗೆ ಈ ವರ್ಷ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ರಾಷ್ಟ್ರಪತಿ ರಮಾನಾಥ್‌ ಕೋವಿಂದ್‌ ಪುರಸ್ಕರಿಸಿದ್ದರು.

  • ನನ್ನ ಆರೋಪ ಸುಳ್ಳೆಂದರೆ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ನೀಡ್ತೇನೆ: ಕಂಗನಾ

    ನನ್ನ ಆರೋಪ ಸುಳ್ಳೆಂದರೆ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ನೀಡ್ತೇನೆ: ಕಂಗನಾ

    – ಬಾಲಿವುಡ್ ಕ್ವೀನ್‍ಗೆ ಪೊಲೀಸರಿಂದ ಸಮನ್ಸ್

    ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ವಿಚಾರದಲ್ಲಿ ನಾನು ಮಾಡಿದ ಆರೋಪ ಸುಳ್ಳು ಎಂದರೆ ನನಗೆ ಬಂದ ಪದ್ಮಶ್ರೀ ಪ್ರಶಸ್ತಿಯನ್ನು ನಾನು ವಾಪಸ್ ನೀಡುತ್ತೇನೆ ಎಂದು ನಟಿ ಕಂಗನಾ ರಣಾವತ್ ಅವರು ಹೇಳಿದ್ದಾರೆ.

    ಜೂನ್ 14ರಂದು ನಟ ಸುಶಾಂತ್ ಸಿಂಗ್ ರಜಪೂತ್ ಅವರು ತಮ್ಮ ಮುಂಬೈ ನಿವಾಸದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸುಶಾಂತ್ ಆತ್ಮಹತ್ಯೆ ನಂತರ ಅವರ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿದ್ದವು. ಈ ನಡುವೆ ನಟಿ ಕಂಗನಾ ರಣಾವತ್ ಅವರು ಸುಶಾಂತ್ ಅವರದ್ದು ಆತ್ಮಹತ್ಯೆಯಲ್ಲ, ಅದೊಂದು ಯೋಜಿತ ಕೊಲೆ ಎಂದು ಆರೋಪ ಮಾಡಿದ್ದರು.

    ಸುಶಾಂತ್ ಸಾವಿನ ನಂತರ ವಿಡಿಯೋ ಮಾಡುವ ಮೂಲಕ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿದ್ದ ಕಂಗನಾ, ಬಾಲಿವುಡ್ ಮೂವಿ ಮಾಫಿಯಾ ಸುಶಾಂತ್ ಅವರನ್ನು ಪ್ಲಾನ್ ಮಾಡಿ ಮರ್ಡರ್ ಮಾಡಿದೆ. ಬಾಲಿವುಡ್‍ನಲ್ಲಿ ಇರುವ ಸ್ವಜನಪಕ್ಷಪಾತಕ್ಕೆ ಸುಶಾಂತ್ ಬಲಿಯಾಗಿದ್ದಾರೆ ಎಂದು ಆರೋಪ ಮಾಡಿದ್ದರು. ಜೊತೆಗೆ ಗಲ್ಲಿ ಬಾಯ್ ಸಿನಿಮಾ ಮತ್ತು ನಟ ಸಂಜಯ್ ದತ್ ಅವರ ಹೆಸರನ್ನು ನೇರವಾಗಿ ತೆಗೆದುಕೊಂಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    ಈ ಕಾರಣದಿಂದ ಮುಂಬೈ ಪೊಲೀಸರು, ಕಂಗನಾ ವಿರುದ್ಧ ಸಮನ್ಸ್ ಜಾರಿಮಾಡಿದ್ದು, ಅವರ ಆರೋಪವನ್ನು ಸಾಬೀತು ಪಡಿಸುವಂತೆ ಹೇಳಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಕಂಗನಾ, ನಾನು ಹೇಳಿರುವುದನ್ನು ಸಾಬೀತು ಪಡಿಸಲು ಸಾಧ್ಯವಿಲ್ಲ. ಆದರೆ ನಾನು ಹೇಳಿರುವುದು ಸಾರ್ವಜನಿಕ ವಲಯದಲ್ಲಿದೆ. ಅದನ್ನು ಜನರು ಒಪ್ಪಿಕೊಳ್ಳುತ್ತಾರೆ. ನನ್ನ ಮಾತುಗಳನ್ನು ಜನರು ಒಪ್ಪಿಕೊಳ್ಳದಿದ್ದರೆ, ನಾನು ನನ್ನ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ನೀಡುತ್ತೇನೆ ಎಂದು ಹೇಳಿದ್ದಾರೆ.

    ಈ ಹಿಂದೆ ವಿಡಿಯೋ ಮಾಡಿದ್ದ ಕಂಗನಾ, ಸುಶಾಂತ್ ಸಿನಿಮಾ ರಂಗಕ್ಕೆ ಬಂದು ಕಾಯ್ ಪೋಚೆನಂತಹ ಸಿನಿಮಾ ಮಾಡಿದ್ದಾರೆ. ಸ್ಟಾರ್ ಕಿಡ್‍ಗಳ ಡೆಬ್ಯು ಅವಾರ್ಡ್ ನೀಡುವವರು, ಸುಶಾಂತ್‍ಗೆ ಅವಾರ್ಡ್ ಯಾಕೆ ನೀಡಿಲಿಲ್ಲ. ಕೇದರ್ ನಾಥ್, ಧೋನಿ, ಚಿಚೋರೆ ರೀತಿಯ ಒಳ್ಳೆಯ ಸಿನಿಮಾ ಮಾಡಿದ್ದಾರೆ. ಗಲ್ಲಿಬಾಯ್ ರೀತಿಯ ಕೆಟ್ಟ ಸಿನಿಮಾಗಳಿಗೆ ಅವಾರ್ಡ್ ನೀಡುವ ನೀವು, ಚಿಚೋರೆ ರೀತಿಯ ಒಳ್ಳೆಯ ಸಿನಿಮಾ ಗುಡ್ ಡೈರೆಕ್ಟರ್ ಗೆ ಯಾಕೆ ಪ್ರಶಸ್ತಿ ನೀಡುವುದಿಲ್ಲ ಎಂದು ನೇರವಾಗಿಯೇ ನೆಪ್ಟೋಯಿಸಂ ಬಗ್ಗೆ ಮಾತನಾಡಿದ್ದರು.

    ನಾವು ಏನೇ ಮಾಡಿದರೂ ನೀವು ಒಪ್ಪುವುದಿಲ್ಲ. ನಾನು ಕೂಡ ಒಳ್ಳೆಯ ಸಿನಿಮಾ ಮಾಡಿದ್ದೇನೆ. ನಿರ್ಮಾಣ, ನಿರ್ದೇಶನ ಮಾಡಿದ್ದೇನೆ. ನಮ್ಮ ಸಿನಿಮಾವನ್ನು ನೀವು ಯಾಕೆ ಒಪ್ಪುವುದಿಲ್ಲ. ನನ್ನ ಮೇಲೆ ಯಾಕೆ 6 ದೂರುಗಳನ್ನು ದಾಖಲಿಸಿದ್ದೀರಾ? ಒಬ್ಬ ಪತ್ರಕರ್ತ ಸುಶಾಂತ್ ಬಗ್ಗೆ ಬಹಳ ಕೆಟ್ಟದಾಗಿ ಬರೆಯುತ್ತಾನೆ. ಆತ ಖಿನ್ನತೆಗೆ ಒಳಗಾಗಿದ್ದ, ಡ್ರಗ್ಸ್ ಅಡಿಕ್ಟ್ ಎಂದೆಲ್ಲ ಬರೆಯುತ್ತಾರೆ. ಯಾಕೆ ನಿಮಗೆ ಸಂಜಯ್ ದತ್ ಅವರ ಅಡಿಕ್ಷನ್ ಕ್ಯೂಟ್ ಆಗಿ ಇತ್ತಾ ಎಂದು ಖಾರವಾಗಿ ಪ್ರಶ್ನೆ ಮಾಡಿದ್ದರು.