Tag: ಪನ್ನಗಾಭರಣ

  • ಮೇಘನಾ ರಾಜ್ ಕೊಟ್ಟರು ಗುಡ್ ನ್ಯೂಸ್ : ಇಂದು ತತ್ಸಮ ತದ್ಭವ ಟ್ರೈಲರ್ ರಿಲೀಸ್

    ಮೇಘನಾ ರಾಜ್ ಕೊಟ್ಟರು ಗುಡ್ ನ್ಯೂಸ್ : ಇಂದು ತತ್ಸಮ ತದ್ಭವ ಟ್ರೈಲರ್ ರಿಲೀಸ್

    ಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ ನಟಿ ಮೇಘನಾ ರಾಜ್ ಸರ್ಜಾ. ಇಂದು ಮೇಘನಾ ನಟನೆಯ ತತ್ಸಮ ತದ್ಭವ ಸಿನಿಮಾ ಟ್ರೈಲರ್ (Trailer) ಬಿಡುಗಡೆ ಆಗುತ್ತಿದ್ದು, ಅದನ್ನು ನೋಡಿ ಹಾರೈಸಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಮದುವೆ ನಂತರ ಮೇಘನಾ ನಟಿಸಿದ ಮೊದಲ ಸಿನಿಮಾ ಇದಾಗಿದೆ. ಹಾಗಾಗಿ ಈ ಸಿನಿಮಾಗಾಗಿ ಕಾದಿದ್ದೇವೆ ಎಂದು ಅನೇಕರು ಕಾಮೆಂಟ್ ಮಾಡಿದ್ದಾರೆ.

    ಮದುವೆ ನಂತರ ಸಿನಿಮಾ ರಂಗದಿಂದ ದೂರ ಉಳಿದಿದ್ದ ನಟಿ ಮೇಘನಾ ರಾಜ್ (Meghana Raj) ‘ತತ್ಸಮ ತದ್ಬವ’ (Tatsama Tadbhava)  ಸಿನಿಮಾ ಮೂಲಕ ಮತ್ತೆ ಕಮ್ ಬ್ಯಾಕ್ ಮಾಡಿದ್ದರು. ಮೊನ್ನೆಯಷ್ಟೇ ಈ ಸಿನಿಮಾದ ಸಂಪೂರ್ಣ ಚಿತ್ರೀಕರಣ ಕೂಡ ಮುಗಿಸಿದ್ದರು. ಮೇಘನಾ ರಾಜ್ ಹುಟ್ಟುಹಬ್ಬಕ್ಕಾಗಿ ಮೊನ್ನೆಯಷ್ಟೇ ಚಿತ್ರತಂಡ ಅವರ ಪೋಸ್ಟರ್ (Poster)ರಿಲೀಸ್ ಮಾಡಿತ್ತು.

    ‘ನಿಜವಾದ ಸ್ನೇಹಿತರು ಯಾವಾಗಲೂ ಜೊತೆಗಿರುತ್ತಾರೆ. ಅಂತಹ ಸ್ನೇಹಿತರು ನನಗಿದ್ದಾರೆ. ನನಗಾಗಿ ಈ ಸಿನಿಮಾ ಮಾಡಿದ್ದಾರೆ. ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮರು ಪ್ರವೇಶ ಮಾಡಿದ್ದೇನೆ. ಪನ್ನಗ ಭರಣ ಹಾಗೂ ಸ್ಪೂರ್ತಿ ಅನಿಲ್ ನಿರ್ಮಾಣ ಮಾಡಿದ್ದಾರೆ. ವಿಶಾಲ್ ಆತ್ರೇಯ ಒಳ್ಳೆಯ ಕಥೆ ಮಾಡಿಕೊಂಡು ನಿರ್ದೇಶನ ಮಾಡಿದ್ದಾರೆ. ಒಟ್ಟಾರೆಯಾಗಿ ಹೇಳಬೇಕೆಂದರೆ ಈವರೆಗೂ ನಾನು ಇಂತಹ ಪಾತ್ರ ಮಾಡಿಲ್ಲ. ಮುಂದೆ ಮಾಡುತ್ತೀನೊ, ಇಲ್ಲವೊ? ಗೊತ್ತಿಲ್ಲ ಎಂದು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು  ಮೇಘನಾ ರಾಜ್.

    ನನಗೆ ನಿರ್ದೇಶಕರು ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ಕಥೆಯಲ್ಲಿ  ಒಂದು ಮುಖ್ಯಪಾತ್ರ ಬರುತ್ತದೆ. ಈ ಪಾತ್ರ ಯಾರು ಮಾಡುತ್ತಿದ್ದಾರೆ ಎಂದು ಕೇಳಿದೆ. ಅವರು ನೀವೇ ಮಾಡುತ್ತಿದ್ದೀರ ಎಂದರು. ಸ್ನೇಹಿತರ ಸಿನಿಮಾ‌ದಲ್ಲಿ ಅಭಿನಯಿಸಿದ ಖುಷಿಯಿದೆ  ಎಂದು ಪ್ರಜ್ವಲ್ ದೇವರಾಜ್ (Prajwal Devaraj) ಮಾತನಾಡಿ ಮೇಘನಾ ಚಿತ್ರಕ್ಕೆ ಸಾಥ್ ನೀಡಿದ್ದಾರೆ. ಇದನ್ನೂ ಓದಿ:ಪಿಎಂ ನರೇಂದ್ರ ಮೋದಿ- ಫ್ರೆಂಚ್ ಪ್ರೆಸಿಡೆಂಟ್ ಜೊತೆ ಮ್ಯಾಡಿ ಊಟ

    ಇದೊಂದು ಇನ್ವೆಸ್ಟಿಕೇಶನ್ ಕ್ರೈಮ್ ಥ್ರಿಲ್ಲರ್. ಕನ್ನಡದಲ್ಲಿ ಇಂತಹ ಕಥೆ ಬಂದಿರುವುದು ಅಪರೂಪ. ನೋಡುಗರಿಗೂ ಇಷ್ಟವಾಗಬಹುದೆಂಬ ನಂಬಿಕೆಯಿದೆ ಎಂದಿರುವ ನಿರ್ದೇಶಕ ವಿಶಾಲ್ ಆತ್ರೇಯ,  ಸಂಪೂರ್ಣ ಚಿತ್ರೀಕರಣ ಮುಗಿಸಿ, ರೀರೆಕಾರ್ಡಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಚುನಾವಣೆ ಮುಗಿದ ನಂತರ ಸಿನಿಮಾ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಪನ್ನಗ ಭರಣ (Pannagabharana)ತಿಳಿಸಿದ್ದಾರೆ.

     

    ನಟಿ ಶ್ರುತಿ ಕೂಡ ಈ ಸಿನಿಮಾದಲ್ಲಿ ಮಹತ್ವದ ಪಾತ್ರ ಮಾಡಿದ್ದು, ‘ಸಮಾಜದಲ್ಲಿ ಯಾವುದೇ ಹೆಣ್ಣಿಗಾದರೂ ಅನುಕಂಪಕ್ಕಿಂತ, ಅವಕಾಶ ಕೊಡುವುದು ಮುಖ್ಯ. ಮೇಘನಾ ರಾಜ್ ವಿಷಯದಲ್ಲಿ, ಅವರ ಸ್ನೇಹಿತರೆಲ್ಲರೂ ಸೇರಿ ಅವರ ರೀ ಎಂಟ್ರಿಗೆ ಒಳ್ಳೆಯ ಅವಕಾಶ ಕಲ್ಪಿಸಿದ್ದಾರೆ. ನಾನು ಈ ಚಿತ್ರದಲ್ಲಿ ಮನಶಾಸ್ತ್ರಜ್ಞೆಯಾಗಿ ಕಾಣಿಸಿಕೊಂಡಿದ್ದೇನೆ’ ಎಂದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಿತ್ರ ನಿರ್ಮಾಣಕ್ಕಿಳಿದ ನಟಿ ಮೇಘನಾ ರಾಜ್

    ಚಿತ್ರ ನಿರ್ಮಾಣಕ್ಕಿಳಿದ ನಟಿ ಮೇಘನಾ ರಾಜ್

    ಸ್ಯಾಂಡಲ್ ವುಡ್ ನಲ್ಲಿ ನಟಿಯಾಗಿ ಗುರುತಿಸಿಕೊಂಡಿದ್ದ ಮೇಘನಾ ರಾಜ್, ಇದೀಗ ನಿರ್ಮಾಪಕಿಯಾಗಿಯೂ ಎಂಟ್ರಿ ಕೊಟ್ಟಿದ್ದಾರೆ. ತಾವೇ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಹಾಗಂತ ಇವರೊಬ್ಬರೇ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿಲ್ಲ, ಬದಲಿಗೆ ಪನ್ನಗಾಭರಣ ಕೂಡ ಇವರೊಂದಿಗೆ ಕೈ ಜೋಡಿಸಿದ್ದಾರೆ.

    ಕಳೆದ ವರ್ಷ ಪನ್ನಗಾಭರಣ, ವಿಶಾಲ್ ಮತ್ತು ವಾಸುಕಿ ವೈಭವ್ ಜೊತೆಗಿರುವ ಫೋಟೋವೊಂದನ್ನು ಶೇರ್ ಮಾಡಿದ್ದ ಮೇಘನಾ ರಾಜ್, ಹೊಸದೊಂದು ಸುದ್ದಿ ಕೊಡಲಿದ್ದೇನೆ ಎಂದು ಹೇಳಿದ್ದರು. ಆನಂತರ ಒಟ್ಟಿಗೆ ಸಿನಿಮಾ ಮಾಡುತ್ತಿರುವುದಾಗಿ ಘೋಷಣೆ ಮಾಡಿದ್ದರು. ಮೊನ್ನೆ ಮೊನ್ನೆಯಷ್ಟೇ ಮತ್ತೊಂದು ಫೋಟೋ ಹಂಚಿಕೊಂಡಿದ್ದ ಮೇಘನಾ, ಈ ಸಿನಿಮಾವನ್ನು ವಿಶಾಲ್ ನಿರ್ದೇಶನ ಮಾಡುತ್ತಿದ್ದು, ಪನ್ನಗಾಭರಣ ನಿರ್ಮಾಪಕರು ಎಂದು ಹೇಳಿದ್ದರು. ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ ಮೇಘನಾ ಕೂಡ ನಿರ್ಮಾಪಕಿಯಾಗುತ್ತಿದ್ದಾರೆ. ಇದನ್ನೂ ಓದಿ: ಆಮೀರ್ ಖಾನ್ ಮನೆಯ ಔತಣ ಕೂಟದಲ್ಲಿ ಧನುಷ್‌ ನಟನೆಯ ಹಾಲಿವುಡ್ ಚಿತ್ರತಂಡ

    ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಪ್ರಮುಖ ಪಾತ್ರವನ್ನು ಮೇಘನಾ ರಾಜ್ ಅವರೇ ನಿರ್ವಹಿಸುತ್ತಿದ್ದಾರೆ. ವಾಸುಕಿ ವೈಭ‍ವ್ ಸಂಗೀತ ಸಂಯೋಜನೆಯಲ್ಲಿ ಈ ಸಿನಿಮಾ ಮೂಡಿ ಬರಲಿದೆ. ಸದ್ಯ ಕಾಂತ ಕನ್ನಲ್ಲಿ ನಿರ್ದೇಶನದ ಸಿನಿಮಾದಲ್ಲಿ ಮೇಘನಾ ರಾಜ್ ನಟಿಸುತ್ತಿದ್ದು, ಈ ಸಿನಿಮಾದ ಬಹುತೇಕ ಶೂಟಿಂಗ್ ಮುಗಿಸಿದ್ದಾರಂತೆ. ಸದ್ಯದಲ್ಲೇ ತಮ್ಮ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ಅವರು ಭಾಗಿಯಾಗಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಿನಿಮಾ ನಟನೆಯತ್ತ ಮತ್ತೆ ಮರಳಿದ ಮೇಘನಾ ರಾಜ್ : ಮೇಘನಾಗಾಗಿ ಪನ್ನಗಾಭರಣ ನಿರ್ಮಾಣ

    ಸಿನಿಮಾ ನಟನೆಯತ್ತ ಮತ್ತೆ ಮರಳಿದ ಮೇಘನಾ ರಾಜ್ : ಮೇಘನಾಗಾಗಿ ಪನ್ನಗಾಭರಣ ನಿರ್ಮಾಣ

    ಟ ಚಿರಂಜೀವಿ ಸರ್ಜಾರನ್ನು ಕಳೆದುಕೊಂಡ ನಂತರ ಅಕ್ಷರಶಃ ನಲುಗಿ ಹೋಗಿದ್ದ ನಟಿ ಮೇಘನಾ ರಾಜ್, ಆ ನೋವಿನ ಜೊತೆ ಜೊತೆಗೆ ಬದುಕುವುದನ್ನು ಅಭ್ಯಾಸ ಮಾಡಿಕೊಳ್ಳುತ್ತಿದ್ದಾರೆ. ಮದುವೆ ನಂತರವೂ ಮೇಘನಾ ನಟಿಸಬೇಕು ಅನ್ನುವುದು ಚಿರು ಆಸೆಯಾಗಿತ್ತು. ಹಾಗಾಗಿಯೇ ಮತ್ತೆ ಅವರು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈವರೆಗೂ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ಮೇಘನಾ, ಇದೀಗ ಮತ್ತೆ ಸಿನಿಮಾದಲ್ಲಿ ನಟಿಸಲು ಆಸಕ್ತಿ ತೋರಿದ್ದಾರೆ.

    ಈ ಹಿಂದೆ ಕಾಂತ ಕನ್ನಳ್ಳಿ ಸಿನಿಮಾದಲ್ಲಿ ಮೇಘನಾ ಪಾತ್ರ ಮಾಡಿದ್ದರು. ಹಲವು ಕಂತುಗಳ ಶೂಟಿಂಗ್ ನಲ್ಲೂ ಭಾಗಿಯಾಗಿದ್ದರು. ಇದೀಗ ಮತ್ತೊಂದು ಸಿನಿಮಾಗಾಗಿ ಸಿದ್ಧತೆ ನಡೆಸಿದ್ದಾರೆ. ಈ ಸಿನಿಮಾವನ್ನು ಚಿರು ಆತ್ಮೀಯ ಗೆಳೆಯ ಪನ್ನಗಾಭರಣ ನಿರ್ಮಾಣ ಮಾಡುತ್ತಿದ್ದಾರೆ. ವಿಶಾಲ್ ಈ ಚಿತ್ರದ ನಿರ್ದೇಶಕರು. ವಾಸುಕಿ ವೈಭವ್ ಅವರ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಮೇಘನಾ ಯಾವ ರೀತಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ಸದ್ಯಕ್ಕಿರುವ ಕುತೂಹಲ. ಇದನ್ನೂ ಓದಿ : ‘ಮದುವೆನೂ ಇಲ್ಲ, ರಿಂಗೂ ಇಲ್ಲ’ ಲಲಿತ್ ಮೋದಿಗೆ ತಿವಿದ ಸುಶ್ಮಿತಾ ಸೇನ್

    ತಮ್ಮ ಟೀಮ್ ಜೊತೆಗಿನ ಫೊಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿರುವ ಮೇಘನಾ, ಒಂದು ಸಣ್ಣ ಆಲೋಚನೆ ಜುಲೈ 7ಕ್ಕೆ ನಿಜವಾಯಿತು. ಅಕ್ಟೋಬರ್ 2021ರಂದು ನಾವು ಈ ಪ್ರಾಜೆಕ್ಟ್ ಘೋಷಿಸಿದ್ದೇವೆ. ಇದೀಗ ಆ ಯೋಚನೆ ಲುಕ್ ಟೆಸ್ಟ್ ವರೆಗೂ ಬಂದಿದೆ ಎಂದೂ, ಸ್ಕ್ರಿಪ್ಟ್ ಕೆಲಸ ಮತ್ತೆ ಶುರುವಾಗಿದೆ ಎಂದೂ ಬರೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚಿರು ಸ್ನೇಹಿತನ ಮಗನಿಗೆ ಹೇರ್ ಸ್ಟೈಲಿಸ್ಟ್ ಆದ ರಾಯನ್- ಫೋಟೋ ವೈರಲ್

    ಚಿರು ಸ್ನೇಹಿತನ ಮಗನಿಗೆ ಹೇರ್ ಸ್ಟೈಲಿಸ್ಟ್ ಆದ ರಾಯನ್- ಫೋಟೋ ವೈರಲ್

    ಬೆಂಗಳೂರು: ನಟಿ ಮೇಘನಾ ರಾಜ್ ಅವರು ಸದ್ಯ ತಮ್ಮ ಮಗನ ಆರೈಕೆ ಹಾಗೂ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿಯೂ ಆ್ಯಕ್ಟೀವ್ ಆಗಿರುವ ಅವರು ಆಗಾಗ ತಮ್ಮ ಹಾಗೂ ಮಗನ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಅಂತೆಯೇ ಇದೀಗ ಮಗನ ಫೋಟೋವೊಂದನ್ನು ತಮ್ಮ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

    ಹೌದು. ಚಿರಂಜೀವಿ ಸರ್ಜಾ ಅಗಲಿದ ನಂತರ ಮೇಘನಾ ಒಂಟಿ ಜೀವನಕ್ಕೆ ಮಗ ರಾಯನ್ ರಾಜ್ ಸರ್ಜಾ ಸಾಥ್ ನೀಡಿದ್ದಾನೆ. ಇಂದು ರಾಯನ್ ಮತ್ತು ಚಿರುವಿನ ಹಳೆಯ ಫೋಟೋ ಕೊಲೆಜ್ ಮಾಡಿ, ಕೆಲವು ವಿಷಯಗಳು ಕೇವಲ ದೈವಿಕವಾಗಿ ಬಂದಿರುತ್ತೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ನಿದ್ದೆಗಳಿಲ್ಲದ ರಾತ್ರಿ ಕಳೆಯಲು ಸಿದ್ಧರಾಗಿ – ಪ್ರಿಯಾಂಕಾಗೆ ಅನುಷ್ಕಾ ಶರ್ಮಾ ವಿಶ್

    ಈ ಸಾಲುಗಳ ಅರ್ಥ ನಾವು ಎಲ್ಲವನ್ನು ಹೇಳಿಕೊಡಬೇಕು ಎಂದು ಏನೂ ಇಲ್ಲ. ಕೆಲವೊಂದು ಅಂಶಗಳು ದೇವರೇ ಕೊಟ್ಟಿರುತ್ತಾನೆ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ರಾಯನ್‍ಗೆ ಪಕ್ಕಾ ಚಿರು ಮನಸ್ಸು ಇದೆ ಎಂದು ಅಭಿಮಾನಿಗಳೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ.

     

    View this post on Instagram

     

    A post shared by Meghana Raj Sarja (@megsraj)

    ವಿಶೇಷತೆ ಏನು?
    ಮೇಘನಾ ಶೇರ್ ಮಾಡಿದ ಫೋಟೋದಲ್ಲಿ ಚಿರು ತನ್ನ ಸ್ನೇಹಿತ ಮತ್ತು ಕನ್ನಡ ಸಿನಿಮಾ ನಿರ್ದೇಶಕ ಪನ್ನಗಾಭರಣ ಅವರಿಗೆ ಹೇರ್ ಸ್ಟೈಲ್ ಮಾಡುತ್ತಿದ್ದು, ಅದೇ ರೀತಿ ರಾಯನ್ ಸಹ ಪನ್ನಗಾಭರಣ ಅವರ ಮಗನಿಗೆ ಹೇರ್ ಸ್ಟೈಲ್ ಮಾಡುತ್ತಿದ್ದಾನೆ. ಪನ್ನಗಾಭರಣ ಮತ್ತು ಚಿರು ಒಳ್ಳೆಯ ಸ್ನೇಹಿತರಾಗಿದ್ದು, ಅದೇ ರೀತಿ ಇವರಿಬ್ಬರ ಮಕ್ಕಳು ಸಹ ಒಳ್ಳೆಯ ಸ್ನೇಹಿತರಾಗಿದ್ದಾರೆ ಎಂಬುದನ್ನು ಈ ಫೋಟೋದಲ್ಲಿ ನಾವು ಕಾಣಬಹುದಾಗಿದೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮೌನಿರಾಯ್

    ಈ ಬಗ್ಗೆ ರಾಯನ್‍ಗೆ ಯಾರು ಹೇಳಿಕೊಟ್ಟಿಲ್ಲ. ಆದರೆ ಅದು ದೈವಿಕವಾಗಿಯೇ ಬಂದಿದೆ ಎಂದು ಬರೆದುಕೊಂಡು ಮೇಘನಾ ಸಂತೋಷ ವ್ಯಕ್ತಪಡಿಸಿದ್ದಾರೆ.

    ಈ ಫೋಟೋ ನೋಡಿದ ಅಭಿಮಾನಿಗಳು ಇವರಿಬ್ಬರ ಸ್ನೇಹ ಇದೇ ರೀತಿ ಇರಲಿ ಎಂದು ಕಾಮೆಂಟ್ ಮಾಡಿದರೆ ಇನ್ನೊಬ್ಬರು, ಕೆಲವೊಂದು ನೆನಪು ಎಷ್ಟೇ ಸಮಯ ಕಳೆದರೂ ಸಹ ಎಂದಿಗೂ ಮರೆಯಲಾಗದು. ಚಿರು ಸರ್ ಅವರು ಇಂದಿಗೂ ನಮ್ಮ ಜೊತೆಯೇ ಇದ್ದಾರೆಂದು ಅನ್ನಿಸುತ್ತಿದೆ ಎಂದು ಭಾವನಾತ್ಮಕವಾಗಿ ಕಾಮೆಂಟ್ ಮಾಡಿದ್ದಾರೆ.