Tag: ಪಬ್ಲಿಕ್ ಟಿವಿ BC Patil

  • ಪದೇ ಪದೇ ಕಾಲ್ ಮಾಡಿ ಬಿ.ಸಿ ಪಾಟೀಲ್ ಮನೆ ಮುಂದೆ ಕಾದು ನಿಂತ ಸಚಿವ ಹೆಬ್ಬಾರ್

    ಪದೇ ಪದೇ ಕಾಲ್ ಮಾಡಿ ಬಿ.ಸಿ ಪಾಟೀಲ್ ಮನೆ ಮುಂದೆ ಕಾದು ನಿಂತ ಸಚಿವ ಹೆಬ್ಬಾರ್

    ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ಆಗುತ್ತಿರುವ ಸದ್ಯದ ಬೆಳವಣಿಗೆ ಕುರಿತಂತೆ ಸಚಿವ ಶಿವರಾಮ್ ಹೆಬ್ಬಾರ್ ಆತಂಕಗೊಂಡಿದ್ದಾರೆ. ಹೀಗಾಗಿ ಈ ಬಗ್ಗೆ ಚರ್ಚೆ ನಡೆಸಲು ಕೃಷಿ ಸಚಿವ ಬಿ.ಸಿ ಪಾಟೀಲ್‍ಗಾಗಿ ತಮ್ಮ ಮನೆಯ ಗೇಟ್ ಬಳಿ ಕಾದು ನಿಂತ ಪ್ರಸಂಗ ನಡೆದಿದೆ.

    ನಗರದ ಜೆಸಿ ರಸ್ತೆಯಲ್ಲಿ ಶಿವರಾಮ್ ಹೆಬ್ಬಾರ್‌ರವರ ಸರ್ಕಾರಿ ನಿವಾಸ ಇದ್ದು, ಅದರ ಪಕ್ಕದಲ್ಲಿಯೇ ಬಿ.ಸಿ ಪಾಟೀಲ್‍ರವರ ಮನೆ ಕೂಡ ಇದೆ. ಹೀಗಾಗಿ ಮನೆಗೆ ಬೇಗ ಬಾ ನಿನ್ನ ಬಳಿ ಮಾತಾಡಬೇಕು ಎಂದು ಬಿ.ಸಿ.ಪಾಟೀಲ್ ಗೆ ಶಿವರಾಮ್ ಹೆಬ್ಬಾರ್ ಕರೆ ಮಾಡಿ ಕರೆದಿದ್ದಾರೆ. ಈ ವೇಳೆ ನಿಮ್ಮ ಮನೆಗೆ ನೇರವಾಗಿ ಬರುತ್ತೇನೆ ಎಂದು ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

    ಈ ಹಿನ್ನೆಲೆ ಶಿವರಾಮ್ ಹೆಬ್ಬಾರ್‍ರವರು, ತಮ್ಮ ನಿವಾಸದ ಗೇಟ್ ಬಳಿಯೇ ಆತಂಕದಿಂದ ಕಾದಿದ್ದಾರೆ. ಮಂತ್ರಿ ಸ್ಥಾನದ ಗತ್ತು ಇಲ್ಲ, ಗೈರತ್ತು ಇಲ್ಲ ಎಂಬಂತೆ ಅಕ್ಷರಶಃ ಆತಂಕದಿಂದ ಗೇಟ್ ಬಳಿಯೇ ನಿಂತುಕೊಂಡು ಪದೇ ಪದೇ ರಸ್ತೆ ಕಡೆಯೆ ನೋಡುತ್ತಾ ಕಾಯುತ್ತಾ ನಿಂತಿದ್ದರು. ನಂತರ ಬಿ.ಸಿ ಪಾಟೀಲ್, ಶಿವರಾಂ ಹೆಬ್ಬಾರ್ ನಿವಾಸಕ್ಕೆ ಬರದೇ ಪಕ್ಕದಲ್ಲಿ ಇರುವ ತಮ್ಮ ಸರ್ಕಾರಿ ನಿವಾಸಕ್ಕೆ ನೇರವಾಗಿ ಬಂದಿದ್ದಾರೆ. ಈ ವಿಚಾರ ತಿಳಿದ ಶಿವರಾಂ ಹೆಬ್ಬಾರ್ ಏಕಾಂಗಿಯಾಗಿ ಬಿ.ಸಿ.ಪಾಟೀಲ್ ನಿವಾಸದ ಕಡೆಗೆ ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಆತಂಕದಲ್ಲೆ ಬಿ.ಸಿ.ಪಾಟೀಲ್ ನಿವಾಸಕ್ಕೆ ಎಂಟ್ರಿ ಕೊಟ್ಟ ಸಚಿವರು, ಪಾಟೀಲ್ ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಟೆನ್ಷನ್ ಫ್ರೀ ಆದರು.

    ನಾಯಕತ್ವ ಬದಲಾವಣೆ ಎಲ್ಲವೂ ಊಹಾಪೋಹ ಅಷ್ಟೇ. ಯಡಿಯೂರಪ್ಪನವರಾಗಲಿ ಹೈಕಮಾಂಡ್ ಆಗಲಿ ಯಾರು ಸಹ ನಾಯಕತ್ಚ ಬದಲಾವಣೆ ಬಗ್ಗೆ ಎಲ್ಲೂ ಹೇಳಿಲ್ಲ. ನಾವು ಸಚಿವರುಗಳು ಊಟಕ್ಕೆ ಸೇರುತ್ತಿರುತ್ತೇವೆ. ನಿನ್ನೆಯು 4-5 ಜನ ಊಟಕ್ಕೆ ಸೇರಿದ್ದೆವು. ನಾಯಕತ್ವ ಬದಲಾವಣೆ ಇಲ್ಲಾ ಎಂದು ರಾಜ್ಯಾಧ್ಯಕ್ಷರೇ ಹೇಳಿದ್ದಾರೆ. ಆದ್ದರಿಂದ ನಮಗೆ ಯಾವುದೇ ಗೊಂದಲ ಇಲ್ಲ. ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಮುಂದಾದರೆ ಅದು ಹೈಕಮಾಂಡ್ ತೀರ್ಮಾನ. ನಾವು ಯಡಿಯೂರಪ್ಪ ಹಾಗೂ ಭಾರತೀಯ ಜನತಾಪಾರ್ಟಿಯನ್ನ ನಂಬಿಕೊಂಡು ಬಂದವರು. ಪಕ್ಷಕ್ಕೆ ಬಂದ ಮೇಲೆ ಪಕ್ಷದ ತೀರ್ಮಾನಕ್ಕೆ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ. ಸಿಎಂ ಬದಲಾದರೆ ಸಚಿವ ಸ್ಥಾನ ಕೈ ತಪ್ಪುತ್ತೆ ಎಂಬ ಆತಂಕ ನಮಗಿಲ್ಲ. ಎಲ್ಲವೂ ಮಾಧ್ಯಮಗಳಲ್ಲಿ ಬರುತ್ತಿರುವ ಊಹಪೋಹದ ಸುದ್ದಿ. ಅದರ ಬಗ್ಗೆ ನಾವೇನು ಮಾತನಾಡಲ್ಲ. ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲಾ ಪಕ್ಷ ಹಾಗೂ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದು ಬಿ.ಸಿ.ಪಾಟೀಲ್ ಹಾಗೂ ಶಿವರಾಂ ಹೆಬ್ಬಾರ್ ಜಂಟಿ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ:ನಾನು ಮಂತ್ರಿಯಾಗಬೇಕೆಂದು ಬಿಜೆಪಿಗೆ ಬಂದವನಲ್ಲ: ಮಹೇಶ್ ಕುಮಟಳ್ಳಿ

  • ಸುಮಲತಾರನ್ನು ಬೆಂಬಲಿಸಿ ಹೆಚ್‍ಡಿಕೆ ವಿರುದ್ಧ ಬಿ.ಸಿ.ಪಾಟೀಲ್ ಕಿಡಿ

    ಸುಮಲತಾರನ್ನು ಬೆಂಬಲಿಸಿ ಹೆಚ್‍ಡಿಕೆ ವಿರುದ್ಧ ಬಿ.ಸಿ.ಪಾಟೀಲ್ ಕಿಡಿ

    ಹಾವೇರಿ: ಕುಮಾರಸ್ವಾಮಿ ಒಬ್ಬ ಮಾಜಿ ಮುಖ್ಯಮಂತ್ರಿ, ಯಾರೇ ಇರಲಿ ಮಹಿಳೆ ಬಗ್ಗೆ ಗೌರವಯುತವಾಗಿ ಮಾತನಾಡಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

    ಕೆಆರ್‍ಎಸ್ ಬಿರುಕು ಬಿಟ್ಟಿದೆ ಎಂದು ಸಂಸದೆ ಸುಮಲತಾರವರು ತಿಳಿಸಿದ್ದರು. ಆದರೆ ಈ ವಿಚಾರಕ್ಕೆ ಸಂಬಂಧಿಸಿದ ಮಂತ್ರಿಗಳು, ಜನಪ್ರತಿನಿಧಿಗಳು ಆ ರೀತಿ ಯಾವುದೂ ಆಗಿಲ್ಲ ಎಂದು ಹೇಳಿದ್ದರು. ಈ ವೇಳೆ ಅವರನ್ನೇ ಅಡ್ಡ ಮಲಗಿಸಿ ಅಂತಾ ಕುಮಾರಸ್ವಾಮಿ ಹೇಳಿರುವುದು ಸರಿಯಲ್ಲ. ಕುಮಾರಸ್ವಾಮಿ ಒಬ್ಬ ಮಾಜಿ ಮುಖ್ಯಮಂತ್ರಿ, ಯಾರೇ ಇರಲಿ ಮಹಿಳೆ ಬಗ್ಗೆ ಗೌರವಯುತವಾಗಿ ಮಾತನಾಡಬೇಕು ಎಂದು ತಿಳಿಸಿದ್ದಾರೆ.

    ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣದಲ್ಲಿ ಮಾತನಾಡಿದ ಅವರು, ಸಿಎಂಗೆ ‘ಕುತ್ತಾ’ ಪದ ಬಳಸಿರುವ ಮಾಜಿ ಸಿಎಂ ಸಿದ್ದರಾಮಯ್ಯಗೆ ಒಬ್ಬ ಮನುಷ್ಯನ ಮಾತುಗಳು ಅವರ ಸಂಸ್ಕøತಿ ತೋರಿಸುತ್ತದೆ. ಮನುಷ್ಯನ ಸಂಸ್ಕೃತಿ ಯಾವ ರೀತಿ ಇದೆ ಎನ್ನುವುದು ಅರ್ಥ ಆಗುತ್ತೆ. ಸಿದ್ದರಾಮಯ್ಯ ಬಗ್ಗೆ ನಮಗೆ ಗೌರವ ಇದೆ. ಅವರು ಮಾಜಿ ಮುಖ್ಯಮಂತ್ರಿ, ವೈಯಕ್ತಿಕವಾಗಿ ಒಬ್ಬ ಮನುಷ್ಯನ ಬಗ್ಗೆ ಹೀನಾಯವಾಗಿ ಮಾತನಾಡೋದು ಅವರ ಘನತೆಗೆ ಸರಿಯಲ್ಲ. ಅದು ಅವರ ಸಂಸ್ಕೃತಿಗೂ ಸರಿಯಲ್ಲ ಎಂದು ಹಾರಿಹಾಯ್ದಿದ್ದಾರೆ.

    ಆಗಸ್ಟ್ ವೇಳೆಗೆ ಸಿಎಂ ಬದಲಾಗುತ್ತಾರೆ ಎನ್ನುವ ಶಾಸಕ ಯತ್ನಾಳ್ ಹೇಳಿಕೆಗೆ ಈಗಾಗಲೇ ಅರುಣ್ ಸಿಂಗ್ ರಾಜ್ಯಕ್ಕೆ ಬಂದು ಸ್ಪಷ್ಟವಾದ ಸಂದೇಶ ಕೊಟ್ಟಿದ್ದಾರೆ. ಇನ್ನೂ ಎರಡು ವರ್ಷ ಯಾವುದೇ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರಿತಾರೆ ಅಂತಾ ಹೇಳಿದ್ದಾರೆ. ಹೀಗೆ ಹೇಳಿದ ಮೇಲೂ ದಿನಾ ಒಂದೊಂದು ಹೇಳಿಕೆ ಕೊಟ್ಟುಕೊಂಡು ಹೋದರೆ ಅವಕ್ಕೆಲ್ಲ ಉತ್ತರ ಕೊಡುವುದಕ್ಕೆ ಆಗುವುದಿಲ್ಲ. ಎರಡು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿರುತ್ತಾರೆ. ಅವರ ನಾಯಕತ್ವದಲ್ಲೇ ಮುಂದಿನ ಚುನಾವಣೆಗೆ ಹೋಗುತ್ತೇವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಇದನ್ನೂ ಓದಿ:SSLC ಪರೀಕ್ಷೆ ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ : ಸುರೇಶ್ ಕುಮಾರ್

  • ಸಿಎಂ ರಾಜೀನಾಮೆ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ: ಬಿ.ಸಿ.ಪಾಟೀಲ್

    ಸಿಎಂ ರಾಜೀನಾಮೆ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ: ಬಿ.ಸಿ.ಪಾಟೀಲ್

    ಶಿವಮೊಗ್ಗ: ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ದ ಎಂಬ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಹೇಳಿಕೆ ವಿಚಾರ ನನಗೆ ಗೊತ್ತಿಲ್ಲ. ಮಾಧ್ಯಮದವರು ಹೇಳಿದ ನಂತರವಷ್ಟೇ ನನಗೆ ತಿಳಿಯಿತು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

    ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಕುರಿತು ನನಗೆ ಹೆಚ್ಚಿನ ಮಾಹಿತಿ ಇಲ್ಲ. ಹೀಗಾಗಿ ಈ ಬಗ್ಗೆ ಪ್ರತಿಕ್ರಿಯೆ ನೀಡಲು ಆಗುವುದಿಲ್ಲ ಎಂದಿದ್ದಾರೆ. ದೆಹಲಿಗೆ ಹೋಗುವವರು, ಬರುವವರ ಬಗ್ಗೆ ನನಗೆ ಮಾಹಿತಿ ಇಲ್ಲ. ನಮ್ಮ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಯವರು ಸಹ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಈ ವಿಚಾರದ ಕುರಿತು ಸಚಿವರು, ಶಾಸಕರು ಯಾರು ಸಹ ಅನವಶ್ಯಕವಾಗಿ ಮಾತನಾಡಬೇಡಿ ಎಂದು ಸೂಚಿಸಿವುದಾಗಿ ತಿಳಿಸಿದ್ದಾರೆ. ಇದನ್ನು ಓದಿ:ಸುಸಜ್ಜಿತ ಸಂಚಾರಿ ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ ಲಕ್ಷ್ಮಣ ಸವದಿ

    ನಮ್ಮ ಸರ್ವ ಸಮ್ಮತ ನಾಯಕನಾಗಿ ಯಡಿಯೂರಪ್ಪ ಅವರು ಆಯ್ಕೆ ಆಗಿದ್ದಾರೆ. ಸಿಎಂ ಯಾವ ಅರ್ಥದಲ್ಲಿ ಹೇಳಿದ್ದರೋ ನನಗೆ ಗೂತ್ತಿಲ್ಲ. ಈ ವಿಚಾರ ತಿಳಿದು ಮಾತನಾಡುತ್ತೇನೆ ಎಂದು ಹೇಳುವ ಮೂಲಕ ಸಚಿವ ಬಿ.ಸಿ.ಪಾಟೀಲ್ ಜಾಣ ಉತ್ತರ ನೀಡಿದರು.

  • ಶಾಸಕ ಯತ್ನಾಳ್‍ಗೆ ಮಾಡೋಕೆ ಕೆಲಸ ಇಲ್ಲ: ಬಿ.ಸಿ ಪಾಟೀಲ್

    ಶಾಸಕ ಯತ್ನಾಳ್‍ಗೆ ಮಾಡೋಕೆ ಕೆಲಸ ಇಲ್ಲ: ಬಿ.ಸಿ ಪಾಟೀಲ್

    ದಾವಣಗೆರೆ: ಶಾಸಕ ಯತ್ನಾಳ್‍ಗೆ ಮಾಡುವುದಕ್ಕೆ ಕೆಲಸ ಇಲ್ಲ. ಅವರ ಟೀಕೆಗಳಿಗೆಲ್ಲ ಉತ್ತರ ಕೊಡುವುದಕ್ಕೆ ಆಗುವುದಿಲ್ಲ. ಹದಿನೇಳು ಜನಕ್ಕೆ ಮಾತ್ರವಲ್ಲ, ಎಲ್ಲರಿಗೂ ಸಿಎಂ ಅನುದಾನ ಕೊಟ್ಟಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್, ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಿಡಿ ಕಾರಿದ್ದಾರೆ.

    ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಉಕ್ಕಡಗಾತ್ರಿಯಲ್ಲಿ ಮಾತನಾಡಿದ ಅವರು, ಈ ಹದಿನೇಳು ಜನರು ಬರದಿದ್ದರೆ, ಇವತ್ತು ಬಿಜೆಪಿ ಸರಕಾರ ಬರುತ್ತಿರಲಿಲ್ಲ ಎಂಬುದನ್ನ ಯತ್ನಾಳ್ ಅರ್ಥ ಮಾಡಿಕೊಳ್ಳಲಿ. ಇಲ್ಲಾ ಅಂದರೆ ಇವರ ಲೆಟರ್ ಹೆಡ್ ಗಳಲ್ಲೆ ಧೂಳು ತಿನ್ನುತ್ತಿದ್ದವು. ಹದಿನೇಳು ಜನರ ತ್ಯಾಗದಿಂದ ಬಿಜೆಪಿ ಸರಕಾರ ಬಂದಿದೆ. ಸರಕಾರ ಬಂದಿರುವುದಕ್ಕೆ ಅವರು ಇಷ್ಟೆಲ್ಲ ಮಾತಾನಾಡುತ್ತಿದ್ದಾರೆ. ಅದು ಸರಿಯಲ್ಲ. ಟೀಕೆ, ಟಿಪ್ಪಣಿ ಯಾವಾಗಲೋ ಒಂದು ಬಾರಿಯಾದರೆ ಒಳ್ಳೆಯದು. ಪ್ರತಿನಿಧಿ ಟೀಕೆ ಮಾಡಿದರೆ ಏನು ಅರ್ಥ ಹೇಳಿ ಎಂದು ಪ್ರಶ್ನಿಸಿದರು.

    ಯಡಿಯೂರಪ್ಪನವರ ಹೋರಾಟದಿಂದ ಬಿಜೆಪಿ ಸರಕಾರ ಬಂದಿದೆ. ಸರಕಾರ ರಚನೆ ವೇಳೆ ಯಡಿಯೂರಪ್ಪ ಬಿಟ್ಟರೆ ಇವರ್ಯಾರು ಬಂದಿರಲಿಲ್ಲ. ಯಡಿಯೂರಪ್ಪ ಅವರನ್ನ ನಂಬಿಕೊಂಡು ಹದಿನೇಳು ಜನರು ಬಂದಿದ್ದೇವೆ. ಅದಕ್ಕೆ ಬಿಜೆಪಿ ಸರಕಾರ ಸುಭದ್ರವಾಗಿದೆ. ಅದನ್ನು ಯತ್ನಾಳ್ ಅವರು ಅರಿತುಕೊಳ್ಳಲಿ. ಸುಮ್ಮನೆ ನಾಲಿಗೆ ಇದೆ ಅಂತಾ ಏನೇನೋ ಮಾತನಾಡಿದರೆ ಸರಿಯಲ್ಲ. ಯತ್ನಾಳ್ ಅವರನ್ನ ಕರೆದುಕೊಂಡು ಬಂದಿದ್ದು ಕೂಡ ಯಡಿಯೂರಪ್ಪನವರೇ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕಿಡಿ ಕಾರಿದ್ದಾರೆ.