Tag: ಪಬ್ಲಿಕ್ ಟಿವಿ CM yediyurappa

  • ಯಡಿಯೂರಪ್ಪರನ್ನು ಗೌರವದಿಂದ ನಡೆಸಿಕೊಳ್ಳಿ, ಇಲ್ಲ ಬಿಜೆಪಿಗೆ ನಷ್ಟ: ಮುರುಘಾ ಶರಣರು

    ಯಡಿಯೂರಪ್ಪರನ್ನು ಗೌರವದಿಂದ ನಡೆಸಿಕೊಳ್ಳಿ, ಇಲ್ಲ ಬಿಜೆಪಿಗೆ ನಷ್ಟ: ಮುರುಘಾ ಶರಣರು

    ಚಿತ್ರದುರ್ಗ: ಕರ್ನಾಟಕ ರಾಜ್ಯಕ್ಕೆ ತಮ್ಮದೇ ಆದ ಅಪಾರ ಕೊಡುಗೆ ನೀಡಿರುವ ಸಿಎಂ ಯಡಿಯೂರಪ್ಪ ಅವರನ್ನೂ ಗೌರವದಿಂದ ನಡೆಸಿಕೊಳ್ಳಬೇಕು. ಇಲ್ಲವಾದರೆ ಬಿಜೆಪಿಗೆ ನಷ್ಟವಾಗಲಿದೆ ಎಂದು ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದ್ದಾರೆ.

    ಸಿಎಂ ಸ್ಥಾನದಿಂದ ಬಿಎಸ್ ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಚಿತ್ರದುರ್ಗದ ಮುರುಘಾ ಮಠದಿಂದ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಎಸ್ ವೈ ತಳಮಟ್ಟದಿಂದ ಬಿಜೆಪಿ ಸಂಘಟನೆ ಮಾಡಿದ್ದಾರೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿದ ಹೆಗ್ಗಳಿಕೆ ಯಡಿಯೂರಪ್ಪ ಅವರ ಹೆಗಲಿಗಿದೆ.

    ನೇರ ನುಡಿ, ಧೀರ ನಡೆಗೆ ಸಿಎಂ ಯಡಿಯೂರಪ್ಪ ಹೆಸರಾಗಿದ್ದೂ, ಪ್ರತಿ ಚುನಾವಣೆ ಸಹ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಿವೆ. ಅಲ್ಲದೇ ಬಿಎಸ್‍ವೈ ರಾಜ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದು, ಮೇಧಾವಿ ಹಾಗೂ ಅಪ್ರತಿಮ ರಾಜಕೀಯ ಮುತ್ಸದ್ಧಿ ಬಿಎಸ್‍ವೈರನ್ನು ನಿರ್ಲಕ್ಷಿಸಿದರೆ ಬಿಜೆಪಿಗೆ ನಷ್ಟ ಸಾಧ್ಯತೆ ಇದೆ. ಆದ್ದರಿಂದ ಬಿಎಸ್ ವೈ ಅವರನ್ನು ಗೌರವದಿಂದ ನಡೆಸಿಕೊಳ್ಳಬೇಕು. ಈ ವೇಳೆ ನಾಯಕತ್ವ ಬದಲಾವಣೆ ಸಮಂಜಸವಲ್ಲ ಎಂದು ಬಿಜೆಪಿ ಹೈಕಮಾಂಡ್ ನಡೆ ವಿರುದ್ಧ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಸಚಿವ ಮುರುಗೇಶ್ ನಿರಾಣಿ ಬಳಿ ಸುಮಾರು 500 ಸಿ.ಡಿಗಳು ಇವೆ: ಅಲಂ ಪಾಷಾ

  • ಮಾದರಿ OMR ಶೀಟ್‍ನಲ್ಲಿ ಬಿಎಸ್‍ವೈ ಒಡೆತನದ ಶಾಲೆಯ ಜಾಹೀರಾತು ಆರೋಪ

    ಮಾದರಿ OMR ಶೀಟ್‍ನಲ್ಲಿ ಬಿಎಸ್‍ವೈ ಒಡೆತನದ ಶಾಲೆಯ ಜಾಹೀರಾತು ಆರೋಪ

    – ಕಾಂಗ್ರೆಸ್ ಮುಖಂಡರ ವಿರೋಧ, ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತ

    ಶಿವಮೊಗ್ಗ: ಸಿಎಂ ಒಡೆತನದ ಶಾಲಾ ಮತ್ತು ಕಾಲೇಜು ಜಾಹೀರಾತು ಇರುವ ಮಾದರಿ ಒಎಂಆರ್ ಶೀಟ್‍ನ್ನು ಎಲ್ಲಾ ಶಾಲೆಗಳಿಗೆ ವಿತರಣೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಕಾಂಗ್ರೆಸ್ ಮುಖಂಡರು, ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ನೀಡಲಾದ ಮಾದರಿ ಒಎಂಆರ್ ಶೀಟ್‍ನಲ್ಲಿ ಖಾಸಗಿ ಶಾಲೆ, ಕಾಲೇಜುಗಳಿಗೆ ಸಂಬಂಧಿಸಿದ ಜಾಹೀರಾತು ಇದ್ದು, ಖಾಸಗಿ ಶಾಲೆಯ ಜಾಹೀರಾತು ಸರ್ಕಾರವೇ ಪ್ರಕಟಿಸಿದಂತಾಗಿದೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ಹೆಚ್.ಸಿ. ಯೋಗೀಶ್ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.

    ಜಿಲ್ಲಾದ್ಯಂತ ಸುಮಾರು 22 ಸಾವಿರ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿದ್ದು, ಈ ಬಾರಿ ಪರೀಕ್ಷೆಯಲ್ಲಿ ಮಲ್ಟಿಪಲ್ ಆಪ್ಷನಲ್ ಪರೀಕ್ಷೆ ಇರುತ್ತದೆ. ಒಎಂಆರ್ ಶೀಟ್ ನಲ್ಲಿ ಮೊದಲ ಬಾರಿಗೆ ಪರೀಕ್ಷೆ ಬರೆಯುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಗೊಂದಲ ಉಂಟಾಗಬಾರದು ಎಂಬ ಕಾರಣದಿಂದ ಪರೀಕ್ಷೆಗೆ ಮೊದಲೇ ಮಾದರಿ ಒಎಂಆರ್ ಶೀಟ್ ವಿತರಿಸಲಾಗಿದೆ. ಆದರೆ ಈ ಶೀಟ್‍ನ ಹಿಂಬದಿಯಲ್ಲಿ ಖಾಸಗಿ ಶಾಲೆ ಜಾಹೀರಾತು ಪ್ರಕಟಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸರ್ಕಾರದಿಂದ ನೀಡಲಾದ ಒಎಂಆರ್ ಶೀಟ್ ನಲ್ಲಿ ಖಾಸಗಿ ಶಾಲೆಯ ಜಾಹೀರಾತು ಕಾನೂನು ಬಾಹಿರವಾಗಿದ್ದು, ಸರ್ಕಾರದಿಂದಲೇ ಎಲ್ಲಾ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಒಎಂಆರ್ ಶೀಟ್ ನೀಡಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ:ಅನ್‍ಲಾಕ್ ಬಳಿಕ ಸಹಜ ಸ್ಥಿತಿಯತ್ತ ಸಾರಿಗೆ

  • ಮೈಸೂರು ಡಿಸಿ, ಪಾಲಿಕೆ ಆಯುಕ್ತೆ ಜಟಾಪಟಿ ಪ್ರಕರಣ-ಕ್ರಮ ಕೈಗೊಳ್ಳುವುದಾಗಿ ಬಿಎಸ್‍ವೈ ಭರವಸೆ

    ಮೈಸೂರು ಡಿಸಿ, ಪಾಲಿಕೆ ಆಯುಕ್ತೆ ಜಟಾಪಟಿ ಪ್ರಕರಣ-ಕ್ರಮ ಕೈಗೊಳ್ಳುವುದಾಗಿ ಬಿಎಸ್‍ವೈ ಭರವಸೆ

    ಹುಬ್ಬಳ್ಳಿ: ಮೈಸೂರು ಡಿಸಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಮಧ್ಯೆ ಗೊಂದಲ ಇರೋದು ನಿಜ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಹೇಳಿದ್ದಾರೆ.

    ಹುಬ್ಬಳ್ಳಿಯಲ್ಲಿ ಧಾರವಾಡ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಮೈಸೂರಿನಲ್ಲಿ ಅಧಿಕಾರಿಗಳ ಮಧ್ಯೆ ಗೊಂದಲ ಇರುವುದು ನಿಜ. ಆ ಬಗ್ಗೆ ನಾನು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ. ಇದನ್ನು ಓದಿ: ಗಂಡನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಐಪಿಎಸ್ ಅಧಿಕಾರಿ

    ಮೈಸೂರು ಡಿಸಿ ದರ್ಪದ ವಿರುದ್ಧ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಆರೋಪಗಳ ಸುರಿಮಳೆಗೈದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಪಾಲಿಕೆ ಆಯುಕ್ತೆ ರಾಜೀನಾಮೆ ನಂತರ ಸಾಕಷ್ಟು ಗೊಂದಲ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಇದೀಗ ಸಿಎಂ ಬಿಎಸ್‍ವೈ ಖುದ್ದು ಈ ಪ್ರಕರಣದ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ. ಇದನ್ನು ಓದಿ:ಸುರೇಶ್ ಕುಮಾರ್ ಆತ್ಮವಂಚನೆ ಮಾಡಿಕೊಂಡು ಪಿಯುಸಿ ಪರೀಕ್ಷೆ ರದ್ದು ಮಾಡಿದ್ದಾರೆ – ಅಮರೇಗೌಡ

    ಹುಬ್ಬಳ್ಳಿಯಿಂದ ಬೆಂಗಳೂರಿಗೆ ಮರಳಿದ ತಕ್ಷಣವೇ ಎಲ್ಲ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

  • ಪರಿಸ್ಥಿತಿ ಸುಧಾರಣೆಯಾದ್ರೆ ಮಾತ್ರ ಎಸ್‍ಎಸ್‍ಎಲ್‍ಸಿ ಪರೀಕ್ಷೆ – ಸಿಎಂ ಬಿಎಸ್‍ವೈ

    ಪರಿಸ್ಥಿತಿ ಸುಧಾರಣೆಯಾದ್ರೆ ಮಾತ್ರ ಎಸ್‍ಎಸ್‍ಎಲ್‍ಸಿ ಪರೀಕ್ಷೆ – ಸಿಎಂ ಬಿಎಸ್‍ವೈ

    ಬೆಳಗಾವಿ: ಪರಿಸ್ಥಿತಿ ಸುಧಾರಣೆಯಾದರೆ ಮಾತ್ರ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುತ್ತೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

    ಕೋವಿಡ್ ನಿರ್ವಹಣಾ ಕುರಿತಂತೆ ಸಭೆ ನಡೆಸಲು ಇಂದು ಬೆಳಗಾವಿ ಜಿಲ್ಲೆಗೆ ಆಗಮಿಸಿದ್ದ ಅವರು, ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಯಾವುದೇ ಗೊಂದಲವಿಲ್ಲ. ಇನ್ನು ಒಂದೂವರೆ ಎರಡು ತಿಂಗಳ ನಂತರ ವಾತಾವರಣದಲ್ಲಿ ಸುಧಾರಣೆ ಕಂಡು ಬಂದರೆ ಒಂದು ದಿನ ಅಥವಾ ಎರಡು ದಿನದಲ್ಲಿ ಪರೀಕ್ಷೆ ನಡೆಸಬೇಕೆಂದು ತೀರ್ಮಾನಿಸಿದ್ದಾರೆ. ಹಾಗಾಗಿ ಈ ಕುರಿತಂತೆ ಪರಿಸ್ಥಿತಿ ನೋಡಿಕೊಂಡು ತೀರ್ಮಾನಿಸುತ್ತೇವೆ. ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ನಾನು ಬೆಂಗಳೂರಿಗೆ ಹೋಗಿ ಸುರೇಶ್ ಕುಮಾರ್ ಜೊತೆ ಮಾತನಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

    ಇಂದು ಬೆಳಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್‍ರವರು, ಕೋವಿಡ್ ಸಾಂಕ್ರಾಮಿಕ ನ್ನೆಲೆ ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಿದ್ದು ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಸೂಕ್ತ ದಿನಾಂಕ ನಿಗದಿ ಪಡಿಸಿ ಎರಡು ದಿನ ಸರಳೀಕರಣವಾಗಿ ಪರೀಕ್ಷೆ ನಡೆಸುವುದಾಗಿ ಘೋಷಿಸಿದ್ದಾರೆ. ಇದನ್ನು ಓದಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಹೇಗೆ ನಡೆಯುತ್ತೆ? ಪಿಯುಸಿ ವಿದ್ಯಾರ್ಥಿಗಳು ಹೇಗೆ ಪಾಸ್?

    ಕೋವಿಡ್-19ರ ಪರಿಸ್ಥಿತಿಯಲ್ಲಿ 06 ವಿಷಯಗಳಿಗೆ ಸುದೀರ್ಘ ಅವಧಿಗೆ ಪರೀಕ್ಷೆಗಳನ್ನು ನಡೆಸಿದಲ್ಲಿ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ 06 ದಿನಗಳು ಬರುವುದು ಕಷ್ಟಸಾಧ್ಯವಾಗಿರುತ್ತದೆ. ಹೀಗಾಗಿ ಎಸ್‍ಎಸ್‍ಎಲ್‍ಸಿಯಲ್ಲಿ ಮುಖ್ಯ ವಿಷಯಗಳಾದ ಭಾಗ- 1 ಗಣಿತ, ಭಾಗ- 2 ವಿಜ್ಞಾನ ಮತ್ತು ಭಾಗ- 3 ಸಮಾಜ ವಿಜ್ಞಾನ ಪರೀಕ್ಷೆಯನ್ನು ನೀಡಲಾಗುತ್ತದೆ. ಪರೀಕ್ಷಾ ಸಮಯವನ್ನು ಬೆಳಿಗ್ಗೆ 10:30 ರಿಂದ 01:30 ಗಂಟೆಯವರೆಗೆ ನಿಗದಿಪಡಿಸಿ, ಒಟ್ಟು 3 ಗಂಟೆಯ ಕಾಲಾವಕಾಶ ನೀಡಲಾಗುವುದಾಗಿ ಹೇಳಿದ್ದಾರೆ.

    ಒಟ್ಟು 03 ಭಾಷಾ ವಿಷಯಗಳಾದ ಭಾಗ -1 ಪ್ರಥಮ ಭಾಷೆ, ಭಾಗ- 2 ದ್ವಿತೀಯ ಭಾಷೆ ಮತ್ತು ಭಾಗ -3ರಲ್ಲಿ ತೃತೀಯ ಭಾಷೆ ಪರೀಕ್ಷೆಯನ್ನು ನೀಡಲಾಗುತ್ತಿದ್ದು, ಇದಕ್ಕೆ ಅಪರಾಹ್ನ 10:30 ರಿಂದ 01:30 ಗಂಟೆಯವರೆಗೆ ನಿಗದಿಪಡಿಸಿ, ಒಟ್ಟು 3 ಗಂಟೆಯ ಕಾಲಾವಕಾಶ ನೀಡಲಾಗುವುದಾಗಿ ತಿಳಿಸಿದ್ದಾರೆ. ಇದನ್ನು ಓದಿ:ಅಧಿಕಾರಿಗಳ ಮಧ್ಯೆ ಸಂಘರ್ಷ – ಎಲ್ಲವನ್ನೂ ಚಾಮುಂಡಿ ತಾಯಿ ನೋಡುತ್ತಿದ್ದಾಳೆ ಎಂದ ಎಸ್‍ಟಿಎಸ್

  • ಬಿಎಸ್‍ವೈ ಬಿಟ್ಟರೆ ಬಿಜೆಪಿಯಲ್ಲಿ ಸ್ಟಾರ್ ಲೀಡರ್ ಯಾರಿದ್ದಾರೆ : ಎಂ.ಪಿ. ಕುಮಾರಸ್ವಾಮಿ

    ಬಿಎಸ್‍ವೈ ಬಿಟ್ಟರೆ ಬಿಜೆಪಿಯಲ್ಲಿ ಸ್ಟಾರ್ ಲೀಡರ್ ಯಾರಿದ್ದಾರೆ : ಎಂ.ಪಿ. ಕುಮಾರಸ್ವಾಮಿ

    ಚಿಕ್ಕಮಗಳೂರು: ಬಿಜೆಪಿ ಪಕ್ಷದಲ್ಲಿ ಬಿ.ಎಸ್.ಯಡಿಯೂರಪ್ಪನವರನ್ನ ಬಿಟ್ಟು ಬೇರೆ ಯಾರು ಸ್ಟಾರ್ ಲೀಡರ್ ಇದ್ದಾರೆ ತೋರಿಸಲಿ. ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಬಿಎಸ್‍ವೈ ಪರ ಬ್ಯಾಟ್ ಬೀಸಿದ್ದಾರೆ.

    ನಾಯಕತ್ವ ಬದಲಾವಣೆ ಕುರಿತಂತೆ ಮೂಡಿಗೆರೆಯಲ್ಲಿ ಮಾತನಾಡಿದ ಅವರು, ಅವರಿಂದ ಅಧಿಕಾರ ಹಾಗೂ ಬೋರ್ಡ್ ಪಡೆದವರು ಮಾತನಾಡಬೇಕು. ಯಾಕೆ ಮಾತನಾಡುತ್ತಿಲ್ಲ ಗೊತ್ತಿಲ್ಲ ಎಂದರು. ನಾಯಕತ್ವ ಬದಲಾವಣೆ ಚರ್ಚೆ ಈಗ ಅಪ್ರಸ್ತುತ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ನಮ್ಮ ವಿರೋಧವಿದೆ ಎಂದಿದ್ದಾರೆ.

    ನಾನು ಕೇಂದ್ರಕ್ಕೆ ನಿಯೋಗ ಹೋಗಲು ರೆಡಿ ಇದ್ದೇನೆ. ನಾಯಕತ್ವ ಬದಲಾವಣೆಗೆ ನಮ್ಮ ವಿರೋಧವಿದೆ. ಪಕ್ಷದ ವರಿಷ್ಠರಿಗೆ ಯಡಿಯೂರಪ್ಪನವರನ್ನೇ ಮುಂದುವರೆಸಲು ಮನವಿ ಮಾಡುತ್ತೇವೆ. ನಾಯಕತ್ವ ಬದಲಾವಣೆ ದೊಡ್ಡ ವಿಚಾರವಲ್ಲ. ಆದರೆ ತೋರಿಸಲು ಬೇರೆ ಸ್ಟಾರ್ ಲೀಡರ್ ಯಾರಿದ್ದಾರೆ ಹೇಳಿದರು.

    ರಾಜ್ಯದಲ್ಲಿ ಕೊರೊನಾ ಹತೋಟಿಗೆ ಬರಲು ಯಡಿಯೂರಪ್ಪನವರೇ ಕಾರಣ. ಹಗಲಿರುಳು ಕಷ್ಟಪಡುತ್ತಿದ್ದಾರೆ ಈಗ ನಾಯಕತ್ವ ಬದಲಾವಣೆ ಬೇಕಾ ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, ದಕ್ಷಿಣ ಭಾರತದಲ್ಲಿ ಎರಡನೇ ಬಾರಿ ಪಕ್ಷ ಅಧಿಕಾರಕ್ಕೆ ಬರಲು ಯಡಿಯೂರಪ್ಪನವರೇ ಕಾರಣ. ಅವರ ನಾಯಕತ್ವ ಬದಲಾವಣೆಗೆ ನಮ್ಮ ವಿರೋಧವಿದೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.