Tag: ಪಬ್ಲಿಕ್ ಟಿವಿ District administration

  • ಕೊಡಗಿನಲ್ಲಿ ಇನ್ಮುಂದೆ ಸೋಮವಾರ, ಶುಕ್ರವಾರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

    ಕೊಡಗಿನಲ್ಲಿ ಇನ್ಮುಂದೆ ಸೋಮವಾರ, ಶುಕ್ರವಾರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

    ಮಡಿಕೇರಿ: ಲಾಕ್‍ಡೌನ್ ಹಿನ್ನೆಲೆ ಕೊಡುಗು ಜಿಲ್ಲೆಯಲ್ಲಿ ಸೋಮವಾರ ಹಾಗೂ ಶುಕ್ರವಾರ ಜನರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡಲಾಗುತ್ತಿದೆ ಎಂದು ಜಿಲ್ಲಾಡಳಿತ ಸೂಚಿಸಿದೆ.

    ರಾಜ್ಯದಲ್ಲಿ ಕೋವಿಡ್ ಸೋಂಕು ವ್ಯಾಪಿಸುತ್ತಿರುವುದನ್ನು ನಿಯಂತ್ರಿಸುವುದಕ್ಕಾಗಿ ರಾಜ್ಯ ಸರ್ಕಾರ ನಾಳೆಯಿಂದ 24 ರವರೆಗೆ ಲಾಕ್ ಡೌನ್ ಘೋಷಿಸಿ ಮಾರ್ಗಸೂಚಿಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ಆದೇಶಿಸಿತ್ತು. ಈ ಆದೇಶದಿಂದ ಕೊಡಗು ಜಿಲ್ಲೆಯ ಜನರಲ್ಲಿ ಕೊಂಚ ಗೊಂದಲ ಉಂಟಾಗಿತ್ತು. ಈ ನಿಟ್ಟಿನಲ್ಲಿ ನಿನ್ನೆ ಸಂಜೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ಮಂಗಳವಾರ ಹಾಗೂ ಶುಕ್ರವಾರ ಜನರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡಿದ್ದನ್ನು ಇದೀಗ ಸೋಮವಾರ ಹಾಗೂ ಶುಕ್ರವಾರ ಜನ ಸಾಮಾನ್ಯರು ಅಗತ್ಯ ವಸ್ತುಗಳನ್ನು ಖರೀದಿಸಬಹುದಾಗಿ ತಿಳಿಸಲಾಗಿದೆ ಮತ್ತು ಕೊಡಗಿನಲ್ಲಿ ಈ ಹಿಂದೆ ಜಾರಿಯಲ್ಲಿದ್ದ ಕಠಿಣ ನಿಯಮಾವಳಿಗಳೇ ಮುಂದುವರೆಯಲಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

    ರಾಜ್ಯ ಸರ್ಕಾರದ ಆದೇಶದಂತೆ ರಾಜ್ಯ ವ್ಯಾಪ್ತಿ ಪ್ರತಿದಿನ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆಯಾದರೂ ಕೊಡಗು ಜಿಲ್ಲೆಯಲ್ಲಿ ಪ್ರತಿ ಸೋಮವಾರ ಮತ್ತು ಶುಕ್ರವಾರ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ವಸ್ತುಗಳ ಖರೀದಿಗೆ ಅವಕಾಶವಿದೆ. ಇತರ ದಿನಗಳಲ್ಲಿ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಹಾಲು ಮತ್ತು ಪತ್ರಿಕೆಗಳ ವಿತರಣೆಗೆ ಅವಕಾಶ ಕಲ್ಪಿಸಲಾಗಿದೆ.

    ಸೋಮವಾರ ಮತ್ತು ಶುಕ್ರವಾರ ಜನಜಂಗುಳಿಯಾಗದಂತೆ ಸಾರ್ವಜನಿಕರು ಸಹಕಾರ ನೀಡುವ ಮೂಲಕ ಮಾಸ್ಕ್ ಕಡ್ಡಾಯವಾಗಿ ಧರಿಸಿ ಅಂತರ ಕಾಯ್ದುಕೊಳ್ಳಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಸ್ಥಳೀಯವಾಗಿ ಇರುವ ಅಂಗಡಿಗಳಿಂದಲೇ ವಸ್ತುಗಳನ್ನು ಖರೀದಿ ಮಾಡಿ, ದೂರದ ಪ್ರದೇಶಕ್ಕೆ ಹೋಗಬೇಡಿ, ವಾಹನಗಳನ್ನು ಬಳಸಬೇಡಿ ಎಂದು ಸಲಹೆ ನೀಡಿದರು. ದಿನದಿಂದ ದಿನಕ್ಕೆ ಜಿಲ್ಲಾಡಳಿತವೇ ಗೊಂದಲದಲ್ಲಿ ಇರುವುದರಿಂದ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

  • ನಿಷೇಧದ ನಡುವೆಯೂ ಜಿಲ್ಲಾದ್ಯಂತ ಹೋಳಿ ಹಬ್ಬ ಆಚರಣೆ

    ನಿಷೇಧದ ನಡುವೆಯೂ ಜಿಲ್ಲಾದ್ಯಂತ ಹೋಳಿ ಹಬ್ಬ ಆಚರಣೆ

    ಯಾದಗಿರಿ: ಜಿಲ್ಲಾಡಳಿತದ ನಿಷೇಧ ನಡುವೆಯೂ ಯಾದಗಿರಿ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಹೋಳಿ ಹಬ್ಬ ಆಚರಣೆ ಮಾಡಲಾಯಿತು.

    ಕೊರೊನಾ ಆತಂಕ ಹಿನ್ನೆಲೆ ಜಿಲ್ಲಾಡಳಿತದಿಂದ ಸಾರ್ವಜನಿಕವಾಗಿ ನಡೆಸುವ ಹೋಳಿ ಹಬ್ಬಕ್ಕೆ ಬ್ರೇಕ್ ಹಾಕಲಾಗಿದೆ. ಅಲ್ಲದೆ ಒಂದು ದಿನದ ಮಟ್ಟಿಗೆ ಮದ್ಯ ಮಾರಾಟವನ್ನು ಸಹ ನಿಷೇಧ ಮಾಡಲಾಗಿದೆ. ಹೀಗಿದ್ದರೂ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಜನ ಸಡಗರ ಸಂಭ್ರಮದಿಂದ ಬಣ್ಣದೋಕಳಿಯಲ್ಲಿ ಮಿಂದೆದ್ದರು.

    ನಗರದಲ್ಲಿ ಯುವಕರು ಮತ್ತು ಯುವತಿಯರು ತಮ್ಮ-ತಮ್ಮ ಏರಿಯಾಗಳಲ್ಲಿ ಒಬ್ಬರ ಮೇಲೆ ಒಬ್ಬರು ಬಣ್ಣ ಹಾಕಿ, ತಮಟೆ ಸದ್ದಿಗೆ ಸಖತ್ ಸ್ಟೇಪ್ ಹಾಕಿದರೆ, ಗ್ರಾಮೀಣ ಭಾಗದ ವಿವಿಧ ತಾಂಡಗಳಲ್ಲಿ ಬಂಜಾರ ಸಮುದಾಯದವರು ಸಾಂಪ್ರದಾಯಿಕ ಶೈಲಿಯಲ್ಲಿ ನೃತ್ಯಕ್ಕೆ ಹೆಜ್ಜೆ ಹಾಕಿ ಖುಷಿಪಟ್ಟರು.