Tag: ಪಬ್ಲಿಕ್ ಟಿವಿ eshwarappa

  • ಈಶ್ವರಪ್ಪ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ: ಧ್ರುವನಾರಾಯಣ

    ಈಶ್ವರಪ್ಪ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ: ಧ್ರುವನಾರಾಯಣ

    ರಾಯಚೂರು: ಪದೇ ಪದೇ ಬೇಜವಾಬ್ದಾರಿ ಹೇಳಿಕೆ ನೀಡುವ ಈಶ್ವರಪ್ಪರನ್ನು ಸಚಿವ ಸಂಪುಟದಿಂದ ಉಚ್ಛಾಟನೆ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ ಹೇಳಿದ್ದಾರೆ.

    ಜಿಲ್ಲೆಯ ಸಿಂಧನೂರಿನಲ್ಲಿ ಮಾತನಾಡಿದ ಧ್ರುವನಾರಾಯಣ, ಈಶ್ವರಪ್ಪ ಕಾಂಗ್ರೆಸ್ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಮೊದಲಿನಿಂದಲೂ ಇಂತಹ ಹೇಳಿಕೆ ನೀಡುವಲ್ಲಿ ಈಶ್ವರಪ್ಪ ನಿಸ್ಸೀಮರು. ನಾಲಿಗೆಗೆ ಎಲುಬಿಲ್ಲ, ಈಶ್ವರಪ್ಪಗೆ ಮೆದುಳು ಸಹ ಇದೆಯೋ, ಇಲ್ಲವೋ ಗೊತ್ತಿಲ್ಲಾ. ಮಾನಸಿಕ ಸ್ಥಿಮಿತತೆಯನ್ನು ಈಶ್ವರಪ್ಪ ಕಳೆದುಕೊಂಡಿದ್ದಾರೆ. ಇಂತಹ ಹೇಳಿಕೆಗಳನ್ನು ನೀಡುವುದನ್ನು ಮುಂದೆಯಾದರೂ ಬಿಡಬೇಕು ಎಂದಿದ್ದಾರೆ.

    ಇತ್ತೀಚೆಗೆ ತಲೆಗಳನ್ನು ತೆಗೆಯುವ ಬಗ್ಗೆ ಮಾತನಾಡಿದ್ದರು. ರಾಗ ದ್ವೇಷಗಳಿಲ್ಲದೆ ಆಡಳಿತ ನಡೆಸುವುದಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದ್ವೇಷ ದಳ್ಳೂರಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇಂತಹ ಹೇಳಿಕೆಗಳನ್ನು ಪದೇ ಪದೇ ನೀಡುವುದರಿಂದ ಜನರಲ್ಲಿ ಗೊಂದಲ ಉಂಟಾಗುತ್ತಿದೆ. ಮುಖ್ಯಮಂತ್ರಿಗಳು ಇವರನ್ನು ಕೂಡಲೇ ಸಂಪುಟದಿಂದ ಉಚ್ಛಾಟಿಸಬೇಕು ಎಂದು ಧ್ರುವನಾರಾಯಣ ಹೇಳಿದ್ದಾರೆ.   ಇದನ್ನೂ ಓದಿ:ಈಶ್ವರಪ್ಪಗೆ ಮಂಡೆ ಸರಿ ಇಲ್ಲ, ಬಿಜೆಪಿ ಶೀಘ್ರ ಚಿಕಿತ್ಸೆ ಕೊಡಿಸಲಿ: ವಿನಯ್ ಕುಮಾರ್ ಸೊರಕೆ ಸಲಹೆ

  • ನೂತನ ಸಚಿವರಿಗೆ ಆಸಕ್ತಿ ತಕ್ಕಂತೆ ಖಾತೆ ಹಂಚಿಕೆಯಾಗಿರೋದು ಸಂತೋಷ: ಈಶ್ವರಪ್ಪ

    ನೂತನ ಸಚಿವರಿಗೆ ಆಸಕ್ತಿ ತಕ್ಕಂತೆ ಖಾತೆ ಹಂಚಿಕೆಯಾಗಿರೋದು ಸಂತೋಷ: ಈಶ್ವರಪ್ಪ

    ಶಿವಮೊಗ್ಗ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ಸಚಿವರಿಗೆ ಅವರ ಆಸಕ್ತಿಗೆ ತಕ್ಕಂತೆ ಖಾತೆ ಹಂಚಿಕೆ ಮಾಡಿರುವುದು ನಿಜಕ್ಕೂ ಸಂತೋಷವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

    ಜಿಲ್ಲೆಯ ಸಾಗರದಲ್ಲಿ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ ಪ್ರತಿಭಾವಂತ ನೂತನ ಸಚಿವರು ಅವರಿಗೆ ಸಿಕ್ಕಂತಹ ಖಾತೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಜೊತೆಗೆ ಮುಂಬರುವ 1 ವರ್ಷ 10 ತಿಂಗಳು ರಾಜ್ಯದ ಜನರ ಸೇವೆ ಮಾಡಲು ಒಳ್ಳೆಯ ಅವಕಾಶವಿದ್ದು, ಸಚಿವರುಗಳು ಅದನ್ನು ಸಂಪೂರ್ಣವಾಗಿ ಸದುಪಯೋಗ ಪಡಿಸಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.

    ಶಿವಮೊಗ್ಗ ಜಿಲ್ಲೆಗೆ ಎರಡು ಪ್ರಮುಖ ಖಾತೆ ಸಿಕ್ಕಿರುವುದು ಜಿಲ್ಲೆಯ ಜನತೆಗೆ ಸಂತೋಷವಾಗಿದೆ. ನನಗೆ ಹಳೆಯ ಗ್ರಾಮೀಣಾಭಿವೃದ್ಧಿ ಖಾತೆಯನ್ನು ಮುಂದುವರಿಸಿದ್ದಾರೆ. ನನ್ನ ಅಚ್ಚುಮೆಚ್ಚಿನ ಇಲಾಖೆ ಗ್ರಾಮೀಣಾಭಿವೃದ್ಧಿ ಇಲಾಖೆ ಆಗಿದ್ದು, ಆ ಖಾತೆಯೇ ನನಗೆ ಸಿಕ್ಕಿರುವುದು ಸಂತೋಷವಾಗಿದೆ ಎಂದು ನುಡಿದಿದ್ದಾರೆ.

    ಅರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ ದೊರೆತಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಗೃಹ ಖಾತೆ ಎರಡು ಖಾತೆಗಳು ಇಡೀ ರಾಜ್ಯಕ್ಕೆ ಸದುಪಯೋಗ ಆಗುವ ರೀತಿ ಪ್ರಯತ್ನ ಮಾಡುತ್ತೇವೆ. ನಮ್ಮ ಜಿಲ್ಲೆಗೂ ಅದರ ಪೂರ್ಣ ಲಾಭ ಪಡೆದುಕೊಳ್ಳುತ್ತೇವೆ. ಇಡೀ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿ ಮಾಡಲು ಹೊಸ ಸಚಿವ ಸಂಪುಟ ಯಶಸ್ವಿಯಾಗುತ್ತದೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಅಡ್ಜೆಸ್ಟ್‌ಮೆಂಟ್ ರಾಜಕಾರಣ ಮಾಡೋದು ಬೇಡ: ಶಾಸಕ ಪ್ರೀತಂ ಗೌಡ

  • ಸಿದ್ದರಾಮಯ್ಯ ಹಸಿವಿನಿಂದ ಒದ್ದಾಡುತ್ತಿರುವ ಇಲಿ: ಈಶ್ವರಪ್ಪ ವ್ಯಂಗ್ಯ

    ಸಿದ್ದರಾಮಯ್ಯ ಹಸಿವಿನಿಂದ ಒದ್ದಾಡುತ್ತಿರುವ ಇಲಿ: ಈಶ್ವರಪ್ಪ ವ್ಯಂಗ್ಯ

    ಮೈಸೂರು: ಸಿಎಂ ಬಸವರಾಜ ಬೊಮ್ಮಾಯಿ ಬೆಟ್ಟ ಅಗೆದು ಇಲಿ ಹಿಡಿದಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್‍ಗೆ ಸಚಿವ ಈಶ್ವರಪ್ಪ ಮೈಸೂರಿನಲ್ಲಿ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ.

    ಸಿದ್ದರಾಮಯ್ಯ ಒಂಥರ ಹಸಿವಿನಿಂದ ಒದ್ದಾಡುತ್ತಿರುವ ಇಲಿ ಥರ ಆಗಿದ್ದಾರೆ. ಸಿದ್ದರಾಮಯ್ಯ ಹುಲಿಯಾಗುತ್ತಾರೆ ಅಂದುಕೊಂಡಿದ್ದೇವು. ಆದರೆ ಅವರು ಇಲಿಯಾಗಿ ವಿಲ ವಿಲ ಒದ್ದಾಡುತ್ತಿದ್ದಾರೆ. ಅವರು ರಾಜ್ಯಕ್ಕೆ ಹುಲಿಯಾಗುವ ಬದಲು ಡಿ.ಕೆ. ಶಿವಕುಮಾರ್ ಮೇಲೆ ಹುಲಿಯಾಗಿದ್ದಾರೆ ಎಂದಿದ್ದಾರೆ.

    ಚಾಮುಂಡಿ ಬೆಟ್ಟದಲ್ಲಿ ನಿಂತು ಹೇಳುತ್ತಿದ್ದೇನೆ, ಡಾ.ಜಿ. ಪರಮೇಶ್ವರ್ ಅವರನ್ನು ಕಳೆದ ಬಾರಿಯ ಚುನಾವಣೆಯಲ್ಲಿ ಸೋಲಿಸಿದ್ದು ಸಿದ್ದರಾಮಯ್ಯ. ಸಿಎಂ ಸ್ಥಾನಕ್ಕೆ ಅಡ್ಡಿಯಾಗುತ್ತಾರೆ ಎಂದು ಅವರನ್ನು ಸಿದ್ದರಾಮಯ್ಯ ಸೋಲಿಸಿದರು. ಸಿದ್ದರಾಮಯ್ಯ ಒಬ್ಬ ಕುರುಬರನ್ನು ಬೆಳೆಸಲಿಲ್ಲ. ನೆಪ ಮಾತ್ರಕ್ಕೆ ತಾತ್ಕಾಲಿಕವಾಗಿ ಕೆಲವು ಕುರುಬರನ್ನು ಸಚಿವರನ್ನಾಗಿ ಮಾಡಿದ್ದರು. ಪೂರ್ಣಾವಧಿಯಲ್ಲಿ ಯಾರಿಗೂ ಸಚಿವ ಸ್ಥಾನ ನೀಡಲಿಲ್ಲ ಎಂದು ಕಿಡಿಕಾರಿದರು.

    ನಮ್ಮಲ್ಲಿ ಹಿಂದುಳಿದವರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ತರುತ್ತೇವೆ. ಪಕ್ಷ ನಿಷ್ಠ ಕಾರ್ಯಕರ್ತರೊಂದಿಗೆ ಅಧಿಕಾರಕ್ಕೆ ಬರುತ್ತೇವೆ. ಇದುವರೆಗೂ ಯಾವತ್ತು ಬಿಜೆಪಿ ಪೂರ್ಣಪ್ರಮಾಣದಲ್ಲಿ ಬಹುಮತ ಬಂದಿಲ್ಲ. ಕಾಂಗ್ರೆಸ್ – ಜೆಡಿಎಸ್ ಅವರನ್ನು ಸೇರಿಸಿಕೊಂಡು ಆಡಳಿತ ಮಾಡಿದ್ದೇವೆ. ಇದರಿಂದಾಗಿಯೇ ಸಣ್ಣ ಪುಟ್ಟ ಗೊಂದಲಗಳಿದ್ದವು. ಮುಂದೆ ಈ ರೀತಿ ಆಗುವುದಿಲ್ಲ ಎಂದು ಹೇಳಿದ್ದಾರೆ.

    ಮತ್ತೊಂದೆಡೆ ಮುಂದಿನ ಬಾರಿ ಬಿಜೆಪಿಯಲ್ಲಿ ರಾಷ್ಟ್ರೀಯವಾದಿ ಮುಖ್ಯಮಂತ್ರಿಯಾಗುತ್ತಾರೆ. ನಾನು ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಆಗಬೇಕೆಂದು ಬೆಂಬಲಿಗರು ಬಯಸಿದ್ದರು. ಆದರೆ ಸಚಿವನೂ ಆಗುವುದಿಲ್ಲ ಅಂತ ಕೆಲವರು ಬಿಂಬಿಸಿದ್ದರು. ಹೈಕಮಾಂಡ್ ನನ್ನನ್ನು ಹೇಗೆ ಪರಿಗಣಿಸಿದೆ ಅಂತ ಈಗ ಎಲ್ಲರಿಗೂ ಗೊತ್ತಾಗಿದೆ. ಮುಂದಿನ ಚುನಾವಣೆಯಲ್ಲಿ ನಾವು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ. ಮುಂದಿನ ಬಾರಿ ರಾಷ್ಟ್ರವಾದಿಯನ್ನು ಬಿಜೆಪಿ ಮುಖ್ಯಮಂತ್ರಿ ಮಾಡುತ್ತೆ. ಹಿಂದುಳಿದವರೋ ದಲಿತರೋ ಯಾರೇ ಆಗಲಿ ಒಬ್ಬ ರಾಷ್ಟ್ರವಾದಿ ಸಿಎಂ ಆಗುತ್ತಾರೆ ಎಂದಿದ್ದಾರೆ. ಇದನ್ನೂ ಓದಿ:ನಮ್ಮ ಸಿಎಂ ನಮ್ಮನ್ನ ತಿರಸ್ಕರಿಸಿದ್ದಕ್ಕೆ ಸಚಿವ ಸ್ಥಾನ ತಪ್ತು: ಶಾಸಕ ನೆಹರೂ ಓಲೇಕಾರ್ ಕಿಡಿ

  • ಸಚಿವ ಸ್ಥಾನಕ್ಕೆ ಪ್ರಯತ್ನಿಸಿದರೆ ತಪ್ಪೇನು, ರಾಜಕಾರಣದಲ್ಲಿ ಯಾರು ಸನ್ಯಾಸಿಗಳಲ್ಲ : ಈಶ್ವರಪ್ಪ

    ಸಚಿವ ಸ್ಥಾನಕ್ಕೆ ಪ್ರಯತ್ನಿಸಿದರೆ ತಪ್ಪೇನು, ರಾಜಕಾರಣದಲ್ಲಿ ಯಾರು ಸನ್ಯಾಸಿಗಳಲ್ಲ : ಈಶ್ವರಪ್ಪ

    – ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ಪ್ರಯತ್ನ ವಿಚಾರ

    ಶಿವಮೊಗ್ಗ : ಸಿಡಿ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಮೇಶ್ ಜಾರಕಿಹೊಳಿ, ಇದೀಗ ಮತ್ತೆ ಸಚಿವ ಸ್ಥಾನಕ್ಕೆ ಪ್ರಯತ್ನ ಪಟ್ಟರೆ ತಪ್ಪೇನಿದೆ? ರಾಜಕಾರಣದಲ್ಲಿ ಯಾರು ಸನ್ಯಾಸಿಗಳಲ್ಲ ಎಂದು ಹೇಳುವ ಮೂಲಕ ಸಚಿವ ಈಶ್ವರಪ್ಪ, ರಮೇಶ್ ಜಾರಕಿಹೊಳಿಗೆ ಪರೋಕ್ಷವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ.

    ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ಪ್ರಯತ್ನ ಪಡುತ್ತಿರಬಹುದು. ಆದರೆ ಸಚಿವ ಸಂಪುಟಕ್ಕೆ ತೆಗೆದುಕೊಳ್ಳುತ್ತಾರೋ, ಇಲ್ಲವೋ ಎಂಬುದು ಕೇಂದ್ರದ ನಾಯಕರು ಹಾಗೂ ಮುಖ್ಯಮಂತ್ರಿ ಅವರಿಗೆ ಬಿಟ್ಟ ವಿಚಾರ ಎಂದಿದ್ದಾರೆ.

    ರಾಜಕಾರಣಕ್ಕೆ ಸುಮ್ಮನೆ ಯಾರು ಬರುವುದಿಲ್ಲ. ರಾಜಕಾರಣಕ್ಕೆ ಬರುವುದೇ ಸ್ಥಾನ ಮಾನ ಪಡೆಯಲು. ರಾಜಕೀಯದಲ್ಲಿ ಯಾರೂ ಕೂಡ ಸನ್ಯಾಸಿಯಲ್ಲ. ಹೀಗಾಗಿ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ಪ್ರಯತ್ನ ಪಟ್ಟರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.

    ರಮೇಶ್ ಜಾರಕಿಹೊಳಿ ಸುತ್ತೂರು ಮಠಕ್ಕೆ ಭೇಟಿ ನೀಡಿರುವ ಹಿಂದೆ ಯಾವುದೇ ಉದ್ದೇಶ ಇಲ್ಲ. ಮಠಕ್ಕೆ ಯಾರೂ ಬೇಕಾದರೂ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆಯಬಹುದು. ಸಚಿವ ಆಗುವುದಕ್ಕೆ ಅವರು ಮಠಕ್ಕೆ ಹೋಗಿಲ್ಲ. ಬದಲಿಗೆ ಸ್ವಾಮೀಜಿಯವರ ಆಶೀರ್ವಾದ ಪಡೆಯಲು ಹೋಗಿದ್ದಾರೆ. ಮಠಕ್ಕೆ ಹೋದರೆ ಸಚಿವ ಸ್ಥಾನ ಸಿಗುತ್ತದೆ ಎನ್ನುವುದಾದರೆ ಎಲ್ಲಾ ಮಠಗಳ ಮುಂದೆ ರಾಜಕಾರಣಿಗಳು ಸಾಲುಗಟ್ಟಿ ನಿಲ್ಲುತ್ತಿದ್ದರು ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ.  ಇದನ್ನೂ ಓದಿ: ಕಟ್ಟ ಕಡೆಯ ವ್ಯಕ್ತಿಗೂ ಸೇವೆ ಸಿಗಬೇಕು ಅದೇ ರಾಜಕಾರಣ: ಎಂಟಿಬಿ

  • ದಿಗ್ವಿಜಯ್ ಸಿಂಗ್, ಸಿದ್ದರಾಮಯ್ಯ, ಜಮೀರ್ ಪಾಕಿಸ್ತಾನದ ಪರ ಇರುವ ಕಾಂಗ್ರೆಸ್ಸಿಗರು: ಈಶ್ವರಪ್ಪ

    ದಿಗ್ವಿಜಯ್ ಸಿಂಗ್, ಸಿದ್ದರಾಮಯ್ಯ, ಜಮೀರ್ ಪಾಕಿಸ್ತಾನದ ಪರ ಇರುವ ಕಾಂಗ್ರೆಸ್ಸಿಗರು: ಈಶ್ವರಪ್ಪ

    -ಅರುಣ್ ಸಿಂಗ್ ಭೇಟಿಯ ನಂತರ ಬಿಜೆಪಿ ಅಸಮಾಧಾನ ಸರಿ ಹೋಗಲಿದೆ

    ಶಿವಮೊಗ್ಗ: ದಿಗ್ವಿಜಯ್ ಸಿಂಗ್, ಸಿದ್ದರಾಮಯ್ಯ ಹಾಗೂ ಜಮೀರ್ ಅಹಮದ್‍ರವರುಗಳು ಪಾಕಿಸ್ತಾನದ ಪರ ಇರುವ ಕಾಂಗ್ರೆಸ್ಸಿಗರು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಗಂಭೀರ ಆರೋಪ ಮಾಡಿದ್ದಾರೆ.

    ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಚಿವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ಟಿಕಲ್ 370ನ್ನು ರದ್ದು ಮಾಡುತ್ತೇವೆ ಎಂದು ದಿಗ್ವಿಜಯ್ ಸಿಂಗ್ ಹೇಳುತ್ತಾರೆ ಇದು ದಿಗ್ವಿಜಯ್ ಸಿಂಗ್ ಅವರ ರಾಷ್ಟ್ರದ್ರೋಹದ ಹೇಳಿಕೆ. ಅದೇ ರೀತಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೋವುಗಳನ್ನು ಪೂಜೆ ಮಾಡುತ್ತೇವೆ. ಅದೇ ರೀತಿ ಗೋವುಗಳನ್ನು ಹತ್ಯೆಯನ್ನು ಮಾಡುತ್ತೇವೆ ಎಂದು ಹೇಳುತ್ತಾರೆ. ಸಿದ್ದರಾಮಯ್ಯ ಅವರ ಈ ಹೇಳಿಕೆ ಪರ ಇದ್ದೇವೆ ಎಂದು ಜಮೀರ್ ಅಹಮದ್ ಹೇಳುತ್ತಾರೆ. ಹಾಗಾಗಿ, ಈ ಮೂರು ಜನ ಪಾಕಿಸ್ತಾನದ ಪರ ಇರುವವರು ಎಂದು ಸಚಿವ ಈಶ್ವರಪ್ಪನವರು ಕಿಡಿಕಾರಿದ್ದಾರೆ.

    ಕಾಂಗ್ರೆಸ್ ಹೇಳೋರು ಕೇಳೋರು ಇಲ್ಲದ ಪಕ್ಷ. ಈ ದೇಶದ ಗೋವಿನ ಬಗ್ಗೆ, ದೇಶದ ಭೂಮಿ ಕಾಶ್ಮೀರದ ಬಗ್ಗೆ ಗೌರವವಿಲ್ಲದ ಜನ ಕಾಂಗ್ರೆಸ್‍ನವರು. ಹೀಗಾಗಿಯೇ ಅವರು ಏನು ಬೇಕಾದರೂ ಹೇಳುತ್ತಾರೆ. ಆದರೆ ಬಿಜೆಪಿಯವರಿಗೆ ಹೇಳೋರು ಕೇಳೋರು ಇದ್ದಾರೆ ಎಂದರು.

    ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಇದೇ ಜೂ. 16, 17,18ಕ್ಕೆ ರಾಜ್ಯಕ್ಕೆ ಆಗಮಿಸುವ ಅರುಣ್ ಸಿಂಗ್ ಸಚಿವರು ಜೊತೆ ಹಾಗೂ ಕೋರ್ ಕಮಿಟಿ ಸಮಿತಿ ಸದಸ್ಯರ ಜೊತೆ ಸಭೆ ಮಾಡಲಿದ್ದಾರೆ. ಶಾಸಕರಿಗೂ ತಮ್ಮ ಅಭಿಪ್ರಾಯ ತಿಳಿಸಲು ಅವಕಾಶ ಇದೆ. ಇದು ಬಿಜೆಪಿ ಪಕ್ಷದ ವಿಶೇಷ. ಬಿಜೆಪಿಯಲ್ಲಿ ಹೇಳೋರು ಕೇಳೋರು ಇದ್ದಾರೆ ಎನ್ನುವುದಕ್ಕೆ ಅರುಣ್ ಸಿಂಗ್ ಬರುತ್ತಿರುವುದೇ ಸಾಕ್ಷಿ ಎಂದರು. ಜೊತೆಗೆ ಪಕ್ಷದಲ್ಲಿ ಕೆಲ ಗೊಂದಲಗಳಿವೆ ಆದರೆ ಅರುಣ್ ಸಿಂಗ್ ಬಂದು ಹೋದ ನಂತರ ಎಲ್ಲವೂ ಸರಿಯಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಶಿವಮೊಗ್ಗ ಜಿಲ್ಲೆಯಲ್ಲಿ ಜೂ.21 ರವರೆಗೆ ಲಾಕ್‍ಡೌನ್ ಮುಂದುವರಿಕೆ: ಸಚಿವ ಕೆ.ಎಸ್.ಈಶ್ವರಪ್ಪ

  • ಸಿದ್ದರಾಮಯ್ಯಗೆ ಬುದ್ಧಿ ಇಲ್ಲ, ಕಾಂಗ್ರೆಸ್ ವಿಪಕ್ಷ ಸ್ಥಾನದಲ್ಲಿರಲು ವಿಫಲ: ಈಶ್ವರಪ್ಪ

    ಸಿದ್ದರಾಮಯ್ಯಗೆ ಬುದ್ಧಿ ಇಲ್ಲ, ಕಾಂಗ್ರೆಸ್ ವಿಪಕ್ಷ ಸ್ಥಾನದಲ್ಲಿರಲು ವಿಫಲ: ಈಶ್ವರಪ್ಪ

    ಶಿವಮೊಗ್ಗ: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬುದ್ಧಿಯೇ ಇಲ್ಲ. ಕಾಂಗ್ರೆಸ್ ವಿಪಕ್ಷ ಸ್ಥಾನದಲ್ಲಿ ಇರಲು ಸಹ ವಿಫಲವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

    ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಚಿವರು ನಮ್ಮ ವಿರುದ್ದ ಆರೋಪ ಮಾಡಲು ಸಹ ಕಾಂಗ್ರೆಸ್ ವಿಫಲವಾಗಿದೆ. ಕೋವಿಡ್‍ಗೆ ದೇಶದಲ್ಲಿ ಲಸಿಕೆ ಬಂದ ಆರಂಭದಲ್ಲಿ ಲಸಿಕೆ ತೆಗೆದುಕೊಳ್ಳಬೇಡಿ ಎಂದು ಇಡೀ ದೇಶದಲ್ಲಿ ಅಪಪ್ರಚಾರ ಮಾಡಿದವರೇ ಕಾಂಗ್ರೆಸ್ಸಿಗರು. ಆದರೆ ಈಗ ಲಸಿಕೆ ಪಡೆದುಕೊಳ್ಳಲು ಅವರೇ ಕ್ಯೂನಲ್ಲಿ ನಿಂತಿದ್ದಾರೆ. ಜೊತೆಗೆ ಲಸಿಕೆ ಸಿಗುತ್ತಿಲ್ಲ ಎಂದು ಆರೋಪ ಮಾಡುತ್ತಿದ್ದಾರೆ ಕಿಡಿಕಾರಿದ್ದಾರೆ. ಇದನ್ನೂ ಓದಿ: 100 ನಾಟೌಟ್, ಕಾಂಗ್ರೆಸ್ ಪ್ರತಿಭಟನೆ – ಸಿದ್ದರಾಮಯ್ಯ, ಡಿಕೆಶಿ ವಶಕ್ಕೆ

    ಇಡೀ ಪ್ರಪಂಚದಲ್ಲಿ ಆಗದಿರುವ ಒಳ್ಳೆಯ ಕೆಲಸವನ್ನು ನಮ್ಮ ದೇಶದಲ್ಲಿ ನರೇಂದ್ರ ಮೋದಿಯವರು ಮಾಡಿದ್ದಾರೆ. ಇಡೀ ದೇಶದ ಜನರಿಗೆ ಲಸಿಕೆ ಪಡೆದುಕೊಳ್ಳಿ ಎಂದು ಮೋದಿಯವರು ಮನವಿ ಮಾಡಿದರೆ, ಕಾಂಗ್ರೆಸ್ ನಾಯಕರು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಿದರು. ಲಸಿಕೆ ಹಾಕಿಸಿಕೊಳ್ಳಬೇಡಿ ಎಂದು ದೇಶದಲ್ಲಿ ಸಾರಿದರು. ಮೋದಿ ಹಾಗೂ ಬಿಜೆಪಿ ಲಸಿಕೆ ಎಂದು ದಿಕ್ಕು ತಪ್ಪಿಸುವ ಕೆಲಸ ಮಾಡಿದರು ಎಂದು ಸಚಿವ ಈಶ್ವರಪ್ಪ ಕಾಂಗ್ರೆಸ್ ನಾಯಕರ ವಿರುದ್ದ ಹರಿಹಾಯಿದ್ದಾರೆ. ಇದನ್ನೂ ಓದಿ: ಜಮೀರ್ ಅಹ್ಮದ್ ವಿರುದ್ಧ ಸವಿತಾ ಸಮಾಜ ಆಕ್ರೋಶ

  • ಸಿದ್ದರಾಮಯ್ಯ, ಡಿಕೆಶಿ ಕುತಂತ್ರ ರಾಜಕಾರಣ ಮಾಡ್ತಿದ್ದಾರೆ: ಕೆ.ಎಸ್.ಈಶ್ವರಪ್ಪ

    ಸಿದ್ದರಾಮಯ್ಯ, ಡಿಕೆಶಿ ಕುತಂತ್ರ ರಾಜಕಾರಣ ಮಾಡ್ತಿದ್ದಾರೆ: ಕೆ.ಎಸ್.ಈಶ್ವರಪ್ಪ

    ರಾಯಚೂರು: ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ದ್ವಂದ್ವ ಹೇಳಿಕೆ ನೀಡುವ ಮೂಲಕ ಕುತಂತ್ರ ರಾಜಕಾರಣ ಮಾಡುತ್ತಿದ್ದಾರೆ. ಇಬ್ಬರು ಒಂದೊಂದು ಹೇಳಿಕೆ ನೀಡುವ ಮೂಲಕ ಡಬಲ್ ಗೇಮ್ ಆಡುತ್ತಿದ್ದಾರೆ. ಇವರ ಆಟ ಬಿಜೆಪಿಯ ಮುಂದೆ ನಡೆಯುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ರಾಯಚೂರಿನಲ್ಲಿ ಹೇಳಿದ್ದಾರೆ.

    ಕೋವಿಡ್ ನಿಯಂತ್ರಣ ಹಾಗೂ ಇಲಾಖೆ ಪ್ರಗತಿ ಪರಿಶೀಲನ ಸಭೆಗಾಗಿ ಜಿಲ್ಲೆಗೆ ಆಗಮಿಸಿದ್ದ ಸಚಿವ ಈಶ್ವರಪ್ಪ ಸಿಎಂ ಬದಲಾವಣೆ ವಿಚಾರದಲ್ಲಿ ಯಡಿಯೂರಪ್ಪ ಈಗಾಗಲೇ ಸ್ಪಷ್ಟ ಉತ್ತರ ನೀಡಿದ್ದಾರೆ. ಕೇಂದ್ರದ ನಾಯಕರು ಕೇಳಿದರೆ ರಾಜೀನಾಮೆ ಕೊಡಲು ಸಿದ್ದ ಅಂತ ಹೇಳುವ ಮೂಲಕ ಶಿಸ್ತಿನ ಪಕ್ಷದ ಶಿಸ್ತಿನ ನಾಯಕ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ಬಿಜೆಪಿಯಲ್ಲಿ ಬಿಎಸ್‍ವೈ ಬಿಟ್ಟರೆ ಸಿಎಂ ಆಗಲು ಬೇರೆ ನಾಯಕರಿಲ್ಲ ಎನ್ನುವ ಕಾಂಗ್ರೆಸ್ ಹೇಳಿಕೆಗಳೇ ಈಗ ಬದಲಾಗಿವೆ. ಬಿಜೆಪಿಯಲ್ಲಿ ಬಹಳಷ್ಟು ಜನರಿಗೆ ಸಿಎಂ ಆಗುವ ಶಕ್ತಿ ಇದೆ. ಡಿಕೆಶಿ ಡಬಲ್ ಗೇಮ್ ಆಡುವುದು ಬೇಡ ಎಂದು ಎಚ್ಚರಿಸಿದ್ದಾರೆ. ಇದನ್ನು ಓದಿ: ಮಾನ, ಮರ್ಯಾದೆ ಇರುವ ಎಂಪಿ ಹೀಗೆ ಮಾಡಲ್ಲ, ಐಎಎಸ್ ಅಧಿಕಾರಿಗಳ ಕಿತ್ತಾಟದ ಬಗ್ಗೆ ತನಿಖೆ ಆಗಬೇಕು: ಸಿದ್ದರಾಮಯ್ಯ

    ಯಡಿಯೂರಪ್ಪನವರ ಹೇಳಿಕೆಗಳು ಡಿಕೆಶಿ ಮತ್ತು ಸಿದ್ದರಾಮಯ್ಯಗೆ ಉತ್ತರ ಕೊಟ್ಟಾಗಿದೆ. ಇಡೀ ರಾಜ್ಯದ ಕಾರ್ಯಕರ್ತರಿಗೆ ಬಿಎಸ್‍ವೈ ಹೇಳಿಕೆ ತೃಪ್ತಿ ಆಗಿದೆ. ಇದನ್ನ ಕಾಂಗ್ರೆಸ್ ನವರು ಗಮನಿಸಬೇಕು ಎಂದರು. ಶಾಸಕರ ಸಹಿ ಸಂಗ್ರಹ ವಿಚಾರ ಬಗ್ಗೆ ಅಂತೆ-ಕಂತೆ ಶುರುವಾಗಿದೆ. ಸಹಿ ಬಗ್ಗೆ ನಾನು ನೋಡಿಲ್ಲ, ಹಿಂದೆ ಯಾವುದಕ್ಕೋ ಮಾಡಿದ ಸಹಿ ಸಂಗ್ರಹವಾಗಿದೆ. ಸಹಿ ಸಂಗ್ರಹ ಬಿಜೆಪಿಯ ಪದ್ಧತಿ ಅಲ್ಲ, ಯಾರು ಪರ-ವಿರುದ್ಧ ಸಹಿ ಸಂಗ್ರಹ ಮಾಡಕೂಡದು. ಕಾಂಗ್ರೆಸ್‍ನ ಡಿಕೆಶಿ ಮತ್ತು ಸಿದ್ದರಾಮಯ್ಯ ಕುತಂತ್ರ ರಾಜಕಾರಣ ನಿಲ್ಲಿಸಬೇಕು ಎಂದು ಹೇಳಿದ್ದಾರೆ.

    ಮೋದಿ ವ್ಯಾಕ್ಸಿನ್ ಪಡೆಯಬೇಡಿ ಅಂತ ಕಾಂಗ್ರೆಸ್ ನಾಯಕರು ಅಪಪ್ರಚಾರ ಮಾಡಿದರು. ಯುಟಿ ಖಾದರ್ ಲಸಿಕೆ ಹಾಕಿಸಿಕೊಂಡರೆ ಪುರಷತ್ವ ಹೋಗುತ್ತೆ ಎಂದರು. ವ್ಯಾಕ್ಸಿನ್ ಹಾಕಿಸಿಕೊಳ್ಳಬೇಡಿ ಎಂದಿದ್ದ ಕಾಂಗ್ರೆಸ್ ನಾಯಕರು ಇವತ್ತು ಕ್ಯೂ ನಿಂತಿದ್ದಾರೆ ಅಂತ ಕಿಡಿಕಾರಿದ್ದಾರೆ. ಇದನ್ನು ಓದಿ: ಬಿಎಂಟಿಸಿ ಪ್ರಯಾಣ ದರ ಏರಿಕೆ ಸದ್ಯಕ್ಕಿಲ್ಲ: ಸವದಿ

    ಗ್ರಾಮೀಣ ಭಾಗದಲ್ಲಿ ಟಾಸ್ಕ್ ಫೋರ್ಸ್ ರಚಿಸಿ ಸೋಂಕಿತರ ಸಂಖ್ಯೆ ಕಡಿಮೆ ಮಾಡಿದ್ದೇವೆ. ಗ್ರಾಮೀಣ ಭಾಗದ ಜನ ಸ್ಪಂದನೆ ನೀಡಿದ್ದರಿಂದ ಹಳ್ಳಿಗಳಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ ಎಂದು ತಿಳಿಸಿದ್ದಾರೆ.

  • ಲಾಕ್ ಡೌನ್ ನಡುವೆ ಮನೆಯ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಪುಡಿ ಪುಡಿ

    ಲಾಕ್ ಡೌನ್ ನಡುವೆ ಮನೆಯ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಪುಡಿ ಪುಡಿ

    ಶಿವಮೊಗ್ಗ: ಕಠಿಣ ಲಾಕ್ ಡೌನ್ ನಡುವೆ ಮನೆಗಳ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜುಗಳನ್ನು ಕಿಡಿಗೇಡಿಗಳು ಪುಡಿ ಪುಡಿ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

    ಶಿವಮೊಗ್ಗದ ಸಿದ್ದಯ್ಯ ರಸ್ತೆ ಹಾಗೂ ಎಂಕೆಕೆ ರಸ್ತೆಯಲ್ಲಿ ಕಾರುಗಳ ಮಾಲೀಕರು ತಮ್ಮ ತಮ್ಮ ಕಾರುಗಳನ್ನು ಮನೆಯ ಮುಂದೆ ನಿಲ್ಲಿಸಿದ್ದರು. ಆದರೆ ಮಧ್ಯರಾತ್ರಿ 1.30ರ ಸುಮಾರಿಗೆ ಮನೆಯ ಮುಂದೆ ನಿಲ್ಲಿಸಿದ್ದ ಸುಮಾರು 17 ಕಾರುಗಳು, ಆಟೋ ಹಾಗೂ ಬೈಕ್‍ಗಳನ್ನು ಕಿಡಿಗೇಡಿಗಳು ಜಖಂಗೊಳಿಸಿದ್ದಾರೆ.

    ಘಟನೆ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗ ನಗರದಲ್ಲಿ ಪದೇ ಪದೇ ಇಂತಹ ದುಷ್ಕøತ್ಯ ನಡೆಯುತ್ತಿದೆ. ಪೊಲೀಸರು ಇಂತಹ ಸಮಾಜ ಘಾತುಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

    ಇಡೀ ದೇಶ ಕೊರೊನಾ ಸಂಕಷ್ಟಕ್ಕೆ ಸಿಲುಕಿದೆ. ಪೊಲೀಸರು ಲಾಕ್‍ಡೌನ್ ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಇಂತಹ ಸಮಯದಲ್ಲಿ ಕಿಡಿಗೇಡಿಗಳು ಇಂತಹ ದುಷ್ಕೃತ್ಯ ಮೆರೆದಿದ್ದಾರೆ. ದುಷ್ಕೃತ್ಯ ನಡೆಸಿರುವ ಇಬ್ಬರು ಯುವಕರನ್ನು ಸ್ಥಳಿಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

    ದೊಡ್ಡಪೇಟೆ ಪೊಲೀಸರು ಈಗಾಗಲೇ ಇಬ್ಬರು ಕಿಡಿಗೇಡಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಇಬ್ಬರು ಅಷ್ಟೇ ಅಲ್ಲದೇ ಇನ್ನು ಕೆಲವು ಕಿಡಿಗೇಡಿಗಳು ಇರುವ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಪೊಲೀಸರಿಗೆ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ.

  • ಸಿದ್ದರಾಮಯ್ಯ ಅರ್ಜೆಂಟಾಗಿ ಸಿಎಂ ಆಗುವ ಭ್ರಮೆಯಲ್ಲಿದ್ದಾರೆ : ಈಶ್ವರಪ್ಪ

    ಸಿದ್ದರಾಮಯ್ಯ ಅರ್ಜೆಂಟಾಗಿ ಸಿಎಂ ಆಗುವ ಭ್ರಮೆಯಲ್ಲಿದ್ದಾರೆ : ಈಶ್ವರಪ್ಪ

    – ಬಿಎಸ್‍ವೈ ರಾಜೀನಾಮೆಯ ಪ್ರಶ್ನೆಯೇ ಇಲ್ಲ

    ಶಿವಮೊಗ್ಗ: ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ, ಹೈಕಮಾಂಡ್‍ಗೆ ಪತ್ರ ಬರೆದ ವಿಷಯವನ್ನು ಮಾಜಿ ಸಿಎಂ ಸಿದ್ದರಾಮಯ್ಯ ರಾಜಕಾರಣ ಮಾಡಲು ಹೊರಟಿದ್ದಾರೆ. ಸಿದ್ದರಾಮಯ್ಯ ಅರ್ಜೆಂಟಾಗಿ ಮುಖ್ಯಮಂತ್ರಿ ಆಗಬೇಕಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದ್ದಾರೆ.

    ಶಿವಮೊಗ್ಗದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಯಡಿಯೂರಪ್ಪ ರಾಜೀನಾಮೆ ನೀಡಿದರೆ ಮುಖ್ಯಮಂತ್ರಿ ಆಗುತ್ತೀನಿ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಯಡಿಯೂರಪ್ಪ ರಾಜೀನಾಮೆ ನೀಡುವ ಪ್ರಶ್ನೆಯೇ ಬರಲ್ಲ. ಹೀಗಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವ ಭ್ರಮೆ ಇಟ್ಟುಕೊಳ್ಳುವುದು ಬೇಡ ಎಂದು ಸಚಿವ ಈಶ್ವರಪ್ಪ ತಿಳಿಸಿದರು.

    2018ರ ಚುನಾವಣೆಯಲ್ಲಿ ಜನ ಸಿದ್ದರಾಮಯ್ಯ ಅವರನ್ನು ತಿರಸ್ಕಾರ ಮಾಡಿದರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಿದರು. ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡರು ಎಂದರು. ಬಿಜೆಪಿ ಪಕ್ಷ ಸಂಘಟನಾತ್ಮಕವಾಗಿ ಒಟ್ಟಾಗಿದೆ. ಬಿಜೆಪಿಗೆ ಪ್ರತಿ ಬೂತ್‍ನಲ್ಲೂ ಕಾರ್ಯಕರ್ತರು ಇದ್ದಾರೆ. ಉಪ ಚುನಾವಣೆ ನಡೆಯುತ್ತಿರುವ ಬೆಳಗಾವಿ, ಮಸ್ಕಿ, ಬಸವ ಕಲ್ಯಾಣದಲ್ಲಿ ಈ ಬೂತ್ ಮಟ್ಟದ ಕಾರ್ಯಕರ್ತರು ಪ್ರತಿ ಮನೆಗೂ ಭೇಟಿ ನೀಡಿದ್ದಾರೆ. ಪ್ರತಿ ಮತದಾರರನ್ನು ತಲುಪಿದ್ದಾರೆ ಇದನ್ನು ಸಹಿಸಲು ಪ್ರತಿಪಕ್ಷಗಳಿಗೆ ಆಗುತ್ತಿಲ್ಲ ಎಂದರು.

    ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇಷ್ಟೊಂದು ಅಭಿವೃದ್ಧಿ ಕೆಲಸ ಮಾಡುತ್ತಿದೆ. ಹೀಗಾಗಿ ಅದರ ಬಗ್ಗೆ ಟೀಕೆ ಮಾಡಲು ಆಗುವುದಿಲ್ಲ. ರಾಜ್ಯ ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡುತ್ತಿದೆ. ಅದನ್ನು ಟೀಕೆ ಮಾಡಲು ಸಾಧ್ಯವಿಲ್ಲ. ಅವರ ಕಣ್ಣ ಮುಂದೆ ಇದೊಂದು ಪತ್ರ ಸಿಕ್ಕಿದೆ. ಮುಖ್ಯಮಂತ್ರಿ ರಾಜೀನಾಮೆ ಕೊಡಬೇಕು ಅಂತಿದ್ದಾರೆ ಅಷ್ಟೇ. ಕೇಂದ್ರ ಹಾಗೂ ರಾಜ್ಯದಲ್ಲಿ ಒಳ್ಳೆಯ ಸರ್ಕಾರ ಇದೆ ಅಂತಾ ಜನ ತೀರ್ಮಾನ ಮಾಡಿದ್ದಾರೆ. ಆಡಳಿತಾತ್ಮಕವಾಗಿ ಸಣ್ಣಪುಟ್ಟ ವ್ಯತ್ಯಾಸ ಆಗಿತ್ತು. ಇದನ್ನು ಸರಿಪಡಿಸಿಕೊಳ್ಳುವ ದಿಕ್ಕಿನಲ್ಲಿ ಪ್ರಯತ್ನ ನಡೆಸುತ್ತಿದ್ದೇವೆ. ರಾಜ್ಯಾಧ್ಯಕ್ಷರು ಇದನ್ನು ಶೀಘ್ರವಾಗಿ ಬಗೆ ಹರಿಸುತ್ತೇವೆ ಎಂದಿದ್ದಾರೆ. ಈ ಸಮಸ್ಯೆ ಆದಷ್ಟು ಬೇಗ ಮುಗಿಯುತ್ತೆ ಎಂಬ ವಿಶ್ವಾಸ ನನಗೆ ಇದೆ ಎಂದು ಸಚಿವ ಈಶ್ವರಪ್ಪ ತಿಳಿಸಿದರು.

    ಸಚಿವ ಈಶ್ವರಪ್ಪ ವಿರುದ್ಧ ಸಿಎಂ ಆಪ್ತರು ಸಹಿ ಸಂಗ್ರಹ ನಡೆಸುತ್ತಿದ್ದಾರೆ ಎಂಬ ವಿಷಯವನ್ನು ಮಾಧ್ಯಮದಲ್ಲಿ ಗಮನಿಸಿದೆ. ಅದೆಲ್ಲಾ ಮುಗಿದು ಹೋದ ಕಥೆ. ಸಹಿ ಸಂಗ್ರಹ, ರಾಜೀನಾಮೆ, ಖಾತೆ ಬದಲಾವಣೆ ಈ ರೀತಿ ಎಲ್ಲಾ ಚರ್ಚೆ ನಡೆದಿದೆ. ಯಾರು ಯಾರು ಈ ರೀತಿ ಮಾಡಲು ಹೊರಟ್ಟಿದ್ದಾರೋ ಅವರಿಗೆ ನಾನು ಹೆದರಲ್ಲ, ಬಗ್ಗಲ್ಲ, ಜಗ್ಗಲ್ಲ ಅಂತಾ ಹೇಳಿದ್ದೀನಿ. ನಾನು ಈ ಹೇಳಿಕೆ ನೀಡಿದ ನಂತರ ಯಾರೂ ಈ ರೀತಿ ಮಾಡುವುದಿಲ್ಲ ಅಂದಿದ್ದಾರೆ. ಹೀಗಾಗಿ ಈ ವಿಷಯ ಇವತ್ತಿಗೆ ಮುಕ್ತಾಯ ಕಾಣಲಿದೆ ಎಂದು ಸಚಿವ ಈಶ್ವರಪ್ಪ ತಿಳಿಸಿದರು.

  • ಪಾಕಿಸ್ತಾನ ಜಿಂದಾಬಾದ್, ಅಲ್ಲಾಹು ಅಕ್ಬರ್ ಅಂದ್ರೆ ಕಾಂಗ್ರೆಸ್‍ಗೆ ಖುಷಿ ಆಗ್ತಿತ್ತಾ? : ಈಶ್ವರಪ್ಪ

    ಪಾಕಿಸ್ತಾನ ಜಿಂದಾಬಾದ್, ಅಲ್ಲಾಹು ಅಕ್ಬರ್ ಅಂದ್ರೆ ಕಾಂಗ್ರೆಸ್‍ಗೆ ಖುಷಿ ಆಗ್ತಿತ್ತಾ? : ಈಶ್ವರಪ್ಪ

    ಶಿವಮೊಗ್ಗ: ಪಾಕಿಸ್ತಾನ ಜಿಂದಾಬಾದ್, ಅಲ್ಲಹೋ ಅಕ್ಬರ್ ಎಂದು ಘೋಷಣೆ ಹಾಕಿದ್ದರೆ ಕಾಂಗ್ರೆಸ್‍ನವರಿಗೆ ಖುಷಿ ಆಗುತ್ತಿತ್ತಾ ಎಂದು ಸಚಿವ ಈಶ್ವರಪ್ಪ ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದ್ದಾರೆ.

    ಶಿವಮೊಗ್ಗದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಭದ್ರಾವತಿಯಲ್ಲಿ ಕಬ್ಬಡಿ ಪಂದ್ಯದ ವೇಳೆ ನಡೆದ ಘಟನೆಯಲ್ಲಿ ಜೈ ಶ್ರೀರಾಮ್, ಭಾರತ್ ಮಾತಾಕೀ ಜೈ ಎಂದು ಕೂಗಿದಕ್ಕೆ ಕಾಂಗ್ರೆಸ್ ಈ ರೀತಿ ಸಮಾವೇಶ ನಡೆಸುತ್ತಿದ್ದು, ಸಮಾವೇಶದಲ್ಲಿ ರಾಜ್ಯದ ನಾಯಕರುಗಳು ಭಾಗವಹಿಸುತ್ತಿದ್ದಾರೆ ಎಂದು ಹೇಳಿದರು.

    ಕಾಂಗ್ರೆಸ್ ನಾಯಕರು ಪ್ರತಿಭಟನೆ, ಸಮಾವೇಶ ನಡೆಸುವ ಮೊದಲು ಭದ್ರಾವತಿಗೆ ಒಮ್ಮೆ ಹೋಗಿ ಬರಲಿ. ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳನ್ನು ಮಾತಾಡಿಸಿ ಘಟನೆ ಬಗ್ಗೆ ತಿಳಿದುಕೊಳ್ಳಲಿ ಎಂದರು.

    ಪಂದ್ಯಾವಳಿಯಲ್ಲಿ ಗೆದ್ದ ತಂಡವೊಂದು ಜೈ ಶ್ರೀರಾಮ್, ಭಾರತ್ ಮಾತಾಕೀ ಜೈ ಎಂದು ಕೂಗಿದ್ದಾರೆ. ಈ ಘೋಷಣೆ ಕೂಗಿದ್ದಕ್ಕೆ ಶಾಸಕ ಸಂಗಮೇಶ್ ಮತ್ತು ಅವರ ಪುತ್ರರಿಗೆ ಹಾಗೂ ಬೆಂಬಲಿಗರಿಗೆ ಏಕೆ ನೋವಾಯಿತೋ ಗೊತ್ತಿಲ್ಲ. ಹಾಗಾದರೆ ಪಾಕಿಸ್ತಾನ ಜಿಂದಾಬಾದ್, ಅಲ್ಲಾಹೋ ಅಕ್ಬರ್ ಎಂದು ಕೂಗಿದ್ದರೆ ಖುಷಿ ಆಗುತ್ತಿತ್ತಾ ಎಂದು ಸಚಿವ ಈಶ್ವರಪ್ಪ ಪ್ರಶ್ನಿಸಿದ್ದಾರೆ.

    ಭದ್ರಾವತಿ ಘಟನೆಯನ್ನು ಕಾಂಗ್ರೆಸ್ ಸ್ಪರ್ಧಾ ಮನೋಭಾವದಿಂದ ತೆಗೆದುಕೊಳ್ಳಬೇಕಿತ್ತು. ಅದನ್ನು ಬಿಟ್ಟು ಸಮಾವೇಶ ನಡೆಸುತ್ತಿರುವುದು ಸರಿ ಅಲ್ಲ. ಈ ಘಟನೆಯನ್ನು ರಾಜ್ಯದ ಜನ, ಜಿಲ್ಲೆಯ ಜನ, ಅದರಲ್ಲೂ ಭದ್ರಾವತಿ ಜನ ಗಮನಿಸುತ್ತಿದ್ದಾರೆ. ಕಾಂಗ್ರೆಸ್ ಇದನ್ನೇ ಮುಂದುವರೆಸಿಕೊಂಡು ಹೋದರೆ ಮುಂದಿನ ದಿನಗಳಲ್ಲಿ ಅಧೋಗತಿಗೆ ಇಳಿಯುವುದರಲ್ಲಿ ಅನುಮಾನವಿಲ್ಲ ಎಂದರು.