Tag: ಪಬ್ಲಿಕ್ ಟಿವಿ Ganesh

  • ಹುಟ್ಟುಹಬ್ಬದಂದು ‘ಸಖತ್’ ಲುಕ್‍ನಲ್ಲಿ ಮಿಂಚಿದ ಗಣೇಶ್

    ಹುಟ್ಟುಹಬ್ಬದಂದು ‘ಸಖತ್’ ಲುಕ್‍ನಲ್ಲಿ ಮಿಂಚಿದ ಗಣೇಶ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. 43ನೇ ವಸಂತಕ್ಕೆ ಕಾಲಿಟ್ಟಿರುವ ಗಣೇಶ್‍ರವರು ಕೊರೊನಾ ಹಿನ್ನೆಲೆ ಈ ಬಾರಿ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

    ಪ್ರತಿವರ್ಷ ಕುಟುಂಬದವರು, ಸ್ನೇಹಿತರು ಹಾಗೂ ಅಭಿಮಾನಿಗಳೊಟ್ಟಿಗೆ ಬಹಳ ಸಡಗರದಿಂದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳತ್ತಿದ್ದ ಗಣೇಶ್‍ರವರು ಇತ್ತೀಚೆಗಷ್ಟೇ ಸೋಶಿಯಲ್ ಮೀಡಿಯಾದಲ್ಲಿ ಈ ಬಾರಿ ತಮ್ಮ ಬರ್ತ್‍ಡೇ ವ್ಯರ್ಥ ಮಾಡುವ ಹಣವನ್ನು ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವಂತೆ ಅಭಿಮಾನಿಗಳಿಗೆ ಮನವಿ ಮಾಡಿದ್ದರು.

     

    View this post on Instagram

     

    A post shared by Ganesh (@goldenstar_ganesh)

    ಸದ್ಯ ಬರ್ತ್‍ಡೇ ಸೆಲೆಬ್ರೆಶನ್‍ಗೆ ಬ್ರೇಕ್ ಹಾಕಿರುವುದರ ಹಿನ್ನೆಲೆ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಗಣೇಶ್ ಫೋಟೋವನ್ನು ಹಂಚಿಕೊಳ್ಳುವುದರ ಮೂಲಕ ವಿಶ್ ಮಾಡುತ್ತಿದ್ದಾರೆ. ಜೊತೆಗೆ ಸೆಲೆಬ್ರೆಟಿಗಳು ಕೂಡ ಗಣೇಶ್‍ರವರ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸುತ್ತಿದ್ದಾರೆ.

    ಈ ವಿಶೇಷದಿನದಂದು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಬಹು ನಿರೀಕ್ಷಿತ ‘ಸಖತ್’ ಸಿನಿಮಾದ ಪೋಸ್ಟರ್ ಬಿಡುಗಡೆಗೊಳಿಸಲಾಗಿದೆ. ಪೋಸ್ಟರ್‌ನಲ್ಲಿ ಕೋರ್ಟ್ ಕಟಕಟ್ಟೆಯಲ್ಲಿ ಕನ್ನಡಕ ಹಾಕಿಕೊಂಡು ಅಂದನಂತೆ ಗೋಲ್ಡನ್ ಸ್ಟಾರ್ ಕಾಣಿಸಿಕೊಂಡಿದ್ದಾರೆ.

    ಈ ಸಿನಿಮಾಕ್ಕೆ ನಿರ್ದೇಶಕ ಸಿಂಪಲ್ ಸುನಿ ಆ್ಯಕ್ಷನ್ ಕಟ್ ಹೇಳಿದ್ದು, ಈಗಾಗಲೇ ಚಿತ್ರದ ಚಿತ್ರೀಕರಣ ಕಂಪ್ಲೀಟ್ ಆಗಿದೆ. ಅಲ್ಲದೇ ಸಿನಿಮಾ ರೈತರು ಕಾದ ಮಳೆ.. ಹೊನ್ನಿನ ನಕ್ಷತ್ರದ ಬೆಳೆ.. ಚೆಲುವಿನ ಹೂ ನ ಪಕಳೆ.. ಕರ್ನಾಟಕದ ಮಾತಿನ ಕಹಳೆ. ಗಣೇಶ್‍ರವರಿಗೆ ಹುಟ್ಟುಹಬ್ಬದ ಶುಭಾಶಯಗಳು ಸಖತ್ತಾಗಿರಲಿ ನಿಮ್ಮ ಜೀವನ ಎಂದು ಸಿಂಪಲ್ ಸುನಿ ಟ್ವಿಟ್ಟರ್‌ನಲ್ಲಿ ವಿಶ್ ಮಾಡಿದ್ದಾರೆ. ಇದನ್ನೂ ಓದಿ: ನೋವುಗಳ ನಡುವೆ ಸಂಭ್ರಮಕ್ಕಿದು ಸರಿಹೊಂದುವ ಸಮಯವಲ್ಲ – ಗಣೇಶ್ ಪತ್ರ

  • ನೋವುಗಳ ನಡುವೆ ಸಂಭ್ರಮಕ್ಕಿದು ಸರಿಹೊಂದುವ ಸಮಯವಲ್ಲ – ಗಣೇಶ್ ಪತ್ರ

    ನೋವುಗಳ ನಡುವೆ ಸಂಭ್ರಮಕ್ಕಿದು ಸರಿಹೊಂದುವ ಸಮಯವಲ್ಲ – ಗಣೇಶ್ ಪತ್ರ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಈ ಬಾರಿ ತಮ್ಮ ಹುಟ್ಟು ಹಬ್ಬದ ಸಂಭ್ರಮಾಚರಣೆಗೆ ಬ್ರೇಕ್ ಹಾಕಿದ್ದಾರೆ.

    ಜುಲೈ 2 ರಂದು ಗೋಲ್ಡನ್ ಸ್ಟಾರ್ ಗಣೇಶ್‍ರವರವ ಹುಟ್ಟುಹಬ್ಬವಿದ್ದು, ಪ್ರತಿವರ್ಷ ಅಭಿಮಾನಿಗಳೊಟ್ಟಿಗೆ ಬಹಳ ಅದ್ದೂರಿಯಾಗಿ ಹುಟ್ಟುಹಬ್ಬವನ್ನು ಸೆಲೆಬ್ರೆಟ್ ಮಾಡುತ್ತಿದ್ದರು. ಆದರೆ ಈ ಬಾರಿ ಕೊರೊನಾದಿಂದಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದೇ ಇರಲು ನಿರ್ಧರಿಸಿದ್ದಾರೆ. ಈ ಕುರಿತಂತೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಗಣೇಶ್‍ರವರು ತಮ್ಮ ಬರ್ತ್‍ಡೇಗಾಗಿ ವ್ಯರ್ಥ ಮಾಡುವ ಹಣವನ್ನು ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

    ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ‘ಎಲ್ಲರಿಗೂ ನಿಮ್ಮ ಗಣೇಶ್ ಮಾಡುವ ನಮಸ್ಕಾರಗಳು. ಮೊದಲಿಗೆ ನನಗೆ ಅರಿವಿದ್ದೊ, ಅರಿವಿಲ್ಲದೆಯೋ ಈ ಕೋವಿಡ್ ಸಮಯದಲ್ಲಿ ನನ್ನ ಹೆಸರಿನಲ್ಲಿ ಮಾಡಿರುವ ಕೆಲಸಗಳಿಗೆ ನಿಮಗೆ ಪ್ರಣಾಮಗಳು. ಈ ಮೂಲಕ ನಿಮ್ಮಲ್ಲಿ ಕೇಳಿಕೊಳ್ಳುವುದೇನೆಂಧರೆ ಪ್ರತಿ ವರ್ಷವೂ ನನ್ನ ಜನ್ಮದಿನವನ್ನು ಹಬ್ಬದಂತೆ ಆಚರಿಸಿ ಆಶೀರ್ವದಿಸುತ್ತಾ ಬಂದಿರುವಿರಿ. ಆದರೆ ಈ ವರ್ಷ ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಸಿಕ್ಕು ನನ್ನ ಹಲವು ಸಿನಿಮಾ ಸಹೋದ್ಯೋಗಿಗಳು, ಆತ್ಮೀಯರು, ಗೆಳೆಯರು ಬಲಿಯಾದದ್ದು, ನೋವು ತರಿಸಿದೆ. ಅದೆಷ್ಟೋ ಜನರ ಜೀವಗಳು ನಲುಗಿ ಹೋಗಿವೆ. ಇಷ್ಟೆಲ್ಲ ನೋವುಗಳ ನಡುವೆ ಸಂಭ್ರಮಕ್ಕಿದು ಸರಿಹೊಂದುವ ಸಮಯವಲ್ಲವೆಂದಿನಿಸಿ ಈ ವರ್ಷದ ಜನ್ಮದಿನವನ್ನು ಆಚರಿಸಿಕೊಳ್ಳದಿರಲು ಇಚ್ಛಿಸಿರುತ್ತೇನೆ.

    ಪ್ರತಿ ವರ್ಷವೂ ಪ್ರೀತಿಯಿಂದ ಹುಟ್ಟುಹಬ್ಬದ ಆಚರಣೆಗೆ ನೀವುಗಳು ಪ್ರೀತಿಯಿಂದ ತರುವ ಕೇಕ್, ಹಾರ, ಉಡುಗೊರೆ ಮುಂತಾದವುಗಳಿಗಾಗಿ ಈ ವರ್ಷ ಹಣ ವ್ಯಯಿಸದೆ ಅದೇ ಖರ್ಚಿನ ಮೊತ್ತವನ್ನು ಕೊರೊನಾ ಸಂಕಷ್ಟದಲ್ಲಿರುವ ಮತ್ತಷ್ಟು ಜೀವಗಳಿಗೆ ಸಹಾಯ ಮಾಡಿ ಎಂದು ಕೆಳಿಕೊಳ್ಳುತ್ತೇನೆ. ಅದೇ ನನಗೆ ಶ್ರೀರಕ್ಷೆ ಎಂದು ಪೋಸ್ಟ್‌ವೊಂದನ್ನು ಹಾಕಿಕೊಂಡಿದ್ದಾರೆ.

    ಸದ್ಯ ಗಣೇಶ್‍ರವರು ಗಾಳಿಪಟ-2 ಸಿನಿಮಾದಲ್ಲಿ ಬ್ಯೂಸಿಯಾಗಿದ್ದು, ಈ ಚಿತ್ರಕ್ಕೆ ನಿರ್ದೇಶಕ ಯೋಗರಾಜ್ ಭಟ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇನ್ನೂ ಈ ಚಿತ್ರದಲ್ಲಿ ದಿಗಂತ್, ನಿರ್ದೇಶಕ ಪವನ್ ಕುಮಾರ್, ವೈಭವಿ ಶಾಂಡಿಲ್ಯ, ಸಂಯುಕ್ತಾ ಮೆನನ್ ಮತ್ತು ಶರ್ಮೀಲಾ ಮಾಂಡ್ರೆ ಅಭಿನಯಿಸುತ್ತಿದ್ದಾರೆ.

     

    View this post on Instagram

     

    A post shared by Ganesh (@goldenstar_ganesh)