ಬೆಂಗಳೂರು: ಸ್ಯಾಂಡಲ್‍ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಕೆಜಿಎಫ್-2 ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಸಿನಿಮಾದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ನಟಿ ಮಾಳವಿಕ ಅವಿನಾಶ್ ಚಿತ್ರಕ್ಕೆ ವಾಯ್ಸ್ ಡಬ್ಬಿಂಗ್ ನೀಡುವ ಕೆಲಸದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ.

ಕೊರೊನಾ ಎರಡನೇ ಅಲೆಯಿಂದಾಗಿ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಬಾಕಿ ಇತ್ತು. ಇದೀಗ 50 ದಿನಗಳು ಕಳೆದ ಬಳಿಕ ಕೆಜಿಎಫ್ ಸಿನಿಮಾದಲ್ಲಿ ಸುದ್ದಿ ಮಾಧ್ಯಮವೊಂದರ ಮುಖ್ಯ ಸಂಪಾದಕಿ ದೀಪಾ ಹೆಗ್ಡೆ ಪಾತ್ರದಲ್ಲಿ ಅಭಿನಯಿಸಿದ್ದ ನಟಿ ಮಾಳವಿಕ ಅವಿನಾಶ್ ತಮ್ಮ ಪಾತ್ರಕ್ಕೆ ವಾಯ್ಸ್ ಡಬ್ಬಿಂಗ್ ನೀಡುತ್ತಿರುವ ಕೆಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಫೋಟೊಗಳು ವೈರಲ್ ಆಗುತ್ತಿದೆ.

ಬೆಂಗಳೂರಿನ ಡಬ್ಬಿಂಗ್ ಸ್ಟುಡಿಯೋನಲ್ಲಿ ಮಾಳವಿಕರವರು ವಾಯ್ಸ್ ಡಬ್ಬಿಂಗ್ ನೀಡುತ್ತಿರುವ ಕೆಲವು ಫೋಟೋಗಳನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದು, ಜೀವನವು ಸಾಮಾನ್ಯ ಸ್ಥಿತಿಗೆ ಬರದೇ ಇರಬಹುದು. ಆದರೆ ಅದರ ಕೆಲವು ಹೋಲಿಕೆ, 50 ದಿನಗಳ ನಂತರ ಕೆಲಸ.. ಎಂದು ಮಾಳವಿಕ ಅವಿನಾಶ್ ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.

ನಿರ್ದೇಶಕ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟ ಸಂಜಯ್ ದತ್, ಶ್ರೀನಿಧಿ, ರವೀನಾ ಟಂಡನ್, ಪ್ರಕಾಶ್ ರಾಜ್, ಮಾಳವಿಕ ಅವಿನಾಶ್ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ. ಇದನ್ನೂ ಓದಿ: ಸಂಚಾರಿ ವಿಜಯ್ ಹೆಸರಲ್ಲಿ ಗಿಣಿ ದತ್ತು ಪಡೆದ ಬಿಗ್‍ಬಾಸ್ ಸ್ಪರ್ಧಿ ಚಂದ್ರಚೂಡ್
View this post on Instagram
