Tag: ಪಬ್ಲಿಕ್ ಟಿವಿ MLA R. Narendra

  • ಆಕ್ಸಿಜನ್ ಕೊರತೆಯಿಂದ ಯಾರೂ ಸತ್ತಿಲ್ಲವೆಂದು ಕೇಂದ್ರ ಸರ್ಕಾರ ಸುಳ್ಳು ಹೇಳಿದೆ: ಶಾಸಕ ನರೇಂದ್ರ

    ಆಕ್ಸಿಜನ್ ಕೊರತೆಯಿಂದ ಯಾರೂ ಸತ್ತಿಲ್ಲವೆಂದು ಕೇಂದ್ರ ಸರ್ಕಾರ ಸುಳ್ಳು ಹೇಳಿದೆ: ಶಾಸಕ ನರೇಂದ್ರ

    ಚಾಮರಾಜನಗರ: ಆಕ್ಸಿಜನ್ ಕೊರತೆಯಿಂದ ಯಾರೂ ಮೃತಪಟ್ಟಿಲ್ಲ ಎಂದು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಹಸಿ ಸುಳ್ಳು ಹೇಳಿದೆ ಎಂದು ಚಾಮರಾಜನಗರ ಜಿಲ್ಲೆ ಹನೂರು ಶಾಸಕ ಆರ್.ನರೇಂದ್ರ ವಾಗ್ದಾಳಿ ನಡೆಸಿದ್ದಾರೆ.

    ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಾಮರಾಜನಗರದಲ್ಲಿ 36 ಮಂದಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದಾರೆ. ಹೈಕೋರ್ಟ್ ನೇಮಿಸಿದ್ದ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿಯೇ ತನಿಖೆ ನಡೆಸಿ ಆಕ್ಸಿಜನ್ ಕೊರತೆಯಿಂದ 36 ಜನ ಮೃತಪಟ್ಟಿರುವ ಬಗ್ಗೆ ವರದಿ ನೀಡಿದೆ. ಅಲ್ಲದೆ ಹೈಕೋರ್ಟ್ ಸೂಚನೆ ಮೇರೆಗೆ 24 ಮಂದಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡಿದೆ. ಹೀಗಿದ್ದರೂ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಸುಳ್ಳು ಉತ್ತರ ನೀಡಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯಲ್ಲಿ ವಿಪ್ಲವ, ಬಿಎಸ್‍ವೈ ನಿರ್ಗಮನ- ರಾಜೀನಾಮೆ ಜಪಿಸಿದ ಯಡಿಯೂರಪ್ಪ

    ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ಕನಿಷ್ಟ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಜೊತೆಗೆ ಮನೆಯ ಆಧಾರ ಸ್ಥಂಭವಾಗಿದ್ದವರನ್ನು ಕಳೆದುಕೊಂಡು ಎಷ್ಟೋ ಕುಟುಂಬಗಳು ತೀವ್ರ ಕಷ್ಟಕ್ಕೆ ಸಿಲುಕಿವೆ. ಸರ್ಕಾರ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಮೃತರ ಕುಟುಂಬಗಳಿಗೆ ಧೈರ್ಯ ತುಂಬಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ:ಮಠಾಧೀಶರ ಲಾಬಿಯಿಂದ ಯಡಿಯೂರಪ್ಪ ಬೆಳೆದಿಲ್ಲ: ಬಿ.ವೈ ರಾಘವೇಂದ್ರ