Tag: ಪಬ್ಲಿಕ್ ಟಿವಿ Mysore

  • ಜಗ್ಗೇಶ್, ದರ್ಶನ್ ಇಬ್ಬರನ್ನೂ ಕೂರಿಸಿ ಮಾತನಾಡುತ್ತೇನೆ – ಸಂದೇಶ್ ನಾಗರಾಜ್

    ಜಗ್ಗೇಶ್, ದರ್ಶನ್ ಇಬ್ಬರನ್ನೂ ಕೂರಿಸಿ ಮಾತನಾಡುತ್ತೇನೆ – ಸಂದೇಶ್ ನಾಗರಾಜ್

    ಮೈಸೂರು: ನಟರಾದ ಜಗ್ಗೇಶ್ ಮತ್ತು ದರ್ಶನ್ ಇಬ್ಬರನ್ನು ಇಬ್ಬರನ್ನು ಮುಂದೆ ಕೂರಿಸಿ ಮಾತನಾಡುತ್ತೇನೆ ಎಂದು ನಿರ್ಮಾಪಕ ಸಂದೇಶ್ ನಾಗರಾಜ್ ಹೇಳಿದ್ದಾರೆ.

    ಸ್ಯಾಂಡಲ್‍ವುಡ್ ನಟ ನವರಸ ನಾಯಕ ಜಗ್ಗೇಶ್ ಹಾಗೂ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ನಡುವಿನ ತಿಕ್ಕಾಟದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ದರ್ಶನ್ ಹಾಗೂ ಜಗ್ಗೇಶ್ ಅಣ್ಣ ತಮ್ಮಂದಿರಂತೆ ಇರಬೇಕು. ಜಗ್ಗೇಶ್ ಅವರಲ್ಲಿ ನಾನು ವಿನಂತಿ ಮಾಡುತ್ತಿದ್ದೇನೆ. ಇದನ್ನು ಇಲ್ಲಿಗೆ ನಿಲ್ಲಿಸಿ ಬಿಡಿ. ಒಳ್ಳೆಯ ರೀತಿಯಲ್ಲಿ ಇಬ್ಬರನ್ನು ಮುಂದೆ ಕೂರಿಸಿ ಮಾತನಾಡುತ್ತೇನೆ ಎಂದರು.

    ಆರ್‍ಎಸ್‍ಎಸ್ ಒಂದು ದೊಡ್ಡ ಸಂಸ್ಥೆ. ಅದನ್ನು ಚಿತ್ರೀಕರಣದ ಮಧ್ಯೆ ತರಬಾರದು. ಜಗ್ಗೇಶ್ ದರ್ಶನ್ ಬಗ್ಗೆ ಈ ರೀತಿ ಮಾತನಾಡಬಾರದು. ಜಗ್ಗೇಶ್ ಒಮ್ಮೊಮ್ಮೆ ಒಂದೊಂದು ತರಹ ಹೇಳಿಕೆ ನೀಡುವುದು ತಪ್ಪು. ದರ್ಶನ್ ಇನ್ನೂ ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ದರ್ಶನ್‍ಗೆ ಈ ವಿಚಾರವೇ ಗೊತ್ತಿಲ್ಲ ಎಂದು ಹೇಳಿದರು.

    ಸಿನಿಮಾಕ್ಕೆ ಯಾವುದೇ ಜಾತಿ ತರಬಾರದು. ನಾನು ಕೂಡ ಒಬ್ಬ ಸೀನಿಯರ್ ಆಗಿದ್ದೇನೆ. ಎಲ್ಲರೂ ಒಂದು ಜಾತಿಗೆ ಸಿನಿಮಾ ತೆಗೆಯುವುದಿಲ್ಲ. ಸಿನಿಮಾಗೆ ಯಾವುದೇ ಜಾತಿ ಇರುವುದಿಲ್ಲ ಎಂದರು.

  • ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ – ಭಕ್ತಾದಿಗಳಿಂದ ಹರಿದು ಬಂತು ಕೋಟ್ಯಂತರ ರೂ.

    ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ – ಭಕ್ತಾದಿಗಳಿಂದ ಹರಿದು ಬಂತು ಕೋಟ್ಯಂತರ ರೂ.

    ಮೈಸೂರು: ಕೋವಿಡ್-19 ಮಹಾಮಾರಿ ಎಲ್ಲಾ ಉದ್ಯಮಗಳ ಮೇಲೂ ಬಾರಿ ಹೊಡೆತ ಬೀರಿದೆ. ಇದರಿಂದ ಜನರಂತೂ ತತ್ತರಿಸಿ ಹೋಗಿದ್ದಾರೆ. ಹೀಗಿದ್ದರೂ ಕೊರೊನಾ ಸಾಂಕ್ರಮಿಕ ರೋಗದ ನಡುವೆಯೂ ರಾಜ್ಯದ ದೇವಾಲಯಗಳ ಹುಂಡಿಗೆ ಭಕ್ತರಿಂದ ಅಪಾರವಾದ ಹಣ ಸಂಗ್ರಹವಾಗಿದೆ.

    ಇತ್ತೀಚೆಗಷ್ಟೇ ಮಲೆಮಹದೇಶ್ವರ ಬೆಟ್ಟದ ದೇವಾಲಯ ಹುಂಡಿ ಹಣ ಏಣಿಕೆ ಮಾಡಲಾಯಿತು. ಮಹದೇಶ್ವರನಿಗೆ ಭಕ್ತರಿಂದ ಕ್ಯೋಟ್ಯಂತರ ರೂಪಾಯಿ ಹಣ ಹರಿದುಬಂದಿದೆ. ಇದೀಗ ಮೈಸೂರಿನಲ್ಲಿರುವ ನಂಜನಗೂಡಿನ ನಂಜುಂಡೇಶ್ವರ ದೇವಾಲಯದ ಹುಂಡಿ ಹಣ ಎಣಿಕೆ ಮಾಡಲಾಯಿತು. ಈ ವೇಳೆ ನಂಜುಂಡೇಶ್ವರ ಸನ್ನಿಧಾನಕ್ಕೂ ಒಂದು ಕೋಟಿಗೂ ಅಧಿಕ ಹಣ ಹುಂಡಿಯಲ್ಲಿ ಸಂಗ್ರಹವಾಗಿದೆ.

    ಹೌದು, ಈ ಬಾರಿ ನಂಜುಂಡೇಶ್ವರ ದೇವಾಲಯಕ್ಕೆ ಭಕ್ತಾದಿಗಳು ಕಾಣಿಕೆ ರೂಪದಲ್ಲಿ ಕೋಟ್ಯಂತರ ರೂಪಾಯಿ ಸಲ್ಲಿಸಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ 1,01,71,910 ರೂ. ಸಂಗ್ರಹವಾಗಿದೆ. ಏಣಿಕೆ ವೇಳೆ 7500 ರೂ ಮೌಲ್ಯದ ನಿಷೇಧಿತ ನೋಟುಗಳು ಪತ್ತೆಯಾಗಿದ್ದು, 1000 ಮೌಲ್ಯದ 2 ನೋಟುಗಳು ಹಾಗೂ 500 ಮೌಲ್ಯದ 11 ನಿಷೇಧಿತ ನೋಟುಗಳು ಸಂಗ್ರಹವಾಗಿದೆ. ಅಲ್ಲದೆ 2 ವಿದೇಶಿ ಕರೆನ್ಸಿಗಳು ಕಾಣಿಕೆ ರೂಪದಲ್ಲಿ ಬಂದಿದೆ.

    ಇಲ್ಲಿಯವರೆಗೂ 20ಕ್ಕೂ ಹೆಚ್ಚು ಹುಂಡಿಗಳ ಹಣವನ್ನು 50ಕ್ಕೂ ಹೆಚ್ಚು ಸಿಬ್ಬಂದಿ ಎಣಿಕೆ ಮಾಡಿದ್ದಾರೆ. ಜೊತೆಗೆ ಹುಂಡಿಯಲ್ಲಿ 70 ಗ್ರಾಂ ಚಿನ್ನ ಹಾಗೂ 3.5 ಕೆಜಿ ಬೆಳ್ಳಿ ಕೂಡ ಸಂಗ್ರಹವಾಗಿದೆ. ಲಾಕ್‍ಡೌನ್ ಮುಗಿಯುತ್ತಿದ್ದಂತೆ ನಂಜುಂಡೇಶ್ವರ ಸ್ವಾಮಿಗೆ ಭಕ್ತರು ಉದಾರವಾಗಿ ಕಾಣಿಕೆ ಸಲ್ಲಿಸಿದ್ದಾರೆ.

  • ವಲಸಿಗ ಸಚಿವರಿಂದ ಸಚಿವ ಸ್ಥಾನ ಕಿತ್ತುಕೊಳ್ತಾರೆ: ಎಂ. ಲಕ್ಷ್ಮಣ್

    ವಲಸಿಗ ಸಚಿವರಿಂದ ಸಚಿವ ಸ್ಥಾನ ಕಿತ್ತುಕೊಳ್ತಾರೆ: ಎಂ. ಲಕ್ಷ್ಮಣ್

    ಮೈಸೂರು: ಬಿಜೆಪಿಯವರು ವಲಸಿಗ ಸಚಿವರಿಂದ ಸಚಿವ ಸ್ಥಾನ ಕಿತ್ತುಕೊಳ್ಳುತ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮೈಸೂರಿನಲ್ಲಿ ಹೇಳಿದ್ದಾರೆ.

    ಇನ್ನು 6 ತಿಂಗಳಲ್ಲಿ ಸಚಿವ ಸುಧಾಕರ್, ನಾರಾಯಣ್ ಗೌಡ, ಬಿ ಗೋಪಾಲಯ್ಯ, ಆರ್ ಶಂಕರ್ ಬಿ.ಸಿ ಪಾಟೀಲ್ ಸೇರಿ ಹಲವರಿಂದ ಸಚಿವ ಸ್ಥಾನ ಕಿತ್ತುಕೊಳ್ಳುತ್ತಾರೆ. ಅವರಿಗೆ ಈಗ ವಲಸಿಗರ ಅವಶ್ಯಕತೆ ಇಲ್ಲ ಸರ್ಕಾರ ಗಟ್ಟಿಯಾಗಿದೆ. ಇದು ವಲಸೆ ಹೋದವರ ಗತಿ ಎಂದರು.

    ಸಿದ್ದರಾಮಯ್ಯ ಅವರನ್ನು ಸಮಾಜದಿಂದ ಬಹಿಷ್ಕರಿಸುತ್ತೇವೆ ಎಂಬ ಎಂಎಲ್‍ಸಿ ಎಚ್ ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಹಿಷ್ಕಾರ ಎಂಬುದು ಅಸಂವಿಧಾನಿಕ ಪದ. ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಕುಂದು ತರಲು ಆರ್ ಎಸ್ ಎಸ್ ಹಾಗೂ ಎಚ್ ವಿಶ್ವನಾಥ್ ಅವರಿಂದ ಪ್ರಯತ್ನ ನಡೆಯುತ್ತಿದೆ. ಸಿದ್ದರಾಮಯ್ಯ ಅವರು ಒಂದು ಜಾತಿ ವರ್ಗಕ್ಕೆ ಸೇರಿದವರಲ್ಲ. ವಿಶ್ವನಾಥ್ ಬಹಿಷ್ಕಾರ ಪದ ಹೇಗೆ ಬಳಸಿದರು. ಅವರಿಗೆ ಈ ಬಗ್ಗೆ ನಾಚಿಕೆಯಾಗಬೇಕು ಎಂದು ಹೇಳಿದರು.

    ಇದು ಅಕ್ಷಮ್ಯ ಅಪರಾಧ ಇದಕ್ಕೆ ನಮ್ಮ ವಿರೋಧವಿದೆ. ನೀವು ಒಬ್ಬ ಲಾಯರ್ ಆಗಿದ್ದೀರಾ ನಿಮಗೂ ಅದು ಗೊತ್ತಿದೆ ಆ ಹೇಳಿಕೆಯನ್ನು ವಿಶ್ವನಾಥ್ ವಾಪಸ್ಸು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

  • ಪಕ್ಷ ಸಂಘಟನೆಯಿಂದ ಜಿಟಿಡಿ ದೂರ – ಕ್ಷೇತ್ರದಲ್ಲಿ ಫುಲ್ ಬ್ಯುಸಿ

    ಪಕ್ಷ ಸಂಘಟನೆಯಿಂದ ಜಿಟಿಡಿ ದೂರ – ಕ್ಷೇತ್ರದಲ್ಲಿ ಫುಲ್ ಬ್ಯುಸಿ

    ಮೈಸೂರು: ಜೆಡಿಎಸ್ ಪಕ್ಷದಿಂದ ದಿನ ದಿನಕ್ಕೂ ದೂರವಾಗುತ್ತಿರುವ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ, ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮಾತ್ರ ದಿನ ದಿನಕ್ಕೂ ಹೆಚ್ಚು ಹತ್ತಿರವಾಗುತ್ತಿದ್ದಾರೆ.

    ಮೈಸೂರಿನಲ್ಲಿ ನಿತ್ಯ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಸರಣಿ ಸಭೆ ನಡೆಸುತ್ತಿರುವ ಜಿ.ಟಿ.ದೇವೇಗೌಡ, ಇಂದು ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಕುರಿತು ಸಭೆ ನಡೆಸಿದರು. ಮೈಸೂರು ಮಹಾನಗರ ಪಾಲಿಕೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಮೈಸೂರಿನ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಲಿಂಗಾಬುದಿ ಕೆರೆ, ವಿಜಯನಗರ ಒಳಚರಂಡಿ ಕಾಮಗಾರಿಗಳ ಬಗ್ಗೆ ಚರ್ಚಿಸಿದರು.

    ತೋರಿಕೆ ಮಾಡುವವರಿಗೆ ಪಕ್ಷ ಸಂಘಟನೆಯ ಜವಾಬ್ದಾರಿ ಯಾಕೆ ಎಂದಿದ್ದ ಮಾಜಿ ಸಿಎಂ ಕುಮಾರಸ್ವಾಮಿಗೆ ಟಾಂಗ್ ನೀಡುವ ರೀತಿ ಕ್ಷೇತ್ರದ ಅಭಿವೃದ್ಧಿಗಾಗಿಯೇ ಜಿಟಿಡಿ ಸಮಯ ಮೀಸಲಿಟ್ಟಂತೆ ಕಾಣುತ್ತಿದೆ. ಪಕ್ಷದಲ್ಲಿ ಶಕ್ತಿ ಕುಂದಿದರೂ ಕ್ಷೇತ್ರದಲ್ಲಿ ಶಕ್ತಿ ಕಾಪಾಡಿಕೊಳ್ಳಲು ಜಿಟಿಡಿ ಪ್ರಯತ್ನಿಸುತ್ತಿರುವುದು ಸ್ಪಷ್ಟವಾಗಿದೆ.

  • ಸಿದ್ದರಾಮಯ್ಯ ಜ್ಯೋತಿಷ್ಯ ಕಲಿಯುತ್ತಿರಬೇಕು : ಎಸ್.ಟಿ. ಸೋಮಶೇಖರ್ ವ್ಯಂಗ್ಯ

    ಸಿದ್ದರಾಮಯ್ಯ ಜ್ಯೋತಿಷ್ಯ ಕಲಿಯುತ್ತಿರಬೇಕು : ಎಸ್.ಟಿ. ಸೋಮಶೇಖರ್ ವ್ಯಂಗ್ಯ

    – ಮಾಡೋ ಕೆಲಸ ಮಾಡಲಿ, ಸಿದ್ದರಾಮಯ್ಯನವರ ಸರ್ಟಿಫಿಕೇಟ್ ಬೇಡ

    ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಯಾವಾಗ ಜ್ಯೋತಿಷ್ಯ ಹೇಳುವುದಕ್ಕೆ ಶುರು ಮಾಡಿದರೋ ಗೊತ್ತಿಲ್ಲ. ವಿರೋಧ ಪಕ್ಷದ ನಾಯಕರಾಗಿರುವ ಕಾರಣ ಕೆಲಸ ಇಲ್ಲದೆ ಜ್ಯೋತಿಷ್ಯ ಕಲಿಯುತ್ತಿರಬೇಕು. ಅದಕ್ಕೆ ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಆಗಾಗಾ ಜ್ಯೋತಿಷ್ಯ ಹೇಳುತ್ತಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ವ್ಯಂಗ್ಯವಾಡಿದ್ದಾರೆ.

    ಸರ್ಟಿಫಿಕೇಟ್ ಬೇಡ: ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಈಗ ಪುರುಸೊತ್ತು ಇರಬೇಕು. ವಿರೋಧ ಪಕ್ಷದ ನಾಯಕರಾಗಿ ಮಾಡಬೇಕಾದ ಕೆಲಸವನ್ನು ಮಾಡುವುದು ಬಿಟ್ಟು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಮೊದಲಿಗೆ ಅವರ ಪಕ್ಷದಲ್ಲಾಗುತ್ತಿರುವುದನ್ನು ನೋಡಿಕೊಳ್ಳಲಿ. ನಮ್ಮ ಪಕ್ಷದ ಉಸಾಬರಿ ಏಕೆ? ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ನಮಗೆ ಕೇಂದ್ರ ಗೃಹ ಸಚಿವರ ಸರ್ಟಿಫಿಕೇಟ್ ಸಾಕು ಸಿದ್ದರಾಮಯ್ಯ ಅವರ ಸರ್ಟಿಫಿಕೇಟ್ ಬೇಡ ಎಂದರು.

    ಅವರು ಪದೇ ಪದೇ ಇಲ್ಲ ಸಲ್ಲದ ಹೇಳಿಕೆ ನೀಡುವುದು ಸರಿಯಲ್ಲ. ತಮ್ಮ ಪಕ್ಷದಲ್ಲಿನ ಗೊಂದಲಗಳನ್ನು ಬಗೆಹರಿಸಿಕೊಳ್ಳಲಿ. ಪ್ರಚಾರಕ್ಕಾಗಿ ಅವರು ಇಂತಹ ಹೇಳಿಕೆ ನೀಡುತ್ತಿದ್ದಾರೆ ಅಷ್ಟೇ. ಮುಖ್ಯಮಂತ್ರಿಗಳು ಕೋವಿಡ್ ಹಾಗೂ ಉಳಿದ ಪರಿಸ್ಥಿತಿಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರೇ ಹೇಳಿದ್ದಾರೆ. ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರು ಇನ್ನು ಎರಡೂವರೆ ವರ್ಷ ಆಡಳಿತ ನಡೆಸುತ್ತಾರೆ. ಉತ್ತಮ ಮತ್ತು ದಕ್ಷ ಆಡಳಿತ ನೀಡುತ್ತಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ನಮಗೆ ಶಾ ಅವರ ಸರ್ಟಿಫಿಕೇಟ್ ಸಾಕು. ಸಿದ್ದರಾಮಯ್ಯ ಅವರ ಸರ್ಟಿಫಿಕೇಟ್ ಬೇಡ. ಅದನ್ನು ಅವರೇ ಇಟ್ಟುಕೊಳ್ಳಲಿ ಎಂದು ತಿರುಗೇಟು ನೀಡಿದರು.

    ರಾಜ್ಯದಲ್ಲಿ ದೊಡ್ಡ ಸುದ್ದಿಯಲ್ಲಿರುವ ಸಿಡಿ ವಿಚಾರದ ಬಗ್ಗೆ ಸಚಿವರು ಪ್ರತಿಕ್ರಿಯಿಸಿದ ಅವರು, ನನಗೆ ಯಾವುದೇ ಸಿಡಿ ಬಗ್ಗೆ ಮಾಹಿತಿ ಇಲ್ಲ. ನನಗೆ ಗೊತ್ತಿರುವುದು ಬೆಂಗಳೂರು ಅಭಿವೃದ್ಧಿಯ ಸಿಡಿ. ಮುಖ್ಯಮಂತ್ರಿಗಳು ಈಗಾಗಲೇ 2 ಸಭೆ ನಡೆಸಿ ಬೆಂಗಳೂರಿನ ಅಭಿವೃದ್ಧಿ ಬಗ್ಗೆ ಚರ್ಚಿಸಿದ್ದಾರೆ. ಅದಕ್ಕೊಂದು ರೂಪುರೇಷೆ ನೀಡಿ ಸಂಬಂಧಿಸಿದ ಸಿಡಿಯನ್ನು ನಮಗೆ ಕಳುಹಿಸುವುದಾಗಿ ಹೇಳಿದ್ದಾರೆ. ಅದು ಬಿಟ್ಟು ಬೇರೆ ಮಾಹಿತಿ ನನಗೆ ಇಲ್ಲ. ಅದನ್ನು ಹೇಳಿದವರಿಗೇ ಕೇಳಬೇಕು ಎಂದು ಪ್ರತಿಕ್ರಿಯಿಸಿದರು.

    ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ “ಡಬಲ್ ಇಂಜಿನ್” ಅಭಿವೃದ್ಧಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಚಿವರು, ರಾಜ್ಯದಲ್ಲಿಯೂ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಸಿಕ್ಕಿದ್ದಲ್ಲದೆ, ವೇಗ ಪಡೆದುಕೊಂಡಿದೆ. ಕೋವಿಡ್ ಹಿನ್ನೆಲೆಯಲ್ಲಿ 8-9 ತಿಂಗಳು ಎಲ್ಲ ಕಡೆಯೂ ಅಭಿವೃದ್ಧಿ ಕುಂಠಿತಗೊಂಡಿತ್ತು. ಆದರೆ ಈಗ ಎಲ್ಲವೂ ಪ್ರಾರಂಭವಾಗಿದೆ. ಒಂದೊಂದು ಕ್ಷೇತ್ರಕ್ಕೆ ಲೋಕೋಪಯೋಗಿಯಿಂದ ಸುಮಾರು 25 ಕೋಟಿ ರೂಪಾಯಿಯಂತೆ ಅನುದಾನ ಬಿಡುಗಡೆ ಮಾಡಲಾಗಿದೆ. ಹೀಗೆ ಒಂದೊಂದಾಗಿ ಚಾಲನೆ ನೀಡಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.