Tag: ಪಬ್ಲಿಕ್ ಟಿವಿ. mysuru

  • ರಥ ಸಪ್ತಮಿ – ಕೋಟೆ ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿದ ಯದುವೀರ್

    ರಥ ಸಪ್ತಮಿ – ಕೋಟೆ ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿದ ಯದುವೀರ್

    ಮೈಸೂರು: ಇಂದು ರಥ ಸಪ್ತಮಿ ಹಿನ್ನೆಲೆಯಲ್ಲಿ ಮೈಸೂರು ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಉತ್ಸವ ಮೂರ್ತಿಗೆ ರಾಜವಂಶಸ್ಥ ಯದುವೀರ್ ವಿಶೇಷ ಪೂಜೆ ಸಲ್ಲಿಸಿದರು.

    ಕೋಟೆ ಆಂಜನೇಯ ದೇವಾಲಯ ಮುಂಭಾಗ ಮೈಸೂರು ಯೋಗ ಒಕ್ಕೂಟ ಪ್ರತಿ ವರ್ಷದಂತೆ ಈ ವರ್ಷವೂ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಆಯೋಜಿಸಿತ್ತು. ಇದರಲ್ಲಿ ನೂರಾರು ಯೋಗ ಪಟುಗಳು ಭಾಗವಹಿಸಿ 108 ಸೂರ್ಯ ವಂದನೆ ಮಾಡಿದರು.

    ಈ ಸಂದರ್ಭದಲ್ಲಿ ಭಗವಾನ್ ಸೂರ್ಯ ನಾರಾಯಣ ಭಾವ ಚಿತ್ರವನ್ನು ಇರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

  • ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಹಲ್ಲೆ – ಪರಾರಿಗೆ ಯತ್ನಿಸಿದ್ದ ಆರೋಪಿ ವಿರುದ್ಧ ಫೈರಿಂಗ್

    ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಹಲ್ಲೆ – ಪರಾರಿಗೆ ಯತ್ನಿಸಿದ್ದ ಆರೋಪಿ ವಿರುದ್ಧ ಫೈರಿಂಗ್

    ಮೈಸೂರು: ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ವಿರುದ್ಧ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹಂದನಹಳ್ಳಿ ಗ್ರಾಮದ ಗೇಟ್ ಬಳಿ ನಡೆದಿದೆ.

    ಜನವರಿ 22 ರಂದು ಕ್ಷುಲ್ಲಕ ಕಾರಣಕ್ಕೆ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಆರೋಪಿ ಜಯಂತ್ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದನು. ಅಲ್ಲದೆ ಈ ದೃಶ್ಯ ಮೊಬೈಲ್‍ನಲ್ಲಿ ಸೆರೆಯಾಗಿತ್ತು. ಈ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

    ಪೊಲೀಸರು ಆರೋಪಿ ಜಯಂತ್ ಹಾಗೂ ವಿಘ್ನೇಶ್, ದೀಪಕ್‍ನನ್ನು ಬಂಧಿಸಿದ್ದರು. ಆರೋಪಿಗಳು ಹಂದನಹಳ್ಳಿ ಗ್ರಾಮದ ಗೇಟ್ ಬಳಿ ಹೆಡ್ ಕಾನ್ಸ್‍ಟೇಬಲ್ ರವಿ ಸೇರಿದಂತೆ ಇತರೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ.

    ಈ ವೇಳೆ ಎಸ್‍ಐ ಜಯಪ್ರಕಾಶ್ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಆರೋಪಿ ಜಯಂತ್ ಕಾಲಿಗೆ ಗುಂಡು ತಗುಲಿದ್ದು ಇದೀಗ ಆತನನ್ನು ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಅಲ್ಲದೆ ಆರೋಪಿಗಳ ನಡೆಸಿದ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಪೊಲೀಸ್ ಪೇದೆಗಳಿಗೂ ಕೆ.ಆರ್ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಕೊಡಿಸಲಾಗುತ್ತಿದೆ.

  • ರಾಜ್ಯದ ಭಿಕ್ಷೆಯಿಂದ ಸೀತಾರಾಮನ್ ರಾಜ್ಯಸಭೆ ಸದಸ್ಯೆಯಾಗಿದ್ದಾರೆ: ಕೆಪಿಸಿಸಿ ವಕ್ತಾರ

    ರಾಜ್ಯದ ಭಿಕ್ಷೆಯಿಂದ ಸೀತಾರಾಮನ್ ರಾಜ್ಯಸಭೆ ಸದಸ್ಯೆಯಾಗಿದ್ದಾರೆ: ಕೆಪಿಸಿಸಿ ವಕ್ತಾರ

    – ಆತ್ಮನಿರ್ಭರ ಅಲ್ಲ, ಆತ್ಮ ಬರ್ಬಾದ್ ಬಜೆಟ್

    ಮೈಸೂರು : ನಿರ್ಮಲಾ ಸೀತರಾಮನ್ ಅವರೇ ನಮ್ಮ ರಾಜ್ಯದ ಭಿಕ್ಷೆಯಿಂದ ನೀವು ರಾಜ್ಯಸಭಾ ಸದಸ್ಯೆಯಾಗಿದ್ದೀರಿ. ಆದರೆ ಕರ್ನಾಟಕದ ಬಗ್ಗೆ ಕಿಂಚಿತ್ತು ಕೃತಜ್ಞತೆ ನಿಮಗೆ ಇಲ್ಲ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಟೀಕಿಸಿದ್ದಾರೆ.

    ಕೇಂದ್ರದ ಬಜೆಟ್ ಕುರಿತಂತೆ ಮೈಸೂರಿನಲ್ಲಿ ಮಾತನಾಡಿದ ಎಂ. ಲಕ್ಷ್ಮಣ್, ನಿರ್ಮಲಾ ಸೀತರಾಮನ್ ಅವರೇ ನೀವೂ ಮೂಲತಃ ತಮಿಳುನಾಡಿನವರು. ಅಲ್ಲಿಯ ಚುನಾವಣೆಯ ಕಾರಣ ತಮಿಳುನಾಡಿಗೆ 6.2 ಲಕ್ಷ ಕೋಟಿ ಅನುದಾನ ಕೊಟ್ಟಿದ್ದೀರಿ. ಆದರೆ ಕರ್ನಾಟಕಕ್ಕೆ 14 ಸಾವಿರ ಕೋಟಿ ಬಜೆಟ್‍ನಲ್ಲಿ ಘೋಷಣೆ ಮಾಡಿದ್ದೀರಿ. ಇದು ನ್ಯಾಯನಾ ಎಂದು ಪ್ರಶ್ನಿಸಿದರು. ರಾಜ್ಯದ ಬಿಜೆಪಿ ಮುಖಂಡರೇ ನಿಮಗೆ ಮಾನ ಮರ್ಯಾದೆ ಇದ್ದರೆ ಈ ಬಗ್ಗೆ ಉತ್ತರ ಕೊಡಿ. ಇದು ಆತ್ಮನಿರ್ಭರ್ ಬಜೆಟ್ ಅಲ್ಲ, ಆತ್ಮ ಬರ್ಬಾದ್ ಬಜೆಟ್ ಎಂದು ಹೇಳಿದರು.

    ಜನಸಾಮಾನ್ಯರು ಎಚ್ಚರದಿಂದ ಇರಿ, ಬ್ಯಾಂಕಿನಲ್ಲಿ ನೀವೂ ಇಟ್ಟ ಫಿಕ್ಸೈಡ್ ಡೆಪೊಸಿಟ್‍ಗೂ ಸರ್ಕಾರ ಕೈ ಹಾಕುತ್ತದೆ. ಅಲ್ಪ ಸ್ವಲ್ಪ ಹಣ ಕೂಡಿಟ್ಟ ನಿಮ್ಮ ಹಣಕ್ಕೂ ಕತ್ತರಿ ಬೀಳುತ್ತದೆ. ಇದು ಇನ್ನೂ 6 ತಿಂಗಳಲ್ಲಿ ನಿಮ್ಮ ಹಣಕ್ಕೆ ಕೇಂದ್ರ ಕೈ ಹಾಕಿದರೂ ಅಚ್ಚರಿ ಇಲ್ಲ. ಜನಸಾಮಾನ್ಯರು ಈಗಲೇ ಈ ಬಗ್ಗೆ ಎಚ್ಚರ ವಹಿಸಿ ಎಂದರು.

    ಬಿಜೆಪಿ ಸರ್ಕಾರ ದೇಶದ ಜನರನ್ನು ಭಿಕ್ಷೆ ಬೇಡುವಂತಹ ಸ್ಥಿತಿಗೆ ತಂದು ಬಿಡುತ್ತದೆ. ಆ ದಿನ ಕೂಲಿ ಮಾಡಿ ತಿನ್ನಬೇಕು. ಏನು ಸಂಪಾದನೆ ಮಾಡಬಾರದು. ಇಂತಹ ಅಜೆಂಡ ಬಿಜೆಪಿ ಇಟ್ಟುಕೊಂಡು ಆಡಳಿತ ನಡೆಸುತ್ತಿದೆ. ಎಲ್‍ಐಸಿಯನ್ನು ಖಾಸಗಿಕರಣ ಮಾಡುತ್ತಿದೆ. ಮೂರು ಬ್ಯಾಂಕ್ ಗಳ ಖಾಸಗಿ ಅನುಮೋದನೆ ಪಡೆದುಕೊಂಡಿದ್ದಾರೆ. ಜನರನ್ನು ಭಿಕ್ಷೆ ಬೇಡುವ ಸ್ಥಿತಿಗೆ ಬಿಜೆಪಿ ಇನ್ನೆರಡು ವರ್ಷದಲ್ಲಿ ತರುವ ಅಜೆಂಡ ಇಟ್ಟುಕೊಂಡಿದೆ ಎಂದರು.

  • ಕೋಣನೂರು, ಚುಂಚನಹಳ್ಳಿ ಅರಣ್ಯ ಪ್ರದೇಶಕ್ಕೆ ಬೆಂಕಿ – ದಿಕ್ಕಾ ಪಾಲಾಗಿ ಓಡಿದ ಪ್ರಾಣಿ ಪಕ್ಷಿಗಳು

    ಕೋಣನೂರು, ಚುಂಚನಹಳ್ಳಿ ಅರಣ್ಯ ಪ್ರದೇಶಕ್ಕೆ ಬೆಂಕಿ – ದಿಕ್ಕಾ ಪಾಲಾಗಿ ಓಡಿದ ಪ್ರಾಣಿ ಪಕ್ಷಿಗಳು

    ಮೈಸೂರು: ಕೋಣನೂರು ಮತ್ತು ಚುಂಚನಹಳ್ಳಿ ಗ್ರಾಮದಲ್ಲಿನ ಕಿರು ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.

    ಕುರುಚಲು ಅರಣ್ಯ ಪ್ರದೇಶದ ಬೆಟ್ಟಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದು, ಮಧ್ಯಾಹ್ನ ಕೃಷ್ಣರಾಜಪುರ ಗ್ರಾಮದ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಬೆಟ್ಟದಲ್ಲಿದ್ದ ಮರ, ಗಿಡಗಳು ಭಸ್ಮವಾಗಿದೆ. ಅಲ್ಲದೆ ಬೆಟ್ಟದ ಸುತ್ತಮುತ್ತ ಹತ್ತಾರು ಎಕರೆ ಅರಣ್ಯ ಪ್ರದೇಶ ಬೆಂಕಿಯಿಂದ ನಾಶವಾಗಿದೆ.

    ಬೆಂಕಿ ಸಂಭವಿಸಿದ್ದರಿಂದ ಅರಣ್ಯದಲ್ಲಿದ್ದ ಪ್ರಾಣಿ ಪಕ್ಷಿಗಳು ದಿಕ್ಕಾ ಪಾಲಾಗಿ ಓಡಿಹೋಗಿದೆ. ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು ಬೆಂಕಿ ನಂದಿಸಲು ಹರಸಾಹಸವನ್ನೇ ಪಡಬೇಕಾಗಿತ್ತು. ಬೇಸಿಗೆ ಕಾಲ ಬರುವ ಮುನ್ನವೇ ಅರಣ್ಯ ಭಸ್ಮವಾಗಿರುವುದು ಬೇಸರದ ಸಂಗತಿಯಾಗಿದೆ.

    ಅಲ್ಲದೆ ಈ ಅರಣ್ಯ ಪ್ರದೇಶದಲ್ಲಿ ಜಿಂಕೆ, ನವಿಲು, ಚಿರತೆ, ಮೊಲ, ಕಾಡು ಹಂದಿ, ಕಿರುಬ ಸೇರಿ ಹಲವು ಪ್ರಾಣಿ ಪಕ್ಷಿಗಳು ವಾಸಿಸುತ್ತಿದ್ದವು.

  • ಶಿಷ್ಟಾಚಾರ ಪಾಲಿಸದ ಅಧಿಕಾರಿಗಳ ವಿರುದ್ಧ ಸ್ಪೀಕರ್‌ಗೆ ದೂರು ನೀಡುತ್ತೇನೆ : ಸಾರಾ ಮಹೇಶ್

    ಶಿಷ್ಟಾಚಾರ ಪಾಲಿಸದ ಅಧಿಕಾರಿಗಳ ವಿರುದ್ಧ ಸ್ಪೀಕರ್‌ಗೆ ದೂರು ನೀಡುತ್ತೇನೆ : ಸಾರಾ ಮಹೇಶ್

    ಮೈಸೂರು: ಯಾವುದೇ ಸಮಿತಿ ಸಭೆಗಳಲ್ಲಿ ಶಿಷ್ಟಾಚಾರ ಪಾಲಿಸದ ಕೆಲವು ಅಧಿಕಾರಿಗಳ ವರ್ತನೆ ಕುರಿತಂತೆ ಸ್ಪೀಕರ್‌ಗೆ ದೂರು ನೀಡುತ್ತೇನೆ ಎಂದು ಮಾಜಿ ಸಚಿವ ಸಾರಾ ಮಹೇಶ್ ಹೇಳಿದ್ದಾರೆ.

    ನಿನ್ನೆ ಮೈಸೂರಿನಲ್ಲಿ ನಡೆಸಿದ ಸಭೆಯಲ್ಲಿ ಭಾಗವಹಿಸಿದ್ದ ಮೈಸೂರು ಡಿಸಿ ರೋಹಿಣಿ ಸಿಂಧೂರಿ ನಡೆ ವಿಚಾರವಾಗಿ ಇಂದು ಚಾಮರಾಜನಗರದಲ್ಲಿ ಮಾತನಾಡಿದ ಅವರು, ವಿಧಾನಮಂಡಲ ಸಭೆಯ ಮುಂದಿಡಲಾದ ಸಮಿತಿ ಸಂವಿಧಾನ ಬದ್ಧವಾಗಿ ರಚನೆಯಾಗಿದೆ. ಸಮಿತಿ ಸಭೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅದರದ್ದೇ ಆದ ಶಿಷ್ಟಾಚಾರ ಇರುತ್ತದೆ. ಹಾಗಾಗಿ ಶಿಷ್ಟಾಚಾರ ಪಾಲನೆ ಬಗ್ಗೆ ಕೆಲವು ಅಧಿಕಾರಿಗಳ ವರ್ತನೆ ಕುರಿತಂತೆ ಸ್ಪೀಕರ್ ಹಾಗೂ ಮುಖ್ಯಕಾರ್ಯದರ್ಶಿಗಳ ಜೊತೆ ಚರ್ಚೆ ನಡೆಸುತ್ತೇವೆ. ಯಾವುದೇ ಸಮಿತಿ ಸಭೆ ಬಂದಾಗ ಡಿಸಿ ಮತ್ತು ಎಸ್ಪಿ ಅವರು ಬರಬೇಕು. ಅವರ ಅವಶ್ಯಕತೆ ಇದ್ದರೆ ಸಭೆಯಲ್ಲಿ ಪಾಲ್ಗೊಳ್ಳುವಂತೆ ಹೇಳುತ್ತೇವೆ. ಆದರೆ ನಿನ್ನೆ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಅವಶ್ಯಕತೆ ಇರಲಿಲ್ಲ. ಹಾಗಾಗಿ ಅವರನ್ನು ಬೇಡ ಎಂದು ಕಳುಹಿಸಿದ್ದೇವೆ ಎಂದು ಹೇಳಿದರು.

    ಮೈಸೂರು ಜಿಲ್ಲಾ ಪಂಚಾಯತ್ ಯಲ್ಲಿ ವಿಧಾನಮಂಡಲ ಕಾಗದ ಪತ್ರಗಳ ಸಮಿತಿ ಸಭೆಯಲ್ಲಿ ಮೊದಲ ಬಾರಿಗೆ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತು ಶಾಸಕ ಸಾರಾ ಮಹೇಶ್ ಮುಖಾಮುಖಿಯಾಗಿದ್ದರು. ಸಭೆಯಲ್ಲಿ ಮಾಸ್ಕ್ ಹಾಕಿಕೊಂಡು ಮಾತು ಆರಂಭಿಸಿದ ಡಿಸಿ ರೋಹಿಣಿ ಸಿಂದೂರಿಯವರಿಗೆ ನಿಮ್ಮ ಮಾತು ಕೇಳುತ್ತಿಲ್ಲ. ಮಾಸ್ಕ್ ತೆಗೆದು ಮಾತನಾಡಿ ಎಂದು ಸಾರಾ ಮಹೇಶ್ ಹೇಳಿದರು. ನಾನು ಮಾಸ್ಕ್ ತೆಗೆಯವುದಿಲ್ಲ. ಮಾಸ್ಕ್ ತೆಗೆದು ಮಾತನಾಡಬಾರದು ಅದಕ್ಕಾಗಿ ಮಾಸ್ಕ್ ತೆಗೆಯುವುದಿಲ್ಲ ಎಂದು ಸಾರಾ ಮಹೇಶ್‍ಗೆ ಉತ್ತರ ನೀಡುವುದರ ಮೂಲಕ ಬಹಿರಂಗವಾಗಿ ಇಬ್ಬರು ಮುಸುಕಿನ ಗುದ್ದಾಟ ನಡೆಸಿದರು.

    ಈ ಸಭೆಯಲ್ಲಿ ನನಗೆ ಸಂಬಂಧಿಸಿದ ವಿಷಯಗಳ ಚರ್ಚೆ ಇಲ್ಲ, ಹಾಗಾಗಿ ನೀವು ಸಮ್ಮತಿಸಿದರೆ ನಾನು ಸಭೆಯಿಂದ ಹೋಗುತ್ತೇನೆ ಎಂದ ಸಿಂಧೂರಿ ತಿಳಿಸಿದರು. ಅದಕ್ಕೆ ನಿಮ್ಮನ್ನು ನಾವು ಸಭೆಗೆ ಕರೆದಿರಲಿಲ್ಲ. ಆದರೂ ತಾವು ಸಭೆಗೆ ಬಂದಿದ್ದಿರಿ. ಜಿಲ್ಲೆಯ ಯಾವುದೇ ಸಭೆಯ ಮಾಹಿತಿ ಕೊಡುವುದು ಕರ್ತವ್ಯ. ಅದಕ್ಕೆ ಮಾಹಿತಿ ಕೊಟ್ಟಿದ್ದೇವೆ ಅಷ್ಟೇ. ಆದರೂ ಪರವಾಗಿಲ್ಲ. ಸಮಯ ಇದ್ದರೆ ಇರಿ, ಬೇರೆ ಕೆಲಸ ಇದ್ದರೆ ಹೋಗಿ ಎಂದು ನೇರವಾಗಿ ಸಾರಾ ಮಹೇಶ್ ಉತ್ತರಿಸಿದ್ದರು.

  • ಪ್ರಾಣದ ಜೊತೆ ಅಧಿಕಾರಿಗಳ ಆಟ – ಕೆ.ಆರ್ ಆಸ್ಪತ್ರೆಗೆ ಬರ್ಲಿಲ್ಲ ಜೀವರಕ್ಷಕ ವೆಂಟಿಲೇಟರ್

    ಪ್ರಾಣದ ಜೊತೆ ಅಧಿಕಾರಿಗಳ ಆಟ – ಕೆ.ಆರ್ ಆಸ್ಪತ್ರೆಗೆ ಬರ್ಲಿಲ್ಲ ಜೀವರಕ್ಷಕ ವೆಂಟಿಲೇಟರ್

    ಮೈಸೂರು: ನಗರದ ಕೆ.ಆರ್. ಆಸ್ಪತ್ರೆ ಎಂದರೆ ಮೈಸೂರು ಸೇರಿದಂತೆ ನಾಲ್ಕು ಜಿಲ್ಲೆಗೆ ದೊಡ್ಡಾಸ್ಪತ್ರೆ ಎಂದೇ ಹೆಸರುವಾಸಿ. ಆದರೆ ಈ ಆಸ್ಪತ್ರೆಯೇ ದೀರ್ಘಕಾಲದ ರೋಗದಿಂದ ಬಳಲುತ್ತಿದೆ.

    ಹೌದು. ಚಾಮರಾಜನಗರ ಜಿಲ್ಲೆಯ ಹನೂರಿನ ಸುಳ್ವಾಡಿ ವಿಷಹಾರ ದುರಂತ ಇಡೀ ರಾಜ್ಯವನ್ನೆ ಬೆಚ್ಚಿ ಬೀಳಿಸಿತ್ತು. ದುರಂತ ನಡೆದ ದಿನ ನೂರಾರು ರೋಗಿಗಳನ್ನ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆತಂದಿದ್ದರು. ಆದರೆ ಅಂದು ಆಸ್ಪತ್ರೆಯಲ್ಲಿ ಸಾಕಷ್ಟು ವೆಂಟಿಲೇಟರ್ ವ್ಯವಸ್ಥೆ ಇಲ್ಲದೆ ಮೈಸೂರಿನ ಬೇರೆ ಬೇರೆ ಖಾಸಗಿ ಆಸ್ಪತ್ರೆಗೆ ಅಸ್ವಸ್ಥರನ್ನು ದಾಖಲಿಸಲಾಗಿತ್ತು. ಆಗ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಕೆ.ಆರ್. ಆಸ್ಪತ್ರೆಗೆ ಆಗತ್ಯವಿರುವಷ್ಟು ವೆಂಟಿಲೇಟರ್ ಮಂಜೂರು ಮಾಡೋದಾಗಿ ಹೇಳಿತ್ತು. ಆದರೆ ಘಟನೆ ನಡೆದು 7 ತಿಂಗಳಾದರೂ ಟೆಂಡರ್ ಪ್ರಕ್ರಿಯೆ ವಿಳಂಬವಾಗಿ ವೆಂಟಿಲೇಟರ್‍ಗಳು ಮಾತ್ರ ಆಸ್ಪತ್ರೆಗೆ ಸೇರಿಲ್ಲ ಎಂದು ಆಸ್ಪತ್ರೆ ಸೂಪರಿಡೆಂಟ್ ನಂಜುಂಡಸ್ವಾಮಿ ಹೇಳಿದ್ದಾರೆ.

    ಆಸ್ಪತ್ರೆಯಲ್ಲಿ ಸದ್ಯ 15 ವೆಂಟಿಲೇಟರ್ ಕಾರ್ಯನಿರ್ವಹಿಸುತ್ತಿದ್ದು, 7 ಹೊಸ ವೆಂಟಿಲೇಟರ್‍ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರ ಜೊತೆಗೆ ಕೆ.ಆರ್ ಆಸ್ಪತ್ರೆಯಲ್ಲಿ ಇರುವ ಯಾವುದೇ ಅಂಬುಲೆನ್ಸ್ ಗಳಿಗೂ ವೆಂಟಿಲೇಟರ್ ವ್ಯವಸ್ಥೆ ಇಲ್ಲ. ಇದರಿಂದ ಅಂಬುಲೆನ್ಸ್‍ಗಳಿಗೂ ವೆಂಟಿಲೇಟರ್ ಅಳವಡಿಸುವ ಬೇಡಿಕೆ ಸಹ ಇದೆ. ಆದರೂ ಸರ್ಕಾರ ಮಾತ್ರ ಇನ್ನು ಯಾವುದೇ ಕ್ರಮ ವಹಿಸಿಲ್ಲ.

    ಮೈಸೂರು ಜಿಲ್ಲೆಯಲ್ಲಿ ಜಿ.ಟಿ. ದೇವೇಗೌಡ, ಸಾರಾ ಮಹೇಶ್ ಇಬ್ಬರು ಸಚಿವರಿದ್ದಾರೆ. ಅದಾಗ್ಯೂ, ಸಾರ್ವಜನಿಕ ಆಸ್ಪತ್ರೆಗೆ ಅಗತ್ಯ ವೆಂಟಿಲೇಟರ್ ಒದಗಿಸುವಲ್ಲಿ ಇವರಿಗೂ ಕೂಡ ಕಾಳಜಿ ಇಲ್ಲದಂತಿದೆ.

  • ಪ್ರತಾಪ್ ಸಿಂಹಗೆ ಬೆಂಬಲ ನೀಡಲ್ಲ, ನಾವು ಮೈತ್ರಿ ಅಭ್ಯರ್ಥಿ ಪರ: ಮೈಸೂರು ಬ್ರಾಹ್ಮಣ ಮಹಾಸಭಾ

    ಪ್ರತಾಪ್ ಸಿಂಹಗೆ ಬೆಂಬಲ ನೀಡಲ್ಲ, ನಾವು ಮೈತ್ರಿ ಅಭ್ಯರ್ಥಿ ಪರ: ಮೈಸೂರು ಬ್ರಾಹ್ಮಣ ಮಹಾಸಭಾ

    ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಜಯ್ ಶಂಕರ್ ಅವರನ್ನು ನಾವು ಬೆಂಬಲಿಸುತ್ತಿದ್ದೇವೆ. ನಮ್ಮ ಸಮುದಾಯದ ನಾಯಕರಿಗೆ ನಿಂದಿಸಿರುವ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರಿಗೆ ಬೆಂಬಲ ನೀಡಲ್ಲ ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಮಹಾಸಭಾ ಮುಖಂಡರು ಸ್ಪಷ್ಟಪಡಿಸಿದ್ದಾರೆ.

    ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬ್ರಾಹ್ಮಣ ಸಮಾಜದ ಮುಖಂಡ ಕೆ. ರಘುರಾಂ ಅವರು, ರಾಜ್ಯದಲ್ಲಿ ಮೈತ್ರಿ ಸರ್ಕಾರ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ರಚನೆ ಮಾಡಿದೆ. ಬೆಂಗಳೂರಿನಲ್ಲಿ ಬಹುಕೋಟಿ ಮೊತ್ತದ ವಿಸ್ತಾರವಾದ ನಿವೇಶನವನ್ನು ಬ್ರಾಹ್ಮಣ ಮಹಾಸಭಾಗೆ ನೀಡಿದೆ. ಆದರಿಂದ ಮೈತ್ರಿ ಅಭ್ಯರ್ಥಿಗೆ ಬ್ರಾಹ್ಮಣ ಸಮುದಾಯ ಮತ ಹಾಕಲಾಗುತ್ತದೆ ಎಂದು ತಿಳಿಸಿದರು.

    ಆರ್. ಗುಂಡೂರಾವ್ ಅವರು ನಮ್ಮೊಂದಿಗಿಲ್ಲ. ಅವರು ನಮ್ಮ ಸಮುದಾಯಕ್ಕಾಗಿ ಬಹಳಷ್ಟು ದುಡಿದಿದ್ದಾರೆ. ಇಂತಹ ಹಿರಿಯ ನಾಯಕರನ್ನು ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸುವುದು ಸರಿಯಲ್ಲ ಎಂದು ಇಲ್ಲಿ ಬಿಜೆಪಿ ಅಭ್ಯರ್ಥಿಯಾದವರಿಗೆ ನಾವು ಹೇಳಿದ್ದೇವೆ. ಅವರ ವಿರುದ್ಧ ಪ್ರತಿಭಟನೆಯನ್ನೂ ಕೂಡ ಮಾಡಿದ್ದೇವೆ. ಹೀಗಾಗಿ ಸಂಭಾವಿತ ಹಾಗೂ ಒಳ್ಳೆಯ ನಡತೆ ಹೊಂದಿರುವ ವಿಜಯ್ ಶಂಕರ್ ಅವರಿಗೆ ನಾವು ಬೆಂಬಲ ನೀಡುತ್ತೇವೆ ಎಂದು ಹೇಳಿದರು.

  • ಮೈಸೂರು ಮೃಗಾಲಯದಲ್ಲಿ ಗಂಡು ಜಿರಾಫೆ ಸಾವು

    ಮೈಸೂರು ಮೃಗಾಲಯದಲ್ಲಿ ಗಂಡು ಜಿರಾಫೆ ಸಾವು

    ಮೈಸೂರು: ಜಿರಾಫೆಯೊಂದು ಮೈಸೂರು ಮೃಗಾಲಯದಲ್ಲಿ ಮೃತಪಟ್ಟ ಘಟನೆ ನಡೆದಿದೆ.

    22 ವರ್ಷ ಪ್ರಾಯದ ಗಂಡು ಜಿರಾಫೆ ಕೃಷ್ಣರಾಜ ಇದಾಗಿದ್ದು, ಅನಾರೋಗ್ಯದಿಂದ ಮೃತಪಟ್ಟಿದೆ ಅಂತ ಹೇಳಲಾಗುತ್ತಿದೆ. ಮೈಸೂರು ಮೃಗಾಲಯದಲ್ಲೆ ಜನಿಸಿದ್ದ ಕೃಷ್ಣರಾಜ ಶುಕ್ರವಾರ ತಡರಾತ್ರಿ ಸಾವನ್ನಪ್ಪಿದೆ.

    ಮರಣೋತ್ತರ ಪರೀಕ್ಷೆ ವರದಿಯ ನಂತರವಷ್ಟೇ ಸಾವಿನ ನಿಖರ ಕಾರಣ ತಿಳಿಯಬೇಕಿದೆ. ಈ ಹಿಂದೆಯೂ ಸಹ ಮೃಗಾಲಯದಲ್ಲಿ ಕೆಲ ಪ್ರಾಣಿಗಳು ಅನಾರೋಗ್ಯದಿಂದ ಸಾವನ್ನಪ್ಪಿದ್ದರೆ, ಇನ್ನೂ ಕೆಲ ಪ್ರಾಣಿಗಳು ವಯೋ ಸಹಜ ಕಾಯಿಲೆಗಳಿಂದ ಮೃತಪಟ್ಟಿವೆ.

    ಇದನ್ನೂ ಓದಿ: ಮೈಸೂರು ಮೃಗಾಲಯಕ್ಕೆ ಹೊಸ ಅತಿಥಿಗಳ ಆಗಮನ: ಯಾವೆಲ್ಲಾ ಪ್ರಾಣಿಗಳಿವೆ?

    ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಕೃಷ್ಣರಾಜ ಎಂಬ ಈ ಜಿರಾಫೆ, ಮೃಗಾಲಯದಲ್ಲಿ ಕಾರ್ಯನಿರ್ವಹಿಸುವ ಪರಿಚಿತ ಸಿಬ್ಬಂದಿಗಳು ಹೊರಗಡೆ ಅಡ್ಡಾಡುತ್ತ `ರಾಜಾ ಬಾ’ ಎಂದು ಕರೆದರೆ ಸಾಕು ಹತ್ತಿರ ಬರುತ್ತಿತ್ತು. ಆದ್ರೆ ಇದೀಗ ಜಿರಾಫೆ ಸಾವನ್ನಪ್ಪಿರುವುದು ಪ್ರವಾಸಿಗಳಲ್ಲಿ ಬೇಸರ ತರಿಸಿದೆ.