Tag: ಪಬ್ಲಿಕ್ ಟಿವಿ Night curfew

  • ಪುಣೆಯಲ್ಲಿ 7 ದಿನಗಳ ಕಾಲ ನೈಟ್ ಕರ್ಫ್ಯೂ – ಬಾರ್, ಹೋಟೆಲ್, ಧಾರ್ಮಿಕ ಸ್ಥಳಗಳು ಬಂದ್

    ಪುಣೆಯಲ್ಲಿ 7 ದಿನಗಳ ಕಾಲ ನೈಟ್ ಕರ್ಫ್ಯೂ – ಬಾರ್, ಹೋಟೆಲ್, ಧಾರ್ಮಿಕ ಸ್ಥಳಗಳು ಬಂದ್

    ಮುಂಬೈ: ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆ ಪುಣೆಯ ಬಾರ್‌ಗಳು, ಹೋಟೆಲ್‍ಗಳು ಹಾಗೂ ರೆಸ್ಟೋರೆಂಟ್‍ಗಳನ್ನು 7 ದಿನಗಳವರೆಗೂ ಮುಚ್ಚುವುದರ ಜೊತೆಗೆ ಕೆಲವು ನಿರ್ಬಂಧಗಳನ್ನು ಜಾರಿಗೆ ತರಲು ಜಿಲ್ಲಾಡಳಿತ ನಿರ್ಧರಿಸಿದೆ.

    ಇದಲ್ಲದೆ ಕೋವಿಡ್-19 ಹರಡುವುದನ್ನು ತಡೆಗಟ್ಟಲು ಏಪ್ರಿಲ್ 3 ರಿಂದ ಪುಣೆಯಲ್ಲಿ ಸಂಜೆ 6ರಿಂದ ಬೆಳಗ್ಗೆ 6ರವರೆಗೆ 12 ಗಂಟೆಗಳ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

    ಜಿಲ್ಲೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಸಾಧ್ಯವಿಲ್ಲ. ಹೀಗಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಬಾರ್‍ಗಳು, ಹೋಟೆಲ್‍ಗಳನ್ನು 7 ದಿನಗಳ ಕಾಲ ಮುಚ್ಚಲಾಗಿದ್ದು, ಕೇವಲ ಹೋಂ ಡೆಲಿವರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.

    ಅಂತ್ಯಕ್ರಿಯೆ ಮತ್ತು ವಿವಾಹ ಸಮಾರಂಭಗಳನ್ನು ಹೊರತುಪಡಿಸಿ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಗುವುದಿಲ್ಲ. ಅಲ್ಲದೆ ಒಂದು ವಾರ ಧಾರ್ಮಿಕ ಸ್ಥಳಗಳನ್ನು ಕೂಡ ಸಂಪೂರ್ಣವಾಗಿ ಮುಚ್ಚಬೇಕು ಪುಣೆಯ ವಿಭಾಗೀಯ ಆಯುಕ್ತರು ತಿಳಿಸಿದ್ದಾರೆ.