Tag: ಪಬ್ಲಿಕ್ ಟಿವಿ. Rahul Gandhi

  • ನನ್ನ ಜೀವನದಲ್ಲಿ ಸೋದರಿ ಪ್ರಿಯಾಂಕಾಗೆ ವಿಶೇಷ ಸ್ಥಾನ: ರಾಹುಲ್ ಗಾಂಧಿ

    ನನ್ನ ಜೀವನದಲ್ಲಿ ಸೋದರಿ ಪ್ರಿಯಾಂಕಾಗೆ ವಿಶೇಷ ಸ್ಥಾನ: ರಾಹುಲ್ ಗಾಂಧಿ

    – ಸೋದರಿ ಜೊತೆಗಿನ ಬಾಲ್ಯದ ಫೋಟೋ ಹಂಚಿಕೊಂಡ ರಾಗಾ

    ನವದೆಹಲಿ: ಇಂದು ದೇಶಾದ್ಯಂತ ರಕ್ಷಾ ಬಂಧನ ಹಬ್ಬದ ಸಂಭ್ರಮ. ರಕ್ಷಾ ಬಂಧನದ ಈ ಶುಭ ದಿನದಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಪ್ರೀತಿಯ ಸಹೋದರಿ ಪ್ರಿಯಾಂಕಾ ಗಾಂಧಿಗೆ ಶುಭಾಶಯ ತಿಳಿಸಿದ್ದಾರೆ.

    ಹೌದು, ರಕ್ಷಾ ಬಂಧನ ದಿನ ಸೋದರ ಹಾಗೂ ಸೋದರಿಯರ ಪ್ರೀತಿಯ ಸಂಕೇತವಾಗಿದೆ. ಈ ದಿನ ಸೋದರಿಯರು ತಮ್ಮ ಸಹೋದರನ ಕೈಗೆ ರಾಕಿಯನ್ನು ಕಟ್ಟಿ ಸಿಹಿ ತಿಂಡಿಯನ್ನು ತಿನ್ನಿಸುವ ಮೂಲಕ ದೇವರು ಆತನಿಗೆ ಸುಖ, ಸಂತೋಷ ಹಾಗೂ ದೀಘಾಯುಷ್ಯ ನೀಡಲಿ ಎಂದು ಶುಭ ಹಾರೈಸುತ್ತಾರೆ. ಇದನ್ನೂ ಓದಿ:ರಾಹುಲ್ ಗಾಂಧಿ ಬ್ರೇಕ್‍ಫಾಸ್ಟ್ ಮೀಟಿಂಗ್ – ಸಂಸತ್‍ವರೆಗೂ ಸೈಕಲ್ ಮಾರ್ಚ್

     

    View this post on Instagram

     

    A post shared by Rahul Gandhi (@rahulgandhi)

    ಸದ್ಯ ಈ ವಿಶೇಷ ದಿನದಂದು ರಾಹುಲ್ ಗಾಂಧಿ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಜೊತೆಗಿರುವ ಬಾಲ್ಯ, ಯೌವನ ಹಾಗೂ ಈಗೀನ ಫೋಟೋಗಳನ್ನು ಕೊಲಾಜ್ ಮಾಡಿ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಫೋಟೋ ಜೊತೆಗೆ ಸಹೋದರಿಯಾಗಿ ಸ್ನೇಹಿತೆಯಾಗಿ ಜೊತೆಗಿರುವ ನನ್ನ ಸಹೋದರಿಗೆ ನನ್ನ ಜೀವನದಲ್ಲಿ ವಿಶೇಷ ಸ್ಥಾನವಿದೆ. ನಾವಿಬ್ಬರೂ ಪರಸ್ಪರ ಸ್ನೇಹಿತರು ಹಾಗೂ ರಕ್ಷಕರು. ನಿಮ್ಮೆಲ್ಲರಿಗೂ ರಕ್ಷಾ ಬಂಧನದ ಶುಭಾಶಯಗಳು ಎಂದು ಕ್ಯಾಪ್ಷನ್‍ನಲ್ಲಿ ಬರೆಯುವ ಮೂಲಕ ಶುಭಾಶಯ ತಿಳಿಸಿದ್ದಾರೆ. ಇದನ್ನೂ ಓದಿ:ರಾಹುಲ್ ಗಾಂಧಿಯ ಪೋಸ್ಟ್ ತೆಗೆದು ಹಾಕಿದ ಫೇಸ್‍ಬುಕ್

  • ಅಮೇಥಿಗೆ 10,000 ಮೆಡಿಕಲ್ ಕಿಟ್ ಕಳುಹಿಸಿಕೊಟ್ಟ ರಾಹುಲ್ ಗಾಂಧಿ

    ಅಮೇಥಿಗೆ 10,000 ಮೆಡಿಕಲ್ ಕಿಟ್ ಕಳುಹಿಸಿಕೊಟ್ಟ ರಾಹುಲ್ ಗಾಂಧಿ

    ಲಕ್ನೋ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ತಮ್ಮ ಹಿಂದಿನ ಲೋಕಸಭಾ ಕ್ಷೇತ್ರವಾದ ಅಮೆಥಿಯಲ್ಲಿ ಹೋಂ ಐಸೋಲೇಷನ್‍ನಲ್ಲಿರುವ ಕೋವಿಡ್-19 ಸೋಂಕಿತರಿಗೆ ಅಗತ್ಯವಿರುವ ಮೆಡಿಕಲ್ ಕಿಟ್‍ನನ್ನು ಕಳುಹಿಸಿಕೊಟ್ಟಿದ್ದಾರೆ ಎಂದು ಪಕ್ಷದ ಮುಖಂಡರೊಬ್ಬರು ಶನಿವಾರ ತಿಳಿಸಿದ್ದಾರೆ.

    ಪಕ್ಷದ ಸೇವಾ ಸತ್ಯಾಗ್ರಹ ಕಾರ್ಯಕ್ರಮದಡಿ ಸುಮಾರು 10,000 ಮೆಡಿಕಲ್ ಕಿಟ್‍ಗಳು ಬಂದಿದ್ದು, ಅವುಗಳನ್ನು ಅಗತ್ಯವಿರುವ ಜನರಿಗೆ ನೀಡಲಾಗುತ್ತದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಮುಖ್ಯಸ್ಥ ಪ್ರದೀಪ್ ಸಿಂಘಾಲ್ ತಿಳಿಸಿದ್ದಾರೆ.

    ಅಮೆಥಿಯ ಮಾಜಿ ಲೋಕಸಭಾ ಸಂಸದರಾಗಿರುವ ರಾಹುಲ್ ಗಾಂಧಿಯವರು ಈ ಮುನ್ನ 20 ಆಮ್ಲಜನಕ ಸಾಂದ್ರಕ ಮತ್ತು ಆಕ್ಸಿಜನ್ ಸಿಲಿಂಡರ್‌ಗಳನ್ನು ಕಳುಹಿಸಿಕೊಟ್ಟಿದ್ದರು. ಸದ್ಯ ರಾಹುಲ್ ಗಾಂಧಿಯವರು ಕೇರಳದ ವಯನಾಡುವಿನ ಲೋಕಸಭಾ ಸಂಸದರಾಗಿದ್ದಾರೆ. ಇದನ್ನು ಓದಿ: ಪತಿಯ ಸಮ್ಮುಖದಲ್ಲಿಯೇ ಪ್ರೇಮಿಯ ಜೊತೆ ಪತ್ನಿಯ ಮದುವೆ

  • ಸತ್ತರೋ ಅಥವಾ ಕೊಂದರೋ? – ಕರ್ನಾಟಕ ಸರ್ಕಾರಕ್ಕೆ ರಾಹುಲ್ ಪ್ರಶ್ನೆ

    ಸತ್ತರೋ ಅಥವಾ ಕೊಂದರೋ? – ಕರ್ನಾಟಕ ಸರ್ಕಾರಕ್ಕೆ ರಾಹುಲ್ ಪ್ರಶ್ನೆ

    ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ಮಂದಿ ಮೃತಪಟ್ಟಿದ್ದು, ಈ ಘಟನೆ ಕುರಿತಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕ ಕರ್ನಾಟಕ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ರಾಹುಲ್ ಗಾಂಧಿಯವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಸತ್ತರೋ ಅಥವಾ ಕೊಂದರೋ? ಮೃತರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪ. ವ್ಯವಸ್ಥೆ ಎಚ್ಚರಗೊಳ್ಳವ ಮುನ್ನ ಎಷ್ಟು ಬಲಿ ಬೇಕು ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

    ಈ ಕುರಿತಂತೆ ಕಾಂಗ್ರೆಸ್ ವಕ್ತಾರ ರಣ್‍ದೀಪ್ ಸುರ್ಜೆವಾಲಾ, ಯಡಿಯೂರಪ್ಪ ಸರ್ಕಾರದ ನಿರ್ಲಕ್ಷ್ಯದ ಕೊಲೆ ಇದಾಗಿದೆ. ಆರೋಗ್ಯ ಸಚಿವರು ರಾಜೀನಾಮೆ ನೀಡಬೇಕು. ಸಿಎಂ ಯಡಿಯೂರಪ್ಪನವರಿಗೆ ಸಾವಿನ ನೈತಿಕ ಜವಾಬ್ದಾರಿ ಇದೆಯೇ? ಎಂದು ಪ್ರಶ್ನಿಸುವ ಮೂಲಕ ಟ್ಟಿಟ್ಟರ್‌ನಲ್ಲಿ ಖಾರವಾಗಿ ಪ್ರಶ್ನಿಸಿದ್ದಾರೆ.

  • ಆಟೋ ರಿಕ್ಷಾದಲ್ಲಿ ರಾಹುಲ್ ಗಾಂಧಿ ರೋಡ್ ಶೋ

    ಆಟೋ ರಿಕ್ಷಾದಲ್ಲಿ ರಾಹುಲ್ ಗಾಂಧಿ ರೋಡ್ ಶೋ

    ತಿರುವನಂತಪುರಂ: ಬಿಜೆಪಿ ಹಾಗೂ ಎನ್‍ಡಿಎ ಆಡಳಿತ ಸರ್ಕಾರದಲ್ಲಿ ಹೆಚ್ಚುತ್ತಿರುವ ಇಂಧನ ಬೆಲೆಯನ್ನು ಎತ್ತಿ ತೋರಿಸುವ ಸಲುವಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇರಳದ ಎರಡು ಪ್ರದೇಶಗಳಿಗೆ ಆಟೋ ರಿಕ್ಷಾದಲ್ಲಿ ಪ್ರಯಾಣಿಸಿದರು.

    ಕೇರಳದಲ್ಲಿ ವಿಧಾನಸಭಾ ಚುನಾವಣಾ ಪ್ರಚಾರ ನಡೆಸಲು ಏಪ್ರಿಲ್ 6 ಕೊನೆಯ ದಿನವಾಗಿದೆ. ಹೀಗಾಗಿ ನಿನ್ನೆ ಸಂಜೆ ತಿರುವನಂತಪುರಂ ನೆಮೊಮ್‍ನಲ್ಲಿ ನಡೆದ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್, ಬಳಿಕ ಆಟೋ ರಿಕ್ಷಾವನ್ನು ಕರೆಸಿ ಪ್ರಯಾಣಿಸುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದರು.

    2016ರ ವಿಧಾನಸಭಾ ಚುನಾವಣೆ ವೇಳೆ ನೆಮೊಮ್‍ನಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಭ್ಯರ್ಥಿ ಸಂಸದ ಕೆ ಮುರಳೀಧರನ್ ಬಿಜೆಪಿ ವಿರುದ್ಧ ಅತೀ ಹೆಚ್ಚು ಮತಗಳನ್ನು ಗಳಿಸುವ ಮೂಲಕ ಜಯಗಳಿಸಿದ್ದರು. ಇದೀಗ ಈ ಕ್ಷೇತ್ರವು ಎಲ್‍ಡಿಎಫ್, ಯುಡಿಎಫ್ ಮತ್ತು ಬಿಜೆಪಿ ನಡುವೆ ತೀವ್ರ ತ್ರಿಕೋನ ಹೋರಾಟಕ್ಕೆ ಸಾಕ್ಷಿಯಾಗಿದೆ.

    ಭಾನುವಾರ ಸಭೆ ನಂತರ ರಾಹುಲ್ ಗಾಂಧಿ ಆಟೋ ರಿಕ್ಷಾದ ಮೂಲಕ ರೋಡ್ ಶೋ ನಡೆಸಿದರು ಎಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹೇಳಿದ್ದಾರೆ. ಅಲ್ಲದೆ ಆಟೋ ಚಾಲಕ ತಮ್ಮ ಸಂಪಾದನೆಯೆಲ್ಲ ಇಂಧನಕ್ಕಾಗಿ ಖರ್ಚು ಮಾಡುವುದರಿಂದ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

    ಬಿಜೆಪಿ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಏರಿಸಿ, ಹಣವನ್ನು ತಮ್ಮ ಸ್ನೇಹಿತರಿಗೆ ನೀಡುತ್ತಿದೆ. ಹೀಗಿರುವಾಗ ಇಲ್ಲಿಗೆ ಬಂದು ನಿಮ್ಮ ಮತ ಕೇಳಲು ಅವರಿಗೆ ಎಷ್ಟು ಧೈರ್ಯ ಎಂದು ರಾಹುಲ್ ಕಿಡಿಕಾರಿದರು. ಬಳಿಕ ರಾಹುಲ್ ವಯನಾಡಿನ ಕಲ್ಪೆಟ್ಟದಲ್ಲಿರುವ ಹೆಲಿಪ್ಯಾಡ್‍ಗೆ ಹೋಗಲು ಆಟೋ ರಕ್ಷಾದಲ್ಲಿ ಸವಾರಿ ನಡೆಸಿದರು.

  • ಪುಲ್ವಾಮಾ ದಾಳಿಯಿಂದ ಲಾಭ ಆಗಿದ್ದು ಯಾರಿಗೆ: ರಾಹುಲ್ ಗಾಂಧಿ ಪ್ರಶ್ನೆ

    ಪುಲ್ವಾಮಾ ದಾಳಿಯಿಂದ ಲಾಭ ಆಗಿದ್ದು ಯಾರಿಗೆ: ರಾಹುಲ್ ಗಾಂಧಿ ಪ್ರಶ್ನೆ

    ನವದೆಹಲಿ: ಇಂದು ಇಡೀ ವಿಶ್ವಕ್ಕೆ ಪ್ರೇಮಿಗಳ ದಿನ, ಆದರೆ ಭಾರತಕ್ಕೆ ಮಾತ್ರ ಕರಾಳ ದಿನ. ಕಳೆದ ವರ್ಷ ಪುಲ್ವಾಮಾದಲ್ಲಿ ಉಗ್ರರ ಅಟ್ಟಹಾಸಕ್ಕೆ ಬರೋಬ್ಬರಿ 40 ಮಂದಿ ಸಿಆರ್‌ಪಿಎಫ್‌ ಯೋಧರು ಬಲಿಯಾಗಿದ್ದರು. ಈ ದುರ್ಘಟನೆ ಆಗಿ ಒಂದು ವರ್ಷ ಆಗಿದೆ. ಈ ಕಹಿ ದಿನವನ್ನು ನೆನೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ದಾಳಿಯಿಂದ ಲಾಭವಾಗಿದ್ದು ಯಾರಿಗೆ ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

    ಈ ಕರಾಳ ದಿನದ ಬಗ್ಗೆ ಟ್ವೀಟ್ ಮಾಡಿದ ರಾಹುಲ್ ಗಾಂಧಿ, ನಾವು ಇಂದು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರಯೋಧರಿಗೆ ನಮನ ಸಲ್ಲಿಸುತ್ತಿದ್ದೇವೆ. ಈ ಬಗ್ಗೆ ಕೆಲ ಪ್ರಶ್ನೆಗಳನ್ನು ಕೇಳೋಣ, ಈ ದಾಳಿಯಿಂದ ಯಾರಿಗೆ ಹೆಚ್ಚು ಲಾಭ ಆಯ್ತು? ದಾಳಿಯ ಕುರಿತು ನಡೆಸಿದ ತನಿಖೆಯ ಸತ್ಯಾಂಶ ಏನು? ದಾಳಿಗೆ ಅವಕಾಶ ನೀಡಿದ ಭದ್ರತಾ ವೈಫಲ್ಯಕ್ಕೆ ಬಿಜೆಪಿ ಸರ್ಕಾರದಲ್ಲಿ ಹೊಣೆಗಾರರು ಯಾರು ಎಂದು ಬರೆದು ಪುಲ್ವಾಮಾ ಹುತಾತ್ಮರನ್ನು ಇರಿಸಿದ್ದ ಫೋಟೋವನ್ನು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪುಲ್ವಾಮಾ ಕೇಸ್ – ಎನ್‍ಐಎ ತನಿಖೆ ಎಲ್ಲಿಯವರೆಗೆ ಬಂದಿದೆ? ‘ಕೀ’ ಯಿಂದ ಕೇಸ್ ಓಪನ್ ಆದ ರೋಚಕ ಕಥೆ ಓದಿ

    ಏನಿದು ಪ್ರಕರಣ?
    ಕಳೆದ ವರ್ಷ ಫೆಬ್ರವರಿ 14ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೆಥ್ಪೊರ ಬಳಿಯ ಅವಾಂತಿಪೋರಾ ಹತ್ತಿರ ಆತ್ಮಾಹುತಿ ಬಾಂಬರ್ ವಾಹನದಿಂದ ದಾಳಿ ಮಾಡಲಾಯಿತು. ಜೈಷ್-ಇ-ಮೊಹಮ್ಮದ್ ಸಂಘಟನೆ ಉಗ್ರ ಆದಿಲ್ ಅಹ್ಮದ್ ದಾರ್, ಮಾರುತಿ ಇಕೋ ಕಾರ್ ಮೂಲಕ ಕೇಂದ್ರ ಮೀಸಲು ಪೊಲೀಸ್ ಪಡೆಯ 40 ಸೈನಿಕರಿದ್ದ ವಾಹನದ ಮೇಲೆ ದಾಳಿ ಮಾಡಿದ್ದನು.

    ಘಟನೆಯಲ್ಲಿ 40 ಮಂದಿ ಸೈನಿಕರು ಹುತಾತ್ಮರಾಗಿದ್ದರು. ಇದಕ್ಕೆ ಪ್ರತಿಕಾರ ಎನ್ನುವಂತೆ ಭಾರತೀಯ ವಾಯು ಪಡೆ ಬಾಲಕೋಟ್‍ನಲ್ಲಿ ಜೈಷ್-ಇ-ಮೊಹಮ್ಮದ್ ಸಂಘಟನೆಯ ನೆಲೆಗಳ ಮೇಲೆ ಪ್ರತಿದಾಳಿ ನಡೆಸಿದ್ದೆವು.

    ವ್ಯವಸ್ಥಿತವಾಗಿ ದಾಳಿಗೆ ಸ್ಕೆಚ್ ಹಾಕಿದ್ದ ಆದಿಲ್ ದಾರ್ ಕಾರಿನಲ್ಲಿ 300 ಕೆಜಿ ಗೂ ಹೆಚ್ಚು ಸ್ಫೋಟಕಗಳನ್ನು ತುಂಬಿಕೊಂಡು ಬಸ್ ಮೇಲೆ ದಾಳಿ ಮಾಡಿದ್ದ ಎಂದು ಆರಂಭಿಕ ತನಿಖೆಯಲ್ಲಿ ಗೊತ್ತಾಗಿತ್ತು. ಘಟನೆಯ ಬಳಿಕ ಪ್ರತಿಕಾರದ ದೊಡ್ಡ ಕೂಗೇ ಕೇಳಿ ಬಂದಿತು. ಪಾಕ್ ಆಕ್ರಮಿತ ಕಾಶ್ಮೀರ ದಾಟಿ ಬಾಲಕೋಟ್‍ನಲ್ಲಿ ಏರ್ ಸ್ಟ್ರೈಕ್ ಮಾಡುವ ಮೂಲಕ ಭಾರತೀಯ ಸೇನೆ ಉಗ್ರ ನೆಲೆಗಳನ್ನು ಧ್ವಂಸ ಮಾಡಿತ್ತು. 300ಕ್ಕೂ ಹೆಚ್ಚು ಉಗ್ರರನ್ನು ಹತ್ಯೆಗೈದು ನಮ್ಮ ಯೋಧರ ಸಾವಿಗೆ ಪ್ರತಿಕಾರ ತೀರಿಸಿಕೊಳ್ಳಲಾಗಿದೆ.