Tag: ಪಬ್ಲಿಕ್ ಟಿವಿ Sadananda Gowda

  • ತಳಮಟ್ಟದಿಂದ ಪಕ್ಷವನ್ನು ಬಲ ಪಡಿಸಿದ ಪ್ರಮುಖ ನಾಯಕ – ಡಿವಿಎಸ್‍ಗೆ ಮೋದಿ ಶುಭಾಶಯ

    ತಳಮಟ್ಟದಿಂದ ಪಕ್ಷವನ್ನು ಬಲ ಪಡಿಸಿದ ಪ್ರಮುಖ ನಾಯಕ – ಡಿವಿಎಸ್‍ಗೆ ಮೋದಿ ಶುಭಾಶಯ

    ನವದೆಹಲಿ: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ ಸದಾನಂದ ಗೌಡರವರು ಇಂದು 68 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರ ಸಹೋದ್ಯೋಗಿಗಳು ಟ್ವೀಟ್ ಮಾಡುವ ಮೂಲಕ ಸದಾನಂದ ಗೌಡರಿಗೆ ಶುಭಾಶಯ ತಿಳಿಸಿದ್ದಾರೆ.

    ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರು, ಕೇಂದ್ರ ಸಚಿವ ಶ್ರೀ ಡಿ.ವಿ ಸದಾನಂದ ಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ನೀವು ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವಲ್ಲಿ ಪ್ರಮುಖ ಕಾರ್ಯನಿರ್ವಹಿಸಿದ ಓರ್ವ ಅನುಭವಿ ಪ್ರಭಾವಿ ನಾಯಕ. ರಾಸಾಯನಿಕ ಮತ್ತು ರಸಗೊಬ್ಬರ ಕ್ಷೇತ್ರಗಳ ಬೆಳವಣಿಗೆ ಪ್ರಮುಖ ಪಾತ್ರವಹಿಸಿದವರು. ಅವರ ದೀರ್ಘಕಾಲ ಬಾಳಬೇಕೆಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

    ಕೇಂದ್ರದ ಹಿರಿಯ ಸಚಿವರಾದ ರಾಜನಾಥ್ ಸಿಂಗ್‍ರವರು, ರಾಷ್ಟ್ರ ಮತ್ತು ಪಕ್ಷಕ್ಕೆ ಹಲವಾರು ಸೇವೆ ಸಲ್ಲಿಸಿದ್ದಾರೆ ಮತ್ತು ತಮ್ಮ ಕರ್ತವ್ಯವನ್ನು ಸಂಪೂರ್ಣವಾಗಿ ಅಚ್ಚು-ಕಟ್ಟಿನಿಂದ ನಿರ್ವಹಿಸುತ್ತಾರೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಟ್ವೀಟ್ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ.

    ಮತ್ತೊರ್ವ ಕ್ಯಾಬಿನೆಟ್ ಸಹೋದೋಗ್ಯಿ ಪ್ರಕಾಶ್ ಜಾವಡೇಕರ್, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ ಸದಾನಂದ ಗೌಡರವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮಗೆ ಉತ್ತಮ ಆರೋಗ್ಯ ಹಾಗೂ ದೀರ್ಘಯುಷ್ಯ ದೊರೆಯಲಿ ಎಂದು ಟ್ವೀಟ್ ಮಾಡುವ ಮೂಲಕ ಶುಭಾಶಯ ತಿಳಿಸಿದ್ದಾರೆ.

    ಸದಾನಂದ ಗೌಡರು ಬೆಂಗಳೂರು ಉತ್ತರ ಕ್ಷೇತ್ರದಿಂದ ಗೆದ್ದು ಲೋಕಸಭೆಗೆ ಆಯ್ಕೆ ಆಗಿದ್ದಾರೆ. ಈ ಮುನ್ನ ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಕೂಡ ಕಾರ್ಯನಿರ್ವಹಿಸಿದ್ದರು. ಅಲ್ಲದೆ 2016ರಲ್ಲಿ ಕಾನೂನು ಹಾಗೂ ರೈಲ್ವೇ ಖಾತೆಯ ರಾಜ್ಯ ಸಚಿವರಾಗಿದ್ದರು.