Tag: ಪಬ್ಲಿಕ್ ಟಿವಿ Shashikala Jolle

  • ಪ್ರತಿಭಟನಾಕಾರರಿಗೆ ವಚನದ ಮೂಲಕ ಟಾಂಗ್ ಕೊಟ್ಟ ಶಶಿಕಲಾ ಜೊಲ್ಲೆ

    ಪ್ರತಿಭಟನಾಕಾರರಿಗೆ ವಚನದ ಮೂಲಕ ಟಾಂಗ್ ಕೊಟ್ಟ ಶಶಿಕಲಾ ಜೊಲ್ಲೆ

    ವಿಜಯಪುರ: ಭ್ರಷ್ಟಾಚಾರದ ಆರೋಪ ಹೊರಿಸಿ ತಮ್ಮ ವಿರುದ್ಧ ಪ್ರತಿಭಟನೆ ನಡೆಸಿದ ಮಹಿಳಾ ಸಂಘಟಕರಿಗೆ ಸಚಿವೆ ಶಶಿಕಲಾ ಜೊಲ್ಲೆ ಧ್ವಜಾರೋಹಣ ಭಾಷಣದಲ್ಲಿ ಶರಣೆ ಅಕ್ಕಮಹಾದೇವಿ ವಚನದ ಮೂಲಕ ಟಾಂಗ್ ನೀಡಿದ್ದಾರೆ.

    ಬೆಟ್ಟದಾ ಮೇಲೊಂದು ಮನೆಯ ಮಾಡಿ ಮೃಗಗಳಿಗೆ ಅಂಜದೊಡೆ ಎಂತಯ್ಯ, ಸಮುದ್ರ ತಡಿಯಲ್ಲೊಂದು ಮನೆಯ ಮಾಡಿ ನೆರೆ ತೊರೆಗಳಿಗೆ ಅಂಜಿದೊಡೆ ಎಂತಯ್ಯ, ಸಂತೆಯೊಳಗೊಂದು ಮನೆಯ ಮಾಡಿ ಶಬ್ದಕ್ಕೆ ನಡಚಿದೊಡೆ ಎಂತಯ್ಯ? ಚನ್ನಮಲ್ಲಿಕಾರ್ಜುನ ದೇವ. ಕೆಳಯ್ಯ ಈ ಲೋಕದಲ್ಲಿ ಹುಟ್ಟಿದ ಬಳಿಕ ಸ್ತುತಿ ನಿಂದೆಗಳು ಬಂದರೆ ಮನದಲ್ಲಿ ಕೋಪವ ತಾಳದೇ ಸಮಾಧಾನಿಯಾಗಿರಬೇಕು” ಎಂಬ ವಚನ ಸ್ತುತಿಸಿದರು.

    ನಿಂದನೆ ಸ್ತುತಿ ಬರುತ್ತವೆ. ಶಾಂತಿ ಸಮಾಧಾನದಿಂದ ಎದುರಿಸಿ ತೋರಿಸಬೇಕೆಂದು ಅಕ್ಕನ ವಚನದಿಂದ ಕಲಿತಿದ್ದೇನೆ. ಸುಂಸ್ಕೃತ ಮನೆತನದಲ್ಲಿ ಹುಟ್ಟಿ ಇಂಥ ರಾಜಕೀಯ ಪರಿಸ್ಥಿತಿ ಯಲ್ಲಿ ಎಲ್ಲವನ್ನೂ ಎದುರಿಸಿ ನಿಲ್ಲಬೇಕಿದೆ. ನಾನು ಯಾವುದೇ ತಪ್ಪು ಮಾಡಿಲ್ಲ. ಈ ರೀತಿ ಪ್ರತಿಭಟನೆ ಯಾರು ಮಾಡಿದ್ದಾರೋ ಅವರಿಗೆ ಉತ್ತರ ಕೊಡಲು ಬಯಸುತ್ತೇನೆ, ನಾನು ತಪ್ಪು ಮಾಡಿಲ್ಲ. ಹೀಗಾಗಿ ಯಾವುದೇ ತನಿಖೆಗೆ ಸಿದ್ದ ಎಂದಿದ್ದಾರೆ.

    ಹೆಣ್ಣು ಮಕ್ಕಳಾಗಿ ಈ ರೀತಿ ಇನ್ನೊಂದು ಹೆಣ್ಣು ಮಗುವಿನ ಮನಸ್ಸಿಗೆ ಘಾಸಿ ಮಾಡಬಾರದು ಎಂದು ಶಶಿಕಲಾ ಜೊಲ್ಲೆ ಭಾವುಕರಾದರು. ಅಕ್ಕಮಹಾದೇವಿ ಹಾಗೂ ಡಾ.ಅಂಬೇಡ್ಕರ್ ಅವರ ಮಾರ್ಗದಲ್ಲಿ ನಡೆಯುವೆ. ಒಳ್ಳೆಯ ಕೆಲಸ ಮಾಡಿ ತೋರಿಸುವೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ – ಓರ್ವ ವಿದ್ಯಾರ್ಥಿ ಸಾವು, ಇಬ್ಬರು ಗಂಭೀರ

    ಅಂತಿಮವಾಗಿ “ನಾನೂ ಒಬ್ಬ ವಿಶೇಷ ಮಗುವಿನ ತಾಯಿ, ಮಕ್ಕಳ ನೋವು ನನಗಿಂತ ಹೆಚ್ಚು ಯಾರಿಗೂ ಗೊತ್ತಿರಲು ಸಾಧ್ಯವಿಲ್ಲ. ಹೀಗಾಗಿ ಅಂಥ ಮಕ್ಕಳೊಂದಿಗೆ ನಾನು ಸದಾ ಇರುವೆ ಎಂದು ನುಡಿದಿದ್ದಾರೆ. ಇದನ್ನೂ ಓದಿ:ಸಂಗೊಳ್ಳಿಯ ಸೈನಿಕ ಶಾಲೆಯಲ್ಲಿ ಕೆಚ್ಚೆದೆಯ ರಾಯಣ್ಣನಂತ ಸೈನಿಕರನ್ನು ತಯಾರಿಸುತ್ತೇವೆ: ಕಾರಜೋಳ

  • ಖಾತೆ ತೃಪ್ತಿ ತಂದಿದೆ : ಶಶಿಕಲಾ ಜೊಲ್ಲೆ ಸಹಮತ

    ಖಾತೆ ತೃಪ್ತಿ ತಂದಿದೆ : ಶಶಿಕಲಾ ಜೊಲ್ಲೆ ಸಹಮತ

    ವಿಜಯಪುರ: ನನಗೆ ಖಾತೆ ಬಗ್ಗೆ ಯಾವುದೇ ಅಸಮಾಧಾನ ಇಲ್ಲ. ಯಾವ ಖಾತೆ ಕೊಟ್ಟಿದ್ದಾರೋ ಆ ಖಾತೆಯನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡುವುದು ನನ್ನ ಉದ್ದೇಶ ಎಂದು ಮುಜರಾಯಿ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

    ಇವತ್ತು ಮಹಾಪೂರ ಬರ್ತಿದೆ, ಕೊರೊನಾ ಇದೆ. ಇಂತಹ ಸಂದರ್ಭದಲ್ಲಿ ಅಸಮಾಧಾನ ಪಡುವುದು ಸರಿಯಲ್ಲ. ಕೊಟ್ಟಂತಹ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿ ಜನರ ಸಮಸ್ಯೆಗೆ ಸ್ಪಂದಿಸುತ್ತೇನೆ ಎಂದಿದ್ದಾರೆ. ರಾಜ್ಯ ಹಾಗೂ ಹೊರ ರಾಜ್ಯದ ದೇವಸ್ಥಾನ ಅಭಿವೃದ್ಧಿಗೆ ನಾನು ಬದ್ಧಳಾಗಿದ್ದೇನೆ. ಹೊರ ರಾಜ್ಯ ದೇವಸ್ಥಾನಗಳಿಗೆ ತೆರಳುವ ನಮ್ಮ ರಾಜ್ಯ ಭಕ್ತರಿಗೆ ಎಲ್ಲ ಮೂಲಭೂತ ಸೌಕರ್ಯ ಒದಗಿಸುತ್ತೇವೆ ಎಂದು ಭರವಸೆ ನೀಡಿದರು.

    ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದ ಸಚಿವರಿಗೆ, ಕೆಲಸ ಮಾಡುವವರಿಗೆ ಯಾವ ಖಾತೆ ಇದ್ದರೆ ಏನು, ಕೆಲಸ ಮಾಡುವ ಇಚ್ಛೆ ಇದ್ದು, ಜನರಿಗೆ ಸ್ಪಂದಿಸುವ ಇಚ್ಛೆ ಇದೆ ಅಂದರೆ ಸಾಕು ಎಂದು ಖಾತೆ ಕ್ಯಾತೆ ತೆಗೆದವರಿಗೆ ಟಾಂಗ್ ನೀಡಿದ್ದಾರೆ. ಎಂತಹದೇ ಖಾತೆ ಇದ್ದರೂ ಅದರ ಮುಖಾಂತರ ನಾವು ಕೆಲಸ ಮಾಡಬಹುದು. ಈ ರೀತಿ ಅಸಮಾಧಾನ ಆಗುತ್ತಿರುವುದು ಅವರಿಗೆ ಬಿಟ್ಟ ವಿಷಯ. ಇದು ಬಹಳ ದೊಡ್ಡ ವಿಷಯ ಅಲ್ಲ. ಸ್ವಲ್ಪ ಅಸಮಧಾನ ಇರಬಹುದು. ಅದು ನಿವಾರಣೆ ಆಗುತ್ತೆ. ಅವರವರು ಅವರ ಖಾತೆಯನ್ನು ಮುಂದುವರೆಸುತ್ತಾರೆ ಎಂಬ ವಿಶ್ವಾಸ ಇದೆ. ಇದನ್ನು ನಮ್ಮ ಪಕ್ಷದ ಹಿರಿಯರು ಬಗೆಹರಿಸುತ್ತಾರೆಂಬ ವಿಶ್ವಾಸ ಇದೆ ಎಂದಿದ್ದಾರೆ. ಇದನ್ನೂ ಓದಿ:ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ – ಆರೋಪಿಗೆ ಸ್ಥಳೀಯರಿಂದ ಗೂಸ

  • ಮುಂದುವರಿದ ಶಶಿಕಲಾ ಜೊಲ್ಲೆಯವರ ಮರಾಠಿ ಭಾಷಾ ಪ್ರೇಮ – ಕನ್ನಡಿಗರು ಆಕ್ರೋಶ

    ಮುಂದುವರಿದ ಶಶಿಕಲಾ ಜೊಲ್ಲೆಯವರ ಮರಾಠಿ ಭಾಷಾ ಪ್ರೇಮ – ಕನ್ನಡಿಗರು ಆಕ್ರೋಶ

    -ಕನ್ನಡ ನಿರ್ಲಕ್ಷ್ಯಸಿದ ಸಚಿವರ ವಿರುದ್ದ ಕನ್ನಡಾಭಿಮಾನಿಗಳ ಆಕ್ರೋಶ

    ಚಿಕ್ಕೋಡಿ: ಕರ್ನಾಟಕದ ಸಚಿವೆಯಾಗಿದ್ದರೂ, ತಮ್ಮ ಕ್ಷೇತ್ರದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಅವರು ಮರಾಠಿ ಪ್ರೇಮವನ್ನು ಮತ್ತೆ ಮುಂದುವರೆಸಿದ್ದಾರೆ.

    ನಿಪ್ಪಾಣಿ ಮತಕ್ಷೇತ್ರದ ಸೌಂದಲಗಾ ಗ್ರಾಮದಲ್ಲಿ ಏತ ನೀರಾವರಿ ಉದ್ಘಾಟನೆ ಸಂದರ್ಭದಲ್ಲಿ ಸಂಪೂರ್ಣವಾಗಿ ಮರಾಠಿ ಭಾಷೆಯಲ್ಲಿ ಬ್ಯಾನರ್ ಅಳವಡಿಸಿದ್ದ ಸಮಾರಂಭದಲ್ಲಿ ಶಶಿಕಲಾ ಜೊಲ್ಲೆ ಅವರು ಭಾಗಿಯಾಗುವುದರ ಜೊತೆಗೆ ಮರಾಠಿ ಭಾಷೆಯ ಪ್ರೇಮವನ್ನು ಎತ್ತಿ ತೋರಿಸಿದ್ದಾರೆ.

    ಬೆಳಗಾವಿ ಜಿಲ್ಲೆ ನಿಪ್ಪಾಣಿ ಮತಕ್ಷೇತ್ರದ ಸೌಂದಲಗಾ ಗ್ರಾಮದಲ್ಲಿ ಮಂಜೂರಾದ 1 ಕೋಟಿ 49 ಲಕ್ಷ ರೂ. ಮೊತ್ತದಲ್ಲಿ ದೂಧಗಂಗಾ ನದಿಯಿಂದ ಏತ ನೀರಾವರಿ ಯೋಜನೆಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ್ ಜೊಲ್ಲೆಯವರು ಚಾಲನೆ ನೀಡಿದರು.

    ಈ ಸಂದರ್ಭದಲ್ಲಿ ಏರ್ಪಡಿಸಿದ್ದ ಸಮಾರಂಭ ಸಂಪೂರ್ಣ ಮರಾಠಿಮಯವಾಗಿತ್ತು. ಅಧಿಕಾರ ಅನುಭವಿಸಲು ಕರ್ನಾಟಕ ಬೇಕು, ಆದರೆ ಮರಾಠಿ ವೋಟ್ ಬ್ಯಾಂಕ್ ಗಾಗಿ ಕನ್ನಡವನ್ನು ನಿರ್ಲಕ್ಷಿಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಸಚಿವೆ ಶಶಿಕಲಾ ಜೊಲ್ಲೆ ವಿರುದ್ದ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಮಳೆಯಿಂದ ಮಿನಿ ಮಲೆನಾಡಿನಂತಾದ ಸನ್ ಸಿಟಿ ಕಲಬುರಗಿ

  • ಕೋವಿಡ್‍ನಿಂದ ಅನಾಥವಾದ ಮಕ್ಕಳಿಗೆ ತಿಂಗಳಿಗೆ 3,500ರೂ ವಿತರಣೆ: ಶಶಿಕಲಾ ಜೊಲ್ಲೆ

    ಕೋವಿಡ್‍ನಿಂದ ಅನಾಥವಾದ ಮಕ್ಕಳಿಗೆ ತಿಂಗಳಿಗೆ 3,500ರೂ ವಿತರಣೆ: ಶಶಿಕಲಾ ಜೊಲ್ಲೆ

    – ಜಿಲ್ಲೆಯ 5 ಮಕ್ಕಳು ಸೇರಿದಂತೆ ರಾಜ್ಯದಲ್ಲಿ 32 ಮಕ್ಕಳು ಅನಾಥ

    ಬಾಗಲಕೋಟೆ: ಕೋವಿಡ್ ಎರಡನೇ ಅಲೆಯ ಅಬ್ಬರಕ್ಕೆ ತಂದೆ ತಾಯಿಯನ್ನು ಕಳೆದುಕೊಂಡ ಬಾಗಲಕೋಟೆಯ 5 ಮಕ್ಕಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 32 ಮಕ್ಕಳು ಅನಾಥರಾಗಿದ್ದಾರೆ. ಅಂತಹ ಮಕ್ಕಳಿಗೆ ಮುಖ್ಯಮಂತ್ರಿ ಬಾಲಸೇವಾ ಯೋಜನೆಯಡಿ ಪ್ರತಿ ತಿಂಗಳು 3,500 ನೀಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಇದನ್ನು ಓದಿ:ಯಡಿಯೂರಪ್ಪ ವೇಗಕ್ಕೆ ವಯಸ್ಸು ಅಡ್ಡಿಯಾಗುತ್ತಿಲ್ಲ: ಶಾಸಕ ರಘುಪತಿ ಭಟ್

    ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಮಾಧ್ಯಮದವರೊಂದಿಗೆ ಈ ವಿಷಯ ತಿಳಿಸಿದ ಅವರು, ಕೋವಿಡ್‍ನಿಂದ ಮೃತಪಟ್ಟ ತಂದೆ-ತಾಯಿಯರಿಂದ ತಬ್ಬಲಿಯಾದ ಮಕ್ಕಳಿಗೆ ಸರ್ಕಾರ ಕಾಳಜಿ ವಹಿಸಿದ್ದು, ಬಾಲಸೇವಾ ಯೋಜನೆ ಜಾರಿಗೆ ತಂದಿದೆ. ಅನಾಥರಾದ ಮಕ್ಕಳಿಗೆ ಮುಖ್ಯಮಂತ್ರಿ ಬಾಲಸೇವಾ ಯೋಜನೆಯಡಿ ಪ್ರತಿ ತಿಂಗಳು ಆ ಮಕ್ಕಳಿಗೆ 3,500 ನೀಡಲಾಗುತ್ತಿದೆ. ಎಸ್.ಎಸ್.ಎಲ್.ಸಿವರೆಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ. ಉನ್ನತ ಶಿಕ್ಷಣಕ್ಕೆ ಲ್ಯಾಪ್‍ಟಾಪ್ ಸಹ ನೀಡಲಾಗುತ್ತಿದ್ದು, ಹೆಣ್ಣು ಮಕ್ಕಳಿದ್ದಲ್ಲಿ ಅಂತವರಿಗೆ 21 ವರ್ಷದ ನಂತರ 1 ಲಕ್ಷ ನೀಡಲಾಗುತ್ತಿದೆ ಎಂದಿದ್ದಾರೆ.

    ಅನಾಥ ಮಕ್ಕಳನ್ನು ದತ್ತು ಪ್ರಕ್ರಿಯೆಗೆ ಒಳಪಡಿಸಲಾಗುತ್ತಿದೆ. ದತ್ತು ಪ್ರಕ್ರಿಯೆ ಸರಳೀಕರಣಕ್ಕೆ ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವರು ದಾನಿಗಳು ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾದಲ್ಲಿ ಅವಕಾಶ ನೀಡಲಾಗುತ್ತದೆ. ಜಿಲ್ಲೆಯಲ್ಲಿ 166 ಅಪೌಷ್ಠಿಕ ಮಕ್ಕಳಿದ್ದು, ಅವರಿಗೆ ಚವನಪ್ರಾಶ ನೀಡಲು ಸಲಹೆ ನೀಡಲಾಗಿದೆ. ಮಕ್ಕಳ ಸಹಾಯವಾಣಿ 1098ನ್ನು ಮತ್ತಷ್ಟು ಕ್ರೀಯಾಶೀಲವಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಇದನ್ನು ಓದಿ: ಕೊರೊನಾಗೆ ಹೆದರಿ ಊರು ಬಿಟ್ಟು ಗುಡಿಸಲಲ್ಲಿ ಕುಟುಂಬ ಜೀವನ

    ಕೋವಿಡ್ ಸಂದರ್ಭದಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ 51 ಬಾಲ್ಯವಿವಾಹ ನಡೆಯುತ್ತಿರುವ ಪೈಕಿ 44 ವಿವಾಹ ತಡೆಯಲಾಗಿದೆ. ಅದರಲ್ಲಿ 5 ಎಫ್‍ಐಆರ್ ದಾಖಲಾಗಿವೆ. ಸಂಭವನೀಯ 3ನೇ ಅಲೆಯಿಂದ ಮಕ್ಕಳ ಮೇಲೆ ಪರಿಣಾಮ ಬೀರುವ ಸಂಭವವಿದ್ದು, ಮುಂಜಾಗ್ರತಾ ಕ್ರಮವಾಗಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮೂರು ಬಾರಿ ಸಭೆ ನಡೆಸಲಾಗಿದ್ದು, ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಮಕ್ಕಳ ಕೋವಿಡ್ ಕೇರ್ ಸೆಂಟರ್ ಸ್ಥಾಪನೆಗೆ ಕ್ರಮಕೈಗೊಳ್ಳಲಾಗುತ್ತಿದೆ. ಅಲ್ಲದೇ ಚಿಕಿತ್ಸೆಗೆ ಎಲ್ಲ ರೀತಿಯ ಸಿದ್ಧತೆ ಕೈಗೊಳ್ಳಲಾಗುವುದೆಂದು ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ.

  • ತಂದೆ ತಾಯಿ ಕಳೆದುಕೊಂಡ ಮಕ್ಕಳ ಜೊತೆ ನಾವಿದ್ದೇವೆ: ಶಶಿಕಲಾ ಜೊಲ್ಲೆ

    ತಂದೆ ತಾಯಿ ಕಳೆದುಕೊಂಡ ಮಕ್ಕಳ ಜೊತೆ ನಾವಿದ್ದೇವೆ: ಶಶಿಕಲಾ ಜೊಲ್ಲೆ

    – ಅನಾಥ ಮಕ್ಕಳೊಂದಿಗೆ ಸಂವಾದ ನಡೆಸಿ ಸಾಂತ್ವನ ಹೇಳಿದ ಸಚಿವರು

    ಬೆಂಗಳೂರು: ಕೋವಿಡ್‍ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ದುಃಖದಲ್ಲಿ ಭಾಗಿಯಾಗಿ, ಅವರ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ. ಅಂತಹ ಮಕ್ಕಳೊಂದಿಗೆ ನಾವಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾಗಿರುವ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ. ಇದನ್ನು ಓದಿ:ಗುಡುಗು ಸಹಿತ ಭಾರೀ ಮಳೆಗೆ ರಾಯಚೂರಿನಲ್ಲಿ ಇಬ್ಬರು ದುರ್ಮರಣ

    ಕೋವಿಡ್-19ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳು ಹಾಗೂ ಅವರನ್ನು ಪಾಲನೆ ಮಾಡುತ್ತಿರುವ ಪಾಲಕರ ಜೊತೆಗೆ ಗೂಗಲ್ ಮೀಟ್ ಮೂಲಕ ವೀಡಿಯೊ ಸಂವಾದ ನಡೆಸಿ, ಅವರಿಗೆ ಸಾಂತ್ವನ ಹೇಳಿ, ಆತ್ಮಸ್ಥೈರ್ಯ ತುಂಬಿ, ಅವರ ಮನಸ್ಸಿನ ನೋವು, ಸಮಸ್ಯೆಗಳನ್ನು ಮನಗಂಡು, ಸರ್ಕಾರದಿಂದ ನೀಡಲಾಗುವ ನೆರವಿನ ಕುರಿತು ಮಾಹಿತಿ ನೀಡಿದರು.

    ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಂದೆ ತಾಯಿಗಳನ್ನು ಕಳೆದುಕೊಂಡ 19 ಮಕ್ಕಳ ಜೊತೆಗೆ ಸಚಿವರು ಸುಮಾರು ಮೂರು ಗಂಟೆಗಳ ಕಾಲ ಪ್ರತಿಯೊಬ್ಬ ಮಗುವಿನ ಜೊತೆಗೂ ವೈಯಕ್ತಿಕವಾಗಿ ಚರ್ಚೆ ನಡೆಸಿ, ತಂದೆ ತಾಯಿಗಳನ್ನು ಕಳೆದುಕೊಂಡ ಮಕ್ಕಳ ಪೋಷಕರ ಕಷ್ಟಗಳ ಬಗ್ಗೆ ಮಾಹಿತಿ ಪಡೆದರು. ಇದನ್ನು ಓದಿ:ಆತ್ಮವಿಶ್ವಾಸ, ಧೈರ್ಯವಿದ್ದರೆ ಕೊರೊನಾ ಗೆಲ್ಲಬಹುದು: ಮಾದಯ್ಯ ಸ್ವಾಮಿ

    ಕಷ್ಟದ ಸಂದರ್ಭದಲ್ಲಿ ಧೃತಿಗೆಡದೆ ಜೀವನದ ಸವಾಲುಗಳನ್ನು ಎದುರಿಸಿ ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಿ ಬೆಳೆಯುವಂತೆ ಮಕ್ಕಳಿಗೆ ಸಚಿವರು ಕಿವಿ ಮಾತು ಹೇಳಿದರು. ಈ ಕುರಿತು ಮಾತನಾಡಿರುವ ಸಚಿವರು ಪೋಷಕರನ್ನು ಕಳೆದುಕೊಂಡ ಆ ಮಕ್ಕಳ ನೋವು ಕಂಡು ಮನಸ್ಸು ಭಾರವಾಯಿತು. ಹೀಗಾಗಿ ಇಂತಹ ಮಕ್ಕಳಿಗೆ ಯಾವುದೇ ರೀತಿಯಲ್ಲಿ ಪೋಷಕರು ಇಲ್ಲ ಎಂಬ ಕೊರಗು ಉಂಟಾಗಬಾರದು ಎಂಬ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಿದ್ದೇವೆ. ಈಗಾಗಲೇ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ಬಾಲ ಸೇವಾ ಯೋಜನೆಯನ್ನು ಘೋಷಿಸಿದ್ದಾರೆ. ಸರ್ಕಾರದಿಂದ ಸಿಗಬೇಕಾಗಿದ್ದ ಸೌಲಭ್ಯಗಳನ್ನು ಅತೀ ಶೀಘ್ರದಲ್ಲಿ ನೀಡುತ್ತೇವೆ. ಮುಂದೇನಾದರೂ ಅಗತ್ಯವಿದ್ದಲ್ಲಿ ಅಗತ್ಯ ನೆರವು ನೀಡಲು ಸರ್ಕಾರ ಸದಾ ಸಿದ್ಧವಿದೆ ಎಂದು ಹೇಳಿದರು.

    ಜಾಗೃತಿ ಕಾರ್ಯಕ್ರಮ: ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಬಾಲ ಸೇವಾ ಯೋಜನೆಯ ಬಗ್ಗೆ ಪ್ರತಿ ಗ್ರಾಮ ಮಟ್ಟದಲ್ಲಿಯೂ ಎಲ್ಲರಿಗೂ ತಲುಪುವಂತೆ ಮಾಡಲು ಎಲ್ಲ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸಲಾಗುವುದು. ಸಾಮಾಜಿಕ ಜಾಲತಾಣ ಹಾಗೂ ಇತರ ಮಾಧ್ಯಮಗಳ ಮೂಲಕ ಜನರಿಗೆ ಮಾಹಿತಿ ಒದಗಿಸಲು ತೀರ್ಮಾನಿಸಲಾಗಿದೆ.

    ತಂದೆ ತಾಯಿ ಕಳೆದುಕೊಂಡ ಮಕ್ಕಳಿಗೆ ಘೋಷಣೆ ಮಾಡಿರುವ ಮಾಸಿಕ 3,500 ರೂ. ನೀಡುವುದು. 10 ವರ್ಷದ ಒಳಗಿನ ಮಕ್ಕಳ ಶಿಕ್ಷಣಕ್ಕೆ ಸರ್ಕಾರಿ ವಸತಿ ಶಾಲೆಗಳಲ್ಲಿ ವ್ಯವಸ್ಥೆ ಕಲ್ಪಿಸುವುದು ಹಾಗೂ 21 ವರ್ಷ ಪೂರೈಸಿರುವ ತಂದೆ ತಾಯಿಗಳನ್ನು ಕಳೆದುಕೊಂಡ ಹೆಣ್ಣು ಮಕ್ಕಳಿಗೆ 1 ಲಕ್ಷ ರೂ. ಸಹಾಯಧನವನ್ನು ನೇರವಾಗಿ ಅವರ ಅಕೌಂಟ್‍ಗೆ ತಲುಪಿಸಲು ಇಲಾಖೆಯಿಂದ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಯೋಜನೆ ಅನುಷ್ಠಾನದಲ್ಲಿ ಯಾವುದೇ ರೀತಿಯ ಮಧ್ಯವರ್ತಿಗಳ ಹಾವಳಿಯಾಗದಂತೆ ಕ್ರಮ ವಹಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಇದನ್ನು ಓದಿ:ಕೋಣಗಳು ಕಾದಾಡಿದ್ದಕ್ಕೆ ಬಡಿದಾಡಿಕೊಂಡ ಮಾಲೀಕರು – ಆಸ್ಪತ್ರೆಗೆ ದಾಖಲು

    ಈ ಸಂದರ್ಭದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕಿ ಪಲ್ಲವಿ ಆಕೃತಿ, ನೋಡಲ್ ಅಧಿಕಾರಿಗಳಾದ ಮೋಹನರಾಜ, ವಿವಿಧ ಜಿಲ್ಲೆಗಳ ಡಿ.ಸಿ.ಪಿ.ಓ. ಹಾಗೂ ಸಿ.ಡಿ.ಪಿ.ಓ ಅಧಿಕಾರಿಗಳು ಹಾಜರಿದ್ದರು.

  • ಪ್ರತಿ ಜಿಲ್ಲೆಯಲ್ಲೂ ಚಿಕ್ಕ ಮಕ್ಕಳ ಕೋವಿಡ್ ಕೇರ್ ಸ್ಥಾಪನೆಗೆ ನಿರ್ಧಾರ: ಶಶಿಕಲಾ ಜೊಲ್ಲೆ

    ಪ್ರತಿ ಜಿಲ್ಲೆಯಲ್ಲೂ ಚಿಕ್ಕ ಮಕ್ಕಳ ಕೋವಿಡ್ ಕೇರ್ ಸ್ಥಾಪನೆಗೆ ನಿರ್ಧಾರ: ಶಶಿಕಲಾ ಜೊಲ್ಲೆ

    – ಇನ್ನೂ ಒಂದು ವಾರಗಳ ಕಾಲ ಕಠಿಣ ಲಾಕ್ ಡೌನ್ ಮಾಡಬೇಕು

    ಚಿಕ್ಕೋಡಿ: ಕೊರೊನಾ ಎರಡನೇ ಅಲೆಯ ನಡುವೆ ಚಿಕ್ಕ ಮಕ್ಕಳಿಗೂ ಮಹಾಮಾರಿ ಹಬ್ಬುವ ಭೀತಿ ಹಿನ್ನೆಲೆಯಲ್ಲಿ ರಾಜ್ಯದ 30 ಜಿಲ್ಲೆಗಳಲ್ಲೂ ಮಕ್ಕಳಿಗೆ ಕೋವಿಡ್ ಕೇರ್ ಸೆಂಟರ್ ತೆರೆಯಲು ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

    ಚಿಕ್ಕೋಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರನೇ ಅಲೆಯಲ್ಲಿ ಮಕ್ಕಳಿಗೆ ಕೊರೊನಾ ಹರಡಬಹುದು ಎಂಬ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿದೆ. ಹೀಗಾಗಿ ಮಕ್ಕಳ ಕೊವಿಡ್ ಕೇರ್ ಸೆಂಟರ್ ನಿರ್ಮಾಣಕ್ಕಾಗಿ ಮೊರಾರ್ಜಿ ದೇಸಾಯಿ ಹಾಗೂ ಕಿತ್ತೂರು ಚೆನ್ನಮ್ಮ ಶಾಲೆಗಳನ್ನು ಗುರುತಿಸಲಾಗಿದೆ. ನಮ್ಮ ಇಲಾಖೆಯ ವಿಶೇಷ ಮಕ್ಕಳ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಮಾಡಲು ನಿರ್ಧರಿಸಲಾಗಿದೆ. ಸರ್ಕಾರದ ವತಿಯಿಂದ ಈಗಾಗಲೇ ಅಧಿಕಾರಿ ಮೋಹನರಾಜ್ ಅವರನ್ನು ನೋಡಲ್ ಅಧಿಕಾರಿಯಾಗಿ ಸಹ ಈ ಕಾರ್ಯಕ್ಕೆ ನೇಮಿಸಲಾಗಿದೆ ಎಂದರು.

    ಮಂಡ್ಯ ಮತ್ತು ಚಾಮರಾಜನಗರದಲ್ಲಿ ತಂದೆ ತಾಯಿಗೆ ಪಾಸಿಟಿವ್ ಬಂದು ತೀರಿ ಹೋಗಿದ್ದಾರೆ. ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಈ ಇಬ್ಬರೂ ಮಕ್ಕಳ ಮುಂದಿನ ಭವಿಷ್ಯದ ಹಿತದೃಷ್ಟಿಯಿಂದ ಏನು ಮಾಡಬೇಕು ಎಂದು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ. ಆ ಮಕ್ಕಳ ಪಾಲನೆ ಪೋಷಣೆ ಮಾಡುವ ನಿಟ್ಟಿನಲ್ಲಿ ಸರ್ಕಾರದಿಂದ ಎಲ್ಲ ಸೌಕರ್ಯ ಮಾಡಲಾಗುವುದು. ಶಾಶ್ವತಗಾಗಿ ಆ ಮಕ್ಕಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ನಾನು ಸಹ ಮುಖ್ಯಮಂತ್ರಿಗಳ ಬಳಿ ಮಾತನಾಡಿದ್ದೇನೆ. ಇದಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದನೆಯನ್ನ ನೀಡಿದ್ದಾರೆ ಎಂದು ಹೇಳಿದರು.

    ಆ ಮಕ್ಕಳನ್ನ ನೋಡಲು ಯಾರಾದರೂ ಮುಂದೆ ಬಂದರೆ ಸರ್ಕಾರದ ವತಿಯಿಂದ ಅವರಿಗೆ ನಾವು ಎಲ್ಲ ನೆರವು ನೀಡುತ್ತೇವೆ ಎಂದ ಅವರು ಮಕ್ಕಳ ದತ್ತು ವಿಚಾರದಲ್ಲಿ ವಾಟ್ಸಪ್ ಮತ್ತು ಫೇಸ್ಬುಕ್ ನಲ್ಲಿ ಕೆಲವು ಫೇಕ್ ಸುದ್ದಿಗಳು ಹರಿದಾಡುತ್ತಿವೆ. ಮಕ್ಕಳ ದತ್ತು ವಿಚಾರವಾಗಿ ಕೆಲವು ಫೇಕ್ ನಂಬರ್ ಹರಿಬಿಡಲಾಗಿದೆ. ಅಂಥ ನಂಬರ್‍ಗಳಿಗೆ ಕರೆ ಮಾಡಿ ಯಾರೂ ಸಹ ಮೋಸ ಹೋಗಬಾರದು. ಇಲಾಖೆಯ ಅಧಿಕೃತ ಹೆಲ್ಪ್ ಲೈನ್ 1098 ಗೆ ಕರೆ ಮಾಡಿ ಹೇಳಿ ಎಂದು ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಇನ್ನೂ ಒಂದು ವಾರಗಳ ಕಾಲ ಕಠಿಣ ಲಾಕ್ ಡೌನ್ ಜಾರಿ ಮಾಡಬೇಕಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆಯವರು ಒತ್ತಾಯಿಸಿದ್ದಾರೆ.