Tag: ಪಬ್ಲಿಕ್ ಟಿವಿ Shivaram Hebbar

  • ಮಾಜಿ ಸಚಿವ ಶಿವರಾಂ ಹೆಬ್ಬಾರ್ ಕಾರು ಅಪಘಾತ

    ಮಾಜಿ ಸಚಿವ ಶಿವರಾಂ ಹೆಬ್ಬಾರ್ ಕಾರು ಅಪಘಾತ

    ಹುಬ್ಬಳ್ಳಿ: ವಿಮಾನ ನಿಲ್ದಾಣದ ಬಳಿ ಮಾಜಿ ಸಚಿವ ಶಿವರಾಂ ಹೆಬ್ಬಾರ್ ಅವರ ಕಾರು ಅಪಘಾತವಾಗಿದೆ.

    ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಿಎಂ ಹೊರ ಹೋಗುತ್ತಿದ್ದಾಗ ಈ ಘಟನೆ ನಡೆದಿದ್ದು, ಸಿಎಂ ಬೆಂಗಾವಲು ವಾಹನಕ್ಕೆ ಮಾಜಿ ಸಚಿವರ ಕಾರು ಗುದ್ದಿದೆ.

    ಘಟನೆ ವೇಳೆ ಮಾಜಿ ಸಚಿವ ಶಿವರಾಂ ಹೆಬ್ಬಾರ್, ಸಿಎಂ ಕಾರಿನಲ್ಲಿಯೇ ಇದ್ದರು. ಅಪಘಾತ ಸಮಯದಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಿಎಂ ಕಾರು ಹಿಂಬಾಲಿಸುವ ಭರದಲ್ಲಿ ಅಪಘಾತ ನಡೆದಿದೆ. ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಇದನ್ನೂ ಓದಿ: ನನ್ನ ಪ್ರೀತಿಯ ಊರು ಹುಬ್ಬಳ್ಳಿ : ಸಿಎಂ ಬೊಮ್ಮಾಯಿ

  • ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಕಾರವಾರ: ನಾಳೆ ಆಧಾರ ರಹಿತ ಎಂದು ಘೋಷಣೆ ಆದ ಮೇಲೆ ಹೋದ ಮಾನ ಮತ್ತೆ ಬರಲು ಸಾಧ್ಯವಿಲ್ಲ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ ಎಂದು ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

    ಮಾಜಿ ಸಚಿವರೊಬ್ಬರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರಸಿಯಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಇದೊಂದು ರಾಜಕೀಯ ಷಡ್ಯಂತ್ರ ಮುನ್ನೆಚ್ಚರಿಕೆ ಕ್ರಮವಾಗಿ ಈ ಕ್ರಮ ಕೈಗೊಂಡಿದ್ದೇವೆ. ನಾಳೆ ಆಧಾರ ರಹಿತ ಎಂದು ಘೋಷಣೆ ಆದ ಮೇಲೆ ಹೋದ ಮಾನ ಮತ್ತೆ ಬರಲು ಸಾಧ್ಯವಿಲ್ಲ. ಏನು ಬೇಕಾದರೂ ಸಹಿಸಿಕೊಳ್ಳಲು ಸಿದ್ಧವಿದ್ದೇವೆ. ಸೋಲನ್ನು ಸಹಿಸಿಕೊಂಡಿದ್ದೇವೆ. ಈ ರೀತಿಯ ನೈತಿಕ ಅಧಃಪತನವನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲ ಎಂದು ಹೇಳಿದ್ದಾರೆ.

    ಹಳೆ ಸರ್ಕಾರವನ್ನು ತೆಗೆದು ಹೊಸ ಸರ್ಕಾರ ಬರಲು ಯಾರು ಕಾರಣರಾದರು ಅವರನ್ನೇ ಟಾರ್ಗೆಟ್ ಮಾಡಿದ್ದಾರೆ ಎಂಬ ಅನೇಕ ಮಾಹಿತಿಯಿಂದ ತಿಳಿದುಕೊಂಡು ನಾವು ಈ ಸಿದ್ಧತೆ ಮಾಡಿಕೊಂಡಿದ್ದೇವೆ. ಒಬ್ಬ ವ್ಯಕ್ತಿಯ ಮಾನವೀಯತೆಯನ್ನ, ಗೌರವವನ್ನ ಈ ರೀತಿ ಹರಾಜು ಮಾಡುವುದು ಯಾವ ಪಕ್ಷಕ್ಕೂ ಶೋಭೆ ತರುವುದಿಲ್ಲ. ಇದನ್ನು ಪ್ರಸಾರ ಮಾಡುವ ಮಾಧ್ಯಮಕ್ಕೂ ಶೋಭೆ ತರತಕ್ಕದ್ದಲ್ಲ ಎಂದು ಕಿಡಿಕಾರಿದರು.