Tag: ಪಬ್ಲಿಕ್ ಟಿವಿ Shivmogga

  • ಗಾಂಜಾ ಮಾರಾಟಗಾರರ ಪರೇಡ್ – ಆರೋಪಿಗಳಿಗೆ ಎಸ್‍ಪಿ ಶಾಂತರಾಜ್ ಖಡಕ್ ವಾರ್ನಿಂಗ್

    ಗಾಂಜಾ ಮಾರಾಟಗಾರರ ಪರೇಡ್ – ಆರೋಪಿಗಳಿಗೆ ಎಸ್‍ಪಿ ಶಾಂತರಾಜ್ ಖಡಕ್ ವಾರ್ನಿಂಗ್

    ಶಿವಮೊಗ್ಗ: ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ಇಂದು ವಿವಿಧ ಠಾಣೆಗಳಲ್ಲಿ ಗಾಂಜಾ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳ ಪರೇಡ್ ನಡೆಸಲಾಯಿತು.

    ಪರೇಡ್ ನಲ್ಲಿ ಸುಮಾರು 89 ಆರೋಪಿಗಳು ಭಾಗವಹಿಸಿದ್ದರು. ಈ ಎಲ್ಲಾ ಆರೋಪಿಗಳು ನ್ಯಾಯಾಲಯದಿಂದ ಜಾಮೀನು ಪಡೆದು ಹೊರಗಡೆ ಇದ್ದಾರೆ. ಇನ್ನಾದರೂ ಇವರು ಸನ್ನಡತೆಯನ್ನು ಸರಿಪಡಿಸಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಮತ್ತೆ ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ಪರೇಡ್ ನಲ್ಲಿ ಆರೋಪಿಗಳಿಗೆ ಎಸ್ ಪಿ ಶಾಂತರಾಜ್ ಖಡಕ್ ಎಚ್ಚರಿಕೆ ನೀಡಿದರು.

    ಜಾಮೀನಿನ ಮೇಲೆ ಹೊರಗೆ ಬಂದವರು ಉದ್ದಿಮೆ ಮಾಡುತ್ತಿರುವುದಾಗಿ ಹೇಳುತ್ತಿದ್ದಾರೆ. ನಿಮ್ಮ ಆರ್ಥಿಕ ಆದಾಯಕ್ಕೂ, ನಿಮ್ಮ ಜೀವನ ಶೈಲಿಗೂ ಮ್ಯಾಚ್ ಆಗಬೇಕು. ಒಂದು ವೇಳೆ ಮ್ಯಾಚ್ ಆಗದಿದ್ದರೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು. ನಿಮ್ಮ ಆದಾಯದ ಕುರಿತು ನಿಮ್ಮ ಠಾಣಾ ವ್ಯಾಪ್ತಿಯಲ್ಲಿ ತಿಳಿಸಬೇಕು ಎಂದು ಸೂಚಿಸಿದರು.

    ನಿಮ್ಮ ಮನೆಗಳಿಗೆ ಬಂದು ತಪಾಸಣೆ ಮಾಡಲಾಗುವುದು. ನಿಮ್ಮ ಮನೆಯಲ್ಲಿ ಗಾಂಜಾ ಇಡದಿದ್ದರೂ ಬೇರೆಡೆ ಇಟ್ಟಿರುವುದು ತಿಳಿದು ಬಂದರೆ ಅದಕ್ಕೆ ನೀವು ನೇರ ಹೊಣೆಯಾಗಲಿದ್ದೀರಿ ವಾರ್ನಿಂಗ್ ನೀಡಿದರು.

    ಇಂದು ಗಾಂಜಾ ಆರೋಪಿಗಳನ್ನು ಕರೆಯಿಸಿರುವ ಉದ್ದೇಶ ನಿಮ್ಮ ನಡೆತೆಯನ್ನು ತಿದ್ದಿಕೊಂಡು ಪ್ರಕರಣಗಳಿಂದ ದೂರ ಇರಬೇಕು. ಸನ್ನಡತೆ ಸರಿಪಡಿಸಿ ಕೊಳ್ಳದಿದ್ದರೆ ಜಾಮೀನು ರದ್ದು ಮಾಡಲು ನ್ಯಾಯಾಲಯಕ್ಕೆ ಮನವಿ ಮಾಡಿಕೊಳ್ಳಲಾಗುವುದು. ನಮ್ಮ ಬಳಿ ವ್ಯಾಪಾರ ಮಾಡುತ್ತಿದ್ದೇನೆ ಎಂದು ಪೋಸ್ ನೀಡಿ ಗಾಂಜಾ ಮಾರಾಟ ಸಾಗಾಣಿಕೆಯಲ್ಲಿ ತೊಡಗಿದರೆ ಮುಂದೆ ಕಷ್ಟ ಅನುಭವಿಸುತ್ತೀರಿ ಎಂದು ಎಚ್ಚರಿಸಿದರು.

  • ಸಭೆಗೆ ಕಳಪೆ ವಸ್ತು ತಂದು ಮೆಸ್ಕಾಂ ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಚಿವ ಈಶ್ವರಪ್ಪ

    ಸಭೆಗೆ ಕಳಪೆ ವಸ್ತು ತಂದು ಮೆಸ್ಕಾಂ ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಚಿವ ಈಶ್ವರಪ್ಪ

    ಶಿವಮೊಗ್ಗ: ನಿರಂತರ ಜ್ಯೋತಿ ವಿದ್ಯುತ್ ಕಾಮಗಾರಿಯಲ್ಲಿ ನಡೆದಿರುವ ಕಳಪೆ ಕಾಮಗಾರಿ ಕುರಿತಂತೆ ಮೆಸ್ಕಾಂ ಅಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಇಂದು ತರಾಟೆಗೆ ತೆಗೆದುಕೊಂಡಿದ್ದಾರೆ.

    ಜಿಲ್ಲಾಧಿಕಾರಿಗಳ ಕಛೇರಿ ಸಂಭಾಗಣಕ್ಕೆ ಕಾಮಗಾರಿಯಲ್ಲಿ ಅಳವಡಿಸಿರುವ ಕಳಪೆ ವಸ್ತುಗಳ ಜೊತೆಗೆ ಸಭೆಗೆ ಆಗಮಿಸಿದ ಸಚಿವ ಈಶ್ವರಪ್ಪನವರು, ಯೋಜನೆಯಡಿ ಅಳವಡಿಸಿರುವ ಕಳಪೆ ವಸ್ತುಗಳನ್ನು ಅಧಿಕಾರಿಗಳ ಎದುರು ಪ್ರದರ್ಶಿಸಿ ಅಧಿಕಾರಿಗಳಿಗೆ ಫುಲ್ ಕ್ಲಾಸ್ ಮಾಡಿದ್ದಾರೆ.

    ನಿರಂತರ ಯೋಜನೆಯಡಿ ಕಳಪೆ ಕಾಮಗಾರಿ ನಡೆದಿದೆ ಎಂಬುದನ್ನು ನಾನು ಸಾಕ್ಷಿ ಸಮೇತ ನಿಮ್ಮ ಮುಂದೆ ಇಟ್ಟಿದ್ದೇನೆ. ಗುತ್ತಿಗೆದಾರ ಕಳಪೆ ವಸ್ತುಗಳನ್ನು ಬಳಸುವಾಗ ನೀವೆಲ್ಲಾ ಏನು ಮಾಡುತ್ತಿದ್ದೀರಿ? ಕಣ್ಣು ಮುಚ್ಚಿಕೊಂಡು ಕುಳಿತಿದ್ರಾ ಎಂದು ಪ್ರಶ್ನಿಸಿದ್ದಾರೆ. ಸರ್ಕಾರ ಸಾವಿರಾರು ಕೋಟಿ ವೆಚ್ಚ ಮಾಡಿ ಕಾಮಗಾರಿ ನಡೆಸುತ್ತಿದೆ. ಕಾಮಗಾರಿ ನಡೆಯುತ್ತಿದೆ ಎಂದ ಮೇಲೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕಾದವರು ಯಾರು? ಇದನ್ನೆಲ್ಲಾ ಗಮನಿಸುವುದು ನಿಮ್ಮ ಕರ್ತವ್ಯ ತಾನೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

    ಗುತ್ತಿಗೆದಾರ ಟೆಂಡರ್‍ನಲ್ಲಿ ಉಲ್ಲೇಖಿಸಿರುವ ಸಾಮಾಗ್ರಿಗಳನ್ನು ಕಾಮಗಾರಿಯಲ್ಲಿ ಬಳಸಿಲ್ಲ. ಅದರಲ್ಲೂ ಸಾಮಾಗ್ರಿಗಳನ್ನು ಹಾಕದೇ ಬಿಲ್ ಕೂಡಾ ಮಾಡಿಸಿಕೊಂಡಿದ್ದಾನೆ. ಈ ಬಗ್ಗೆ ಆತನನ್ನು ಯಾರು ಪ್ರಶ್ನೆ ಮಾಡಬೇಕು. ನೀವು ಸರಿಯಿದ್ದರೆ ಇದೆಲ್ಲಾ ನಡೆಯಲು ಹೇಗೆ ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಜಿಲ್ಲಾಧಿಕಾರಿ ಅವರು ಈ ಕಾಮಗಾರಿಯನ್ನು ಕೂಡಲೇ ಪರಿಶೀಲಿಸಿ, ತನಿಖೆ ನಡೆಸಿ 15 ದಿನಗಳೊಳಗೆ ವರದಿ ನೀಡಬೇಕು. ಈ ಕಾಮಗಾರಿ ನಡೆಸಿರುವ ಗುತ್ತಿಗೆದಾರ ಎಲ್ಲೆಲ್ಲಿ ಕಾಮಗಾರಿ ನಡೆಸಿದ್ದಾನೆ ಎಂಬುದನ್ನು ತನಿಖೆ ನಡೆಸಿ ವರದಿ ನೀಡುವಂತೆ ಸಚಿವ ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

  • ಅಪರಿಚಿತ ವ್ಯಕ್ತಿಗಳಿಂದ ಯುವಕರ ಮೇಲೆ ಚಾಕು ಇರಿತ

    ಅಪರಿಚಿತ ವ್ಯಕ್ತಿಗಳಿಂದ ಯುವಕರ ಮೇಲೆ ಚಾಕು ಇರಿತ

    ಶಿವಮೊಗ್ಗ: ಯುವಕರಿಬ್ಬರಿಗೆ ಅಪರಿಚಿತ ವ್ಯಕ್ತಿಗಳು ಚಾಕು ಇರಿದಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

    ಶಿವಮೊಗ್ಗ ನಗರದ ಸೀಗೆಹಳ್ಳಿ ಬಳಿ ರಾತ್ರಿ ಬಾರ್ ಮುಂದೆ ನಿಂತಿದ್ದ ಯುವಕರ ಮೇಲೆ ನಾಲ್ವರು ಅಪರಿಚಿತ ವ್ಯಕ್ತಿಗಳು ದಾಳಿ ನಡೆಸಿ ಚಾಕುವಿನಿಂದ ಇರಿದ್ದಾರೆ. ದಾಳಿಗೊಳಗಾದ ಯುವಕರನ್ನು ಜೀವನ್(28) ಮತ್ತು ಕೇಶವ (28) ಎಂದು ಗುರುತಿಸಲಾಗಿದೆ.

    ಘಟನೆಯಲ್ಲಿ ಜೀವನ್ ಮೃತಪಟ್ಟಿದ್ದು, ಕೇಶವ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಕೇಶವ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಘಟನೆ ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ಕ್ರಷರ್ ದುರಂತಕ್ಕೂ ರಾಜಕೀಯಕ್ಕೂ ಇದ್ಯಾ ನಂಟು? – ಜೆಡಿಎಸ್ ಮುಖಂಡ ನರಸಿಂಹ ಪೊಲೀಸರ ವಶಕ್ಕೆ

    ಕ್ರಷರ್ ದುರಂತಕ್ಕೂ ರಾಜಕೀಯಕ್ಕೂ ಇದ್ಯಾ ನಂಟು? – ಜೆಡಿಎಸ್ ಮುಖಂಡ ನರಸಿಂಹ ಪೊಲೀಸರ ವಶಕ್ಕೆ

    ಶಿವಮೊಗ್ಗ: ಜಿಲ್ಲೆಯ ಹುಣಸೋಡು ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಕ್ರಷರ್ ದುರಂತಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಜೆಡಿಎಸ್ ಮುಖಂಡ ನರಸಿಂಹರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ನಿನ್ನೆ ರಾತ್ರಿ ಹುಣಸೋಡು ಗ್ರಾಮದಲ್ಲಿ ಒಂದು ಲಾರಿಯಲ್ಲಿ ತಂದಿಟ್ಟುಕೊಂಡಿದ್ದ ಸುಮಾರು 50 ಡಬ್ಬಗಳಲ್ಲಿದ್ದ ಜಿಲೆಟಿನ್ ಕಡ್ಡಿಗಳು ಸ್ಫೋಟಗೊಂಡು ಕಾರ್ಮಿಕರು ಮೃತಪಟ್ಟಿದ್ದಾರೆ. ಈ ಅವಘಡಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದು, ಇದೀಗ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಜೆಡಿಎಸ್ ಮುಖಂಡ ನರಸಿಂಹ ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಗಣಿಗಾರಿಕೆಯಲ್ಲಿ ನರಸಿಂಹರವರ ಪಾಲುದಾರಕೆ ಇದೆಯಾ ಎಂಬುದರ ಕುರಿತು ವಿಚಾರಣೆ ನಡೆಸುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದ್ದರೆ ಶಿವಮೊಗ್ಗ ಕ್ರಷರ್ ದುರಂತಕ್ಕೂ ರಾಜಕೀಯಕ್ಕೂ ನಂಟು ಇದೆಯಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

    ಅಲ್ಲದೆ ದುರಂತಕ್ಕೆ ಸಂಬಂಧಿಸಿದಂತೆ ಕ್ರಷರ್ ಮಾಲೀಕ ಸುಧಾಕರ್ ನನ್ನು ಪೊಲೀಸರು ಈಗಾಗಲೇ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಗಣಿಗಾರಿಕೆಗೆ ಭೂಮಿ ಕೊಟ್ಟಿರುವ ಅನಿಲ್ ಕುಲಕರ್ಣಿಯನ್ನು ಕೂಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಗುರುವಾರ ರಾತ್ರಿ ನಡೆದ ಸುಮಾರು 15 ಮಂದಿ ಮೃತ ಪಟ್ಟಿದ್ದು, ದುರಂತದಲ್ಲಿ ಕಾರ್ಮಿಕರ ದೇಹಗಳು ಛಿದ್ರಛಿದ್ರವಾಗಿದೆ. ಅವರಲ್ಲಿ ಬೆಳಗ್ಗೆ 7 ಮಂದಿಯ ಶವವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಕುರಿತಂತೆ ಪೊಲೀಸರು ಹೆಚ್ಚಿನ ತನಿಖೆಯಲ್ಲಿ ಕಾರ್ಯನಿರತರಾಗಿದ್ದಾರೆ.

  • ಪೋಕ್ಸೋ ಅಡಿ ಕೇಸ್ ದಾಖಲಾಗುತ್ತಿರುವುದು ವಿಷಾದದ ಸಂಗತಿ : ನ್ಯಾ. ಜಯಂತ್ ಕುಮಾರ್

    ಪೋಕ್ಸೋ ಅಡಿ ಕೇಸ್ ದಾಖಲಾಗುತ್ತಿರುವುದು ವಿಷಾದದ ಸಂಗತಿ : ನ್ಯಾ. ಜಯಂತ್ ಕುಮಾರ್

    ಶಿವಮೊಗ್ಗ: ಪೋಕ್ಸೋ ಕಾಯ್ದೆಯಡಿಯಲ್ಲಿ ಜಿಲ್ಲೆಯಲ್ಲಿ 300ಕ್ಕೂ ಹೆಚ್ಚಿನ ಪ್ರಕರಣಗಳು ದಾಖಲಾಗಿರುವುದು ವಿಷಾದದ ಸಂಗತಿ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಜಯಂತ್ ಕುಮಾರ್ ಹೇಳಿದ್ದಾರೆ.

    ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಯುವ ದಿನದ ಅಂಗವಾಗಿ ನಗರದ ಡಿ.ವಿ.ಎಸ್.ಶಾಲಾ ಸಭಾಂಗಣದಲ್ಲಿ ಪೋಕ್ಸೊ ಕಾಯ್ದೆ, ಕಳ್ಳಸಾಗಾಣೆ ಮತ್ತು ಲೈಂಗಿಕ ಶೋಷಣೆಗೆ ಒಳಗಾದವರು ಎಂಬ ವಿಷಯ ಕುರಿತು ಏರ್ಪಡಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ವೇಗವಾಗಿ ಬೆಳೆಯುತ್ತಿರುವ ಇಂದಿನ ಯುಗಕ್ಕೆ ಪೂರಕವಾಗಿ ಬಳಕೆಯಲ್ಲಿರುವ ಮೊಬೈಲ್‍ಗಳನ್ನು ವಿದ್ಯಾರ್ಥಿಗಳು ತಮ್ಮ ಉತ್ತಮ ಕೆಲಸಗಳಿಗಾಗಿ ಬಳಸಿಕೊಳ್ಳುವಂತೆ ಸೂಚಿಸಿದ ನ್ಯಾಯಾಧೀಶರು ನಮ್ಮ ರಕ್ಷಣೆ ನಮ್ಮ ಕೈಯಲ್ಲಿದೆ. ವಿದ್ಯಾರ್ಥಿಗಳಾದವರು ಸತ್ಯ ನುಡಿಯುವುದನ್ನೇ ರೂಢಿಸಿಕೊಳ್ಳಬೇಕು. ಶಾಲೆಗಳು ಮಾಹಿತಿ ಕೇಂದ್ರಗಳು. ಆದರೆ ವಿದ್ಯಾರ್ಥಿಗಳು ಈ ಕಲಿಕಾವಧಿಯಲ್ಲಿ ದೊರೆಯುವ ಅಮೂಲ್ಯ ಅನುಭವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

    ಜ್ಞಾನಾರ್ಜನೆಗಾಗಿ ಶಾಲೆಗೆ ಬರುವ ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥವಾಗಿ ಕಳೆಯದೇ ಸದ್ಬಳಕೆ ಮಾಡಿಕೊಳ್ಳಬೇಕು. ಈ ಅವಧಿಯಲ್ಲಿ ಮಾಡುವ ಒಂದು ಸಣ್ಣ ತಪ್ಪು ಕೂಡ ಜೀವಿತದ ಕೊನೆಯ ಅವಧಿಯವರೆಗೆ ಕಪ್ಪುಚುಕ್ಕೆಯಾಗಿ ಉಳಿಯಲಿದೆ. ಮಾತ್ರವಲ್ಲದೇ ಅದು ಕಂಟಕ ಪ್ರಾಯವೂ ಆಗಬಹುದು. ಆದ್ದರಿಂದ ವಿದ್ಯಾರ್ಥಿಗಳು ಇಡುವ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆ ವಹಿಸಬೇಕಿದೆ ಎಂದರು.

    ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಕ್ಕೆ ಪೋಕ್ಸೋ ಕಾಯ್ದೆಯಡಿ ಕಠಿಣ ಶಿಕ್ಷೆ ಇದೆ. ಕೆಲವೊಮ್ಮೆ ಜೀವಾವಧಿಯೂ ಆಗಬಹುದು. ಪ್ರತಿ ವಿದ್ಯಾರ್ಥಿಗಳು ಸ್ವರಕ್ಷಣೆಗಾಗಿ ಅಲ್ಪ ಪ್ರಮಾಣದ ಕಾನೂನು ತಿಳಿದುಕೊಂಡಿರುವುದು ಇಂದಿನ ತುರ್ತು ಅಗತ್ಯ ಎಂದರು.

    ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಂ.ರಮೇಶ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್.ಸರಸ್ವತಿ, ಬಿ.ಇ.ಒ. ಪಿ.ನಾಗರಾಜ್, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎನ್.ದೇವೇಂದ್ರಪ್ಪ, ಡಿ.ವಿ.ಎಸ್. ಕಾಲೇಜಿನ ಪ್ರಾಂಶುಪಾಲ ಶೇಷಗಿರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

  • ನಿರಂತರ ಜ್ಯೋತಿ ಯೋಜನೆಂಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ – ಅಧಿಕಾರಿಗಳಿಗೆ ಈಶ್ವರಪ್ಪ ಕ್ಲಾಸ್

    ನಿರಂತರ ಜ್ಯೋತಿ ಯೋಜನೆಂಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ – ಅಧಿಕಾರಿಗಳಿಗೆ ಈಶ್ವರಪ್ಪ ಕ್ಲಾಸ್

    ಶಿವಮೊಗ್ಗ: ಜಿಲ್ಲೆಯಲ್ಲಿ ನಡೆಯುತ್ತಿರುವ ನಿರಂತರ ಜ್ಯೋತಿ ಯೋಜನೆಯ ವಿದ್ಯುತ್ ಕಾಮಗಾರಿಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದಾರೆ.

    ಈ ಯೋಜನೆಯಲ್ಲಿನ ಅವ್ಯವಹಾರ ವಿಚಾರವಾಗಿ ಆರೋಪ ಕೇಳಿ ಬಂದ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಚಿವ ಕೆ. ಈಶ್ವರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಮತ್ತು ಮೆಸ್ಕಾಂ ಅಧಿಕಾರಿಗಳು ಸಭೆ ನಡೆಸಿದರು.

    ಸಭೆಯಲ್ಲಿ ಮಾತನಾಡಿದ ಅವರು, ಇದು 226 ಕೋಟಿ ವೆಚ್ಚದ ಯೋಜನೆಯಾಗಿದ್ದು, ಈಗಾಗಲೇ 148 ಕೋಟಿ ಹಣವನ್ನು ಗುತ್ತಿಗೆದಾರ ಪಡೆದಿದ್ದಾನೆ. ಇದರಲ್ಲಿಯೇ 60 ಕೋಟಿಗೂ ಅಧಿಕ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದರು. ಅಲ್ಲದೆ ಕಾಮಗಾರಿಯ ಬಗ್ಗೆ ಹಿರಿಯ ಅಧಿಕಾರಿಗಳು ನಿಗಾ ವಹಿಸದೇ ಇರುವುದರಿಂದ ಈ ಅವ್ಯವಹಾರ ನಡೆದಿದೆ ಎಂದು ಅಧಿಕಾರಿಗಳ ವಿರುದ್ದ ಸಚಿವ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

    ಅಧಿಕಾರಿಗಳು ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸದೇ ಬಿಲ್ ಮಾಡಿಕೊಟ್ಟಿದ್ದಾರೆ. ಇನ್ನು ಮುಂದಿನ ಬಿಲ್ ಮಾಡದೇ ತಡೆ ಹಿಡಿಯುವಂತೆ ಸಚಿವ ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದರು. ಈಗ ಸಭೆ ನಡೆಸಿ ಎಚ್ಚರಿಕೆ ನೀಡಿದ್ದೇನೆ. ಮತ್ತೆ ಮುಂದಿನ ವಾರದಲ್ಲಿ ಮತ್ತೊಮ್ಮೆ ಸಭೆ ನಡೆಸುತ್ತೇನೆ. ಅಷ್ಟರೊಳಗೆ ಅಧಿಕಾರಿಗಳು ಸರಿಪಡಿಸಿಕೊಳ್ಳದಿದ್ದರೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಚಿವ ಈಶ್ವರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.