Tag: ಪಬ್ಲಿಕ್ ಟಿವಿ SSLC

  • 10ನೇ ತರಗತಿ ಹಾಲ್ ಟಿಕೆಟ್ ತರಲು ಹೋಗಿದ್ದ ವಿದ್ಯಾರ್ಥಿ ಸಾವು

    10ನೇ ತರಗತಿ ಹಾಲ್ ಟಿಕೆಟ್ ತರಲು ಹೋಗಿದ್ದ ವಿದ್ಯಾರ್ಥಿ ಸಾವು

    ಯಾದಗಿರಿ: ಹಾಲ್ ಟಿಕೆಟ್ ತರಲು ಶಾಲೆಗೆ ತೆರಳುತ್ತಿದ್ದ ಹತ್ತನೇಯ ತರಗತಿ ವಿದ್ಯಾರ್ಥಿ ಅಪಘಾತದಲ್ಲಿ ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

    ಸುರಪುರ ತಾಲೂಕಿನ ಚಿಕ್ಕನಹಳ್ಳಿಯ 10ನೇ ತರಗತಿ ವಿದ್ಯಾರ್ಥಿ ಮಂಜುನಾಥ(16) ಮೃತ ದುದೈವಿ. ಮಂಜುನಾಥ ಅವರ ತಂದೆ ಕನಕಪ್ಪ ಹಳ್ಳಿಯವರ ಟ್ರ್ಯಾಕ್ಟರ್ ಪಲ್ಟಿಯಾಗಿ ಸಾವನ್ನಪ್ಪಿದ್ದಾರೆ.

    ಚಿಕ್ಕನಹಳ್ಳಿಯಿಂದ ಬಾಚಿಮಟ್ಟಿ ಗ್ರಾಮದ ಪ್ರೌಢಶಾಲೆಗೆ ಮಂಜುನಾಥ ತನ್ನ ಹಾಲ್ ಟಿಕೆಟ್ ತರಲು ಟ್ರ್ಯಾಕ್ಟರ್ ನಲ್ಲಿ ಹೊರಟಿದ್ದ, ಈ ವೇಳೆ ಮಾರ್ಗ ಮಧ್ಯ ಟ್ರಾಕ್ಟರ್ ಪಲ್ಟಿಯಾದ ಪರಿಣಾಮ ವಿದ್ಯಾರ್ಥಿ ಮಂಜುನಾಥ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

    ಮಗನ ಅಗಲಿಕೆ ಹಿನ್ನಲೆ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಸುರಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ರೆಡ್ ಹ್ಯಾಂಡಾಗಿ ಎಸಿಬಿ ಬಲೆಗೆ ಬಿದ್ದ ಪಿಡಿಓ

  • 100 ಮಂದಿ SSLC ವಿದ್ಯಾರ್ಥಿಗಳಿಗೆ ಜ್ಞಾನ ದೀವಿಗೆಯಿಂದ ಉಚಿತ ಟ್ಯಾಬ್ ವಿತರಣೆ

    100 ಮಂದಿ SSLC ವಿದ್ಯಾರ್ಥಿಗಳಿಗೆ ಜ್ಞಾನ ದೀವಿಗೆಯಿಂದ ಉಚಿತ ಟ್ಯಾಬ್ ವಿತರಣೆ

    ಬೀದರ್: ಪಬ್ಲಿಕ್ ಟಿವಿ ಹಾಗೂ ರೋಟರಿ ಕ್ಲಬ್ ಸಹಯೋಗದಲ್ಲಿ ಗಡಿ ಜಿಲ್ಲೆ ಬೀದರ್‍ನ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂದು ಉಚಿತ ಟ್ಯಾಬ್ ವಿತರಣೆ ಮಾಡಲಾಯಿತು.

    ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಜಲಸಂಗಿ ಹಾಗೂ ಗಡವಂತಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ 100 ಮಂದಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ ಮಾಡಲಾಯಿತು. ಟ್ಯಾಬ್ ದಾನಿಗಳಾದ ಹುಮ್ನಾಬಾದ್ ಶಾಸಕ ರಾಜಶೇಖರ ಪಾಟೀಲ್ ವಿದ್ಯಾರ್ಥಿಗಳಿಗೆ ಜ್ಞಾನ ದೀವಿಗೆ ಕಾರ್ಯಕ್ರಮದಲ್ಲಿ ಉಚಿತ ಟ್ಯಾಬ್‍ಗಳನ್ನು ವಿತರಣೆ ಮಾಡಿದರು.

    ಕೊರೋನಾ ಸಮಯದಲ್ಲಿ ಶಾಲೆಗಳು ಇಲ್ಲದೇ ಕಲಿಕೆಯಲ್ಲಿ ನಾವು ಹಿಂದೆ ಬಿದಿದ್ದು, ಉಳಿದ ದಿನಗಳನ್ನು ಈ ಟ್ಯಾಬ್ ನೋಡಿಕೊಂಡು ಉತ್ತಮ ಫಲಿತಾಂಶ ತರುತ್ತೇವೆ. ಪಬ್ಲಿಕ್ ಟಿವಿ ನೀಡಿದ ಟ್ಯಾಬ್ ಗಳು ನಮಗೆ ಬಹಳ ಸಹಕಾರಿಯಾಗಿದೆ. ನಮ್ಮಗೆ ಟ್ಯಾಬ್ ನೀಡಿದ ಪಬ್ಲಿಕ್ ಟಿವಿಗೆ ಹಾಗೂ ಟ್ಯಾಬ್ ದಾನಿಗಳಾದ ಶಾಸಕರಿಗೆ ವಿದ್ಯಾರ್ಥಿಗಳು ಧನ್ಯವಾದಗಳನ್ನು ತಿಳಿಸಿದರು.

    ಇಡೀ ರಾಜ್ಯದಲ್ಲೇ ಜ್ಞಾನ ದೀವಿಗೆಯಂತಹ ಒಳ್ಳೆಯ ಕಾರ್ಯಕ್ರಮ ನಡೆಯುತ್ತಿದೆ. ನಾನು ಇದನ್ನು ದೇಣಿಗೆ ಎಂದು ಹೇಳಲ್ಲ, ಕ್ಷೇತ್ರದ ಜನರ ಅಳಿಲು ಸೇವೆ ಮಾಡಲು ನನಗೆ ಪಬ್ಲಿಕ್ ಟಿವಿ ಅವಕಾಶ ಮಾಡಿಕೊಟ್ಟಿದೆ. ಮಕ್ಕಳ ಭವಿಷ್ಯ ನಿರ್ಮಾಣ ಮಾಡುವ ಕೆಲಸ ನೀವು ಮಾಡಿದ್ದೀರಿ ಎಂದು ಶಾಸಕರು ಪಬ್ಲಿಕ್ ಟಿವಿಗೆ ಅಭಿನಂದನೆ ಸಲ್ಲಿಸಿದರು.

    ಈ ವೇಳೆ ಎಂಎಲ್‍ಸಿಗಳಾದ ಚಂದ್ರಶೇಖರ ಪಾಟೀಲ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿವ ಬಂಡಪ್ಪ, ಶಿಕ್ಷಕರು, ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಇದನ್ನೂ ಓದಿ: ಸಿಇಟಿ ವಿದ್ಯಾರ್ಥಿಗಳಿಗೆ ಕೋವಿಡ್ ರಕ್ಷಕ-ಪರೀಕ್ಷಾ ಪ್ರಾಧಿಕಾರಕ್ಕೆ 2 ಲಕ್ಷ ಸರ್ಜಿಕಲ್ ಮಾಸ್ಕ್ – ಡಿಸಿಎಂಗೆ ಹಸ್ತಾಂತರ

  • ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆ ನಡೆಯಲಿ – ಶಾಸಕ ಅಮರೇಗೌಡ

    ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆ ನಡೆಯಲಿ – ಶಾಸಕ ಅಮರೇಗೌಡ

    ಕೊಪ್ಪಳ: ಯಾವುದೇ ಕಾರಣಕ್ಕೂ 10ನೇ ತರಗತಿ ಮತ್ತು 12ನೇ ತರಗತಿಯ ಪರೀಕ್ಷೆಗಳು ರದ್ದು ಪಡಿಸಬಾರದು ಎಂದು ಶಾಸಕ ಅಮರೇಗೌಡ ಬಯ್ಯಾಪೂರರವರು ಒತ್ತಾಯಿಸಿದ್ದಾರೆ.

    ಕೊಪ್ಪಳದ ಕುಷ್ಟಗಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಪಿಯುಸಿ ಕಾಲೇಜ್ ಪ್ರಾಚಾರ್ಯರು ಮತ್ತು ಪ್ರೌಢ ಶಾಲಾ ಶಿಕ್ಷಕರೊಂದಿಗೆ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಅದರಂತೆ ಮಕ್ಕಳು ಕೂಡ ಪರೀಕ್ಷೆ ಬರೆಯಲು ಉತ್ಸುಕರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಪರೀಕ್ಷೆ ರದ್ದು ಪಡಿಸುವುದು ಸರಿಯಲ್ಲ ಎಂದಿದ್ದಾರೆ.

    ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆ ಉತ್ತೀರ್ಣರಾಗಿದ್ದೇವೆ ಎಂದು ಮಕ್ಕಳು ನೌಕರಿ ಸೇರುವ ಅವಕಾಶ ಇದೆ. ಆದರೆ ಪರೀಕ್ಷೆ ರದ್ದುಗೊಳಿಸಿ ಕೇವಲ ಗ್ರೇಡ್ ನೀಡಿದರೆ, ಅವರಿಗೆ ಸರಿಯಾದ ಅಂಕಗಳು ಸಿಗದೇ ನೌಕರಿಯಿಂದ ವಂಚಿತಗೊಳ್ಳುವ ಸಾಧ್ಯತೆಯಿದೆ ಎಂಬ ಆತಂಕವನ್ನು ಹೊರ ಹಾಕಿದ್ದಾರೆ.

    ಕೇಂದ್ರ ಸರ್ಕಾರ ಸಿಬಿಎಸ್‍ಸಿ 12 ತರಗತಿ ಪರೀಕ್ಷೆಗಳು ರದ್ದುಗೊಳಿಸಿದ್ದರ ಬಗ್ಗೆ ವಿರೋಧ ವ್ಯಕ್ತಪಡಿಸಿದ ಅಮರೇಗೌಡ ಬಯ್ಯಾಪೂರರವರು ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಪರೀಕ್ಷೆಗಳು ರದ್ದುಗೊಳಿಸಬಾರದು. ಬದಲಾಗಿ ಸುರಕ್ಷಿತ ಕ್ರಮಗಳು ಕೈಗೊಂಡು ಪರೀಕ್ಷೆ ನಡೆಸಬೇಕೆಂದು ಸಲಹೆ ನೀಡಿದರು.

  • ದೊಡ್ಡಬೆಳವಂಗಲದ 146 ಮಕ್ಕಳಿಗೆ 73 ಟ್ಯಾಬ್ ವಿತರಣೆ

    ದೊಡ್ಡಬೆಳವಂಗಲದ 146 ಮಕ್ಕಳಿಗೆ 73 ಟ್ಯಾಬ್ ವಿತರಣೆ

    ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಯ ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಟ್ಯಾಬ್ ವಿತರಿಸಲು ಪಬ್ಲಿಕ್ ಟಿವಿ, ರೋಟರಿ ಕ್ಲಬ್ ಜ್ಞಾನ ದೀವಿಗೆ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ ತಾಲೂಕಿನ ಕನ್ಮಮಂಗಲದ ತಿರುಮಲಮ್ಮ ರಂಗಪ್ಪ ಚಾರಿಟೇಬಲ್ ಟ್ರಸ್ಟ್ ನ ತಂಡ ಕೈಜೋಡಿಸಿದೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲದ ಸರ್ಕಾರಿ ಪ್ರೌಢ ಶಾಲೆಯ 146 ಮಕ್ಕಳಿಗೆ ಅನುಕೂಲವಾಗುವಂತೆ 73 ಟ್ಯಾಬ್ ವಿತರಣೆ ಮಾಡಲಾಯಿತು.

    ಕನ್ಮಮಂಗಲದ ತಿರುಮಲಮ್ಮ ರಂಗಪ್ಪ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಶಿವರಾಮಯ್ಯ ತಮ್ಮ ತಂದೆ ತಾಯಿಯ ನೆನಪಿಗಾಗಿ ಟ್ಯಾಬ್ ವಿತರಿಸಿದರು. ಟ್ರಸ್ಟ್ ನ ಸದಸ್ಯರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಿಡಿಪಿಐ ಗಂಗಮಾರೇಗೌಡ, ಬಿಇಓ ಬೈಯಾರೆಡ್ಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಪ್ರೌಢಶಾಲೆಗಳಿಗೆ ಪಬ್ಲಿಕ್ ಟಿವಿಯ ಮಹತ್ವಾಕಾಂಕ್ಷೆಯ ಯೋಜನೆ ಸಂಪೂರ್ಣವಾಗಿ ತಲುಪಿ ಮನೆಮಾತಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಪಬ್ಲಿಕ್ ಟಿವಿ, ದಾನಿಗಳಿಗೆ ಹಾಗೂ ಶಾಲೆಗೆ ಉತ್ತಮ ಅಂಕಗಳಿಸುವ ಮೂಲಕ ಮಾದರಿಯಾಗುವಂತೆ ಹಾಗೂ ಟ್ಯಾಬ್ ಬಗ್ಗೆ ಸಂಕ್ಷಿಪ್ತವಾಗಿ ಮಕ್ಕಳಿಗೆ ವಿವರಿಸಲಾಯಿತು.

  • ರಾಯಚೂರಿನ SSLC ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ

    ರಾಯಚೂರಿನ SSLC ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ

    ರಾಯಚೂರು: ಪಬ್ಲಿಕ್ ಟಿವಿ, ರೋಟರಿ ಕ್ಲಬ್ ಸಹಯೋಗದ ಅಡಿ ನಡೆಯುತ್ತಿರುವ ಜ್ಞಾನದೀವಿಗೆ ಅಡಿ ಇಂದು ನಗರದ ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಉಚಿತ ಟ್ಯಾಬ್‍ಗಳನ್ನು ವಿತರಿಸಲಾಯಿತು.

    ಶಾಸಕ ಡಾ.ಶಿವರಾಜ್ ಪಾಟೀಲ್ ನೀಡಿರುವ ಟ್ಯಾಬ್‍ಗಳ ನೀಡಿದ್ದು, ಹಿಂದುಳಿದ ಪ್ರದೇಶಗಳಲ್ಲಿರುವ ಸಿಯತಲಾಬ್ ಸರ್ಕಾರಿ ಪ್ರೌಢಶಾಲೆ, ಎಲ್‍ಬಿಎಸ್ ನಗರ ಸರ್ಕಾರಿ ಪ್ರೌಢಶಾಲೆ ಹಾಗೂ ಗಾಜಗಾರಪೇಟೆ ಸರ್ಕಾರಿ ಪ್ರೌಢಶಾಲೆ ಸೇರಿ ಒಟ್ಟು ಮೂರು ಶಾಲೆಯ 185 ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ 93 ಉಚಿತ ಟ್ಯಾಬ್‍ಗಳನ್ನು ವಿತರಿಸಲಾಯಿತು.

    ಕಾರ್ಯಕ್ರಮದಲ್ಲಿ ರಾಯಚೂರು ಕ್ಷೇತ್ರದ ಶಿಕ್ಷಣಾಧಿಕಾರಿ ಚಂದ್ರಶೇಖರ್ ದೊಡ್ಡಮನಿ, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗೋಪಾಲ ರೆಡ್ಡಿ, ರೋಟರಿ ಕ್ಲಬ್ ರಾಯಚೂರು ಸೆಂಟ್ರಲ್ ಅಧ್ಯಕ್ಷ ವಿಜಯ ಮಹಾಂತೇಶ್, ರೋಟರಿ ಇನ್ನರ್‍ವೀಲ್‍ನ ಅರುಣಾ ಹಿರೇಮಠ್, ಎಪಿಎಂಸಿ ಸದಸ್ಯ ಜನಾರ್ದನರೆಡ್ಡಿ ಸೇರಿದಂತೆ ಹಲವರು ಭಾಗವಹಿಸಿದ್ದರು.