Tag: ಪಬ್ಲಿಕ್ ಟಿವಿ Student

  • ಕಿಡ್ನಿ ವೈಫಲ್ಯದ ನಡುವೆಯೂ SSLCಯಲ್ಲಿ ಟಾಪರ್ ಆದ ವಿದ್ಯಾರ್ಥಿನಿ

    ಕಿಡ್ನಿ ವೈಫಲ್ಯದ ನಡುವೆಯೂ SSLCಯಲ್ಲಿ ಟಾಪರ್ ಆದ ವಿದ್ಯಾರ್ಥಿನಿ

    ಶಿವಮೊಗ್ಗ: ಎಲ್ಲಾ ಸರಿ ಇದ್ದರೂ ಪರೀಕ್ಷೆ ಎಂಬ ಭಯ ಆವರಿಸಿದರೆ ಉತ್ತಮ ಅಂಕ ಪಡೆಯುವುದೇ ಕಷ್ಟ. ಹೀಗಿರುವಾಗ ಕಿಡ್ನಿ ವೈಫಲ್ಯದ ನಡುವೆಯೂ ವಿದ್ಯಾರ್ಥಿನಿಯೊಬ್ಬಳು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದು ಮೆಚ್ಚುಗೆಗೆ ಪಾತ್ರರಾಗಿದ್ದಾಳೆ.

    ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ಕೆ.ಎಸ್. ಮೂತ್ರಪಿಂಡ ನೋವಿನ ನಡುವೆಯೂ ಈ ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.93.12 ರಷ್ಟು ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ.

    ಆವಿನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುರುವರಿ ಗ್ರಾಮದ ಶ್ರೀಧರ್ ಹಾಗೂ ಶೈಲಜಾ ದಂಪತಿಯ ಪುತ್ರಿ ಶ್ರೀನಿಧಿಗೆ ಕಳೆದ ನಾಲ್ಕು ವರ್ಷದ ಹಿಂದೆ ಮೂತ್ರಪಿಂಡ ಸಮಸ್ಯೆ ಕಾಣಿಸಿಕೊಂಡಿದ್ದು, ವಾರದಲ್ಲಿ ಮೂರು ಬಾರಿ ಡಯಾಲಿಸಿಸ್‍ಗೆ ಒಳಗಾಗಬೇಕಿದೆ. ಆದರೂ ಸದಾ ಓದಿನಲ್ಲಿ ಮುಂದಿರುವ ಈ ವಿದ್ಯಾರ್ಥಿನಿ ಮೂತ್ರಪಿಂಡ ಸಮಸ್ಯೆಯ ನೋವಿಗೆ ಭಯ ಬೀಳದೇ ತನ್ನ ವ್ಯಾಸಂಗ ಮುಂದುವರಿಸಿದ್ದಾಳೆ.

    ಎಸ್‍ಎಸ್‍ಎಲ್‍ಸಿ ಪರೀಕ್ಷೆ ದಿನ ಸಹ ಡಯಾಲಿಸಿಸ್‍ಗೆ ಒಳಗಾಗಿದ್ದ ಈ ವಿದ್ಯಾರ್ಥಿನಿ, ಮೂತ್ರಪಿಂಡ ವೈಫಲ್ಯದ ನೋವಿನ ನಡುವೆಯೂ ಪರೀಕ್ಷೆಗೆ ಹಾಜರಾಗಿ ಅತೀ ಹೆಚ್ಚು ಅಂಕ ಪಡೆದಿದ್ದಾಳೆ. ತೀವ್ರ ಅನಾರೋಗ್ಯದ ನಡುವೆಯೂ ಉತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿನಿಯನ್ನು ಶಿಕ್ಷಕರು ಅಭಿನಂದಿಸಿದ್ದಾರೆ. ಇದನ್ನೂ ಓದಿ:ಹಾಕಿ ಕೋಚ್‌ ಅಂಕಿತಾ ಸುರೇಶ್‌ಗೆ ಕೊಡಗಿನಲ್ಲಿ ಅದ್ಧೂರಿ ಸ್ವಾಗತ

  • ಹೊಟ್ಟೆ ನೋವು ತಾಳಲಾರದೇ ವಿದ್ಯಾರ್ಥಿನಿ ಆತ್ಮಹತ್ಯೆ

    ಹೊಟ್ಟೆ ನೋವು ತಾಳಲಾರದೇ ವಿದ್ಯಾರ್ಥಿನಿ ಆತ್ಮಹತ್ಯೆ

    ಶಿವಮೊಗ್ಗ: ಹೊಟ್ಟೆ ನೋವು ತಾಳಲಾರದೇ ವಿದ್ಯಾರ್ಥಿನಿ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿಯಲ್ಲಿ ನಡೆದಿದೆ.

    ಮೃತ ಯುವತಿಯನ್ನು ಚಂದ್ರಗುತ್ತಿ ಗ್ರಾಮದ ನಾಗರಾಜ ಮರಡಿ ಅವರ ಪುತ್ರಿ ಸುಚಿತ್ರಾ (17) ಎಂದು ಗುರುತಿಸಲಾಗಿದೆ. ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಸುಚಿತ್ರಾರಿಗೆ ಕೆಲವು ದಿನಗಳಿಂದ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಳು.

    ಪೋಷಕರು ಜಮೀನು ಕೆಲಸಕ್ಕೆ ತೆರಳಿದ್ದ ವೇಳೆ ಸುಚಿತ್ರಾಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಮನೆಯಲ್ಲಿ ಯಾರು ಇಲ್ಲದೇ ಇರುವುದರಿಂದ ಹೊಟ್ಟೆನೋವು ತಾಳಲಾರದೇ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.

    ಸದ್ಯ ಈ ಸಂಬಂಧ ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದು. ಪೊಲೀಸರು ಘಟನೆ ಕುರಿತಂತೆ ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ:ಜಮೀನಿನಲ್ಲಿದ್ದ ರೈತನನ್ನು ಬಲಿ ತೆಗೆದುಕೊಂಡ ಕಾಡು ಪ್ರಾಣಿ

  • ಪೋಷಕರು ಬೈದಿದ್ದಕ್ಕೆ ವಿಷ ಸೇವಿಸಿ ವಿದ್ಯಾರ್ಥಿ ಸಾವು

    ಪೋಷಕರು ಬೈದಿದ್ದಕ್ಕೆ ವಿಷ ಸೇವಿಸಿ ವಿದ್ಯಾರ್ಥಿ ಸಾವು

    ರಾಯಚೂರು: ಕಾಲೇಜಿಗೆ ಹೋಗುವಂತೆ ಪೋಷಕರು ಬೈದಿದ್ದಕ್ಕೆ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಲಿಂಗಸುಗೂರಿನಲ್ಲಿ ನಡೆದಿದೆ.

    ಲಿಂಗಸುಗೂರು ತಾಲೂಕಿನ ಗುಂತಗೋಳ ಗ್ರಾಮದ ಮೊದಲ ವರ್ಷ ಬಿಎ ವಿದ್ಯಾರ್ಥಿ ಮಂಜುನಾಥ್ (19) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ವಿಷಸೇವನೆ ಮಾಡಿ ಗ್ರಾಮದಿಂದ ತನ್ನ ವಸತಿ ನಿಲಯಕ್ಕೆ ಬಂದಿದ್ದ ವಿದ್ಯಾರ್ಥಿ ಮನೆಯಲ್ಲಿ ಜಗಳವಾಗಿದ್ದಕ್ಕೆ ವಿಷ ಸೇವಿಸಿರುವುದಾಗಿ ಸ್ನೇಹಿತರಿಗೆ ಹೇಳಿಕೊಂಡಿದ್ದಾನೆ. ಅಸ್ವಸ್ಥಗೊಂಡ ವಿದ್ಯಾರ್ಥಿಯನ್ನು ಸ್ನೇಹಿತರು ಕೂಡಲೇ ಲಿಂಗಸುಗೂರು ತಾಲೂಕಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ವಿದ್ಯಾರ್ಥಿಯನ್ನು ರಾಯಚೂರು ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಆಸ್ಪತ್ರೆ ಮಾರ್ಗ ಮಧ್ಯದಲ್ಲೇ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

    ಲಿಂಗಸುಗೂರು ಪರಿಶಿಷ್ಟ ವರ್ಗಗಳ ವಸತಿನಿಲಯದಲ್ಲಿದ್ದ ವಿದ್ಯಾರ್ಥಿ, ಎಂಟತ್ತು ದಿನಗಳಿಂದ ತನ್ನ ಗ್ರಾಮದಲ್ಲೇ ಉಳಿದಿದ್ದ. ಕಾಲೇಜಿಗೆ ಹೋಗುವಂತೆ ಪೋಷಕರು ಬುದ್ಧಿ ಮಾತು ಹೇಳಿದ್ದಕ್ಕೆ ಜಗಳವಾಡಿ ಬಂದಿದ್ದ ಎಂದು ಮೃತನ ಸಂಬಂಧಿಕರು ತಿಳಿಸಿದ್ದಾರೆ. ಘಟನೆ ಹಿನ್ನೆಲೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • 9ನೇ ಕ್ಲಾಸ್ ವಿದ್ಯಾರ್ಥಿನಿಯ ಮೇಲೆ 6 ತಿಂಗಳ ಕಾಲ 7 ಮಂದಿಯಿಂದ ರೇಪ್

    9ನೇ ಕ್ಲಾಸ್ ವಿದ್ಯಾರ್ಥಿನಿಯ ಮೇಲೆ 6 ತಿಂಗಳ ಕಾಲ 7 ಮಂದಿಯಿಂದ ರೇಪ್

    ಚಂಡೀಗಢ: 16 ವರ್ಷದ ಬಾಲಕಿ ಗರ್ಭಿಣಿಯಾಗಿರುವ ಆಘಾತಕಾರಿ ಘಟನೆ ಹರಿಯಾಣದ ಭಿವಾನಿ ಜಿಲ್ಲೆಯಲ್ಲಿ ನಡೆದಿದೆ.

    9ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಮೇಲೆ 7 ಮಂದಿ 6 ತಿಂಗಳ ಕಾಲ ಅತ್ಯಾಚಾರವೆಸಗಿದ್ದು, ಇದೀಗ ಆಕೆ 2 ತಿಂಗಳ ಗರ್ಭಿಣಿಯಾಗಿದ್ದಾಳೆ. ಅಲ್ಲದೆ ಈ ವಿಚಾರವನ್ನು ಬಹಿರಂಗ ಪಡಿಸಿದರೆ ಕೊಲೆ ಮಾಡುವುದಾಗಿ ಬಾಲಕಿಗೆ ಜೀವ ಬೆದರಿಕೆಯೊಡ್ಡಿದ್ದರು.

    ಈ ಕುರಿತಂತೆ ಬಾಲಕಿಯ ತಂದೆ ಸದ್ಯ ಪೊಲೀಸ್ ಠಾಣಾ ಮೆಟ್ಟಿಲೇರಿದ್ದು, ಘಟನೆ ಕುರಿತಂತೆ ಪೊಲೀಸರಿಗೆ ವಿವರಿಸಿದ್ದಾರೆ. ಆರೋಪಿಗಳು ಬಾಲಕಿ ಮೇಲೆ ಅತ್ಯಾಚಾರ ಎಸಗಿ ಈ ವಿಚಾರವನ್ನು ಎಲ್ಲದರೂ ಬಹಿರಂಗ ಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ. ಅಲ್ಲದೆ ಹಲವು ಬಾರಿ ನನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾರೆ. ಇದೀಗ ಬಾಲಕಿ ಗರ್ಭಿಣಿಯಾದ ಬಳಿಕ ಈ ವಿಚಾರ ಬೆಳಕಿಗೆ ಬಂದಿದೆ ಎಂದು ಆರೋಪಿಸಿದ್ದಾರೆ.

    ಸದ್ಯ ಆರೋಪಿಗಳ ವಿರುದ್ಧ ಬಾಲಕಿಯ ತಂದೆ ದೂರು ದಾಖಲಿಸಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.