Tag: ಪಬ್ಲಿಕ್ ಟಿವಿ Tamil actor

  • ತಮಿಳು ನಟ ವಿಜಯಕಾಂತ್ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

    ತಮಿಳು ನಟ ವಿಜಯಕಾಂತ್ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

    ಚೆನ್ನೈ: ದೇಸಿಯ ಮುರಪೊಕ್ಕು ದ್ರಾವಿಡ ಕಳಗಂ(ಡಿಎಂಡಿಕೆ) ಸಂಸ್ಥಾಪಕ ಹಾಗೂ ನಟ ವಿಜಯಕಾಂತ್ ಉಸಿರಾಟದ ಸಮಸ್ಯೆಯಿಂದ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಬುಧವಾರ ಮೇ 19 ವಿಜಯಕಾಂತ್‍ರವರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಬೆಳಗ್ಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಕಳೆದ ವರ್ಷವು ಅವರು ಹಲವು ಆರೋಗ್ಯ ಸಮಸ್ಯೆಗಳಿಂದ ಹೊಂದಿದ್ದರು.

    ವೈದ್ಯರ ತಂಡ ಇದೀ ವಿಜಯಕಾಂತ್‍ರವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ. ಅವರ ಪಕ್ಷದ ಸದಸ್ಯರು ವಿಜಯಕಾಂತ್‍ರವರು ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಒಂದೆರಡು ದಿನಗಳಲ್ಲಿ ಡಿಸ್ಚಾರ್ಜ್ ಆಗುವ ನಿರೀಕ್ಷೆಯಿದೆ. ಆಸ್ಪತ್ರೆಯವರಿಂದ ಹೆಚ್ಚಿನ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.

    2020ರಲ್ಲಿ ವಿಜಯಕಾಂತ್‍ರವರು ಕೋವಿಡ್ ಸೋಂಕಿನಿಂದ ಬಳಲಿದ್ದರು. ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಹಾಗೂ ಚಿಕಿತ್ಸೆ ಪಡೆದ ಕೆಲವು ದಿನಗಳ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.