Tag: ಪಬ್ಲಿಕ್ ಟಿವಿ Young women

  • ಪ್ರಿಯತಮನಿಂದ ಮೋಸ – ಯುವತಿ ಆತ್ಮಹತ್ಯೆ

    ಪ್ರಿಯತಮನಿಂದ ಮೋಸ – ಯುವತಿ ಆತ್ಮಹತ್ಯೆ

    ದಾವಣಗೆರೆ: ಪ್ರೀತಿಸಿದ ಯುವಕ ಮೋಸ ಮಾಡಿದ ಎಂದು ಯುವತಿ ವೀಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

    ಹಲವು ವರ್ಷಗಳಿಂದ ಯುವಕ ಹಾಗೂ ಯುವತಿ ಪ್ರೀತಿಸುತ್ತಿದ್ದರು. ಆದರೆ ಇದೀಗ ಆತನಿಗೆ ಮದುವೆಯಾಗಿದೆ ಎಂಬ ವಿಚಾರ ತಿಳಿದು ಯುವತಿ ಆತ್ಮಹತ್ಯೆ ಸೆಲ್ಫಿ ವೀಡಿಯೋ ಮಾಡುತ್ತಾ ಕಣ್ಣೀರು ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

    ದಾವಣಗೆರೆ ನಗರದ ಭರತ್ ಕಾಲೋನಿಯ ನಿವಾಸಿ ಆಶಾ(26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಬ್ಯೂಟಿಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಆಶಾ, ಅದೇ ಏರಿಯಾಗೆ ಆಗಾಗಾ ಬರುತ್ತಿದ್ದ ವಿದ್ಯುತ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಈರಣ್ಣ ಇಬ್ಬರು ಪರಸ್ಪರ ಒಬ್ಬರಿಗೊಬ್ಬರು ಪ್ರೀತಿಸುತ್ತಿದ್ದರು. ಇದನ್ನು ಓದಿ: ಚಾಮರಾಜನಗರ ಆಮ್ಲಜನಕ ದುರಂತಕ್ಕೆ ರೋಹಿಣಿ ಸಿಂಧೂರಿ ಕಾರಣನಾ?

    ಯುವಕ ಹೇಳಿದಂತೆಲ್ಲ ಆಶಾ ಕೇಳುತ್ತಿದ್ದಳು, ಮುಂದಿನ ಜೀವನದ ಬಗ್ಗೆ ಅಪಾರವಾದ ಕನಸನ್ನು ಕಂಡಿದ್ದಳು. ಆದರೆ ಈರಣ್ಣ ಮೊದಲೇ ಬೇರೆ ಯುವತಿಯ ಜೊತೆ ಮದುವೆಯಾಗಿದ್ದ ಎನ್ನಲಾಗುತ್ತಿದೆ. ಈ ವಿಷಯ ತಿಳಿದ ಬಳಿಕ ಆಶಾ ಆಘಾತಕ್ಕೆ ಒಳಗಾಗಿದ್ದಾಳೆ.

    ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಈಗ ಬೇರೆ ಹುಡುಗಿಯನ್ನು ಮದುವೆಯಾಗಿದ್ದಾನೆ. ಮದುವೆಯಾಗಿದ್ದರು ಮದುವೆಯಾಗಿಲ್ಲ ಎಂದು ತನಗೆ ಮೋಸ ಮಾಡಿದ್ದಾನೆ. ನನಗಾದ ಮೋಸ ಬೇರೆ ಯಾರಿಗೂ ಆಗಬಾರದು, ನನಗೆ ಮೋಸ ಮಾಡಿದ್ದಾನೆ. ನನ್ನ ಸಾವಿಗೆ ಈರಣ್ಣನೇ ಕಾರಣ, ಈರಣ್ಣನಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ವೀಡಿಯೋದಲ್ಲಿ ದುಃಖವನ್ನು ಹೊರ ಹಾಕಿದ್ದಾಳೆ. ಸೆಲ್ಫಿ ವೀಡಿಯೋ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನು ಓದಿ: ಶಿಕಾರಿಗೆ ತೆರಳಿದ್ದ ಗೆಳೆಯರ ನಡುವೆ ಗಲಾಟೆ- ಕಾಲಿಗೆ ಗುಂಡು ಹೊಡೆದ ಸ್ನೇಹಿತ

    ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‍ಎಂಸಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಕೊರೊನಾ ಲಸಿಕೆ ನೆಪದಲ್ಲಿ ನಿದ್ರೆ ಮಾತ್ರೆ ನೀಡಿ ಆಭರಣ ದೋಚಿ ಯುವತಿ ಪರಾರಿ

    ಕೊರೊನಾ ಲಸಿಕೆ ನೆಪದಲ್ಲಿ ನಿದ್ರೆ ಮಾತ್ರೆ ನೀಡಿ ಆಭರಣ ದೋಚಿ ಯುವತಿ ಪರಾರಿ

    ಚೆನ್ನೈ: 26 ವರ್ಷದ ಯುವತಿಯೊಬ್ಬಳು ತನ್ನ ಚಿಕ್ಕಮ್ಮ ಹಾಗೂ ಆಕೆಯ ಕುಟುಂಬಕ್ಕೆ ಕೋವಿಡ್-19 ಲಸಿಕೆ ನೀಡುವ ನೆಪದಲ್ಲಿ ನಿದ್ರೆ ಮಾತ್ರೆ ನೀಡಿ ಚಿನ್ನದ ಆಭರಣವನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

    ಆರೋಪಿ ಯುವತಿಯನ್ನು ಸತ್ಯಪ್ರಿಯ ಎಂದು ಗುರುತಿಸಲಾಗಿದ್ದು, ಈಕೆ ಪೆರಂಬಲೂರು ಜಿಲ್ಲೆಯ ಕುನ್ನಂ ತಾಲೂಕಿನ ಕೀಜ್ಕುಡಿಕಾಡು ಗ್ರಾಮದ ನಿವಾಸಿಯಾಗಿದ್ದಾಳೆ. ಅಲ್ಲದೆ ಆನ್‍ಲೈನ್ ಮಾರ್ಕೆಟಿಂಗ್ ಏಜೆನ್ಸಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದಾಳೆ.

    ಗುರುವಾರ ಸತ್ಯಪ್ರಿಯ ತನ್ನ ಚಿಕ್ಕಮ್ಮ ಕೆ. ರಸತಿ ಮನೆಗೆ ತೆರಳಿದ್ದಾನೆ. ಈ ವೇಳೆ ಚಿಕ್ಕಮ್ಮ, ಚಿಕ್ಕಪ್ಪ ಹಾಗೂ ಇಬ್ಬರು ಹೆಣ್ಣು ಮಕ್ಕಳಿಗೆ ಕೋವಿಡ್-19 ಲಸಿಕೆ ನೀಡಬಹುದಾ ಎಂದು ಕೇಳಿದ್ದಾಳೆ. ಇದಕ್ಕೆ ರಸತಿ ಅನುಮತಿ ನೀಡಿದ್ದು, ಸತ್ಯಪ್ರಿಯ ಲಸಿಕೆ ಹೆಸರಿನಲ್ಲಿ ನಿದ್ರೆ ಮಾತ್ರೆಯನ್ನು ನೀಡಿದ್ದಾಳೆ.

    ಲಸಿಕೆ ಪಡೆದ ಕೆಲ ಹೊತ್ತಿನಲ್ಲಿಯೇ ರಸತಿ, ಪತಿ ಕೃಷ್ಣಮೂರ್ತಿ ಮತ್ತು ಇಬ್ಬರು ಪುತ್ರಿಯರಾದ ಕೃತಿಂಗ ಮತ್ತು ಮೋನಿಕಾ ಪ್ರಜ್ಞೆ ಕಳೆದುಕೊಂಡಿದ್ದಾರೆ. ಬಳಿಕ ಮರು ದಿನ ಬೆಳಗ್ಗೆ ಎಲ್ಲರೂ ಎಚ್ಚರಗೊಂಡ ರಸತಿಗೆ ಮಾಂಗಲ್ಯ ಸರ, ಕೃತಿಗರವರ ಮಾಂಗಲ್ಯ ಸರ, ಮತ್ತೊಂದು ಸರ ಹಾಗೂ ಮೋನಿಕಾರವರ ಸರ ಕಾಣೆಯಾಗಿರುವ ವಿಚಾರವನ್ನು ಕಂಡುಕೊಂಡಿದ್ದಾರೆ. ಹೀಗಾಗಿ ಗಾಬರಿಗೊಂಡ ಕುಟುಂಬಸ್ಥರು ಈ ಸಂಬಂಧಪಟ್ಟಂತೆ ಪೊಲೀಸರಿಗೆ ಮಾಹಿತಿ ನೀಡಿ ದೂರು ದಾಖಲಿಸಿದ್ದಾರೆ.

    ಇದೀಗ ಪೊಲೀಸರು ಯುವತಿಯನ್ನು ಪತ್ತೆ ಮಾಡಿ ಬಂಧಿಸಿದ್ದು, ವಿಚಾರಣೆ ವೇಳೆ ಯುವತಿ ನಿದ್ರೆ ಮಾತ್ರೆಯನ್ನು ನೀಡಿ ಆಭರಣವನ್ನು ದೋಚಿ ಪರಾರಿಯಾಗಿರುವುದಾಗಿ ಒಪ್ಪಿಕೊಂಡಿದ್ದಾಳೆ. ಇದೀಗ ಪೊಲೀಸರು ಯುವತಿ ವಿರುದ್ಧ ಭಾರತೀಯ ದಂಡ ಸಂಹಿತೆ(ಐಪಿಸಿ) ಸೆಕ್ಷನ್‍ಗಳ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.