Tag: ಪರಮ್

  • 3 PARAM ರುದ್ರ ಸೂಪರ್‌ ಕಂಪ್ಯೂಟರ್‌ಗಳಿಗೆ ಮೋದಿ ಚಾಲನೆ

    3 PARAM ರುದ್ರ ಸೂಪರ್‌ ಕಂಪ್ಯೂಟರ್‌ಗಳಿಗೆ ಮೋದಿ ಚಾಲನೆ

    ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಗುರುವಾರ ಮೂರು PARAM ರುದ್ರ ಸೂಪರ್‌ ಕಂಪ್ಯೂಟರ್‌ಗಳಿಗೆ (Super Computer) ಚಾಲನೆ ನೀಡಿದ್ದಾರೆ.

    ರಾಷ್ಟ್ರೀಯ ಸೂಪರ್‌ಕಂಪ್ಯೂಟಿಂಗ್ ಮಿಷನ್ (NSM) ಅಡಿಯಲ್ಲಿ ವೈಜ್ಞಾನಿಕ ಮತ್ತು ತಾಂತ್ರಿಕ ಪ್ರಗತಿಗಾಗಿ ಅಭಿವೃದ್ಧಿಪಡಿಸಲಾಗಿದೆ. 130 ಕೋಟಿ ರೂ. ವೆಚ್ಚದಲ್ಲಿ ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾದ ಸೂಪರ್‌ಕಂಪ್ಯೂಟರ್‌ಗಳನ್ನು ಪುಣೆ, ದೆಹಲಿ ಮತ್ತು ಕೋಲ್ಕತ್ತಾದಲ್ಲಿ ಅನೇಕ ವೈಜ್ಞಾನಿಕ ವಿಭಾಗಗಳಲ್ಲಿ ಸಂಶೋಧನೆಗಳನ್ನು ನಡೆಸಲು ನಿಯೋಜಿಸಲಾಗಿದೆ. ಇದನ್ನೂ ಓದಿ: ಮತ್ತೆ ಕ್ಯಾಂಪಸ್‌ ನೇಮಕಾತಿ ಆರಂಭಿಸಿದ ಭಾರತೀಯ ಐಟಿ ಕಂಪನಿಗಳು

    ಪುಣೆಯಲ್ಲಿರುವ ದೈತ್ಯ ಮೀಟರ್ ರೇಡಿಯೋ ಟೆಲಿಸ್ಕೋಪ್ (GMRT) Fast Radio Bursts (FRBs) ನಂತಹ ಖಗೋಳ ವಿದ್ಯಮಾನಗಳನ್ನು ಅನ್ವೇಷಿಸಲು ಇದನ್ನು ಬಳಕೆ ಮಾಡಲಿದೆ.

    ದೆಹಲಿಯ Inter-University Accelerator Centre ನಲ್ಲಿ ವಸ್ತು ವಿಜ್ಞಾನ ಮತ್ತು ಪರಮಾಣು ಭೌತಶಾಸ್ತ್ರದಲ್ಲಿ ಸಂಶೋಧನೆಗೆ ಬಳಕೆಯಾಗಲಿದೆ. ಕೋಲ್ಕತ್ತಾದ ಎಸ್‌ಎನ್‌ ಭೋಸ್‌ ಕೇಂದ್ರದಲ್ಲಿ ಭೌತಶಾಸ್ತ್ರ, ಕಾಸ್ಮೋಲಜಿ, ಭೂ ವಿಜ್ಞಾನದಂತಹ ಕ್ಷೇತ್ರಗಳಲ್ಲಿ ಮುಂದುವರಿದ ಸಂಶೋಧನೆಗೆ ಬಳಸಲಾಗುತ್ತದೆ.

    ಪುಣೆಯಲ್ಲಿರುವ ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (C-DAC) ನಿಂದ ವಿನ್ಯಾಸಗೊಳಿಸಲ್ಪಟ್ಟ ಮತ್ತು ಜೋಡಿಸಲಾದ ಭಾರತೀಯ ಸೂಪರ್ ಕಂಪ್ಯೂಟರ್‌ಗಳ ಸರಣಿಯನ್ನು PARAM ಎಂಬ ಹೆಸರಿನಿಂದ ಕರೆಯಲಾಗುತ್ತದೆ.

     

  • ಹೆಚ್.ಆರ್. ರಂಗನಾಥ್ ಜೊತೆ ಮಾತುಕತೆ- ‘ಕೋಟಿ’ ಕನಸಿನ ಬಗ್ಗೆ ಪರಮ್ ಮಾತು

    ಹೆಚ್.ಆರ್. ರಂಗನಾಥ್ ಜೊತೆ ಮಾತುಕತೆ- ‘ಕೋಟಿ’ ಕನಸಿನ ಬಗ್ಗೆ ಪರಮ್ ಮಾತು

    ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘ಕೋಟಿ’ (Kotee Film) ಸಿನಿಮಾ ಜೂನ್ 14ರಂದು ರಿಲೀಸ್‌ಗೆ ಸಿದ್ಧವಾಗಿದೆ. ಕೋಟಿ ಎಂಬ ಮಿಡಲ್ ಕ್ಲಾಸ್ ಹುಡುಗ ನಿಷ್ಠೆಯಿಂದ ಕೋಟಿ ರೂಪಾಯಿ ಗಳಿಸಬೇಕು ಎಂಬ ಗುರಿ ಇಟ್ಟುಕೊಂಡಿರುತ್ತಾನೆ. ಆ ಕನಸಿನ ಹಾದಿಯಲ್ಲಿ ಬರುವ ಸವಾಲುಗಳು ಹೇಗಿರುತ್ತದೆ ಎಂಬುದನ್ನು ಸಿನಿಮಾದಲ್ಲಿ ತೋರಿಸಿದ್ದಾರೆ. ಆದರೆ ಚಿತ್ರದ ಇಂಟ್ರಸ್ಟಿಂಗ್ ವಿಚಾರಗಳನ್ನು ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್. ರಂಗನಾಥ್ (HR Ranganath) ಜೊತೆ ಡೈರೆಕ್ಟರ್ ಪರಮ್ ಹಂಚಿಕೊಂಡಿದ್ದಾರೆ.

    ಇಂದಿನ ಜೀವನ ಶೈಲಿಯಲ್ಲಿ ಹೇಗಾದ್ರು ಓಕೆ ನಾವು ದುಡ್ಡು ಮಾಡಬೇಕು ಎಂಬ ಮನಸ್ಥಿತಿ ಇದೆ. ಹೀಗಿರುವಾಗ ನಾನು ಕೂಡ ಮಿಡಲ್ ಕ್ಲಾಸ್ ಕುಟುಂಬದಿಂದ ಬಂದ ವ್ಯಕ್ತಿಯಾಗಿರೋದ್ರಿಂದ ಕೋಟಿ ಚಿತ್ರದ ಕಥೆ ಜನರಿಗೆ ಕನೆಕ್ಟ್ ಆಗುತ್ತೆ ಅನ್ನುವ ನಂಬಿಕೆ ಇದೆ. ಶ್ರದ್ಧೆ, ನಿಷ್ಠೆ, ನಂಬಿಕೆ ಇದ್ದರೆ ಕೋಟಿ ಗಳಿಸಲು ಸಾಧ್ಯವಾಗುತ್ತದೆ ಎಂದು ಓಪನ್ ಆಗಿ ಸಿನಿಮಾ ಕುರಿತು ಡೈರೆಕ್ಟರ್ ಪರಮ್ ಮಾತನಾಡಿದ್ದಾರೆ.

    1 ಕೋಟಿ ರೂಪಾಯಿಯನ್ನು ನ್ಯಾಯವಾಗಿ ಗಳಿಸಬೇಕು. ತಪ್ಪಿಲ್ಲದೇ ಮುಂದೆ ಹೋಗಬೇಕು. ನಾಯಕ ಅನುಭವಿಸುವ ಕಷ್ಟಗಳು, ಕಥೆಯ ಸಾರಾಂಶ ಜನರಿಗೆ ಕನೆಕ್ಟ್ ಆಗುತ್ತೆ ಎಂದು ನಂಬಿಕೆಯಿದೆ. ಕೊನೆಗೂ ಹೀರೋ ಕೋಟಿ ಹೇಗೆ ಗಳಿಸುತ್ತಾರೆ ಎಂಬ ಪ್ರಶ್ನೆಗೆ ಸಿನಿಮಾದಲ್ಲಿ ಉತ್ತರ ಸಿಗಲಿದೆ ಎಂದು ಪರಮ್ ಮಾತನಾಡಿದರು. ಇದನ್ನೂ ಓದಿ:ಟ್ರೇಲರ್‌ನಲ್ಲಿ ಆಕ್ಷೇಪಾರ್ಹ ಸಂಭಾಷಣೆಗಳಿವೆ: ‘ಹಮಾರೆ ಬಾರಹ್‌’ ಸಿನಿಮಾ ಬಿಡುಗಡೆಗೆ ಸುಪ್ರೀಂ ತಡೆ

    ಅಂದಹಾಗೆ, ‘ಕೋಟಿ’ (Kotee Film) ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ (Daali Dhananjay) ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್ ನಟಿಸಿದ್ದಾರೆ. ಖಳನಾಯಕನಾಗಿ ರಮೇಶ್ ಇಂದಿರಾ ಅಬ್ಬರಿಸಿದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್ ಸತ್ಯ ಜೊತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

    ‘ಕೋಟಿ’ ಚಿತ್ರದಲ್ಲಿ ಐದು ಹಾಡುಗಳಿದ್ದು, ವಾಸುಕಿ ವೈಭವ್‌ಮ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್ ಭಟ್ ಮತ್ತು ವಾಸುಕಿ ವೈಭವ್ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್ ಪೌಲ್ ಹೊತ್ತಿದ್ದಾರೆ.

  • ಡಾಲಿ ಧನಂಜಯ ವೃತ್ತಿ ಜೀವನದ ಬಹುಮುಖ್ಯ ಸಿನಿಮಾ ‘ಕೋಟಿ’

    ಡಾಲಿ ಧನಂಜಯ ವೃತ್ತಿ ಜೀವನದ ಬಹುಮುಖ್ಯ ಸಿನಿಮಾ ‘ಕೋಟಿ’

    ಡಾಲಿ, ನಟರಾಕ್ಷಸ ಎಂದೇ ಕನ್ನಡ ಜನತೆಯ ಪ್ರೀತಿಗೆ ಪಾತ್ರರಾಗಿರುವ ಧನಂಜಯ (Dhananjay) ಅವರ ಹೊಚ್ಚ ಹೊಸ ಸಿನಿಮಾ ‘ಕೋಟಿ’ (Kotee Film) ಬಿಡುಗಡೆಗೆ ಸಿದ್ಧವಾಗಿದೆ. ಹಲವಾರು ಕಾರಣಗಳಿಗೆ ಈ ಸಿನಿಮಾ ಧನಂಜಯ ಅವರ ವೃತ್ತಿ ಜೀವನದಲ್ಲೇ ಬಹುಮುಖ್ಯ ಸಿನಿಮಾವಾಗಿದೆ.

    ಕಳೆದ ವರ್ಷ ಮೇ ತಿಂಗಳಿನಲ್ಲಿ ಸೆಟ್ಟೇರಿದ್ದ ‘ಕೋಟಿ’ ಈಗಾಗಲೇ ಒಂದು ವರ್ಷಕ್ಕಿಂತ ಕಡಿಮೆ ಅವಧಿಯಲ್ಲೇ ಎಲ್ಲ ಕೆಲಸಗಳ ಮುಗಿಸಿ ಜೂನ್ 14ಕ್ಕೆ ಬಿಡುಗಡೆಗೆ ಸಿದ್ಧವಾಗಿದೆ. ಧನಂಜಯ್ ಪೂರ್ಣ ಪ್ರಮಾಣದ ಹೀರೋ ಆದ್ಮೇಲೆ ಮಾಡಿದ ದೊಡ್ಡ ಬಜೆಟ್‌ನ ಸಿನಿಮಾ ಇದಾಗಿದೆ. ಜಿಯೋ ಸ್ಟುಡಿಯೋಸ್ ನಂತಹ ದೊಡ್ಡ ಸಂಸ್ಥೆಯ ಮೊದಲ ಕನ್ನಡ ಸಿನಿಮಾ ಇದಾಗಿದ್ದು ಅವರ ನಾಯಕನಟನ ಆಯ್ಕೆ ಧನಂಜಯ ಆಗಿರುವುದು ಅಭಿಮಾನಿಗಳಿಗೆ ಸಂತಸ ನೀಡಿದೆ. ಜೊತೆಗೆ ಈ ಸಿನಿಮಾವನ್ನು ಬರೋಬ್ಬರಿ 85 ದಿನಗಳ ಕಾಲ ಬೆಂಗಳೂರು, ಮೈಸೂರು, ಚಿಕ್ಕಮಗಳೂರನಲ್ಲಿ ಚಿತ್ರೀಕರಿಸಲಾಗಿದೆ. ಧನಂಜಯ ಅವರ ಇಲ್ಲಿವರೆಗಿನ ಸಿನಿಮಾಗಳಲ್ಲಿ ಇದು ಅತಿ ಹೆಚ್ಚು ದಿನಗಳ ಕಾಲ ಚಿತ್ರೀಕರಿಸಿದ ಚಿತ್ರವಾಗಿದೆ.

    ವರ್ಷದ ಮೊದಲಾರ್ಧದಲ್ಲಿ ಯಾವುದೇ ದೊಡ್ಡ ಗೆಲುವು ಕಾಣದೆ ಕಂಗೆಟ್ಟಿರುವ ಕನ್ನಡ ಇಂಡಸ್ಟ್ರಿಗೆ ‘ಕೋಟಿ’ಯ ಗೆಲುವು ತೀರಾ ಅವಶ್ಯಕವಿದೆ. ಈಗಾಗಲೇ ಟ್ರೈಲರ್ ಮತ್ತು ಹಾಡುಗಳ ಮುಖಾಂತರ ಕೋಟಿ ಸದ್ದು ಮಾಡುತ್ತಿದ್ದು ಅಪ್ಪಟ ಕನ್ನಡ ಮಣ್ಣಿನ ಕಥೆಯೊಂದು ಎಲ್ಲೆಡೆ ಮಾತಾಗುತ್ತಿದೆ.‌ ಇದನ್ನೂ ಓದಿ:ಡಿವೋರ್ಸ್ ಹಿಂದೆ 3ನೇ ವ್ಯಕ್ತಿ ಕೈವಾಡವಿದ್ಯಾ? ಮೌನ ಮುರಿದ ನಿವೇದಿತಾ

    ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ದುಡಿಯುವ ಬಯಕೆಯ ಡ್ರೈವರ್ ‘ಕೋಟಿ’ಯ ಪಾತ್ರದಲ್ಲಿ ಧನಂಜಯ ಕಾಣಿಸಿಕೊಂಡಿದ್ದಾರೆ. ಮಿಡಲ್ ಕ್ಲಾಸ್ ಪ್ಯಾಮಿಲಿ ಮ್ಯಾನ್ ಅವತಾರ ಎಲ್ಲರಿಗೂ ಕನೆಕ್ಟ್ ಆಗುವ ಭರವಸೆಯನ್ನು ಟೀಸರ್ ಮತ್ತು ಹಾಡುಗಳು ನೀಡಿವೆ.

    ದ್ವಿತೀಯಾರ್ಧದಲ್ಲಿ ಹಲವು ಸ್ಟಾರ್ ಸಿನಿಮಾಗಳು ಬರುವ ಸೂಚನೆ ನೀಡಿದ್ದು ‘ಕೋಟಿ’ ಮೊದಲ ಗೆಲುವಾಗುವ ಭರವಸೆ ನೀಡಿದೆ. ಜೊತೆಗೆ ‘ಕೋಟಿ’ಯ ಬಿಡುಗಡೆಯ ನಂತರ ಎರಡುವಾರಗಳ ಕಾಲ ಬಿಡುಗಡೆಗೆ ಸಿದ್ಧವಿರುವ ಯಾವುದೇ ದೊಡ್ಡ ಚಿತ್ರಗಳಿಲ್ಲ. ಇದು ‘ಕೋಟಿ’ಗೆ ವರದಾನವಾಗಲಿದೆ. `ಬಡವ ರಾಸ್ಕಲ್’ ನಂತರ ಧನಂಜಯ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಮತ್ತೊಂದು ಸಾಮಾನ್ಯ ಮಿಡಲ್ ಕ್ಲಾಸ್ ವ್ಯಕ್ತಿಯ ಪಾತ್ರದಲ್ಲಿ ನೋಡಲು ಕಾತರದಿಂದ ಕಾಯುತ್ತಿದ್ದಾರೆ. ಹಾಗೆ ಸುಲಭಕ್ಕೆ ಯಾವುದೇ ಸಿನಿಮಾಗಳ ಪ್ರಮೋಷನ್‌ಗಳಿಗೆ ಹೋಗದ ಕಿಚ್ಚ ಸುದೀಪ್ (Sudeep) ಇತ್ತಿಚೆಗೆ ನಡೆದ ‘ಕೋಟಿ’ ಪ್ರೀ-ರಿಲೀಸ್ ಟಿವಿ ಕಾರ್ಯಕ್ರಮಕ್ಕೆ ತೆರಳಿ ಸುಮಾರು ಒಂದು ಗಂಟೆಗಳಿಗೂ ಹೆಚ್ಚಿನ ಕಾಲ ವೇದಿಕೆಯ ಮೇಲಿದ್ದು ಡಾಲಿಗೆ ಶುಭ ಹಾರೈಸಿದ್ದಾರೆ.


    ‘ಕೋಟಿ’ ಸಿನಿಮಾ ಧನಂಜಯ ಅವರಿಗೆ ದೊಡ್ಡ ಯಶಸ್ಸು ತರಲಿ ಮತ್ತು ಚಂದನವನದ ಈ ವರ್ಷದ ಮೊದಲ ದೊಡ್ಡ ಹಿಟ್ ಆಗಲಿ ಎಂಬುದು ಅಭಿಮಾನಿಗಳ ಬಯಕೆ. `ಕೋಟಿ’ 200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಜೂನ್ 14ಕ್ಕೆ ಬಿಡುಗಡೆಯಾಗಲಿದೆ.

  • ಡಾಲಿ ಧನಂಜಯ್ ನಟನೆಯ ‘ಕೋಟಿ’ ಚಿತ್ರದ ಮೊದಲ ಟಿಕೇಟ್ ‘ಕಿಚ್ಚ’ನಿಗೆ

    ಡಾಲಿ ಧನಂಜಯ್ ನಟನೆಯ ‘ಕೋಟಿ’ ಚಿತ್ರದ ಮೊದಲ ಟಿಕೇಟ್ ‘ಕಿಚ್ಚ’ನಿಗೆ

    ಡಾಲಿ‌ ಧನಂಜಯ (Dhananjay) ಅಭಿನಯದ ‘ಕೋಟಿ’ (Kotee) ಸಿನಿಮಾದ ಮೊದಲ‌ ಟಿಕೇಟನ್ನು ಚಿತ್ರತಂಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ನೀಡಿದೆ. ಅದ್ದೂರಿಯಾಗಿ ನಡೆದ ಕೋಟಿ ಸಿನಿಮಾದ ವಿಶೇಷ ಪ್ರೀರಿಲೀಸ್ ಟೀವಿ ಕಾರ್ಯಕ್ರಮಕ್ಕೆ ಸುದೀಪ್ (Kiccha Sudeep) ಆಗಮಿಸಿ ಸುಮಾರು ಒಂದು ಗಂಟೆಗಳಿಗೂ ಅಧಿಕ ಸಮಯ ವೇದಿಕೆಯ ಮೇಲಿದ್ದು‌ ನೆರೆದಿದ್ದ ಜನರ ರಂಜಿಸಿದರು. ಇದೇ ವೇದಿಕೆಯಲ್ಲಿ ಚಿತ್ರತಂಡ ಅಭಿನಯ ಚಕ್ರವರ್ತಿ ಸುದೀಪ್ ಅವರಿಗೆ ಕೋಟಿಯ ಮೊದಲ ಟಿಕೇಟ್ ನೀಡಿತು. ಚಿತ್ರದ ಹೊಸ ಪೋಸ್ಟರ್‌ವೊಂದನ್ನು ಬಿಡುಗಡೆ ಮಾಡಿದ ಕಿಚ್ಚ ನಾಯಕನಟ ಧನಂಜಯ್ ಮತ್ತು ನಿರ್ದೇಶಕ  ಪರಮ್ ಅವರಿಗೆ ಯಶಸ್ಸು‌ ಸಿಗಲಿ ಎಂದು ಶುಭ ಕೋರಿದರು.

    ಈಗಾಗಲೇ ‘ಕೋಟಿ’ ಚಿತ್ರದ ಟ್ರೇಲರ್ ಬಿಡುಗಡೆಗೊಂಡಿದ್ದು ಭಾರಿ ಮೆಚ್ಚುಗೆ ಗಳಿಸುತ್ತಿದೆ. ಡಾಲಿ ಧನಂಜಯ್ ‘ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ‌ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಕೋಟಿಯ ಈ ಪಯಣದ ಕಥಾಹಂದರವನ್ನು‌ ಹೊಂದಿರುವ ಈ ಸಿನಿಮಾ ಜೂನ್ 14ಕ್ಕೆ ಬಿಡುಗಡೆಯಾಗಲಿದೆ.

    ವರ್ಷದ ಮೊದಲಾರ್ಧದಲ್ಲಿ ಯಾವುದೇ ದೊಡ್ಡ ಗೆಲುವು ಕಾಣದೆ ಕಂಗೆಟ್ಟಿರುವ ಕನ್ನಡ ಇಂಡಸ್ಟ್ರಿಗೆ ಅಪ್ಪಟ ಕನ್ನಡ ಮಣ್ಣಿನ ಕತೆಯಾದ ‘ಕೋಟಿ’ ಗೆಲ್ಲುವ ಭರವಸೆಯಾಗಿ ಕಂಡಿದೆ. ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

    ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಮನ್.

    ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

  • ಡಾಲಿ ಧನಂಜಯ್ ‘ಕೋಟಿ’ ಅಬ್ಬರಕ್ಕೆ  ದಾವಣಗೆರೆ ಫ್ಯಾನ್ಸ್ ಫಿದಾ

    ಡಾಲಿ ಧನಂಜಯ್ ‘ಕೋಟಿ’ ಅಬ್ಬರಕ್ಕೆ ದಾವಣಗೆರೆ ಫ್ಯಾನ್ಸ್ ಫಿದಾ

    ಡಾಲಿ ಧನಂಜಯ್ (Dolly Dhananjay) ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಕೋಟಿ’ (Kotee) ಜೂನ್ 14ರಂದು ಬಿಡುಗಡೆಯಾಗಲು ಸಿದ್ಧವಾಗಿದೆ.‌ ಈಗಾಗಲೇ ಚಿತ್ರದ ಹಾಡುಗಳು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದ್ದು, ಇದೇ ಬುಧವಾರ ‘ಕೋಟಿ’ಯ ಟ್ರೇಲರ್ ಬಿಡುಗಡೆಯಾಗಲಿದೆ.

    ‘ಕೋಟಿ’ಯ ಪ್ರಮೋಷನ್ ಸಲುವಾಗಿ ಡಾಲಿ ಧನಂಜಯ ದಾವಣಗೆರೆಗೆ (Davangere) ತೆರಳಿದ್ದರು. ದಾವಣಗೆರೆಯ ಬಾಪೂಜಿ ಇಂಜಿನಿಯರಿಂಗ್ ಕಾಲೇಜಿನ ‘ದವನ ಫೆಸ್ಟ್’ ಅತಿದೊಡ್ಡ ಕಾಲೇಜ್ ಫೆಸ್ಟಿವಲ್‌ಗಳಲ್ಲೊಂದು. ಇಲ್ಲಿಗೆ ಡಾಲಿ ಮುಖ್ಯ ಅತಿಥಿಯಾಗಿ ಬಂದಿದ್ದು ಅಭಿಮಾನಿಗಳನ್ನು ಖುಷಿಯ ಕಡಲಿನಲ್ಲಿ ತೇಲಿಸಿತ್ತು. ಸುಮಾರು ಐದು ಸಾವಿರಕ್ಕೂ ಅಧಿಕ ವಿಧ್ಯಾರ್ಥಿಗಳು ಸೇರಿದ್ದ ಈ ಸಮಾರಂಭದಲ್ಲಿ ಡಾಲಿಯ ಜತೆ ಕೋಟಿಯ ನಾಯಕಿ ಮೋಕ್ಷಾ ಕುಶಾಲ್, ಸಹಕಲಾವಿದರಾದ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್ ಮತ್ತು ಅಭಿಷೇಕ್ ಶ್ರೀಕಾಂತ್ ಪಾಲ್ಗೊಂಡಿದ್ದರು.

    ಡಾಲಿ ಧನಂಜಯ ‘ದವನ’ದ ವೇದಿಕೆಯ ಮೇಲೆ ಬರುತ್ತಿದ್ದಂತೆ ಅಭಿಮಾನಿಗಳ ಕೇಕೆ, ಕೂಗಾಟ ಮುಗಿಲ ಮುಟ್ಟಿತ್ತು. ‘ಕೋಟಿ’ ಒಬ್ಬ ಸಾಮಾನ್ಯ ಡ್ರೈವರ್‌. ಅವನಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ದುಡಿದು ತನ್ನ‌ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. “ಇಲ್ಲಿ ಯಾರ್ಯಾರಿಗೆ ಕೋಟಿ ದುಡಿಯುವ ಆಸೆ ಇದೆ?” ಎಂದು ನೆರೆದಿದ್ದ ವಿಧ್ಯಾರ್ಥಿಗಳ ಕೇಳಿದ ಧನಂಜಯ ಎಲ್ಲರ ಉತ್ತರ ಕೇಳಿ, “ಕೋಟಿ ನಮ್ಮೆಲ್ಲರಿಗೂ ಕನೆಕ್ಟ್ ಆಗುವ ಸಿನಿಮಾ” ಎಂದರು. ಕಾರ್ಯಕ್ರಮದಲ್ಲಿ ಪ್ರದರ್ಶಿಸಿದ ‘ಕೋಟಿ’ಯ ಟೀಸರ್ ಮತ್ತು ಹಾಡುಗಳಿಗೆ ಅದ್ಭುತ ಪ್ರತಿಕ್ರಿಯೆ ದೊರೆಯಿತು. ಧನಂಜಯ್ ಕಾರ್ಯಕ್ರಮದಿಂದ ವಾಪಾಸು ಹೋಗುವವರೆಗೂ ಇಡೀ ಕಾಲೇಜಿನ‌ ಮೂಲೆಮೂಲೆಯಲ್ಲಿ ‘ಡಾಲಿ ಡಾಲಿ’ ಎಂಬ  ಅಭಿಮಾನಿಗಳ‌ ಪ್ರೀತಿಯ ದನಿ ಮೊಳಗುತ್ತಿತ್ತು.

    ಜೂನ್ 14 ರಂದು ಬಿಡುಗಡೆಗೆ ಸಿದ್ಧವಾಗಿರುವ ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

    ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಮನ್. ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

  • ಡಾಲಿಯ ‘ಕೋಟಿ’ ಮನರಂಜನೆಗೆ ಕಿಚ್ಚ ಸುದೀಪ್ ಎಂಟ್ರಿ

    ಡಾಲಿಯ ‘ಕೋಟಿ’ ಮನರಂಜನೆಗೆ ಕಿಚ್ಚ ಸುದೀಪ್ ಎಂಟ್ರಿ

    ಕೋಟಿ (Kotee) ಸಿನಿಮಾದ ಪ್ರೀರಿಲೀಸ್ ವಿಶೇಷ ಟೀವಿ ಕಾರ್ಯಕ್ರಮ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ‘ಕೋಟಿ ಮನರಂಜನೆ’ ಎಂದು ಕರೆಯಲಾಗಿದ್ದು, ಕಾರ್ಯಕ್ರಮದಲ್ಲಿ ಸಿನಿಮಾದ ತಾರಾಬಳಗವೇ ತುಂಬಿತ್ತು. ಕೋಟಿಯ ನಾಯಕ ಡಾಲಿ ಧನಂಜಯ (Dolly Dhananjay) ಸೇರಿದಂತೆ ನಾಯಕಿ ಮೋಕ್ಷಾ‌ ಕುಶಾಲ್ ಮತ್ತು ಹಿರಿಯ ತಾರೆಗಳಾದ ತಾರಾ ಅನುರಾಧ, ರಂಗಾಯಣ ರಘು, ರಮೇಶ್ ಇಂದಿರಾ, ಸರ್ದಾರ್ ಸತ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

    ಈ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದದ್ದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Sudeep). ಅದ್ಭುತ ಲೈಟಿಂಗ್ ಮತ್ತು ಕೋರಿಯಾಗ್ರಫಿಯ‌ ಮೂಲಕ ಆದ ಕಿಚ್ಚನ ಎಂಟ್ರಿಯ ನೋಡಿ ಜನರ ಕೇಕೆ ಮತ್ತು ಶಿಳ್ಳೆಗಳ‌ ಸದ್ದು ಮುಗಿಲ‌‌ ಮುಟ್ಟಿತ್ತು. ಸುದೀಪ್ ಅವರು ಸುಮಾರು ಒಂದು ತಾಸಿಗೂ ಹೆಚ್ಚಿನ ಕಾಲ ವೇದಿಕೆಯ ಮೇಲಿದ್ದು ನೆರೆದಿದ್ದ ಜನರನ್ನು ಹಾಸ್ಯಭರಿತ ಮಾತುಗಳಿಂದ ರಂಜಿಸಿದರು. ನಿರೂಪಕ ಅಕುಲ್ ಬಾಲಾಜಿ ಮತ್ತು ಸುದೀಪ್ ಮಾತುಕತೆ ಪ್ರೇಕ್ಷಕರಿಗೆ ನಗುವಿನ ಕಚಗುಳಿ ಇಡುವಂತಿತ್ತು. ಸುದೀಪ್ ಕೋಟಿ ಚಿತ್ರದ ಹೊಸ ಪೋಸ್ಟರನ್ನು ಅನಾವರಣಗೊಳಿಸಿ ತಂಡಕ್ಕೆ ಶುಭ ಕೋರಿದರು.

    ಕೋಟಿಯ ನಾಯಕಿ ‘ಮೋಕ್ಷಾ’ ಅವರ ಡಾನ್ಸ್ ಕಾರ್ಯಕ್ರಮಕ್ಕೆ ಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ದೊರೆಯಿತು. ಕೋಟಿಯ ಇತರ ನಟ ನಟಿಯರಿಂದ ವಿಶೇಷ ಡಾನ್ಸ್ ಕಾರ್ಯಕ್ರ‌ಮಗಳು ಮತ್ತು ಗಿಚ್ಚಿ ಗಿಲಿಗಿಲಿ ತಂಡದಿಂದ ಹೊಟ್ಟೆ ಹುಣ್ಣಾಗಿಸುವ ಹಾಸ್ಯ ಕಾರ್ಯಕ್ರಮ ನಡೆದವು. ಧನಂಜಯ ಅವರಿಗಾಗಿ ಮಕ್ಕಳು ಮಾಡಿದ ವಿಶೇಷ ಡಾನ್ಸ್ ಕಾರ್ಯಕ್ರಮ ‘ಕೋಟಿ ಮನರಂಜನೆ’ಯ ಪ್ರಮುಖ ಆಕರ್ಷಣೆಗಳಲ್ಲೊಂದಾಗಿತ್ತು. ಧನಂಜಯ ಅವರು ಮಕ್ಕಳ ನೃತ್ಯವನ್ನು ಮೆಚ್ಚಿ ವೇದಿಕೆಯ ಮೇಲೆ ಬಂದು ಮಕ್ಕಳ ಜತೆ ಸೆಲ್ಫಿ ತೆಗೆದುಕೊಂಡರು.

    ಈ ಚಿತ್ರದ ರಾಗ ಸಂಯೋಜಕರಾದ ವಾಸುಕಿ ವೈಭವ್ ‘ಕೋಟಿ’ ಸಿನಿಮಾದ ಹಾಡುಗಳನ್ನು ಹಾಡಿದರು. ಕೋಟಿಯ ಹಾಡುಗಳಿಗೆ ಸಾಹಿತ್ಯ ರಚಿಸಿರುವ ಯೋಗರಾಜ್ ಭಟ್ “ಕನ್ನಡದ ಜನತೆಗಾಗಿ ಯಾರೇ ಕಷ್ಟಪಟ್ಟರೂ ನಾಡಿನ ಜನತೆ ಅವರ ಕೆಲಸವನ್ನು ಗೆಲ್ಲಿಸುತ್ತಾರೆ” ಎಂದು ಹೇಳಿದರು.‌

    ದಶಕಗಳ ಕಾಲ ಕಲರ್ಸ್ ಕನ್ನಡ ಚಾನೆಲನ್ನು ಮುನ್ನಡೆಸಿದ್ದ ಪರಮ್ ಅವರಿಗೆ ಚಾನೆಲ್ಲಿನ ಸಿಬ್ಬಂದಿ ವಿಶೇಷ ವಿಡಿಯೋ ಮೂಲಕ ಶುಭ ಕೋರಿದರು. ವಿಡಿಯೋದಲ್ಲಿ ತಮ್ಮ ಹಳ್ಳಿಮನೆಯ ಚಿತ್ರ ನೋಡಿದ ಪರಮ್ ಭಾವುಕರಾದರು. ಕಲರ್ಸ್ ಕನ್ನಡ ಮೂಲಕ ಯಶಸ್ಸು ಪಡೆದ ಚಂದನ್ ಶೆಟ್ಟಿ, ನಿವೇದಿತಾ ಗೌಡ, ವಿಜಯ್ ಸೂರ್ಯ, ರಕ್ಷಿತ್, ಶೈನ್ ಶೆಟ್ಟಿ, ಮಯೂರಿ, ಅಂಕಿತಾ ಅಮರ್, ನೇಹಾ ಗೌಡ ಹಾಗೂ ಅಕುಲ್ ಬಾಲಾಜಿ ತಮ್ಮ ಮೆಂಟರ್ ‘ಪರಮ್‌’ ಅವರ ಹೊಸ ಪಯಣಕ್ಕೆ ಶುಭ ಹಾರೈಸಿದರು.

  • ಡಾಲಿ ಧನಂಜಯ್ ನಟನೆಯ ‘ಕೋಟಿ’ ಸಿನಿಮಾಗೆ ಯೋಗರಾಜ್ ಭಟ್ ಸಾಹಿತ್ಯ

    ಡಾಲಿ ಧನಂಜಯ್ ನಟನೆಯ ‘ಕೋಟಿ’ ಸಿನಿಮಾಗೆ ಯೋಗರಾಜ್ ಭಟ್ ಸಾಹಿತ್ಯ

    ಡಾಲಿ ಧನಂಜಯ್ (Dolly Dhananjay) ಅಭಿನಯದ ಕೋಟಿ (Kotee) ಸಿನಿಮಾದ ಮೊದಲ ಹಾಡು ‘ಮಾತು ಸೋತು’ ಮೇ 13, ಸೋಮವಾರ ಸಂಜೆ 5 ಗಂಟೆಗೆ ಬಿಡುಗಡೆಯಾಗಲಿದೆ. ಈ ಹಾಡನ್ನು ವಾಸುಕಿ ವೈಭವ್ ಸಂಯೋಜಿಸಿದ್ದು, ಯೋಗರಾಜ್ ಭಟ್ (Yogaraj Bhatt) ಸಾಹಿತ್ಯ ರಚಿಸಿ, ಅರ್ಮಾನ್ ಮಲಿಕ್ ಹಾಡಿದ್ದಾರೆ. ಕೋಟಿ ಸಿನಿಮಾದ ಹಾಡುಗಳ ಹಕ್ಕನ್ನು ಸರೆಗಮ ಖರೀದಿಸಿದ್ದು ಈ ಹಾಡಿನ ಲಿರಿಕಲ್ ವಿಡಿಯೋ ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ ಮೇ 13ರಂದು ಬಿಡುಗಡೆಯಾಗಲಿದೆ.

    ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ರಮೇಶ್‌ ಇಂದಿರಾ, ತಾರಾ, ಸರ್ದಾರ್‌ ಸತ್ಯ ಮುಂತಾದವರು ಅಭಿನಯಿಸಿದ್ದಾರೆ.

    ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು ಚಾರ್ಲಿ 777 ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಮನ್.

    ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

  • ಡಾಲಿ ಧನಂಜಯ್ ನಟನೆಯ ‘ಕೋಟಿ’ ಸಿನಿಮಾದ ಟೀಸರ್ ರಿಲೀಸ್

    ಡಾಲಿ ಧನಂಜಯ್ ನಟನೆಯ ‘ಕೋಟಿ’ ಸಿನಿಮಾದ ಟೀಸರ್ ರಿಲೀಸ್

    ನ್ನಡ ಸಿನಿಮಾ ಮಾರುಕಟ್ಟೆಗೆ ದೇಶದ ಪ್ರಮುಖ ನಿರ್ಮಾಣ ಸಂಸ್ಥೆ ಜಿಯೋ ಸ್ಟುಡಿಯೋಸ್ ಕೋಟಿ (Kotee) ಸಿನಿಮಾ ಮೂಲಕ ಕಾಲಿಟ್ಟಿದೆ. ಕನ್ನಡದ ಅತಿ ಪ್ರತಿಭಾವಂತ ನಟ ಧನಂಜಯ ಈ ಸಿನಿಮಾ ನಾಯಕರಾಗಿದ್ದು ಪರಮ್ ಇದನ್ನು ನಿರ್ದೇಶಿಸುತ್ತಿದ್ದಾರೆ. ಇದರ ಟೀಸರ್ (Teaser)  ಬಿಡುಗಡೆ ಸಮಾರಂಭ ಇಂದು ಬೆಂಗಳೂರಿನಲ್ಲಿ ನಡೆಯಿತು. ಬೈಪನ್ ಭಾರಿ ದೇವಾ (ಮರಾಠಿ), ಆರ್ಟಿಕಲ್ 370, ತೇರಿ ಬಾತೋಂಮೆ ಐಸಾ ಉಲ್ಜಾಜಿಯಾ, ಶೈತಾನ್ ಮತ್ತು ಲಾಪಾತಾ ಲೇಡೀಸ್ ಹೀಗೆ ಒಂದಾದ ಮೇಲೆ ಒಂದರಂತೆ ಹಿಟ್ ಸಿನಿಮಾಗಳನ್ನು ಜಿಯೋ ಸ್ಟುಡಿಯೋಸ್ ಕೊಟ್ಟಿದೆ. ಈಗ ಕನ್ನಡ ಮಾರುಕಟ್ಟೆಗೆ ಪ್ರವೇಶಿಸುವ ಮೂಲಕ ತನ್ನ ಸ್ಥಾನವನ್ನು ಈ ನಿರ್ಮಾಣ ಸಂಸ್ಥೆ ಮತ್ತಷ್ಟು ಗಟ್ಟಿಗೊಳಿಸಿಕೊಂಡಿದೆ.

    ನಟಿಸುವ ಬದಲು ಪಾತ್ರವೇ ಆಗಿಬಿಡುವ ಧನಂಜಯ (Dhananjay) ಕನ್ನಡದ ಸೂಕ್ಷ್ಮ ನಟ.  ತಮ್ಮ ಹೊಸ ಸಿನಿಮಾ ʼಕೋಟಿʼಯ ಪಾತ್ರದ ಬಗ್ಗೆ ಎಕ್ಸೈಟ್ ಆಗಿರುವ ಅವರು ಈ ಸಿನಿಮಾದಲ್ಲಿ ಅಭಿನಯದ ಹೊಸ ಮಗ್ಗುಲುಗಳನ್ನು ಅನ್ವೇಷಿಸಿದ್ದಾರೆ. ‘ಒಂದೇ ಒಂದು ಕೋಟಿ ಸಿಕ್ಕಿಬಿಟ್ಟರೆ ಅಥವಾ ದುಡಿಯೋದಕ್ಕಾದರೆ ಸೆಟ್ಲ್ ಆಗಿಬಿಡಬಹುದು ಎಂದು ಎಲ್ಲರೂ ಅಂದ್ಕೊಳ್ತಿರ್ತಾರೆ. ನಮ್ ಕೋಟಿನೂ ಅಷ್ಟೇ. ಎಲ್ಲಾ ಮನೆಗಳಲ್ಲೂ ಈ ಕೋಟಿಯಂಥ ಅಣ್ಣ, ತಮ್ಮ, ಮಗ ನಿಮಗೆ ಸಿಕ್ತಾರೆ. ಕಷ್ಟಪಟ್ಟು ದುಡಿದು ಎಲ್ಲಾ ಸರಿ ಮಾಡ್ಕೋಬಹುದು ಅಂದ್ಕೋತಾ ಇರ್ತಾರೆʼ ಎಂದು ಪಾತ್ರದ ಬಗ್ಗೆ ಮಾತಾಡುತ್ತಾರೆ ಧನಂಜಯ.

    ಮಜಾ ಅಂದ್ರೆ ಎಲ್ರೊಳಗೂ ಕೋಟಿಯಂಥ ಒಬ್ಬ ವ್ಯಕ್ತಿ ಇರ್ತಾನೆ. ಈ ಪಾತ್ರ, ನನ್ನೊಳಗಿನ ಕೋಟಿಯನ್ನು ನನಗೆ ಪರಿಚಯಿಸಿದೆ. ಹಾಗೆಯೇ ನಿಮ್ಮೊಳಗಿನ ಕೋಟಿಯನ್ನು ಪತ್ತೆ ಮಾಡಲು ನೀವು ಈ ಸಿನಿಮಾ ನೋಡಬೇಕು’ ಎಂದು ಸೇರಿಸಲು ಅವರು ಮರೆಯುವುದಿಲ್ಲ.  ಈ ಸಿನಿಮಾ ನಿರ್ದೇಶಿಸುತ್ತಿರುವುದು ಪರಮ್ (Param). ಇದು ಅವರ ಚೊಚ್ಚಲ ಸಿನಿಮಾ. ಸಿನಿಮಾ ನಿರ್ದೇಶಕನಾಗಿ ಮೊದಲ ಅನುಭವವಾದರೂ ಕತೆ ಹೇಳುವುದು ಅವರಿಗೆ ಹೊಸದಲ್ಲ. ಟೆಲಿವಿಷನ್ ಚಾನೆಲ್ಲಿನಲ್ಲಿ ಹಲವು ಯಶಸ್ವೀ ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳನ್ನು ರೂಪಿಸಿದ ಅನುಭವವಿರುವ ಅವರು ಇಲ್ಲಿ ವಿಶಾಲ ಕ್ಯಾನ್ವಾಸಿನಲ್ಲಿ ಕತೆ ಹೇಳುವ ಸವಾಲನ್ನು ಸ್ವೀಕರಿಸಿದ್ದಾರೆ.

    ‘ನನ್ನ ಕನಸು ಈ ಸಿನಿಮಾ ಮೂಲಕ ನಿಜವೇ ಆಗಿಬಿಟ್ಟಿರುವುದನ್ನು ವಿವರಿಸಲು ಶಬ್ದಗಳಿಲ್ಲ. ಇದು ಸಾಧ್ಯ ಆಗಿದ್ದು ಜಿಯೋ ಸ್ಟುಡಿಯೋಸ್ ಮತ್ತು ಜ್ಯೋತಿ ದೇಶಪಾಂಡೆ ನನ್ನ ಮೇಲೆ ಇಟ್ಟ ನಂಬಿಕೆಯಿಂದ. ಒಳ್ಳೆ ಕತೆಗಳನ್ನು ಹೇಳಬೇಕು, ಬೇರೆ ಕತೆಗಳನ್ನು ಹೇಳಬೇಕು, ಬೇರೆ ಧ್ವನಿಗಳು ಕೇಳಿಸಬೇಕು ಅನ್ನೋದು ಜಿಯೋ ಸ್ಟುಡಿಯೋಸ್ ನ ಮೂಲ ಉದ್ದೇಶ. ಕನ್ನಡದಲ್ಲೂ ಈ ಇದು ಮುಂದುವರೆಯಬೇಕು ಅನ್ನೋದರ ಕಡೆಗೆ ನಮ್ಮ ತಂಡ ಕೆಲಸ ಮಾಡುತ್ತೆʼ ಎನ್ನುತ್ತಾರೆ ಜಿಯೋ ಸ್ಟುಡಿಯೋಸ್ ನ ಕನ್ನಡದ ಮುಖ್ಯಸ್ಥರೂ ಆಗಿರುವ ಪರಮ್.

    ಧನಂಜಯ್ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್ ಕನ್ನಡಕ್ಕೆ ಪರಿಚಯ ಆಗುತ್ತಿದ್ದಾರೆ. ಹಲವು ಜಾಹೀರಾತುಗಳಲ್ಲಿ ಈಗಾಗಲೇ ಕಾಣಿಸಿಕೊಂಡಿರುವ ಕೊಡಗಿನ ಮೂಲದ ಕನ್ನಡದ ನಟಿ ಮೋಕ್ಷಾಗೆ ಇದು ಮಹತ್ವದ ಸಿನಿಮಾ. ‘ಸಪ್ತ ಸಾಗರದಾಚೆʼ ಸಿನಿಮಾದ ನಂತರ ಜನರಿಗೆ ಹೆಚ್ಚು ಪರಿಚಯವಾದ ರಮೇಶ್ ಇಂದಿರಾ ಈ ಸಿನಿಮಾದಲ್ಲಿ ಖಳನಟನಾಗಿ ಮಿಂಚಿದ್ದಾರೆ. ಕೋಟಿ ಸಿನಿಮಾ ಡ್ರಾಮಾ ಥ್ರಿಲ್ಲರ್ ಎಳೆಯನ್ನು ಹೊಂದಿದೆ.

    ವಾಸುಕಿ ವೈಭವ್  ಹಾಡುಗಳಿಗೆ ಸ್ವರ ಸಂಯೋಜನೆ ಮಾಡಿದ್ದಾರೆ. ಸಿನಿಮಾದಲ್ಲಿ ಐದು ಹಾಡುಗಳಿವೆ. ಮೂರು ಹಾಡುಗಳಿಗೆ ಯೋಗರಾಜ್ ಭಟ್ ಸಾಹಿತ್ಯ ಇದೆ. ಒಂದು ಹಾಡನ್ನು ಸ್ವತಃ ವಾಸುಕಿ ಬರೆದಿದ್ದಾರೆ. ಹಿನ್ನೆಲೆ ಸಂಗೀತ ‘ಕೋಟಿ’ ಸಿನಿಮಾದ ಮುಖ್ಯ ಭಾಗವಾಗಿದ್ದು, ಆ ಹೊಣೆಯನ್ನು ‘777ಚಾರ್ಲಿ’ ಮತ್ತು ʼ೨೦೧೮ʼ ಸಿನಿಮಾ ಖ್ಯಾತಿಯ ಸಂಗೀತ ನಿರ್ದೇಶಕ ನೊಬಿನ್ ಪೌಲ್ ಹೊತ್ತಿದ್ದಾರೆ. ಅವರು ಸಂಗೀತ ಸಂಯೋಜನೆಯ ಮಲಯಾಳಮ್ ಚಿತ್ರ ʼ2018ʼ ಆಸ್ಕರ್ ಪ್ರಶಸ್ತಿಗೆ ಈ ವರ್ಷ ಭಾರತದ ಅಧಿಕೃತ ಆಯ್ಕೆ ಆಗಿತ್ತು.

    ಇದರ ಸಂಕಲನದ ಜವಾಬ್ದಾರಿಯನ್ನು ಹೊತ್ತಿರುವುದು ಕನ್ನಡದ ಪ್ರತಿಭಾವಂತ ಯುವ ಸಂಕಲನಕಾರ, ಛಾಯಾಗ್ರಾಹಕ ಪ್ರತೀಕ್ ಶೆಟ್ಟಿ. ಈಗಾಗಲೇ ʼಕಾಂತಾರʼ ʼ೭೭೭ಚಾರ್ಲಿʼ ಸಂಕಲನದ ಮೂಲಕ ಹೆಸರು ಗಳಿಸಿರುವ ಇವರು “ಗಂಧದ ಗುಡಿʼ ಸಾಕ್ಷ್ಯ ಚಿತ್ರಕ್ಕೆ ಛಾಯಾಗ್ರಾಹಕರಾಗಿಯೂ ಕೆಲಸ ಮಾಡಿದ್ದಾರೆ ಎನ್ನುವುದು ವಿಶೇಷ. ಟೆಲಿವಿಷನ್ ಪ್ರಯಾಣದಲ್ಲಿ ಪರಮ್ ಅವರಿಗೆ ಜೋಡಿಯಾಗಿದ್ದ ಅರುಣ್ ಬ್ರಹ್ಮನ್ ‘ಕೋಟಿ’ ಸಿನಿಮಾದ ಸಿನಿಮಾಟೋಗ್ರಾಫರ್ ಆಗಿದ್ದಾರೆ. ಇದು ಅವರಿಗೆ ಮೊದಲ ಸಿನಿಮಾ. ರಂಗಾಯಣ ರಘು, ತಾರಾ, ಪೃಥ್ವಿ ಶಾಮನೂರು, ಸರದಾರ ಸತ್ಯಾ ಮತ್ತು ತನುಜಾ ವೇಂಕಟೇಶ್ ಬೇರೆ ಬೇರೆ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

    ಕೋಟಿ ಸಿನಿಮಾದ ಟೀಸರ್ ಬಿಡುಗಡೆಯಾಗಿ ಈಗ ಕುತೂಹಲ ಹೆಚ್ಚಾಗಿದೆ. ಸಹಜವಾಗಿ ಇದ್ದುಬಿಡುವುದರ ಮೂಲಕ ಹೇಗೆ ಪಾತ್ರವೇ ಆಗಿಬಿಡಬಹುದು ಎನ್ನುವುದರ ಝಲಕ್ಕನ್ನು ಧನಂಜಯ ತೋರಿಸಿದ್ದರೆ ರಮೇಶ್ ಇಂದಿರಾ ಒಬ್ಬ ಪ್ರಭಾವಶಾಲಿ ಖಳನಟ ಆಗುವ ಭರವಸೆ ಹುಟ್ಟಿಸಿದ್ದಾರೆ. ಜೂನ್ 14 ರಂದು ಕೋಟಿ ನಿಮ್ಮ ನೆಚ್ಚಿನ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

  • ಡಾಲಿ ನಟನೆಯ ಸಿನಿಮಾದಲ್ಲಿ ನವಮಿಯಾಗಿ ಕಾಣಿಸಿಕೊಂಡ ಮೋಕ್ಷಾ ಕುಶಾಲ್

    ಡಾಲಿ ನಟನೆಯ ಸಿನಿಮಾದಲ್ಲಿ ನವಮಿಯಾಗಿ ಕಾಣಿಸಿಕೊಂಡ ಮೋಕ್ಷಾ ಕುಶಾಲ್

    ಲರ್ಸ್ ಕನ್ನಡ ವಾಹಿನಿಯಿಂದ ಹೊರ ಬಂದು, ಇದೀಗ ಜಿಯೋ ಸ್ಟುಡಿಯೋಸ್ ಗೆ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿರುವ ಪರಮೇಶ್ವರ ಗುಂಡ್ಕಲ್ (Parameshwar Gundkal) ಚಿತ್ರ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಸದ್ದಿಲ್ಲದೇ ತಮ್ಮ ಚೊಚ್ಚಲ ನಿರ್ದೇಶನದ ಸಿನಿಮಾದ ಚಿತ್ರೀಕರಣವನ್ನೂ ಅವರು ಮುಗಿಸಿದ್ದಾರೆ. ಕೋಟಿ (Kotee) ಹೆಸರಿನ ಈ ಚಿತ್ರದ ಟೀಸರ್ ಇಂದು ಬಿಡುಗಡೆ ಆಗಲಿದೆ.

    ಪರಮೇಶ್ವರ ಗುಂಡ್ಕಲ್ ಸಿನಿಮಾವೊಂದನ್ನು ನಿರ್ದೇಶನ ಮಾಡಲಿದ್ದಾರೆ ಎಂದು ಪಬ್ಲಿಕ್ ಟಿವಿ ಡಿಜಿಟಲ್ ಸುದ್ದಿಯನ್ನು ಬ್ರೇಕ್ ಮಾಡಿತ್ತು. ಆನಂತರ ಆ ಸಿನಿಮಾದ ಹೀರೋ ಯಾರು ಎಂದು ಎಕ್ಸಕ್ಲೂಸಿವ್ ನ್ಯೂಸ್ ನೀಡಿತ್ತು. ಡಾಲಿ ಧನಂಜಯ್ ನಾಯಕನಾಗಿ ನಟಿಸಿದ್ದರೆ ಮೋಕ್ಷಾ ಕುಶಾಲ್ (Moksha Kushal) ನಾಯಕಿ. ಇವರು ಈ ಸಿನಿಮಾದಲ್ಲಿ ನವಮಿ ಹೆಸರಿನ ಪಾತ್ರ ಮಾಡಿದ್ದಾರೆ. ಅದರ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ.

    ಸಿಂಪಲ್ ಸುನಿ ನಿರ್ದೇಶನದ ‘ಮೋಡ ಕವಿದ ವಾತಾವರಣ’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಪ್ರವೇಶ ಮಾಡಿರುವ ಮೋಕ್ಷಾ, 2ನೇ ಸಿನಿಮಾಗೆ ಧನಂಜಯ್ (Dhananjay) ಜೊತೆ ನಟಿಸಲು ಅವಕಾಶ ಸಿಕ್ಕಿದೆ. ನಟಿಸಿರುವ ಮೊದಲ ಸಿನಿಮಾ ಇನ್ನೂ ರಿಲೀಸ್ ಆಗದೇ ಇದ್ದರೂ ಎರಡನೇ ಚಿತ್ರಕ್ಕೆ ಅವಕಾಶ ಸಿಕ್ಕಿದೆ. ಅದೂ ಆಡಿಷನ್ ಮಾಡಿ ಪರಮ್ ನಾಯಕಿಯನ್ನು ಆಯ್ಕೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

     

    ಕೋಟಿ ಸಿನಿಮಾ ಕುರಿತು ಹೇಳೋದಾದರೆ, ಕೋಟಿ ಕನಸು ಕಾಣುವ ಒಬ್ಬ ಕಾಮನ್‌ ಮ್ಯಾನ್‌ ಕತೆ ಇದು ಎನ್ನುವುದನ್ನು ಶೀರ್ಷಿಕೆ ಹೇಳುವಂತಿದೆ. ದುಡ್ಡಿಗಾಗಿ ಒದ್ದಾಡುವ ಒಬ್ಬ ಸಾಮಾನ್ಯ ಮನುಷ್ಯನ ಭಾವನೆಗಳನ್ನು ಈ ಸಿನಿಮಾ ಹೇಳಬಹುದು ಎಂಬ ಸೂಚನೆಯನ್ನು ಧನಂಜಯ ಆಗಲೇ ಕೊಟ್ಟಿದ್ದಾರೆ. ಹೊಯ್ಸಳ ನಂತರ ಬರುತ್ತಿರುವ ಅವರ ಮೊದಲ ಕನ್ನಡ ಚಿತ್ರ ಇದು. ಅಲ್ಲಿಗೆ ಡಾಲಿ ಧನಂಜಯ ಅವರ ಚಿತ್ರ ವರ್ಷದ ಅಂತರದ ನಂತರ ಬಿಡುಗಡೆ ಆಗುತ್ತಿದೆ. ನಟ ರಾಕ್ಷಸ ಎಂದು ಬಿರುದು ಪಡೆದಿರುವ ಡಾಲಿ ಅವರ ವೃತ್ತಿ ಜೀವನದಲ್ಲಿ ಇದೊಂದು ಮೈಲುಗಲ್ಲು ಆಗಬಹುದಾದ ಸಿನಿಮಾ ಎಂಬ ಅಭಿಪ್ರಾಯ ಈಗಾಗಲೇ ಬಂದಿರುವುದು ಸಿನಿಮಾದ ಕುರಿತು ನಿರೀಕ್ಷೆಯನ್ನು ಹೆಚ್ಚು ಮಾಡಿದೆ.

  • ಏ.13ಕ್ಕೆ ಡಾಲಿ-ಪರಮ್ ಕಾಂಬಿನೇಷನ್ ನ ‘ಕೋಟಿ’ ಚಿತ್ರದ ಟೀಸರ್ ರಿಲೀಸ್

    ಏ.13ಕ್ಕೆ ಡಾಲಿ-ಪರಮ್ ಕಾಂಬಿನೇಷನ್ ನ ‘ಕೋಟಿ’ ಚಿತ್ರದ ಟೀಸರ್ ರಿಲೀಸ್

    ಡಾಲಿ ಧನಂಜಯ್ (Dolly Dhananjay) ನಟನೆಯ ‘ಕೋಟಿ’ (Kotee) ಸಿನಿಮಾದ ಟೀಸರ್ ಇದೇ ಏಪ್ರಿಲ್ 13ರಂದು ರಿಲೀಸ್ ಆಗುತ್ತಿದೆ. ಎರಡು ದಿನಗಳ ಹಿಂದೆಯಷ್ಟೇ ಟೈಟಲ್ ಅನೌನ್ಸ್ ಮಾಡಿದ್ದ ಚಿತ್ರತಂಡ ಈಗ ಟೀಸರ್ ರಿಲೀಸ್ಗೆ ಸರ್ವ ಸಿದ್ಧತೆ ಮಾಡಿಕೊಂಡಿದೆ. ಕನ್ನಡ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಪರಮ್ ಈ ಸಿನಿಮಾದ ನಿರ್ದೇಶಕರು.

    ಕಿರುತೆರೆಯಲ್ಲಿ ಹತ್ತು ಹಲವು ಪ್ರಯೋಗಗಳ ಮೂಲಕ ಗಮನ ಸೆಳೆದಿದ್ದವರು ಪರಮ್.‌ ಕಲರ್ಸ್‌ ಕನ್ನಡ ವಾಹಿನಿಯನ್ನು ಅವರು ಮುನ್ನಡೆಸುತ್ತಿದ್ದಾಗ ಅತಿ ಹೆಚ್ಚು ಕನ್ನಡ ಮೂಲದ ಕತೆಗಳನ್ನು ಅವರು ಕೊಟ್ಟಿದ್ದು ನಿಮಗೆಲ್ಲಾ ಗೊತ್ತೇ ಇದೆ. ಈಗ ಅಪ್ಪಟ ಕನ್ನಡದ ಕತೆಯೊಂದಿಗೆ ಅವರು ಮೊದಲ ಬಾರಿ ಸಿನಿಮಾ ಒಂದನ್ನು ನಿರ್ದೇಶಿದ್ದಾರೆ.

    ಯುಗಾದಿ ಹಬ್ಬದ ದಿನದಂದು ಕೋಟಿ ಚಿತ್ರದ ಟೈಟಲ್‌ ಬಿಡುಗಡೆಯಾಗಿದೆ. ಐದುನೂರು ರೂಪಾಯಿ ನೋಟುಗಳನ್ನು ಮಡಿಚಿ ಮಾಡಿರುವಂತೆ ಕಾಣಿಸುವ ಕೋಟಿ ಟೈಟಲ್‌ನಲ್ಲಿ ಕೇವಲ ಧನಂಜಯ್‌ ಅವರ ಕಣ್ಣುಗಳನ್ನು ಮಾತ್ರ ಬಳಸಿಕೊಂಡಿರುವುದು ವಿಶೇಷ. ತೀಕ್ಷ್ಣ ಕಣ್ಣುಗಳಿಂದ ಈ ಪೋಸ್ಟರ್‌ ಗಮನ ಸೆಳೆಯುತ್ತಿರುವುದಂತೂ ಹೌದು.‌

    ಕೋಟಿ ಕನಸು ಕಾಣುವ ಒಬ್ಬ ಕಾಮನ್‌ ಮ್ಯಾನ್‌ ಕತೆ ಇದು ಎನ್ನುವುದನ್ನು ಶೀರ್ಷಿಕೆ ಹೇಳುವಂತಿದೆ. ದುಡ್ಡಿಗಾಗಿ ಒದ್ದಾಡುವ ಒಬ್ಬ ಸಾಮಾನ್ಯ ಮನುಷ್ಯನ ಭಾವನೆಗಳನ್ನು ಈ ಸಿನಿಮಾ ಹೇಳಬಹುದು ಎಂಬ ಸೂಚನೆಯನ್ನು ಧನಂಜಯ ಆಗಲೇ ಕೊಟ್ಟಿದ್ದಾರೆ. ಹೊಯ್ಸಳ ನಂತರ ಬರುತ್ತಿರುವ ಅವರ ಮೊದಲ ಕನ್ನಡ ಚಿತ್ರ ಇದು. ಅಲ್ಲಿಗೆ ಡಾಲಿ ಧನಂಜಯ ಅವರ ಚಿತ್ರ ವರ್ಷದ ಅಂತರದ ನಂತರ ಬಿಡುಗಡೆ ಆಗುತ್ತಿದೆ. ನಟ ರಾಕ್ಷಸ ಎಂದು ಬಿರುದು ಪಡೆದಿರುವ ಡಾಲಿ ಅವರ ವೃತ್ತಿ ಜೀವನದಲ್ಲಿ ಇದೊಂದು ಮೈಲುಗಲ್ಲು ಆಗಬಹುದಾದ ಸಿನಿಮಾ ಎಂಬ ಅಭಿಪ್ರಾಯ ಈಗಾಗಲೇ ಬಂದಿರುವುದು ಸಿನಿಮಾದ ಕುರಿತು ನಿರೀಕ್ಷೆಯನ್ನು ಹೆಚ್ಚು ಮಾಡಿದೆ.

    ಈ ಸಿನಿಮಾಗೆ ಕತೆ, ಚಿತ್ರಕತೆ ಮತ್ತು ಸಂಭಾಷಣೆಯನ್ನು ಬರೆದು ಸ್ವತಃ ಪರಮ್‌ (Parameshwar Gundkal) ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಇದರೊಂದಿಗೆ ಸಿನಮಾ ಮಾಡಬೇಕು ಎಂಬ ಅವರ ಬಹುದಿನಗಳ ಕನಸು ನೆರವೇರಿದಂತಾಗಿದೆ. ಕಳೆದ ವರ್ಷ ಟೆಲಿವಿಷನ್‌ ಚಾನೆಲ್ಲಿನಿಂದ ಹೊರಗೆ ಬಂದಾಗ ತಾನು ಹಿರಿತೆರೆಯಲ್ಲಿ ಕತೆಗಳನ್ನು ಹೇಳಬೇಕು ಎಂದು  ಅವರು ಆಸೆ ಪಟ್ಟಿದ್ದನ್ನು ಇಲ್ಲಿ ನೆನಪು ಮಾಡಿಕೊಳ್ಳಬಹುದು.

     

    ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವುದು ಜಿಯೋ ಸ್ಟುಡಿಯೋಸ್‌ ನ ಜ್ಯೋತಿ ದೇಶಪಾಂಡೆ. ಈ ವರ್ಷ ಒಂದಾದ ಮೇಲೆ ಒಂದು ಹಿಟ್‌ ಹಿಂದಿ ಸಿನಿಮಾಗಳನ್ನು ಕೊಟ್ಟಿರುವ ಜ್ಯೋತಿ ಮತ್ತು ಜಿಯೋ ಸ್ಟುಡಿಯೋಸ್ ಈ ಮೂಲಕ ಕನ್ನಡಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ವಾಸುಕಿ ವೈಭವ್‌ ಹಾಡುಗಳನ್ನು ಸಂಯೋಜನೆ ಮಾಡಿದ್ದರೆ ನೊಬಿನ್‌ ಪೌಲ್‌ ಹಿನ್ನೆಲೆ ಸಂಗೀತ ಕೊಟ್ಟಿದ್ದಾರೆ. ಈ ಸಿನಿಮಾಗೆ ಅರುಣ್‌ ಬ್ರಹ್ಮನ್‌ ಛಾಯಾಗ್ರಹಣವಿದೆ.