Tag: ಪರಾರಿ

  • ನಾಲ್ವರು ಪೊಲೀಸರಿದ್ದರೂ ಸಿನಿಮಾ ಸ್ಟೈಲ್‍ನಲ್ಲಿ ಇಬ್ಬರು ಆರೋಪಿಗಳು ಎಸ್ಕೇಪ್- ಸಿಸಿಟಿವಿಯಲ್ಲಿ ರೆಕಾರ್ಡ್ ಆಯ್ತು ಕೃತ್ಯ

    ನಾಲ್ವರು ಪೊಲೀಸರಿದ್ದರೂ ಸಿನಿಮಾ ಸ್ಟೈಲ್‍ನಲ್ಲಿ ಇಬ್ಬರು ಆರೋಪಿಗಳು ಎಸ್ಕೇಪ್- ಸಿಸಿಟಿವಿಯಲ್ಲಿ ರೆಕಾರ್ಡ್ ಆಯ್ತು ಕೃತ್ಯ

    ಬಾಗಲಕೋಟೆ: ವೈದ್ಯಕೀಯ ಪರೀಕ್ಷೆಗೆ ಎಂದು ಕರೆತಂದ ಆರೋಪಿ ಓರ್ವ ಪೊಲೀಸರಿಂದ ತಪ್ಪಿಸಿಕೊಂಡು ಸಿನಿಮೀಯ ರೀತಿಯಲ್ಲಿ ಓಡಿಹೋದ ಘಟನೆ ಮಾರ್ಚ್ 9ರ ರಾತ್ರಿ 9.15ಕ್ಕೆ ಬಾಗಲಕೋಟೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ದಿಲೀಪ್ ರಾಟೋಡ್ ಮತ್ತು ಕೃಷ್ಣಾ ಇಬ್ಬರು ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಮೊದಲು ಪೊಲೀಸರೊಂದಿಗೆ ಇಬ್ಬರು ಸುಮ್ಮನೆ ಬರುತ್ತಾರೆ. ಪರೀಕ್ಷೆ ಬಳಿಕ ಇಬ್ಬರು ಆಸ್ಪತ್ರೆಯಿಂದ ಓಡುತ್ತಾರೆ. ಅದರಲ್ಲಿ ಕೃಷ್ಣನನ್ನ ಪೊಲೀಸರು ಬಂಧಿಸಿದ್ದಾರೆ. ದಿಲೀಪ್ ಮಾತ್ರ ಕೈಗೆ ಸಿಗದೆ ಪರಾರಿಯಾಗಿದ್ದಾನೆ.

    ಪೊಲೀಸರೊಂದಿಗೆ ಶಾಂತವಾಗಿ ಬರುತ್ತಿದ್ದ ದಿಲೀಪ್ ಒಮ್ಮಿಂದೊಮ್ಮೆಲೆ ಓಡಲು ಶುರು ಮಾಡುತ್ತಾನೆ. ಆತನ ಹಿಂದೆ ಪೊಲೀಸರು ಬೆನ್ನಟ್ಟುತ್ತಾರೆ. ಆದರೆ ದಿಲೀಪ್ ಮಾತ್ರ ಪೊಲೀಸರ ಕೈಗೆ ಸಿಗದೇ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಸಿನಿಮೀಯ ರೀತಿಯಲ್ಲಿ ಪರಾರಿಯಾಗಿದ್ದಾನೆ.

    ಜಿಲ್ಲಾಸ್ಪತ್ರೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ದಿಲೀಪ್ ರಾಟೋಡ್, ಕೃಷ್ಣಾ ರಾಟೋಡ್ ಮುಚಕಂಡಿ ತಾಂಡಾ ನಿವಾಸಿಗಳಾಗಿದ್ದಾರೆ. ಹೋಳಿ ಹಬ್ಬದ ಸಂದರ್ಭ ಬಾಗಲಕೋಟೆಯ ಹರನಶಿಕಾರಿಗಲ್ಲಿ ಯುವಕರು ಮತ್ತು ದಿಲೀಪ್ ರಾಟೋಡ್, ಕೃಷ್ಣಾ ರಾಟೋಡ್ ಹೊಡೆದಾಡಿದ್ದರು.

    ಎರಡು ಕಡೆಯಿಂದ ಬಾಗಲಕೋಟೆ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿವೆ. ಪೊಲೀಸ್ ಕಸ್ಟಡಿ ವೇಳೆ ವೈದ್ಯಕೀಯ ಪರೀಕ್ಷೆಗೆ ಎಂದು ಕರೆತಂದಾಗ ದಿಲೀಪ್ ಓಡಿ ಹೋಗಿದ್ದು, ಬಾಗಲಕೋಟೆ ನಗರ ಠಾಣಾ ಪೊಲೀಸರು ಶೋಧ ನಡೆಸಿದ್ದಾರೆ.

    https://www.youtube.com/watch?v=Z1woh9XyXz8

  • ಮಗ ಲವರ್ ಜೊತೆ ಪರಾರಿ-ಪುತ್ರನ ಪ್ರೇಮ ಪ್ರಣಯಕ್ಕೆ ಆಸ್ಪತ್ರೆ ಸೇರಿದ್ರು ಪೇರೆಂಟ್ಸ್

    ಮಗ ಲವರ್ ಜೊತೆ ಪರಾರಿ-ಪುತ್ರನ ಪ್ರೇಮ ಪ್ರಣಯಕ್ಕೆ ಆಸ್ಪತ್ರೆ ಸೇರಿದ್ರು ಪೇರೆಂಟ್ಸ್

    ಶಿವಮೊಗ್ಗ: ಪ್ರೀತಿ ಮಾಡಿ ಯುವತಿಯೊಂದಿಗೆ ನಾಪತ್ತೆಯಾದ ಯುವಕನ ತಂದೆ-ತಾಯಿ ಪೊಲೀಸರ ಟಾರ್ಚರ್ ತಾಳಲಾಗದೆ ವಿಷ ಸೇವಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಅರಬಿಳಚಿ-ವಡ್ಡರಹಟ್ಟಿ ಗ್ರಾಮದಲ್ಲಿ ನಡೆದಿದೆ.

    ಈ ಗ್ರಾಮದ ದಶರಥ ಎಂಬ ಯುವಕ ಅಡಕೆ ಬೇಯಿಸುವ ಕೆಲಸಕ್ಕೆ ಹೋಗುತ್ತಿದ್ದ. ಇದೇ ಜಾಗಕ್ಕೆ ಅಡಕೆ ಸುಲಿಯಲು ಬರುತ್ತಿದ್ದ ಸಿಂಧೂ ಎಂಬಾಕೆಯೊಂದಿಗೆ ಸ್ನೇಹ ಬೆಳೆಸಿ ನಂತರ ಅದು ಪ್ರೀತಿಗೆ ತಿರುಗಿದೆ. ಈ ಜೋಡಿ ಹದಿನೈದು ದಿನದ ಹಿಂದೆ ಊರು ಬಿಟ್ಟು ಹೋಗಿದ್ದಾರೆ. ಈ ಬಗ್ಗೆ ಹುಡುಗಿ ಮನೆಯವರು ಹೊಳೆಹೊನ್ನೂರು ಠಾಣೆಗೆ ದೂರು ನೀಡಿದ್ದರು.

    ಹೊಳೆಹೊನ್ನೂರು ಠಾಣೆ ಪೊಲೀಸರು ಹುಡುಗ ದಶರಥನ ಅಪ್ಪ ಕುಮಾರಪ್ಪ ಹಾಗೂ ಅಮ್ಮ ನೀಲಾವತಿ ಅವರನ್ನು ಠಾಣೆಗೆ ಕರೆಸಿ ಹೊಡೆದಿದ್ದಾರೆ ಅಂತಾ ಹೇಳಲಾಗಿದೆ. ಅಲ್ಲದೇ ಮೂರು ದಿನದ ಒಳಗಾಗಿ ನಿಮ್ಮ ಮಗನನ್ನು ಕರೆದು ತನ್ನಿ ಎಂದು ಎಚ್ಚರಿಕೆ ನೀಡಿ ಮನೆಗೆ ಕಳಿಸಿದ್ದಾರೆ. ಇತ್ತ ಮನೆಯ ಬಳಿಯೂ ಹುಡುಗಿ ಕಡೆಯವರು ಬಂದು ಗಲಾಟೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

    ಇದರಿಂದ ಬೇಸರಗೊಂಡ ಯುವಕನ ತಂದೆ-ತಾಯಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಸ್ಥಳೀಯರು ತೀವ್ರವಾಗಿ ಅಸ್ವಸ್ಥಗೊಂಡಿರುವ ಇಬ್ಬರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

  • ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣ: ಕೊನೆಗೂ ಪೊಲೀಸರಿಗೆ ಶರಣಾದ ಶಾಸಕ ಹ್ಯಾರಿಸ್ ಪುತ್ರ

    ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣ: ಕೊನೆಗೂ ಪೊಲೀಸರಿಗೆ ಶರಣಾದ ಶಾಸಕ ಹ್ಯಾರಿಸ್ ಪುತ್ರ

    ಬೆಂಗಳೂರು: ಯುವಕನೊಬ್ಬನ ಮೇಲೆ ನಡೆಸಿ ಪರಾರಿಯಾಗಿದ್ದ ಶಾಸಕ ಹ್ಯಾರಿಸ್ ಪುತ್ರ ಕೊನೆಗೂ ಪೊಲೀಸರ ಮುಂದೆ ಶರಣಾಗಿದ್ದಾನೆ.

    ಶನಿವಾರ ರಾತ್ರಿ ಯುವಕನೊಬ್ಬನ ಜೊತೆ ಜಗಳವಾಡಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಬಳಿಕ ನಲಪಾಡ್ ಪಾರಾರಿಯಾಗಿದ್ದನು. ಆದ್ರೆ ಇಂದು ಬೆಳಗ್ಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ಪೊಲೀಸರ ಮುಂದೆ ಶರಣಾಗಿದ್ದಾನೆ.

    ಸದ್ಯ ಘಟನೆಯಲ್ಲಿ ಗಂಭೀರ ಗಾಯಗೊಂಡ ಯುವಕ ವಿದ್ವತ್ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಮಗನನ್ನು ನಾನೇ ಸರೆಂಡರ್ ಮಾಡಿಸ್ತೇನೆ- ಪೊಲೀಸರು ಬರ್ತಿದ್ದಂತೆ ಕಥೆ ಕಟ್ಟಿದ ಶಾಸಕ ಹ್ಯಾರಿಸ್

    ಏನಿದು ಘಟನೆ?: ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರ ಮಗ ಮಹಮ್ಮದ್ ನಲಪಾಡ್ ಯುಬಿ ಸಿಟಿ ರೆಸ್ಟೊರೆಂಟ್ ನಲ್ಲಿ ಊಟ ಮಾಡುವ ವಿಷಯಕ್ಕಾಗಿ ಕಿರಿಕ್ ತೆಗೆದು ಯುವಕನೋರ್ವನ ಮೇಲೆ ಹಲ್ಲೆ ನಡೆಸಿದ್ದಾನೆ. ಉದ್ಯಮಿ ಲೋಕ್‍ನಾಥ್ ಪುತ್ರ ವಿದ್ವತ್ ಹಲ್ಲೆಗೊಳಗಾದ ಯುವಕನಾಗಿದ್ದು, ಇವರು ಇತ್ತೀಚೆಗೆ ವಿದ್ವತ್ ಸಿಂಗಾಪೂರ್‍ನಲ್ಲಿ ಪದವಿ ಮುಗಿಸಿ ನಗರಕ್ಕೆ ಆಗಮಿಸಿದ್ದರು. ಶನಿವಾರ ರಾತ್ರಿ ಸುಮಾರು 11 ಗಂಟೆಗೆ ವಿದ್ವತ್ ಊಟಕ್ಕೆಂದು ಯುಬಿ ಸಿಟಿ ರೆಸ್ಟೊರೆಂಟ್ ಗೆ ತೆರಳಿದ್ದರು. ಈ ವೇಳೆ ಊಟ ಮಾಡುವ ವಿಷಯಕ್ಕಾಗಿ ವಿದ್ವತ್ ಮತ್ತು ಮಹಮ್ಮದ್ ನಲಪಾಡ್ ನಡುವೆ ಜಗಳ ನಡೆದಿದೆ. ಈ ಜಗಳ ತಾರಕಕ್ಕೇರಿ ಹ್ಯಾರಿಸ್ ಅವರ ಪುತ್ರ ಮಹಮ್ಮದ್ ಮತ್ತು ಆತನ ಸ್ನೇಹಿತರು ವಿದ್ವತ್ ಮುಖಕ್ಕೆ ಪಂಚ್ ಕೊಟ್ಟು, ಮನಸ್ಸೋ ಇಚ್ಛೆ ಥಳಿಸಿದ್ದಾರೆ.

    ಹಲ್ಲೆಗೊಳಗಾದ ವಿದ್ವತ್ ರನ್ನು ನಗರದ ಮಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಷ್ಟಕ್ಕೆ ಸುಮ್ಮನಾಗದ ಶಾಸಕರ ಪುತ್ರ ಮತ್ತು ಆತನ ಗ್ಯಾಂಗ್ ಆಸ್ಪತ್ರೆಗೆ ನುಗ್ಗಿ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿದ್ದ ವಿದ್ವತ್ ಸಹೋದರ ಸಾತ್ವಿಕ್ ಮೇಲೆಯೂ ಹಲ್ಲೆ ನಡೆಸಿದ್ದಾರೆ. ಇದೀಗ ವಿದ್ವತ್ ಮಲ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ. ಈ ಸಂಬಂಧ ಮಹಮ್ಮದ್ ನಲಪಾಡ್ ಹ್ಯಾರಿಸ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ಪ್ರಮುಖ ಆರೋಪಿಯಾಗಿರುವ ಶಾಸಕರ ಪುತ್ರ ಮಹಮ್ಮದ್ ನಲಪಾಡ್ ಪರಾರಿಯಾಗಿದ್ದಾನೆ.

    ವಿದ್ವತ್- ಹಲ್ಲೆಗೊಳಗಾದ ಯುವಕ.
  • ಮಗನನ್ನು ನಾನೇ ಸರೆಂಡರ್ ಮಾಡಿಸ್ತೇನೆ- ಪೊಲೀಸರು ಬರ್ತಿದ್ದಂತೆ ಕಥೆ ಕಟ್ಟಿದ ಶಾಸಕ ಹ್ಯಾರಿಸ್

    ಮಗನನ್ನು ನಾನೇ ಸರೆಂಡರ್ ಮಾಡಿಸ್ತೇನೆ- ಪೊಲೀಸರು ಬರ್ತಿದ್ದಂತೆ ಕಥೆ ಕಟ್ಟಿದ ಶಾಸಕ ಹ್ಯಾರಿಸ್

    ಬೆಂಗಳೂರು: ನನ್ನ ಮಗನನ್ನು ನಾನೇ ಪೊಲೀಸರಿಗೆ ಸರೆಂಡರ್ ಮಾಡಿಸ್ತೇನೆ. ನಿನ್ನೆ ರಾತ್ರಿ ಮಗ ಆತನ ಅಮ್ಮನಿಗೆ ಕರೆ ಮಾಡಿದ್ದನು. ಈ ವೇಳೆ ನಾನೇ ಸರೆಂಡರ್ ಆಗುವಂತೆ ಹೇಳಿದ್ದಾಗಿ ಶಾಂತಿನಗರ ಕ್ಷೇತ್ರದ ಶಾಸಕ ಹ್ಯಾರಿಸ್ ಹೇಳಿದ್ದಾರೆ.

    ಯುವಕನ ಮೇಲೆ ರೆಸ್ಟೊರೆಂಟ್ ನಲ್ಲಿ ಹಲ್ಲೆ ನಡೆಸಿದ ಬಳಿಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ತಲೆಮರೆಸಿಕೊಂಡಿದ್ದನು. ಈ ಕುರಿತು ಇದೀಗ ಹ್ಯಾರಿಸ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ನನ್ನ ಮಗ ಫೋನ್ ಸ್ವಿಚ್ ಆಫ್ ಮಾಡ್ಕೊಂಡಿದ್ದನು. ನಿನ್ನೆ ರಾತ್ರಿ ಅವ್ನ ಅಮ್ಮನಿಗೆ ಫೋನ್ ಮಾಡಿದ್ದನು. ಆಗ ಸರೆಂಡರ್ ಆಗುವಂತೆ ನಾನೇ ಮಗನಿಗೆ ಹೇಳಿದ್ದೇನೆ ಅಂದಿದ್ದಾರೆ.

    ವಿದ್ವತ್- ಹಲ್ಲೆಗೊಳಗಾದ ಯುವಕ.

    ಗೂಂಡಾಗಿರಿ ನಡೆಸಿ ಹಲವು ಗಂಟೆಗಳೇ ಕಳೆದ್ರೂ ಅರೆಸ್ಟ್ ಆಗದ ಮಹಮ್ಮದ್ ನಲಪಾಡ್ ಇದೀಗ ಅಶೋಕ ನಗರ ಸ್ಟೇಷನ್ ಪೊಲೀಸರು ಮನೆಗೆ ಬರ್ತಿದ್ದಂತೆ ಶಾಸಕರು ಕಥೆ ಕಟ್ಟಿದ್ದಾರೆ. ಶಾಸಕನ ರೌಡಿ ಮಗನ ಚೇಲಾಗಳನ್ನಷ್ಟೇ ಅರೆಸ್ಟ್ ಮಾಡಿ ಬೆಂಗಳೂರು ಪೊಲೀಸ್ರ ನಾಟಕಾವಾಡ್ತಿದ್ದಾರಾ?. ಅಲ್ಲದೇ ಶಾಸಕರಿಗೆ ಮಗ ಎಲ್ಲಿದ್ದಾನೆ ಅನ್ನೋದು ಗೊತ್ತಿದೆ ಅದ್ಮೇಲೆ ಅರೆಸ್ಟ್ ಮಾಡೋಕೆ ಪೊಲೀಸರಿಗೇನು? ಸರೆಂಡರ್ ಮೂಲಕ ಮಹಮ್ಮದ್ ನಲಪಾಡ್ ಬಚಾವ್ ಮಾಡೋಕೆ ಪೊಲೀಸ್ರ ಕುತಂತ್ರ ಹೂಡ್ತಿದ್ದಾರಾ ಎಂಬ ಅನುಮಾನಗಳು ಹುಟ್ಟಿವೆ. ಇದನ್ನೂ ಓದಿ: ನಲಪಾಡ್ ಹಲ್ಲೆ ಕೇಸ್ ಸಿಸಿಬಿಗೆ- ದಿನ ಕಳೆದ್ರೂ ಹ್ಯಾರಿಸ್ ಪುತ್ರನ ಬಂಧಿಸದ ಖಾಕಿ

    ಏನಿದು ಘಟನೆ?: ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರ ಮಗ ಮಹಮ್ಮದ್ ನಲಪಾಡ್ ಯುಬಿ ಸಿಟಿ ರೆಸ್ಟೊರೆಂಟ್ ನಲ್ಲಿ ಊಟ ಮಾಡುವ ವಿಷಯಕ್ಕಾಗಿ ಕಿರಿಕ್ ತೆಗೆದು ಯುವಕನೋರ್ವನ ಮೇಲೆ ಹಲ್ಲೆ ನಡೆಸಿದ್ದಾನೆ. ಉದ್ಯಮಿ ಲೋಕ್‍ನಾಥ್ ಪುತ್ರ ವಿದ್ವತ್ ಹಲ್ಲೆಗೊಳಗಾದ ಯುವಕನಾಗಿದ್ದು, ಇವರು ಇತ್ತೀಚೆಗೆ ವಿದ್ವತ್ ಸಿಂಗಾಪೂರ್‍ನಲ್ಲಿ ಪದವಿ ಮುಗಿಸಿ ನಗರಕ್ಕೆ ಆಗಮಿಸಿದ್ದರು. ಶನಿವಾರ ರಾತ್ರಿ ಸುಮಾರು 11 ಗಂಟೆಗೆ ವಿದ್ವತ್ ಊಟಕ್ಕೆಂದು ಯುಬಿ ಸಿಟಿ ರೆಸ್ಟೊರೆಂಟ್ ಗೆ ತೆರಳಿದ್ದರು. ಈ ವೇಳೆ ಊಟ ಮಾಡುವ ವಿಷಯಕ್ಕಾಗಿ ವಿದ್ವತ್ ಮತ್ತು ಮಹಮ್ಮದ್ ನಲಪಾಡ್ ನಡುವೆ ಜಗಳ ನಡೆದಿದೆ. ಈ ಜಗಳ ತಾರಕಕ್ಕೇರಿ ಹ್ಯಾರಿಸ್ ಅವರ ಪುತ್ರ ಮಹಮ್ಮದ್ ಮತ್ತು ಆತನ ಸ್ನೇಹಿತರು ವಿದ್ವತ್ ಮುಖಕ್ಕೆ ಪಂಚ್ ಕೊಟ್ಟು, ಮನಸ್ಸೋ ಇಚ್ಛೆ ಥಳಿಸಿದ್ದಾರೆ.

    ಹಲ್ಲೆಗೊಳಗಾದ ವಿದ್ವತ್ ರನ್ನು ನಗರದ ಮಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಷ್ಟಕ್ಕೆ ಸುಮ್ಮನಾಗದ ಶಾಸಕರ ಪುತ್ರ ಮತ್ತು ಆತನ ಗ್ಯಾಂಗ್ ಆಸ್ಪತ್ರೆಗೆ ನುಗ್ಗಿ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿದ್ದ ವಿದ್ವತ್ ಸಹೋದರ ಸಾತ್ವಿಕ್ ಮೇಲೆಯೂ ಹಲ್ಲೆ ನಡೆಸಿದ್ದಾರೆ. ಇದೀಗ ವಿದ್ವತ್ ಮಲ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ. ಈ ಸಂಬಂಧ ಮಹಮ್ಮದ್ ನಲಪಾಡ್ ಹ್ಯಾರಿಸ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ಪ್ರಮುಖ ಆರೋಪಿಯಾಗಿರುವ ಶಾಸಕರ ಪುತ್ರ ಮಹಮ್ಮದ್ ನಲಪಾಡ್ ಪರಾರಿಯಾಗಿದ್ದಾನೆ.

  • ಮಗಳಿಗೆ ಕಣ್ಣಾಕಿದವರ ಮೇಲೆ ಹಲ್ಲೆಗೈಯಲು ಪುಡಿ ರೌಡಿಗಳಿಗೆ ಸುಪಾರಿ ಕೊಟ್ಟ ತಾಯಿ!

    ಮಗಳಿಗೆ ಕಣ್ಣಾಕಿದವರ ಮೇಲೆ ಹಲ್ಲೆಗೈಯಲು ಪುಡಿ ರೌಡಿಗಳಿಗೆ ಸುಪಾರಿ ಕೊಟ್ಟ ತಾಯಿ!

    ಶಿವಮೊಗ್ಗ: ತಾಯಿಯೊಬ್ಬರು ತನ್ನ ಮಗಳ ಮೇಲೆ ಕಣ್ಣಾಕಿದವರ ಮೇಲೆ ಹಲ್ಲೆ ನಡೆಸಲು ಪುಡಿ ರೌಡಿಗಳಿಗೆ ಸುಪಾರಿ ಕೊಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯದ ಗೋವಿಂದಪುರ ಗ್ರಾಮದಲ್ಲಿ ನಡೆದಿದೆ.

    ಧನಲಕ್ಷ್ಮಿ ಎಂಬವರ ಮಗಳ ಮೇಲೆ ನಿತಿನ್ ಎಂಬಾತ ಕಣ್ಣು ಹಾಕಿದ್ದ. ಆಕೆಯನ್ನು ಲವ್ ಮಾಡುತ್ತಿರುವುದಾಗಿ ಗೆಳೆಯರಿಗೆ ಹೇಳಿಕೊಂಡು ತಿರುಗಾಡುತ್ತಿದ್ದ. ಇದರಿಂದ ರೊಚ್ಚಿಗೆದ್ದ ಧನಲಕ್ಷ್ಮಿ ಪುಡಿ ರೌಡಿ ಸಂತು ಎಂಬಾತನಿಗೆ ಸುಪಾರಿ ಕೊಟ್ಟಿದ್ದಾರೆ. ಅಂತೆಯೇ ಸಂತು ನಿತಿನ್ ಮತ್ತು ಆತನ ಸ್ನೇಹಿತರ ಮೇಲೆ ಚೂರಿಯಂದ ಹಲ್ಲೆ ಮಾಡಿದ್ದಾನೆ.

    ಚೂರಿ ಇರಿತದಿಂದ ನಿತಿನ್ ತೀವ್ರವಾಗಿ ಗಾಯಗೊಂಡಿದ್ದಾನೆ. ಈತನ ಸ್ನೇಹಿತರಾದ ರಾಜು, ಪ್ರಜ್ವಲ್, ನವೀನ್ ಎಂಬವರೂ ಕೂಡ ಗಾಯಗೊಂಡಿದ್ದಾರೆ. ಸದ್ಯ ಗಾಯಗೊಂಡ ನಾಲ್ವರು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

    ಹಲ್ಲೆ ನಡೆಸಿದ ಬಳಿಕ ಪುಡಿ ರೌಡಿ ಕುಟ್ಟಿ ಮತ್ತು ಈತನ ಗೆಳೆಯರಾದ ನವೀನ್, ಪ್ರದೀಪ್, ಸಂತು ಎಂಬವರು ಪರಾರಿ ಆಗಿದ್ದಾರೆ. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ವರದಕ್ಷಿಣೆ ಕೊಡದಿದ್ದಕ್ಕೆ ಪತ್ನಿಗೆ ತಲಾಖ್ ಹೇಳಿ ನಾದಿನಿ ಜೊತೆ ಎಸ್ಕೇಪ್!

    ವರದಕ್ಷಿಣೆ ಕೊಡದಿದ್ದಕ್ಕೆ ಪತ್ನಿಗೆ ತಲಾಖ್ ಹೇಳಿ ನಾದಿನಿ ಜೊತೆ ಎಸ್ಕೇಪ್!

    ಲಕ್ನೋ: ದೇಶಾದ್ಯಂತ ತ್ರಿವಳಿ ತಲಾಖ್ ವಿರುದ್ಧ ಭಾರೀ ಚರ್ಚೆ ನಡೆಯುತ್ತಿದೆ. ಆದರೆ ವ್ಯಕ್ತಿಯೊಬ್ಬ ವರದಕ್ಷಿಣೆ ನೀಡಿಲ್ಲ ಎಂದು ಪತ್ನಿಗೆ ತಲಾಖ್ ಹೇಳಿದ್ದು ಮಾತ್ರವಲ್ಲದೇ ನಾದಿನಿ ಜೊತೆ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಸಹರಾನ್ಪುರ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಡಿಯೋಬಾಂಡ್ ಪಠಾಣ್‍ಪುರ ಕಾಲೊನಿಯಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಸಂತ್ರಸ್ತ ಮಹಿಳೆ ನೂರ್‍ಜಹನ್ ಬೇಗಂ (27) ಭಾನುವಾರ ಪೊಲೀಸರಿಗೆ ದೂರು ನೀಡಿದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ.

    ಏನಿದು ಪ್ರಕರಣ?
    ಕಳೆದ ಮೂರು ವರ್ಷಗಳ ಹಿಂದೆ ನೂರ್‍ಜಹನ್ ತಮ್ಮ ಪಕ್ಕದ ನಿವಾಸಿ ಅರ್ಷದ್ ಅಹ್ಮದ್‍ನ ಜೊತೆ ಮದುವೆಯಾಗಿದ್ದರು. ಈ ದಂಪತಿಗೆ ಒಂದು ಹೆಣ್ಣು ಮಗು ಕೂಡ ಇದೆ. ಮದುವೆಯ ಬಳಿಕ ಪತಿ ವರದಕ್ಷಿಣೆ ತರುವಂತೆ ಪ್ರತಿದಿನ ಪೀಡಿಸುತ್ತಿದ್ದನು. ನನ್ನ ತಂದೆಯವರು ಆತನ ಬೇಡಿಕೆಗಳನ್ನು ಈಡೇರಿಸುತ್ತಲೇ ಬಂದಿದ್ದರು. ಆದರೆ ಡಿಸೆಂಬರ್ 7ರಂದು ಅರ್ಷದ್ ನನ್ನ ಜೊತೆ ಕ್ರೂರವಾಗಿ ನಡೆದುಕೊಂಡು ಜೀವಂತವಾಗಿ ಸುಟ್ಟು ಹಾಕಲು ಯತ್ನಿಸಿದ್ದ. ಈ ವೇಳೆ ನನ್ನ ಅದೃಷ್ಟ ಚೆನ್ನಾಗಿ ಇದ್ದರಿಂದ ನೆರೆಹೊರೆಯವರು ಬಂದು ನನ್ನನ್ನು ಕಾಪಾಡಿದರು. ನಂತರ ಪತಿ ನನಗೆ ತಲಾಖ್ ನೀಡಿ, ನನ್ನ ಆಭರಣಗಳನ್ನು ತೆಗೆದುಕೊಂಡು ನನ್ನ ತಂಗಿಯ ಜೊತೆ ಓಡಿ ಹೋಗಿದ್ದಾನೆ ಎಂದು ನೂರ್‍ಜಹನ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಈ ಸಂಬಂಧ ದೂರು ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳುವಂತೆ ಡಿಯೋಬಾಂಡ್ ಪೊಲೀಸರ ಬಳಿ ಮನವಿ ಮಾಡಿದ್ದೆ. ಆದರೆ ಅವರು ಪ್ರಕರಣ ದಾಖಲಿಸಲು ಒಪ್ಪಿಕೊಳ್ಳಲಿಲ್ಲ ಎಂದು ನೂರ್‍ಜಹನ್ ಆರೋಪಿಸಿದ್ದಾರೆ.

    ಮಹಿಳೆ ದೂರು ನೀಡಿದ್ದು, ನಾವು ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ. ಈ ಸಂಬಂಧ ತನಿಖೆ ಆದ ಮೇಲೆ ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಸಹರಾನ್ಪುರದ ಸೀನಿಯರ್ ಸೂಪರಿಟೆಂಡೆಂಟ್ ಪೊಲೀಸ್ ಬಬ್ಲೂ ಕುಮಾರ್ ಹೇಳಿದ್ದಾರೆ.

     

     

  • 8 ವರ್ಷ ಪ್ರೀತ್ಸಿ ಮದ್ವೆಯಾಗಿ ಒಂದೂವರೆ ತಿಂಗ್ಳಿಗೇ ಪರಾರಿಯಾದ- 2ನೇ ಮದ್ವೆಗೆ ಪ್ಲಾನ್ ಅಂತ ಪ್ರಿಯತಮೆ ಕಣ್ಣೀರು

    8 ವರ್ಷ ಪ್ರೀತ್ಸಿ ಮದ್ವೆಯಾಗಿ ಒಂದೂವರೆ ತಿಂಗ್ಳಿಗೇ ಪರಾರಿಯಾದ- 2ನೇ ಮದ್ವೆಗೆ ಪ್ಲಾನ್ ಅಂತ ಪ್ರಿಯತಮೆ ಕಣ್ಣೀರು

    ಚಿಕ್ಕಬಳ್ಳಾಪುರ: ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದ ಅವರಿಬ್ಬರು 8 ವರ್ಷಗಳ ಕಾಲ ಪರಸ್ಪರ ಪ್ರೀತಿಸಿ, ಅಂರ್ತಜಾತಿ ವಿವಾಹವಾಗಿದ್ದರು. ಆದ್ರೆ ಅದೇನಾಯ್ತೋ ಏನೋ ಮದುವೆಯಾದ ಒಂದೂವರೆ ತಿಂಗಳು ಕಳೆಯುವಷ್ಟರಲ್ಲಿ ಆ ಯುವಕನಿಗೆ ಯುವತಿ ಬೇಡವಾಗಿದ್ದಾಳೆ. ಇಂತಹದ್ದೊಂದು ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

    ಚಿಕ್ಕಬಳ್ಳಾಪುರ ನಗರದ ರಜನಿ ಹಾಗೂ ಬಾಗೇಪಲ್ಲಿ ಮೂಲದ ವಿನೋದ್ ಇಬ್ಬರೂ 8 ವರ್ಷಗಳಿಂದ ಪರಸ್ಪರ ಪ್ರೀತಿಸಿ, ಕಳೆದ ಆಕ್ಟೋಬರ್ ತಿಂಗಳ 16ರಂದು ಮದುವೆಯಾಗಿದ್ದರು. ಈ ಮದುವೆಗೆ ರಜನಿ ಪೋಷಕರು ಓಪ್ಪಿದ್ದರು. ಆದ್ರೆ ವಿನೋದ್ ಪೋಷಕರು ಜಾತಿ ಬೇರೆ-ಬೇರೆ ಎಂಬ ಕಾರಣಕ್ಕೆ ಮದುವೆಗೆ ಓಪ್ಪಿರಲಿಲ್ಲ. ಆದ್ರೂ ತನ್ನ ಪೋಷಕರ ವಿರೋಧದ ನಡುವೆಯೂ ರಜನಿ ಕೈ ಹಿಡಿದ ವಿನೋದ್, ಮದುವೆಯಾದ ನಂತರ ಒಂದೂವರೆ ತಿಂಗಳು ಜೊತೆಯಲ್ಲಿಯೇ ಇದ್ದು ಸಂಸಾರ ನಡೆಸಿದ್ದ.

    ಅದೇನಾಯ್ತೋ ಏನೋ ನವೆಂಬರ್ 28ರಂದು ಎಂದಿನಂತೆ ಕೆಲಸಕ್ಕೆ ಹೋಗಿ ಬರುವುದಾಗಿ ಹೋದ ವಿನೋದ್ ಮತ್ತೆ ಮನಗೆ ವಾಪಾಸ್ಸು ಬಂದಿಲ್ಲ. ಇದ್ರಿಂದ ಕಂಗಲಾದ ರಜನಿ, ವಿನೋದ್ ತಂದೆ-ತಾಯಿಯನ್ನ ಕೇಳಿದ್ರೆ ನಮಗೆ ಗೊತ್ತಿಲ್ಲ ಅಂತಿದ್ದಾರೆ. ಘಟನೆ ನಂತರ ಮೋಸ ಹೋದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದು ಸದ್ಯ ಚೇತರಿಸಿಕೊಂಡಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ತನ್ನ ಗಂಡ ಕಾಣೆಯಾಗಿದ್ದಾನೆ ಅಂತ ಯುವತಿ ದೂರು ಕೂಡ ನೀಡಿದ್ದಾರೆ.

    ಮತ್ತೊಂದೆಡೆ ತನ್ನ ಗಂಡ ಕಾಣೆಯಾಗಲು ಆತನ ತಂದೆ-ತಾಯಿಯೇ ಕಾರಣ. ಆತನಿಗೆ ಎರಡನೇ ಮದುವೆ ಮಾಡಲು ಅವರೆಲ್ಲಾ ಪ್ಲಾನ್ ಮಾಡಿ, ನನ್ನ ಗಂಡನನ್ನ ನಾಪತ್ತೆಯಾಗುವಂತೆ ಮಾಡಿದ್ದಾರೆ ಅಂತ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ನನ್ನ ಗಂಡ ನನಗೆ ಬೇಕು, ನ್ಯಾಯ ಕೊಡಿಸಿ ಅಂತ ಅಂಗಲಾಚುತ್ತಿದ್ದಾರೆ.

     

  • ಮಸೀದಿ ವಿಚಾರದಲ್ಲಿ 2 ತಂಡಗಳ ನಡುವೆ ಗ್ಯಾಂಗ್ ವಾರ್- ಮೂವರಿಗೆ ಗಂಭೀರ ಗಾಯ

    ಮಸೀದಿ ವಿಚಾರದಲ್ಲಿ 2 ತಂಡಗಳ ನಡುವೆ ಗ್ಯಾಂಗ್ ವಾರ್- ಮೂವರಿಗೆ ಗಂಭೀರ ಗಾಯ

    ಮಂಗಳೂರು: ಮಸೀದಿ ವಿಚಾರದಲ್ಲಿ ಎರಡು ತಂಡಗಳ ನಡುವಿನ ಮನಸ್ತಾಪ ತಾರಕಕ್ಕೇರಿ ಗ್ಯಾಂಗ್ ವಾರ್ ನಡೆದ ಘಟನೆ ಮಂಗಳೂರಿನ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯಲ್ಲಿ ನಡೆದಿದೆ.

    8 ಮಂದಿಯ ತಂಡ ಲಾಂಗು ಮಚ್ಚುಗಳನ್ನು ಹಿಡಿದು 3 ಜನರ ಮೇಲೆ ದಾಳಿ ನಡೆಸಿ ಮನಸೋ ಇಚ್ಛೆ ಹಲ್ಲೆ ನಡೆಸಿದೆ. ಘಟನೆಯಲ್ಲಿ ಎದುರಾಳಿ ತಂಡದ ಮೂವರಿಗೂ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನ ತಸ್ಲೀಂ, ಹ್ಯಾರಿಸ್, ಶಿಹಾಬ್ ಎಂದು ಗುರುತಿಸಲಾಗಿದೆ ಹಾಗೂ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಗೇರುಕಟ್ಟೆ ಬಸ್ ಸ್ಟಾಂಡ್ ಬಳಿ ಸಾರ್ವಜನಿಕರ ಎದುರೇ ಗ್ಯಾಂಗ್ ವಾರ್ ನಡೆದಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿಗಳಾದ ಯಾಕೂಬ್, ಉಮರಬ್ಬ, ರವೂಫ್, ಇರ್ಫಾನ್, ರಿಝ್ವಾನ್, ಅಬೂಬಕರ್, ಆದಂ ಶಾಫಿ, ಹೈದರ್ ಮನಬಂದಂತೆ ತಲ್ವಾರ್ ದಾಳಿ ನಡೆಸಿ ಪರಾರಿಯಾಗಿದ್ದಾರೆ.

    ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

  • ಪತ್ನಿ ಕೊಲೆ ಮಾಡಿ ಜೈಲು ಸೇರಿ ಪೆರೋಲ್ ಪಡೆದು ಮತ್ತೊಂದು ಮದ್ವೆಯಾಗಿ 6 ವರ್ಷದ ನಂತ್ರ ಸಿಕ್ಕಿಬಿದ್ದ!

    ಪತ್ನಿ ಕೊಲೆ ಮಾಡಿ ಜೈಲು ಸೇರಿ ಪೆರೋಲ್ ಪಡೆದು ಮತ್ತೊಂದು ಮದ್ವೆಯಾಗಿ 6 ವರ್ಷದ ನಂತ್ರ ಸಿಕ್ಕಿಬಿದ್ದ!

    ಬಳ್ಳಾರಿ: ಆತ ಪೊಲೀಸರಿಗೆ ಚಳ್ಳೆ ಹಣ್ಣು ತಿನಿಸಿ ಪರಾರಿಯಾಗಿದ್ದ ಖೈದಿ, ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪೆರೋಲ್ ಮೇಲೆ ಆಚೆಗೆ ಬಂದ ಮೇಲೆ ಮತ್ತೊಂದು ಮದುವೆಯಾಗಿ ಸಿಕ್ಕಿಬಿದ್ದಿದ್ದಾನೆ.

    ಹೆಸರು ಬದಲಿಸಿಕೊಂಡು ಪೊಲೀಸರಿಗೆ ಬರೋಬ್ಬರಿ 7 ವರ್ಷಗಳ ಕಾಲ ಚಳ್ಳೆಹಣ್ಣು ತಿನಿಸಿದ್ದ ಖೈದಿಯನ್ನು ಬಂಧಿಸುವಂತೆ ಹೈಕೋರ್ಟ್ ಛೀಮಾರಿ ಹಾಕಿದ ನಂತರ ಪೊಲೀಸರು ಎದ್ನೋ ಬಿದ್ನೋ ಎಂಬಂತೆ ಕರ್ತವ್ಯ ನಿರ್ವಹಿಸಿ ಖೈದಿಯನ್ನು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ.

    ಹಗರಿಬೊಮ್ಮನಹಳ್ಳಿ ತಾಲೂಕಿನ ರಾಯನಾಳ ಗ್ರಾಮದ ಗೋವಿಂದ ನಾಯ್ಕ್ ಎನ್ನುವ 33 ವರ್ಷದ ವ್ಯಕ್ತಿ 2009ರಲ್ಲಿ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಕ್ಕೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿತ್ತು, ಆದರೆ ಖೈದಿ ಗೋವಿಂದನಾಯ್ಕ್ 2011ರಲ್ಲಿ ತಂದೆ ನೋಡುವ ನೆಪದಲ್ಲಿ ಪೆರೋಲ್ ಮೇಲೆ ಆಗಮಿಸಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದನು.

    ಪರಾರಿಯಾದ ಬಳಿಕ ಆಂಧ್ರ- ತೆಲಗಾಂಣದಲ್ಲಿ ತೆಲೆಮರೆಸಿಕೊಂಡು ಮತ್ತೊಬ್ಬಳನ್ನು ಮದುವೆಯಾಗಿ ಸಂಸಾರ ಮಾಡುತ್ತಿದ್ದ. ಆದರೆ ಖೈದಿಯನ್ನು ಪತ್ತೆ ಮಾಡುವಂತೆ ಹೈಕೋರ್ಟ್ ಛೀಮಾರಿ ಹಾಕಿದ ನಂತರ ಹಗರಿಬೊಮ್ಮನಹಳ್ಳಿ ಪೊಲೀಸ್ ತಂಡ ರಚಿಸಿಕೊಂಡು ಖೈದಿಯನ್ನು ಬಂಧಿಸಿ ಕರೆ ತಂದಿದ್ದಾರೆ.

    ತೆಲಗಾಂಣದಲ್ಲಿ ಸಂತೋಷ ಜಾಧವ ಎನ್ನುವ ಹೆಸರಿನಲ್ಲಿ ಆಧಾರ ಕಾರ್ಡ್, ರೇಷನ್ ಕಾರ್ಡ್ ಮತ್ತು ವೋಟರ್ ಐಡಿ ಮಾಡಿಸಿಕೊಂಡು ಆರಾಮ ಆಗಿ ಜೀವನ ಸಾಗಿಸುತ್ತಿದ್ದ ಗೋವಿಂದ ನಾಯ್ಕ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಕೊಲೆ ಮಾಡಿ ಜೀವಾವಧಿ ಶಿಕ್ಷೆ ಅನುಭವಿಸುವ ವೇಳೆಯಲ್ಲಿ ಪರಾರಿಯಾಗಿ ಮತ್ತೊಂದು ಮದುವೆ ಮಾಡಿಕೊಂಡು ಮಕ್ಕಳೊಂದಿಗೆ ಜೀವನ ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಇದೀಗ ಮತ್ತೆ ಜೈಲಿಗೆ ಅಟ್ಟಿದ್ದಾರೆ.

  • ಪ್ರೀತಿಸಿ ಮದ್ವೆಯಾದ ಪತ್ನಿಗೆ ಕೈ ಕೊಟ್ಟು ನರ್ಸ್ ಜೊತೆ ಪತಿ ಪರಾರಿ!

    ಪ್ರೀತಿಸಿ ಮದ್ವೆಯಾದ ಪತ್ನಿಗೆ ಕೈ ಕೊಟ್ಟು ನರ್ಸ್ ಜೊತೆ ಪತಿ ಪರಾರಿ!

    ಚಿಕ್ಕಬಳ್ಳಾಪುರ: ಪ್ರೀತಿಸಿ ಮದುವೆಯಾಗಿದ್ದ ಪತ್ನಿಗೆ ಕೈ ಕೊಟ್ಟ ಪತಿ ಮಹಾಶಯನೊರ್ವ ಪ್ರಿಯತಮೆಯ ಜೊತೆ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.

    ನಗರದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ನಾಗಮಣಿ ಜೊತೆ ಅದೇ ಖಾಸಗಿ ಆಸ್ಪತ್ರೆಯಲ್ಲೇ ಸಿಸ್ಟಮ್ ಅಡ್ಮಿನ್ ಆಗಿ ಕೆಲಸ ಮಾಡುತ್ತಿದ್ದ ಶ್ರೀನಾಥ್ ಪರಾರಿಯಾಗಿದ್ದಾನೆ.

    ಕಳೆದ 10 ವರ್ಷಗಳ ಹಿಂದೆ ಪದ್ಮಾಳನ್ನ ಪ್ರೀತಿಸಿ ಮದುವೆಯಾಗಿದ್ದ ಶ್ರೀನಾಥ್ ದಂಪತಿಗೆ 8 ವರ್ಷದ ಮಗನಿದ್ದಾನೆ. ಶ್ರೀನಾಥ್ ಕೆಲಸ ಮಾಡುತ್ತಿದ್ದ ಆಸ್ಪತ್ರೆಯಲ್ಲೇ ನರ್ಸ್ ಆಗಿದ್ದ ನಾಗಮಣಿ ಜೊತೆ ಪ್ರೀತಿ ಪ್ರೇಮ ಅಂತ ಸುತ್ತಾಡಿ ಕೊನೆಗೆ ಈಗ ಇಬ್ಬರೂ ಎಸ್ಕೇಪ್ ಆಗಿದ್ದಾರೆ. ಈ ಸಂಬಂಧ ಪದ್ಮಾ ತನ್ನ ಗಂಡ ಕಾಣೆಯಾಗಿದ್ದಾನೆ ಎಂದು ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಅತ್ತ ನರ್ಸ್ ನಾಗಮಣಿ ಸಹೋದರ ರಮೇಶ್ ಕೂಡ ತನ್ನ ತಂಗಿ ಕಾಣೆಯಾಗಿದ್ದಾಳೆ ಎಂದು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ದೂರು ದಾಖಲಿಸಿ 20 ದಿನಗಳು ಕಳೆದರೂ ಕಾಣೆಯಾದವರನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.