Tag: ಪರಿಷತ್ ಫಲಿತಾಂಶ

  • ಕಳೆದ ಬಾರಿ ಸೋತ ಕಡೆ ಈ ಬಾರಿ ನಾವು ಗೆದ್ದಿದ್ದೇವೆ: ಡಿಕೆಶಿ

    ಕಳೆದ ಬಾರಿ ಸೋತ ಕಡೆ ಈ ಬಾರಿ ನಾವು ಗೆದ್ದಿದ್ದೇವೆ: ಡಿಕೆಶಿ

    – ಮತಾಂತರ ನಿಷೇಧ ಕಾಯ್ದೆಯನ್ನು ಪ್ರಬಲವಾಗಿ ವಿರೋಧಿಸುತ್ತೇವೆ
    – ಕ್ರೈಸ್ತ ಸಮುದಾಯದಲ್ಲಿ ಭೀತಿ ಹುಟ್ಟಿಸುವ ಪ್ರಯತ್ನ ನಡೆಯುತ್ತಿದೆ

    ಬೆಂಗಳೂರು: ಪರಿಷತ್ ಫಲಿತಾಂಶ ಸಮಾಧಾನ ತಂದಿದೆ. ನಮ್ಮ ಪಕ್ಷದ ಮುಖಂಡರು ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ. ಹಲವು ಕಡೆ ಕೊನೆ ಕ್ಷಣಕ್ಕೆ ಅಭ್ಯರ್ಥಿ ಹಾಕಿ ಅಲ್ಪ ಮತದಿಂದ ಸೋತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಪೈಪೋಟಿ ನೀಡಿದ್ದಾರೆ. ಆಡಳಿತಾರೂಢ ಪಕ್ಷಕ್ಕೆ ಒಂದು ಅಡ್ವಾಂಟೇಜ್ ಇದ್ದು, ಅದನ್ನು ಅವರು ಸಂಪೂರ್ಣ ದುರ್ಬಳಕೆ ಮಾಡಿಕೊಂಡಿದ್ದಾರೆ. ಕಳೆದ ಬಾರಿ ಸೋತ ಕಡೆ ಈ ಬಾರಿ ನಾವು ಗೆದ್ದಿದ್ದೇವೆ, ಕೆಲವು ಕಡೆ ಸೀಟು ಕಳೆದು ಕೊಂಡಿದ್ದೇವೆ. ಪರಿಷತ್‍ನಲ್ಲಿ ಬಹುಮತಕ್ಕಾಗಿ ನಾವು ಹೋರಾಟ ಮಾಡಿಲ್ಲ. ಅದನ್ನೆಲ್ಲಾ ನಾವು ಲೆಕ್ಕ ಹಾಕಿಲ್ಲ, ಉತ್ತಮ ಫಲಿತಾಂಶ ನಿರೀಕ್ಷೆ ಮಾಡಿದ್ದೇವು ಇದು ನಮಗೆ ಸಮಾಧಾನ ತಂದಿದೆ ಎಂದಿದ್ದಾರೆ. ಇದನ್ನೂ ಓದಿ:  ನಾನು ಹೇಳಿದ್ದು ನಿಜವಾಗಿದೆ, ಬೊಮ್ಮಾಯಿ ನಾಯಕತ್ವಕ್ಕೆ ಬೆಂಬಲ: ಬಿಎಸ್‌ವೈ

    ಮತಾಂತರ ನಿಷೇಧ ಕಾಯ್ದೆಯನ್ನು ಪ್ರಬಲವಾಗಿ ವಿರೋಧಿಸುತ್ತೇವೆ. ಅನಗತ್ಯ ಗೊಂದಲ ಮೂಡಿಸಲು ಬಿಜೆಪಿ ಹೊರಟಿದೆ. ಕ್ರೈಸ್ತ ಸಮುದಾಯದಲ್ಲಿ ಭೀತಿ ಹುಟ್ಟಿಸುವ ಪ್ರಯತ್ನ ನಡೆಯುತ್ತಿದೆ. ಇಷ್ಟೋಂದು ಆಸ್ಪತ್ರೆ, ವಿದ್ಯಾಸಂಸ್ಥೆಗಳು ಸೇವೆ ನೀಡುತ್ತಾ ಬಂದಿದೆ, ಅವರ ಸೇವೆಯನ್ವು ನಾವು ಸ್ಮರಿಸಲೇಬೇಕು. ಅವರೆಲ್ಲಾ ಮತಾಂತರ ಆದ್ರಾ? ಅರ್ಥಹೀನ ಪ್ರಯತ್ನ ಇದಾಗಿದೆ. ಬಿಜೆಪಿಯ ಈ ಪ್ರಯತ್ನ ಅವರಿಗಲ್ಲ ಇಡೀ ರಾಜ್ಯದ ಭವಿಷ್ಯಕ್ಕೆ ಪೆಟ್ಟು ಬೀಳುತ್ತದೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆಗೂ ಹಿನ್ನಡೆಯಾಗಬಹುದು, ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಆಢಳಿತ ಪಕ್ಷದ ವಿರುದ್ಧವಾಗಿ ಕಿಡಿಕಾರಿದ್ದಾರೆ. ಇದನ್ನೂ ಓದಿ: 1,743 ಕೋಟಿ ಆಸ್ತಿಯ ಒಡೆಯ ಕೆಜಿಎಫ್‌ ಬಾಬುಗೆ ಸೋಲು