Tag: ಪರಿಹಾರ ಹಣ

  • ಪ್ರಾಂಜಲ್ ಕುಟುಂಬಕ್ಕೆ ಕೂಡಲೇ ಪರಿಹಾರ ಬಿಡುಗಡೆಗೆ ಸಂಸದ ತೇಜಸ್ವಿ ಸೂರ್ಯ ಆಗ್ರಹ

    ಪ್ರಾಂಜಲ್ ಕುಟುಂಬಕ್ಕೆ ಕೂಡಲೇ ಪರಿಹಾರ ಬಿಡುಗಡೆಗೆ ಸಂಸದ ತೇಜಸ್ವಿ ಸೂರ್ಯ ಆಗ್ರಹ

    ನವದೆಹಲಿ: ಕಾಶ್ಮೀರದ (Kashmir) ರಜೌರಿಯಲ್ಲಿ ಭಯೋತ್ಪಾದಕರ (Terrorists) ವಿರುದ್ಧ ಕಾರ್ಯಚರಣೆಯಲ್ಲಿ ಹುತಾತ್ಮರಾದ ಬೆಂಗಳೂರು (Bengaluru) ಮೂಲದ ಕ್ಯಾಪ್ಟನ್ ಪ್ರಾಂಜಲ್ (Captain Pranjal) ಅವರ ಕುಟುಂಬಕ್ಕೆ ಇನ್ನೂ ಪರಿಹಾರ (Compensation) ಹಣ ನೀಡಿಲ್ಲ. ಸಿಎಂ ಕೂಡಲೇ ಈ ಬಗ್ಗೆ ಗಮನ ಹರಿಸಿ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಬೇಕು ಎಂದು ಸಂಸದ ತೇಜಸ್ವಿ ಸೂರ್ಯ (Tejasvi Surya) ಆಗ್ರಹಿಸಿದ್ದಾರೆ.

    ಈ ಬಗ್ಗೆ ನವದೆಹಲಿಯಲ್ಲಿ (New Delhi) ಮಾತನಾಡಿದ ಅವರು, ಕಳೆದ 2 ವಾರದ ಹಿಂದೆ ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಹುತಾತ್ಮರಾಗಿದ್ದರು. ಅವರ ಪಾರ್ಥಿವ ಶರೀರ ಬೆಂಗಳೂರಿಗೆ ತರುವಾಗ ರಾಜ್ಯಪಾಲರು, ಸಿಎಂ ಸೇರಿ ಎಲ್ಲರೂ ಹೆಚ್‌ಎಎಲ್ (HAL) ವಿಮಾನ ನಿಲ್ದಾಣಕ್ಕೆ ತೆರಳಿದ್ದೆವು. ಅಂದು ಮುಖ್ಯಮಂತ್ರಿಗಳಿಗೆ ನಾನು ಮತ್ತು ವಿಜಯೇಂದ್ರ ಅವರು 50 ಲಕ್ಷ ರೂ. ಪರಿಹಾರ ನೀಡಲು ಮನವಿ ಮಾಡಿದ್ದೆವು. ಅದರಂತೆ ಸಿಎಂ ಪರಿಹಾರ ಘೋಷಣೆ ಮಾಡಿದ್ದರು ಎಂದರು. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವು – ಜೋತಿರಾದಿತ್ಯ ಸಿಂಧಿಯಾ ಬಣಕ್ಕೆ ಖುಷಿ ಕೊಡದ ಫಲಿತಾಂಶ

    ಯಾರೇ ಸೈನಿಕರು ಹುತಾತ್ಮರಾದರೂ 50 ಲಕ್ಷ ರೂ. ಪರಿಹಾರ ಕೊಡಬಹುದು ಎಂದು ನಿಯಮ ಇದೆ. ಮುಖ್ಯಮಂತ್ರಿಗಳು ಸಹ ಅವತ್ತು ಪರಿಹಾರ ಘೋಷಣೆ ಮಾಡಿದ್ದರು. ಎರಡು ದಿನದ ಹಿಂದೆ ನಾನು ಪ್ರಾಂಜಲ್ ತಂದೆಗೆ ಫೋನ್ ಮಾಡಿ ಪರಿಹಾರದ ಮಾಹಿತಿ ಪಡೆದೆ. ಅವರ ತಂದೆ ಇವತ್ತಿನವರೆಗೂ ಸಹ ನನಗೆ ಯಾವುದೇ ಫೋನ್ ಬಂದಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಹಾವು ಏಣಿಯಾಟ – ಅತಿದೊಡ್ಡ, ಅತಿಸಣ್ಣ ನಿರ್ಣಾಯಕ ಗೆಲುವುಗಳಿವು

    ಪರಿಹಾರ ಹಣ ಬಿಡುಗಡೆಗೆ ನಾನು ಸಿಎಂ, ಡಿಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದೇನೆ. ಸಿಎಂಗೆ ಮಾಧ್ಯಮದವರು ಈ ಬಗ್ಗೆ ಪ್ರಶ್ನೆ ಕೇಳಿದರೆ ಪ್ರಾಂಜಲ್ ಅಂದರೆ ಯಾರು? ನಾವೆಲ್ಲಿ ಪರಿಹಾರ ಕೊಡುತ್ತೇವೆ ಎಂದು ಹೇಳಿದ್ದೆವು ಎಂದು ಬೇಜವಾಬ್ದಾರಿಯುತವಾಗಿ ಮಾತನಾಡಿದ್ದಾರೆ. ಓರ್ವ ಯೋಧನ ಬಗ್ಗೆ ಮುಖ್ಯಮಂತ್ರಿಗಳು ಹೀಗೆ ಮಾತನಾಡಿದ್ದು ನೋಡಿ ಬಹಳ ಬೇಸರ ಆಯಿತು ಎಂದರು. ಇದನ್ನೂ ಓದಿ: ಬಿಜೆಪಿಗೆ ಭರ್ಜರಿ ಜಯ, ಹೂಡಿಕೆದಾರರ ಸಂಪತ್ತು ಒಂದೇ ದಿನ 6 ಲಕ್ಷ ಕೋಟಿ ಹೆಚ್ಚಳ – ದಾಖಲೆ ಬರೆದ ಸೆನ್ಸೆಕ್ಸ್‌

    ಪ್ರಾಂಜಲ್ ಮೃತದೇಹ ಬೆಂಗಳೂರಿಗೆ ಬಂದಾಗ ಮುಖ್ಯಮಂತ್ರಿಗಳ ಕಣ್ಣಲ್ಲೂ ಸಹ ನೀರಿತ್ತು. ಅವರು ಸಹ ಭಾವುಕರಾಗಿದ್ದರು. ಆದರೆ ಈಗಾಗಲೇ 15 ದಿನ ಆಯಿತು. ಇನ್ನೂ ಪರಿಹಾರ ಬಂದಿಲ್ಲ. ಆದಷ್ಟು ಬೇಗ ಪರಿಹಾರ ಹಣ ಬಿಡುಗಡೆ ಮಾಡಬೇಕಾಗಿರುವುದು ಸಿಎಂ ಜವಾಬ್ದಾರಿ. ಮುಖ್ಯಮಂತ್ರಿಗಳು ಎಲ್ಲರ ಬಳಿ ಕ್ಷಮೆ ಕೇಳಬೇಕು ಹಾಗೂ ಈ ಕೂಡಲೇ ಪರಿಹಾರ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: Mizoram Election Results: ʻಕೈʼ ಹಿಡಿಯದ ಮಿಜೋರಾಂ – ZPMಗೆ ಗೆಲುವು, 2 ಕ್ಷೇತ್ರಗಳಲ್ಲಿ ಅರಳಿದ ಕಮಲ

  • ಹಳ್ಳದಲ್ಲಿ ಕೊಚ್ಚಿ ಹೋಗಿದ್ದವ ಶವವಾಗಿ ಪತ್ತೆ – ತಕ್ಷಣವೇ ಐದು ಲಕ್ಷ ರೂ. ಪರಿಹಾರ ವಿತರಣೆ

    ಹಳ್ಳದಲ್ಲಿ ಕೊಚ್ಚಿ ಹೋಗಿದ್ದವ ಶವವಾಗಿ ಪತ್ತೆ – ತಕ್ಷಣವೇ ಐದು ಲಕ್ಷ ರೂ. ಪರಿಹಾರ ವಿತರಣೆ

    ಕಲಬುರಗಿ: ಶುಕ್ರವಾರ ರಾತ್ರಿ ಕೊಚ್ಚಿ ಹೋಗಿದ್ದ ವ್ಯಕ್ತಿಯೊಬ್ಬ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಕಡಣಿ ಗ್ರಾಮದ ಹೊರವಲಯದ ಹಳ್ಳಿದಲ್ಲಿ ನಡೆದಿದೆ.

    ಸಿದ್ದು ಕೆರಮಗಿ, ಮಳೆ ಅನಾಹುತಕ್ಕೆ ಬಲಿಯಾದ ವ್ಯಕ್ತಿ. ಒಂದು ಕಿಲೋ ಮೀಟರ್‌ನಷ್ಟು ದೂರದಲ್ಲಿ ಮುಳ್ಳು ಕಂಟಿಯಲ್ಲಿ ಸಿದ್ದು ಕೆರಮಗಿ ದೇಹ ಸಿಲುಕಿದ್ದು, ಇಂದು ಪತ್ತೆಯಾಗಿದೆ. ಈ ಹಿನ್ನೆಲೆ ತಕ್ಷಣವೇ ಪರಿಹಾರವಾಗಿ 5 ಲಕ್ಷ ರೂ. ವಿತರಣೆ ಮಾಡಲಾಯಿತು. ಇದನ್ನೂ ಓದಿ: ದ್ರೌಪದಿ ಮುರ್ಮು ಗೆಲುವಿಗೆ ಪುಟಿನ್ ಅಭಿನಂದನೆ ಸಂದೇಶ 


    ನಡೆದಿದ್ದೇನು?
    ಸಿದ್ದು ಕೆರಮಗಿ, ಕಡಣಿ ಗ್ರಾಮ ಪಂಚಾಯತಿ ಸದಸ್ಯರ ಪುತ್ರ. ಶುಕ್ರವಾರ ಸಂಜೆ ಧಾರಾಕಾರ ಮಳೆ ಸುರಿದ್ದಿದ್ದು, ಹೊಲದಲ್ಲಿ ಕಾಯಿಪಲ್ಯ ತರಲು ಹೋಗಿದ್ದರು. ಈ ವೇಳೆ ಟಂ ಟಂ ವಾಹನ ಸಿಕ್ಕಿಬಿದ್ದಿರುವುದನ್ನು ಹೊರ ತೆಗೆಯಲು ಟ್ರ್ಯಾಕ್ಟರ್ ತೆಗೆದುಕೊಂಡು ಹೋಗಲಾಗಿತ್ತು. ಆದರೆ ಜೋರಾದ ಮಳೆಗೆ ಹಳ್ಳ ತುಂಬಿತ್ತು.

    Rain

    ಹೀಗಾಗಿ ಟ್ರ್ಯಾಕ್ಟರ್ ನೀರಿನ ರಭಸಕ್ಕೆ ನೀರಲ್ಲಿ ಹರಿದು ಹೋಯಿತು. ಚಾಲಕ ಮಾತ್ರ ಕಂಟಿಯೊಂದನ್ನು ಹಿಡಿದು ಸ್ವಲ್ಪ ಸಮಯದ ನಂತರ ಹೊರ ಬಂದ. ಆದರೆ ಟ್ರ್ಯಾಕ್ಟರ್‌ನಲ್ಲಿದ್ದ ಸಿದ್ದು ನೀರಲ್ಲಿ ಹರಿದುಕೊಂಡು ಹೋಗಿದ್ದರು. ಇದನ್ನೂ ಓದಿ:  ನಿಮ್ಮದೆಲ್ಲಾ ಬಯಲಿಗೆ ಎಳೆಯುತ್ತೇನೆ ಜಸ್ಟ್ ವೇಟ್: ಎಂ.ಸಿ.ಸುಧಾಕರ್‌ಗೆ ಸಚಿವ ಸುಧಾಕರ್ ವಾರ್ನಿಂಗ್ 

    ಇವರ ಪತ್ತೆಗಾಗಿ ರಾತ್ರಿಯಿಡಿ ಅಗ್ನಿಶಾಮಕ ದಳ ಹಾಗೂ ಇತರರು ಶೋಧ ನಡೆಸಿದರೂ ಸಿಗಲಿಲ್ಲ. ಇಂದು ಬೆಳಗ್ಗೆ ಶವ ಪತ್ತೆಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪಾಪ, ಅವರಿಗೆ ದುಡ್ಡು ವಾಪಸ್ ಕೊಟ್ಟು ಕಳಿಸಿದ್ದೀವಿ: ಸಿದ್ದರಾಮಯ್ಯ

    ಪಾಪ, ಅವರಿಗೆ ದುಡ್ಡು ವಾಪಸ್ ಕೊಟ್ಟು ಕಳಿಸಿದ್ದೀವಿ: ಸಿದ್ದರಾಮಯ್ಯ

    ಬಾಗಲಕೋಟೆ: ಪಾಪ, ಅವರಿಗೆ ದುಡ್ಡು ವಾಪಸ್ ಕೊಟ್ಟು ಕಳಿಸಿದ್ದೀವಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

    ಪರಿಹಾರ ಹಣವನ್ನು ಮಹಿಳೆ ಎಸೆದ ಪ್ರಕರಣ ಕುರಿತು ಮಾತನಾಡಿದ ಅವರು, ಪಾಪ, ಅವರಿಗೆ ದುಡ್ಡು ವಾಪಸ್ ಕೊಟ್ಟು ಕಳಿಸಿದ್ದೀವಿ. ನೀವು ಪುನಃ ಹಣ ವಾಪಸ್ ಕೊಟ್ಟದ್ದು ಹೇಳೋದಿಲ್ಲ. ನಾವು ಮಾನವೀಯತೆ ದೃಷ್ಟಿಯಿಂದ ಕೊಟ್ಟಿದ್ದೇವೆ. ಅವರ ಕಷ್ಟಕ್ಕೆಲ್ಲಾ ಆಗುತ್ತೆ ಅಂತ ಅಲ್ಲ ಎಂದು ವಿವರಿಸಿದರು.

    ಏನಾದ್ರೂ ಆದಾಗ ಸರ್ಕಾರದಿಂದ 1 ಲಕ್ಷ, 2 ಲಕ್ಷ ಪರಿಹಾರ ಕೊಡ್ತೀವಿ. ಸತ್ತವರಿಗೂ ಪರಿಹಾರ ಕೊಟ್ಟಿದ್ದೇವೆ. ಸತ್ತೋದವರು ವಾಪಸ್ ಬರುತ್ತಾರಾ? ಮಾನವೀಯತೆಯಿಂದ ಪರಿಹಾರ ನೀಡಿದ್ದು ಇದೆ. ಕಷ್ಟದಲ್ಲಿರೋರಿಗೆ ಅನುಕೂಲ ಆಗಲಿ ಅಂತ ಮಾಡಿದ್ದೀವಿ ಎಂದು ಹೇಳಿದರು. ಇದನ್ನೂ ಓದಿ: ನಮ್ಗೆ ನ್ಯಾಯ ಬೇಕು, ದುಡ್ಡು ಬೇಡ – ಸಿದ್ದು ಕೊಟ್ಟ 2 ಲಕ್ಷ ರೂ. ಎಸೆದ ಮುಸ್ಲಿಂ ಮಹಿಳೆ

    ನನ್ನ ಪ್ರಕಾರ ಪರಿಹಾರ ಧನ ಒಪ್ಪಿಕೊಳ್ತಾರೆ ಅಂದುಕೊಂಡಿದ್ದೀನಿ. ಅವರಿಗೂ ಕೊಟ್ಟಿದ್ದೀನಿ, ಇನ್ನೊಬ್ಬ ಗಾಯಗೊಂಡ ಗೋಪಾಲನಿಗೆ ಕೊಟ್ಟಿದ್ದೇನೆ. ಎರಡೂ ಕಡೆ ಆಸ್ಪತ್ರೆಗೆ ಹೋಗಿ ಬಂದಿದ್ದೀನಿ ಎಂದರು.

    ಕೆರೂರ ಘಟನೆಗೆ ಸಿಎಂ ಬೊಮ್ಮಾಯಿ ವೈಯುಕ್ತಿಕ ಕಾರಣ ಎಂಬ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ಕೊಟ್ಟ ಅವರು, ಯಾರು ಕೂಡಾ ಬೆಂಕಿ ಹಚ್ಚುವ ಕೆಲಸ ಮಾಡಬಾರದು. ಉರಿಯುವುದರ ಮೇಲೆ ಉಪ್ಪು ಸುರಿಯುವ ಕೆಲಸ ಮಾಡಬಾರದು. ನಾವೆಲ್ಲ ಜನಪ್ರತಿನಿಧಿಗಳು ಇರೋದು ಯಾಕೆ? ಇಂತಹ ಘಟನೆ ನಡೆಯದಂತೆ ನೋಡಿಕೊಳ್ಳುವುದಕ್ಕೆ. ಕೆರೂರನಂತಹ ಘಟನೆ ನಡೆಯಬಾರದು. ಕುಳಗೇರಿಯಲ್ಲಿ ಈ ಘಟನೆ ನಡೆಯಬಾರದಿತ್ತು. ಹಲ್ಲೆಗೆ ಒಳಗಾದವರೆಲ್ಲ ಪಾಪ ಬಡವರು ಇದ್ದಾರೆ ಎಂದು ಮರುಕ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೆರೂರ ಘರ್ಷಣೆ – ಸಿದ್ದರಾಮಯ್ಯ ಭೇಟಿಯನ್ನು ನಿರಾಕರಿಸಿದ ಹಿಂದೂ ಸಂಘಟನೆಯ ಗಾಯಾಳುಗಳು

    Live Tv
    [brid partner=56869869 player=32851 video=960834 autoplay=true]

  • ಎತ್ತಿನಹೊಳೆ ಯೋಜನೆ, ಬಾಕಿ ಪರಿಹಾರವನ್ನು ಶೀಘ್ರ ವಿತರಿಸಿ: ಗೋಪಾಲಯ್ಯ

    ಎತ್ತಿನಹೊಳೆ ಯೋಜನೆ, ಬಾಕಿ ಪರಿಹಾರವನ್ನು ಶೀಘ್ರ ವಿತರಿಸಿ: ಗೋಪಾಲಯ್ಯ

    ಹಾಸನ: ಆಹಾರ, ನಾಗರೀಕ ಸರಬರಾಜು ಮಾತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಗೋಪಾಲಯ್ಯ ಅವರು ಇಂದು ಎತ್ತಿನ ಹೊಳೆ ಯೋಜನಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಇದೊಂದು ಬಯಲು ಸೀಮೆಗೆ ನೀರು ಪೂರೈಸುವ ಮಹತ್ವದ ಯೋಜನೆ ಆದಷ್ಟು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಯೋಜನೆ ಉದ್ದೇಶಕ್ಕೆ ಸ್ವಾದೀನ ಪಡಿಸಿಕೊಂಡ ಜಮೀನಿಗೆ ಬಾಕಿ ಇರುವ ಪರಿಹಾರವನ್ನು ಸಹ ಶೀಘ್ರವಾಗಿ ವಿತರಿಸಿ ಎಂದು ಸಚಿವರು ತಿಳಿಸಿದರು.

    ಜಿಲ್ಲಾಧಿಕಾರಿ ಅರ್.ಗಿರೀಶ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ ಪರಮೇಶ್ ಉಪ ವಿಭಾಗಾಧಿಕಾರಿ ಗಿರಿಶ್ ನಂದನ್, ಎತ್ತಿನ ಹೊಳೆ ಯೋಜನೆ ಕಾರ್ಯಪಾಲಕ ಅಭಿಯಂತರರಾದ ಜಯಣ್ಣ, ತಹಶೀಲ್ದಾರ್ ಮಂಜುನಾಥ್, ಮಾಜಿ ಶಾಸಕರಾದ ಹೆಚ್.ಎಂ ವಿಶ್ವನಾಥ್ ಮತ್ತಿತರರು ಹಾಜರಿದ್ದರು.

  • ನಡೆದು ನಡೆದು ಸಾವನ್ನಪ್ಪಿದ್ದ ಮಹಿಳೆ-ಕುಟುಂಬಕ್ಕೆ 3 ಲಕ್ಷ ರೂ. ಪರಿಹಾರ

    ನಡೆದು ನಡೆದು ಸಾವನ್ನಪ್ಪಿದ್ದ ಮಹಿಳೆ-ಕುಟುಂಬಕ್ಕೆ 3 ಲಕ್ಷ ರೂ. ಪರಿಹಾರ

    ರಾಯಚೂರು: ಕೊರೊನಾ ಲಾಕ್‍ಡೌನ್ ಹಿನ್ನೆಲೆ ಬಳ್ಳಾರಿಯಲ್ಲಿ ಸಾವನ್ನಪ್ಪಿದ್ದ ರಾಯಚೂರಿನ ಸಿಂಧನೂರಿನ ಕಟ್ಟಡ ಕಾರ್ಮಿಕ ಮಹಿಳೆ ಗಂಗಮ್ಮ ಕುಟುಂಬಕ್ಕೆ ಕೊನೆಗೂ ಕಾರ್ಮಿಕ ಕಲ್ಯಾಣ ಮಂಡಳಿ ಪರಿಹಾರ ನೀಡಿದೆ.

    ಗಂಗಮ್ಮನ ಇಬ್ಬರು ಮಕ್ಕಳ ಹೆಸರಲ್ಲಿ ತಲಾ 1 ಲಕ್ಷ 50 ಸಾವಿರದಂತೆ ಮೂರು ಲಕ್ಷ ರೂಪಾಯಿಯ ಎರಡು ಭದ್ರತಾ ಠೇವಣಿಯ ಬಾಂಡ್‍ಗಳನ್ನು ನೀಡಲಾಗಿದೆ. ಎರಡು ವರ್ಷದ ಅವಧಿಯ ಎರಡು ಬಾಂಡ್‍ಗಳನ್ನು ನೀಡುವ ಮೂಲಕ ಮಂಡಳಿ ಮಕ್ಕಳ ಸಹಾಯಕ್ಕೆ ಮುಂದಾಗಿದೆ.

    ಗಂಗಮ್ಮ ಮಂಡಳಿಯ ನೋಂದಾಯಿತ ಕಾರ್ಮಿಕಳಲ್ಲವಾಗಿದ್ದರಿಂದ 5 ಲಕ್ಷ ರೂಪಾಯಿ ಬದಲಾಗಿ ಕೇವಲ 3 ಲಕ್ಷ ಮಾತ್ರ ಪರಿಹಾರ ಬಂದಿದೆ. ವಿಶೇಷ ಪ್ರಕರಣವೆಂದು ಪರಿಗಣಿಸಿ ಗಂಗಮ್ಮಳ ಮಕ್ಕಳಾದ ಪ್ರೀತಿ ಹಾಗೂ ಮಂಜುನಾಥ್‍ಗೆ ಪರಿಹಾರ ನೀಡಲಾಗಿದೆ. ಬೆಂಗಳೂರಿನಲ್ಲಿ ಕಟ್ಟಡ ಕೆಲಸದಲ್ಲಿ ತೊಡಗಿದ್ದ ಗಂಗಮ್ಮ ಲಾಕ್‍ಡೌನ್ ನಿಂದ ವಾಪಸ್ ಬರುತ್ತಿದ್ದರು. ಮರಳಿ ಬರಲು ವಾಹನ ವ್ಯವಸ್ಥೆಯಿಲ್ಲದೆ ಕಾಲ್ನಡಿಗೆಯಲ್ಲಿ ಬಂದು ಬಳ್ಳಾರಿಯಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ವಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.

    ತಾಯಿಯನ್ನೇ ಅವಲಂಬಿಸಿದ್ದ ಇಬ್ಬರು ಮಕ್ಕಳು ತಬ್ಬಲಿಗಳಾಗಿದ್ದಾರೆ. ಕೊನೆಗೂ ಮಂಡಳಿ ಸಹಾಯಕ್ಕೆ ಮುಂದಾಗಿದ್ದು, ಸಿಂಧನೂರು ತಹಶೀಲ್ದಾರ್ ಇಬ್ಬರು ಮಕ್ಕಳಿಗೆ ತಲಾ ಒಂದೂವರೆ ಲಕ್ಷದ ಬಾಂಡ್ ನೀಡಿದ್ದಾರೆ.

  • ಅಧಿಕಾರಿಗಳ ನಿರ್ಲಕ್ಷ್ಯ- ಪ್ರವಾಹ ಸಂತ್ರಸ್ತರ ನೆರವಿಗೆ ಬಿಡುಗಡೆಯಾಗಿದ್ದ 1 ಕೋಟಿ ರೂ. ಮತ್ತೆ ಡಿಸಿ ಖಾತೆಗೆ

    ಅಧಿಕಾರಿಗಳ ನಿರ್ಲಕ್ಷ್ಯ- ಪ್ರವಾಹ ಸಂತ್ರಸ್ತರ ನೆರವಿಗೆ ಬಿಡುಗಡೆಯಾಗಿದ್ದ 1 ಕೋಟಿ ರೂ. ಮತ್ತೆ ಡಿಸಿ ಖಾತೆಗೆ

    ಮಡಿಕೇರಿ: ಕೊಡಗು ಜಿಲ್ಲೆ ಎರಡು ವರ್ಷಗಳಿಂದ ಪ್ರಾಕೃತಿಕ ವಿಕೋಪದಿಂದ ನಲುಗಿ ಹೋಗಿದೆ. ಕಳೆದ 2 ವರ್ಷಗಳಲ್ಲಿ ಸುಮಾರೂ 2 ಸಾವಿರಕ್ಕೂ ಹೆಚ್ಚು ಕುಟುಂಬಗಳು ಮನೆ ಮಠಗಳನ್ನು ಕಳೆದುಕೊಂಡು ಬೀದಿ ಪಾಲಾಗಿವೆ. ಕಳೆದ ಆರು ತಿಂಗಳ ಹಿಂದೆ ಕೊಡಗಿನಲ್ಲಿ ಕಾವೇರಿ ಉಕ್ಕಿ ಹರಿದ ರಭಸಕ್ಕೆ ಮನೆ ಮಠಗಳನ್ನು ಕಳೆದುಕೊಂಡಿದ್ದ ಎಷ್ಟೋ ಜನರಿಗೆ ಇಂದಿಗೂ ಪೂರ್ಣ ಪ್ರಮಾಣದಲ್ಲಿ ಪರಿಹಾರ ದೊರೆತ್ತಿಲ್ಲ. ನೂರಾರು ರೈತರಿಗೆ ಬೆಳೆ ಪರಿಹಾರವೂ ಸಿಕ್ಕಿಲ್ಲ. ಆದರೆ ಅಧಿಕಾರಿಗಳು ಮಾತ್ರ ಎನ್‍ಡಿಆರ್ ಎಫ್ ನಿಂದ ಬಂದಿದ್ದ ಹಣದಲ್ಲಿ ಒಂದು ಕೋಟಿ ರೂಪಾಯಿಯನ್ನು ಬಳಸದೆ ಜಿಲ್ಲಾಧಿಕಾರಿಗೆ ವಾಪಸ್ಸ್ ಕಳುಹಿಸಿದ್ದಾರೆ.

    ಜಿಲ್ಲೆಯ ವಿರಾಜಪೇಟೆ ತಾಲೂಕಿನಾದ್ಯಂತ ಆಗಿದ್ದ ಪ್ರಾಕೃತಿಕ ನಷ್ಟದ ತುರ್ತು ಸೇವೆಗಳಿಗೆ ಮತ್ತು ಪರಿಹಾರಗಳಿಗೆ ಬಳಸಲು ಜಿಲ್ಲಾಧಿಕಾರಿ ಒಂದು ಕೋಟಿ ರೂ. ಹಣವನ್ನು ವಿರಾಜಪೇಟೆಗೆ ನೀಡಿದ್ದರು. ಆದರೆ ತಾಲೂಕು ಕಚೇರಿ ಶಿರಸ್ತೆದಾರ್ ಪೊನ್ನು ಮತ್ತು ಕೇಸ್ ವರ್ಕರ್ ಧನಂಜಯ್ ಡಿಸಿ ನೀಡಿದ್ದ ಚೆಕನ್ನು ತಹಶೀಲ್ದಾರ್ ಅವರ ಖಾತೆಗೆ ಜಮಾಮಾಡಿಲ್ಲ. ಹೀಗಾಗಿ ಚೆಕ್ ಸಮಯ ಮುಗಿದುಹೋಗಿ ಬಳಕೆ ಬಾರದಂತಾಗಿದೆ.

    ಈ ಕುರಿತು ವಿರಾಜಪೇಟೆ ತಹಶೀಲ್ದಾರ್ ಮಹೇಶ್ ಅವರನ್ನು ಕೇಳಿದರೆ, ಕೆಲಸದ ಒತ್ತಡದಿಂದ ಚೆಕನ್ನು ಖಾತೆಗೆ ಜಮಾ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಚೆಕ್ ಹಾಗೆ ಉಳಿದಿದ್ದು, ಜಿಲ್ಲಾಧಿಕಾರಿಯವರಿಗೆ ವಾಪಸ್ಸ್ ಕಳುಹಿಸಿದ್ದೇವೆ ಎನ್ನುತ್ತಾರೆ. ಆದರೆ ಯಾರಿಂದ ತಪ್ಪಾಯಿತು ಅವರ ವಿರುದ್ಧ ತುಟಿ ಬಿಚ್ಚುತ್ತಿಲ್ಲ.

    ಪ್ರವಾಹ ಉಕ್ಕಿ ಹರಿದಾಗ ಸಂತ್ರಸ್ತ ಕೇಂದ್ರಗಳನ್ನು ನಡೆಸಲು ಇದೇ ತಾಲೂಕು ಆಡಳಿತ ಸ್ಥಳೀಯರಿಂದಲೇ ವಸ್ತುಗಳನ್ನು ಖರೀದಿಸಿತ್ತು. ಬಳಿಕ ಐದು ತಿಂಗಳಾದ್ರೂ ಬಡ ವ್ಯಾಪಾರಿಗಳಿಗೆ ಹಣವನ್ನು ಪಾವತಿಸದೆ ಇದ್ದ ಕಾರಣ ವ್ಯಾಪಾರಿಗಳು ಪರದಾಡುವಂತಾಗಿತ್ತು. ತಾಲೂಕು ಆಡಳಿತದ ವಿರುದ್ಧ ಪ್ರತಿಭಟನೆಗೂ ವ್ಯಾಪಾರಿಗಳು ಮುಂದಾಗಿದ್ದರು. ಎಷ್ಟೋ ಸಂತ್ರಸ್ತರಿಗೆ ಇದುವರೆಗೂ ಪೂರ್ಣ ಪ್ರಮಾಣದಲ್ಲಿ ಪರಿಹಾರ ಸಿಕ್ಕಿಲ್ಲ.

    ತಕ್ಷಣಕ್ಕೆ ಸಿಕ್ಕಿದ್ದ 10 ಸಾವಿರ ಪರಿಹಾರ ಹಣ ಬಿಟ್ಟರೆ ಮತ್ತೆ ಯಾವುದೇ ಪರಿಹಾರ ಲಭಿಸಿಲ್ಲ. ಹೀಗಾಗಿ ಕೊಟ್ಟ ಹಣವನ್ನೂ ಬಳಸದೆ ಚೆಕನ್ನು ವಾಪಸ್ ಮಾಡುತ್ತಿದ್ದಂತೆ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ವಿರಾಜಪೇಟೆಯ ಶಿರಸ್ತೇದಾರ್ ಮತ್ತು ಕೇಸ್ ವರ್ಕರ್ ಧನಂಜಯ್ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಸರಿಯಾದ ಉತ್ತರ ನೀಡದಿದ್ದರೆ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಇನ್ನು ಚೆಕ್ ವಾಪಸ್ ಆಗಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಇಂತಹ ಅಧಿಕಾರಿಗಳು ನಮಗೆ ಬೇಕಾ ಎಂದು ಅಸಮಾಧಾನ ಹೊರಹಾಕಿದ್ದಾರೆ.

  • ನೆರೆ ಸಂತ್ರಸ್ತರ ಹಣ ಗ್ರಾಮ ಲೆಕ್ಕಾಧಿಕಾರಿಯಿಂದ ಲೂಟಿ

    ನೆರೆ ಸಂತ್ರಸ್ತರ ಹಣ ಗ್ರಾಮ ಲೆಕ್ಕಾಧಿಕಾರಿಯಿಂದ ಲೂಟಿ

    ಹುಬ್ಬಳ್ಳಿ: ನೆರೆ ಸಂತ್ರಸ್ತರಿಗೆ ಸರ್ಕಾರ ನೀಡಿದ ಪರಿಹಾರದ ಹಣವನ್ನು ಅಧಿಕಾರಿಗಳು ದೋಚಿದ ಘಟನೆ ಕಲಘಟಗಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.

    ಕಳೆದ 3 ತಿಂಗಳು ಹಿಂದೆ ಸುರಿದ ಮಳೆಯಿಂದ ಮನೆ ಕಳೆದುಕೊಂಡಿದ್ದ ಸಂತ್ರಸ್ತರಿಗೆ ಸರ್ಕಾರ ಒಂದು ಲಕ್ಷ ರೂಪಾಯಿ ಪರಿಹಾರದ ಹಣವನ್ನ ನೀಡಿದೆ. ಆದರೆ ಮಂಜೂರಾದ ಹಣದಲ್ಲಿ ಗ್ರಾಮ ಲೆಕ್ಕಾಧಿಕಾರಿ 50 ಸಾವಿರ ರೂಪಾಯಿ ಸಂತ್ರಸ್ತರಿಂದ ಮರಳಿ ಪಡೆದು ಮೋಸ ಮಾಡಿರುವುದು ಇದೀಗ ಬೆಳಕಿಗೆ ಬಂದಿದೆ.

    ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದ ಬಸನಗೌಡ ಪಾಟೀಲ್ ಹಾಗೂ ಚನ್ನಬಸವ ದೇವಿಕೊಪ್ಪ ಅವರು ಮಳೆಯಿಂದ ಮನೆ ಕಳೆದುಕೊಂಡಿದ್ದರು. ಈ ಇಬ್ಬರು ಸಂತ್ರಸ್ತರಿಗೆ ಸರ್ಕಾರ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ಹಣವನ್ನ ಬಿಡುಗಡೆ ಮಾಡಿತ್ತು. ಬಿಡುಗಡೆಯಾದ ಹಣ ಬ್ಯಾಂಕ್‍ನಲ್ಲಿ ಜಮೆಯಾದ ನಂತರ ಗ್ರಾಮ ಲೆಕ್ಕಾಧಿಕಾರಿ ಆನಂದ್ ನಾಯ್ಕ್ ಸಂತ್ರಸ್ತರಿಂದ 50 ಸಾವಿರ ರೂಪಾಯಿ ಮರಳಿ ಪಡೆದು ಅನ್ಯಾಯ ಮಾಡಿದ್ದಾರೆ.

    ಬಿಡುಗಡೆಯಾದ ಒಂದು ಲಕ್ಷ ರೂಪಾಯಿ ಪರಿಹಾರದ ಹಣದಲ್ಲಿ 50 ಸಾವಿರ ರೂಪಾಯಿ ಹಣವನ್ನ ಮರಳಿ ಕೊಡದಿದ್ದರೆ ನಿಮ್ಮ ಜಮೀನು, ಮನೆ ಮೇಲೆ ಸರ್ಕಾರಿ ಆಸ್ತಿ ಎಂದು ನಮೂದು ಮಾಡಲಾಗುತ್ತೆ ಎಂದು ಗ್ರಾಮ ಲೆಕ್ಕಾಧಿಕಾರಿ ಸಂತ್ರಸ್ತರಿಗೆ ಹೆದರಿಸಿ ಹಣವನ್ನ ಮರಳಿ ಪಡೆದಿದ್ದಾರೆ. ಅಲ್ಲದೆ ಡಾಟಾ ಎಂಟ್ರಿಯಲ್ಲಿ ಸಿ ಕೆಟಗರಿ ಎಂದು ನಮೂದಾಗಬೇಕಿತ್ತು. ಆದರೆ ಬಿ ಕೆಟಗರಿ ಎಂದು ನಮೂದಾಗಿದೆ ಎಂದು ಹೇಳಿ ಹಣ ಮರಳಿ ಪಡೆಯುವ ಮೂಲಕ ಸಂತ್ರಸ್ತರ ಹಣವನ್ನು ಅಧಿಕಾರಿ ಲೂಟಿ ಮಾಡಿದ್ದಾರೆ.

    ಅತಿವೃಷ್ಠಿಯಿಂದ ಮನೆ ಕಳೆದುಕೊಂಡಿದ್ದ ಸಂತ್ರಸ್ತರಿಗೆ ಸರ್ಕಾರ ಹಣವನ್ನ ನೀಡಿದರೆ ಗ್ರಾಮ ಲೆಕ್ಕಾಧಿಕಾರಿಗಳು ಸಂತ್ರಸ್ತರಿಂದ ಹಣವನ್ನ ಮರಳಿ ಪಡೆದ ಪರಿಣಾಮ ಸಂತ್ರಸ್ತರು ಇದೀಗ ಸೂಕ್ತ ನ್ಯಾಯ ಕೊಡಿಸಬೇಕೆಂದು ಹಿರಿಯ ಅಧಿಕಾರಿಗಳ ಮೊರೆ ಹೋಗಿದ್ದಾರೆ.

  • ಇದು ಲಜ್ಜೆಗೆಟ್ಟ ಸರ್ಕಾರ, ಪರಿಹಾರ ಹಣವನ್ನು ಪಕ್ಷ ಜಾತಿ ನೋಡಿ ನೀಡಲಾಗುತ್ತಿದೆ: ವಿನಯ್ ಕುಲಕರ್ಣಿ

    ಇದು ಲಜ್ಜೆಗೆಟ್ಟ ಸರ್ಕಾರ, ಪರಿಹಾರ ಹಣವನ್ನು ಪಕ್ಷ ಜಾತಿ ನೋಡಿ ನೀಡಲಾಗುತ್ತಿದೆ: ವಿನಯ್ ಕುಲಕರ್ಣಿ

    ಧಾರವಾಡ: ಇದು ಲಜ್ಜೆಗೆಟ್ಟ ಸರ್ಕಾರ, ಪರಿಹಾರ ಹಣವನ್ನು ಪಕ್ಷ ಜಾತಿ ನೋಡಿ ನೀಡಲಾಗುತ್ತಿದೆ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ ವಾಗ್ದಾಳಿ ನಡೆಸಿದ್ದಾರೆ.

    ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ವಿನಯ್ ಕುಲಕರ್ಣಿ, ಸರ್ಕಾರದ ಮೇಲೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅಧಿಕಾರಿಗಳ ಮೇಲೆ ಸರ್ಕಾರದ ಹಿಡಿತ ಇರಬೇಕು. ಮನೆಯಲ್ಲಿ ಕುಳಿತು ಅಧಿಕಾರ ನಡೆಸಲು ಆಗುವುದಿಲ್ಲ. ಕಷ್ಟದಲ್ಲಿ ಇರುವವರ ಸ್ಥಳಕ್ಕೆ ಭೇಟಿ ನೀಡಿದರೆ ಜನರ ಕಷ್ಟ ಅರ್ಥವಾಗುತ್ತೆ. ಇವರಿಗೆ ಯಾವ ಕಲ್ಪನೆ ಇಲ್ಲ ಎಂದು ಸರ್ಕಾರದ ಮೇಲೆ ಕಿಡಿಕಾರಿದರು.

    ಪ್ರವಾಹದಲ್ಲಿ ಮನೆ ಕಳೆದುಕೊಂಡವರು ಪರಿಸ್ಥಿತಿ ಕೆಟ್ಟಿದೆ. ಇದು ಲಜ್ಜೆಗೆಟ್ಟ ಸರ್ಕಾರ ಇವರಿಗೆ ನಾಚಿಕೆಯಾಗಬೇಕು. ಬಡವರು ಬಗ್ಗೆ ಕಳಕಳಿ ಇಲ್ಲ. ರೈತರಿಗೆ ಪರಿಹಾರ ಸಿಕ್ಕಿಲ್ಲ. ಮಳೆಯಿಂದ ಹಾನಿಯಾದ ಪರಿಹಾರ ತಮ್ಮ ಪಕ್ಷದ ಕಾರ್ಯಕರ್ತರಿಗೆ ನೀಡಲಾಗುತ್ತಿದೆ ಎಂದು ಹೇಳಿದ ಅವರು, ಬೇಕಿದ್ದರೆ ಹಳ್ಳಿಗಳಿಗೆ ನೀವೇ ಹೋಗಿ ಮಾತನಾಡಿ ನೋಡಿ ಎಂದು ಮಾಧ್ಯಮಗಳಿಗೆ ಹೇಳಿದ್ದಾರೆ.

    ನಾವು ಯಾವ ಪಕ್ಷ ಜಾತಿ ನೋಡಿಲ್ಲ. ಆದರೆ ಇವರು ಮನುಷ್ಯತ್ವ ಇಲ್ಲದವರು ಜಾತಿ ಪಕ್ಷ ನೋಡಿ ಪರಿಹಾರ ಕೊಡುತ್ತಿದ್ದಾರೆ. ನಾನು ಕೂಡಾ ನಿಮಗೆ ಹೊರಗೆ ಕರೆದುಕೊಂಡು ಹೋಗಿ ತೋರಿಸುತ್ತೇನೆ. ಮಾಧ್ಯಮ ಮಿತ್ರರಿಗೆ ಕೈಮುಗಿದು ಕೇಳಿಕೊಳ್ಳುತ್ತೇನೆ ಜನರ ಪರಿಸ್ಥಿತಿ ತೋರಿಸಿ. ಅದನ್ನು ನೋಡಿಯಾದರೂ ಪ್ರಚಾರ ಪ್ರಿಯರು ಹೊರ ಬಂದು ನೋಡ್ತಾರೆ ಎಂದು ಸರ್ಕಾರದ ಮೇಲೆ ಹರಿಹಾಯ್ದರು.

    ಜಿಲ್ಲಾ ಉಸ್ತುವಾರಿ ಸಚಿವರು ಈಗಲಾದರೂ ಅವಘಡ ಆದ ಸ್ಥಳಕ್ಕೆ ಭೇಟಿ ನೀಡಲಿ. ನೀವು ಸಿಎಂ ಆಗಿದ್ದವರು, ಅಧಿಕಾರಿಗಳಿಗೆ ಹಿಡಿತದಲ್ಲಿ ಇಟ್ಟುಕೊಳ್ಳಿ ಎಂದು ಹೇಳಿದ ವಿನಯ ಕುಲಕರ್ಣಿ, ಅಧಿಕಾರ ಇದ್ದಂತ ಸಮಯದಲ್ಲಿ ಬಡವರಿಗೆ ಸಹಾಯ ಮಾಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶಟ್ಟರ್‍ಗೆ ಕಿವಿಮಾತು ಹೇಳಿದರು.

  • ನೆರೆ ‘ಪೀಡಕರು’- ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಂತ್ರಸ್ತರಿಗೆ ತಲುಪುತ್ತಿಲ್ಲ ಪರಿಹಾರ

    ನೆರೆ ‘ಪೀಡಕರು’- ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಂತ್ರಸ್ತರಿಗೆ ತಲುಪುತ್ತಿಲ್ಲ ಪರಿಹಾರ

    ಯಾದಗಿರಿ: ಪ್ರವಾಹದಿಂದ ಉತ್ತರ ಕರ್ನಾಟಕ ತತ್ತರಿಸಿ ಹೋಗಿದೆ. ಸಂತ್ರಸ್ತರ ನೆರವಿಗೆ ಸರ್ಕಾರ ಮತ್ತು ರಾಜ್ಯದ ಜನತೆ ಮುಂದಾಗಿದ್ದಾರೆ. ಸರ್ಕಾರ ಸಹ ಕೂಡಲೇ ಸಂತ್ರಸ್ತರಿಗೆ ಪರಿಹಾರದ ವಿತರಣೆ ಆಗಬೇಕೆಂದು ಹೇಳಿದೆ. ದೇವರು ವರ ಕೊಟ್ಟರು ಪೂಜಾರಿ ನೀಡಲಿಲ್ಲ ಎಂಬ ಮಾತಿನಂತೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪರಿಹಾರದ ಹಣ ಸಂತ್ರಸ್ತರಿಗೆ ಕೈಗೆ ತಲುಪುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

    ಯಾದಗಿರಿ ಜಿಲ್ಲೆಯ ವಡಗೇರಾ, ಶಹಾಪುರ ತಾಲೂಕಿನಲ್ಲಿ ನೆರೆಹಾವಳಿಯಿಂದಾಗಿ ಯಕ್ಷಚಿಂತಿ, ಗೌಡೂರು, ಚನ್ನೂರು, ಕೊಳ್ಳೂರು ಗ್ರಾಮಗಳು ಜಲಾವೃತವಾಗಿದ್ದವು. ಸುರಪುರ ತಾಲೂಕಿನ ನೀಲಕಂಠರಾಯನ ಗಡ್ಡಿ ಹುಣಸಗಿ ತಾಲೂಕಿನ ಜುಮಲಾಪುರ ತಾಂಡಗಳ ಸೇತುವೆ ಕೊಚ್ಚಿ ಹೋಗಿದ್ದವು. ಅಧಿಕಾರಿಯ ನಿರ್ಲಕ್ಷ್ಯದಿಂದ ಸಂತ್ರಸ್ತರಿಗೆ ಇದೂವರೆಗೂ ಪರಿಹಾರ ಸಿಕ್ಕಿಲ್ಲ.

    ಯಾದಗಿರಿ ಜಿಲ್ಲಾಡಳಿತದ ಪ್ರಕಾರ 339 ಮನೆಗಳಿಗೆ ಪರಿಹಾರ ನೀಡಲಾಗಿದೆ. ಈ ಪರಿಹಾರ ಕೇವಲ ಕಾಗದದ ಮೇಲಿದೆ, ಹೊರತು ಸಂತ್ರಸ್ತರಿಗೆ ತಲುಪಿಲ್ಲ. ಪಬ್ಲಿಕ್ ಟಿವಿ ನಡೆಸಿದ ರಿಯಾಲಿಟಿ ಚೆಕ್ ನಲ್ಲಿ ಪರಿಹಾರ ಯಾಕೆ ತಲುಪಿಲ್ಲ ಎಂಬ ವಿಚಾರ ಬಯಲಾಗಿದೆ. ಅಧಿಕಾರಿಯ ಎಡವಟ್ಟಿನಿಂದಾಗಿ ಗಂಡನ ಹೆಸರು ಹೆಂಡತಿಗೆ, ಒಬ್ಬರ ಚೆಕ್‍ನಲ್ಲಿ ಮತ್ಯಾರದೋ ಹೆಸರು ಹಾಕಲಾಗಿದೆ. ಪರಿಹಾರದ ಚೆಕ್ ನೀಡಿದ್ದರೂ ಸಿಕ್ಕಾಪಟ್ಟೆ ಲೋಪದೋಷಗಳಿಂದ ಕೂಡಿದೆ. ಚೆಕ್ ದೊರೆತರೂ ಹಣ ಸಿಗುತ್ತಾ ಎಂಬ ಪ್ರಶ್ನೆ ನಿರಾಶ್ರಿತರಲ್ಲಿ ಮನೆ ಮಾಡಿದೆ.

    ಯಕ್ಷಿಚಿಂತಿ ಗ್ರಾಮ ಲೆಕ್ಕಿಗ ಪ್ರವೀಣ್ ಮತ್ತು ವಡಗೇರಾ ತಹಶೀಲ್ದಾರ್ ಸಂತೋಷ್ ರಾಣಿಯವರ ಬೇಜವಾಬ್ದಾರಿ ಕೆಲಸದಿಂದ ಪ್ರವಾಹ ಸಂತ್ರಸ್ತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಹೀಗೆ ಮೇಲೆ ಕಾಣಿಸದಂತೆ ಸಂತ್ರಸ್ತರ ಹೆಸರುಗಳನ್ನು ತಪ್ಪಾಗಿ ನಮೂದಿಸಿಕೊಂಡಿದ್ದಾರೆ.

    ಯಾದಗಿರಿಯ ವಡಗೇರಾ, ಶಹಾಪುರ, ಸುರಪುರ, ಹುಣಸಗಿ ತಾಲೂಕುಗಳು ಪ್ರವಾಹ ಬಾಧಿತವಾಗಿದ್ದು, 339 ಕುಟುಂಬಗಳು ಮನೆ ಕಳೆದುಕೊಂಡಿವೆ. ಅಧಿಕಾರಿಗಳು ಸರ್ವೇ ಮಾಡಿ, ವರದಿಯನ್ನು ಸಿದ್ಧ ಪಡಿಸಿ ಪರಿಹಾರದ ಚೆಕ್ ಲೋಪದೋಷದಿಂದ ಕೂಡಿದೆ. ಹೀಗಾಗಿ ವಡಗೇರಾದ ಯಕ್ಷಚಿಂತಿ ಗ್ರಾಮದಲ್ಲಿ ಸುಮಾರು 100ಕ್ಕೂ ಅಧಿಕ ಕುಟುಂಬಗಳಿಗೆ ಪರಿಹಾರ ಮರೀಚಿಕೆ ಆಗಿದೆ. ಇಷ್ಟು ಮಾತ್ರವಲ್ಲದೇ ಅರ್ಹ ಸಂತ್ರಸ್ತರನ್ನು ಪರಿಗಣಿಸಿಲ್ಲ ಎಂಬ ಗಂಭೀರ ಆರೋಪಗಳು ಸಹ ಕೇಳಿ ಬಂದಿವೆ.

    ಎರಡು ಕಂತಿನಲ್ಲಿ 10 ಸಾವಿರ ರೂ. ಪರಿಹಾರದ ಹಣ ಹಂಚಿಕೆಯಾಗಲಿದೆ. 3,800 ರೂ. ಚೆಕ್ ನಲ್ಲಿ ಮತ್ತು ಉಳಿದ ಮೊತ್ತ ಸಂತ್ರಸ್ತರ ಖಾತೆಗೆ ನೇರವಾಗಿ ಜಮೆ ಆಗಲಿದೆ. ವಡಗೇರಾ ಹೊಸ ತಾಲೂಕು ಆಗಿದ್ದರಿಂದ ತಹಶೀಲ್ದಾರ್ ಇನ್ನೂ ಖಜಾನೆಯ ಸಹಿ ಹಕ್ಕು ಕೊಟ್ಟಿಲ್ಲ. ಹಾಗಾಗಿ ಪ್ರತಿಯೊಂದು ಪರಿಹಾರಕ್ಕೂ ಶಹಾಪುರದ ಅಧಿಕಾರಿಗಳ ಗಮನಕ್ಕೆ ತರಬೇಕು. ಈ ಎಲ್ಲ ಕಾರಣಗಳಿಂದ ವಡಗೇರಾದ ಯಕ್ಷಚಿಂತಿ ಗ್ರಾಮದಲ್ಲಿ ಪರಿಹಾರ ವಿಳಂಬವಾಗುತ್ತಿದೆ.

  • ಕೇರಳದಲ್ಲಿ ಪ್ರಧಾನಿ ವೈಮಾನಿಕ ಸಮೀಕ್ಷೆ – 500 ಕೋಟಿ ಪರಿಹಾರ ಘೋಷಣೆ

    ಕೇರಳದಲ್ಲಿ ಪ್ರಧಾನಿ ವೈಮಾನಿಕ ಸಮೀಕ್ಷೆ – 500 ಕೋಟಿ ಪರಿಹಾರ ಘೋಷಣೆ

    ತಿರುವನಂತಪುರ: ಪ್ರಧಾನಿ ನರೇಂದ್ರ ಮೋದಿ ಇಂದು ಕೇರಳದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿ, ರಾಜ್ಯಕ್ಕೆ 500 ಕೋಟಿ ಪರಿಹಾರ ಘೋಷಣೆ ಮಾಡಿದ್ದಾರೆ.

    ಪ್ರವಾಹದಲ್ಲಿ ಮೃತ ಕುಟುಂಬಸ್ಥರಿಗೆ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದೇ ವೇಳೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯಪಾಲ ಪಿ. ಸತಾಶಿವಂ ಹಾಗು ಕೇಂದ್ರ ಪ್ರವಾಸ ಮಂತ್ರಿ ಕೆ.ಜೆ.ಆಲ್ಫೋನ್ಸ್ ರಿಂದ ನೆರೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಂಡರು.

    ಶುಕ್ರವಾರ ಸಂಜೆಯೇ ತಿರುವನಂತಪುರಕ್ಕೆ ಬಂದಿಳಿದಿದ್ದ ಪ್ರಧಾನಿಗಳನ್ನು ಸಿಎಂ ಸ್ವಾಗತಿಸಿಕೊಂಡಿದ್ದರು. ವೈಮಾನಿಕ ಸಮೀಕ್ಷೆಗೂ ಮುನ್ನ ಸಂಬಂಧಪಟ್ಟ ಸ್ಥಳೀಯ ಅಧಿಕಾರಿಗಳು ಮತ್ತು ಸಚಿವರೊಂದಿಗೆ ಪ್ರಧಾನಿ ಸಭೆ ನಡೆಸಿದ್ದರು. ಇಂದು ಕೊಚ್ಚಿನ್ ನಿಂದ ವೈಮಾನಿಕ ಸಮೀಕ್ಷೆ ನಡೆಸಿದರು.

    ಅತಿವೃಷ್ಟಿಯಿಂದಾಗಿ ಅಂದಾಜು 19,512 ಕೋಟಿ ರೂ.ನಷ್ಟವಾಗಿದ್ದು, ಪ್ರಧಾನ ಮಂತ್ರಿಗಳು ಕೂಡಲೇ 2 ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಸಿಎಂ ಪಿಣರಾಯಿ ವಿಜಯನ್ ಮನವಿ ಮಾಡಿಕೊಳ್ಳಲಾಗಿತ್ತು. ಪ್ರಧಾನಿಗಳು ರಾಜ್ಯಕ್ಕೆ 500 ಕೋಟಿ ರೂ. ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ. ಇದಕ್ಕೂ ಮುನ್ನ ಕೇಂದ್ರ ಸರ್ಕಾರ ರಾಜ್ಯಕ್ಕೆ 100 ಕೋಟಿ ರೂ. ನೀಡಿತ್ತು. ರಾಜ್ಯದ ನೆರವಿಗೆ ಧಾವಿಸಿದ್ದಕ್ಕೆ ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದು ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದಾರೆ.

    ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಹ ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿಗೆ 2 ಕೋಟಿ ರೂ. ಹಣವನ್ನು ವರ್ಗಾವಣೆ ಮಾಡಿದೆ. ಪರಿಹಾರ ನಿಧಿಗೆ ಹಣ ವರ್ಗಾವಣೆಗೊಳಿಸುವ ಎಲ್ಲ ಬ್ಯಾಂಕಿನ ಶುಲ್ಕಗಳನ್ನು ಕಡಿತಗೊಳಿಸಲಾಗಿದೆ ಎಂದು ಎಸ್‍ಬಿಐ ತಿಳಿಸಿದೆ.

    ಶನಿವಾರ ಕಾಸರಗೋಡು ಎರ್ನಾಕುಲಂ ಮತ್ತು ಇಡುಕ್ಕಿ ಒಳಗೊಂಡಂತೆ ಇತರ 13 ಜಿಲ್ಲೆಗಳಿಗೂ ಎಚ್ಚರಿಕೆಯನ್ನು ಸೂಚಿಸಲಾಗಿದೆ. ಶುಕ್ರವಾರ ಬೆಳಗ್ಗೆ 5 ಘಟಕದ ರಾಷ್ಟ್ರೀಯ ವಿಪತ್ತು ಪಡೆ ತಿರುವನಂತಪುರಂ ತಲುಪಿದ್ದು, ಕಾರ್ಯಾಚರಣೆಯಲ್ಲಿ ತೊಡಗಿದೆ. ಇಂದು ಕೂಡ 35 ಸದಸ್ಯರ ತಂಡ ತಲುಪುವ ನೀರಿಕ್ಷೆ ಇದೆ. ಇದೀಗ ಐಸಿಜಿ ಪಡೆಯನ್ನು ವಂಡಿಪೆರಿಯರ್ ನಿಂದ ಮಂಜುಮಾಲಾ ಹಳ್ಳಿಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ 16 ಮಂದಿಯನ್ನು ರಕ್ಷಿಸಲಾಗಿದೆ. ಹಾಗೂ ಅವರಿಗೆ ಸೇವಿಸಲು ಆಹಾರ ಪದಾರ್ಥಗಳನ್ನು ನೀಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv