Tag: ಪರೀಕ್ಷೆಗಳು

  • NEET, JEE ಪರೀಕ್ಷೆಗಳು ಮುಂದೂಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

    NEET, JEE ಪರೀಕ್ಷೆಗಳು ಮುಂದೂಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

    ನವದೆಹಲಿ: NEET ಮತ್ತು JEE ಪರೀಕ್ಷೆಗಳು ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಪರೀಕ್ಷೆಗಳ ಮುಂದೂಡಿಕೆ ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

    ಕೊರೊನಾ ವೈರಸ್ ಭೀತಿ ಹಿನ್ನೆಲೆ ಪರೀಕ್ಷೆಗಳನ್ನು ಮುಂದೂಡುವಂತೆ ಪಶ್ಚಿಮ ಬಂಗಾಳ, ರಾಜಸ್ಥಾನ, ಪಂಜಾಬ್, ಛತ್ತಿಸ್‍ಗಢ, ಜಾರ್ಖಂಡ್, ಮಹಾರಾಷ್ಟ್ರ ಅರ್ಜಿ ಸಲ್ಲಿಸಿದ್ದವು. ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪರೀಕ್ಷೆಗಳನ್ನು ಮುಂದೂಡಿಕೆ ಸಾಧ್ಯವಿಲ್ಲ ಎಂದು ಆದೇಶ ನೀಡಿದೆ.

    ಸೆಪ್ಟೆಂಬರ್ 1ರಿಂದ 6ರವರೆಗೆ JEE ಪರೀಕ್ಷೆ, ಮುಖ್ಯ ಪರೀಕ್ಷೆಗಳು ಹಾಗೂ ಸೆಪ್ಟೆಂಬರ್ 13 ರಂದು NEET ಪರೀಕ್ಷೆ ದಿನಾಂಕ ನಿಗದಿಯಾಗಿದೆ. ಆದರೆ ಕೊರೊನಾ ಸಂಕಷ್ಟದ ಹಿನ್ನೆಲೆ ಪರೀಕ್ಷೆ ನಡೆಸುವುದು ಕಷ್ಟ. ಇದು ವಿದ್ಯಾರ್ಥಿಗಳಿಗೂ ಮಾರಕ ಎಂದು ಆರು ರಾಜ್ಯಗಳು ಸುಪ್ರೀಂ ಕೋರ್ಟ್ ಬಳಿ ಮನವಿ ಮಾಡಿದ್ದವು.

    ವಿಚಾರಣೆ ವೇಳೆ ಕೇಂದ್ರ ಸರ್ಕಾರ ಪರೀಕ್ಷೆ ಮುಂದೂಡಲು ನಿರಾಕರಿಸಿತು. ದೇಶದಲ್ಲಿ ಬೇರೆ ಬೇರೆ ಶೈಕ್ಷಣಿಕ ಪರೀಕ್ಷೆಗಳು ನಡೆಯುತ್ತಿದೆ. ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಈ ಪರೀಕ್ಷೆಗಳನ್ನು ನಡೆಸಲಾಗುವುದು. ಒಂದು ವೇಳೆ ಪರೀಕ್ಷೆ ವಿಳಂಬವಾದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಕ್ಕೆ ತೊಂದರೆಯಾಗಲಿದೆ ಎಂದು ವಾದ ಮಂಡಿಸಿತ್ತು.