ಮಂಗಳೂರು: ಇಲ್ಲಿನ ಪೊಲೀಸ್ ಗ್ರೌಂಡ್‌ನಲ್ಲಿ ಇಂದು ರೌಡಿ ಹಾಗೂ ಗಾಂಜಾ ಗಿರಾಕಿಗಳಿಗೆ ಪರೇಡ್ ನಡೆಸಲಾಗಿದ್ದು, ಬೆಳ್ಳಂಬೆಳಗ್ಗೆ ಪೊಲೀಸರು ರೌಡಿಗಳಿಗೆ ಫುಲ್‌ಕ್ಲಾಸ್ ತೆಗೆದುಕೊಂಡಿದ್ದಾರೆ.
ಇದಕ್ಕೆ ಉತ್ತರಿಸಿದ ಆರೋಪಿ ಕಿಶೋರ್ ಡ್ಯಾನ್ಸ್‌ಗಾಗಿ ಕೂದಲು ಬಿಟ್ಟಿದ್ದೇನೆ. ತನ್ನ ತಾಯಿಯ ಟ್ಯಾಟೋ ಅಂತಾ ಕಿಶೋರ್ ಅಮನ್ ಹೇಳಿದ ಕೂಡಲೇ ಮಾಡೋದೆಲ್ಲಾ ಮಾಡಿ ತಾಯಿಯದ್ದು ಯಾಕೆ ಹಾಕಿಸಿಕೊಂಡಿದ್ಯಾ? ನೆಟ್ಟಗೆ ಬಾಳಿದರೆ ಸಾಕು ಹಚ್ಚೆ ಹಾಕಿಸಿಕೊಳ್ಳಬೇಕಿಲ್ಲ ಎಂದು ಬುದ್ಧಿವಾದ ಹೇಳಿದ್ದಾರೆ.
ವಾಷಿಂಗ್ಟನ್: ಅಮೆರಿಕದ ಚಿಕಾಗೊ ಉಪನಗರದಲ್ಲಿ ಸೋಮವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯ ಪರೇಡ್ ವೇಳೆ ದುಷ್ಕರ್ಮಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 24 ಮಂದಿ ಗಾಯಗೊಂಡಿದ್ದಾರೆ.
ಸಮೀಪದ ಚಿಲ್ಲರೆ ಅಂಗಡಿ ಮೇಲೆ ಮೇಲೆ ನಿಂತಿದ್ದ ವ್ಯಕ್ತಿ ಪರೇಡ್ ಪ್ರಾರಂಭವಾಗುತ್ತಿದ್ದಂತೆಯೇ ಗುಂಡು ಹಾರಿಸಲು ಆರಂಭಿಸಿದನು. ಆರೋಪಿಯನ್ನು ರಾಬರ್ಟ್ ಕ್ರಿಮೊ (22) ಎಂದು ಗುರುತಿಸಲಾಗಿದ್ದು, ಇದೀಗ ಪೊಲೀಸರು ಆತನನ್ನು ಬಂಧಿಸಲಾಗಿದೆ ಎಂದು ಹೈಲ್ಯಾಂಡ್ ಪಾರ್ಕ್ ಪೊಲೀಸ್ ಮುಖ್ಯಸ್ಥ ಲೌ ಜೋಗ್ಮೆನ್ ಹೇಳಿದ್ದಾರೆ. ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ – ಶಾಸಕ ಜಮೀರ್ ಮನೆ ಮೇಲೆ ಎಸಿಬಿ ದಾಳಿ
The moment the crowd realized there had been mass shooting in Highland Park, Illinois, at their fourth of July parade. Unfortunately there’s nothing more American than this tragedy. pic.twitter.com/beXt9uYP3F
— Read Wobblies and Zapatistas (@JoshuaPotash) July 4, 2022
ಚಿಕಾಗೊ ನಗರದ ಹೈಲೆಂಡ್ ಪಾರ್ಕ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಜನರು ಫುಟ್‍ಪಾತ್ ಮೇಲೆ ಕುಳಿತುಕೊಂಡು ಪರೇಡ್ ನೋಡುತ್ತಿದ್ದ ವೇಳೆ ಗುಂಡಿನ ಶಬ್ಧ ಕೇಳಿಸಿದ್ದು, ನೆಲದ ಮೇಲೆ ಮಲಗಿ, ಸುತ್ತಮುತ್ತ ಕೂಗಾಡುತ್ತ ಜನರು ಎತ್ತೆಂದರತ್ತ ಓಡಿ ಹೋಗುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ
ಇದೀಗ ಗಾಯಗೊಂಡ 24 ಮಂದಿಯನ್ನು ಹೈಲ್ಯಾಂಡ್ ಪಾರ್ಕ್ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ನಗರದ ಪೊಲೀಸ್ ಕಮಾಂಡರ್ ಕ್ರಿಸ್ ಓ’ನೀಲ್ ತಿಳಿಸಿದ್ದಾರೆ. ಈ ಘಟನೆಯಿಂದಾಗಿ ಜುಲೈ 4ರಂದು ಆಯೋಜಿಸಲಾಗಿದ್ದ ವಿಶೇಷ ಉತ್ಸವಗಳನ್ನು ರದ್ದುಗೊಳಿಸಲಾಗಿದೆ. ಅಲ್ಲದೇ ಜನರು ಅನಗತ್ಯವಾಗಿ ಈ ಸ್ಥಳಕ್ಕೆ ಭೇಟಿ ನೀಡಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಗಣರಾಜ್ಯೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಇಡೀ ದೇಶವೇ ಗಣರಾಜ್ಯೋತ್ಸವದ ಸಿದ್ಧತೆಯಲ್ಲಿ ತೊಡಗಿದೆ. ದೆಹಲಿಯ ರಾಜಪಥನಲ್ಲಿ ಪರೇಡ್‌ಗಾಗಿ ಸೈನಿಕರು ಪೂರ್ಣ ಉಡುಗೆಯಲ್ಲಿ ಪೂರ್ವಾಭ್ಯಾಸ ಮಾಡಿದವು. ಇನ್ನೊಂದೆಡೆ ಹೆಲಿಕಾಪ್ಟರ್‌ಗಳು ಇಂದು ದೆಹಲಿಯ ರಾಜ್‌ಪಥ್‌ನ ಮೇಲೆ ಹಾರಾಡಿದವು.
ಪ್ರತಿ ವರ್ಷ ಪರೇಡ್ ಸ್ಥಳದಲ್ಲಿ ನಡೆಯುವ ಪೂರ್ವ ಸಿದ್ಧತೆಯನ್ನು ವೀಕ್ಷಿಸಲು ಪ್ರೇಕ್ಷಕರು ಜಮಾಯಿಸಿದ್ದರು. ಈ ದೃಶ್ಯವು ರಾಜಪಥ ಸ್ಥಳದಿಂದ ರಾಷ್ಟ್ರಪತಿ ಭವನದವೆರೆಗೂ ನೋಡಬಹುದಾಗಿತ್ತು. ನಾಲ್ಕು ಮಿಗ್-17 ಹೆಲಿಕಾಪ್ಟರ್‌ಗಳು ವೈನ್‌ಗ್ಲಾಸ್ ರಚನೆಯಲ್ಲಿ ಹಾರಾಡುತ್ತಿದ್ದವು. ಇದನ್ನು ನೋಡಲು ಜನಸಂದಣಿಯೇ ತುಂಬಿತ್ತು. ರಾಷ್ಟ್ರ ಲಾಂಛನ ಹಾಗೂ ಸೇವಾ ಚಿಹ್ನೆಗಳು ಈ ಹೆಲಿಕಾಪ್ಟರ್ ಮೇಲಿದ್ದವು.
ಭಾರತೀಯ ಸೈನಿಕರು ಗಣರಾಜ್ಯೋತ್ಸವಕ್ಕಾಗಿ ತಮ್ಮ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು ಪರೇಡ್ ಮಾಡುವ ಮೂಲಕ ಗಮನ ಸೆಳೆದರು. ಮೊದಲ ಬಾರಿಗೆ, ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ನೆನಪಿಗಾಗಿ ಈ ಬಾರಿಯ ಗಣರಾಜ್ಯೋತ್ಸವವು ಇಂದಿನಿಂದಲೇ ಪ್ರಾರಂಭಗೊಳ್ಳಲಿದೆ. ಪ್ರತಿ ವರ್ಷ ಜನವರಿ 24 ರಂದು ಪ್ರಾರಂಭಗೊಳ್ಳುತ್ತಿತ್ತು. ಇದನ್ನೂ ಓದಿ:ನೇತಾಜಿ ಜನ್ಮ ದಿನವನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಿಸಿ: ಮಮತಾ ಬ್ಯಾನರ್ಜಿ
ಇಂದು ಸಂಜೆ 6 ಗಂಟೆಗೆ ಇಂಡಿಯಾ ಗೇಟ್‌ನಲ್ಲಿ ಸ್ವಾತಂತ್ರ‍್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್‌ರ ಪ್ರತಿಮೆಯನ್ನು ಅನಾವರಣಗೊಳಿಸುವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: ಸುಭಾಷ್ ಚಂದ್ರ ಬೋಸ್ ದೇಶಕ್ಕೆ ನೀಡಿದ ಕೊಡುಗೆ ಅಪಾರ: ಪ್ರಧಾನಿ ಮೋದಿ
ನವದೆಹಲಿ: ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸುವ ಟ್ಯಾಬ್ಲೋಗಳು ಯಾವುದು ಇರಬೇಕು? ಯಾವುದು ಇರಬಾರದು ಎನ್ನುವುದನ್ನು ಕೇಂದ್ರ ಸರ್ಕಾರ, ಪ್ರಧಾನಿ ಮೋದಿ ನಿರ್ಧರಿಸುವುದಿಲ್ಲ. ಆದರೆ ರಾಜ್ಯಗಳು ವರ್ಷದಿಂದ ವರ್ಷಕ್ಕೆ ತಪ್ಪು ಮಾಹಿತಿಯನ್ನು ಬಳಸಿಕೊಂಡು ಕೇಂದ್ರದಿಂದ ಅವಮಾನವಾಗಿದೆ ಎಂಬ ಅದೇ ಹಳೆಯ ತಂತ್ರವನ್ನು ಮುಂದುವರಿಸಿದ್ದಾರೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.
ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪಶ್ಚಿಮ, ಬಂಗಾಳ, ಕೇರಳ ಟ್ಯಾಬ್ಲೋಗಳಿಗೆ ಅನುಮತಿ ನೀಡದೇ ಅನ್ಯಾಯ ಮಾಡಲಾಗಿದೆ ಎಂಬ ಅರೋಪಕ್ಕೆ ಶೋಭಾ ಕರಂದ್ಲಾಜೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ಹೇಳಿಕೆಯಲ್ಲಿ ಏನಿದೆ?
ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಮ್ಮ ರಾಜ್ಯದ ಟ್ಯಾಬ್ಲೋಗಳನ್ನು ಹೊರಗಿಟ್ಟ ಬಗ್ಗೆ ರಾಜ್ಯದ ಸಿಎಂಗಳು ಇತ್ತೀಚೆಗೆ ಪತ್ರಗಳನ್ನು ಬರೆಯುತ್ತಿರುವುದನ್ನು ನಾವು ನೋಡಿದ್ದೇವೆ. ಇದು ಪ್ರಾದೇಶಿಕ ಅಭಿಮಾನದೊಂದಿಗೆ ತಪ್ಪಾಗಿ ತಳುಕು ಹಾಕಿಕೊಂಡಿದ್ದು, ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ಮಾಡಿದ ಅವಮಾನ ಎಂದು ಬಿಂಬಿಸಲಾಗುತ್ತಿದೆ. ಇದನ್ನೂ ಓದಿ: ಟ್ಯಾಬ್ಲೊ ವಿಚಾರದಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ – ಸಿಡಿದೆದ್ದ ರಾಜ್ಯಗಳು
ಬಹುಶಃ ಸಿಎಂಗಳಿಗೆ ತಮ್ಮದೇ ಆದ ಸಕಾರಾತ್ಮಕ ಅಜೆಂಡಾ ಇಲ್ಲ, ಅವರು ವರ್ಷದಿಂದ ವರ್ಷಕ್ಕೆ ತಪ್ಪು ಮಾಹಿತಿಯನ್ನು ಬಳಸಿಕೊಂಡು ಅದೇ ಹಳೆಯ ತಂತ್ರವನ್ನು ಮುಂದುವರಿಸಿ ಕೇಂದ್ರದಿಂದ ಅವಮಾನ ಆಗಿದೆ ಎಂಬಂತೆ ಬಿಂಬಿಸುತ್ತಿದ್ದಾರೆ. ಟ್ಯಾಬ್ಲೋಗಳನ್ನು ಮೋದಿ ಸರ್ಕಾರ ನಿರ್ಧಾರ ಮಾಡುತ್ತಿಲ್ಲ. ಕಲೆ, ಸಂಸ್ಕೃತಿ, ಶಿಲ್ಪಕಲೆ, ಸಂಗೀತ, ವಾಸ್ತುಶಿಲ್ಪ, ನೃತ್ಯ ಸಂಯೋಜನೆ ಇತ್ಯಾದಿ ಕ್ಷೇತ್ರದ ಗಣ್ಯರನ್ನು ಒಳಗೊಂಡ ತಜ್ಞರ ಸಮಿತಿ ಸರಣಿ ಸಭೆ ನಡೆಸಿ ವಿವಿಧ ರಾಜ್ಯಗಳು ಮತ್ತು ಕೇಂದ್ರ ಸಚಿವಾಲಯಗಳಿಂದ ಸ್ವೀಕರಿಸಲಾದ ಟ್ಯಾಬ್ಲೋಗಳ ಪ್ರಸ್ತಾಪಗಳನ್ನು ಪರಿಶೀಲಿಸುತ್ತದೆ. ಥೀಮ್, ಪರಿಕಲ್ಪನೆ, ವಿನ್ಯಾಸ ಮತ್ತು ದೃಶ್ಯ ಈ ಮಾನದಂಡಗಳ ಆಧಾರದ ಮೇಲೆ ಶಿಫಾರಸು ಮಾಡಲಾಗುತ್ತದೆ.
ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ಗಾಗಿ ರಾಜ್ಯಗಳು ಮತ್ತು ಕೇಂದ್ರ ಸಚಿವಾಲಯಗಳಿಂದ ಒಟ್ಟು 56 ಪ್ರಸ್ತಾವನೆಗಳನ್ನು ಸ್ವೀಕರಿಸಲಾಗಿತ್ತು. ಈ 56 ರಲ್ಲಿ ಅಂತಿಮವಾಗಿ 21 ಪ್ರಸ್ತಾವನೆಗಳನ್ನು ಆಯ್ಕೆ ಮಾಡಲಾಗಿದೆ. ಸಮಯದ ಕೊರತೆಯಿಂದ ಕೆಲ ಪ್ರಸ್ತಾವನೆಗಳನ್ನು ತಿರಸ್ಕರಿಸುವುದು ಸಹಜ. ಕೇರಳ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಪ್ರಸ್ತಾವನೆಗಳನ್ನು ವಿಷಯ ತಜ್ಞರ ಸಮಿತಿಯು ಸರಿಯಾದ ಪ್ರಕ್ರಿಯೆ ಮತ್ತು ಸೂಕ್ತ ಚರ್ಚೆಯ ನಂತರ ತಿರಸ್ಕರಿಸಿದೆ. ಇದನ್ನೂ ಓದಿ: ಕೇರಳವನ್ನು ಪ್ರಶ್ನಿಸಬೇಕೇ ಹೊರತು ಕೇಂದ್ರವನ್ನಲ್ಲ: ಸಿದ್ದುಗೆ ಬಿಜೆಪಿ ತಿರುಗೇಟು
2018 ಮತ್ತು 2021 ರಲ್ಲಿ ಅದೇ ಮೋದಿ ಸರ್ಕಾರದ ಅಡಿಯಲ್ಲಿ ಅದೇ ಪ್ರಕ್ರಿಯೆ ಮತ್ತು ವ್ಯವಸ್ಥೆಯ ಮೂಲಕ ಕೇರಳದ ಪ್ರಸ್ತಾಪಗಳನ್ನು ಅಂಗೀಕರಿಸಲಾಗಿದೆ. ಅದೇ ರೀತಿ 2016, 2017, 2019, 2020 ಮತ್ತು 2021 ರಲ್ಲಿ ಅದೇ ಮೋದಿ ಸರ್ಕಾರ ಇದ್ದಾಗ ತಮಿಳುನಾಡಿನ ಟ್ಯಾಬ್ಲೋ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಲಾಗಿತ್ತು.
2016, 2017, 2019 ಮತ್ತು 2021 ರಲ್ಲಿ ಮೋದಿ ಸರ್ಕಾರ ಆಡಳಿತದಲ್ಲಿದ್ದಾಗ ಪಶ್ಚಿಮ ಬಂಗಾಳದ ಪ್ರಸ್ತಾಪಗಳಿಗೆ ಅನುಮತಿ ನೀಡಲಾಗಿತ್ತು ಎಂಬುದನ್ನು ಸಹ ಗಮನಿಸಬೇಕು. ಈ ಬಾರಿಯ ಪರೇಡ್‌ನಲ್ಲಿ ಕೇಂದ್ರ ಲೋಕೋಪಯೋಗಿ ಇಲಾಖೆಯ ಟ್ಯಾಬ್ಲೋ ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರನ್ನು ಒಳಗೊಂಡಿದೆ. ಅದ್ದರಿಂದ ನೇತಾಜಿ ಅವರಿಗೆ ಅವಮಾನ ಮಾಡಲಾಗಿದೆ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ.
ಬೆಂಗಳೂರು: ಗಣರಾಜ್ಯೋತ್ಸವದ ಸ್ಥಬ್ಧ ಚಿತ್ರದ ವಿಚಾರದಲ್ಲಿ ಕೇರಳ ಸರ್ಕಾರ ಮಾಡಿದ ತಪ್ಪಿಗೆ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರು ಪ್ರಶ್ನಿಸಬೇಕಿರುವುದು ಕೇರಳದ ಸಿಪಿಐಎಂ ಪಕ್ಷವನ್ನೇ ಹೊರತು ಕೇಂದ್ರವನ್ನಲ್ಲ ಎಂದು ಕರ್ನಾಟಕ ಬಿಜೆಪಿ ತಿರುಗೇಟು ನೀಡಿದೆ.
ಭಾನುವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ತಳಸಮುದಾಯದ ಮಹಾಪುರುಷರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಇರುವ ಪೂರ್ವಗ್ರಹ ಮತ್ತು ತಿರಸ್ಕಾರಕ್ಕೆ ಸಾಕ್ಷಿ. ಶತಮಾನದ ಹಿಂದೆಯೇ ಅಸ್ಪøಶ್ಯತೆ ಮತ್ತು ಪುರೋಹಿತಷಾಹಿ ವ್ಯವಸ್ಥೆ ವಿರುದ್ಧ ಸಿಡಿದೆದ್ದು, ಹಿಂದೂ ಧರ್ಮದ ಸುಧಾರಣೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದ ನಾರಾಯಣ ಗುರುಗಳಿಗೆ ಅವಮಾನಿಸಿರುವ ಕೇಂದ್ರ ಸರ್ಕಾರಕ್ಕೆ ಹಿಂದೂ ಧರ್ಮದ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದರು.
ಶತಮಾನದ ಹಿಂದೆಯೇ
ಅಸ್ಪೃಶ್ಯತೆ ಮತ್ತು ಪುರೋಹಿತಷಾಹಿ ವ್ಯವಸ್ಥೆ ವಿರುದ್ದ ಸಿಡಿದೆದ್ದು
ಹಿಂದೂ ಧರ್ಮದ ಸುಧಾರಣೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದ ನಾರಾಯಣ ಗುರುಗಳಿಗೆ ಅವಮಾನಿಸಿರುವ @BJP4India ಮತ್ತು ಕೇಂದ್ರ ಸರ್ಕಾರಕ್ಕೆ ಹಿಂದೂ ಧರ್ಮದ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ?#Insult_to_NaraynaGúru
4/7 pic.twitter.com/W4b57usG3P
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ ಟ್ವೀಟ್‍ಗೆ ಬಿಜೆಪಿ ತಿರುಗೇಟು ನೀಡಿದ್ದು, ಗಣರಾಜೋತ್ಸವ ಪರೇಡ್‍ನಲ್ಲಿ ಪ್ರದರ್ಶನಗೊಳ್ಳಲಿರುವ ಟ್ಯಾಬ್ಲೊ ವಿಚಾರವಾಗಿ ಕೇರಳದ ಸ್ಥಬ್ಧ ಚಿತ್ರವನ್ನು ಯಾಕೆ ತೆಗೆದು ಹಾಕಿದೆ ಎನ್ನುವುದಕ್ಕೆ ಪ್ರತಿಕ್ರಿಯೆ ನೀಡಿದೆ.
ಕೇರಳ ಸರ್ಕಾರ ಮಾಡಿದ ತಪ್ಪಿಗೆ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರು ಪ್ರಶ್ನಿಸಬೇಕಿರುವುದು ಕೇರಳದ ಸಿಪಿಐಎಂ ಪಕ್ಷವನ್ನೇ ಹೊರತು ಕೇಂದ್ರವನ್ನಲ್ಲ.
ಮೊಸರಿನಲ್ಲೂ ಕಲ್ಲು ಹುಡುಕುವ ಜಾಯಮಾನ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹೊಸತೇನಲ್ಲ. ಆದರೂ ಸೂಕ್ಷ್ಮ ವಿಚಾರಗಳಲ್ಲಿ ರಾಜಕೀಯ ಮಾಡುವುದು ಸರಿಯಲ್ಲ.
ಟ್ವೀಟ್‍ನಲ್ಲಿ ಏನಿದೆ?: ಮೊಸರಿನಲ್ಲೂ ಕಲ್ಲು ಹುಡುಕುವ ಜಾಯಮಾನ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹೊಸತೇನಲ್ಲ. ಆದರೂ ಸೂಕ್ಷ್ಮ ವಿಚಾರಗಳಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಸ್ತಬ್ಧ ಚಿತ್ರದ ವಿಚಾರದಲ್ಲಿ ಕೇಂದ್ರ ಸರ್ಕಾರ ಸೂಕ್ತ ಮಾರ್ಗದರ್ಶಿ ಸೂತ್ರವನ್ನು ಕೇರಳ ಸರ್ಕಾರಕ್ಕೆ ಕಳುಹಿಸಿತ್ತು. ಈ ಶಿಷ್ಟಾಚಾರವನ್ನು ಉಲ್ಲಂಘಿಸಿದ ಕೇರಳ ಸರ್ಕಾರದ ರಾಜಕೀಯ ಕುತಂತ್ರದಿಂದ ಈಗ ವಿವಾದ ಸೃಷ್ಟಿಯಾಗಿದೆ. ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಕೊರೊನಾ ನೆಗೆಟಿವ್
ಸ್ತಬ್ಧ ಚಿತ್ರದ ವಿಚಾರದಲ್ಲಿ ಕೇಂದ್ರ ಸರ್ಕಾರ ಸೂಕ್ತ ಮಾರ್ಗದರ್ಶಿ ಸೂತ್ರವನ್ನು ಕೇರಳ ಸರ್ಕಾರಕ್ಕೆ ಕಳುಹಿಸಿತ್ತು.
ಈ ಶಿಷ್ಟಾಚಾರವನ್ನು ಉಲ್ಲಂಘಿಸಿದ ಕೇರಳ ಸರ್ಕಾರದ ರಾಜಕೀಯ ಕುತಂತ್ರದಿಂದ ಈಗ ವಿವಾದ ಸೃಷ್ಟಿಯಾಗಿದೆ.
ಮಾಜಿ ಮುಖ್ಯಮಂತ್ರಿಗಳಿಬ್ಬರು ಸತ್ಯದ ಪರವಾಗಿ ನಿಲ್ಲುವವರಾದರೆ ಈ ವಿಚಾರದಲ್ಲಿ ಮೋದಿಯವರನ್ನು ಬೆಂಬಲಿಸಬೇಕಲ್ಲವೇ?
ಮಾಜಿ ಮುಖ್ಯಮಂತ್ರಿಗಳಿಬ್ಬರು ಸತ್ಯದ ಪರವಾಗಿ ನಿಲ್ಲುವವರಾದರೆ ಈ ವಿಚಾರದಲ್ಲಿ ಮೋದಿಯವರನ್ನು ಬೆಂಬಲಿಸಬೇಕಲ್ಲವೇ? ಪ್ರಧಾನಿ ಮೋದಿ ಅವರು ನಾರಾಯಣ ಗುರುಗಳ ವಿಚಾರದಲ್ಲಿ ಅಪಾರ ಗೌರವ ಹೊಂದಿದ್ದಾರೆ. ಶ್ರೀಗಳ ಐಕ್ಯ ಸ್ಥಳಕ್ಕೂ ಭೇಟಿ ನೀಡಿದ್ದಾರೆ. ತಮ್ಮ ಭಾಷಣದಲ್ಲಿ ನಾರಾಯಣ ಗುರುಗಳ ಸಾಧನೆಯನ್ನು ಪ್ರಸ್ತಾಪಿಸಿದ್ದಾರೆ. ಈ ಮಹಾನ್ ದಾರ್ಶನಿಕನ ಬಗ್ಗೆ ಪ್ರಧಾನಿ ಹೊಂದಿರುವ ಗೌರವವನ್ನು ಪ್ರಶ್ನಿಸುವುದು ಸಿದ್ದರಾಮಯ್ಯ ಅವರಿಗೆ ಶೋಭೆ ತರದು ಎಂದು ಬಿಜೆಪಿ ಟ್ವೀಟ್ ಮಾಡಿದೆ. ಇದನ್ನೂ ಓದಿ: ಟ್ಯಾಬ್ಲೊ ವಿಚಾರದಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ – ಸಿಡಿದೆದ್ದ ರಾಜ್ಯಗಳು
ನವದೆಹಲಿ : ಗಣರಾಜೋತ್ಸವ ಪರೇಡ್ ನಲ್ಲಿ ಪ್ರದರ್ಶನಗೊಳ್ಳಲಿರುವ ಟ್ಯಾಬ್ಲೊ ವಿಚಾರವಾಗಿ ಈಗ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಂಘರ್ಷ ಏರ್ಪಟ್ಟಿದೆ. ಕೇಂದ್ರ ಸರ್ಕಾರದ ವಿರುದ್ಧ ಬಹಿರಂಗವಾಗೇ ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವೂ ಗಣರಾಜೋತ್ಸವ ಪರೇಡ್‌ನಲ್ಲಿ ಭಾಗಿಯಾಗಲು ರಾಜ್ಯಗಳು ತಮ್ಮ ಟ್ಯಾಬ್ಲೊ ವಿಷಯಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಟ್ಟಿವೆ. ನೇತಾಜಿ ಸುಭಾಷ್ ಚಂದ್ರ ಬೋಸ್‌ರವರ 125ನೇ ಜನ್ಮದಿನದ ಹಿನ್ನಲೆ ಪಶ್ಚಿಮ ಬಂಗಾಳ ಅವರ ಐಎನ್‌ಎ ವಿಷಯಾಧಾರಿತ ಟ್ಯಾಬ್ಲೊವನ್ನು, ಕೇರಳ ಸರ್ಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಷಯವನ್ನು ಅಂತಿಮಗೊಳಿಸಿ ಕೇಂದ್ರಕ್ಕೆ ಕಳುಹಿಸಿಕೊಟ್ಟಿತ್ತು.
ಮೊದಲ ಹಂತದಲ್ಲಿ ಆಯ್ಕೆಯಾಗಿದ್ದ ಈ ವಿಷಯಗಳಿಗೆ ಏಕಾಏಕಿ ತಡೆ ನೀಡಲಾಗಿದೆ. ಈ ಟ್ಯಾಬ್ಲೊಗಳ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ನಿರಾಕರಿಸಿದೆ. ತನ್ನ ನಿರ್ಧಾರದ ಹಿಂದಿನ ಕಾರಣವೇನು ಎನ್ನುವುದನ್ನು ಈವರೆಗೂ ಸ್ಪಷ್ಟಪಡಿಸಿಲ್ಲ. ಇದರಿಂದ ಕೇರಳ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಮಮತಾ, ಕೇಂದ್ರ ಸರ್ಕಾರದ ಈ ಮನೋಭಾವದಿಂದ ಬಂಗಾಳಿ ಜನರಿಗೆ ಅತೀವ ನೋವಾಗಿದೆ, ನೇತಾಜಿ ಅವರ ಟ್ಯಾಬ್ಲೋ ತಿರಸ್ಕರಿಸುವ ಮೂಲಕ ಕೇಂದ್ರ ಸರ್ಕಾರ ನೇತಾಜಿ ಅವರ ಹೋರಾಟವನ್ನು ಕಡೆಗಣಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಾನ್ಯ ಡಿಕೆಶಿ ಅವರೇ, ನಿಮ್ಮ ಆರೋಗ್ಯ ಹೇಗಿದೆ?: ಬಿಜೆಪಿ
ದಕ್ಷಿಣದ ರಾಜ್ಯಗಳಿಗೂ ಅನ್ಯಾಯ: ಈ ಬಾರಿ ಕೇಂದ್ರ ಸರ್ಕಾರ 12 ರಾಜ್ಯಗಳಿಗೆ ಮಾತ್ರ ಟ್ಯಾಬ್ಲೊ ಪ್ರದರ್ಶನಕ್ಕೆ ಅವಕಾಶ ನೀಡಿದೆ. ದಕ್ಷಿಣ ಭಾರತದಿಂದ ಕರ್ನಾಟಕ ಮಾತ್ರ ಟ್ಯಾಬ್ಲೊ ಪ್ರದರ್ಶನಕ್ಕೆ ಆಯ್ಕೆಯಾಗಿದೆ. ಮಹಾರಾಷ್ಟ್ರ, ತಮಿಳುನಾಡು, ಗೋವಾ, ಆಂಧ್ರಪ್ರದೇಶ ಕೂಡಾ ತಮ್ಮ ವಿಷಯಗಳ ಪ್ರಸ್ತಾಪವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದವು, ಆದರೆ ಈ ನಾಲ್ಕು ರಾಜ್ಯಗಳ ಪ್ರಸ್ತಾಪವನ್ನು ಕೇಂದ್ರ ತಿರಸ್ಕರಿಸಿದೆ. ಮಾಹಿತಿಗಳ ಪ್ರಕಾರ ಈ ಬಾರಿ ತೆಲಂಗಾಣ ಯಾವುದೇ ಪ್ರಸ್ತಾಪ ಕಳುಹಿಸಿಲ್ಲ.
ತಮ್ಮ ಟ್ಯಾಬ್ಲೊ ವಿಷಯಗಳನ್ನು ನಿರಾಕರಿಸಿರುವುದಕ್ಕೆ ದಕ್ಷಿಣದಲ್ಲಿ ಕೇರಳ ಹೊರತುಪಡಿಸಿ ಮಹಾರಾಷ್ಟ್ರ, ತಮಿಳುನಾಡು, ಗೋವಾ, ಆಂಧ್ರಪ್ರದೇಶ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ. ಆದರೆ ಕರ್ನಾಟಕ ಹೊರತುಪಡಿಸಿ ದಕ್ಷಿಣ ಭಾರತದ ಪ್ರಮುಖ ರಾಜ್ಯಗಳನ್ನು ಟ್ಯಾಬ್ಲೊ ಪ್ರದರ್ಶನದಿಂದ ಏಕಕಾಲದಲ್ಲಿ ಕೈಬಿಟ್ಟಿರುವುದಕ್ಕೆ ಜನ ಸಾಮಾನ್ಯರಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಕೇಂದ್ರ ಸರ್ಕಾರದ ನಡೆಯಿಂದ ಈ ಬಾರಿ ಗಣರಾಜೋತ್ಸವ ಪರೇಡ್ ನಲ್ಲಿ ದಕ್ಷಿಣ ಭಾರತದ ಅನುಪಸ್ಥಿತಿ ದೊಡ್ಡ ಪ್ರಮಾಣದಲ್ಲಿ ಕಾಣಲಿದೆ ಎಂದು ಸಮಾಜಿಕ ಜಾಲತಾಣಗಳಲ್ಲಿ ಜನರು ಬೇಸರ ವ್ಯಕ್ತಪಡಿಸಿದ್ದಾರೆ.
ಕಾರಣ ನೀಡದ ಕೇಂದ್ರ: ಇನ್ನು ರಾಜ್ಯಗಳು ನೀಡಿದ ಟ್ಯಾಬ್ಲೊಗಳ ವಿಷಯಗಳನ್ನು ಯಾಕೆ ನಿರಾಕರಿಸಿದೆ ಎಂದು ಈವರೆಗೂ ಕೇಂದ್ರ ಸರ್ಕಾರ ಎಲ್ಲೂ ಹೇಳಿಲ್ಲ. ನಿಯಮಗಳ ಪ್ರಕಾರ ರಾಜ್ಯಗಳು ಮೂರು ವಿಷಯಗಳನ್ನು ಕೇಂದ್ರದ ಆಯ್ಕೆ ಸಮಿತಿಗೆ ಕಳುಹಿಸಿಕೊಡಲಾಗಿರುತ್ತದೆ. ಅಲ್ಲದೇ ಆ ವಿಷಯದ ಮಹತ್ವವನ್ನು ವಿವರಿಸಲಾಗಿರುತ್ತದೆ. ಒಂದು ವೇಳೆ ರಾಜ್ಯದ ಮೊದಲ ಆದ್ಯತೆಯ ವಿಷಯ ಕೇಂದ್ರದ ತಕರಾರುಗಳಿದ್ದಲ್ಲಿ ಎರಡು ಅಥಾವ ಮೂರನೇ ವಿಷಯವನ್ನು ಆಯ್ಕೆ ಮಾಡುವ ಅವಕಾಶಗಳಿರುತ್ತದೆ. ಇದನ್ನೂ ಓದಿ: ಒಬಿಸಿ ನಾಯಕರಿಂದ ಬಿಜೆಪಿಗೆ ರಾಜೀನಾಮೆ – ದಲಿತರ ಮನೆಯಲ್ಲಿ ಊಟ ಮಾಡಿದ ಯೋಗಿ
ಆದರೆ ಕೇಂದ್ರ ಸರ್ಕಾರ ಮಾತ್ರ ಈ ನಿಯಮ ಪಾಲಿಸದೇ ಏಕಾಏಕಿ ಕರ್ನಾಟಕ ಹೊರತುಪಡಿಸಿ ದಕ್ಷಿಣ ಭಾರತದ ಎಲ್ಲ ರಾಜ್ಯಗಳ ಟ್ಯಾಬ್ಲೊಗಳ ವಿಷಯಗಳನ್ನು ನಿರಾಕರಿಸಿದೆ. ರಾಜ್ಯಗಳ ವಿಷಯಗಳನ್ನು ನಿರಾಕರಿಸಿದ್ದೇಕೆ? ಇದರ ಹಿಂದಿನ ಕಾರಣ ಏನು ಈವರೆಗೂ ತಿಳಿದು ಬಂದಿಲ್ಲ ಮತ್ತು ಕೇಂದ್ರ ಸರ್ಕಾರವೂ ಈವರೆಗೂ ಯಾವುದೇ ಸ್ಪಷ್ಟನೆ ನೀಡಿಲ್ಲ. ಇದನ್ನೂ ಓದಿ: ಪಕ್ಷದಿಂದ ಸಚಿವನ ಉಚ್ಛಾಟಿಸಿದ ಬಿಜೆಪಿ – ಮತ್ತೆ ‘ಕೈ’ ಹಿಡೀತಾರಾ ಹರಕ್ ಸಿಂಗ್ ರಾವತ್?
ದಕ್ಷಿಣ ಭಾರತ ಪ್ರತಿನಿಧಿಸಲಿರುವ ಕರ್ನಾಟಕ: ದಕ್ಷಿಣ ಭಾರತದಿಂದ ಕರ್ನಾಟಕ ಏಕೈಕ ಟ್ಯಾಬ್ಲೊ ಆಯ್ಕೆಯಾಗಿದ್ದು ರಾಜಪಥ್ ನಲ್ಲಿ ಇಡೀ ದಕ್ಷಿಣ ಭಾರತವನ್ನು ಕರ್ನಾಟಕ ಪ್ರತಿನಿಧಿಸಲಿದೆ. ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ವಿಷಯ ಆಧಾರಿತ ಟ್ಯಾಬ್ಲೊ ಕರ್ನಾಟಕದಿಂದ ಆಯ್ಕೆಯಾಗಿದೆ. ಸತತವಾಗಿ 13 ನೇ ಬಾರಿ ಟ್ಯಾಬ್ಲೊ ಪ್ರದರ್ಶನಕ್ಕೆ ಅವಕಾಶ ಸಿಕ್ಕಿದೆ.
ಬೆಂಗಳೂರು: ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಗರಾದ್ಯಂತ ಇಂದು ಬೆಳಗಿನ ಜಾವ ರೌಡಿಶೀಟರ್ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ವೈಟ್‍ಫೀಲ್ಡ್ ವಿಭಾಗದಲ್ಲಿ ಡಿಸಿಪಿ ದೇವರಾಜ್ ನೇತೃತ್ವದಲ್ಲಿ 116 ರೌಡಿಗಳ ಮನೆ ಮೇಲೆ ದಾಳಿ ನಡೆಸಲಾಗಿದೆ.
ದಾಳಿ ವೇಳೆ 82 ರೌಡಿಗಳನ್ನು ವಶಕ್ಕೆ ಪಡೆಯಲಾಗಿದ್ದು, 15 ರೌಡಿಗಳ ವಿರುದ್ಧ ಸಿಆರ್‍ಪಿಸಿ ಸೆಕ್ಷನ್ 110 ರ ಅಡಿ ಪ್ರಕರಣ ದಾಖಲಿಸಲಾಗಿದೆ. ದಾಳಿ ವೇಳೆ ಸುಮಾರು ಎರಡೂವರೆ ಕೆಜಿ ಗಾಂಜಾ ಜಪ್ತಿ ಮಾಡಲಾಗಿದ್ದು, ಮೂವರು ರೌಡಿಗಳ ವಿರುದ್ಧ ಎನ್‍ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ. ಮಹದೇವಪುರ ಠಾಣಾ ಇಬ್ಬರು ರೌಡಿಗಳ ಮನೆಯಲ್ಲಿ ಪರಿಶೀಲನೆ ವೇಳೆ ಮಾರಕಾಸ್ತ್ರಗಳು ಪತ್ತೆಯಾಗಿದ್ದು, ಶಸ್ತಾಸ್ತ್ರ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
ಪ್ರಮುಖ ರೌಡಿಶೀಟರ್‍ಗಳಾದ ಮಾರತಳ್ಳಿ ಪೊಲೀಸ್ ಠಾಣೆಯ ರೌಡಿ ರೋಹಿತ್, ಕೆಆರ್ ಪುರಂ ಗಿರಿ ಅಲಿಯಾಸ್ ಗುಬ್ಬಚ್ಚಿ, ಬೆಳ್ಳಂದೂರು ಬೋಗನಹಳ್ಳಿ ಕೀರ್ತಿ, ಮಾರತ್ತಹಳ್ಳಿ ಸೋಮು ಸೇರಿದಂತೆ ಪ್ರಮುಖ ರೌಡಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಿಕ ಎಲ್ಲಾ ರೌಡಿಗಳನ್ನು ವೈಟ್‍ಫೀಲ್ಡ್ ಡಿಸಿಪಿ ಕಚೇರಿಗೆ ಪೆರೇಡ್ ಮಾಡಿಸಿ ಕೆಲವರ ಮೇಲೆ ಪ್ರಕರಣ ದಾಖಲು ಮಾಡಿ ಉಳಿದವರನ್ನು ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ. ಇದನ್ನೂ ಓದಿ: ನಂದಿಗಿರಿಧಾಮದಲ್ಲಿ ಪ್ರೇಮಿಗಳಿಂದ ಚುಂಬನ – ಕೊರೊನಾ ರೂಲ್ಸ್ ಬ್ರೇಕ್
ಕಾರ್ಯಚರಣೆಯಲ್ಲಿ ಎಸಿಪಿ ಮನೋಜ್ ಕುಮಾರ್ ಸೇರಿದಂತೆ ವೈಟ್‍ಫೀಲ್ಡ್ ಡಿವಿಜನ್‍ನ ಎಲ್ಲಾ ಪೊಲೀಸ್ ಠಾಣೆಗಳ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಗಳು ಪಾಲ್ಗೊಂಡಿದ್ದರು.
ಶಿವಮೊಗ್ಗ: ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ಇಂದು ವಿವಿಧ ಠಾಣೆಗಳಲ್ಲಿ ಗಾಂಜಾ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳ ಪರೇಡ್ ನಡೆಸಲಾಯಿತು.
ಪರೇಡ್ ನಲ್ಲಿ ಸುಮಾರು 89 ಆರೋಪಿಗಳು ಭಾಗವಹಿಸಿದ್ದರು. ಈ ಎಲ್ಲಾ ಆರೋಪಿಗಳು ನ್ಯಾಯಾಲಯದಿಂದ ಜಾಮೀನು ಪಡೆದು ಹೊರಗಡೆ ಇದ್ದಾರೆ. ಇನ್ನಾದರೂ ಇವರು ಸನ್ನಡತೆಯನ್ನು ಸರಿಪಡಿಸಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಮತ್ತೆ ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ಪರೇಡ್ ನಲ್ಲಿ ಆರೋಪಿಗಳಿಗೆ ಎಸ್ ಪಿ ಶಾಂತರಾಜ್ ಖಡಕ್ ಎಚ್ಚರಿಕೆ ನೀಡಿದರು.
ಜಾಮೀನಿನ ಮೇಲೆ ಹೊರಗೆ ಬಂದವರು ಉದ್ದಿಮೆ ಮಾಡುತ್ತಿರುವುದಾಗಿ ಹೇಳುತ್ತಿದ್ದಾರೆ. ನಿಮ್ಮ ಆರ್ಥಿಕ ಆದಾಯಕ್ಕೂ, ನಿಮ್ಮ ಜೀವನ ಶೈಲಿಗೂ ಮ್ಯಾಚ್ ಆಗಬೇಕು. ಒಂದು ವೇಳೆ ಮ್ಯಾಚ್ ಆಗದಿದ್ದರೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು. ನಿಮ್ಮ ಆದಾಯದ ಕುರಿತು ನಿಮ್ಮ ಠಾಣಾ ವ್ಯಾಪ್ತಿಯಲ್ಲಿ ತಿಳಿಸಬೇಕು ಎಂದು ಸೂಚಿಸಿದರು.
ನಿಮ್ಮ ಮನೆಗಳಿಗೆ ಬಂದು ತಪಾಸಣೆ ಮಾಡಲಾಗುವುದು. ನಿಮ್ಮ ಮನೆಯಲ್ಲಿ ಗಾಂಜಾ ಇಡದಿದ್ದರೂ ಬೇರೆಡೆ ಇಟ್ಟಿರುವುದು ತಿಳಿದು ಬಂದರೆ ಅದಕ್ಕೆ ನೀವು ನೇರ ಹೊಣೆಯಾಗಲಿದ್ದೀರಿ ವಾರ್ನಿಂಗ್ ನೀಡಿದರು.
ಇಂದು ಗಾಂಜಾ ಆರೋಪಿಗಳನ್ನು ಕರೆಯಿಸಿರುವ ಉದ್ದೇಶ ನಿಮ್ಮ ನಡೆತೆಯನ್ನು ತಿದ್ದಿಕೊಂಡು ಪ್ರಕರಣಗಳಿಂದ ದೂರ ಇರಬೇಕು. ಸನ್ನಡತೆ ಸರಿಪಡಿಸಿ ಕೊಳ್ಳದಿದ್ದರೆ ಜಾಮೀನು ರದ್ದು ಮಾಡಲು ನ್ಯಾಯಾಲಯಕ್ಕೆ ಮನವಿ ಮಾಡಿಕೊಳ್ಳಲಾಗುವುದು. ನಮ್ಮ ಬಳಿ ವ್ಯಾಪಾರ ಮಾಡುತ್ತಿದ್ದೇನೆ ಎಂದು ಪೋಸ್ ನೀಡಿ ಗಾಂಜಾ ಮಾರಾಟ ಸಾಗಾಣಿಕೆಯಲ್ಲಿ ತೊಡಗಿದರೆ ಮುಂದೆ ಕಷ್ಟ ಅನುಭವಿಸುತ್ತೀರಿ ಎಂದು ಎಚ್ಚರಿಸಿದರು.
ನವದೆಹಲಿ: ಪ್ರತಿ ವರ್ಷ ದೆಹಲಿಯ ರಾಜಪಥದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದ ಗಣರಾಜ್ಯೋತ್ಸವ ಪರೇಡ್ ಕಾರ್ಯಕ್ರಮಕ್ಕೆ ಈ ಬಾರಿ ಕೊರೊನಾ ಅಡ್ಡಿಯಾಗಿದೆ. ಕೊರೊನಾ ಮುನ್ನೆಚ್ಚರಿಕೆ ಕ್ರಮವಾಗಿ ಈ ಬಾರಿಯ ಗಣರಾಜ್ಯೋತ್ಸವ ಪರೇಡ್ ಕಾರ್ಯಕ್ರಮದಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ.
ಪ್ರತಿ ಬಾರಿ ವಿಜಯ್ ಚೌಕದಿಂದ ಆರಂಭವಾಗಿ ಕೆಂಪುಕೋಟೆಯವರೆಗೂ ನಡೆಯುತ್ತಿದ್ದ ಪರೇಡ್ ಈ ಬಾರಿ ನ್ಯಾಷನಲ್ ಸ್ಟೇಡಿಯಂವರೆಗೂ ಮಾತ್ರ ತಲುಪಲಿದೆ. ಪ್ರತಿ ವರ್ಷ 8.2 ಕಿಮೀವರೆಗೂ ಸಾಗುತ್ತಿದ್ದ ಪರೇಡ್ ಈ ಬಾರಿ 3.3 ಕಿಮೀವರೆಗೂ ಸಾಗಲಿದೆ.
ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ರಾಜಪಥದಲ್ಲಿ 1,15,000 ಲಕ್ಷ ಜನರಿಗೆ ಪರೇಡ್ ವೀಕ್ಷಿಸಲು ಅವಕಾಶ ಕಲ್ಪಿಸಿಕೊಡಲಾಗುತ್ತಿತ್ತು. ಆದರೆ ಕೊರೊನಾ ನಿಯಂತ್ರಿಸುವ ಸಲುವಾಗಿ ಕೇವಲ 25,000 ಜನರಿಗೆ ಮಾತ್ರ ಆಸನ ವ್ಯವಸ್ಥೆ ಮಾಡಲಾಗಿದ್ದು, ಪರೇಡ್ ವೀಕ್ಷಣೆಗೆ ಅನುಮತಿ ನೀಡಲಾಗಿದೆ. 15 ವರ್ಷಕ್ಕಿಂತ ಕಡಿಮೆ ಇರುವ ಮಕ್ಕಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ದೈಹಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ಗಣರಾಜ್ಯೋತ್ಸವ ಕಾರ್ಯಕ್ರಮ ಇತಿಹಾಸದಲ್ಲಿಯೇ ಪರೇಡ್ ತಂಡದಲ್ಲಿದ್ದ 144 ಜನರನ್ನು ಇದೀಗ 96 ಜನಕ್ಕೆ ಕಡಿತಗೊಳಿಸಲಾಗಿದೆ. ಜೊತೆಗೆ ಸಾಂಸ್ಕøತಿಕ ಕಾರ್ಯಕ್ರಗಳನ್ನು ಕೂಡ ಕಡಿಮೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ ಪರೇಡ್ ನಡೆಸುವ ಎಲ್ಲಾ ತಂಡಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗಿದೆ.
ಈ ಬಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆಗಮಿಸಲಿದ್ದಾರೆ. ಈಗಾಗಲೆ ಬ್ರಿಟನ್‍ನಲ್ಲಿ ಕೊರೊನಾ ವೈರಸ್ ಹೆಚ್ಚಿದರೂ ಕೂಡ ಬ್ರಿಟನ್ ಪ್ರಧಾನಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಖಚಿತ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಕಳೆದ ವಾರ ತಿಳಿಸಿದೆ.
ಉಡುಪಿ: ಆಗಸ್ಟ್ 15ರ ಸ್ವಾತಂತ್ರ್ಯೋತ್ಸವಕ್ಕೆ ಕೇಂದ್ರದಿಂದ ಕಟ್ಟುನಿಟ್ಟಿನ ಆದೇಶ ಬಂದಿದೆ. ಕೊರೊನಾ ನಡುವೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಉಡುಪಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನದಂದು ಕಮಾಂಡರ್ಸ್ ಇರುತ್ತಾರೆ. ಆದರೆ ಪರೇಡ್ ಇರುವುದಿಲ್ಲ. ತಂಡ ತಂಡಗಳು ಬಂದು ಸೆಲ್ಯೂಟ್ ಮಾಡ ಇರುವುದಿಲ್ಲ. ಕೇಂದ್ರದ ನಿಯಮಾವಳಿ ಪ್ರಕಾರ ಹಬ್ಬ ಆಚರಣೆ ನಡೆಸಬೇಕು. ಎಲ್ಲರೆದುರಲ್ಲೇ ಧ್ವಜಾರೋಹಣ ಮಾಡಲಾಗುತ್ತದೆ. ಆದರೆ ಮೈದಾನಗಳಿಗೆ ಸಾರ್ವಜನಿಕರಿಗೆ ಪ್ರವೇಶ ಇಲ್ಲ ಎಂದರು.
ಸ್ವಾತಂತ್ರ್ಯೋತ್ಸವ ವೀಕ್ಷಣೆಗೆ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗುತ್ತದೆ. ಆಯಾಯ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಮಳೆ ಕೂಡ ಇರುವುದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸುವುದು ಕಷ್ಟ. ರಾಷ್ಟ್ರೀಯ ಆಚರಣೆಗೆ ಯಾವುದೇ ಕೊರತೆಯಾಗದಂತೆ ಗೌರವದ ಸ್ವಾತಂತ್ರ್ಯೋತ್ಸವ ನಡೆಸಲಾಗುವುದು ಎಂದು ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.