Tag: ಪಲ್ಟಿ

  • ಶವಸಂಸ್ಕಾರಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ – ಇಬ್ಬರು ಸಾವು, 26 ಮಂದಿಗೆ ಗಾಯ

    ಶವಸಂಸ್ಕಾರಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ – ಇಬ್ಬರು ಸಾವು, 26 ಮಂದಿಗೆ ಗಾಯ

    ರಾಯಚೂರು: ಶವ ಸಂಸ್ಕಾರಕ್ಕೆಂದು ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮೃತಪಟ್ಟು 26 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸಿಂಧನೂರಿನ ಕನ್ನಾರಿ ಬಳಿ ನಡೆದಿದೆ.

    ಲಕ್ಕಮ್ಮ ವಿರೂಪಾಪುರ (65) ಹಾಗೂ ಬಸವರಾಜ ಸುಕಾಲಪೇಟೆ (60) ಮೃತ ದುರ್ದೈವಿಗಳು. ಮೃತರನ್ನೊಳಗೊಂಡಂತೆ 30 ಜನರ ತಂಡ ಶವ ಸಂಸ್ಕಾರಕ್ಕೆಂದು ವಿರೂಪಾಪುರದಿಂದ ದಢೇಸೂಗುರಿಗೆ ಟ್ರ್ಯಾಕ್ಟರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಸಿಂಧನೂರಿನ ಕನ್ನಾರಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದಿದೆ.

    ಪಲ್ಟಿಯ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, 26 ಮಂದಿ ಗಾಯಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಸಿಂಧನೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೆಲ್ಸಕ್ಕಾಗಿ ಹೋಗುತ್ತಿದ್ದ 50ಕ್ಕೂ ಸಿಬ್ಬಂದಿಯಿದ್ದ ಬಸ್ ಪಲ್ಟಿ!

    ಕೆಲ್ಸಕ್ಕಾಗಿ ಹೋಗುತ್ತಿದ್ದ 50ಕ್ಕೂ ಸಿಬ್ಬಂದಿಯಿದ್ದ ಬಸ್ ಪಲ್ಟಿ!

    ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಕುಡತಿನಿ ಬಳಿ ನಡೆದಿದೆ.

    ಜಿಂದಾಲ್ ಕಾರ್ಖಾನೆಯ ಬಸ್ಸು ಕೆಲಸಕ್ಕಾಗಿ ಸಿಬ್ಬಂದಿಯನ್ನು ಜನರಲ್ ಶಿಫ್ಟ್ ಗಾಗಿ ಕರೆದುಕೊಂಡು ಹೋಗುತ್ತಿದ್ದಾಗ ಇಂದು ಮುಂಜಾನೆ ಪಲ್ಟಿಯಾಗಿದೆ. ಬಸ್ಸಿನಲ್ಲಿ ಸುಮಾರು 50 ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

    ಸಿಬ್ಬಂದಿಯನ್ನು ಕಾರ್ಖಾನೆಗೆ ಕರೆದುಕೊಂಡು ಹೋಗುವಾಗ ಸಂಡೂರು ತಾಲೂಕಿನ ಕುಡತಿನಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿನ ಡಿವೈಡರ್ ಡಿಕ್ಕಿ ಹೊಡೆದು ಬಳಿಕ ಬಸ್ ಪಲ್ಟಿಯಾಗಿದೆ. ಪರಿಣಾಮ ಬಸ್‍ನಲ್ಲಿದ್ದ ಮೂವರಿಗೆ ಗಂಭೀರವಾಗಿ ಗಾಯವಾಗಿದೆ. ಗಾಯಾಳುಗಳನ್ನು ಸಮೀಪದ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

    ಬಸ್ ಪಲ್ಟಿಯಾದ ಕೂಡಲೇ ಎರ್ಮಜೆನ್ಸಿ ಡೋರ್ ಮೂಲಕ ಜನರನ್ನು ರಕ್ಷಣೆ ಮಾಡಲಾಗಿದೆ. ಸುಮಾರು 50 ಜನರ ರಕ್ಷಣೆ ಮಾಡಲಾಗಿದ್ದು, ಸದ್ಯಕ್ಕೆ ಈ ಅವಘಡದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕನು ನಿದ್ದೆಯ ಮಂಪರಿನಲ್ಲಿದ್ದು, ಆತನ ಅಜಾಗರುಕತೆಯಿಂದ ಬಸ್ ಪಲ್ಟಿಯಾಗಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ.

    ಈ ಕುರಿತು ಮಾಹಿತಿ ತಿಳಿದು ಸ್ಥಳಕ್ಕೆ ಕುಡತಿನಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಬಸ್ ಪಲ್ಟಿ- ಮಾನವೀಯತೆ ಮೆರೆದ್ರು ಮೃತ ವಿದ್ಯಾರ್ಥಿನಿಯ ಪೋಷಕರು

    ಬಸ್ ಪಲ್ಟಿ- ಮಾನವೀಯತೆ ಮೆರೆದ್ರು ಮೃತ ವಿದ್ಯಾರ್ಥಿನಿಯ ಪೋಷಕರು

    ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಶಾಲಾ ಬಸ್ ಪಲ್ಟಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿನಿಯ ಪೋಷಕರು ತಮ್ಮ ಮಗಳ ಅಂಗಾಗ ದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ದಿಯಾ(16) ಅಪಘಾತದಲ್ಲಿ ಮೃತಪಟ್ಟಿದ್ದ ವಿದ್ಯಾರ್ಥಿನಿ. ದಿಯಾ ತಂದೆ ರಾಜೇಂದ್ರ ಸಿಂಗ್ ಶೇರಾವತ್ ನಿವೃತ್ತ ಕರ್ನಲ್ ಆಗಿದ್ದು, ಸದ್ಯ ಅವರು ತಮ್ಮ ಮಗಳ ಕಣ್ಣನ್ನು ಮಗಳ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಗೆ ದಾನ ಮಾಡಿದ್ದಾರೆ.

    ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ವಿದ್ಯಾರ್ಥಿನಿ ಮೃತಪಟ್ಟಿದ್ದಳು. 20ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯವಾಗಿತ್ತು. ಬಸ್ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪೂರ್ಣಪ್ರಜ್ಞಾ ಶಾಲೆಗೆ ಸೇರಿದ್ದು, ಶಾಲಾ ಪ್ರವಾಸ ಹಿನ್ನೆಲೆ ಬೆಳಗಿನ ಜಾವ ಶೃಂಗೇರಿಗೆ ಕಡೆ ಆಗಮಿಸುತ್ತಿತ್ತು. ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಸೌತಿಕೆರೆ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಗಾಯಾಳು ವಿದ್ಯಾರ್ಥಿಗಳನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

    ಈ ಬಗ್ಗೆ ಎನ್.ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಶಾಲಾ ಬಸ್ ಪಲ್ಟಿ- ಹೈಸ್ಕೂಲ್ ವಿದ್ಯಾರ್ಥಿನಿ ದುರ್ಮರಣ

    ಶಾಲಾ ಬಸ್ ಪಲ್ಟಿ- ಹೈಸ್ಕೂಲ್ ವಿದ್ಯಾರ್ಥಿನಿ ದುರ್ಮರಣ

    ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿಯಾಗಿ ಹೈಸ್ಕೂಲ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಸೌತಿಕೆರೆ ಬಳಿ ನಡೆದಿದೆ.

    ದಿಯಾ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿನಿ. ದಿಯಾ 10ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ಪಲ್ಟಿಯಾದ ಬಸ್ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಪೂರ್ಣಪ್ರಜ್ಞಾ ಶಾಲೆಗೆ ಸೇರಿದ್ದು ಎಂದು ತಿಳಿದುಬಂದಿದೆ.

    ವಿದ್ಯಾರ್ಥಿಗಳು ಪ್ರವಾಸದ ಹಿನ್ನೆಲೆ ಶೃಂಗೇರಿಗೆ ಆಗಮಿಸಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಾಳು ವಿದ್ಯಾರ್ಥಿಗಳನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಸದ್ಯ ಈ ಬಗ್ಗೆ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಫ್ಲೈಓವರ್ ನಲ್ಲಿ ಕಂಟೇನರ್ ಪಲ್ಟಿ – ಕೂದಲೆಳೆ ಅಂತರದಲ್ಲಿ ಪಾರಾದ ಕಾರು ಪ್ರಯಾಣಿಕರು!

    ಫ್ಲೈಓವರ್ ನಲ್ಲಿ ಕಂಟೇನರ್ ಪಲ್ಟಿ – ಕೂದಲೆಳೆ ಅಂತರದಲ್ಲಿ ಪಾರಾದ ಕಾರು ಪ್ರಯಾಣಿಕರು!

    ಬೆಂಗಳೂರು: ವೇಗವಾಗಿ ಚಲಿಸುತ್ತಿದ್ದ ಕಂಟೇನರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಈ ವೇಳೆ ಪಕ್ಕದಲ್ಲೇ ಚಲಿಸುತ್ತಿದ್ದ ಕಾರಿನ ಪ್ರಯಾಣಿಕರು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ.

    ಯಶವಂತಪುರ ಫ್ಲೈ ಓವರ್ ಮೇಲೆ ಮಧ್ಯಾಹ್ನ 2.20ರ ವೇಳೆಗೆ ಈ ಘಟನೆ ನಡೆದಿದ್ದು, ಮಲ್ಲೇಶ್ವರಂ ಕಡೆಯಿಂದ ವೇಗವಾಗಿ ಬರುತ್ತಿದ್ದ ಕಂಟೈನರ್ ವೇಗವಾಗಿ ಬಂದು ನಿಯಂತ್ರಣ ತಪ್ಪಿ ನಡುರಸ್ತೆಯಲ್ಲೇ ಉರುಳಿ ಬಿದ್ದಿದೆ. ಈ ವೇಳೆ ಇನ್ನೋವಾ ಕಾರೊಂದು ಕಂಟೇನರ್ ಪಕ್ಕದಲ್ಲೇ ಚಲಿಸುತ್ತಿತ್ತು. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಆಪಾಯದಿಂದ ಪಾರಾಗಿದ್ದಾರೆ.

    ಯಶವಂತಪುರ ಫ್ಲೈಓವರ್ ಮೇಲೆ ಸಣ್ಣ ತಿರುವು ಇದ್ದು ಮಲ್ಲೇಶ್ವರಂ ಕಡೆಯಿಂದ ಬರುವಾಗ ಎಡಗಡೆಗೆ ತಿರುಗಬೇಕಾಗುತ್ತದೆ. ಆದರೆ ಚಾಲಕ ತಿರುವು ಗಮನಿಸದ ಕಾರಣ ವೇಗವಾಗಿ ಬಂದು ನಿಯಂತ್ರಣಕ್ಕೆ ಸಿಗದೇ ಕಂಟೇನರ್ ಪಲ್ಟಿಯಾಗಿದೆ.

    ಘಟನೆಯಲ್ಲಿ ಕಂಟೇನರ್ ಚಾಲಕನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾರಿನ ಹಿಂಭಾಗಕ್ಕೆ ಮಾತ್ರ ಹಾನಿಯಾಗಿದೆ. ಕಾರಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಸಾವಿನ ದವಡೆಯಿಂದ ಪಾರಾಗಿದ್ದಾರೆ. ಕಂಟೇನರ್ ಪಲ್ಟಿಯಾದ ಪರಿಣಾಮ ಮೇಲ್ಸೇತುವೆ ಮೇಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು ಯಶವಂತಪುರ ಪೊಲೀಸರು ಸ್ಥಳಕ್ಕೆ ಆಗಮಿಸಿ ಕಂಟೇನರ್ ವಾಹನ ತೆರವುಗೊಳಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ-ತಪ್ಪಿತು ಭಾರೀ ದುರಂತ

    ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ-ತಪ್ಪಿತು ಭಾರೀ ದುರಂತ

    ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾದ ಘಟನೆ ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದ ಬಳಿ ನಡೆದಿದೆ.

    ಇಂದು ಬೆಳಗ್ಗೆ ಬೆಂಗಳೂರಿನಿಂದ ಬೈಲಹೊಂಗಲಗೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿದ್ದು, ಪರಿಣಾಮವಾಗಿ 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, ಕೂದಲೆಳೆಯ ಅಂತರದಲ್ಲಿ ಆಗಬಹುದಾದ ಬಹುದೊಡ್ಡ ದುರಂತ ತಪ್ಪಿದೆ. ಪ್ಟಲಿಯಾದ ರಭಸಕ್ಕೆ ಬಸ್ಸಿನ ಒಂದು ಭಾಗ ಸಂಪೂರ್ಣ ಹಾನಿಯಾಗಿದ್ದು, ನಡುರಸ್ತೆಯಲ್ಲಿಯೇ ಉರುಳಿಬಿದ್ದ ಪರಿಣಾಮ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

    ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರನ್ನ ಹುಬ್ಬಳ್ಳಿಯ ಕಿಮ್ಸ್‍ಗೆ ದಾಖಲಿಸಲಾಗಿದ್ದು, ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದಿರುವ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಪ್ರಪಾತಕ್ಕೆ ಉರುಳಿದ ಬಸ್ – ಇಬ್ಬರ ಸಾವು, 39ಕ್ಕೂ ಹೆಚ್ಚು ಮಂದಿಗೆ ಗಾಯ

    ಪ್ರಪಾತಕ್ಕೆ ಉರುಳಿದ ಬಸ್ – ಇಬ್ಬರ ಸಾವು, 39ಕ್ಕೂ ಹೆಚ್ಚು ಮಂದಿಗೆ ಗಾಯ

    ಚಾಮರಾಜನಗರ: ಪ್ರಪಾತಕ್ಕೆ ಬಸ್ ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದು, 39ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ತಮಿಳುನಾಡಿನ ದಿಂಬಮ್ ಘಾಟ್ ಬಳಿ ಜರುಗಿದೆ.

    ಶುಕ್ರವಾರ ಸಂಜೆ ಖಾಸಗಿ ಬಸ್ ಮೈಸೂರಿನಿಂದ ತಮಿಳುನಾಡಿಗೆ ಹೋಗುತ್ತಿತ್ತು. ಈ ವೇಳೆ ಬಸ್ ದಿಂಬಮ್ ಘಾಟ್ ನ 26ನೇ ತಿರುವಿನಲ್ಲಿ ಆಯತಪ್ಪಿ ಪ್ರಪಾತಕ್ಕೆ ಬಿದ್ದಿದೆ. ಇದರಿಂದ ಮುತ್ತು ಮತ್ತು ಗುರುಸ್ವಾಮಿ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಈ ಘಟನೆಯಲ್ಲಿ 39ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಗಾಯಾಳುಗಳಿಗೆ ತಮಿಳುನಾಡಿನ ಸತ್ಯಮಂಗಲದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಸತ್ಯಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶಿರಾಡಿ ಸಂಚಾರಕ್ಕೆ ಮತ್ತೊಂದು ಅಡ್ಡಿ- ದೊಡ್ಡತಪ್ಲು ಬಳಿ ಅನಿಲ ಟ್ಯಾಂಕರ್ ಪಲ್ಟಿ

    ಶಿರಾಡಿ ಸಂಚಾರಕ್ಕೆ ಮತ್ತೊಂದು ಅಡ್ಡಿ- ದೊಡ್ಡತಪ್ಲು ಬಳಿ ಅನಿಲ ಟ್ಯಾಂಕರ್ ಪಲ್ಟಿ

    -ಟ್ಯಾಂಕರ್ ಪಲ್ಟಿ ನೋಡಲು ಹೋದ ವ್ಯಕ್ತಿ ಅಪಘಾತದಲ್ಲಿ ದುರ್ಮರಣ

    ಹಾಸನ: ಶಿರಾಡಿ ಸಂಚಾರಕ್ಕೆ ಮತ್ತೊಂದು ಅಡ್ಡಿಯಾಗಿದ್ದು, ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಅನಿಲ ಟ್ಯಾಂಕರ್ ಪಲ್ಟಿಯಾಗಿದೆ. ಟ್ಯಾಂಕರ್ ಪಲ್ಟಿ ನೋಡಲು ಹೋದ ವ್ಯಕ್ತಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

    ಗುಡ್ಡ ಕುಸಿತದಿಂದ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಗಿದೆ. ಅನಿಲ ಸೋರಿಕೆಯಿಂದ ವಾಹನ ಸಂಚಾರಕ್ಕೆ ಮತ್ತೆ ಅಡಚಣೆಯಾಗಿದೆ. ಅಲ್ಲದೇ ಶಿರಾಢಿಘಾಟ್ ಮಾರ್ಗದ ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಮಂಗಳೂರು ಕಡೆಯಿಂದ ಬಂದ ವಾಹನ ಸವಾರರಿಗೆ ರಾತ್ರಿಯಿಡೀ ಜಾಗರಣೆ ಮಾಡಬೇಕಾದ ಪರಿಸ್ಥಿತಿ ಬಂದಿತ್ತು.

    ಸದ್ಯ ಸಕಲೇಶಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಲ್ಲದೇ ಟ್ಯಾಂಕರ್ ಪಲ್ಟಿ ನೋಡಲು ಹೋದ ವ್ಯಕ್ತಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮಂಗಳೂರು ಮೂಲದ ರಾಮದೇವ್ ಮೃತ ವ್ಯಕ್ತಿಯಾಗಿದ್ದು, ಮಗುಚಿದ್ದ ಟ್ಯಾಂಕರ್ ನೋಡಲು ತೆರಳಿದ್ದಾಗ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ.

    ಟ್ಯಾಂಕರ್ ನಿಂದ ಅನಿಲ ಸೋರಿಕೆ ತಡೆಗಟ್ಟಲು ಹರಸಾಹಸಪಡುತ್ತಿದ್ದಾರೆ. ತೈಲ ಕಂಪೆನಿ ಸಿಬ್ಬಂದಿ ಮಂಗಳೂರಿನಿಂದ ಆಗಮಿಸಿತ್ತು. ಸದ್ಯ ಈಗ ಚಾರ್ಮಾಡಿ ಘಾಟ್ ಮೂಲಕ ವಾಹನ ಚಲಿಸಲು ಅವಕಾಶ ನೀಡಲಾಗಿದೆ.

    ಸದ್ಯ ಮಲೆನಾಡು ಭಾಗದಲ್ಲಿ ಮಳೆ ಆರ್ಭಟ ಮುಂದುವರೆದಿದೆ. ಹೇಮಾವತಿ ಜಲಾಶಯಕ್ಕೆ 42607 ಕ್ಯೂಸೆಕ್ ಒಳ ಹರಿವು ಇದ್ದು, 49750 ಕ್ಯೂಸೆಕ್ ಹೊರ ಹರಿವು ಇದೆ. ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಜೀಪ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ!

    ಜೀಪ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ!

    ರಾಯಚೂರು: ಜೀಪ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ರಾಯಚೂರಿನ ಲಿಂಗಸುಗೂರಿನ ಮುದಗಲ್ ಬಳಿ ನಡೆದಿದೆ.

    22 ವರ್ಷದ ಲಿಂಗನಗೌಡ ಮೃತ ದುರ್ದೈವಿ. ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಸಹೋದರ ಆರ್‍ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿರುವ ಶರಣಗೌಡ ಬಯ್ಯಾಪುರ ಅವರ ಪುತ್ರನೇ ಮೃತ ಲಿಂಗನಗೌಡ. ಚಾಲಕನ ನಿಯಂತ್ರಣ ತಪ್ಪಿ ಲಿಂಗಸುಗೂರು ಮುದಗಲ್ ರಸ್ತೆಯಲ್ಲಿ ಜೀಪು ಪಲ್ಟಿಯಾಗಿದೆ.

    ಸದ್ಯ ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಚಾಲಕನಿಗೆ ತಲೆಸುತ್ತು ಬಂದು KSRTC ಬಸ್ ಪಲ್ಟಿ

    ಚಾಲಕನಿಗೆ ತಲೆಸುತ್ತು ಬಂದು KSRTC ಬಸ್ ಪಲ್ಟಿ

    ಬಾಗಲಕೋಟೆ: ಚಾಲಕನಿಗೆ ತಲೆಸುತ್ತು ಬಂದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿ ಕೆಎಸ್‍ಆರ್ ಟಿಸಿ ಬಸ್ ಪಲ್ಟಿ ಆದ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕುಟಕನಕೇರಿ ಕ್ರಾಸ್‍ನಲ್ಲಿ ನಡೆದಿದೆ.

    ಕೆಎಸ್‍ಆರ್ ಟಿಸಿ ಬಸ್ ಗೋವಾ ರಾಜ್ಯದ ವಾಸ್ಕೋದಿಂದ ಬಾದಾಮಿಗೆ ಬರುತ್ತಿದ್ದಾಗ ಚಾಲಕನಿಗೆ ತಲೆ ಸುತ್ತು ಬಂದಿದೆ. ಪರಿಣಾಮ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು, ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.

    ಸದ್ಯ ಗಾಯಾಳುಗಳು ಬಾದಾಮಿ ಪಟ್ಟಣದ ನಿಲುಗಲ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಾದಾಮಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.