Tag: ಪಲ್ಟಿ

  • ಶಾಲಾ ಕ್ರೀಡಾಕೂಟಕ್ಕೆ ತೆರಳುತ್ತಿದ್ದ ಟೆಂಪೋ ಪಲ್ಟಿ – 15 ವಿದ್ಯಾರ್ಥಿಗಳಿಗೆ ಗಾಯ

    ಶಾಲಾ ಕ್ರೀಡಾಕೂಟಕ್ಕೆ ತೆರಳುತ್ತಿದ್ದ ಟೆಂಪೋ ಪಲ್ಟಿ – 15 ವಿದ್ಯಾರ್ಥಿಗಳಿಗೆ ಗಾಯ

    ಚಿತ್ರದುರ್ಗ: ಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸಲು ವಿದ್ಯಾರ್ಥಿಗಳು ತೆರಳುತ್ತಿದ್ದ ಟೆಂಪೋ ಪಲ್ಟಿಯಾಗಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ಚಳ್ಳಕೆರೆ ಸಮೀಪ ನಡೆದಿದೆ.

    ಚಳ್ಳಕೆರೆ ತಾಲೂಕಿನ ಚೌಳೂರು ಸರ್ಕಾರಿ ಪ್ರಾಥಮಿಕ ಶಾಲೆಯ ಶಾಲಾ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಘಟನೆಯಲ್ಲಿ 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು, ತಕ್ಷಣ ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಕರೆತರಲಾಯಿತು. ಆದರೆ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನು ವಾರ್ಡ್ ನಿಂದ ಶಿಪ್ಟ್ ಮಾಡಲು ಸ್ಟ್ರಚ್ಚರ್ ಕೂಡ ಇಲ್ಲದೇ ನಡೆಸಿಕೊಂಡೆ ಹೋದ ಅಮಾನವೀಯ ಘಟನೆ ಕೂಡ ನಡೆದಿದೆ.

    ಕಾರ್ಯಕ್ರಮದಲ್ಲಿ ಭಾಗವಹಿಸಲು ವಿದ್ಯಾರ್ಥಿಗಳನ್ನು ಖಾಸಗಿ ಟೆಂಪೋವೊಂದರಲ್ಲಿ ಚೌಳೂರಿನಿಂದ ಟಿ.ಎನ್.ಕೋಟೆ ಗ್ರಾಮಕ್ಕೆ ಕರೆತರಲಾಗುತ್ತಿತ್ತು. ಆದರೆ ಟೆಂಪೋ ಪಲ್ಟಿಯಾಗಲು ಕಾರಣವೇನು ಎಂದು ತಿಳಿದು ಬಂದಿಲ್ಲ. ಪರಶುರಾಂಪುರ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ  www.instagram.com/publictvnews

  • ಸಿಮೆಂಟ್ ಲಾರಿ ಪಲ್ಟಿಯಾಗಿ ಒಡೆದ ಡೀಸೆಲ್ ಟ್ಯಾಂಕ್- ಕೆಲ ಕಾಲ ಟ್ರಾಫಿಕ್ ಜಾಮ್

    ಸಿಮೆಂಟ್ ಲಾರಿ ಪಲ್ಟಿಯಾಗಿ ಒಡೆದ ಡೀಸೆಲ್ ಟ್ಯಾಂಕ್- ಕೆಲ ಕಾಲ ಟ್ರಾಫಿಕ್ ಜಾಮ್

    ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಲಾರಿ ಪಲ್ಟಿಯಾದ ಘಟನೆ ನಗರದ ಕಾರ್ಪೋರೇಷನ್ ಸರ್ಕಲ್ ಬಳಿ ನಡೆದಿದೆ.

    ರೋಡ್ ಟರ್ನಿಂಗ್ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆದಲ್ಲಿ ಲಾರಿ ಪಲ್ಟಿಯಾಗಿದೆ. ನಡುರಸ್ತೆಯಲ್ಲಿ ಲಾರಿ ಬಿದ್ದಿರುವುದರಿಂದ ಕೆಲ ಕಾಲ ಟ್ರಾಫಿಕ್ ಜಾಮ್ ಕೂಡ ಉಂಟಾಗಿತ್ತು. ಅಷ್ಟೇ ಅಲ್ಲದೇ ಪಲ್ಟಿಯಾದ ವೇಳೆ ಲಾರಿ ಡೀಸೆಲ್ ಟ್ಯಾಂಕ್ ಒಡೆದು ಹೋಗಿದೆ.

    ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದು, ಘಟನೆಯಲ್ಲಿ ಲಾರಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸದ್ಯ ಈ ಬಗ್ಗೆ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಶಾಲಾ ಬಾಲಕನನ್ನು ರಕ್ಷಿಸಲು ಹೋಗಿ ಬಸ್ ಪಲ್ಟಿ- ಓರ್ವ ಸಾವು, 35ಕ್ಕೂ ಹೆಚ್ಚು ಮಂದಿಗೆ ಗಾಯ!

    ಶಾಲಾ ಬಾಲಕನನ್ನು ರಕ್ಷಿಸಲು ಹೋಗಿ ಬಸ್ ಪಲ್ಟಿ- ಓರ್ವ ಸಾವು, 35ಕ್ಕೂ ಹೆಚ್ಚು ಮಂದಿಗೆ ಗಾಯ!

    ಮಂಡ್ಯ: ಶಾಲಾ ಬಾಲಕನನ್ನು ರಕ್ಷಿಸಲು ಹೋಗಿ ಬಸ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, 35ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಮಳವಳ್ಳಿ ತಾಲೂಕಿನ ಬುಳ್ಳಿಕೆಂಪನದೊಡ್ಡಿ ಬಳಿಯ ಮೈಸೂರು-ಮಳವಳ್ಳಿ ಹೆದ್ದಾರಿಯಲ್ಲಿ ನಡೆದಿದೆ.

    ಮಹೇಶ್(35) ಮೃತ ದುರ್ದೈವಿ. ಖಾಸಗಿ ಬಸ್ ಮೈಸೂರು ತಾಲೂಕಿನ ತಾಯೂರು ಗ್ರಾಮದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಬುಳ್ಳಿಕೆಂಪನದೊಡ್ಡಿ ಬಳಿ ರಸ್ತೆ ದಾಟುತಿದ್ದ ಶಾಲಾ ಬಾಲಕನಿಗೆ ಡಿಕ್ಕಿ ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ.

    ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿಗೆ ಉರುಳಿ ಬಿದ್ದಿದ್ದು, ಸ್ಥಳದಲ್ಲೇ ಓರ್ವ ಸಾವು, 35ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳು ಮಳವಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ 9ಕ್ಕೂ ಹೆಚ್ಚು ಮಂದಿಯನ್ನು ಮಂಡ್ಯದ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

    ಬಸ್ ನಲ್ಲಿ ಗಾರ್ಮೆಂಟ್ಸ್ ಫ್ಯಾಕ್ಟರಿ ನೌಕರರು ಹಾಗೂ ಕೂಲಿ ಕಾರ್ಮಿಕರು ಹೆಚ್ಚಿದ್ದರು ಎನ್ನಲಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಟಿ. ನರಸಿಪುರ ಕ್ಷೇತ್ರದ ಶಾಸಕ ಅಶ್ವಿನ್ ಕುಮಾರ್ ಹಾಗೂ ಡಿವೈಎಸ್ಪಿ ಸಿ.ಮಲ್ಲಿಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಳವಳ್ಳಿ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

  • ತರಕಾರಿ ಲಾರಿ ಪಲ್ಟಿ- ಪವಾಡಸದೃಶವಾಗಿ ಚಾಲಕ, ಕ್ಲೀನರ್ ಪಾರು

    ತರಕಾರಿ ಲಾರಿ ಪಲ್ಟಿ- ಪವಾಡಸದೃಶವಾಗಿ ಚಾಲಕ, ಕ್ಲೀನರ್ ಪಾರು

    ಉಡುಪಿ: ಶಿವಮೊಗ್ಗದಿಂದ ತರಕಾರಿ ತುಂಬಿಸಿಕೊಂಡು ಮಂಗಳೂರು ಕಡೆ ಹೋಗುತ್ತಿದ್ದ ಲಾರಿ ಕಾರಿಗೆ ಸೈಡ್ ನೀಡುವ ಭರದಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

    ಕಾಪು ಸಮೀಪದ ದಂಡತೀರ್ಥ ಶಾಲೆಯ ಮುಂಭಾಗ ಈ ಘಟನೆ ನಡೆದಿದೆ. ಪಲ್ಟಿಯಾದ ರಭಸಕ್ಕೆ ಲಾರಿ ವಿದ್ಯುತ್ ಕಂಬಗಳಿಗೆ ಗುದ್ದಿದೆ. ಒಂದು ಕಂಬ ತುಂಡಾಗಿದ್ದು, ಲಾರಿ ಚಾಲಕ ಸದ್ದಾಂ ಮತ್ತು ಕ್ಲೀನರ್ ಮಧು ಪವಾಡ ಸದೃಶವಾಗಿ ಪಾರಾಗಿದ್ದಾರೆ.

    ವಿದ್ಯುತ್ ಕಂಬದಿಂದ ಲಾರಿ ದೂರ ಬಿದ್ದ ಕಾರಣ ಅವಘಡ ತಪ್ಪಿದೆ. ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

  • ಖಾಸಗಿ ಬಸ್ ಪಲ್ಟಿ- 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

    ಖಾಸಗಿ ಬಸ್ ಪಲ್ಟಿ- 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

    ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

    ಕಾರ್ಕಳ ತಾಲೂಕಿನ ನಂದಳಿಕೆ ಎಂಬಲ್ಲಿ ಈ ಘಟನೆ ನಡೆದಿದ್ದು, 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಖಾಸಗಿ ಬಸ್ ಕಾರ್ಕಳದಿಂದ ಮಂಗಳೂರು ಕಡೆಗೆ ತೆರಳುತ್ತಿತ್ತು. ಈ ಸಂದರ್ಭ ತಿರುವಿನಲ್ಲಿ ಬಸ್ ಪಲ್ಟಿಯಾಗಿ ಬಿದ್ದಿದೆ.

    ಘಟನೆಯಿಂದಾಗಿ ಗಾಯಗೊಂಡವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಿರುವಿನಲ್ಲಿ ಬ್ರೇಕ್ ಹಿಡಿಯದ್ದರಿಂದ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ.

    ಕೂಡಲೇ ನೂರಾರು ಸ್ಥಳೀಯ ಸ್ಥಳಕ್ಕಾಗಮಿಸಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಲ್ಲಿ ಸಹಕಾರ ನೀಡಿದರು.

  • 30ಕ್ಕೂ ಅಧಿಕ ಪ್ರಯಾಣಿಕರಿದ್ದ ಖಾಸಗಿ ಬಸ್ ಪಲ್ಟಿ!

    30ಕ್ಕೂ ಅಧಿಕ ಪ್ರಯಾಣಿಕರಿದ್ದ ಖಾಸಗಿ ಬಸ್ ಪಲ್ಟಿ!

    ಬೆಂಗಳೂರು: ರಸ್ತೆಯಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕಿನಲ್ಲಿ ನಡೆದಿದೆ.

    ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಬಳಿ ಬೆಂಗಳೂರಿನಿಂದ ಮಾಲೂರಿಗೆ ಸಂಚರಿಸುತ್ತಿದ್ದ ಬಸ್ ಪಲ್ಟಿಯಾಗಿದೆ. ಚಾಲಕನ ಅತಿವೇಗ ಮತ್ತು ಅಜಾಗರೂಕತೆ ಈ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರೆಲ್ಲ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಅಪಘಾತದ ನಂತರ ಬಸ್ ಚಾಲಕ ಮತ್ತು ಕಂಡಕ್ಟರ್ ಸ್ಥಳದಿಂದ ಪರಾರಿಯಾಗಿದ್ದು, ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಖಾಸಗಿ ಬಸ್ ಪಲ್ಟಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

    ಖಾಸಗಿ ಬಸ್ ಪಲ್ಟಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

    ಹುಬ್ಬಳ್ಳಿ: ಖಾಸಗಿ ಬಸ್ ಪಲ್ಟಿಯಾಗಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ಹುಬ್ಬಳ್ಳಿ ಸಮೀಪದ ಅಗಡಿ ಕ್ರಾಸ್ ಬಳಿ ನಡೆದಿದೆ.

    ಖಾಸಗಿ ಬಸ್ ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೋಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಆಗಿದೆ. ಬಸ್ ಪಲ್ಟಿಯಾಗಿ ರಸ್ತೆಯ ಪಕ್ಕದಲ್ಲೇ ಉರುಳಿ ಬಿದಿದ್ದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

    ಸದ್ಯ ಗಾಯಾಳುಗಳನ್ನು ಕಿಮ್ಸ್ ಹಾಗೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ಪಲ್ಟಿಯಾದ ಲಾರಿಯನ್ನು ಕ್ರೇನ್ ನಲ್ಲಿ ಎತ್ತಲು ಹೋಗಿ ಮತ್ತೆ ಪಲ್ಟಿ!

    ಪಲ್ಟಿಯಾದ ಲಾರಿಯನ್ನು ಕ್ರೇನ್ ನಲ್ಲಿ ಎತ್ತಲು ಹೋಗಿ ಮತ್ತೆ ಪಲ್ಟಿ!

    ಚಿಕ್ಕಮಗಳೂರು: ಮಳೆಯ ಅವಾಂತರಕ್ಕೆ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿದ್ದು, ಪರಿಣಾಮ ಶೃಂಗೇರಿ ಮತ್ತು ಚಿಕ್ಕಮಗಳೂರು ರಸ್ತೆ ಸಂಚಾರ ಕಡಿತಗೊಂಡಿತ್ತು.

    ಚಿಕ್ಕಮಗಳೂರು ತಾಲೂಕಿನ ಎಲೆಕಲ್ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ. ಮಳೆಯಿಂದ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಪರಿಣಾಮ ಸುಮಾರು 2 ಗಂಟೆಗೂ ಹೆಚ್ಚು ಕಾಲ ರಸ್ತೆ ಸಂಚಾರ ಕಡಿತಗೊಂಡಿತ್ತು.

    ಈ ಬಗ್ಗೆ ಮಾಹಿತಿ ತಿಳಿದ ಬಾಳೆಹೊನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪಲ್ಟಿಯಾದ ಲಾರಿಯನ್ನು ಕ್ರೇನ್ ಮೂಲಕ ಎತ್ತಿ ನಿಲ್ಲಿಸಲು ಹರಸಾಹಸ ಪಟ್ಟಿದ್ದಾರೆ. ಆದರೆ ಕ್ರೇನ್ ನಲ್ಲಿ ಎತ್ತುವ ವೇಳೆ ಲಾರಿ ಕಾಫಿ ತೋಟಕ್ಕೆ ಹಿಂಬದಿ ಚಲಿಸಿ ಮತ್ತೆ ಪಲ್ಟಿಯಾಗಿದೆ.

    ಈ ಅವಘಡದಿಂದ ಅದೃಷ್ಟವಶಾತ್ ಟಿಪ್ಪರ್ ಚಾಲಕ ಹಾಗೂ ಕಂಡಕ್ಟರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

  • ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗ್ತಿದ್ದ ಟೆಂಪೋ ಪಲ್ಟಿ- ಇಬ್ಬರ ದುರ್ಮರಣ

    ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗ್ತಿದ್ದ ಟೆಂಪೋ ಪಲ್ಟಿ- ಇಬ್ಬರ ದುರ್ಮರಣ

    ಯಾದಗಿರಿ: ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಟೆಂಪೋ ವಾಹನವೊಂದು ಪಲ್ಟಿಯಾಗಿ ಇಬ್ಬರು ಮೃತಪಟ್ಟ ಜಿಲ್ಲೆಯ ಗುರುಮಿಟ್ಕಲ್ ತಾಲೂಕಿನ ಸಿದ್ದಾಪುರ ಹತ್ತಿರ ನಡೆದಿದೆ.

    ಸಾಬಣ್ಣ, ನಾಗಮ್ಮ ಮೃತಪಟ್ಟ ಇಬ್ಬರು ಕಾರ್ಮಿಕರು. ಮೃತರು ಗಾಜರಕೋಟ್ ಗ್ರಾಮದ ನಿವಾಸಿಗಳಾಗಿದ್ದು, ಗಾಜರಕೋಟ್ ಗ್ರಾಮದಿಂದ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ದುಗನೂರ ಗ್ರಾಮದ ಕಡೆ ಕೂಲಿ ಕೆಲಸಕ್ಕಾಗಿ ತೆರಳುತ್ತಿದ್ದರು. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಗುರುಮಠಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸ್ಥಳಕ್ಕೆ ಗುರುಮಿಟ್ಕಲ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಡಿವೈಡರ್ ಡಿಕ್ಕಿಯಾಗಿ ಲಾರಿ, ಕಾರ್ ಮೇಲೆ ಪಲ್ಟಿ- ಯುವಕ ದುರ್ಮರಣ

    ಡಿವೈಡರ್ ಡಿಕ್ಕಿಯಾಗಿ ಲಾರಿ, ಕಾರ್ ಮೇಲೆ ಪಲ್ಟಿ- ಯುವಕ ದುರ್ಮರಣ

    ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರ್ ಮೇಲೆ ಲಾರಿ ಬಿದ್ದು ಚಾಲಕ ಮೃತಪಟ್ಟ ಘಟನೆ ಬೆಂಗಳೂರಿನ ನಾಗವಾರ ಫ್ಲೈ ಓವರ್ ಬಳಿ ತಡರಾತ್ರಿ ನಡೆದಿದೆ.

    ಪ್ರತಾಪ್(26) ಮೃತ ಕಾರ್ ಚಾಲಕ. ಪ್ರತಾಪ್ ಖಾಸಗಿ ಕಂಪನಿಯ ಕೆಲಸಗಾರರನ್ನು ಮನೆಗೆ ಡ್ರಾಪ್ ಮಾಡಲು ನಾಗವಾರ ಬಳಿ ತೆರಳುತ್ತಿದ್ದರು. ಅದೇ ಸಂದರ್ಭದಲ್ಲಿ ಅತಿಯಾದ ವೇಗದಲ್ಲಿ ಲಾರಿ ಬಂದಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.

    ಡಿಕ್ಕಿಯಾದ ಪರಿಣಾಮ ಪಕ್ಕದಲ್ಲೆ ಇದ್ದ ಕಾರ್ ಮೇಲೆ ಬಿದ್ದು ಪ್ರತಾಪ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ನಡೆದ ಬಳಿಕ ಲಾರಿ ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ.

    ಸದ್ಯ ಬಾಣಸವಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.