Tag: ಪಲ್ಟಿ

  • ಮದ್ವೆ ಮುಗಿಸಿಕೊಂಡು ವಾಪಸ್ಸಾಗುವಾಗ ಕಾರ್ ಪಲ್ಟಿ- ಐವರಿಗೆ ಗಾಯ

    ಮದ್ವೆ ಮುಗಿಸಿಕೊಂಡು ವಾಪಸ್ಸಾಗುವಾಗ ಕಾರ್ ಪಲ್ಟಿ- ಐವರಿಗೆ ಗಾಯ

    ಕೋಲಾರ: ಎರಿಟಿಗಾ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡ ಘಟನೆ ಕೋಲಾರ ನಗರದ ಹೊರವಲಯ ಟಮಕ ಬಳಿ ತಡರಾತ್ರಿ ನಡೆದ ಘಟನೆ.

    ಕೇದಾರ್(38), ಶಿವಶಂಕರ್(41) ಮೃತ ದುದೈವಿಗಳು. ಮೃತರು ಮುಳಬಾಗಿಲು ತಾಲೂಕು ಬೆಸ್ತರಹಳ್ಳಿ ಗ್ರಾಮದವರಾಗಿದ್ದಾರೆ. ಕೋಲಾರದಲ್ಲಿ ಮದುವೆ ಮುಗಿಸಿಕೊಂಡು ವಾಪಸ್ಸಾಗುವಾಗ ಈ ಘಟನೆ ನಡೆದಿದೆ. ಘಟನೆಯಿಂದಾಗಿ ಕಾರಿನಲ್ಲಿದ್ದ ಐವರಿಗೆ ಗಾಯಗಳಾಗಿದ್ದು, ಸದ್ಯ ಗಾಯಾಳುಗಳನ್ನು ಆರ್ ಎಲ್ ಜಾಲಪ್ಪಾ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಮತದಾನ ಹಾಕಲು ಪ್ರಯಾಣಿಸುತ್ತಿದ್ದ ಟಂ ಟಂ ಪಲ್ಟಿ- 8 ಜನರಿಗೆ ಗಾಯ, 3 ಜನರಿಗೆ ಗಂಭೀರ ಗಾಯ!

    ಮತದಾನ ಹಾಕಲು ಪ್ರಯಾಣಿಸುತ್ತಿದ್ದ ಟಂ ಟಂ ಪಲ್ಟಿ- 8 ಜನರಿಗೆ ಗಾಯ, 3 ಜನರಿಗೆ ಗಂಭೀರ ಗಾಯ!

    ಗದಗ: ಮತದಾನ ಹಾಕಲು ಪ್ರಯಾಣಿಸುತ್ತಿದ್ದ ಟಂ ಟಂ ಪಲ್ಟಿಯಾಗಿ 8 ಜನರಿಗೆ ಗಾಯ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಲ್ಲೆಯ ನರಗುಂದ ಹೊರವಲಯದಲ್ಲಿ ಈ ಅಪಘಾತ ನಡೆದಿದೆ.

    ಮತದಾರರು ಬೆಳಗಾವಿಯಿಂದ ನರಗುಂದ ಮಾರ್ಗವಾಗಿ ಕೊಂಗವಾಡ ಗ್ರಾಮಕ್ಕೆ ಹೊರಟ್ಟಿದ್ದರು. ಈ ವೇಳೆ ಟಂಟಂ ವಾಹನ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಅಪಘಾತದಲ್ಲಿ 5 ಜನ ಮಹಿಳೆಯರು, 3 ಜನ ಪುರುಷರು ಗಾಯಗೊಂಡಿದ್ದಾರೆ.

    ಗಾಯಾಳುಗಳನ್ನು ನರಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದು, 3 ಜನ ಗಂಭೀರ ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

  • ಟ್ಯಾಂಕರ್ ಪಲ್ಟಿಯಾಗಿ ರಸ್ತೆಯಿಡೀ ಹರಿಯಿತು ಚಾಕಲೇಟ್!

    ಟ್ಯಾಂಕರ್ ಪಲ್ಟಿಯಾಗಿ ರಸ್ತೆಯಿಡೀ ಹರಿಯಿತು ಚಾಕಲೇಟ್!

    ಪೋಲ್ಯಾಂಡ್: ಚಾಕಲೇಟ್ ದ್ರಾವಣ ತುಂಬಿದ್ದ ಟ್ಯಾಂಕರೊಂದು ರಸ್ತೆ ಮಧ್ಯೆ ಪಲ್ಟಿಯಾದ ಪರಿಣಾಮ ದ್ರವ ರೂಪದ ಚಾಕಲೇಟ್ ರಸ್ತೆಯಿಡೀ ಚೆಲ್ಲಿದ ಘಟನೆ ಪೋಲ್ಯಾಂಡ್ ನಲ್ಲಿ ನಡೆದಿದೆ.

    ಈ ಘಟನೆ ಬುಧವಾರ ನಡೆದಿದ್ದು, ಘಟನೆಯಿಂದ ಕೆಲ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ವಾಹನ ಸವಾರರು ಪರದಾಡುವಂತಹ ಸ್ಥಿತಿ ಬಂದಿತ್ತು. ಈ ಟ್ಯಾಂಕರ್ ದಕ್ಷಿಣ ಪೋಲ್ಯಾಂಡ್ ಗೆ ಸೇರಿದ್ದಾಗಿದೆ ಎಂಬುದಾಗಿ ವರದಿಯಾಗಿದೆ.

    ಗ್ರ್ಯಾಬೋಸ್ಜೆವೊ ಟ್ರಾಫಿಕ್ ತಡೆಗೋಡೆಗೆ ಡಿಕ್ಕಿಯಾದ ಪರಿಣಾಮ ಸುಮಾರು 12 ಟನ್ ಚಾಕಲೇಟ್ ದ್ರಾವಣವಿದ್ದ ಟ್ಯಾಂಕರ್ ಪಲ್ಟಿಯಾಗಿದೆ ಎಂದು ಅಲ್ಲಿನ ಕೆಲ ಮಾಧ್ಯಮಗಳು ವರದಿ ಮಾಡಿದ್ದವು.

    ಘಟನೆಯಲ್ಲಿ 60 ವರ್ಷದ ಚಾಲಕನ ಕೈಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದರು. ಸೂರ್ಯನ ಬಿಸಿಲಿಗೆ ರಸ್ತೆಯಲ್ಲಿ ಚೆಲ್ಲಿದ್ದ ಚಾಕಲೇಟ್ ದ್ರಾವಣ ಒಣಗಿ ಅಂಟು ಅಂಟಾಗಿತ್ತು. ಹೀಗಾಗಿ ಆ ದ್ರಾವಣವನ್ನು ತೆಗೆಯಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸಪಟ್ಟರು. ಚಾಕಲೇಟ್ ಗಿಂತ ಎಣ್ಣೆಯನ್ನು ತೆರವುಗೊಳಿಸುವುದೇ ಸುಲಭ ಅಂತ ಸ್ಲುಪ್ಕಾ ನಗರದ ಪೊಲೀಸ್ ಮಾರ್ಲೆನಾ ಕುಕಾವಾಕ ತಿಳಿಸಿದ್ದಾರೆ.

  • ವೇಗವಾಗಿ ಬಂದು ಪೆಟ್ರೋಲ್ ಬಂಕ್ ಬಳಿ ಪಲ್ಟಿಯಾದ ಕಾರ್- ಮುಂದೇನಾಯ್ತು? ವಿಡಿಯೋ ನೋಡಿ

    ವೇಗವಾಗಿ ಬಂದು ಪೆಟ್ರೋಲ್ ಬಂಕ್ ಬಳಿ ಪಲ್ಟಿಯಾದ ಕಾರ್- ಮುಂದೇನಾಯ್ತು? ವಿಡಿಯೋ ನೋಡಿ

    ಗಾಂಧಿನಗರ: ವೇಗವಾಗಿ ಬಂದ ಕಾರ್‍ವೊಂದು ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿ ಪಲ್ಟಿಯಾದ ದೃಶ್ಯ ಸಿಸಿಟವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಗುಜರಾತ್‍ನ ಮೊರ್ಬಿಯಲ್ಲಿ ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಸುದ್ಧಿ ಸಂಸ್ಥೆ ಇದರ ವಿಡಿಯೋವನ್ನ ಹಂಚಿಕೊಂಡಿದೆ. ಕಾರ್ ತಲೆಕೆಳಗಾಗಿ ಬಿದ್ದರೂ ಒಳಗಿದ್ದ ಚಾಲಕ ಹಾಗೂ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ರಸ್ತೆಯಲ್ಲಿ ಅತೀ ವೇಗವಾಗಿ ಬಂದ ಕಾರ್ ಅಡ್ಡಾದಿಡ್ಡಿ ಚಲಿಸಿ ನಂತರ ರಸ್ತೆಯ ಕಲ್ಲುಹಾಸಿಗೆ ಗುದ್ದಿದ್ದು, ಸೀಮೆಂಟ್ ಕಿತ್ತು ಬಂದಿದೆ. ಬಳಿಕ ಕಾರ್ ಪೆಟ್ರೋಲ್ ಬಂಕ್‍ವೊಂದರ ಬಳಿ ಪಲ್ಟಿಯಾಗಿ ಬಿದ್ದಿದೆ. ಆದ್ರೆ ಆಶ್ಚರ್ಯವೆಂಬಂತೆ ಕೆಲವು ಸೆಕೆಂಡ್‍ಗಳ ನಂತರ ಇಬ್ಬರು ವ್ಯಕ್ತಿಗಳು ಕಾರಿನಿಂದ ನಿಧಾನವಾಗಿ ಹೊರಬರೋದನ್ನ ವಿಡಿಯೋದಲ್ಲಿ ಕಾಣಬಹುದು. ಬಳಿಮ ಸ್ಥಳೀಯರು ಅಲ್ಲಿಗೆ ದೌಡಾಯಿಸಿದ್ದಾರೆ.

    ಕಾರಿನಲ್ಲಿದ್ದವರು ಯಾವುದೇ ಗಾಯಗಳಾಗದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

  • ಶಾಲಾ ವಾಹನ ಪಲ್ಟಿ- 3 ಶಿಕ್ಷಕರು, 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

    ಶಾಲಾ ವಾಹನ ಪಲ್ಟಿ- 3 ಶಿಕ್ಷಕರು, 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

    ತುಮಕೂರು: ಶಾಲಾ ವಾಹನ ಮಗುಚಿ ಬಿದ್ದ ಪರಿಣಾಮ ಮೂವರು ಶಿಕ್ಷಕರು ಹಾಗೂ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಹುಸೇನ್ ಪುರ ಗ್ರಾಮದ ಬಳಿ ನಡೆದಿದೆ.

    ಸತ್ಯಸಾಯಿ ಜಗದಾಂಬಾ ಖಾಸಗಿ ಶಾಲೆಯ ವಾಹನ ಇದಾಗಿದ್ದು, ಬೆಳಗ್ಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುವಾಗ ಈ ಅಪಘಾತ ಸಂಭವಿಸಿದೆ. ಚಾಲಕನ ನಿರ್ಲಕ್ಷ್ಯದಿಂದ ವಾಹನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಶಾಲಾವಾಹನದ ಅಪಘಾತ ಸಂಭವಿಸುತ್ತಿದ್ದಂತೆ ಅಲ್ಲೇ ಇದ್ದ ಸ್ಥಳೀಯರು ವಾಹನದಲ್ಲಿನ ವಿದ್ಯಾರ್ಥಿಗಳನ್ನು ರಕ್ಷಿಸಿ ತಿರುಮಣಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿದ್ದಾರೆ.

    ಚಾಲಕ ಜಯರಾಮ್ ಮದ್ಯಪಾನ ಮಾಡಿ ವಾಹನ ಚಲಾಯಿಸಿದ್ದೆ ವಾಹನ ಪಲ್ಟಿ ಹೊಡೆಯಲು ಕಾರಣ ಎನ್ನಲಾಗಿದೆ. ಅಪಘಾತ ಸಂಭವಿಸಿದ ನಂತರ ಚಾಲಕ ಜಯರಾಮ್ ಪರಾರಿಯಾಗಿದ್ದಾನೆ. ಈ ಘಟನೆ ಸಂಬಂಧ ತಿರುಮಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

     

  • ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಲಾರಿ ಪಲ್ಟಿ

    ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಲಾರಿ ಪಲ್ಟಿ

    ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಲಾರಿ ಪಲ್ಟಿಯಾದ ಘಟನೆ ನೆಲಮಂಗಲದ ಟಿ.ಬೇಗೂರು ಬಳಿ ನಡೆದಿದೆ.

    ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಲಾರಿ ಪಲ್ಟಿಯಾಗಿದೆ. ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು ಕೆಲಕಾಲ ಟ್ರಾಫಿಕ್ ಜಾಂ ಉಂಟಾಗಿತ್ತು.

    ಘಟನೆ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಹೊಸ ವರ್ಷದ ಪಾರ್ಟಿಯಲ್ಲಿ ಮದ್ಯ ಸೇವಿಸಿ ಡ್ರೈವಿಂಗ್- ಮಂಗ್ಳೂರಲ್ಲಿ ಕಾರ್ ಪಲ್ಟಿ

    ಹೊಸ ವರ್ಷದ ಪಾರ್ಟಿಯಲ್ಲಿ ಮದ್ಯ ಸೇವಿಸಿ ಡ್ರೈವಿಂಗ್- ಮಂಗ್ಳೂರಲ್ಲಿ ಕಾರ್ ಪಲ್ಟಿ

    ಮಂಗಳೂರು: ಹೊಸವರ್ಷದ ಪಾರ್ಟಿಯ ಗುಂಗಿನಲ್ಲಿ ಅತಿ ವೇಗವಾಗಿ ಚಲಾಯಿಸಿಕೊಂಡು ಹೋದ ಕಾರು ಪಲ್ಟಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

    ನಗರದ ವಿವಿಧೆಡೆ ಹೊಸವರ್ಷದ ಪಾರ್ಟಿ ನಡೆದಿದ್ದು, ಮದ್ಯಪಾನ ಮಾಡಿ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಂಪ್ ವೆಲ್ ಬಳಿ ಪಲ್ಟಿಯಾಗಿದೆ.

    ಕಾರಿನಲ್ಲಿದ್ದ ಐದು ಜನರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊಸ ವರ್ಷದ ಮೊದಲ ದಿನದ ಕೆಲವೇ ನಿಮಿಷಗಳಲ್ಲಿ ಅಪಘಾತ ನಡೆದಿರೋದು ವಿಪರ್ಯಾಸವಾಗಿದೆ.

    ಸ್ಥಳಕ್ಕೆ ಕದ್ರಿ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಪಲ್ಟಿಯಾದ ಕಾರನ್ನು ಪೊಲೀಸರು ಕ್ರೇನ್ ಮೂಲಕ ಮೇಲಕ್ಕೆ ಎತ್ತಿದ್ದಾರೆ.

  • ಹಾಲಿನ ಟ್ಯಾಂಕರ್ ಪಲ್ಟಿ- ಹಾಲು ತುಂಬಿಕೊಳ್ಳಲು ಮುಗಿಬಿದ್ದ ಜನ್ರು

    ಹಾಲಿನ ಟ್ಯಾಂಕರ್ ಪಲ್ಟಿ- ಹಾಲು ತುಂಬಿಕೊಳ್ಳಲು ಮುಗಿಬಿದ್ದ ಜನ್ರು

    ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಹಾಲೆಲ್ಲಾ ರಸ್ತೆ ಪಾಲಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಹೊರವಲಯದ ವಾಪಸಂದ್ರ ಸೇತುವೆ ಬಳಿ ನಡೆದಿದೆ

    ಸಾದಲಿ ಗ್ರಾಮದ ಹಾಲು ಶೀತಲೀಕರಣ ಕೇಂದ್ರದಿಂದ ಹಾಲನ್ನ ಯಲಹಂಕದ ಕೆಎಂಎಫ್ ನ ಮದರ್ ಡೈರಿಗೆ ಟ್ಯಾಂಕರ್ ಮೂಲಕ ಸಾಗಿಸಲಾಗುತ್ತಿತ್ತು. ಆದರೆ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ವಾಪಸಂದ್ರ ಸೇತುವೆ ಕೆಳಭಾಗದ ತಿರುವಿನಲ್ಲಿ ಉರುಳಿಬಿದ್ದಿದೆ. ಹಾಲಿನ ಟ್ಯಾಂಕರ್ ಪಲ್ಟಿಯಾದ ಕಾರಣ ಟ್ಯಾಂಕರ್ ನಲ್ಲಿದ್ದ ಬಹುತೇಕ ಹಾಲು ರಸ್ತೆಪಾಲಾಗಿದೆ. ರಸ್ತೆಯ ತುಂಬೆಲ್ಲಾ ಹಾಲಿನ ಹೊಳೆಯೇ ಹರಿದಿದೆ.

    ಘಟನೆಯಲ್ಲಿ ಟ್ಯಾಂಕರ್‍ನ ಚಾಲಕ ಕ್ಲೀನರ್ ಸೇರಿದಂತೆ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ಸದ್ಯಕ್ಕೆ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಲು ರಸ್ತೆ ಪಾಲಾಗುತ್ತಿದ್ದನ್ನು ಗಮನಿಸಿದ ಜನರು ಬಿಂದಿಗೆ, ಬಾಟಲ್ ಮತ್ತು ಕ್ಯಾನ್‍ಗಳಲ್ಲಿ ತುಂಬಿಸಿಕೊಂಡು ಸಂತೋಷದಿಂದ ಹೋಗಿದ್ದಾರೆ.

    ಸಾದಲಿ ಶೀತಲೀಕರಣ ಕೇಂದ್ರದಿಂದ ರಾಷ್ಟ್ರೀಯ ಹೆದ್ದಾರಿ 7 ರ ಮುಖಾಂತರ ಚಿಕ್ಕಬಳ್ಳಾಪುರ, ದೇವನಹಳ್ಳಿ ಮಾರ್ಗದಿಂದ ಯಲಹಂಕಕ್ಕೆ ಸಂಚರಿಸುತ್ತಿತ್ತು. ಆದರೆ ವಾಪಸಂದ್ರ ಸೇತುವೆ ಬಳಿ ಚಿಕ್ಕಬಳ್ಳಾಪುರ ನಗರದೊಳಗೆ ಪ್ರವೇಶ ಮಾಡಿದೆ. ಅಸಲಿಗೆ ಚಿಕ್ಕಬಳ್ಳಾಪುರ ನಗರದೊಳಗೆ ಪ್ರವೇಶ ಮಾಡದೆ ನೇರವಾಗಿ ಯಲಹಂಕಕ್ಕೆ ತೆರಳಬಹುದಿತ್ತು. ಆದರೆ ಟ್ಯಾಂಕರ್ ಚಾಲಕನ ಹಣದ ಆಸೆಗೆ ಮಾರ್ಗ ಮಧ್ಯೆ ಚಿಕ್ಕಬಳ್ಳಾಪುರ ನಗರಕ್ಕೆ ಪ್ರಯಾಣಿಕರನ್ನ ಹತ್ತಿಸಿಕೊಂಡಿದ್ದಾನೆ. ಅವರನ್ನ ಇಳಿಸುವ ಸಲುವಾಗಿಯೇ ಚಾಲಕ ಚಿಕ್ಕಬಳ್ಳಾಪುರ ನಗರದತ್ತ ಪ್ರವೇಶ ಮಾಡಿದ್ದಾನೆ. ಈ ವೇಳೆ ದುರದೃಷ್ಟವಶಾತ್ ಚಿಕ್ಕಬಳ್ಳಾಪುರ ನಗರ ಪ್ರವೇಶದ ಆರಂಭದ ತಿರುವಿನಲ್ಲಿ ಟ್ಯಾಂಕರ್ ಪಲ್ಟಿಯಾಗಿದೆ.

    ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕ್ರೇನ್ ಸಹಾಯದಿಂದ ಟ್ಯಾಂಕರ್‍ನ್ನು ತೆರವುಗೊಳಿಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

  • ಡೀಸೆಲ್ ಟ್ಯಾಂಕರ್ ಪಲ್ಟಿ- ಬಕೆಟ್, ಡಬ್ಬಿಗಳಲ್ಲಿ ಡೀಸೆಲ್ ತುಂಬಿಕೊಂಡು ಹೋದ್ರು ಜನ

    ಡೀಸೆಲ್ ಟ್ಯಾಂಕರ್ ಪಲ್ಟಿ- ಬಕೆಟ್, ಡಬ್ಬಿಗಳಲ್ಲಿ ಡೀಸೆಲ್ ತುಂಬಿಕೊಂಡು ಹೋದ್ರು ಜನ

    ಯಾದಗಿರಿ: ಡೀಸೆಲ್ ಹೊತ್ತೊಯ್ಯುತ್ತಿದ್ದ  ಟ್ಯಾಂಕರೊಂದು ಪಲ್ಟಿಯಾದ ಘಟನೆ ಶಹಾಪೂರ ತಾಲೂಕಿನ ಹುಲಕಲ್ ಗ್ರಾಮದ ಬಳಿ ನಡೆದಿದೆ.

    ಭಾರತ್ ಪೆಟ್ರೋಲಿಯಂ ಕಂಪನಿಗೆ ಸೇರಿದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ನೆಲಕ್ಕೆ ಉರುಳಿದೆ. ಈ ಸಮಯದಲ್ಲಿ ಯಾವುದೇ ವಾಹನಗಳು ಸಂಚರಿಸಿದ ಕಾರಣ ಭಾರೀ ದುರಂತ ತಪ್ಪಿದೆ. ಘಟನೆಯಲ್ಲಿ ಟ್ಯಾಂಕರ್ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾರೆ.

    ಟ್ಯಾಂಕರ್ ನಲ್ಲಿದ್ದ ಡಿಸೇಲ್ ಸೊರಿಕೆಯಾಗುತ್ತಿರುವುದನ್ನು ಕಂಡ ಗ್ರಾಮಸ್ಥರು ಡಬ್ಬಿ ಹಾಗೂ ಬಕೆಟ್ ಗಳಲ್ಲಿ ಡಿಸೇಲ್ ತುಂಬಿಕೊಂಡು ಹೋಗುತ್ತಿದ್ದ ದೃಶ್ಯ ಕಂಡು ಬಂತು.

    ಭೀಮರಾಯನ ಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ – ಅರ್ಧ ಟ್ಯಾಂಕರ್ ಡೀಸೆಲ್ ರಸ್ತೆಪಾಲು

    ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ – ಅರ್ಧ ಟ್ಯಾಂಕರ್ ಡೀಸೆಲ್ ರಸ್ತೆಪಾಲು

    ಕಲಬುರಗಿ: ಕಲಬುರಗಿ-ಜೇವರ್ಗಿ ಹೆದ್ದಾರಿಯಲ್ಲಿರುವ ನದಿ ಸಿನ್ನೂರ ಗ್ರಾಮದಲ್ಲಿ ರಿಲಯನ್ಸ್ ಪೆಟ್ರೋಲ್ ಬಂಕ್‍ಗೆ ಸೇರಿದ ಡೀಸೆಲ್ ಟ್ಯಾಂಕರ್ ಪಲ್ಟಿಯಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ.

    ಟ್ಯಾಂಕರ್ ಪಲ್ಟಿಯಾಗುತ್ತಿದ್ದಂತೆಯೇ ನಡುರಸ್ತೆಯಲ್ಲಿಯೇ ಅರ್ಧ ಟ್ಯಾಂಕರ್ ಡೀಸೆಲ್ ಸೋರಿ ಹೋಗಿತ್ತು. ಇನ್ನು ವಿಷಯ ತಿಳಿದ ಇನ್ನೊಂದು ಟ್ಯಾಂಕರ್ ಸ್ಥಳಕ್ಕೆ ದೌಡಾಯಿಸಿದ್ದು, ಉಳಿದ ಡೀಸೆಲ್ ಅದಕ್ಕೆ ತುಂಬಿಸಲಾಗುತ್ತಿದೆ. ಈ ಕಾರ್ಯಾಚರಣೆಯಿಂದ ಬೀದರ್- ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಕಿಲೋ ಮೀಟರ್‍ಗಟ್ಟಲೇ ವಾಹನಗಳು ಸಾಲು ಸಾಲು ನಿಂತಿವೆ. ಹೀಗಾಗಿ ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ.

    ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ಸ್ಥಳಕ್ಕೆ ಬಂದಿದ್ದಾರೆ. ಫರಹತಾಬಾದ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.