Tag: ಪವನ್ ಭಟ್

  • ಅಜಯ್ ರಾವ್ ನೂತನ ಸಿನಿಮಾಗೆ ‘ಯುದ್ಧಕಾಂಡ’ ಟೈಟಲ್ ಫಿಕ್ಸ್

    ಅಜಯ್ ರಾವ್ ನೂತನ ಸಿನಿಮಾಗೆ ‘ಯುದ್ಧಕಾಂಡ’ ಟೈಟಲ್ ಫಿಕ್ಸ್

    ತಾಜ್ ಮಹಲ್, ಕೃಷ್ಣ ಲೀಲಾ, ಕೃಷ್ಣ ರುಕ್ಮಿಣಿ ಖ್ಯಾತಿಯ ನಟ ಅಜಯ್ ರಾವ್ ಸ್ಯಾಂಡಲ್ ವುಡ್ ಯುವ ನಿರ್ದೇಶಕನೊಂದಿಗೆ ಹೊಸ ಸಿನಿಮಾ ಘೋಷಿಸಿದ್ದಾರೆ. ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದ್ದು, ಚಿತ್ರಕ್ಕೆ ‘ಯುದ್ಧಕಾಂಡ’ ಎಂದು ಟೈಟಲ್ ಇಡಲಾಗಿದೆ. ಸಖತ್ ಇಂಟ್ರಸ್ಟಿಂಗ್ ಆಗಿರೋ ಟೈಟಲ್ ಟೀಸರ್ ಸಿನಿರಸಿಕರ ಗಮನ ಸೆಳೆಯುತ್ತಿದೆ.

    ಈ ಚಿತ್ರವನ್ನು ಅಜಯ್ ರಾವ್ ತಮ್ಮದೇ ನಿರ್ಮಾಣ ಸಂಸ್ಥೆ ‘ಶ್ರೀಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್’ ಮತ್ತು ‘ಅಜಯ್ ರಾವ್ ಪ್ರೊಡಕ್ಷನ್ಸ್’ ನಡಿ ನಿರ್ಮಾಣ ಮಾಡುತ್ತಿದ್ದಾರೆ. ಈ ಮೂಲಕ ಕೃಷ್ಣ ಲೀಲಾ ಸಿನಿಮಾ ನಂತರ ಮತ್ತೊಮ್ಮೆ ನಿರ್ಮಾಣ ಸಾಹಸಕ್ಕೆ ಮುಂದಾಗಿದ್ದಾರೆ. ಚಿತ್ರದಲ್ಲಿ ವಕೀಲರಾಗಿ ಕಾಣಿಸಿಕೊಳ್ಳುತ್ತಿರುವ ಅಜಯ್ ರಾವ್ ಸಿನಿಮಾವನ್ನು ವಕೀಲರಿಂದಲೇ ಲಾಂಚ್ ಮಾಡಿಸಿದ್ದು ವಿಶೇಷವಾಗಿತ್ತು. ಇದನ್ನೂ ಓದಿ: ಮದುವೆ ಬಗ್ಗೆ ವೈಷ್ಣವಿ ತುಂಬಾ ಕನಸು ಕಂಡಿದ್ದಳು: ತಂದೆ ರವಿಕುಮಾರ್

    ‘ಯುದ್ಧಕಾಂಡ’ ಎಂದಾಗ ಎಲ್ಲರಿಗೂ ನೆನಪಾಗೋದು ಲೆಜೆಂಡರಿ ರವಿ ಸರ್ ಸಿನಿಮಾ. ಆ ಸಿನಿಮಾದ ನಿರ್ದೇಶಕರಾದ ಕೆ. ವಿ ರಾಜು ಸರ್ ಜೊತೆ ನಾನು ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದೇನೆ ಅದು ನನ್ನ ಅದೃಷ್ಟ. ಈ ಸಿನಿಮಾ ಲಾಂಚ್ ಮಾಡೋವಾಗ ಮೊದಲು ರವಿ ಸರ್ ಭೇಟಿ ಮಾಡಿ ಆಶೀರ್ವಾದ ತೆಗೆದುಕೊಂಡು ಬಂದೆ. ಒಳ್ಳೆದಾಗ್ಲಿ ಎಂದು ಆಶೀರ್ವಾದ ಮಾಡಿದ್ರು. ಆದ್ರೆ ಆಗ ಬಂದ ‘ಯುದ್ಧಕಾಂಡ’ ಚಿತ್ರಕ್ಕೂ ಈ ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ. ಇದು ರಿಮೇಕ್ ಸಿನಿಮಾ ಕೂಡ ಅಲ್ಲ ಎಂದು ಅಜಯ್ ರಾವ್ ಮಾಹಿತಿ ಹಂಚಿಕೊಂಡ್ರು.

    ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು 20 ವರ್ಷ ಆಯ್ತು. ನಟನಾಗಿ ಯಶಸ್ಸು, ಸೋಲು ಎರಡನ್ನು ನೋಡಿದ್ದೇನೆ. ಕೇವಲ ನಟನಾಗಿ ಉಳಿಯದೇ ಸಿನಿಮಾದ ಎಲ್ಲಾ ಕ್ಷೇತ್ರದಲ್ಲಿ ಪ್ರಯೋಗ ಮಾಡಬೇಕು ಎಂದುಕೊಂಡು ಬೆಂಗಳೂರಿಗೆ ಬಂದವನು ನಾನು. ಹೀರೋ ಆಗಿದ್ದವನು ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿಯೂ ಮಾಡಿದ್ದೇನೆ. ಕೃಷ್ಣ ಲೀಲಾ ಸಿನಿಮಾ ಮೂಲಕ ನಿರ್ಮಾಪಕನೂ ಆಗಿದ್ದೇನೆ. ಇದೀಗ ಏಳು ವರ್ಷದ ನಂತರ ಎರಡನೇ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದೇನೆ ಎಂದು ಚಿತ್ರರಂಗದ ಜರ್ನಿಯನ್ನು ಮೆಲುಕು ಹಾಕಿದ್ರು ಅಜಯ್ ರಾವ್.

    ‘ಯುದ್ಧಕಾಂಡ’ ಸಿನಿಮಾವನ್ನು ಕಟಿಂಗ್ ಶಾಪ್ ಸಿನಿಮಾ ಖ್ಯಾತಿಯ ಪವನ್ ಭಟ್ ನಿರ್ದೇಶಿಸುತ್ತಿದ್ದಾರೆ. ಕಾರ್ತಿಕ್ ಶರ್ಮಾ ಕ್ಯಾಮೆರಾ ವರ್ಕ್, ಕೆ.ಬಿ.ಪ್ರವೀಣ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಸದ್ಯದಲ್ಲೇ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ ‘ಯುದ್ಧಕಾಂಡ’ ಚಿತ್ರತಂಡ.

    Live Tv
    [brid partner=56869869 player=32851 video=960834 autoplay=true]

  • ನಟ ಅಜಯ್ ರಾವ್ ನಿರ್ಮಾಣದಲ್ಲಿ ಮೂಡಿ ಬರಲಿದೆ ‘ಕಟಿಂಗ್ ಶಾಪ್’ ಸಿನಿಮಾ

    ನಟ ಅಜಯ್ ರಾವ್ ನಿರ್ಮಾಣದಲ್ಲಿ ಮೂಡಿ ಬರಲಿದೆ ‘ಕಟಿಂಗ್ ಶಾಪ್’ ಸಿನಿಮಾ

    ಈಗಾಗಲೇ ಕೃಷ್ಣ ಲೀಲಾ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ನಿರ್ಮಾಪಕರಾಗಿ ಗುರುತಿಸಿಕೊಂಡಿರುವ ನಟ ಅಜಯ್ ರಾವ್ (Ajay Rao), ಇದೀಗ ಮತ್ತೊಂದು ಸಿನಿಮಾವನ್ನು ತಯಾರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಬಾರಿ ಹೊಸ ಹುಡುಗರಿಗೆ ಅವರು ಮನೆ ಹಾಕಿದ್ದು, ಹೊಸ ಬಗೆಯ ಸಿನಿಮಾವನ್ನು ಕನ್ನಡದ ಪ್ರೇಕ್ಷಕರಿಗೆ ನೀಡಲು ಮುಂದೆ ಬಂದಿದ್ದಾರೆ. ಈ ಚಿತ್ರದ ಮೂಲಕ ಹೊಸ ಹುಡುಗರು ಸಿನಿಮಾ ರಂಗಕ್ಕೆ ಪರಿಚಯವಾಗುತ್ತಿರುವುದು ವಿಶೇಷ.

    ಚಂದನವನದ ಪ್ರತಿಭಾವಂತ ನಟ ಅಜಯ್ ರಾವ್ ಹೊಸದೊಂದು ಸಿನಿಮಾಗೆ ಸಜ್ಜಾಗುತ್ತಿದ್ದು, ಪವನ್ ಭಟ್ (Pawan Bhatt) ನಿರ್ದೇಶನದ ಚಿತ್ರದಲ್ಲಿ ನಾಯಕ ನಟರಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ನಿರ್ಮಾಣವನ್ನು ಅಜಯ್ ರಾವ್ ಮಾಡುತ್ತಿದ್ದು, ಈ ಮೂಲಕ ಕೃಷ್ಣ ಲೀಲಾ (Krishna Leela) ಸಿನಿಮಾ ನಂತರ ಮತ್ತೊಮ್ಮೆ ನಿರ್ಮಾಣ ಸಾಹಸಕ್ಕೆ ಮುಂದಾಗುತ್ತಿರುವುದು ವಿಶೇಷ. ಇದನ್ನೂ ಓದಿ:ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಸಿನಿಮಾದ ಟೈಟಲ್ ಲಾಂಚ್ ಗೆ ಮುಹೂರ್ತ ಫಿಕ್ಸ್

    ನಿರ್ದೇಶಕ ಪವನ್ ಭಟ್ ಕಥೆ ಕೇಳಿ ಇಂಪ್ರೆಸ್ ಆಗಿರುವ ಅಜಯ್ ರಾವ್ ತಮ್ಮದೇ ಶ್ರೀಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್ ಬ್ಯಾನರ್ ನಡಿ ಸಿನಿಮಾ ನಿರ್ಮಾಣ ಮಾಡಲು ಡಿಸೈಡ್ ಮಾಡಿದ್ದಾರೆ. ‘ಕಟಿಂಗ್ ಶಾಪ್’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಪವನ್ ಭಟ್ ಎರಡನೇ ಸಿನಿಮಾವಿದು.  ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿಯಾಗಿದ್ದು ಹೊಸ ಕಲಾವಿದರಿಗಾಗಿ ಹುಡುಕಾಟ ನಡೆಸುತ್ತಿದೆ. ಸದ್ಯದಲ್ಲೇ ಟೈಟಲ್ ಹಾಗೂ ಚಿತ್ರದ ಬಗೆಗಿನ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ ಚಿತ್ರತಂಡ.

    Live Tv
    [brid partner=56869869 player=32851 video=960834 autoplay=true]

  • Breaking- ಆಸ್ಕರ್ ಅಂಗಳದಲ್ಲಿರುವ ಗುಜರಾತಿ ಚಿತ್ರಕ್ಕೆ ಕನ್ನಡದ ಹುಡುಗನೇ ಸಂಕಲನಕಾರ: ಪವನ್ ಭಟ್ ಎಂಬ ಎಡಿಟರ್

    Breaking- ಆಸ್ಕರ್ ಅಂಗಳದಲ್ಲಿರುವ ಗುಜರಾತಿ ಚಿತ್ರಕ್ಕೆ ಕನ್ನಡದ ಹುಡುಗನೇ ಸಂಕಲನಕಾರ: ಪವನ್ ಭಟ್ ಎಂಬ ಎಡಿಟರ್

    ಗುಜರಾತಿ ಭಾಷೆಯಲ್ಲಿ ಮೂಡಿ ಬಂದಿರುವ ‘ಚೆಲ್ಲೋ ಶೋ’ ಸಿನಿಮಾ 2023ರ ಆಸ್ಕರ್ ಪ್ರಶಸ್ತಿಗಾಗಿ ಭಾರತದಿಂದ ಅಧಿಕೃತವಾಗಿ ಸ್ಪರ್ಧಿಸುತ್ತಿದೆ.  ಈಗಾಗಲೇ ಮೂವತ್ತು ಹೆಚ್ಚು ದೇಶಗಳಲ್ಲಿ ಈ ಸಿನಿಮಾ ರಿಲೀಸ್ ಆಗಿದ್ದು, ಭಾರತದಲ್ಲಿ ಇನ್ನೂ ಬಿಡುಗಡೆ ಆಗಬೇಕಿದೆ. ಅದಕ್ಕೂ ಮೊದಲು ಆಸ್ಕರ್ ಪ್ರಶಸ್ತಿಯ ರೇಸ್ ನಲ್ಲಿ ಈ ಚಿತ್ರ ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ. ಪಾನ್ ನಲಿನ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾ, ಚಿತ್ರರಂಗದ ಬೆಳವಣಿಗೆ ಕುರಿತಾದ ಕಥಾ ಹಂದರವನ್ನೂ ಹೊಂದಿದೆ. ಈ ಚಿತ್ರಕ್ಕೆ ಕನ್ನಡದ ಪವನ್ ಭಟ್ ಎನ್ನುವವರು ಸಂಕಲನದ ಕೆಲಸ ಮಾಡಿದ್ದಾರೆ.

    ಸದ್ಯ ಬೆಂಗಳೂರಿನಲ್ಲಿ ವಾಸವಾಗಿರುವ ಪವನ್ ಭಟ್ ಮೂಲತಃ ಉಪ್ಪಿನಂಗಡಿಯ ಹುಡುಗ. ಓದಿದ್ದು ಇಂಜಿನಿಯರಿಂಗ್. ಆದರೆ, ಆಸಕ್ತಿ ಬೆಳೆದದ್ದು ಸಿನಿಮಾ ಎಡಿಟಿಂಗ್ ನತ್ತ. ಹಾಗಾಗಿ ಮೊದಲು ಎಂಟು ವರ್ಷಗಳ ಕಾಲ ಮುಂಬೈನಲ್ಲಿ ಕೆಲಸ ಮಾಡಿದ್ದಾರೆ. ಈಗಾಗಲೇ ಇಪ್ಪತ್ತಕ್ಕೂ ಹೆಚ್ಚು ಸಿನಿಮಾಗಳಿಗೆ ಎಡಿಟಿಂಗ್ ಮಾಡಿದ ಹೆಗ್ಗಳಿಕೆ ಇವರದ್ದು. ಸೀನಿಯರ್ ಎಡಿಟರ್ ಜೊತೆ ಸೇರಿಕೊಂಡು ಚೆಲ್ಲೋ ಶೋ ಸಿನಿಮಾಗಾಗಿ ಭಟ್ ಕೆಲಸ ಮಾಡಿದ್ದಾರೆ. ಈಗ ಅವರು ಸಂಕಲಿಸಿದ ಸಿನಿಮಾಗೆ ಆಸ್ಕರ್ ಗೆ ಹೋಗುವಂತಹ ಅವಕಾಶ ಸಿಕ್ಕಿದೆ. ಇದನ್ನೂ ಓದಿ:‘ಸೈಮಾ ಅವಾರ್ಡ್’ ಐಷಾರಾಮಿ ಹೋಟೆಲ್‌ನಲ್ಲಿ ಸೆಲೆಬ್ರಿಟಿಗಳ ತಡರಾತ್ರಿ ಪಾರ್ಟಿ : FIR ದಾಖಲು

    ತಮ್ಮ ಸಿನಿಮಾ ಆಯ್ಕೆಗೆ ನಿರ್ದೇಶಕರು ಕೃತಜ್ಞತೆ ತಿಳಿಸಿದ್ದಾರೆ. ಒಂಬತ್ತು ವರ್ಷದ ಹುಡುಗನೊಬ್ಬ ಡಿಜಿಟಲ್ ಕ್ರಾಂತಿಯ ಮಾಂತ್ರಿಕತೆ ಬೆನ್ನು ಬೀಳುವಂತಹ ಕಥೆಯು ಸಿನಿಮಾದಲ್ಲಿ ಇದೆಯಂತೆ. ನಿರ್ದೇಶಕರ ಜೀವನದಲ್ಲಿ ನಡೆದ ಹಲವು ಘಟನೆಗಳನ್ನೂ ಸಿನಿಮಾದಲ್ಲಿ ಬಳಸಿದ್ದಾರಂತೆ. ಈ ಸಿನಿಮಾ ಈಗಾಗಲೇ ವಿವಿಧ ದೇಶಗಳಲ್ಲಿ ನಡೆದ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಿ ಹತ್ತಾರು ಪ್ರಶಸ್ತಿಗಳನ್ನು ಕೂಡ ಪಡೆದುಕೊಂಡಿದೆ ಎನ್ನುವುದು ವಿಶೇಷ.

    Live Tv
    [brid partner=56869869 player=32851 video=960834 autoplay=true]