Tag: ಪವಿತ್ರಾಗೌಡ

  • ಇಂದು ಜಾಮೀನು ಭವಿಷ್ಯ; ಕೋರ್ಟ್‌ ತೀರ್ಪಿಗೂ ಮುನ್ನವೇ ರಾಯರ ಮೊರೆ ಹೋದ ಪವಿತ್ರಾಗೌಡ

    ಇಂದು ಜಾಮೀನು ಭವಿಷ್ಯ; ಕೋರ್ಟ್‌ ತೀರ್ಪಿಗೂ ಮುನ್ನವೇ ರಾಯರ ಮೊರೆ ಹೋದ ಪವಿತ್ರಾಗೌಡ

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಆರೋಪಿ ನಟ ದರ್ಶನ್ ಸೇರಿ ಏಳು ಮಂದಿಯ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ. ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ವಿಚಾರಣೆ ಆರಂಭವಾಗಿದ್ದು, ದರ್ಶನ್‌ ಪರ ಹಿರಿಯ ವಕೀಲ ಸಿದ್ಧಾರ್ಥ್ ದವೆ ವಾದ ಮಂಡನೆ ಶುರು ಮಾಡಿದ್ದಾರೆ. ವಾದ ಆಲಿಸಿದ ಬಳಿಕ ಇಂದೇ ತೀರ್ಪು ಪ್ರಕಟಿಸುವ ಸಾಧ್ಯತೆಯಿದೆ.

    ದರ್ಶನ್‌ ಸೇರಿ ಎ1 ಆರೋಪಿ ಆಗಿರುವ ಪವಿತ್ರಾಗೌಡ (Pavithra Gowda) ಅವರ ಜಾಮೀನು ಭವಿಷ್ಯವೂ ಇಂದೇ ನಿರ್ಧಾರವಾಗಲಿದೆ. ಈ ಹಿನ್ನೆಲೆ ಕೋರ್ಟ್‌ ತೀರ್ಪಿಗೂ ಮುನ್ನವೇ ಪವಿತ್ರಾಗೌಡ ರಾಯರ ಮೊರೆ ಹೋಗಿದ್ದಾರೆ. ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಗುರು ರಾಘವೇಂದ್ರ ಸ್ವಾಮಿಗಳ ಫೋಟೋ ಹಂಚಿಕೊಂಡಿರುವ ನಟಿ ಕೈ ಮುಗಿಯುತ್ತಿರುವ ಎಮೋಜಿಯನ್ನೂ ಬಳಸಿದ್ದಾರೆ. ಈ ಮೂಲಕ ದೇವರ ಮೇಲೆ ಭಾರ ಹಾಕಿದ್ದೀನಿ, ಎಲ್ಲವನ್ನೂ ಆ ದೇವರು ನೋಡಿಕೊಳ್ತಾನೆ ಅನ್ನೋ ಪರೀಕ್ಷ ಸಂದೇಶ ಕೊಟ್ಟಿದ್ದಾರೆ. ಇದನ್ನೂ ಓದಿ: ಬೆಂಗಳೂರು | ಗರ್ಭಿಣಿ ಅನುಮಾನಾಸ್ಪದ ಸಾವು – ಪತ್ನಿ ಶವದ ಮುಂದೆ 2 ದಿನ ಕಳೆದಿದ್ದ ಪತಿ

    ಕಳೆದ ಜು.22ರ ಮಂಗಳವಾರವೇ ಈ ಅರ್ಜಿ ವಿಚಾರಣೆ ಮುಗಿಯಬೇಕಿತ್ತು. ಆದ್ರೆ ಅಂದು ಕಪಿಲ್‌ ಸಿಬಲ್‌ ಕೋರ್ಟ್‌ಗೆ ಗೈರಾಗಿದ್ದರು. ಬಳಿಕ ದರ್ಶನ್‌ (Darshan) ಪರವಾಗಿ ಕೋರ್ಟ್ ಮುಂದೆ ಹಾಜರಾಗಿದ್ದ ವಕೀಲ ಸಿದ್ದಾರ್ಥ ದವೆ, ಪ್ರಕರಣದ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಕಳೆದ ರಾತ್ರಿ ಈ ಪ್ರಕರಣ ನನಗೆ ಬಂದಿದೆ. ಇದರ ಬಗ್ಗೆ ಅಧ್ಯಯನ ಮಾಡಬೇಕಿದೆ ಸ್ವಲ್ಪ ಸಮಯ ಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ನ್ಯಾ.ಪಾರ್ದಿವಾಲ ನೇತೃತ್ವದ ದ್ವಿ ಸದಸ್ಯ ಪೀಠ ಗುರುವಾರ ವಿಚಾರಣೆ ನಡೆಸುವುದಾಗಿ ತಿಳಿಸಿತ್ತು.

    ಇದೇ ವೇಳೆ ಕೋರ್ಟ್ ಲಿಖಿತ ರೂಪದಲ್ಲಿ ದಾಖಲೆ ಸಿದ್ಧಪಡಿಸಲು ಹಾಗೂ 75% ಲಿಖಿತ ರೂಪದಲ್ಲಿ ವಾದ ಮಂಡಿಸ ಸೂಚಿಸಿತ್ತು. ಕೆಲ ಕಾಲ ಅಷ್ಟೇ ವಾದ ಮಂಡನೆಗೆ ಅವಕಾಶ ಕೊಡುವುದಾಗಿ ಪೀಠ ಹೇಳಿತ್ತು. ಇದನ್ನೂ ಓದಿ: ಇಸ್ಪೀಟ್ ಅಡ್ಡೆ ಮೇಲೆ ದಾಳಿ – ಬರೋಬ್ಬರಿ 49 ಲಕ್ಷ ಹಣ, 4 ಕಾರು, 15 ಮೊಬೈಲ್‌ ಸೀಜ್‌, 19 ಮಂದಿ ಬಂಧನ

  • ನಾಳೆ ದರ್ಶನ್‌ ಪಾಲಿಗೆ ಬಿಗ್‌ ಡೇ – ಸುಪ್ರೀಂ ಕೋರ್ಟ್‌ ತೀರ್ಪಿನತ್ತ ಚಿತ್ತ, ಮತ್ತೆ ಜೈಲುಪಾಲಾಗ್ತಾರಾ ನಟ?

    ನಾಳೆ ದರ್ಶನ್‌ ಪಾಲಿಗೆ ಬಿಗ್‌ ಡೇ – ಸುಪ್ರೀಂ ಕೋರ್ಟ್‌ ತೀರ್ಪಿನತ್ತ ಚಿತ್ತ, ಮತ್ತೆ ಜೈಲುಪಾಲಾಗ್ತಾರಾ ನಟ?

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌ (Darshan), ಪವಿತ್ರಾಗೌಡ ಸೇರಿ ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ರದ್ದಾಗುತ್ತಾ ಅಥವಾ ಮುಂದುವರೆಯುತ್ತಾ ಎಂಬುದು ನಾಳೆ (ಜು.22) ತೀರ್ಮಾನವಾಗಲಿದೆ. ಸರ್ಕಾರದ ಪರ ವಿಚಾರಣೆ ಕೇಳಿರುವ ಸುಪ್ರಿಂ ಕೋರ್ಟ್ (Supreme Court) ನಾಳೆ ದರ್ಶನ್ ಸೇರಿ 7 ಆರೋಪಿಗಳ ಪರ ವಾದ ಆಲಿಸಲಿದೆ. ಇದನ್ನೂ ಓದಿ:  ಬಿಕ್ಲು ಶಿವ ಕೊಲೆ ಕೇಸ್‌ಗೆ ಟ್ವಿಸ್ಟ್‌ – ಪ್ರಮುಖ ಆರೋಪಿಯಿಂದ ನಟಿ ರಚಿತಾ ರಾಮ್‌ಗೆ ಭರ್ಜರಿ ಗಿಫ್ಟ್

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್, ಪವಿತ್ರಾಗೌಡ (Pavithra Gowda) ಹಾಗೂ ಇತರೆ ಆರೋಪಿಗಳ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆಯು ಸುಪ್ರೀಂ ಕೋರ್ಟ್‌ನಲ್ಲಿ ಮಂಗಳವಾರ ಮುಂದುವರಿಯಲಿದೆ. ನ್ಯಾ.ಜೆ ಬಿ ಪಾರ್ದಿವಾಲಾ ನೇತೃತ್ವದ ದ್ವಿಸದಸ್ಯ ಪೀಠವು ವಿಚಾರಣೆ ಮುಂದುವರಿಸಲಿದೆ. ರಾಜ್ಯ ಸರ್ಕಾರ ಪರ ವಕೀಲರ ವಾದ ಆಲಿಸಿ, ದಾಖಲೆಗಳನ್ನು ಸ್ವೀಕರಿಸಿರುವ ಪೀಠ, ನಾಳೆ ಆರೋಪಿಗಳ ಪರ ವಕೀಲರ ವಾದ ಮಂಡನೆಯನ್ನು ಕೇಳಲಿದ್ದು, ಬಳಿಕ ಅಂತಿಮ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಇದನ್ನೂ ಓದಿ:  SBI ಬ್ಯಾಂಕ್‌ಗೆ 8 ಕೋಟಿ ವಂಚನೆ – 20 ವರ್ಷದಿಂದ ಸಿಗದವರು ಇಮೇಜ್ ಸರ್ಚ್ ಅನಾಲಿಟಿಕ್ಸ್‌ ಸಾಫ್ಟ್‌ವೇರ್‌ನಿಂದ ಸಿಬಿಐಗೆ ಲಾಕ್

    ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ಸರ್ಕಾರ, ಪೊಲೀಸ್ ಇಲಾಖೆ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ ಲೂಥ್ರಾ ವಾದ ಮಂಡಿಸಿದ್ದು, ನಟ ದರ್ಶನ್ ಪರವಾಗಿ ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ ನಿಯೋಜಿಸಲಾಗಿತ್ತು. ಆದರೆ ಅಭಿಷೇಕ್ ಮನು ಸಿಂಘ್ವಿ ಸದ್ಯ ಕರ್ನಾಟಕದ ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಹಾಗೂ ಕರ್ನಾಟಕ ಸರ್ಕಾರದ ಪರ ವಾದ ಮಂಡನೆ ಮಾಡುತ್ತಿದ್ದಾರೆ. ಅವರೇ ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ಸರ್ಕಾರ ವಿರುದ್ಧ ವಾದ ಮಾಡುವುದು ಸೂಕ್ತವಲ್ಲ ಎಂಬ ಕಾರಣಕ್ಕೆ ದರ್ಶನ್ ಈಗ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ನೇಮಿಸಿಕೊಂಡಿದ್ದು ಮಂಗಳವಾರ ಸಿಬಲ್ ವಾದ ಮಂಡಿಸಲಿದ್ದಾರೆ. ಇದಾದ ಬಳಿಕ ಉಳಿದ ಆರೋಪಿಗಳ ಪರ ವಕೀಲರು ವಾದ ಮಂಡಿಸಲಿದ್ದಾರೆ.

    ಇನ್ನು ಕಳೆದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಹೈಕೋರ್ಟ್ ತೀರ್ಪಿನ ಬಗ್ಗೆ ಬೇಸರ ವ್ಯಕ್ತಪಡಿಸಿತ್ತು. ರಾಜ್ಯ ಸರ್ಕಾರ ಸಲ್ಲಿಸಿರುವ ದಾಖಲೆಗಳನ್ನು ಪರಿಶೀಲಿಸಿದ್ದೇವೆ. ಹೈಕೋರ್ಟ್ ಆದೇಶದಲ್ಲಿ ಚಡಪಡಿಕೆ ಎದ್ದು ಕಾಣುತ್ತಿದೆ. ಜಾಮೀನು ನೀಡಲು ಹೇಗಾದ್ರೂ ಒಂದು ಅಂಶ ಸಿಗಲಿ ಎನ್ನುವ ಚಡಪಡಿಕೆ ಕಾಣುತ್ತಿದೆ, ಹೈಕೋರ್ಟ್‌ ಸೂಕ್ತವಾಗಿ ತನ್ನ ವಿವೇಚನೆ ಬಳಸಿಲ್ಲ ಎಂದು ನ್ಯಾ.ಪಾರ್ದಿವಾಲ ಅಭಿಪ್ರಾಯಪಟ್ಟಿದ್ದರು.

    ಮಂಗಳವಾರ ವಾದ ಆಲಿಸಿದ ಬಳಿಕ ಸುಪ್ರೀಂ ಕೋರ್ಟ್ ನಾಳೆಯೇ ಆದೇಶ ನೀಡುವ ಸಾಧ್ಯತೆ ಇದೆ. ಹೀಗಾಗೀ ಕೊಲೆ ಕೇಸ್‌ನ ಆರೋಪಿ ಎ1 ಪವಿತ್ರಾ, ಎ2 ದರ್ಶನ್ ಮತ್ತೆ ಜೈಲಿಗೆ ಹೋಗ್ತಾರಾ ಅಥವಾ ಸೇಫ್ ಆಗ್ತಾರಾ ಅಂತ ಗೊತ್ತಾಗಲಿದೆ.

  • ಬೇಲ್‌ ನೀಡುವಾಗ ಹೈಕೋರ್ಟ್ ತನ್ನ ವಿವೇಚನೆ ಬಳಸಿಲ್ಲ – ನ್ಯಾ.ಪರ್ದಿವಾಲಾ ಅಭಿಪ್ರಾಯ

    ಬೇಲ್‌ ನೀಡುವಾಗ ಹೈಕೋರ್ಟ್ ತನ್ನ ವಿವೇಚನೆ ಬಳಸಿಲ್ಲ – ನ್ಯಾ.ಪರ್ದಿವಾಲಾ ಅಭಿಪ್ರಾಯ

    – ಜು.22ಕ್ಕೆ ದರ್ಶನ್‌ ಜಾಮೀನು ಭವಿಷ್ಯ ನಿರ್ಧಾರ

    ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜಾಮೀನು ಪಡೆದು ಶೂಟಿಂಗ್, ವಿದೇಶ ಪ್ರವಾಸ ಅಂತಾ ಜಾಲಿ ಮೂಡ್‌ನಲ್ಲಿದ್ದ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್ ಕೊಟ್ಟಿದೆ. ಹೈಕೋರ್ಟ್ ತೀರ್ಪಿನ ಬಗ್ಗೆ ಪರಿಶೀಲಿಸಿರುವ ಸುಪ್ರೀಂ ಕೋರ್ಟ್ (Supreme Court) ಬದಲಾವಣೆಯ ಬಗ್ಗೆ ಪರೋಕ್ಷವಾಗಿ ತನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ಮಂಗಳವಾರ (ಜು.22) ಅಂತಿಮ ವಿಚಾರಣೆ ನಡೆಸಿ ಅಂದೇ ಆದೇಶ ನೀಡುವುದಾಗಿ ಸುಪ್ರೀಂ ಕೋರ್ಟ್ ಹೇಳಿದ್ದು ಅಂದು ದರ್ಶನ ಪವಿತ್ರಾಗೌಡ (Pavithra Gowda) ಸೇರಿ ಏಳು ಮಂದಿಯ ಭವಿಷ್ಯ ನಿರ್ಧಾರವಾಗಲಿದೆ.

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ, ಜಾಮೀನು ಪಡೆದು ಸದ್ಯ ಶೂಟಿಂಗ್‌ಗಾಗಿ ವಿದೇಶಿ ಪ್ರವಾಸ ಅಂತಾ ಬ್ಯುಸಿಯಾಗಿರುವ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್ ಕೊಡುವ ಸಾಧ್ಯತೆ ಇದೆ. ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು (Bengaluru Police) ಸಲ್ಲಿಕೆ ಮಾಡಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ನ್ಯಾ.ಪರ್ದಿವಾಲಾ ನೇತೃತ್ವದ ದ್ವಿ-ಸದಸ್ಯ ಪೀಠ ಹೈಕೋರ್ಟ್ ಆದೇಶದ ಬಗ್ಗೆ ಭಿನ್ನಾಭಿಪ್ರಾಯಗಳನ್ನ ವ್ಯಕ್ತಪಡಿಸಿದೆ.

    ಜಾಮೀನು ನೀಡುವಾಗ ಹೈಕೋರ್ಟ್ ತನ್ನ ವಿವೇಚನೆಯನ್ನ ಸೂಕ್ತವಾಗಿ ಬಳಸಿಲ್ಲ ಎಂದ ನ್ಯಾ. ಪರ್ದಿವಾಲಾ. ಈ ಬಗ್ಗೆ ಏನು ಹೇಳಬಯಸುತ್ತೀರಿ ಎಂದು ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್‌ಗೆ ಪ್ರಶ್ನಿಸಿದರು. ಹೈಕೋರ್ಟ್ ಆದೇಶವನ್ನ ಹೇಗೆ ನೀಡಿದೆ ಅನ್ನೋದನ್ನ ನೀವು ಗಮನಿಸಿರಬಹುದು ಎಂದು ಸಿಬಲ್ ಅವರಿಗೆ ಹೇಳಿದ ನ್ಯಾಯಾಲಯ ಕೇಳಿತು. ಇದನ್ನೂ ಓದಿ: ಮಂಗಳೂರು| ಕಿರಿಯ ವಯಸ್ಸಿನಲ್ಲೇ ರೋಲ್ಸ್‌ ರಾಯ್ಸ್‌ನಲ್ಲಿ ಉದ್ಯೋಗ; ವರ್ಷಕ್ಕೆ 72 ಲಕ್ಷ ಸಂಬಳ- ಯುವತಿಗೆ ಸನ್ಮಾನ

    22ಕ್ಕೆ ಜಾಮೀನು ಭವಿಷ್ಯ ನಿರ್ಧಾರ
    ಇದಕ್ಕೆ ಪ್ರತಿಯಾಗಿ ದರ್ಶನ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಲು ಮುಂದಾಗಿದ್ದರು. ಈ ವೇಳೆ ಮಧ್ಯಪ್ರವೇಶ ಮಾಡಿದ ನ್ಯಾ. ಪರ್ದಿವಾಲಾ ಮಂಗಳವಾರ ಅಂತಿಮವಾದ ಮಂಡಿಸಿ, ಅಂದೇ ಈ ಬಗ್ಗೆ ತೀರ್ಪು ನೀಡಲಾಗುವುದು ಎಂದು ಹೇಳಿದರು. ಹೀಗಾಗೀ ಅಂದು ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ: ಮಣ್ಣಗುಂಡಿ ಬಳಿ ಗುಡ್ಡಕುಸಿತ, ಬೆಂ-ಮಂ ರಾ.ಹೆದ್ದಾರಿ ಬಂದ್

    ಮಂಗಳವಾರವೇ ಪವಿತ್ರಾ ಗೌಡ ಸೇರಿ ಇತರ ಐವರ ಭವಿಷ್ಯ 
    ಇನ್ನೂ ಮಂಗಳವಾರ ನಟ ದರ್ಶನ ಮಾತ್ರವಲ್ಲ, ಆಪ್ತೆ ಪವಿತ್ರಾ ಗೌಡ ಸೇರಿ ಇತರೆ ಐವರು ಆರೋಪಿಗಳ ಭವಿಷ್ಯವೂ ನಿರ್ಧಾರವಾಗಲಿದೆ. ದರ್ಶನ ಪರ ವಾದ ಆಲಿಸಿದ ಬಳಿಕ ಉಳಿದ ಆರೋಪಿಗಳ ಪರ ವಾದವನ್ನೂ ಕೋರ್ಟ್ ಆಲಿಸಲಿದೆ. ಇದಾದ ಬಳಿಕ ಕೋರ್ಟ್ ತನ್ನ ಅಂತಿಮ ಆದೇಶ ನೀಡಲಿದೆ. ಇದನ್ನೂ ಓದಿ: 40 ಲಕ್ಷ ರೂ. ವಹಿವಾಟು ನಡೆಸಿದ 6 ಸಾವಿರ ಮಂದಿಗೆ ನೋಟಿಸ್‌: ವಾಣಿಜ್ಯ ತೆರಿಗೆ ಇಲಾಖೆ

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ತನಿಖೆ ಮಾಡಿ ಚಾರ್ಜ್ ಶೀಟ್ ಕೂಡ ಸಲ್ಲಿಕೆಯಾಗಿದೆ. ಹೀಗಾಗಿ ಜಾಮೀನು ಸಿಗಬಹುದು ಮುಂದುವರಿಸಬಹುದು ಎನ್ನುವುದು ದರ್ಶನ ಮತ್ತು ಇತರೆ ಆರೋಪಿಗಳ ಪರ ವಕೀಲರ ಲೆಕ್ಕಾಚಾರ. ಆದ್ರೆ ಹೈಕೋರ್ಟ್ ಆದೇಶದ ಬಗ್ಗೆ ಭಿನ್ನಾಭಿಪ್ರಾಯ ಹೊಂದಿರುವ ಸುಪ್ರೀಂ ಕೋರ್ಟ್ ದರ್ಶನ್ ಗೆ ಜಾಮೀನು ನೀಡಿರುವುದಕ್ಕೆ ಅಚ್ಚರಿ ವ್ಯಕ್ತಪಡಿಸಿದೆ. ಹೀಗಾಗೀ ಜಾಮೀನು ರದ್ದಾಗುವ ಸಾಧ್ಯತೆ ಇದೆ ಅಂತಾರೆ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಚಂದ್ರಕಾಂತ್ ಅಂಗಡಿ.

  • ಕೊಲೆ ಆರೋಪಿ ದರ್ಶನ್‌ ಪಾಲಿಗೆ ಇಂದು ಬಿಗ್‌ ಡೇ

    ಕೊಲೆ ಆರೋಪಿ ದರ್ಶನ್‌ ಪಾಲಿಗೆ ಇಂದು ಬಿಗ್‌ ಡೇ

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿ 131 ದಿನಗಳ ಬಳಿಕ ಸೆರೆವಾಸದಿಂದ ಮುಕ್ತಿ ಪಡೆದಿರುವ ನಟ ದರ್ಶನ್​ಗೆ ಇಂದು ಬಿಗ್‌ ಡೇ ಆಗಿದೆ. ನಟ ದರ್ಶನ್ (Darshan), ಪವಿತ್ರಾ ಗೌಡ ಸೇರಿ ಪ್ರಮುಖ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ (Supreme Court) ವಿಚಾರಣೆ ನಡೆಸಲಿದೆ.

    ನ್ಯಾ. ಜೆ.ಬಿ ಪಾರ್ದ್ರಿವಾಲಾ ನೇತೃತ್ವದ ದ್ವಿ ಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದ್ದು ವಿಸ್ತೃತ ವಾದ ಆಲಿಸುವ ಸಾಧ್ಯತೆ ಇದೆ. ಕಳೆದ ವಿಚಾರಣೆಯಲ್ಲಿ ಪ್ರಕರಣದ ಬಗ್ಗೆ ಪ್ರಾಥಮಿಕ ವಿಚಾರಣೆಯನ್ನು ಕೋರ್ಟ್ ಆಲಿಸಿತ್ತು. ಪ್ರಕರಣದಲ್ಲಿ ದರ್ಶನ ಪಾತ್ರ ಏನು? ಪವಿತ್ರಾಗೌಡ ಯಾರು ಈ‌ಕೊಲೆಗೆ ಹೇಗೆ ಸಂಬಂಧ ಹಾಗೂ ದರ್ಶನ ಅಭಿಮಾನಿಗಳು ಬೆಂಬಲಿಗರನ್ನು ಹೇಗೆ ಹತ್ಯೆ ಮಾಡಿದರು ಎಂಬುದವರ ಬಗ್ಗೆ ಪೊಲೀಸರ ಪರ ವಕೀಲರಿಂದ ವಾದ ಕೇಳಿತ್ತು.

    ಅಲ್ಲದೇ ಬೆಂಗಳೂರು ಪೊಲೀಸರ ಮುಂದೆ ಕೋರ್ಟ್ ಎರಡು ಪ್ರಶ್ನೆ ಇಟ್ಟಿತ್ತು. ಕೊಲೆಯಲ್ಲಿ ದರ್ಶನ್‌ ನೇರ ಹಸ್ತಕ್ಷೇಪ ಅದಕ್ಕೆ ಪೂರಕವಾದ ಸಾಕ್ಷ್ಯಗಳ ಬಗ್ಗೆ ಮಾಹಿತಿ ಕೇಳಿತ್ತು. ಇಂದು ಈ ವಾದ ಮುಂದುವರಿಯಲಿದ್ದು ದರ್ಶನ್‌ ಪಾತ್ರದ ಬಗ್ಗೆ ಕೋರ್ಟ್‌ಗೆ ಇನ್ನಷ್ಟು ಮಾಹಿತಿಯನ್ನು ವಕೀಲರ ಮೂಲಕ ಪೊಲೀಸರು ನೀಡಲಿದ್ದಾರೆ.

    ಇದಾದ ಬಳಿಕ ದರ್ಶನ ಪರ ವಕೀಲರು ವಾದ ಮಂಡಿಸಲಿದ್ದು ಬಳಿಕ ಹೈಕೋರ್ಟ್ ನೀಡಿರುವ ಜಾಮೀನು ರದ್ದು ಮಾಡಬೇಕೆ, ಬೇಡ್ವೆ ಎನ್ನುವ ಬಗ್ಗೆ ತಿರ್ಮಾನಿಸಲಿದೆ. ಸದ್ಯ ಹೈಕೋರ್ಟ್ ನಿಂದ ಜಾಮೀನು ಪಡೆದು ಶೂಟಿಂಗ್ ನಲ್ಲಿ ತೊಡಗಿಕೊಂಡಿರುವ ದರ್ಶನ ವಿದೇಶಕ್ಕೂ ತೆರಳಿದ್ದಾರೆ. ಈ ನಡುವೆ ನಡೆಯುತ್ತಿರುವ ವಿಚಾರಣೆ ತೀವ್ರ ಕುತೂಹಲ‌ ಮೂಡಿಸಿದೆ.

  • ಲಿಫ್ಟ್‌ನಲ್ಲಿ ಹಠ ಹಿಡಿದು ದರ್ಶನ್ ನಂಬರ್ ಪಡೆದ ಪವಿತ್ರಾಗೌಡ

    ಲಿಫ್ಟ್‌ನಲ್ಲಿ ಹಠ ಹಿಡಿದು ದರ್ಶನ್ ನಂಬರ್ ಪಡೆದ ಪವಿತ್ರಾಗೌಡ

    ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಮಂಗಳವಾರ ಕೋರ್ಟ್‌ಗೆ ಹಾಜರಾಗಿದ್ದ ಆರೋಪಿಗಳಾದ ನಟ ದರ್ಶನ್ (Darshan) ಮತ್ತು ಪವಿತ್ರಾ ಗೌಡ (Pavithra Gowda) ಇಬ್ಬರೂ ಪರಸ್ಪರ ಭೇಟಿಯಾಗಿದ್ದಾರೆ.

    ಕೋರ್ಟ್‌ನಲ್ಲಿ ವಿಚಾರಣೆ ಮುಗಿಸಿ ಲಿಫ್ಟ್‌ನಲ್ಲಿ ಬರುವಾಗ ಇಬ್ಬರೂ ಮುಖಾಮುಖಿಯಾದರು. ಈ ವೇಳೆ ಫೋನ್ ನಂಬರ್ ಕೊಡುವಂತೆ ಪವಿತ್ರಾಗೌಡ ಹಠ ಮಾಡಿದರು. ನಂಬರ್ ಬೇಕೇ ಬೇಕು ಎಂದು ದುಂಬಾಲು ಬಿದ್ದರು. ಕೈಹಿಡಿದು ಫೋನ್ ನಂಬರ್ ನೀಡುವಂತೆ ಒತ್ತಾಯಿಸಿದರು. ಕೊನೆಗೆ ತನ್ನ ಫೋನ್ ನಂಬರ್ ಅನ್ನು ದರ್ಶನ್, ಪವಿತ್ರಾ ಮೊಬೈಲ್ ಪಡೆದುಕೊಂಡು ಡಯಲ್ ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: ವಿಚಾರಣೆ ಮುಗಿಸಿ ದರ್ಶನ್‌ ಕೈ ಹಿಡಿದುಕೊಂಡು ಹೊರ ಬಂದ ಪವಿತ್ರಾ ಗೌಡ

    ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಆರೋಪಿಗಳು ಇಂದು 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಪವಿತ್ರಾ ಗೌಡ ಬಿಳಿ ಬಣ್ಣದ ಸೀರೆ ಧರಿಸಿದ್ದರೆ ದರ್ಶನ್ ಕಪ್ಪು ಬಣ್ಣ ಡ್ರೆಸ್ ಧರಿಸಿದ್ದರು.

    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಬಿಡುಗಡೆಯಾದ ಬಳಿಕ ದರ್ಶನ್ ಮತ್ತು ಪವಿತ್ರಾ ಗೌಡ ದೂರ ಆಗಿದ್ದರು. ಪವಿತ್ರಾ ಜೊತೆಗೆ ಸ್ವತಃ ದರ್ಶನ್ ಅಂತರ ಕಾಯ್ದುಕೊಂಡಿದ್ದರು. ಈ ಹಿಂದೆ ಕೋರ್ಟ್ ಆಗಿಮಿಸಿದ್ದಾಗ ಪವಿತ್ರಾ ಜೊತೆ ದರ್ಶನ್ ಮಾತನಾಡುತ್ತಿರಲಿಲ್ಲ. ಇದನ್ನೂ ಓದಿ: ಭಾರತ ವಿರೋಧಿ ಚಟುವಟಿಕೆ – ಬ್ರಿಟಿಷ್‌ ಕಾಶ್ಮೀರಿ ಪ್ರೊಫೆಸರ್‌ ಸಾಗರೋತ್ತರ ಪೌರತ್ವ ರದ್ದು

    ಸದ್ಯ ದರ್ಶನ್ ‘ಡೆವಿಲ್’ ಸಿನಿಮಾ ಶೂಟಿಂಗ್ ಬ್ಯುಸಿಯಲ್ಲಿದ್ದಾರೆ. ಪವಿತ್ರಾ ಗೌಡ ಸ್ವಂತ ಬಿಸಿನೆಸ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಈಚೆಗಷ್ಟೇ ದರ್ಶನ್ ಮತ್ತು ವಿಜಯಲಕ್ಷ್ಮಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡರು. ಇತ್ತ ಪವಿತ್ರಾ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಕೆ ಮಾಡುತ್ತಿದ್ದಾರೆ.

  • ರೇಣುಕಾಸ್ವಾಮಿ ಕೊಲೆ ಕೇಸ್‌: ದರ್ಶನ್ ಜಾಮೀನು ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮೇ 14ಕ್ಕೆ ಮುಂದೂಡಿಕೆ

    ರೇಣುಕಾಸ್ವಾಮಿ ಕೊಲೆ ಕೇಸ್‌: ದರ್ಶನ್ ಜಾಮೀನು ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮೇ 14ಕ್ಕೆ ಮುಂದೂಡಿಕೆ

    ನವದೆಹಲಿ: ಚಿತ್ರದುರ್ಗದ (Chitradurga) ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮತ್ತೆ ಮೇ 14ಕ್ಕೆ ಮುಂದೂಡಲಾಗಿದೆ.

    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿ ಪ್ರಕರಣದ ಇತರೇ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು (Bengaluru Police) ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇಂದು ಸುಪ್ರೀಂ ಕೋರ್ಟ್‌ನ ನ್ಯಾ.ಜೆ.ಬಿ ಪಾರ್ದಿವಾಲ್ ನೇತೃತ್ವದ ದ್ವಿ ಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿತು. ವಾದ ಪ್ರತಿವಾದಗಳನ್ನು ಆಲಿಸಿದ ಬಳಿಕ ಮೇ 14ಕ್ಕೆ ವಿಚಾರಣೆಯನ್ನು ಮುಂದೂಡಿತು.  ಇದನ್ನೂ ಓದಿ: ಸಂಸತ್ತೇ ಸರ್ವೋಚ್ಚ, ಚುನಾಯಿತ ಪ್ರತಿನಿಧಿಗಳು ಸಾಂವಿಧಾನಿಕ ವಿಷಯದ ಅಲ್ಟಿಮೇಟ್‌ ಮಾಸ್ಟರ್ಸ್‌: ಧನಕರ್‌

    Actor Darshan

    ರಾಜ್ಯ ಸರ್ಕಾರದ ಪರ ಸಿದಾರ್ಥ ಲೂಥ್ರಾ ವಾದ ಮಂಡಿಸಿದ್ರೆ, ಕೊಲೆ ಆರೋಪಿ ದರ್ಶನ್‌ ಪರ ಅಭಿಷೇಕ್‌ ಮನು ಸಿಂಘ್ವಿ ವಾದ ಮಂಡಿಸಿದರು. ಇದನ್ನೂ ಓದಿ: ಬಿಎಸ್‌ವೈ ವಿರುದ್ಧದ ಭ್ರಷ್ಟಾಚಾರ ಪ್ರಕರಣ – ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ

    131 ದಿನಗಳ ಜೈಲುವಾಸದ ನಂತರ ನಟ ದರ್ಶನ್ ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ಕಳೆದ ಅ.30 ರಂದು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ನಂತರ ಹೈಕೋರ್ಟ್ ಡಿ.13 ರಂದು ದರ್ಶನ್ ಮತ್ತು ಪ್ರಮುಖ ಆರೋಪಿ ಪವಿತ್ರ ಗೌಡ ಸೇರಿದಂತೆ ಇತರ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು.  ಇದನ್ನೂ ಓದಿ: ನಿಶಿಕಾಂತ್ ದುಬೆ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ನಮ್ಮ ಅನುಮೋದನೆ ಅಗತ್ಯವಿಲ್ಲ – ಸುಪ್ರೀಂ

  • Renukaswamy Case | ಕೋರ್ಟ್‌ ವಿಚಾರಣೆಗೆ ದರ್ಶನ್‌ ಗೈರಾಗಿದ್ದೇಕೆ?

    Renukaswamy Case | ಕೋರ್ಟ್‌ ವಿಚಾರಣೆಗೆ ದರ್ಶನ್‌ ಗೈರಾಗಿದ್ದೇಕೆ?

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ (Renukaswamy Murder Case) ಪ್ರಕರಣದ ಆರೋಪಿ ನಟ ದರ್ಶನ್‌ (Darshan) ಅವರಿಂದು ಕೋರ್ಟ್‌ನಲ್ಲಿ ವಿಚಾರಣೆಗೆ ಹಾಜರಾಗದಿದ್ದಕ್ಕೆ ಬೆನ್ನುನೋವು ಕಾರಣ ಅನ್ನೋದು ತಿಳಿದುಬಂದಿದೆ.

    ಇಂದು ನಟ ದರ್ಶನ್‌ ಸೇರಿದಂತೆ ಪ್ರಕರಣದ 17 ಆರೋಪಿಗಳು 57ನೇ ಸಿಸಿಹೆಚ್ ಕೋರ್ಟ್‌ಗೆ (CCH Court) ಹಾಜರಾಗದ ಹಿನ್ನೆಲೆ ಕೋರ್ಟ್‌ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿತ್ತಯ. ಆದ್ರೆ ವಿಚಾರಣೆ ಸಂದರ್ಭದಲ್ಲಿ ವಕೀಲರು, ದರ್ಶನ್‌ ಅವರಿಗೆ ಬೆನ್ನು ನೋವಿದೆ. ಹೀಗಾಗಿ ವಿಚಾರಣೆಗೆ ಬರಲು ವಿನಾಯಿತಿ ಕೋರಿದರು. ಜೊತೆಗೆ ಷರತ್ತು ಸಡಿಲಿಕೆ ಮಾಡಿದ್ದ ಹೈಕೋರ್ಟ್ ಆದೇಶವನ್ನೂ ಕೂಡ ಕೋರ್ಟ್‌ಗೆ ಸಲ್ಲಿಸಿದರು. ಈ ನ್ಯಾಯಾಧೀಶರು ವಿಚಾರಣೆಗೆ ಆರೋಪಿಗಳು ಗೈರಾಗುವುದು ಸರಿಯಲ್ಲ. ವಿಚಾರಣೆಗೆ ಇದ್ದಾಗ ಆರೋಪಿಗಳು ಹಾಜರಾಗಲೇಬೇಕು. ವಿನಾಯಿತಿಗೆ ಮನವಿ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ವಿಚಾರಣೆಗೆ ಗೈರಾಗಿದ್ದು ಏಕೆ?
    ಈ ಬೆನ್ನಲ್ಲೇ ದರ್ಶನ್‌ ವಿಚಾರಣೆಗೆ ಹಾಜರಾಗದಿರಲು ಬೆನ್ನುನೋವೇ ಕಾರಣ ಎಂದು ಆಪ್ತ ಮೂಲಗಳಿಂದಲೂ ತಿಳಿದುಬಂದಿದೆ.  ಇದನ್ನೂ ಓದಿ: 64 ವರ್ಷಗಳ ಬಳಿಕ ಗುಜರಾತ್‌ನಲ್ಲಿ ಎಐಸಿಸಿ ಅಧಿವೇಶನ – ಹಲವು ಮಹತ್ವದ ನಿರ್ಣಯ ಸಾಧ್ಯತೆ

    ಡೆವಿಲ್‌ ಸಿನಿಮಾಗಾಗಿ (Devil Cinema)ದರ್ಶನ್‌ ಬಿಡುವಿಲ್ಲದೇ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದರು. ಕಳೆದ ವಾರ ಮೂರು ದಿನ ರಾಜಸ್ಥಾನದಲ್ಲಿ 28 ಗಂಟೆ ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದರು. ಆದ್ರೆ ರಾಜಸ್ಥಾನದಲ್ಲಿ ಶೂಟಿಂಗ್ ವೇಳೆ ಬೇರೆ ಇಂಡಸ್ಟ್ರಿಯ ಆರ್ಟಿಸ್ಟ್ ಒಬ್ಬರ ಕಾಲ್ ಶೀಟ್ ಮುಗಿದು ಹೋಗ್ತಿತ್ತು. ಆದ್ದರಿಂದ ದರ್ಶನ್‌ ನಿರಂತರ ಕೆಲಸ ಮಾಡಬೇಕಾದ ಸನ್ನಿವೇಶ ಎದುರಾಗಿತ್ತು. ಹೆಚ್ಚು ಕೆಲಸ ಮಾಡಿದ್ದರಿಂದ ದರ್ಶನ್‌ ಮತ್ತೆ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಕಳೆದ ಶನಿವಾರದಿಂದ ಬೆನ್ನು ನೋವು ಕಾಣಿಸಿಕೊಂಡಿದ್ದು, ಸೋಮವಾರ (ಏ.7) ಮೈಸೂರಿಗೆ ತೆರಳಿ ವೈದ್ಯರನ್ನ ಸಂಪರ್ಕಿಸಿದ್ದರು ಎಂದು ಆಪ್ತ ಮೂಲಗಳು ಮಾಹಿತಿ ನೀಡಿವೆ.  ಇದನ್ನೂ ಓದಿ: ಮಧ್ಯರಾತ್ರಿ ಎದೆ ಮುಟ್ಟಿ ಯುವಕನ ಅಸಭ್ಯ ವರ್ತನೆ ಕೇಸ್‌ – ಯುವತಿಯನ್ನು ಪತ್ತೆ ಹಚ್ಚೋದೆ ದೊಡ್ಡ ಸವಾಲು

    75 ಲಕ್ಷ ರೂ. ಬಿಡುಗಡೆಗೆ ಮನವಿ
    ಇನ್ನೂ ಕೋರ್ಟ್‌ ವಿಚಾರಣೆ ವೇಳೆ ದರ್ಶನ್‌ ಪರ ವಕೀಲರು, ದರ್ಶನ್‌ ಮನೆಯಿಂದ ಜಪ್ತಿ ಮಾಡಿಕೊಂಡಿದ್ದ 75 ಲಕ್ಷ ರೂ. ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಈ ವೇಳೆ ಕೋರ್ಟ್‌, ಆದಾಯ ತೆರಿಗೆ ಇಲಾಖೆ ವಾದ ಮಂಡಿಸಿದ ಬಳಿಕ ಆದೇಶ ನೀಡುವುದಾಗಿ ಹೇಳಿ ಮೇ 20ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿತು. ಈ ವೇಳೆ ತನಿಖೆ ವೇಳೆ ಜಪ್ತಿ ಮಾಡಿದ್ದ ಮೊಬೈಲ್‌ಗಳ ಹಿಂತಿರುಗಿಸಲು ಆರೋಪಿಗಳ ಪರ ವಕೀಲರು ಅರ್ಜಿ ಸಲ್ಲಿಸಿದರು.

    ಇಂದಿನ ವಿಚಾರಣೆಗೆ ಪವಿತ್ರಾ ಗೌಡ (Pavithra gowda) ಮತ್ತು ಉಳಿದ ಆರೋಪಿಗಳು ಕೋರ್ಟ್‌ಗೆ ಹಾಜರಾಗಿದ್ದರು. ಸಹೋದರನ ಜೊತೆ ಪವಿತ್ರಾ ಗೌಡ ಆರ್.ಆರ್ ನಗರದ ಮನೆಯಿಂದ ಕೋರ್ಟ್‌ಗೆ ಆಗಮಿಸಿದ್ದರು. ಇದನ್ನೂ ಓದಿ: ಶಿವಮೊಗ್ಗ ಡಿಸಿಸಿ ಬ್ಯಾಂಕ್‌, ಅಧ್ಯಕ್ಷ ಮಂಜುನಾಥ ಗೌಡ ನಿವಾಸದ ಮೇಲೆ ಇಡಿ ದಾಳಿ

    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು (Bail) ಸಿಕ್ಕಿದೆ. ಜಾಮೀನು ಪಡೆದರೂ ಪ್ರತಿ ತಿಂಗಳು ನ್ಯಾಯಾಲಯಕ್ಕೆ (Court) ಹಾಜರಾಗಬೇಕು ಎಂಬ ಷರತ್ತು ಹಿನ್ನೆಲೆಯಲ್ಲಿ ಇಂದು ಆರೋಪಿಗಳು ಕೋರ್ಟ್​ಗೆ ಹಾಜರಾಗಿದ್ದರು.  ಇದನ್ನೂ ಓದಿ: ವಿಚಾರಣೆಗೆ ದರ್ಶನ್‌ ಗೈರು – ಬೆಂಗಳೂರು ಕೋರ್ಟ್‌ ಅಸಮಾಧಾನ

  • ಕೋರ್ಟ್ ಹಾಲ್‌ನಲ್ಲಿ ಪವಿತ್ರಾ, ದರ್ಶನ್ ದೂರ ದೂರಾ – ಕಣ್ಣೀರಿಡುತ್ತ ತೆರಳಿದ ಗೆಳತಿ!

    ಕೋರ್ಟ್ ಹಾಲ್‌ನಲ್ಲಿ ಪವಿತ್ರಾ, ದರ್ಶನ್ ದೂರ ದೂರಾ – ಕಣ್ಣೀರಿಡುತ್ತ ತೆರಳಿದ ಗೆಳತಿ!

    ಬೆಂಗಳೂರು: ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್‌ (Darshan) ಹಾಗೂ ಪವಿತ್ರಾಗೌಡ (Pavithra Gowda) ಇಂದು (ಫೆ.25) ಕೋರ್ಟ್‌ಗೆ ಹಾಜರಾಗಿದ್ದರು. ಈ ವೇಳೆ ದರ್ಶನ್ ಹಾಗೂ ಪವಿತ್ರಾ ಗೌಡ ಕೋರ್ಟ್ ನಲ್ಲಿ ದೂರ ದೂರ ನಿಂತಿದ್ದರು.

    ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಕೋರ್ಟ್ ಕಲಾಪಕ್ಕೂ 10 ನಿಮಿಷ ಮೊದಲೇ ಕೋರ್ಟ್‌ನಲ್ಲಿ ಹಾಜರಾಗಿದ್ದರು. ದರ್ಶನ್ ಬರುವುದು ತಡವಾದ ಹಿನ್ನೆಲೆ 10 ನಿಮಿಷ ಕಲಾಪ ಮುಂದೂಡುವಂತೆ ದರ್ಶನ್ ಪರ ವಕೀಲರು ‌ಮನವಿ ಮಾಡಿದರು. ದರ್ಶನ್ ಬರುತ್ತಿದ್ದಂತೆ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶರು, ಎಲ್ಲರ ಹಾಜರಾತಿಯನ್ನ ಖಾತರಿಪಡಿಸಿಕೊಂಡ್ರು. ಪ್ರಕರಣದ ಆರೋಪಿಗಳಾದ ನಿಖಿಲ್ ಮತ್ತು ಕೇಶವಮೂರ್ತಿ ಹೊರತುಪಡಿಸಿ ಉಳಿದ ಎಲ್ಲಾ ಆರೋಪಿಗಳು ಕೋರ್ಟ್‌ನಲ್ಲಿ ಹಾಜರಿದ್ದರು. ಇದನ್ನೂ ಓದಿ:

    ಬೆನ್ನು ನೋವು ಶಮನವಾಗದ ಹಿನ್ನೆಲೆ ಕುಂಟುತ್ತಲೇ ಕೋರ್ಟ್ ಹಾಲ್‌ಗೆ ದರ್ಶನ್ ಬಂದಿದ್ದಾರೆ. ಈ ವೇಳೆ ಪವಿತ್ರಾಗೌಡ, ದರ್ಶನ್ ಕಡೆ ನೋಡಿದರೂ, ದರ್ಶನ್ ಅವರ ಕಡೆ ನೋಡಲೇ ಇಲ್ಲ. ಅಲ್ಲದೇ ಕೋರ್ಟ್‌ನಲ್ಲಿ ಬೇರೆ ಕಡೆ ಕುಳಿತುಕೊಂಡ್ರು. ಇತರ ಆರೋಪಿಗಳ ಜೊತೆ ಮಾತನಾಡಿದ ದರ್ಶನ್, ಪವಿತ್ರಾಗೌಡಳನ್ನ ಮಾತನಾಡಿಸಲೇ ಇಲ್ಲ. ಈ ಮೂಲಕ ಅಂತರವನ್ನು ಕಾಯ್ದುಕೊಳ್ಳುವ ಯತ್ನವನ್ನು ದರ್ಶನ್ ಮಾಡಿದ್ರು. ಕೋರ್ಟ್ ವಿಚಾರಣೆ ಮುಗಿದ ಬಳಿಕ ಪವಿತ್ರಾ ಹೋಗುವವರೆಗೂ ದರ್ಶನ್ ಕೋರ್ಟ್ ಹಾಲ್‌ನಲ್ಲಿಯೇ ಇದ್ದು, ಬಳಿಕ ಕೋರ್ಟ್ ಹಾಲ್‌ನಿಂದ ಹೋಗಿದ್ದಾರೆ. ಇನ್ನೂ ಪವಿತ್ರಾಗೌಡ ಅಳುತ್ತಾ ಕೋರ್ಟ್‌ನಿಂದ ಮನೆ ಕಡೆ ಹೊರಟಿದ್ದಾರೆ.

    ನ್ಯಾಯಾಲಯದಲ್ಲಿ ದರ್ಶನ್ ಪರ ವಕೀಲ ಸುನೀಲ್, ಪೊಲೀಸರು ಪ್ರಕರಣದ ಇತರ ಆರೋಪಿಗಳನ್ನು ಮಾಫಿ ಸಾಕ್ಷಿಯಾಗುವಂತೆ, ಒತ್ತಡ ಬೆದರಿಕೆ ಹಾಕ್ತಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಪ್ರಮುಖವಾಗಿ ನಾಲ್ವರು ಆರೋಪಿಗಳನ್ನು ಮಾಫಿ ಸಾಕ್ಷಿಯಾಗುವಂತೆ ಬೆದರಿಕೆ ಹಾಕ್ತಿದ್ದಾರೆ. ಸಾಕಷ್ಟು ಸಾಕ್ಷಿಗಳಿದ್ದು, ಮಾಫಿ ಸಾಕ್ಷಿಯಾದ್ರೆ ಕೇಸ್‌ನಿಂದ ಖುಲಾಸೆ ಮಾಡಿಕೊಡೊದಾಗಿ ಬೆದರಿಸಿದ್ದಾರೆ ಎಂದು ಆರೋಪಿಸಿದ್ರು. ಪ್ರತ್ಯೇಕ ಅರ್ಜಿ ಹಾಕಿದರೆ ವಾದಕ್ಕೆ ಅವಕಾಶ ಮಾಡಿಕೊಡೋದಾಗಿ ತಿಳಿಸಿ, ಮಾ.8ಕ್ಕೆ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿತು. ಇದನ್ನೂ ಓದಿ: ಪಂಜಾಬ್‌ನ ಆಪ್‌ ಸರ್ಕಾರದಿಂದ ಬುಲ್ಡೋಜರ್ ಅಸ್ತ್ರ – ಡ್ರಗ್ ಮಾಫಿಯಾ ಕಿಂಗ್‌ಗಳ ಮನೆ ನೆಲಸಮ

  • ಈ ವಾರ ನಿರ್ಣಾಯಕ – ದರ್ಶನ್‌ ಸರ್ಜರಿ ಬಗ್ಗೆ ವೈದ್ಯರಿಂದ ಸ್ಫೋಟಕ ಮಾಹಿತಿ

    ಈ ವಾರ ನಿರ್ಣಾಯಕ – ದರ್ಶನ್‌ ಸರ್ಜರಿ ಬಗ್ಗೆ ವೈದ್ಯರಿಂದ ಸ್ಫೋಟಕ ಮಾಹಿತಿ

    – ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾದ ನಟ

    ಮೈಸೂರು: ಬೆನ್ನು ನೋವಿನಿಂದ ಬಳಲುತ್ತಿರುವ ಕೊಲೆ ಆರೋಪಿ ನಟ ದರ್ಶನ್ (Darshan) ಬುಧವಾರ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ (Treatment) ಒಳಗಾದರು.

    20 ದಿನಗಳ ಹಿಂದೆ ಬೆನ್ನು ನೋವಿಗೆ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ನಟ ದರ್ಶನ್, ಶಸ್ತ್ರಚಿಕಿತ್ಸೆಗೂ (Surgery) ಒಪ್ಪಿದ್ದರು. ಹೀಗಾಗಿ ಕೆಲವು ಮೆಡಿಸಿನ್ ನೀಡಿ ಫಿಸಿಯೋಥೆರಪಿಗೆ ಡಾ. ಅಜಯ್ ಹೆಗ್ಡೆ ಸೂಚಿಸಿದ್ದರು. ಆ ಅವಧಿ ಮುಗಿದ ಕಾರಣ ಇಂದು ನಟ ದರ್ಶನ್ ಆಸ್ಪತ್ರೆಗೆ ಬಂದು ತಪಾಸಣೆಗೆ ಒಳಗಾದರು. ಇದನ್ನೂ ಓದಿ: ಭಾರತೀಯ ಕ್ರಿಕೆಟ್‌ ಇತಿಹಾಸದಲ್ಲೇ ಗರಿಷ್ಠ ರನ್‌ ದಾಖಲೆ – ಐರ್ಲೆಂಡ್‌ ವಿರುದ್ಧ ಸರಣಿ ಗೆದ್ದ ಸಿಂಹಿಣಿಯರು

    ನಟ ದರ್ಶನ್‌ಗೆ ಇವತ್ತು ಶಸ್ತ್ರಚಿಕಿತ್ಸೆ ಮಾಡಲಿಲ್ಲ. ಶಸ್ತ್ರಚಿಕಿತ್ಸೆಗೂ ಮುನ್ನ ನರ್ವ್ ರೂಟ್ ಬ್ಲಾಕ್‌ಗೆ ಎಪಿಡ್ಯೂರಲ್ ಇಂಜೆಕ್ಷನ್ (Epidural Injection) ಅನ್ನು ವೈದ್ಯರು ನೀಡಿದರು. ಈ ಇಂಜೆಕ್ಷನ್ ಹಿನ್ನೆಲೆಯಲ್ಲಿ ಒಂದು ವಾರ ನಿಗಾ ಇಡಲಾಗುತ್ತದೆ. 1 ವಾರದಲ್ಲಿ ಬ್ಲಾಕ್ ಕ್ಲಿಯರ್ ಆಗದಿದ್ದರೆ ಅಪರೇಷನ್‌ಗೆ ವೈದ್ಯರು ಸಿದ್ಧತೆ ನಡೆಸಲಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮದುವೆಗೆ 4 ದಿನ ಬಾಕಿಯಿರುವಾಗಲೇ ಪೊಲೀಸರ ಮುಂದೆ ಮಗಳನ್ನ ಗುಂಡಿಕ್ಕಿ ಕೊಂದ ತಂದೆ

    ದರ್ಶನ್ ಬೆನ್ನು ನೋವಲ್ಲಿ ಸ್ವಲ್ಪ ಗುಣಮುಖ
    ಫಿಸಿಯೋಥೆರಪಿಯಲ್ಲಿ ದರ್ಶನ್‌ಗೆ ಬೆನ್ನು ನೋವು ಸ್ವಲ್ಪ ಗುಣವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 20 ದಿನಗಳ ಹಿಂದೆ ಇದ್ದ ನೋವಿಗೂ ಇಂದಿಗೂ ಬಹಳ ವ್ಯತ್ಯಾಸ ಕಂಡುಬಂದಿದೆ. 20% ನಷ್ಟು ಚೇತರಿಕೆ ಆಗಿದೆ. ವೈದ್ಯರು ಹೇಳಿದ ಈ ಮಾತು ಕೇಳಿ ನಟ ದರ್ಶನ್ ಖುಷಿ ಆಗಿದ್ದಾರೆ. ಆದ್ದರಿಂದ ಫಿಸಿಯೋಥೆರಪಿ ಮುಂದುವರೆಸುವಂತೆ ವೈದ್ಯರು ನಟ ದರ್ಶನ್‌ಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಸಚಿವ ಕೃಷ್ಣ ಬೈರೇಗೌಡರ ವಿರುದ್ಧ ಭ್ರಷ್ಟಾಚಾರ ಆರೋಪ – ರಾಜ್ಯಪಾಲರಿಗೆ ದೂರು

    ಎಪಿಡ್ಯೂರಲ್ ಇಂಜೆಕ್ಷನ್ ಕೊಡುವ ಮುನ್ನ ದರ್ಶನ್‌ಗೆ ಇಂಜೆಕ್ಷನ್ ಸೈಡ್ ಎಫೆಕ್ಟ್ ವರ್ಕ್ ಆಗುವ ರೀತಿ ಎಲ್ಲವನ್ನು ವೈದ್ಯ ಡಾ. ಅಜಯ್ ಹೆಗ್ಡೆ ವಿವರಿಸಿದ್ದಾರೆ. ವೈದ್ಯರ ವಿವರಣೆ ಕೇಳಿ ಇಂಜೆಕ್ಷನ್ ಕೊಡಲು ದರ್ಶನ್ ಸಮ್ಮತಿ ಸೂಚಿಸಿದರು. ಒಂದು ವೇಳೆ ಅಪರೇಷನ್ ನಿಶ್ಚಿತವಾದರೆ ದರ್ಶನ್, ಪತ್ನಿ ವಿಜಯಲಕ್ಷ್ಮಿ, ದರ್ಶನ್ ಸಹೋದರ ದಿನಕರ್, ಮಗ ವಿನೀಶ್ ನಾಲ್ವರನ್ನು ಕರೆಸಿ ಅಪರೇಷನ್ ಬಗ್ಗೆ, ಅಪರೇಷನ್ ನಂತರ ಆಗುವ ಪರಿಣಾಮಗಳ ಬಗ್ಗೆ ಕೌನ್ಸಿಲಿಂಗ್ ರೂಪದಲ್ಲಿ ವೈದ್ಯರು ಮಾಹಿತಿ ನೀಡಲಿದ್ದಾರೆ. ಈ ಬಗ್ಗೆ ದರ್ಶನ್‌ಗೂ ವೈದ್ಯರು ತಿಳಿಸಿದ್ದಾರೆ. ಬಳಿಕ ಒಂದು ವಾರದ ನಂತರ ಕುಟುಂಬದ ಸಮೇತ ಆಸ್ಪತ್ರೆಗೆ ಬರುತ್ತೇನೆ ಎಂದು ದರ್ಶನ್ ತಿಳಿಸಿದ್ದಾರೆ. ಇದನ್ನೂ ಓದಿ: ದಕ್ಷಿಣದ ಕುಂಭಮೇಳ ಗವಿಸಿದ್ದೇಶ್ವರ ಜಾತ್ರಾಮಹೋತ್ಸವ – ರಥೋತ್ಸವಕ್ಕೆ ಭಕ್ತರ ದಂಡು 

    ಅಲ್ಲಿಗೆ ಈ ಒಂದು ವಾರ ದರ್ಶನ್ ಪಾಲಿಗೆ ಬಹಳ ಮಹತ್ತರವಾದದ್ದು. ಇಂಜೆಕ್ಷನ್ ವರ್ಕ್ ಆದರೆ ಆಪರೇಷನ್ ಇಲ್ಲ. ವರ್ಕ್ ಆಗದೆ ಇದ್ದರೆ ಮುಂದಿನ ವಾರ ಆಪರೇಷನ್ ಮಾಡಿಸಿಕೊಳ್ಳುತ್ತಾರಾ ಅನ್ನೋದನ್ನ ಕಾದುನೋಡಬೇಕಿದೆ.

  • ದರ್ಶನ್‌, ಗ್ಯಾಂಗ್‌ಗೆ ಮತ್ತೆ ಶಾಕ್‌ – ಜಾಮೀನು ರದ್ದು ಕೋರಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಕೆ

    ದರ್ಶನ್‌, ಗ್ಯಾಂಗ್‌ಗೆ ಮತ್ತೆ ಶಾಕ್‌ – ಜಾಮೀನು ರದ್ದು ಕೋರಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಕೆ

    ಬೆಂಗಳೂರು: ಸದ್ಯ ಜಾಮೀನಿನ ಮೇಲೆ ಹೊರಗಿರುವ ಕೊಲೆ ಆರೋಪಿ, ನಟ ದರ್ಶನ್‌ (Darshan) ಮತ್ತು ಗ್ಯಾಂಗ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ದರ್ಶನ್‌ ಸೇರಿ ಇತರ 7 ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ (Supreme Court) ಪೊಲೀಸರು ಮೇಲ್ಮನವಿ ಸಲ್ಲಿಸಿದ್ದಾರೆ.

    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಇಂದು ಪೊಲೀಸರು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ವಕೀಲ ಅನಿಲ್ ಸಿ ನಿಶಾನಿಯಿಂದ ಅರ್ಜಿ ಸಲ್ಲಿಕೆಯಾಗಿದ್ದು, ನಟ ದರ್ಶನ್, ಪವಿತ್ರಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್ ಹಾಗೂ ಜಗದೀಶ್ ಆರೋಪಿಗಳ ಜಾಮೀನು ರದ್ದು ಮಾಡಿವಂತೆ ಮನವಿ ಮಾಡಿದ್ದಾರೆ.

    ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೂ.11 ರಂದು ನಟ ದರ್ಶನ್‌ ಸೇರಿ ಹಲವರು ಬಂಧನಕ್ಕೊಳಗಾಗಿದ್ದರು. ಕಳೆದ ಡಿಸೆಂಬರ್‌ 13ರಂದು ರಾಜ್ಯ ಹೈಕೋರ್ಟ್‌ ದರ್ಶನ್‌ ಸೇರಿ 7 ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿತ್ತು. ಇದನ್ನೂ ಓದಿ: Ramanagara | ಸ್ನೇಹಿತನನ್ನು ಕೊಲೆಗೈದ ಪ್ರಕರಣ – ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, 50,000 ರೂ. ದಂಡ

    ಜಾಮೀನು ಸಿಕ್ಕಿದ್ದು ಹೇಗೆ?
    ಜಾಮೀನು ಮೊದಲ ನಿಯಮ. ಆರೋಪಿಗಳಿಗೆ ಯಾವುದೇ ಅಪರಾಧಿಕ ಹಿನ್ನೆಲೆ ಇಲ್ಲ. ಆರೋಪಿಗಳು 6 ತಿಂಗಳಿನಿಂದ ಜೈಲಿನಲ್ಲಿ ಇದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. ಬಂಧನ ಮಾಡುವಾಗ ನಿಯಮಗಳ ಪಾಲನೆ ಆಗಿಲ್ಲ. ಬಂಧನ ವೇಳೆ ಆರೋಪಿಗೆ ಬಂಧನದ ಕಾರಣ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟ ಆದೇಶವಿದೆ. ಆದರೆ ಈ ಪ್ರಕರಣದಲ್ಲಿ ಪೊಲೀಸರು ಗ್ರೌಂಡ್ಸ್ ಆಫ್ ಅರೆಸ್ಟ್ ಪಾಲಿಸಿಲ್ಲ. ಆರೋಪಿಗಳ ನಿರ್ದಿಷ್ಟ ಪಾತ್ರದ ಬಗ್ಗೆ ಸ್ಪಷ್ಟ ಉಲ್ಲೇಖವಿಲ್ಲ. ಪ್ರತ್ಯಕ್ಷದರ್ಶಿಗಳ ಹೇಳಿಕೆಯಲ್ಲೂ ವ್ಯತ್ಯಾಸ ಕಂಡು ಬಂದಿದೆ ಎಂದು ಅಭಿಪ್ರಾಯಪಟ್ಟು ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತು. ಇದನ್ನೂ ಓದಿ: Haveri | ಅಪಘಾತ ಪ್ರಕರಣ – ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಂದೆಗೆ 27,000 ರೂ. ದಂಡ