ಏ.22 ರಂದು ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಜೋರಾಗಿತ್ತು. ಮೇ 07ರಂದು ಪಾಕ್‌ನ 9 ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತ `ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಸೇಡು ತೀರಿಸಿಕೊಂಡಿತ್ತು.
ಈ ಕಾರ್ಯಾಚರಣೆ ಬಳಿಕ `ಆಪರೇಷನ್ ಸಿಂಧೂರ’ ಲೋಗೋ ಭಾರಿ ವೈರಲ್ ಆಗಿತ್ತು. ಈ ಲೋಗೋವನ್ನು ಖುದ್ದು ಲೆ.ಕ. ಹರ್ಷ ಗುಪ್ತಾ ಮತ್ತು ಹವಾಲ್ದಾರ್ ಸುರೀಂದರ್ಸಿಂಗ್ ಜೊತೆಗೂಡಿ ವಿನ್ಯಾಸಗೊಳಿಸಿರುವುದಾಗಿ ತಿಳಿದು ಬಂದಿದೆ. ಸಿಂಧೂರದ ಅಕ್ಷರಗಳಲ್ಲಿ ಕುಂಕುಮವನ್ನು ಇರಿಸಿದ್ದು, ಭಾರತೀಯ ಸ್ತ್ರೀಯರ ಕುಂಕುಮದ ಬೆಲೆ ಹಾಗೂ ಗೌರವವನ್ನು ಎತ್ತಿತೋರಿಸುವಂತಿತ್ತು.
ನವದೆಹಲಿ: ಪಾಕ್ (Pakistan) ಪರ ಬೇಹುಗಾರಿಕೆ ಆರೋಪದ ಮೇಲೆ ಬಂಧಿಸಲಾಗಿದ್ದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ (Jyoti Malhotra), ಪಹಲ್ಗಾಮ್ ದಾಳಿಗೂ (Pahalgam Terrorist Attack) ಮುಂಚೆಯೇ ಪಾಕ್ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದೆ ಎಂದು ತಪ್ಪೊಪ್ಪಿಕೊಂಡಿದ್ದಾಳೆ ಎಂದು ಮೂಲಗಳು ತಿಳಿಸಿವೆ.
ಮೇ 17ರಂದು ಪಾಕಿಸ್ತಾನದ ಪರ ಬೇಹುಗಾರಿಕೆ ಮಾಡಿದ ಆರೋಪದ ಮೇಲೆ ಹರಿಯಾಣ ಮೂಲದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿ ಇಬ್ಬರನ್ನು ಎನ್‌ಐಎ (NIA) ಅಧಿಕಾರಿಗಳು ಬಂಧಿಸಿದ್ದರು. ಬಳಿಕ ತನಿಖೆ ಆರಂಭಿಸಿದ್ದ ಪೊಲೀಸರು ವಿಚಾರಣೆ ನಡೆಸಿದ್ದು, ಈ ವೇಳೆ ಪಾಕಿಸ್ತಾನಿ ಗುಪ್ತಚರ ಏಜೆಂಟ್‌ಗಳೊಂದಿಗೆ ಸಂಪರ್ಕ ಹೊಂದಿರುವುದಾಗಿ ಹಾಗೂ ಪಾಕಿಸ್ತಾನಿ ಹೈಕಮಿಷನ್ ಅಧಿಕಾರಿ ಡ್ಯಾನಿಶ್ ಅವರೊಂದಿಗೆ ನಿಯಮಿತ ಸಂಪರ್ಕದಲ್ಲಿದ್ದೆ ಎಂದು ಹೇಳಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ.ಇದನ್ನೂ ಓದಿ: ‘ಕಿರಾತಕ’ನ ಗೆಟಪ್‌ನಲ್ಲಿ ಮೋಹನ್ ಲಾಲ್- ‘ಕಣ್ಣಪ್ಪ’ ಚಿತ್ರದ ಪೋಸ್ಟರ್ ಔಟ್
ವರದಿಗಳ ಪ್ರಕಾರ, ವಿಚಾರಣೆ ವೇಳೆ ಜ್ಯೋತಿ, 2023ರಲ್ಲಿ ಪಾಕಿಸ್ತಾಕ್ಕೆ ತೆರಳಲು ವೀಸಾಕ್ಕಾಗಿ ದೆಹಲಿಯ ಪಾಕ್ ಹೈಕಮಿಷನ್‌ಗೆ ಭೇಟಿ ನೀಡಿದಾಗ ಮೊದಲು ಡ್ಯಾನಿಶ್ ಅಲಿಯಾಸ್ ಎಹ್ಸರ್ ದಾರ್ ಅವರನ್ನು ಸಂರ್ಪಕಿಸಿದ್ದೆ. ಬಳಿಕ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾಗ ಡ್ಯಾನಿಶ್ ಪರಿಚಯಸ್ಥ ಅಲಿ ಹಸನ್ ಅವರ ಪರಿಚಯವಾಗಿತ್ತು. ಅದಲ್ಲದೇ ಅಲಿ ಹಸನ್ ಅವರು ಪಾಕಿಸ್ತಾನದ ಗುಪ್ತಚರ ಅಧಿಕಾರಿಗಳನ್ನು ಪರಿಚಯಿಸಿದ್ದರು. ಅದಾದ ನಂತರ 2023ರ ನವೆಂಬರ್‌ನಿಂದ 2025ರ ಮಾರ್ಚ್ರವರೆಗೆ ಡ್ಯಾನಿಶ್ ಜೊತೆ ಸಂಪರ್ಕದಲ್ಲಿದ್ದೆ ಎಂದು ಬಹಿರಂಗಪಡಿಸಿದ್ದಾಳೆ.
ಪ್ರಾಥಮಿಕ ತನಿಖೆಯ ಪ್ರಕಾರ, ಟ್ರಾವೆಲ್ ವಿತ್ ಜೋ ಯೂಟ್ಯೂಬ್ ನಡೆಸುತ್ತಿದ್ದ ಜ್ಯೋತಿ ತನ್ನ ಯೂಟ್ಯೂಬ್ ಚಾನಲ್‌ನಲ್ಲಿ ಪಾಕಿಸ್ತಾನ ಪರ ಇರುವ ವಿಷಯಗಳನ್ನು ಅಪ್ಲೋಡ್ ಮಾಡುತ್ತಿದ್ದಳು. ಅಲ್ಲದೇ ವಾಟ್ಸಾಪ್, ಟೆಲಿಗ್ರಾಮ್ ಮತ್ತು ಸ್ನ್ಯಾಪ್‌ಚಾಟ್‌ನಂತಹ ಪ್ಲಾಟ್‌ಫಾರ್ಮ್ಗಳಲ್ಲಿ ಶಕೀರ್ ಅಲಿಯಾಸ್ ರಾಣಾ ಶಹಬಾಜ್ ಸೇರಿದಂತೆ ಕಾರ್ಯಕರ್ತರೊಂದಿಗೆ ಸಂಪರ್ಕದಲ್ಲಿದ್ದಳು ಎಂದು ತಿಳಿದುಬಂದಿದೆ.ಇದನ್ನೂ ಓದಿ: Anekal | ಸೂಟ್‌ಕೇಸ್‌ನಲ್ಲಿ ಅಪರಿಚಿತ ಬಾಲಕಿ ಶವ ಪತ್ತೆ
– ಸಮರ್ಪಣಾ ಸಮಾವೇಶದಲ್ಲಿ 1.11 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ
– 4 ಲಕ್ಷ ಜನರಿಗೆ ಊಟದ ವ್ಯವಸ್ಥೆ, ಗ್ಯಾರಂಟಿ ನಿಲ್ಲಿಸೋದಿಲ್ಲ ಎಂದ ಡಿಸಿಎಂ
ಬಳ್ಳಾರಿ: ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರಕ್ಕೆ ಬಂದು 2 ವರ್ಷ ಪೊರೈಸಿದ ಹಿನ್ನೆಲೆ ರಾಜ್ಯ ಸರ್ಕಾರದಿಂದ ಸಮರ್ಪಣಾ ಸಮಾವೇಶದ ಹೆಸರಿನಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ 1 ಲಕ್ಷದ 11 ಸಾವಿರದ 111 ಕುಟುಂಬಗಳಿಗೆ ಹಕ್ಕು ಪತ್ರಗಳನ್ನ ನೀಡಲಾಯ್ತು.
ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಚಾಲನೆ ನೀಡಿದ್ರು. ಇದೇ ವೇಳೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಮಾತನಾಡಿ, ನುಡಿದಂತೆ ನಡೆದ ಸರ್ಕಾರ ನಮ್ಮದು. ಪ್ರಣಾಳಿಕೆಯಲ್ಲಿ ಆಶ್ವಾಸನೆ ಕೊಟ್ಟಂತೆ ಈಗಾಗಲೇ ಅರ್ಧದಷ್ಟು ಈಡೇರಿಸಿದ್ದೇವೆ. ಉಳಿದ ಭರವಸೆಗಳನ್ನ ಇನ್ನೂ ಮೂರು ತಿಂಗಳಲ್ಲಿ ಈಡೇರಿಸ್ತೇವೆ ಎಂದು ಹೇಳುವ ಮೂಲಕ ಬಿಜೆಪಿ ಹಾಗೂ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ರು. ಇದನ್ನೂ ಓದಿ: 593 ಭರವಸೆ ಕೊಟ್ಟಿದ್ವಿ, 2 ವರ್ಷಗಳಲ್ಲಿ 242 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ
ಇನ್ನೂ ಮಲ್ಲಿಕಾರ್ಜುನ ಖರ್ಗೆ ಅವರು ಪಹಲ್ಗಾಮ್ ವಿಚಾರ ಪ್ರಸ್ತಾಪಿಸಿ, ಈ ಘಟನೆಗೆ ನೇರ ಕಾರಣ ಕೇಂದ್ರ ಸರ್ಕಾರ ಎಂದು ಆರೋಪಿಸಿದ್ರು. ಪಹಲ್ಗಾಮ್ ನಲ್ಲಿ ಮೋದಿ ಸರ್ಕಾರ ಭದ್ರತೆ ಕೊಟ್ಟಿಲ್ಲ ಹೀಗಾಗಿ ಅಲ್ಲಿ ಜನರ ಕೊಲೆಯಾಯ್ತು. ಸರ್ಕಾರ, ಮಿಲಿಟರಿ ಯಾರೂ ಜನರಿಗೆ ಸಹಕಾರ ಕೊಟ್ಟಿಲ್ಲ. ಆದ್ರೂ ಮೋದಿ ಒಂದು ಮಾತು ಹೇಳಲಿಲ್ಲ. 17ನೇ ತಾರೀಖು ಮೋದಿ ಕಾಶ್ಮೀರಕ್ಕೆ ಹೋಗುವವರಿದ್ರು. ಆದ್ರೆ ಬೇಹುಗಾರಿಕೆ, ಇಂಟಲಿಜೆನ್ಸ್ ಅವರು ಹೋಗಬೇಡಿ ಎಂದ್ರು ಕ್ಯಾನ್ಸಲ್ ಮಾಡಿಸಿದ್ರು. ಹಾಗಾದ್ರೆ ಇದೆಲ್ಲಾ ಮೋದಿಗೆ ಗೊತ್ತಿತ್ತು ಅಲ್ಲವೇ? ಹಾಗಿದ್ರೂ ಮೋದಿ ಯಾಕೆ ಹೇಳಲಿಲ್ಲ ಎಂದು ಖರ್ಗೆ ವೇದಿಕೆಯಲ್ಲಿ ಮೋದಿಗೆ ಸವಾಲು ಹಾಕಿದ್ರು. ಇದನ್ನೂ ಓದಿ: ರಾಹುಲ್ ಜೆಟ್ ಪ್ರಶ್ನೆಗೆ ಬಿಜೆಪಿ ಪಾಕ್ ಪೋಸ್ಟರ್ – ಬಿರಿಯಾನಿ ತಿಂದವರು ಯಾರು? ಅಂತ ಕಾಂಗ್ರೆಸ್ ಕೌಂಟರ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರೋವರೆಗೆ ಗ್ಯಾರಂಟಿ ಸ್ಕೀಮ್ ನಿಲ್ಲೋದಿಲ್ಲ ಡಿಸಿಎಂ ಡಿಕೆಶಿ ಘೋಷಣೆ ಮಾಡಿದ ಅವರು ಟೀಕೆಗಳು ಸಾಯ್ತವೆ, ಕೆಲಸಗಳು ಉಳಿಯುತ್ತವೆ ವಿಪಕ್ಷಗಳಿಗೆ ತಿರುಗೇಟು ನೀಡಿದರು. 2013ರಲ್ಲಿಯೂ ಕೊಟ್ಟ ಎಲ್ಲಾ ಭರವಸೆ ಈಡೇರಿಸಿದ್ದೇವು. ಈಗ ನಮ್ಮ ಗ್ಯಾರಂಟಿ ಭರವಸೆ ಈಡೇರಿಸಿತ್ತೇವೆ. ಬಿಜೆಪಿ ತಮ್ಮ ಅವಧಿಯಲ್ಲಿ ಯಾವ ಭರವಸೆ ಈಡೇರಿಸಿಲ್ಲ. ಬಿಜೆಪಿ ಅವರು ಸುಳ್ಳು ಹೇಳುದರಲ್ಲಿ ನಿಸ್ಸೀಮರು ಈ ಬಗ್ಗೆ ನಾನು ಅವರೊಂದಿಗೆ ಬಹಿರಂಗವಾಗಿ ಚರ್ಚೆ ಮಾಡಲು ಸಿದ್ದವೆಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು.
ಇನ್ನೂ ಕಾರ್ಯಕ್ರಮಕ್ಕೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಲಕ್ಷಾಂತರ ಜನ ಆಗಮಿಸಿದ್ರು. ಸಮಾವೇಶದಲ್ಲಿ 4 ಲಕ್ಷ ಜನಕ್ಕೆ ಊಟದ ವ್ಯವಸ್ಥೆ ಮಾಡಿ, ಅದಕ್ಕಾಗಿ 600 ಊಟದ ಕೌಂಟರ್ ತೆರೆಯಲಾಗಿತ್ತು. ರಾಜ್ಯದ ವಿವಿಧ ಜಿಲ್ಲೆಗಳಿಂದ 4 ಸಾವಿರ ಸರ್ಕಾರಿ ಬಸ್‌ಗಳು ಸೇರಿದಂತೆ 11 ಸಾವಿರ ವಾಹನಗಳಲ್ಲಿ ಜನರು ಸಮಾವೇಶಕ್ಕೆ ಆಗಮಿಸಿದ್ರು. ಇದನ್ನೂ ಓದಿ: ಬೆಂಗ್ಳೂರಲ್ಲಿ ಮಳೆಯಿಂದ ಜನರ ಪರದಾಟ… ರಾಜ್ಯ ಸರ್ಕಾರದ ಮೋಜು – ಬಿವೈವಿ ಸಿಡಿಮಿಡಿ
ಸಮಾವೇಶದಿಂದಾಗಿ ಟ್ರಾಫಿಕ್ ಜಾಮನಿಂದ ಪ್ರಯಾಣಿಕರು ಪರದಾಡಿದರು. ಹೀಗಾಗಿ ವಿಜಯನಗರ ಎಸ್ಪಿ ಬಿ.ಎಲ್.ಶ್ರೀಹರಿಬಾಬು ಸೇರಿದಂತೆ ನಾಲ್ವರು ಎಸ್ಪಿ, 9 ಎಎಸ್ಪಿ, 20 ಡಿವೈಎಸ್ಪಿ, 57 ಸಿಪಿಐ, 144 ಪಿ.ಎಸ್.ಐ, 1968 ಹೆಡ್ ಕಾನ್ಸ್ ಟೇಬಲ್, 9,500 ಹೋಮ್ ಗಾರ್ಡ್ಸ್, 10 ಕೆಎಸ್‌ಆರ್‌ಪಿ ತುಕಡಿ, 08 ಡಿಎಆರ್, 14 ಎಎಸ್ ಟೀಂ ಹಾಗೂ 17 ಗಸ್ತು ವಾಹನ, ಚೀತಾ ಗಸ್ತು ವಾಹನ ಭದ್ರತೆಗೆ ನಿಯೋಜಿಸಲಾಗಿತ್ತು. ಇದನ್ನೂ ಓದಿ: 1,600 ಕೋಟಿ ಕಾಮಗಾರಿ ನಡೆದಿದ್ದರೆ ಬೆಂಗ್ಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ: ಆರ್. ಅಶೋಕ್
– ಪಹಲ್ಗಾಮ್ ದಾಳಿಯಲ್ಲಿ ಭದ್ರತಾ ಪಡೆಗಳದ್ದೇ ವೈಫಲ್ಯ ಅಂದಿದ್ದ ಜ್ಯೋತಿ ಮಲ್ಹೋತ್ರಾಳ ವಿಡಿಯೋ ಲಭ್ಯ
ನವದೆಹಲಿ: ಭಾರತದಲ್ಲಿದ್ದುಕೊಂಡೇ ಪಾಕಿಸ್ತಾನದ ಕಿವಿಯಲ್ಲಿ ದೇಶದ ಗುಟ್ಟು ಪಿಸುಗುಡುತ್ತಿರುವ ಬೇಹುಗಾರರ (Pakistani Spy) ಬಂಧನ ಸಂಖ್ಯೆ 11ಕ್ಕೆ ಏರಿದೆ.
ಎನ್‌ಐಎ, ಹರಿಯಾಣ, ಪಂಜಾಬ್ ಪೊಲೀಸರು (Punjab Police) ಒಟ್ಟು 8 ಜನರನ್ನು ಬಂಧಿಸಿದ್ರು.. ಈ ಬೆನ್ನಲ್ಲೇ ಪಾಕ್ ಪರ ಬೇಹುಗಾರಿಕೆ ಮಾಡುತ್ತಿದ್ದ ಮತ್ತೋರ್ವ ವ್ಯಕ್ತಿಯನ್ನ ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ನಡೆಸುತ್ತಿದ್ದ ಶೆಹಜಾದ್ ಎಂಬಾತನನ್ನು ಯುಪಿ ಪೊಲೀಸರು ಬಂಧಿಸಿದ್ದಾರೆ.
ಈತ ಭಾರತದಲ್ಲಿರುವ ಪಾಕ್ ಏಜೆಂಟ್‌ಗಳಿಗೆ ಹಣ ರವಾನಿಸುತ್ತಿದ್ದ.. ಭಾರತದ ಸಿಮ್ ಕೊಡಿಸಲು ಸಹಕಾರ ನೀಡ್ತಿದ್ದ ಎನ್ನಲಾಗಿದೆ. ಇತ್ತ ಪಾಕಿಸ್ತಾನ ಹೈಕಮಿಷನ್‌ನ ಇಬ್ಬರು ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿದ್ದ ತಾರೀಫ್ ಎಂಬಾತನನ್ನು ಹರಿಯಾಣದ ನುಹ್‌ನಲ್ಲಿ ಬಂಧಿಸಲಾಗಿದೆ. ಈತ ವಾಟ್ಸಪ್ ಮೂಲಕ ಭಾರತೀಯ ಮಿಲಿಟರಿ ಚಟುವಟಿಕೆಯ ಗೌಪ್ಯ ಮಾಹಿತಿಯನ್ನು ಪಾಕ್ ಹೈಕಮಿಷನ್ ಏಜೆಂಟ್‌ಗಳಿಗೆ ರವಾನಿಸುತ್ತಿದ್ದಿದ್ದು ಬಯಲಾಗಿದೆ.
ಇನ್ನೂ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಇನ್‌ಸ್ಟಾಗ್ರಾಮ್ ಖಾತೆಯನ್ನ ನಿರ್ಬಂಧಿಸಲಾಗಿದೆ. ಈ ಬೆನ್ನಲ್ಲೇ ಆಕೆಯ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪಹಲ್ಗಾಮ್ ದಾಳಿಯಲ್ಲಿ ನಮ್ಮ ಭದ್ರತಾ ವೈಫಲ್ಯ ಇದೆ… ನಮ್ಮ ಸರ್ಕಾರದ್ದೇ ತಪ್ಪು ಎಂದಿದ್ದ ಜ್ಯೋತಿ ವಿಡಿಯೋ ಸಹ ಸಿಕ್ಕಿದೆ. ಪಹಲ್ಗಾಮ್ ಉಗ್ರದಾಳಿಯಲ್ಲಿ ಪಾಕ್‌ನ ಇಬ್ಬರು ಸೇನಾ ಕಮಾಂಡರ್‌ಗಳು ಶಾಮೀಲಾಗಿದ್ದರು ಅಂತ ತಿಳಿದು ಬಂದಿದೆ.
ಈ ಮಧ್ಯೆ, ಹೈದ್ರಾಬಾದ್‌ನಲ್ಲಿ ಬಾಂಬ್ ಬ್ಲಾಸ್ಟ್ ಮಾಡಲು ಸಂಚು ರೂಪಿಸಿದ್ದ ಇಬ್ಬರು ಭಯೋತ್ಪಾದಕರನ್ನು ತೆಲಂಗಾಣ, ಆಂಧ್ರಪ್ರದೇಶ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ, ವಿಜಯನಗರದ ಸಿರಾಜ್ ಮತ್ತು ಹೈದರಾಬಾದ್‌ನ ಸಮೀರ್ ಎಂಬವರನ್ನ ಬಂಧಿಸಿದ್ದಾರೆ.
ಭೋಪಾಲ್: ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಪಾದಗಳಿಗೆ ಇಡೀ ದೇಶ, ಸೇನೆ ಮತ್ತು ಸೈನಿಕರು ನಮಸ್ಕರಿಸುತ್ತಾರೆ ಎಂದು ಮಧ್ಯಪ್ರದೇಶದ ಡಿಸಿಎಂ ಜಗದೀಶ್ ದೇವ್ಡಾ (Jagdish Devda) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇತ್ತೀಚೆಗಷ್ಟೇ ಮಧ್ಯಪ್ರದೇಶದ ಸಚಿವ ವಿಜಯ್ ಶಾ ಅವರು ಕರ್ನಲ್ ಸೋಫಿಯಾ ಖುರೇಷಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದರು. ಸುಪ್ರೀಂ ಕೋರ್ಟ್ (Supreme Court) ಸಹ ಅವರಿಗೆ ಛೀಮಾರಿ ಹಾಕಿತ್ತು. ಈ ಬೆನ್ನಲ್ಲೇ ಬಿಜೆಪಿಯ ಡಿಸಿಎಂ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜಬಲ್ಪುರದಲ್ಲಿ ನಾಗರಿಕ ರಕ್ಷಣಾ ಸ್ವೈಂಸೇವಕರ ತರಬೇತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಇಡೀ ದೇಶ, ಸೇನೆ, ಸೈನಿಕರು ಮೋದಿಯವರ ಪಾದಗಳಿಗೆ ನಮಸ್ಕರಿಸುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಟರ್ಕಿಗೆ ಬೆಂಗಳೂರು ಶಾಕ್ – ಸೆಲೆಬಿ ಏವಿಯೇಷನ್ ಏರ್‌ಪೋರ್ಟ್ ಸೇವೆ ಸ್ಥಗಿತ
ಅಂದು ಪಹಲ್ಗಾಮ್‌ಗೆ (Pahalgam) ಹೋದ ಪ್ರವಾಸಿಗರಿಗೆ ಧರ್ಮ ಕೇಳಿ, ಮಹಿಳೆಯರನ್ನ ಪಕ್ಕಕ್ಕೆ ನಿಲ್ಲಿಸಿ, ಮಕ್ಕಳ ಮುಂದೆಯೇ ಗುಂಡು ಹಾರಿಸಿ ಕೊಲ್ಲಲಾಯಿತು. ಆ ದಿನದಿಂದಲೂ ದೇಶದ ಜನರ ಮನಸ್ಸಿನಲ್ಲಿ ತುಂಬಾ ಕ್ರೋಧ ಇತ್ತು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳುವವರೆಗೂ ನೆಮ್ಮದಿಯಿಂದ ಉಸಿರಾಡಲು ಸಾಧ್ಯವಿಲ್ಲ ಎಂಬ ಭಾವನೆ ಜನರಲ್ಲಿತ್ತು. ಸದ್ಯ ಪಹಲ್ಗಾಮ್ ದಾಳಿಗೆ ಪ್ರಧಾನಿ ಮೋದಿ ಅವರು ಕೊಟ್ಟ ಉತ್ತರವನ್ನ ಎಷ್ಟು ಹೊಗಳಿದರೂ ಸಾಲದು. ಯಶಸ್ವಿ ಪ್ರಧಾನಿಗಳಿಗೆ ಧನ್ಯವಾದ ಹೇಳಲು ಇಡೀ ದೇಶ, ದೇಶದ ಸೈನ್ಯ ಹಾಗೂ ಸೈನಿಕರು ಅವರ ಪಾದಗಳಿಗೆ ನಮಸ್ಕರಿಸುತ್ತಾರೆ ಎಂದು ಹೇಳುತ್ತಾ ಪೇಚಿಗೆ ಸಿಲುಕಿದ್ದಾರೆ. ಇದನ್ನೂ ಓದಿ: ಭಾರತದ ದಾಳಿಗೆ ಬೆದರಿ ರಾವಲ್ಪಿಂಡಿಯಿಂದ ಪಾಕ್ ಸೇನಾ ಪ್ರಧಾನ ಕಚೇರಿ ಇಸ್ಲಾಮಾಬಾದ್‌ಗೆ ಶಿಫ್ಟ್!
ರಾಜೀನಾಮೆಗೆ ಡಿಸಿಎಂ ಆಗ್ರಹ:
ಇನ್ನೂ ಜಗದೀಶ್ ದೇವ್ಡಾ ಹೇಳಿಯನ್ನ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ, ಇದು ಸೇನೆಗೆ ಮಾಡಿದ ಅಪಮಾನ ಎಂದು ಕಿಡಿ ಕಾರಿದೆ. ದೇವ್ಡಾ ಅವರ ಈ ಹೇಳಿಕೆ ತುಂಬಾ ಕೀಳುಮಟ್ಟದ್ದು. ಇದು ಸೇನೆಯ ಶೌರ್ಯ ಮತ್ತು ಸಾಹಸಕ್ಕೆ ಮಾಡಿದ ಅವಮಾನ. ಇಂದು ಇಡೀ ದೇಶವೇ ಸೇನೆಗೆ ತಲೆಬಾಗುತ್ತಿರುವಾಗ, ಬಿಜೆಪಿ ನಾಯಕರು ನಮ್ಮ ಕೆಚ್ಚೆದೆಯ ಸೇನೆಯ ಬಗ್ಗೆ ತಮ್ಮ ಕಳಪೆ ಮನಸ್ಥಿತಿಯನ್ನು ತೋರಿಸಿದ್ದಾರೆ. ಇದಕ್ಕೆ ಅವರು ಕ್ಷಮೆಯಾಚಿಸಬೇಕು. ಬಿಜೆಪಿ ಅವರನ್ನು ಡಿಸಿಎಂ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದೆ. ಇದನ್ನೂ ಓದಿ: ಜಮ್ಮು & ಕಾಶ್ಮೀರದಲ್ಲಿ 2 ಎನ್‌ಕೌಂಟರ್ – ಭಾರತೀಯ ಸೇನೆ 6 ಉಗ್ರರನ್ನು ಹೊಡೆದುರುಳಿಸಿದ್ದು ಹೇಗೆ?
ಕಲಬುರಗಿ: ಏ.22ರಂದು ಪಹಲ್ಗಾಮ್ ದಾಳಿಯಾದ (Pahalgam Terrorist Attack) ನಂತರದಿಂದ ಮೇ12ರವರೆಗೆ ಮೋದಿ (PM Modi) ಎಲ್ಲಿಯೂ ಕಾಣಿಸಿಕೊಂಡಿಲ್ಲ. ಈ ಮಧ್ಯೆ ಮೋದಿ ಎಲ್ಲಿಗೆ ಹೋಗಿದ್ದರು ಎಂದು ಬಹಿರಂಗಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಆಗ್ರಹಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುದ್ಧ ವಿರಾಮ ಘೋಷಣೆ ಬಳಿಕ ಅದಮ್‌ಪುರ ಸೇನಾ ಕೇಂದ್ರಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ, ನಮ್ಮ ಸೈನಿಕರಿಗೆ ನೈತಿಕ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಆದರೆ ಮೋದಿ ಹಲವು ಪ್ರಶ್ನೆಗಳಿಗೆ ಇಲ್ಲಿಯವರೆಗೂ ಉತ್ತರಿಸಿಲ್ಲ. ಏ.22ರಂದು ಪಹಲ್ಗಾಮ್ ಘಟನೆ ನಡೆದಾಗಲೂ ಪ್ರಧಾನಿ ಮೋದಿ ಬಿಹಾರ ಚುನಾವಣೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇದಾದ ಬಳಿಕ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಮಾಕ್ ಡ್ರಿಲ್ ನಡೆದ ಭಾರತದ ಗಡಿ ಭಾಗದಲ್ಲೂ ಮೋದಿ ಕಂಡು ಬರಲಿಲ್ಲ. ಟ್ರಂಪ್ ಯುದ್ಧ ವಿರಾಮ ಘೋಷಣೆ ಮಾಡಿದ ಬಳಿಕ ಮೇ 12ರಂದು ಪ್ರಧಾನಿ ಮೋದಿ ಮನ್ ಕೀ ಬಾತ್‌ನಲ್ಲಿ ಕಾಣಿಸಿಕೊಂಡರು. ಹಾಗಾದರೆ, ಏಪ್ರಿಲ್ 22ರಿಂದ ಮೇ 12ರವರೆಗೆ ಪ್ರಧಾನಿ ಮೋದಿ ಎಲ್ಲಿಗೆ ಹೋಗಿದ್ದರು? ಎಂಬುದನ್ನು ಬಹಿರಂಗಪಡಿಸಲಿ ಎಂದರು. ಇದನ್ನೂ ಓದಿ: ರಾಜಕಾರಣಿಗಳ ಜೊತೆ ಡೇಟಿಂಗ್‌ಗೆ ಬಾ – ಟಾರ್ಚರ್ ಕೊಟ್ಟವನ ಚಳಿ ಬಿಡಿಸಿದ ನಮ್ರತಾ
ಮೋದಿ ಆಪ್ತ ಮಿತ್ರ ಟ್ರಂಪ್ ಈವರೆಗೆ ನಾಲ್ಕು ಬಾರಿ ಭಾರತ ಮತ್ತು ಪಾಕ್ ಮಧ್ಯೆ ಯುದ್ಧ ನಿಲ್ಲಿಸಿರುವುದಾಗಿ ಹೇಳಿಕೊಂಡಿದ್ದಾರೆ. ಮಂಗಳವಾರ ಸೌದಿ ಅರೇಬಿಯಾದಲ್ಲಿಯೂ ಟ್ರಂಪ್ ಅದನ್ನೇ ಹೇಳಿದ್ದಾರೆ. ಇಷ್ಟು ಸಾಲದು ಎಂಬಂತೆ ನಮ್ಮನ್ನು ಉಗ್ರ ರಾಷ್ಟ್ರಕ್ಕೆ ಟ್ರಂಪ್ ಹೋಲಿಕೆ ಮಾಡುತ್ತಿದ್ದಾರೆ. ಇಷ್ಟಾದರೂ, ಮೋದಿ ಏಕೆ ಮೌನವಹಿಸಿದ್ದಾರೆ ಎಂದು ಅಚ್ಚರಿ ವ್ಯಕ್ತಪಡಿಸಿದರು.
ಪ್ರತಿ ಬಾರಿಯೂ ತಮ್ಮಿಂದಲೇ ಕದನ ವಿರಾಮ ಸಾಧ್ಯವಾಗಿದೆ ಎಂದು ಟ್ರಂಪ್ ಹೇಳುತ್ತಿದ್ದಾರೆ. ಹಾಗಾದರೆ, ನಮ್ಮ ವಿದೇಶಾಂಗ ನೀತಿ ಟ್ರಂಪ್ ಅವರಿಗೆ ಅಡವಿಡಲಾಗಿದೆಯೇ? ಒಂದು ಕಡೆ ಟ್ರಂಪ್, ಈ ಎರಡು ದೇಶಗಳು ನನ್ನಿಂದಲೇ ನಡೆಯುತ್ತಿವೆ ಎಂಬರ್ಥದಲ್ಲಿ ಮಾತನಾಡುತ್ತಿದ್ದಾರೆ. ಆದರೂ ಮೋದಿ ಮೌನವಾಗಿದ್ದಾರೆ. ನಮ್ಮ ರಾಷ್ಟ್ರದ ಘನತೆ-ಗೌರವ ಬೇರೆ ರಾಷ್ಟ್ರದ ಬಳಿ ಇಡಬೇಡಿ. ಅವರು (ಟ್ರಂಪ್) ನಿಮಗೆ ಸ್ನೇಹಿತರೇ ಆಗಿದ್ದರೂ ಸರಿ, ನಮ್ಮನ್ನು ಅವರ ಬಳಿ ಅಡವಿಡಬೇಡಿ ಎಂದರು.
ಬಹಿರಂಗವಾಗಿ ಸುದ್ದಿಗೋಷ್ಠಿ ಮಾಡುವಂತೆ ಮೋದಿಗೆ ಸವಾಲ್
ಮೋದಿಯವರ ಮನ್ ಕೀ ಬಾತ್ ಕೇಳಿ ಕೇಳಿ ಜನರ ಕಿವಿ ಕಿತ್ತು ಹೋಗಿದೆ. ಹಾಗಾಗಿ, ಕನಿಷ್ಠ ನಿಮ್ಮದೇ ಮೀಡಿಯಾ ಸ್ನೇಹಿತರು ಹಾಗೂ ಇತರ ಮಾಧ್ಯಮದವರ ಜೊತೆ ಸುದ್ದಿಗೋಷ್ಠಿ ಮಾಡಿದರೆ ನಮ್ಮ ಪ್ರಧಾನಿಗೆ 56 ಇಂಚಿನೆದೆ ಇದೆ ಎಂದು ನಾವೆಲ್ಲರೂ ಒಪ್ಪುತ್ತೇವೆ ಎಂದು ಲೇವಡಿ ಮಾಡಿದರು.ಇದನ್ನೂ ಓದಿ: ಕಾರವಾರಕ್ಕೆ ಸರಕು ಹಡಗಿನಲ್ಲಿ ಆಗಮಿಸಿದ್ದ ಪಾಕ್ ಪ್ರಜೆ ಶಿಪ್ ಸಮೇತ ವಾಪಸ್
ನವದೆಹಲಿ: ಆಪರೇಷನ್ ಸಿಂಧೂರದ (Operation Sindoor) ಬಳಿಕ ವಿದೇಶಾಂಗ ಸಚಿವ ಎಸ್.ಜೈಶಂಕರ್‌ಗೆ (S Jaishankar) ಸೇರಿ 25 ಪ್ರಮುಖರಿಗೆ ಭದ್ರತೆ ಹೆಚ್ಚಿಸಲಾಗಿದ್ದು, ಬುಲೆಟ್ ಪ್ರೂಫ್ ಕಾರು, ಕಮಾಂಡೋ ಸೆಕ್ಯೂರಿಟಿಯನ್ನು ನೀಡಲಾಗಿದೆ.
ದೆಹಲಿ ಪೊಲೀಸ್ ಆಯುಕ್ತ ಸಂಜಯ್ ಅರೋರಾ ಅವರು ಹಿರಿಯ ಅಧಿಕಾರಿಗಳೊಂದಿಗೆ ಭಾನುವಾರ ನಡೆಸಿದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, 25 ವಿಐಪಿಗಳ ಪಟ್ಟಿಯನ್ನು ತಯಾರಿಸಲಾಗಿದೆ. ಪಟ್ಟಿಯಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಜೆಪಿ ನಡ್ಡಾ, ಭೂಪೇಂದರ್ ಯಾದವ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಬಿಜೆಪಿ ಸಂಸದ ನಿಶಿಕಾಂತ್ ದುಬೆ, ಸುಧಾಂಶು ತ್ರಿವೇದಿ ಹಾಗೂ ಬಿಜೆಪಿಯ ಪ್ರಮುಖ ನಾಯಕ ಮುರಳಿ ಮನೋಹರ್ ಜೋಶಿ ಅವರ ಹೆಸರಿದೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ Z ಸೆಕ್ಯೂರಿಟಿ ಹೊಂದಿರುವ ಜೈಶಂಕರ್ ಅವರಿಗೆ ಮತ್ತೆ ಭದ್ರತೆ ಹೆಚ್ಚಿಸಲಾಗಿದ್ದು, ಒಂದು ಬುಲೆಟ್ ಪ್ರೂಫ್ ಕಾರು, 4-6 ಕಮಾಂಡೋ ಸೇರಿ 22 ಸಿಬ್ಬಂದಿ, ಭದ್ರತೆಗೆ ಬೆಂಗಾವಲು ವಾಹನಗಳು, 33 ಸಿಆರ್‌ಪಿಎಫ್ ಕಮಾಂಡೋ ಹಾಗೂ ದಿನದ 24/7 ಭದ್ರತೆ ನೀಡಲಾಗಿದೆ. ಜೊತೆಗೆ ದೆಹಲಿಯಲ್ಲಿರುವ ಸರ್ಕಾರಿ ನಿವಾಸಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ. ಇದಕ್ಕೂ ಮುನ್ನ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಜೈಶಂಕರ್ ಅವರ ಭದ್ರತೆಯನ್ನು Y ನಿಂದ Zಗೆ ಹೆಚ್ಚಿಸಲಾಗಿತ್ತು.
ಭದ್ರತೆಗಾಗಿ ಒದಗಿಸುತ್ತಿರುವ ಕಾರುಗಳಲ್ಲಿ ಪ್ರಥಮ ಚಿಕಿತ್ಸಾ ಕಿಟ್ ಇರಿಸುವಂತೆ ಹಾಗೂ ಭದ್ರತಾ ಸಿಬ್ಬಂದಿಗೆ ಫೈರಿಂಗ್ ಹಾಗೂ ವೈದ್ಯಕೀಯ ತುರ್ತು ಪರಿಸ್ಥಿತಿಗಳ ಕುರಿತು ತರಬೇತಿ ನೀಡುವಂತೆ ತಿಳಿಸಲಾಗಿದೆ.
ಮೇ 7ರಂದು ಭಾರತೀಯ ಸೇನೆ ನಡೆಸಿದ `ಆಪರೇಷನ್ ಸಿಂಧೂರ್’ದಲ್ಲಿ ಪಾಕ್‌ನ 9 ಭಯೋತ್ಪಾದಕ ತಾಣಗಳ ಮೇಲೆ ದಾಳಿ ನಡೆಸಲಾಗಿತ್ತು. ಇದಾದ ಬಳಿಕ ಪಾಕ್ ನಿಯಂತ್ರಣ ರೇಖೆ, ಜಮ್ಮು ಮತ್ತು ಕಾಶ್ಮೀರದಾದ್ಯಂತ ಅಪ್ರಚೋದಿತ ಶೆಲ್ ದಾಳಿ ನಡೆಸಿತು. ಬಳಿಕ ಮೇ 10ರಂದು, ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಘೋಷಿಸಿದ್ದು, ಇದಾದ ಬಳಿಕ ಈ ಬೆಳವಣಿಗೆ ನಡೆದಿದೆ.ಇದನ್ನೂ ಓದಿ: ಶೋಪಿಯಾನ್‌ನಲ್ಲಿ ಉಗ್ರರ ಹತ್ಯೆ- ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದ ಭದ್ರತಾ ಪಡೆ
– ಚೀನಾ ನಮ್ಮೊಂದಿಗಿದೆ, ಟ್ರಂಪ್‌ಗೂ ಧನ್ಯವಾದ ಹೇಳಿದ ಷರೀಫ್
– ಭಾರತದ ದಾಳಿಗಳು ವಿಫಲವಾಗಿದೆ ಎಂದು ಬುರುಡೆ ಬಿಟ್ಟ ಪಿಎಂ
ನವದೆಹಲಿ: ಕದನ ವಿರಾಮ (Ceasefire) ಮುರಿಯುವುದು ಪಾಕ್ ಹಳೆಯ ಚಾಳಿಯಾಗಿಬಿಟ್ಟಿದೆ. ಭಾರತೀಯ ಸೇನಾ ದಾಳಿಗೆ ʻಕಪಟ ವಿರಾಮʼದ ನಾಟಕವಾಡಿದ್ದ ಪಾಕ್ ಮತ್ತೆ ಬಾಲ ಬಿಚ್ಚಿದೆ. ಕದನ ವಿರಾಮ ಘೋಷಣೆಯಾದ ಕೆಲವೇ ಗಂಟೆಗಳ ಬಳಿಕ ಭಾರತದ ಗಡಿಯಲ್ಲಿ ದಾಳಿ ನಡೆಸಿದೆ ಎನ್ನಲಾಗಿದ್ದು, ಜಮ್ಮುವಿನ ಅಖ್ನೂರ್, ಕನಾಚಕ್, ಪರ್ಗ್ವಾಲ್, ರಾಮನಗರ ವಲಯಗಳಲ್ಲಿ ಜೋರಾಗಿ ಸ್ಫೋಟದ ಸದ್ದು ಕೇಳಿಬಂದಿವೆ.
ಶನಿವಾರ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif), ಭಾರತ ಇತ್ತೀಚೆಗೆ ಮಾಡಿದ್ದು ತಪ್ಪು, ಅದಕ್ಕೆ ನಮ್ಮ ಸೇನೆ ಸೂಕ್ತ ಉತ್ತರ ಕೊಟ್ಟಿದೆ. ಪಹಲ್ಗಾಮ್ ದಾಳಿಯನ್ನ ನೆಪವಾಗಿಟ್ಟುಕೊಂಡು ಭಾರತ ನಮ್ಮ ಮೇಲೆ ಯುದ್ಧ ಹೇರಿತು. ಭಾರತದ ಆಧಾರರಹಿತ ಆರೋಪಗಳ ಬಗ್ಗೆ ಪಾಕಿಸ್ತಾನ ಮತ್ತೊಮ್ಮೆ ನಿಷ್ಪಕ್ಷಪಾತ ತನಿಖೆಯನ್ನು ನಡೆಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಮತ್ತೆ ಕದನ ವಿರಾಮ ಉಲ್ಲಂಘಿಸಿ ಬಾಲ ಬಿಚ್ಚಿದ ಪಾಕ್ – ಜಮ್ಮು, ರಾಜಸ್ಥಾನದ ಹಲವೆಡೆ ಸ್ಫೋಟದ ಸದ್ದು
ಭಾರತವು ಡ್ರೋನ್ ಮತ್ತು ಕ್ಷಿಪಣಿ ದಾಳಿಗಳ ಮೂಲಕ ಪಾಕಿಸ್ತಾನಿ ನಾಗರಿಕರನ್ನು ಗುರಿಯಾಗಿಸಿಕೊಂಡಿದೆ. ಭಾರತ ವಸತಿ ಪ್ರದೇಶಗಳ ಮೇಲೆ ದಾಳಿ ಮಾಡುವ ಮೂಲಕ ನಮ್ಮ ತಾಳ್ಮೆಯನ್ನ ಪರೀಕ್ಷಿಸಿತು. ಪಾಕಿಸ್ತಾನದ ಸೇನಾ ಶಿಬಿರಗಳು ಮತ್ತು ಶಸ್ತ್ರಾಸ್ತ್ರ ಡಿಪೋಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಭಾರತೀಯ ಸೇನೆ ವಿಫಲ ಪ್ರಯತ್ನಗಳನ್ನು ಮಾಡಿತು ಎಂದು ಬೊಗಳೆ ಬಿಟ್ಟಿದ್ದಾರೆ. ಇದನ್ನೂ ಓದಿ: ಭೂ, ಜಲ, ವಾಯು ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಿ ಕದನ ವಿರಾಮಕ್ಕೆ ಭಾರತ-ಪಾಕ್ ಒಪ್ಪಿಗೆ
ಟ್ರಂಪ್‌ಗೆ ಕೃತಜ್ಞತೆ
ಇದೇ ವೇಳೆ ಕದನ ವಿರಾಮಕ್ಕಾಗಿ ಶೆಹಬಾಜ್ ಷರೀಫ್ ಚೀನಾ, ಡೊನಾಲ್ಡ್ ಟ್ರಂಪ್ ಮತ್ತು ಗಲ್ಫ್ ರಾಷ್ಟ್ರಗಳಿಗೆ ಧನ್ಯವಾದ ಅರ್ಪಿಸಿದರು. ನಾನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಜೊತೆಗೆ ಕದನ ವಿರಾಮದಲ್ಲಿ ಪ್ರಮುಖ ಪಾತ್ರ ವಹಿಸಿದ ಸೌದಿ ಅರೇಬಿಯಾ, ಯುಎಇ, ಟರ್ಕಿ ಮತ್ತು ಕತಾರ್‌ಗಳಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು. ಇದನ್ನೂ ಓದಿ: ಗುಂಡಿನ ದಾಳಿ, ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಲು ಭಾರತ-ಪಾಕ್ ಒಪ್ಪಂದ: ಜೈಶಂಕರ್
ಚೀನಾಕ್ಕೆ ವಿಶೇಷ ಧನ್ಯವಾದ
ಇನ್ನೂ ಪಾಕ್ ಪ್ರಧಾನಿ ಚೀನಾವನ್ನ ತನ್ನ ವಿಶ್ವಾಸಾರ್ಹ ಸ್ನೇಹಿತ ಎಂದು ಬಣ್ಣಿಸಿದ್ರು. ಚೀನಾವನ್ನ ಉಲ್ಲೇಖಿಸದೆ ನನ್ನ ಭಾಷಣ ಅಪೂರ್ಣ. ನಾನು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆ ಅರ್ಪಿಸುತ್ತೇನೆ. 5 ದಶಕಗಳಿಗೂ ಹೆಚ್ಚು ಕಾಲ, ಪ್ರತಿಯೊಂದು ಬಿಕ್ಕಟ್ಟಿನಲ್ಲಿಯೂ ಚೀನಾ ನಮ್ಮೊಂದಿಗೆ ನಿಂತಿದೆ ಎಂದು ಬೀಗಿದರು. ಇದನ್ನೂ ಓದಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಚೀನಾ ಖಂಡಿಸುತ್ತದೆ: ಅಜಿತ್ ದೋವಲ್‌ಗೆ ಫೋನ್ ಕರೆಯಲ್ಲಿ ಚೀನಾ ಸ್ಪಷ್ಟನೆ
– ಲಷ್ಕರ್-ಎ-ತೈಬಾದ ಇಬ್ಬರು, ಜೈಶ್-ಎ-ಮೊಹಮ್ಮದ್‌ನ ಮೂವರು ಉಗ್ರರು ಬಲಿ
ನವದೆಹಲಿ: ಪಹಲ್ಗಾಮ್ ದಾಳಿಗೆ(Pahalgam Attack) ಪ್ರತೀಕಾರವಾಗಿ ಮೇ 7ರಂದು `ಆಪರೇಷನ್ ಸಿಂಧೂರ'(Operation Sindoor) ಹೆಸರಿನಡಿಯಲ್ಲಿ ಭಾರತ ಮಾಡಿದ್ದ ದಾಳಿಗೆ ಭಾರತಕ್ಕೆ ಬೇಕಾಗಿದ್ದ 5 ಉಗ್ರರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಏ.22ರಂದು ಪಾಕ್‌ನ ಉಗ್ರರು ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ಮಾಡಿ 26 ಮಂದಿ ಅಮಾಯಕರನ್ನು ಕೊಂದಿದ್ದರು. ಇದಕ್ಕೆ ಪ್ರತೀಕಾರ ದಾಳಿಯಾದ ಮೇ 7ರಂದು ಪಾಕ್ 9 ಸ್ಥಳಗಳಲ್ಲಿ ಉಗ್ರರ ಅಡಗುತಾಣಗಳ ಮೇಲೆ ದಾಳಿ ಮಾಡಿತ್ತು. ಈ ದಾಳಿಯಲ್ಲಿ ಭಾರತಕ್ಕೆ ಬೇಕಿದ್ದ ಐವರು ಉಗ್ರರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಯುದ್ಧ ಭೀತಿ – ಕರ್ನಾಟಕದ ಪೊಲೀಸರಿಗೆ ರಜೆ ರದ್ದು: ಪರಮೇಶ್ವರ್
ಮುದಸ್ಸರ್ ಖಾದಿಯಾನ್ ಖಾಸ್(Mudassar Khadian Khas) ಅಲಿಯಾಸ್ ಮುದಸ್ಸರ್ ಅಲಿಯಾಸ್ ಅಬು ಹತನಾಗಿದ್ದಾನೆ. ಈತ ಉಗ್ರ ಸಂಘಟನೆಯಾದ ಲಷ್ಕರ್-ಎ-ತೈಬಾದಲ್ಲಿ ಸಕ್ರಿಯನಾಗಿದ್ದ. ಅಲ್ಲದೇ ಮುರಿಡ್ಕೆಯ ಮರ್ಕಜ್ ತೈಬಾದ ಉಸ್ತುವಾರಿಯಾಗಿದ್ದ. ಈತನ ಅಂತ್ಯಕ್ರಿಯೆ ವೇಳೆ ಪಾಕಿಸ್ತಾನ ಸೇನೆಯು ಗೌರವ ವಂದನೆ ಸಲ್ಲಿಸಿತ್ತು. ಪಾಕ್ ಸೇನಾ ಮುಖ್ಯಸ್ಥ ಮತ್ತು ಪಂಜಾಬ್ ಸಿಎಂ ಮರ್ಯಮ್ ನವಾಜ್ ಪರವಾಗಿ ಮಾಲಾರ್ಪಣೆ ಮಾಡಲಾಯಿತು. ಜೆಯುಡಿನ ಹಫೀಜ್ ಅಬ್ದುಲ್ ರೌಫ್ ನೇತೃತ್ವದಲ್ಲಿ ಸರ್ಕಾರಿ ಶಾಲೆಯಲ್ಲಿ ಅಂತ್ಯಕ್ರಿಯೆಯ ಪ್ರಾರ್ಥನೆ ಸಲ್ಲಿಸಲಾಯಿತು. ಈತನ ಅಂತ್ಯಕ್ರಿಯೆಯಲ್ಲಿ ಪಾಕ್ ಸೇನೆಯ ಲೆಫ್ಟಿನೆಂಟ್ ಜನರಲ್ ಮತ್ತು ಪಂಜಾಬ್ ಪೊಲೀಸ್ ಐಜಿ ಭಾಗವಹಿಸಿದ್ದರು. ಇದನ್ನೂ ಓದಿ: ಪಾಕ್ ಶೆಲ್ ದಾಳಿಗೆ ಜಮ್ಮು ಕಾಶ್ಮೀರದ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು
ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಹಫೀಜ್ ಮುಹಮ್ಮದ್ ಜಮೀಲ್(Hafiz Muhammed Jameel) ಮೃತಪಟ್ಟಿದ್ದಾನೆ. ಈತ ಮೌಲಾನಾ ಮಸೂದ್ ಅಜರ್‌ನ ಹಿರಿಯ ಸೋದರ ಮಾವನಾಗಿದ್ದ. ಅಲ್ಲದೇ ಬಹವಲ್ಪುರದ ಮರ್ಕಜ್ ಸುಭಾನ್ ಅಲ್ಲಾದ ಉಸ್ತುವಾರಿಯಾಗಿದ್ದ. ಯುವಕರ ಮೂಲಭೂತ ಬೋಧನೆ ಮತ್ತು ಜೆಇಎಂಗೆ ನಿಧಿಸಂಗ್ರಹಣೆಯಲ್ಲಿ ಹಫೀಜ್ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ.
ಜೈಶ್-ಎ-ಮೊಹಮ್ಮದ್‌ನಲ್ಲಿ ಸಕ್ರಿಯನಾಗಿದ್ದ ಮತ್ತೊಬ್ಬ ಉಗ್ರ ಮೊಹಮ್ಮದ್ ಯೂಸುಫ್ ಅಜರ್(Mohammad Yusuf Azhar) ಅಲಿಯಾಸ್ ಉಸ್ತಾದ್ ಜಿ ಅಲಿಯಾಸ್ ಮೊಹಮ್ಮದ್ ಸಲೀಮ್ ಅಲಿಯಾಸ್ ಘೋಸಿ ಸಹಾಬ್ ಸಾವನ್ನಪ್ಪಿದ್ದಾನೆ. ಈತನೂ ಸಹ ಮೌಲಾನಾ ಮಸೂದ್ ಅಜರ್‌ನ ಸೋದರ ಮಾವನಾಗಿದ್ದ. ಈತ ಜೆಇಎಂಗಾಗಿ ಶಸ್ತ್ರಾಸ್ತ್ರ ತರಬೇತಿಯನ್ನು ನಿರ್ವಹಿಸಿದ್ದ. ಅಲ್ಲದೇ ಜಮ್ಮು ಮತ್ತು ಕಾಶ್ಮೀರದಲ್ಲಿ ಅನೇಕ ಭಯೋತ್ಪಾದಕ ದಾಳಿಗಳಲ್ಲಿ ಭಾಗಿಯಾಗಿದ್ದ. ಈತ ಇಂಡಿಯನ್ ಏರ್‌ಲೈನ್ಸ್ ವಿಮಾನ ಅಪಹರಣ ಪ್ರಕರಣದಲ್ಲಿ ಬೇಕಾಗಿದ್ದ. ಇದನ್ನೂ ಓದಿ: Video | ರಾಜಸ್ಥಾನದ ಪೋಖ್ರಾನ್ ಮೇಲೆ ಪಾಕ್ ಬಳಸಿದ ಬೃಹತ್ ಮಿಸೈಲ್ ಉಡೀಸ್!
ಉಗ್ರ ಸಂಘಟನೆಯಾದ ಲಷ್ಕರ್-ಎ-ತೈಬಾದ ಉಗ್ರ ಅಬು ಆಕಾಶಾ(Abu Akasha) ಅಲಿಯಾಸ್ ಖಾಲಿದ್ ಹತನಾಗಿದ್ದಾನೆ. ಈತ ಜಮ್ಮು ಮತ್ತು ಕಾಶ್ಮೀರದಲ್ಲಿ ಅನೇಕ ಭಯೋತ್ಪಾದಕ ದಾಳಿಗಳಲ್ಲಿ ಭಾಗಿಯಾಗಿದ್ದ. ಅಲ್ಲದೇ ಅಫ್ಘಾನಿಸ್ತಾನದಿಂದ ಶಸ್ತ್ರಾಸ್ತ್ರ ಕಳ್ಳಸಾಗಣೆಯಲ್ಲಿ ತೊಡಗಿದ್ದ. ಫೈಸಲಾಬಾದ್‌ನಲ್ಲಿ ನಡೆದ ಈತನ ಅಂತ್ಯಕ್ರಿಯೆಯಲ್ಲಿ ಹಿರಿಯ ಪಾಕಿಸ್ತಾನಿ ಸೇನಾ ಅಧಿಕಾರಿಗಳು ಮತ್ತು ಫೈಸಲಾಬಾದ್‌ನ ಉಪ ಆಯುಕ್ತರು ಭಾಗವಹಿಸಿದ್ದರು. ಇದನ್ನೂ ಓದಿ: ಪೊಲೀಸರೇ ಅರೆಸ್ಟ್ – ಪಾಕ್ ಹಿಡಿತದಲ್ಲಿದ್ದ ನಗರ ವಶಕ್ಕೆ ಪಡೆದ ಬಲೂಚ್ ಹೋರಾಟಗಾರರು
ಜೈಶ್-ಎ-ಮೊಹಮ್ಮದ್‌ನಲ್ಲಿ ಸಕ್ರಿಯನಾಗಿದ್ದ ಮೊಹಮ್ಮದ್ ಹಸನ್ ಖಾನ್(Mohammad Hassan Khan) ಮೃತಪಟ್ಟಿದ್ದಾನೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ(ಪಿಒಕೆ) ಜೆಇಎಂನ ಕಾರ್ಯಾಚರಣಾ ಕಮಾಂಡರ್ ಮುಫ್ತಿ ಅಸ್ಗರ್ ಖಾನ್ ಕಾಶ್ಮೀರಿ ಅವರ ಮಗನಾಗಿದ್ದ. ಹಸನ್ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗಳನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ. ಇದನ್ನೂ ಓದಿ: ಆಸ್ಪತ್ರೆ, ಮೂಲಸೌಕರ್ಯ ಗುರಿಯಾಗಿಸಿ ಪಾಕ್ ಮಿಸೈಲ್ ದಾಳಿ, ತಕ್ಕ ಉತ್ತರ ಕೊಟ್ಟಿದ್ದೇವೆ: ವ್ಯೋಮಿಕಾ ಸಿಂಗ್
ಪ್ರಮುಖ ಉಗ್ರ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಈ 5 ಉಗ್ರರು ಆಪರೇಷನ್ ಸಿಂಧೂರದಲ್ಲಿ ಮೃತಪಟ್ಟಿದ್ದಾರೆ. ಇದೀಗ ಭಾರತ ಹಾಗೂ ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿದೆ.
ಕಾರವಾರ: ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ(Pahalgam Terror Attack) ನಡೆಸಿ ಹಿಂದೂಗಳ ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಕಾರವಾರದಲ್ಲಿ ಮೇ 7 ರಂದು ಕರ್ನಾಟಕ ರಾಜ್ಯ ಸನಾತನ ಧರ್ಮ ರಕ್ಷಣಾ ವೇದಿಕೆ ಕಾರವಾರ ಬಂದ್( ಕರೆ ನೀಡಿತ್ತು. ಆದರೆ, ಇದೀಗ ನಾಳೆ ಬಂದ್ ಇರುವುದಿಲ್ಲ ಎಂದು ಎಸ್.ಪಿ ಎಂ.ನಾರಾಯಣ್ ತಿಳಿಸಿದ್ದಾರೆ.
ಕಾರವಾರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು, ಕಾರವಾರದಲ್ಲಿ ನಾಳೆ ಬಂದ್ ಇರುವುದಿಲ್ಲ. ಸಂಘಟನೆಗಳು ಬಂದ್‌ಗೆ ಕರೆಕೊಟ್ಟಿದ್ದವು. ಸಂಘಟಕರ ಜೊತೆ ಮಾತನಾಡಲಾಗಿದ್ದು, ಬಂದ್ ಇರುವುದಿಲ್ಲ. ಬದಲಾಗಿ ಮೆರವಣಿಗೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಕಲ್ಲತ್ತಿಗಿರಿಯಲ್ಲಿ ಧರೆಗುರುಳಿದ ಬೃಹತ್ ಮರ – ಆಟೋ, ಕಾರು ಜಖಂ, ಓರ್ವನ ಕೈ ಮುರಿತ
ಕಾರವಾರದಲ್ಲಿ ಹಿಂದೂ ಸಂಘಟನೆಗಳು ಮೇ 7 ಕ್ಕೆ ಬಂದ್‌ಗೆ ಕರೆ ಕೊಟ್ಟಿದ್ದರು. ಸದ್ಯ ಸಂಘಟನೆಗಳು ಕೂಡ ಬಂದ್ ಮಾಡುವುದಿಲ್ಲ ಎಂದು ತಿಳಿಸಿದ್ದು, ನಾಳೆ ಕೇವಲ ಮೆರವಣಿಗೆ ಇರಲಿದೆ ಎಂದಿದ್ದಾರೆ.