Tag: ಪಹಲ್ಗಾಮ್ ದಾಳಿ

  • ಭಾರತ-ಪಾಕ್‌ ನಡುವೆ ಯುದ್ಧ ಛಾಯೆ – ಮೇ 7ರಂದು ದೇಶಾದ್ಯಂತ ಮಾಕ್ ಡ್ರಿಲ್

    ಭಾರತ-ಪಾಕ್‌ ನಡುವೆ ಯುದ್ಧ ಛಾಯೆ – ಮೇ 7ರಂದು ದೇಶಾದ್ಯಂತ ಮಾಕ್ ಡ್ರಿಲ್

    – 30 ನಿಮಿಷ ಲೈಟ್ಸ್‌ ಆಫ್‌; ಪಂಜಾಬ್ ಗಡಿಯಲ್ಲಿ ಸೇನೆಯಿಂದ ಡ್ರಿಲ್

    ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿ ಬಳಿಕ ಭಾರತ-ಪಾಕಿಸ್ತಾನ (India Vs Pakistan) ನಡುವೆ ಯುದ್ಧದ ಭೀತಿ ಹೆಚ್ಚಾಗುತ್ತಲೇ ಇದೆ. ಉಭಯ ರಾಷ್ಟ್ರಗಳು ಪೂರ್ವಸಿದ್ಧತೆ ಮಾಡಿಕೊಳ್ಳುತ್ತಿವೆ. ಅದರ ಮುಂದುವರಿದ ಭಾಗವಾಗಿ ಮೇ 7ರಂದು ದೇಶಾದ್ಯಂತ ಮಾಕ್ ಡ್ರಿಲ್ (Mock Drills) ನಡೆಯಲಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

    ನಾಗರಿಕರ ರಕ್ಷಣೆ ಸಂಬಂಧ ಭದ್ರತಾ ತಾಲೀಮು ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ಎಲ್ಲ ರಾಜ್ಯಗಳಿಗೆ ಸೂಚನೆ ನೀಡಿದೆ. ಒಟ್ಟು 5 ಹಂತಗಳಲ್ಲಿ ಮಾಕ್‌ ಡ್ರಿಲ್‌ (ಅಣುಕು ಕಾರ್ಯಾಚರಣೆ) ನಡೆಸುವಂತೆ ಸೂಚಿಸಿದೆ. ದೇಶದ ಆಂತರಿಕ ಭದ್ರತೆ ಮತ್ತು ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಸನ್ನದ್ಧತೆಯನ್ನು ಬಲಪಡಿಸುವ ಉದ್ದೇಶದಿಂದ ಈ ತಾಲೀಮು ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಯುದ್ಧ ಕಾರ್ಮೋಡ; ಭಾರತ ಸಮರಭ್ಯಾಸ – ಪಾಕ್‌ನಿಂದ ಫತಾಹ್ ಕ್ಷಿಪಣಿ ಪರೀಕ್ಷೆ

    ಹೇಗಿರಲಿದೆ ಮಾಕ್‌ ಡ್ರಿಲ್‌?
    1. ವಾಯುದಾಳಿ ಎಚ್ಚರಿಕೆಗೆ ಸಂಬಂಧಿಸಿದಂತೆ ಸೈರನ್‌ಗಳ ಕಾರ್ಯಾಚರಣೆ
    2. ಪ್ರತಿಕೂಲ ದಾಳಿಯ ಸಂದರ್ಭದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ನಾಗರಿಕರು, ವಿದ್ಯಾರ್ಥಿಗಳು ಇತ್ಯಾದಿಗಳಿಗೆ ನಾಗರಿಕ ರಕ್ಷಣಾ ಅಂಶಗಳ ಕುರಿತು ತರಬೇತಿ ನೀಡುವುದು.
    3. ಕ್ರ್ಯಾಶ್ ಬ್ಲ್ಯಾಕೌಟ್ ಕ್ರಮಗಳನ್ನು ಒದಗಿಸುವುದು
    4. ಪ್ರಮುಖ ಸ್ಥಾವರಗಳು/ಅನುಷ್ಠಾನವನ್ನು ಆರಂಭಿಕ ಮರೆಮಾಚುವಿಕೆ ತಂತ್ರಗಾರಿಕೆಗೆ ಅವಕಾಶ
    5. ಸ್ಥಳಾಂತರಿಸುವ ಯೋಜನೆಯ ನವೀಕರಣ ಮತ್ತು ಅದರ ಪೂರ್ವಾಭ್ಯಾಸ ಮಾಡುವುದು ಇದರ ಹಂತಗಳಾಗಿವಿವೆ.

    ಪಂಜಾಬ್ ಗಡಿಯಲ್ಲಿ ಸೇನೆಯಿಂದ ಮಾಕ್ ಡ್ರಿಲ್:
    ಯುದ್ಧ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್‌ನ ಫಿರೋಜ್‌ ಪುರದಲ್ಲಿ ಭಾನುವಾರ (ಮೇ 5) ರಾತ್ರಿ 9 ಗಂಟೆಯಿಂದ 9:30ರ ವರೆಗೆ ಸೂಕ್ಷ್ಮ ಪ್ರದೇಶದಲ್ಲಿ ಲೈಟ್ಸ್‌ ಆಫ್‌ ಮಾಡಿ ಮಾಕ್‌ ಡ್ರಿಲ್‌ ನಡೆಸಲಾಯಿತು. ನಿಗದಿತ ತಾಲೀಮು ಸಮಯದಲ್ಲಿ ವಿದ್ಯುತ್‌ ಕಡಿತಗೊಳಿಸುವಂತೆ ಅಧಿಕಾರಿಗಳು ಪಂಜಾಬ್ ರಾಜ್ಯ ವಿದ್ಯುತ್ ನಿಗಮ ಲಿಮಿಟೆಡ್ (ಪಿಎಸ್‌ಪಿಸಿಎಲ್)ಗೆ ಮುಂಚಿತವಾಗಿಯೇ ತಿಳಿಸಲಾಗಿತ್ತು. ಹಾಗಾಗಿ ಸಂಪೂರ್ಣ ವಿದ್ಯುತ್‌ ಕಡಿತಗೊಳಿಸಿ ಕಠಿಣ ತಾಲೀಮು ನಡೆಸಲಾಯಿತು. ಈ ಮೂಲಕ ರಾತ್ರಿ ಕಾರ್ಯಾಚರಣೆಗೆ ಭದ್ರತಾ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲಾಯಿತು. ಇದನ್ನೂ ಓದಿ: ಕಾಶ್ಮೀರದಲ್ಲಿ 2 ಜಲವಿದ್ಯುತ್ ಯೋಜನೆಗಳಿಗೆ ಚಾಲನೆ – ಪಾಕ್‌ಗೆ ಶಾಕ್‌

    ಮುಂದುವರಿದ ಮೋದಿ ಸರಣಿ ಸಭೆ
    ಇನ್ನು ಉಗ್ರರ ಸಂಹಾರಕ್ಕೆ ಶಪಥಗೈದಿರುವ ಪ್ರಧಾನಿ ನರೇಂದ್ರ ಮೋದಿ, ಭದ್ರತಾ ಅಧಿಕಾರಿಗಳ ಜತೆಗಿನ ಸರಣಿ ಸಭೆ ಮಂದುವರಿಸಿದ್ದಾರೆ. ಇವತ್ತು ಸಹ ಹೈವೋಲ್ಟೇಜ್ ಸಭೆ ನಡೆಸಿದ್ದಾರೆ. ಕೇಂದ್ರ ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವ್ರು ಪ್ರಧಾನಿಯವ್ರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ನಿನ್ನೆಯಷ್ಟೇ ರಾಜನಾಥ್ ಸಿಂಗ್ ದೇಶ ಏನು ಬಯಸುತ್ತೋ ಅದನ್ನೇ ಮಾಡ್ತೇವೆ ಅಂತ ಹೇಳಿದ ಬೆನ್ನಲ್ಲೇ ಇವತ್ತು ರಕ್ಷಣಾ ಕಾರ್ಯದರ್ಶಿ, ಎನ್‌ಎಸ್‌ಎ ಭೇಟಿಯಾಗಿರೋದು ಭಾರೀ ಮಹತ್ವ, ಕುತೂಹಲಕ್ಕೆ ಕಾರಣವಾಗಿದೆ. ಇದನ್ನೂ ಓದಿ: ವಕ್ಫ್ ತಿದ್ದುಪಡಿ ಕಾಯ್ದೆ – ಮುಂದಿನ ಸಿಜೆಐ ಪೀಠಕ್ಕೆ ಅರ್ಜಿ ವರ್ಗಾವಣೆ

    ಭಾರತಕ್ಕೆ ರಷ್ಯಾ ಬೆಂಬಲ
    ಇನ್ನು ಸಿಬಿಐ ಮುಖ್ಯಸ್ಥ ನೇಮಕ ಸಂಬಂಧ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಧಾನಿ ಮೋದಿಯನ್ನ ಭೇಟಿಯಾಗಿದ್ದಾರೆ. ಈ ಮಧ್ಯೆ ಭಾರತಕ್ಕೆ ಜಾಗತಿಕವಾಗಿ ಭಾರೀ ಬೆಂಬಲ ವ್ಯಕ್ತವಾಗ್ತಿದೆ. ಮಿತ್ರರಾಷ್ಟ್ರವಾಗಿರುವ ರಷ್ಯಾದಿಂದಲೂ ಉಗ್ರರ ವಿರುದ್ಧ ಭಾರತದ ಹೋರಾಟಕ್ಕೆ ಬೆಂಬಲ ಸಿಕ್ಕಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ಮೋದಿಗೆ ದೂರವಾಣಿ ಕರೆ ಮಾಡಿ ಬೆಂಬಲ ಸೂಚಿಸಿದ್ದಾರೆ. ಪಹ್ಲಗಾಮ್ ಉಗ್ರರ ದಾಳಿಯನ್ನು ಪುಟಿನ್ ಬಲವಾಗಿ ಖಂಡಿಸಿದ್ದಾರೆ. ಉಗ್ರರ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಪುಟಿನ್ ಹೇಳಿದ್ದಾರೆಂದು ವಿದೇಶಾಂಗ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ.

  • ದೊಡ್ಡ ದುರಂತ ತಪ್ಪಿಸಿದ ಭಾರತೀಯ ಸೇನೆ – 5 ಜೀವಂತ ಬಾಂಬ್ ವಶಕ್ಕೆ

    ದೊಡ್ಡ ದುರಂತ ತಪ್ಪಿಸಿದ ಭಾರತೀಯ ಸೇನೆ – 5 ಜೀವಂತ ಬಾಂಬ್ ವಶಕ್ಕೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ (Poonch) ಭಯೋತ್ಪಾದಕರು ಬಳಸುತ್ತಿದ್ದ ಭೂಗತ ಅಡಗುತಾಣವನ್ನು ಸೇನೆ ಭೇದಿಸಿದ್ದು, 5 ಜೀವಂತ ಬಾಂಬ್ ವಶಕ್ಕೆ ಪಡೆದಿದೆ. ಈ ಮೂಲಕ ಭಾರತೀಯ ಸೇನೆಯು (Indian Army) ಅತಿದೊಡ್ಡ ದುರಂತವನ್ನು ತಪ್ಪಿಸಿದೆ.

    ಭಾನುವಾರ ಸಂಜೆ ಪೂಂಚ್‌ನ ಸುರನ್‌ಕೋಟ್(Surankot) ಅರಣ್ಯದಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯ ಸಂದರ್ಭದಲ್ಲಿ ಉಗ್ರರ ಅಡಗುತಾಣದಲ್ಲಿ 5 ಸ್ಫೋಟಕಗಳು, ಐಇಡಿಯಿದ್ದ 3 ಟಿಫನ್ ಬಾಕ್ಸ್, 2 ಸ್ಟೀಲ್ ಬಕೆಟ್ ಪತ್ತೆಯಾಗಿವೆ. ಇದನ್ನೂ ಓದಿ: ಅಮೆರಿಕದ ಹೊರಗಡೆ ತಯಾರಾದ ಸಿನಿಮಾಗಳಿಗೆ 100% ಸುಂಕ – ಟ್ರಂಪ್ ಘೋಷಣೆ

    ಭದ್ರತಾ ಪಡೆಯು ಅಡಗುತಾಣದಲ್ಲಿ ಪತ್ತೆಯಾದ ಸಂಹವನ ಉಪಕರಣವನ್ನು ವಶಕ್ಕೆ ಪಡೆದಿದೆ. ಕಳೆದ ಕೆಲವು ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ರಾಜೌರಿ ಭಯೋತ್ಪಾದಕ ಕೇಂದ್ರಬಿಂದುವಾಗಿದೆ. ಇದನ್ನೂ ಓದಿ: ಯುದ್ಧ ಕಾರ್ಮೋಡದ ನಡುವೆ BSFಗೆ ಇನ್ನಷ್ಟು ಬಲ – 16 ಹೊಸ ಬೆಟಾಲಿಯನ್ ಸೇರ್ಪಡೆ?

    ಭಯೋತ್ಪಾದಕರ (Terrorists) ಈ ಅಡಗುತಾಣವನ್ನು ಪತ್ತೆ ಹಚ್ಚುವ ಮೂಲಕ ಸೇನೆಯು ಅತಿದೊಡ್ಡ ದುರಂತವನ್ನೇ ತಪ್ಪಿಸಿದೆ. ಅಲ್ಲದೇ ಪಹಲ್ಗಾಮ್ ದಾಳಿಯ(Pahalgam Attack) ಬಳಿಕ ಉಗ್ರರು ಜಮ್ಮು ಕಾಶ್ಮೀರದಲ್ಲಿ ಮತ್ತೆ ದಾಳಿಗೆ ಸಂಚು ರೂಪಿಸಿರುವ ಶಂಕೆ ವ್ಯಕ್ತವಾಗಿದೆ.

  • ಮೋದಿಯ ಪ್ರತೀಕಾರದ ಶಪಥಕ್ಕೆ ಬೆವರಿದ ಪಾಕ್ – ಭಾರತಕ್ಕೆ ಪರಮಾಣು ದಾಳಿಯ ಗೊಡ್ಡು ಬೆದರಿಕೆ

    ಮೋದಿಯ ಪ್ರತೀಕಾರದ ಶಪಥಕ್ಕೆ ಬೆವರಿದ ಪಾಕ್ – ಭಾರತಕ್ಕೆ ಪರಮಾಣು ದಾಳಿಯ ಗೊಡ್ಡು ಬೆದರಿಕೆ

    – ಭಾರತದಲ್ಲಿ ಪಾಕ್‌ ಮಾಜಿ ಪ್ರಧಾನಿ ಬಾಯಿಗೆ ಬೀಗ

    ನವದೆಹಲಿ/ಇಸ್ಲಾಮಾಬಾದ್‌: ಪಹಲ್ಗಾಮ್ ದಾಳಿ (Pahalgam Terrorist Attack) ನಡೆದು ಎರಡು ವಾರ ಆಗ್ತಾ ಬಂತು. ಉಗ್ರರ ದಾಳಿಗೆ ಪಾಕ್ ವಿರುದ್ಧ ಭಾರತ (India) ಪ್ರತೀಕಾರದ ನಡೆ ಇಟ್ಟಿದೆ. ಉಗ್ರರ ದಾಳಿಯಲ್ಲಿ ತಮ್ಮ ಕೈವಾಡ ಇದ್ದರೂ ಪಾಕಿಸ್ತಾನ ಸಾಕ್ಷ್ಯ ಕೇಳುತ್ತಿದೆ.

    ಪಹಲ್ಗಾಮ್ ದಾಳಿಗೂ ನಮಗೂ ಸಂಬಂಧವಿಲ್ಲ. ದಾಳಿಗೆ ಭಾರತ ಯಾವುದೇ ಆಧಾರ ನೀಡಿಲ್ಲ. ಪಾಕ್ ಪಾತ್ರದ ಆರೋಪ ನಿರಾಧಾರ ಅಂತ ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif) ಮತ್ತೆ ಉದ್ಧಟತನ ಮೆರೆದಿದ್ದಾರೆ. ರಷ್ಯಾದಲ್ಲಿನ ಪಾಕಿಸ್ತಾನದ ರಾಯಭಾರಿ ಮುಹಮ್ಮದ್ ಖಾಲಿದ್ ಜಮಾಲಿ, ಪಾಕ್ ಮೇಲೆ ದಾಳಿ ಮಾಡಿದ್ರೆ ಪರಮಾಣು ದಾಳಿ ಪ್ರಯೋಗ ಮಾಡಬೇಕಾಗುತ್ತೆ ಅಂತ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ.

    ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸಿಫ್, ಸಿಂಧೂ ನದಿ ನೀರು ತಡೆಯಲು ಡ್ಯಾಂ ನಿರ್ಮಿಸಿದ್ರೆ ನಾಶಪಡಿಸ್ತಿವಿ ಅಂತ ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಮತ್ತದೇ ಗೊಡ್ಡು ಎಚ್ಚರಿಕೆ ಕೊಟ್ಟಿದ್ದಾರೆ. ಇನ್ನು ಪಾಕ್ ಸಂಸದ ಶೇರ್ ಅಫ್ಜಲ್ ಖಾನ್ ಮಾರ್ವತ್, ಭಾರತ ಯುದ್ಧ ಮಾಡಿದ್ರೆ ನಾನು ಇಂಗ್ಲೆಂಡ್‌ಗೆ ಪಲಾಯನ ಮಾಡ್ತೇನೆ ಎಂದಿದ್ದಾರೆ. ಪಾಕ್ ಪತ್ರಕರ್ತರು ಕೇಳಿದ ಪ್ರಶ್ನೆಗೆ ಈ ರೀತಿ ಉತ್ತರಿಸಿರೋದು ಪಾಕಿಸ್ತಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇನ್ನು ನಾಳೆ ಪಾಕಿಸ್ತಾನ ಸಂಸತ್‌ನ ವಿಶೇಷ ಅಧಿವೇಶನ ನಡೆಯಲಿದೆ.

    ಇಮ್ರಾನ್‌ ಖಾನ್‌ ಬಾಯಿಗೆ ಬೀಗ:
    ಉಗ್ರ ಬೆಂಬಲಿತ ಪಾಕಿಸ್ತಾನದ ವಿರುದ್ಧ ಭಾರತದ ಪ್ರತೀಕಾರದ ಕ್ರಮಗಳು ಹೆಚ್ಚಾಗ್ತಿವೆ. ಪಾಕ್ ವಿರುದ್ಧ ಭಾರತ ಡಿಜಿಟಲ್ ಸ್ಟ್ರೈಕ್‌ ಸಾರಿದೆ. ಭಾರತದ ಯುದ್ಧ ಭೀತಿ ಬಗ್ಗೆ ಪೋಸ್ಟ್ ಮಾಡಿದ್ದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಎಕ್ಸ್ ಖಾತೆಯನ್ನು ಭಾರತ ನಿರ್ಬಂಧಿಸಿದೆ. ಅಲ್ಲದೇ ಭಾರತದ ವಿರುದ್ಧ ರಕ್ತ ಕಾರಿದ್ದ ಪಾಕ್ ಮಾಜಿ ಸಚಿವ ಬಿಲಾವಲ್ ಭುಟ್ಟೋ ಎಕ್ಸ್ ಖಾತೆಯನ್ನೂ ಬ್ಲಾಕ್ ಮಾಡಲಾಗಿದೆ.

    ಈ ನಡುವೆ ಪಾಕಿಸ್ತಾನದ ವಿರುದ್ಧ ಅನೇಕ ರಾಜತಾಂತ್ರಿಕ ಕ್ರಮಗಳನ್ನು ತೆಗೆದುಕೊಂಡಿದೆ. ಭಾರತದ ಬಂದರುಗಳು, ಹಡಗು ಸಾಗಣೆ, ಜಲಮಾರ್ಗಗಳ ಸಚಿವಾಲಯವು ಇಂದಿನಿಂದ ಪಾಕಿಸ್ತಾನ ಧ್ವಜ ಹೊಂದಿರುವ ಹಡಗುಗಳು ಭಾರತೀಯ ಬಂದರುಗಳಿಗೆ ಪ್ರವೇಶಿಸುವುದನ್ನು ನಿಷೇಧಿಸಿದೆ. ಈ ಬೆನ್ನಲ್ಲೇ ಪಾಕಿಸ್ತಾನ ಕೂಡ ಭಾರತೀಯ ಧ್ವಜ ವಾಹಕ ನೌಕೆಗಳು ತನ್ನ ಬಂದರು ಬಳಸುವುದನ್ನು ನಿಷೇಧಿಸಿದೆ.

  • ಕಾಶ್ಮೀರದ ವಿಚಾರದಲ್ಲಿ ಪ್ರಧಾನಿಗಳು ಬಿಗಿ ಕ್ರಮ ತೆಗೆದುಕೊಂಡಿದ್ದಾರೆ: ಹೆಚ್.ಡಿ ದೇವೇಗೌಡ

    ಕಾಶ್ಮೀರದ ವಿಚಾರದಲ್ಲಿ ಪ್ರಧಾನಿಗಳು ಬಿಗಿ ಕ್ರಮ ತೆಗೆದುಕೊಂಡಿದ್ದಾರೆ: ಹೆಚ್.ಡಿ ದೇವೇಗೌಡ

    ಹಾಸನ: ಕಾಶ್ಮೀರದ (Kashmir) ವಿಚಾರದಲ್ಲಿ ಪ್ರಧಾನಮಂತ್ರಿಗಳು ಬಹಳ ಬಿಗಿ ಕ್ರಮ ತೆಗೆದುಕೊಂಡಿದ್ದಾರೆ. ಈ ವಿಷಯದಲ್ಲಿ ರಾಷ್ಟ್ರದ ಎಲ್ಲಾ ರಾಜಕೀಯ ಪಕ್ಷಗಳು ಐಕ್ಯತೆಯನ್ನು ತೋರಿಸಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (H D Devegowda) ಹೇಳಿದರು.

    ಅವರು ಹಾಸನ (Hassan) ಜಿಲ್ಲೆಯ ದ್ಯಾಪಲಾಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಆಂಜನೇಯಸ್ವಾಮಿ ದೇವಾಲಯ ಉದ್ಘಾಟನಾ ಮಹೋತ್ಸವ ಹಾಗೂ ಮಹಾಕುಂಭಾಭಿಷೇಕ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದೇಶದ 150 ಕೋಟಿ ಜನ, ಏಕಮುಖವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ತೀರ್ಮಾನಕ್ಕೆ ಬದ್ಧರಾಗಿರಬೇಕು. ಆಗ ಮಾತ್ರ ಇಂತಹ ದುರ್ಘಟನೆ ನಡೆಯುವುದಿಲ್ಲ ಎಂದರು. ಇದನ್ನೂ ಓದಿ: ಹೌತಿ ಕ್ಷಿಪಣಿ ದಾಳಿ – ಮೇ 6ರ ವರೆಗೆ ಇಸ್ರೇಲ್‌ಗೆ ಏರ್ ಇಂಡಿಯಾ ವಿಮಾನಯಾನ ಬಂದ್

    ಪಹಲ್ಗಾಮ್‌ನಲ್ಲಿ (Pahalgam) 26 ಪ್ರವಾಸಿಗರನ್ನು ಹತ್ಯೆ ಮಾಡಿದ್ದಾರೆ. ಇದರಲ್ಲಿ ಒಬ್ಬ ವಿದೇಶಿಗ. ನಮ್ಮ ದೇಶದ 25 ಜನರು ಇದ್ದು, ನಿಷ್ಕರುಣೆಯಿಂದ ಅವರನ್ನು ಹತ್ಯೆ ಮಾಡಿದಂತಹ ಉಗ್ರಗಾಮಿಗಳನ್ನು ಸಂಪೂರ್ಣವಾಗಿ ನಾಶ ಮಾಡುವವರೆಗೂ ಪ್ರಧಾನಮಂತ್ರಿಗಳು ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ತೆಗೆದುಕೊಂಡಿದ್ದಾರೆ. ಈ ವಿಷಯದಲ್ಲಿ ನನ್ನ ಅನುಭವದಿಂದ ಅಭಿಪ್ರಾಯವನ್ನು ತಿಳಿಸಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಕೋಮುದ್ವೇಷ ಭಾಷಣ ಆರೋಪ – ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

    ಇದು ಸೂಕ್ಷ್ಮವಾದ ವಿಚಾರ. ಇದರ ಕುರಿತು ಕೇಂದ್ರ ಕೈಗೊಳ್ಳುವ ಕ್ರಮಕ್ಕೆ ನನ್ನದು, ನನ್ನ ಪಕ್ಷದ್ದು ಪೂರ್ಣ ಬೆಂಬಲವಿದೆ ಎಂದು ಈಗಾಗಲೇ ಹೇಳಿದ್ದೇನೆ. ಮುಂದೆ ಕೂಡ ಏನು ಕ್ರಮ ತೆಗೆದುಕೊಳ್ಳುತ್ತಾರೋ ಆ ಕ್ರಮಕ್ಕೆ ಇಡೀ ದೇಶ ಪಕ್ಷ ಭೇದ ಇಲ್ಲದೇ ಎಲ್ಲರೂ ಒಗ್ಗಟ್ಟಾಗಿ ಬೆಂಬಲ ನೀಡಬೇಕು. ಮುಂದೆ ಇಂತಹ ದುಷ್ಕ್ರತ್ಯ ನಡೆಯಬಾರದು. ಅವರಿಗೆ ಪಾಠ ಕಲಿಸಬೇಕು ಎಂದು ಪ್ರಧಾನಮಂತ್ರಿಗಳು ಪ್ರತಿಜ್ಞೆ ಮಾಡಿದ್ದು, ಅವರ ಹಿಂದೆ ನಿಲ್ಲುತ್ತೇವೆ ಎಂದರು. ಇದನ್ನೂ ಓದಿ: ಐಪಿಎಲ್‌ನಲ್ಲಿ ಆರ್‌ಸಿಬಿ ಗೆಲುವು – ರೊಚ್ಚಿಗೆದ್ದ ಸಿಎಸ್‌ಕೆ ಅಭಿಮಾನಿಗಳಿಂದ ಹಾಸ್ಟೆಲ್ ಸಾಮಗ್ರಿ ಧ್ವಂಸ

    ಮೊದಲು ಕಾಂಗ್ರೆಸ್ (Congress) ನಾಯಕರು ಸಹಮತವನ್ನು ವ್ಯಕ್ತಪಡಿಸಿದ್ದರು. ಮಧ್ಯೆ ಸ್ವಲ್ಪ ಒಡಕು ಶಬ್ದ ಬಂದ ಮೇಲೆ ಪುನಃ ಅವರು ಈ ವಿಷಯದಲ್ಲಿ ಐಕ್ಯತೆ ಬಗ್ಗೆ ಪ್ರತಿಪಾದನೆ ಮಾಡಿದ್ದಾರೆ ಎಂದು ಹೇಳಿದರು.

  • ಪಹಲ್ಗಾಮ್ ದಾಳಿ, ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಚಿಕ್ಕಮಗಳೂರು ಬಂದ್‌ಗೆ ಕರೆ

    ಪಹಲ್ಗಾಮ್ ದಾಳಿ, ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಚಿಕ್ಕಮಗಳೂರು ಬಂದ್‌ಗೆ ಕರೆ

    ಚಿಕ್ಕಮಗಳೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ (Pahalgam Terror Attack) ಹಾಗೂ ಮಂಗಳೂರು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆ ಖಂಡಿಸಿ ಚಿಕ್ಕಮಗಳೂರು (Chikkamagaluru) ಜಿಲ್ಲೆ ಸ್ವಯಂ ಘೋಷಿತ ಬಂದ್‌ಗೆ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಕರೆ ನೀಡಿದೆ.

    ದೇಶದ ಬೇರೆಬೇರೆ ಕಡೆಗಳಲ್ಲಿ ಪಾಕಿಸ್ತಾನ ಪ್ರೇರೇಪಿತ ಮುಸ್ಲಿಮರು ಹಾಗೂ ಬಾಂಗ್ಲಾ ನುಸುಳುಕೋರರು ಪಹಲ್ಗಾಮ್, ಪಶ್ಚಿಮ ಬಂಗಾಳ ಸೇರಿದಂತೆ ಹಿಂದೂಗಳನ್ನು ಹತ್ಯೆಗೈಯುತ್ತಿದ್ದಾರೆ. ಇದರ ಮಧ್ಯೆ ಮೂರು ದಿನದ ಹಿಂದೆ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನ ಹಿಂದೂ ಎಂಬ ಕಾರಣಕ್ಕೆ ತಿಂಗಳುಗಳಿಂದ ಸಂಚು ರೂಪಿಸಿ ಕೊಲೆ ಮಾಡಿದ್ದಾರೆ. ಇದನ್ನೂ ಓದಿ: ಚೆನ್ನೈ ಎಡವಟ್ಟಿನಿಂದ ಆರ್‌ಸಿಬಿಗೆ ಗೆಲುವು – ಬಿಸಿ ಬಿಸಿ ಚರ್ಚೆಗೆ ಗ್ರಾಸವಾದ DRS

    ಇಡೀ ದೇಶದಲ್ಲಿ ಹಿಂದೂಗಳನ್ನ ಹತ್ಯೆ ಮಾಡುವ ಕೆಲಸ ನಡೆಯುತ್ತಿದೆ. ಹಾಗಾಗಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಚಿಕ್ಕಮಗಳೂರು ಜಿಲ್ಲೆ ಸ್ವಯಂಘೋಷಿತ ಬಂದ್‌ಗೆ ಕರೆ ಕೊಟ್ಟಿದ್ದು, ಜಿಲ್ಲೆಯ ಜನ ಹಿಂದೂಗಳ ಹತ್ಯೆ ಖಂಡಿಸಿ ಕರೆ ನೀಡಿರುವ ಈ ಸ್ವಯಂಘೋಷಿತ ಬಂದ್‌ಗೆ ಸಾರ್ವಜನಿಕರು, ಅಂಗಡಿ-ಮುಂಗಟ್ಟು, ವ್ಯಾಪಾರಿಗಳು ಹಾಗೂ ವರ್ತಕರು ಬೆಂಬಲ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ರಂಗನಾಥ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: Tumakuru | ಚಲಿಸುತ್ತಿದ್ದ ಲಾರಿಯಲ್ಲಿ ಕಾಣಿಸಿಕೊಂಡ ಬೆಂಕಿ – ಚಾಲಕ ಪಾರು

  • ಗಾಯಕ ಸೋನು ನಿಗಮ್ ಮೇಲೆ ಎಫ್‌ಐಆರ್

    ಗಾಯಕ ಸೋನು ನಿಗಮ್ ಮೇಲೆ ಎಫ್‌ಐಆರ್

    ಬೆಂಗಳೂರು: ಕನ್ನಡಿಗರ ಅಭಿಮಾನವನ್ನು ಪಹಲ್ಗಾಮ್ ದಾಳಿಗೆ (Pahalgam Terror Attack) ಹೋಲಿಸಿದ ಸೋನು ನಿಗಮ್ (Sonu Nigam) ಮೇಲೆ ಎಫ್‌ಐಆರ್ ದಾಖಲಾಗಿದೆ.

    ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike) ಬೆಂಗಳೂರು ನಗರ ಘಟಕದ ಅಧ್ಯಕ್ಷ ಧರ್ಮರಾಜ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ಕನ್ನಡ ಹಾಡು ಹೇಳುವಂತೆ ವಿದ್ಯಾರ್ಥಿ ಕೇಳಿದ್ದಕ್ಕೆ, ಇದಕ್ಕೆ ಪಹಲ್ಗಾಮ್‌ನಲ್ಲಿ ಅಟ್ಯಾಕ್ ಆಗಿದ್ದು ಎಂದು ಸೋನು ನಿಗಮ್ ಹೇಳಿದ್ದ ವೀಡಿಯೋ ವೈರಲ್ ಆದ ಬಳಿಕ ಸೋನು ನಿಗಮ್ ವಿರುದ್ಧ ಕನ್ನಡ ಪರ ಸಂಘಟನೆಗಳು ಆಕ್ರೋಶ ಹೊರಹಾಕಿದ್ದವು. ಯಾವುದೇ ನಿರ್ಮಾಪಕರು ಸೋನು ನಿಗಮ್ ಇಂದ ಹಾಡು ಹೇಳಸಬಾರದು. ಹೇಳಿಸಿದರೆ ಅದಕ್ಕೆ ನೀವೆ ಹೊಣೆ ಎಂದು ಎಚ್ಚರಿಕೆ ನೀಡುವ ಕೆಲಸ ಕೂಡ ಮಾಡಿದ್ದರು. ಇದನ್ನೂ ಓದಿ: ಶಿವಾನಂದ್ ಪಾಟೀಲ್ ವಿಚಾರ ಹೈಕಮಾಂಡ್ ಗಮನಕ್ಕೆ ತರುತ್ತೇನೆ: ಎಂ.ಬಿ.ಪಾಟೀಲ್

    ದೂರಿನ ಆಧಾರದ ಮೇಲೆ ಬಿಎನ್ಎಸ್ 351 (1) (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 351 (2) (ಕ್ರಿಮಿನಲ್ ಮಾನಹಾನಿ), 353 (ಧಾರ್ಮಿಕ ಮತ್ತು ಭಾಷಿಕ ಭಾವನೆಗಳನ್ನ ಕೆರಳಿಸುವುದು) ಬಿಎನ್‌ಎಸ್ 352 (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ) ಸೆಕ್ಷನ್‌ನಡಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಭಾರತ-ಪಾಕ್‌ ಉದ್ವಿಗ್ನತೆ ನಡುವೆ ಪಾಕ್‌ ರೇಂಜರ್‌ನನ್ನ ಬಂಧಿಸಿದ ಬಿಎಸ್‌ಎಫ್‌

  • ಪಹಲ್ಗಾಮ್‌ ದಾಳಿಯ ಬಳಿಕ ಫಸ್ಟ್‌ ಟೈಂ ಮೋದಿ ಭೇಟಿಯಾದ ಜಮ್ಮು-ಕಾಶ್ಮೀರ ಸಿಎಂ

    ಪಹಲ್ಗಾಮ್‌ ದಾಳಿಯ ಬಳಿಕ ಫಸ್ಟ್‌ ಟೈಂ ಮೋದಿ ಭೇಟಿಯಾದ ಜಮ್ಮು-ಕಾಶ್ಮೀರ ಸಿಎಂ

    ಶ್ರೀನಗರ: ಕಳೆದ ಏಪ್ರಿಲ್‌ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ (Pahalgam Terrorist Attack) ಬಳಿಕ ಜಮ್ಮು ಮತ್ತು ಕಾಶ್ಮೀರದ ಸಿಎಂ ಒಮರ್‌ ಅಬ್ದುಲ್ಲಾ (Omar Abdullah) ಮೊದಲ ಬಾರಿಗೆ ಪ್ರಧಾನಿ ಮೋದಿ ಅವರನ್ನ ಭೇಟಿಯಾಗಿದ್ದಾರೆ.

    ದೆಹಲಿಯ (Delhi) ಪ್ರಧಾನಿ ನಿವಾಸದಲ್ಲಿಂದು ಮೋದಿ ಭೇಟಿಯಾದ ಒಮರ್‌ ಅಬ್ಲುಲ್ಲಾ ಅವರು ಉಗ್ರರ ದಾಳಿ ಹಾಗೂ ಕಾಶ್ಮೀರದಲ್ಲಿ ಭದ್ರತಾ ಪರಿಸ್ಥಿತಿಯ ಕುರಿತು ಚರ್ಚಿಸಿದ್ದಾರೆ. ಅಲ್ಲದೇ ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಹಾಗೂ ದೇಶದ ಭದ್ರತೆಗೆ ಸಂಬಂಧಿಸಿದ ವಿಷಯಗಳ ಕುರಿತು ಕೇಂದ್ರ ಸರ್ಕಾರ (Central Government) ಯಾವುದೇ ನಿರ್ಧಾರ ತೆಗೆದುಕೊಂಡರೂ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.  ಇದನ್ನೂ ಓದಿ: ಜಲ ಮಾರ್ಗ ಬಂದ್ – ಪಾಕ್‌ಗೆ ಹೋಗುವ, ಬರುವ ಹಡಗುಗಳ ಸಂಚಾರಕ್ಕೆ ಬ್ರೇಕ್ ಹಾಕಿದ ಭಾರತ

    ಇನ್ನೂ ದಾಳಿಯ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) ಭದ್ರತಾ ಸವಾಲುಗಳು ಹೆಚ್ಚಾಗುತ್ತಿದ್ದು, ಕೇಂದ್ರವು ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಚೆನ್ನೈಗೆ ಬಂದು ಶ್ರೀಲಂಕಾಗೆ ಹೋದ್ರಾ ಪಹಲ್ಗಾಮ್ ಉಗ್ರರು? – ಶ್ರೀಲಂಕಾ ಏರ್‌ಪೋರ್ಟಲ್ಲಿ ತಪಾಸಣೆ

    ಜನರು ಒಗ್ಗಟ್ಟಿನಿಂದ ಇರಬೇಕು: ಫಾರೂಕ್
    ಇದಕ್ಕೂ ಮುನ್ನ ಜೆ&ಕೆ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ದಾಳಿಯನ್ನು ಖಂಡಿಸಿದರು. ಭಯೋತ್ಪಾದನೆಯ ವಿರುದ್ಧ ದೇಶದ ಜನ ಒಗ್ಗಟ್ಟಿನಿಂದ ನಿಲ್ಲುವಂತೆ ಮನವಿ ಮಾಡಿದರು. ದಾಳಿಯಲ್ಲಿ ಭಾಗಿಯಾಗಿರುವವರು ಮಾನವೀಯತೆಯ ಶತ್ರುಗಳು, ಅವರು ನರಕದಲ್ಲಿ ಕೊಳೆಯುತ್ತಾರೆ. ಪಾಕ್‌ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಸಿಂಧೂ ನದಿ ನೀರು ಒಪ್ಪಂದವನ್ನು ಪುನರುಚ್ಚರಿಸಬೇಕು ಎಂದು ಒತ್ತಾಯಿಸಿದರು.  ಇದನ್ನೂ ಓದಿ: ಎಲ್ಲಾ ಹಿಂದೂಗಳನ್ನು ಸಾಲಾಗಿ ನಿಲ್ಲುವಂತೆ ಹೇಳಿದ್ರು: ಪಹಲ್ಗಾಮ್‌ ಭೀಕರತೆ ಬಿಚ್ಚಿಟ್ಟ ಸುಬೋಧ್‌

    ಏ.22ರಂದು ನಡೆದಿತ್ತು ನರಮೇಧ
    ಜಮ್ಮು-ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯ ಜನಪ್ರಿಯ ಪ್ರವಾಸಿತಾಣ ಪಹಲ್ಗಾಮ್‌ನಲ್ಲಿ ಕಳೆದ ಏ.22ರಂದು ಉಗ್ರರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಕನ್ನಡಿಗರು ಸೇರಿ 26 ಮಂದಿ ಬಲಿಯಾಗಿದ್ದಾರೆ. 2019ರಲ್ಲಿ 40 ಯೋಧರನ್ನು ಬಲಿ ಪಡೆದ ಪುಲ್ವಾಮಾ ದಾಳಿಯ ಬಳಿಕ ಉಗ್ರರು ಕಣಿವೆಯಲ್ಲಿ ನಡೆಸಿದ ಭೀಕರ ದಾಳಿ ಇದಾಗಿದೆ. ಇದುವರೆಗೂ ಭದ್ರತಾಪಡೆಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದ ಉಗ್ರರು, ಇದೇ ಮೊದಲ ಬಾರಿಗೆ ದೊಡ್ಡ ಸಂಖ್ಯೆಯಲ್ಲಿ ಅಮಾಯಕ ಪ್ರವಾಸಿಗರನ್ನು ಟಾರ್ಗೆಟ್‌ ಮಾಡಿ ಹತ್ಯೆ ಗೈದಿದ್ದರು. ಈ ಘಟನೆ ಇದೀಗ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಭೀತಿ ತಂದೊಡ್ಡಿದೆ.

  • ಪಾಕ್‌ನಿಂದ ಆಮದಾಗುವ ಎಲ್ಲಾ ವಸ್ತುಗಳಿಗೆ ನಿರ್ಬಂಧ ವಿಧಿಸಿದ ಭಾರತ

    ಪಾಕ್‌ನಿಂದ ಆಮದಾಗುವ ಎಲ್ಲಾ ವಸ್ತುಗಳಿಗೆ ನಿರ್ಬಂಧ ವಿಧಿಸಿದ ಭಾರತ

    ನವದೆಹಲಿ: ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ (Pahalgam Terror Attack) ಬೆನ್ನಲ್ಲೇ ಪಾಕಿಸ್ತಾನದ (Pakistan) ವಿರುದ್ಧ ಭಾರತ ಹಲವು ರಾಜತಾಂತ್ರಿಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಇದರ ಭಾಗವಾಗಿ ಈಗ ಪಾಕಿಸ್ತಾನದ ಎಲ್ಲಾ ರೀತಿಯ ವಸ್ತುಗಳ ಆಮದಿಗೆ ನಿರ್ಬಂಧ ವಿಧಿಸಿದೆ. ಭಾರತದ ಈ ನಿರ್ಧಾರದಿಂದ ಪಾಕ್ ಮತ್ತಷ್ಟು ಆರ್ಥಿಕ ಸಮಸ್ಯೆಗೆ ಒಳಗಾದರೆ, ಭಾರತದಲ್ಲಿ ಹಲವು ವಸ್ತುಗಳ ಬೆಲೆ ಏರಿಕೆಯಾಗುವ ಸಾಧ್ಯತೆಗಳಿದೆ.

    ವಿದೇಶಿ ವ್ಯಾಪಾರ ನೀತಿ (Foreign Trade Policy) 2023ರ ಅನ್ವಯ ಈ ಘೋಷಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೂ ಇದು ಜಾರಿಯಲ್ಲಿರಲಿದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. ರಾಷ್ಟ್ರೀಯ ಭದ್ರತೆ ಹಾಗೂ ಸಾರ್ವಜನಿಕ ನೀತಿಯ ಹಿತದೃಷ್ಟಿಯಿಂದ ಈ ನಿರ್ಬಂಧ ಹೇರಲಾಗಿದೆ ಎಂದು ವಿದೇಶಿ ವ್ಯಾಪಾರದ ಮಹಾನಿರ್ದೇಶಕ ತಿಳಿಸಿದ್ದಾರೆ. ಇದನ್ನೂ ಓದಿ: ಕರಾವಳಿಯಲ್ಲಿ ಕೋಮುಗಲಭೆ ನಿಗ್ರಹ ಪಡೆ ರಚನೆ: ಸಚಿವ ಪರಮೇಶ್ವರ್ ಘೋಷಣೆ

    ಪಾಕಿಸ್ತಾನದಿಂದ ಭಾರತ ಕೃಷಿ ಉತ್ಪನ್ನಗಳಾದ ಡ್ರೈಫ್ರೂಟ್ಸ್ (ಅಂಜೂರ, ದ್ರಾಕ್ಷಿ, ಬಾದಾಮಿ), ತಾಜಾ ಹಣ್ಣುಗಳು (ಡೇಟ್ಸ್), ಮತ್ತು ಕೆಲವು ಧಾನ್ಯಗಳನ್ನು ಮತ್ತು ಕಲ್ಲು ಉಪ್ಪು, ಸುಣ್ಣದ ಕಲ್ಲು, ಸಿಮೆಂಟ್ ಕಲ್ಲಿನಂತಹ ಖನಿಜ ಉತ್ಪನ್ನಗಳನ್ನು ಹಾಗೂ ಚರ್ಮದ ವಸ್ತುಗಳು, ಹತ್ತಿ, ಉಕ್ಕಿನ ಉತ್ಪನ್ನಗಳಂತಹ ಕೈಗಾರಿಕಾ ವಸ್ತುಗಳನ್ನು ಆಮದು ಮಾಡಿಕೊಳ್ಳುತ್ತಿತ್ತು. ಇದರ ಜೊತೆಗೆ ಪಾಕ್‌ನಿಂದ ಆಪ್ಟಿಕಲ್ ಲೆನ್ಸ್‌ಗಳು, ಕೆಲವು ಮಸಾಲೆ ಪದಾರ್ಥಗಳು ಭಾರತಕ್ಕೆ ಬರುತ್ತಿತ್ತು. ಇದನ್ನೂ ಓದಿ: ಒಂದೇ ದಿನ 30,000ಕ್ಕೂ ಹೆಚ್ಚು ಜನರಿಂದ ಕೇದಾರನಾಥನ ದರ್ಶನ

    2018-19ಕ್ಕಿಂತ ಮೊದಲು ಭಾರತವು ಪಾಕಿಸ್ತಾನದಿಂದ ಸುಮಾರು 494 ಮಿಲಿಯನ್ ಡಾಲರ್ (ಸುಮಾರು 3,600 ಕೋಟಿ ರೂ.) ಮೌಲ್ಯದ ಸರಕುಗಳನ್ನು ಆಮದು ಮಾಡಿಕೊಳ್ಳುತ್ತಿತ್ತು. ಆದರೆ 2019ರ ನಂತರ ಈ ಪ್ರಮಾಣವು ಕೇವಲ 10-20 ಮಿಲಿಯನ್ ಡಾಲರ್‌ಗೆ ಇಳಿದಿದೆ. ಇದರಲ್ಲಿ ಹೆಚ್ಚಿನ ಭಾಗವು ತೃತೀಯ ದೇಶಗಳ ಮೂಲಕ ಆಮದಾಗುತ್ತದೆ. ಇದನ್ನೂ ಓದಿ: ಜೂ.10ರ ಒಳಗೆ ಸಿದ್ದರಾಮಯ್ಯ ಒಳಮೀಸಲಾತಿ ಘೋಷಣೆ ಮಾಡಬೇಕು: ಗೋವಿಂದ ಕಾರಜೋಳ

    ಆಮದು ನಿಷೇಧ ಮಾಡಿದ ಹಿನ್ನೆಲೆ ಭಾರತದ ಮೇಲೆ ಹಲವು ರೀತಿಯ ಪರಿಣಾಮ ಬೀರಲಿದೆ. ಒಣ ಹಣ್ಣುಗಳು ಮತ್ತು ಕೃಷಿ ಉತ್ಪನ್ನಗಳ ಬೆಲೆ ಏರಿಕೆ ಕಾಶ್ಮೀರ ಮತ್ತು ಇತರ ಪ್ರದೇಶಗಳಿಂದ ಒಣ ಹಣ್ಣುಗಳ ಆಮದು ಕಡಿಮೆಯಾದರೆ ಈ ಉತ್ಪನ್ನಗಳ ಬೆಲೆ ಗಗನಕ್ಕೇರಬಹುದು. ಭಾರತವು ಈ ವಸ್ತುಗಳನ್ನು ಇತರ ದೇಶಗಳಿಂದ (ಉದಾ: ಆಫ್ಘಾನಿಸ್ತಾನ, ಇರಾನ್) ಆಮದು ಮಾಡಿಕೊಳ್ಳಬಹುದು. ಆದರೆ ಇದರಿಂದ ಸಾಗಣೆ ವೆಚ್ಚ ಮತ್ತು ಬೆಲೆ ಹೆಚ್ಚಾಗಬಹುದು. ಇದನ್ನೂ ಓದಿ: ಲವ್ವರ್‌ ಜೊತೆ ಪೋಷಕರಿಗೆ ಸಿಕ್ಕಿಬಿದ್ದ ಯುವಕ – ಪಬ್ಲಿಕ್‌ನಲ್ಲೇ ಜೋಡಿಗೆ ಬಿತ್ತು ಗೂಸಾ

    ಕಲ್ಲು ಉಪ್ಪು, ಸಿಮೆಂಟ್ ಕಲ್ಲು, ಮತ್ತು ಚರ್ಮದ ವಸ್ತುಗಳಂತಹ ಉತ್ಪನ್ನಗಳ ಆಮದು ನಿಂತರೆ, ಕೆಲವು ಕೈಗಾರಿಕೆಗಳಿಗೆ ಕಚ್ಚಾ ವಸ್ತು ಕೊರತೆಯಾಗಬಹುದು. ಆದರೆ ಭಾರತ ಈ ಉತ್ಪನ್ನಗಳಿಗೆ ದೇಶೀಯ ಅಥವಾ ಇತರ ಮೂಲಗಳನ್ನು ಸುಲಭವಾಗಿ ಕಂಡುಕೊಳ್ಳಬಹುದು. ಇದನ್ನೂ ಓದಿ: ಎಲ್ಲಾ ಹಿಂದೂಗಳನ್ನು ಸಾಲಾಗಿ ನಿಲ್ಲುವಂತೆ ಹೇಳಿದ್ರು: ಪಹಲ್ಗಾಮ್‌ ಭೀಕರತೆ ಬಿಚ್ಚಿಟ್ಟ ಸುಬೋಧ್‌

    ಭಾರತದ ನಿರ್ಧಾರದಿಂದ ಪಾಕಿಸ್ತಾನದ ಮೇಲೆ ಹೆಚ್ಚು ಪರಿಣಾಮ ಬೀರಲಿದೆ. ಪಾಕಿಸ್ತಾನದ ರಫ್ತು ಆದಾಯದ ಗಣನೀಯ ಭಾಗವು ಭಾರತಕ್ಕೆ ಸಂಬಂಧಿಸಿದೆ. ಈ ಆಮದುಗಳನ್ನು ತಡೆಯುವುದರಿಂದ ಪಾಕಿಸ್ತಾನದ ಆರ್ಥಿಕತೆಗೆ ದೊಡ್ಡ ಹೊಡೆತವಾಗುತ್ತದೆ. ವಿಶೇಷವಾಗಿ ಕೃಷಿ ಮತ್ತು ಖನಿಜ ಉತ್ಪನ್ನಗಳ ರಫ್ತುದಾರರಿಗೆ ಪರಿಣಾಮ ಬೀರುತ್ತದೆ. ಇದನ್ನೂ ಓದಿ: ಅಶ್ರಫ್‌ ಹತ್ಯೆ ವಿಚಾರ ಪ್ರಸ್ತಾಪಿಸಿ ಸಚಿವರಿಗೆ ಮುಸ್ಲಿಂ ಮುಖಂಡರಿಂದ ಕ್ಲಾಸ್‌ – ಟೇಬಲ್‌ ಬಡಿದು ಆಕ್ರೋಶ

    ಭಾರತಕ್ಕೆ ರಫ್ತು ಕಡಿಮೆಯಾದರೆ, ಪಾಕಿಸ್ತಾನದ ವಿದೇಶಿ ವಿನಿಮಯ ಸಂಗ್ರಹ ಕಡಿಮೆಯಾಗುತ್ತದೆ. ಇದು ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ಪಾಕಿಸ್ತಾನಕ್ಕೆ ಮತ್ತಷ್ಟು ತೊಂದರೆಯನ್ನುಂಟುಮಾಡುತ್ತದೆ. ಪಾಕಿಸ್ತಾನ ತನ್ನ ಉತ್ಪನ್ನಗಳಿಗೆ ಇತರ ಮಾರುಕಟ್ಟೆಗಳನ್ನು (ಉದಾ: ಮಧ್ಯಪ್ರಾಚ್ಯ, ಚೀನಾ) ಹುಡುಕಬೇಕಾಗುತ್ತದೆ. ಆದರೆ ಇದು ಹೆಚ್ಚು ಸಮಯ ತೆಗೆದುಕೊಳ್ಳುವ ಮತ್ತು ವೆಚ್ಚದಾಯಕ ಪ್ರಕ್ರಿಯೆಯಾಗಲಿದೆ. ಇದನ್ನೂ ಓದಿ: ಯುರೋಪಿಯನ್ ದೇಶಗಳಿಂದ ಪಾಕ್‌ಗೆ ಶಾಕ್ – ಪಾಕಿಸ್ತಾನ ವಾಯು ಪ್ರದೇಶದಲ್ಲಿ ವಿಮಾನ ಹಾರಾಟಕ್ಕೆ ಹಿಂದೇಟು

  • ಯುರೋಪಿಯನ್ ದೇಶಗಳಿಂದ ಪಾಕ್‌ಗೆ ಶಾಕ್ – ಪಾಕಿಸ್ತಾನ ವಾಯು ಪ್ರದೇಶದಲ್ಲಿ ವಿಮಾನ ಹಾರಾಟಕ್ಕೆ ಹಿಂದೇಟು

    ಯುರೋಪಿಯನ್ ದೇಶಗಳಿಂದ ಪಾಕ್‌ಗೆ ಶಾಕ್ – ಪಾಕಿಸ್ತಾನ ವಾಯು ಪ್ರದೇಶದಲ್ಲಿ ವಿಮಾನ ಹಾರಾಟಕ್ಕೆ ಹಿಂದೇಟು

    ಬೆಲ್ಜಿಯಂ: ಭಾರತ (India) ಮತ್ತು ಪಾಕಿಸ್ತಾನದ (Pakistan) ನಡುವಿನ ಉದ್ವಿಗ್ನ ಪರಿಸ್ಥಿತಿಯ ಮಧ್ಯೆ ಇದೀಗ ಯುರೋಪಿಯನ್ (European) ದೇಶಗಳು ಪಾಕಿಸ್ತಾನಕ್ಕೆ ಶಾಕ್ ನೀಡಿದೆ.

    ಏ.22ರಂದು ಪಹಲ್ಗಾಮ್ ದಾಳಿಯ (Pahalgam Terrorist Attack) ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವಿನ ಕಾದಾಟ ಜೋರಾಗಿದೆ. ದಾಳಿಯ ನಂತರ ಭಾರತ ಪಾಕ್‌ಗೆ ಒಂದೊಂದಾಗಿಯೇ ಶಾಕ್ ನೀಡುತ್ತಿದೆ. ಇದೀಗ ಯುರೋಪಿಯನ್ ದೇಶಗಳು ಪಾಕಿಸ್ತಾನಕ್ಕೆ ಶಾಕ್ ನೀಡಿದ್ದು, ಪಾಕ್ ವಾಯು ಪ್ರದೇಶವನ್ನು ವಿಮಾನ ಹಾರಾಟಕ್ಕೆ ಬಳಸದಿರಲು ನಿರ್ಧರಿಸಿದೆ.ಇದನ್ನೂ ಓದಿ: ಬೆಂಗಳೂರಲ್ಲಿ ಇಂದು ಆರ್‌ಸಿಬಿ vs ಸಿಎಸ್‌ಕೆ ಹೈವೋಲ್ಟೇಜ್‌ ಮ್ಯಾಚ್‌ – ಪಂದ್ಯಕ್ಕೆ ಮಳೆ ಅಡ್ಡಿ?

    ಯುರೋಪಿಯನ್ ಒಕ್ಕೂಟ ದೇಶಗಳ ಏರ್ ಫ್ರಾನ್ಸ್, ಬ್ರಿಟಿಷ್ ಏರ್ವೇಸ್ ಮತ್ತು ಸ್ವಿಸ್ ವಿಮಾನಗಳು ಸೇರಿದಂತೆ ಇನ್ನಿತರ ವಿಮಾನಯಾನ ಸಂಸ್ಥೆಗಳು ಪಾಕಿಸ್ತಾನದ ವಾಯುಪ್ರದೇಶವನ್ನು ಬಳಸುವುದನ್ನು ನಿಲ್ಲಿಸಲು ನಿರ್ಧರಿಸಿವೆ. ಪಾಕಿಸ್ತಾನದ ವಾಯುಪ್ರದೇಶದ ಬದಲಿಗೆ ಏಷ್ಯಾಕ್ಕೆ ಸಂಪರ್ಕಿಸಲು ಇರಾನ್, ಒಮನ್, ಅಥವಾ ಇತರ ಪಕ್ಕದ ರಾಷ್ಟ್ರಗಳ ವಾಯುಪ್ರದೇಶದ ಮೂಲಕ ಕಾರ್ಯಾಚರಿಸುತ್ತಿವೆ. ಈ ಬದಲಾವಣೆಯಿಂದ ವಿಮಾನದ ಸಮಯ ಮತ್ತು ಇಂಧನ ವೆಚ್ಚದಲ್ಲಿ ಹೆಚ್ಚಳವಾಗಿದೆ. ಆದರೆ ಭದ್ರತೆಯ ದೃಷ್ಟಿಯಿಂದ ಇದನ್ನು ಅಗತ್ಯ ಕ್ರಮವೆಂದು ವಿಮಾನಯಾನ ಸಂಸ್ಥೆಗಳು ಪರಿಗಣಿಸಿವೆ. ಪ್ರತಿಯೊಂದು ದೇಶವು ಯಾವುದೇ ಪ್ರದೇಶದ ಮೇಲೆ ಹಾರಾಟ ನಡೆಸುವಾಗ ತಮ್ಮದೇ ಆದ ಅಪಾಯದ ಮೌಲ್ಯಮಾಪನಗಳನ್ನು ನಡೆಸುತ್ತದೆ. ಹೀಗಾಗಿ ಪಾಕಿಸ್ತಾನ ವಾಯು ಪ್ರದೇಶ ಹಾರಾಟಕ್ಕೆ ಅಸುರಕ್ಷಿತ ಸ್ಥಳವೆಂದು ಪರಿಗಣಿಸಿದ್ದು, ನೋಟಮ್ (ವಾಯುಪಡೆಗೆ ಸೂಚನೆ) ನೀಡಿಲ್ಲ. ಆದರೆ ವಾಯುಪ್ರದೇಶವನ್ನು ಬಳಸುವುದನ್ನು ನಿಲ್ಲಿಸಲು ನಿರ್ಧರಿಸಿದೆ.

    ಇತ್ತೀಚಿಗಷ್ಟೇ ಭಾರತ ದೇಶವು ಪಾಕ್ ವಾಯು ಪ್ರದೇಶವನ್ನು ಬಳಸುವುದನ್ನು ನಿಲ್ಲಿಸಿತ್ತು. ಜೊತೆಗೆ ಪಾಕಿಸ್ತಾನವೂ ಕೂಡ ಭಾರತದ ವಾಯು ಪ್ರದೇಶವ ಬಳಸುವುದನ್ನು ನಿಲ್ಲಿಸಿತ್ತು. ಇದರ ಬೆನ್ನಲ್ಲೇ ಯುರೋಪಿಯನ್ ದೇಶಗಳು ನಿರ್ಧಾರ ಕೈಗೊಂಡಿದೆ.

    ಇನ್ನೂ ಭಾರತ ಮತ್ತು ಪಾಕ್ ನಡುವಿನ ಉದ್ವಿಗ್ನ ಪರಿಸ್ಥಿತಿ ಕುರಿತು ಯುರೋಪಿಯನ್ ಒಕ್ಕೂಟದ ವಿದೇಶಾಂಗ ನೀತಿ ಮುಖ್ಯಸ್ಥೆ ಕಾಜಾ ಕಲ್ಲಾಸ್ ಅವರು ಭಾರತ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮತ್ತು ಪಾಕ್ ವಿದೇಶಾಂಗ ಸಚಿವ ಇಶಾಕ್ ದಾರ್ ಜೊತೆಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಎರಡು ದೇಶಗಳು ಸಂಯಮ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದ್ದು, ಗಡಿಗಳಲ್ಲಿ ಉದ್ವಿಗ್ನತೆ ಏರಿಕೆಯಿಂದ ಯಾರಿಗೂ ಯಾವುದೇ ಪ್ರಯೋಜನವಿಲ್ಲ. ಇಬ್ಬರೂ ಸಂಯಮ ವಹಿಸುವಂತೆ ಒತ್ಥಾಯಿಸಿದ್ದಾರೆ. ಇನ್ನೂ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಕಲ್ಲಾಸ್ ಜೊತೆಗೆ ಜೈಶಂಕರ್ ಚರ್ಚೆ ನಡೆಸಿದರು. ಇದೇ ವೇಳೆ ಇಶಾಕ್ ದಾರ್, ಭಾರತ ದೇಶವು ಆಧಾರರಹಿತ ಆರೋಪಗಳನ್ನು ಮಾಡುತ್ತಿದೆ ಹಾಗೂ ಪಾಕ್ ವಿರುದ್ಧ ಪ್ರಚೋದನಾಕಾರಿ ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.ಇದನ್ನೂ ಓದಿ: ಉಗ್ರರ ದಾಳಿ ಮಧ್ಯೆ ಜಮ್ಮು-ಕಾಶ್ಮೀರದಲ್ಲಿ ಶಂಕರಾಚಾರ್ಯ ಜಯಂತಿ ಆಚರಣೆ

  • ಪಹಲ್ಗಾಮ್ ದಾಳಿಯ ಪ್ರತೀಕಾರಕ್ಕೆ ಪಣ – ಸೈಲೆಂಟ್ ಪ್ಲ್ಯಾನಿಂಗ್, ಮೋದಿ ನಿಗೂಢ ನಡೆ

    ಪಹಲ್ಗಾಮ್ ದಾಳಿಯ ಪ್ರತೀಕಾರಕ್ಕೆ ಪಣ – ಸೈಲೆಂಟ್ ಪ್ಲ್ಯಾನಿಂಗ್, ಮೋದಿ ನಿಗೂಢ ನಡೆ

    ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ (Pahalgam Terror Attack) ಪ್ರತಿಕಾರ ಬೇಕು ಎಂದು ಇಡೀ ದೇಶ ಕೇಳುತ್ತಿದೆ. ಈ ನಡುವೆ ಊಹೆಗೂ ಮೀರಿದ ಪ್ರತಿಕಾರ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಘಟನೆ ನಡೆದು ಹತ್ತು ದಿನಗಳು ಕಳೆದರೂ ಮೋದಿ ಸೈಲೆಂಟ್ ಆಗಿ ಕೆಲಸ ಮಾಡುತ್ತಿದ್ದು, ಮೀಟಿಂಗ್‌ಗಳಿಗೆ ಸೀಮಿತವಾಗಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ಅವರ ಮುಂದಿನ ಹೆಜ್ಜೆ ಸಾಕಷ್ಟು ನಿಗೂಢತೆ ಮೂಡಿಸಿದೆ.

    ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದು ಹತ್ತು ದಿನಗಳು ಕಳೆದಿದೆ. ಇಡೀ ದೇಶ ಪ್ರತಿಕಾರದ ನಿರೀಕ್ಷೆಯಲ್ಲಿದೆ. ಸೇನೆ ಭಯೋತ್ಪಾದಕ ಬುಡ ಸುಟ್ಟು ಹಾಕುವುದು ಯಾವಾಗ ಎಂದು ಎದುರು ನೋಡುತ್ತಿದ್ದಾರೆ. ಆದರೆ ಪ್ರತಿಕಾರದ ಭರವಸೆ ನೀಡಿದ್ದ ಪ್ರಧಾನಿ ಮೋದಿ ಮಾತ್ರ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಇದನ್ನೂ ಓದಿ: ಫೈರಿಂಗ್ ಕೇಸ್ – ವಿಚಾರಣೆಗೆ ಹಾಜರಾಗುವಂತೆ ರಿಕ್ಕಿ ರೈಗೆ ನೋಟಿಸ್

    ಈ ಹಿಂದೆ 2016ರ ಸೆಪ್ಟೆಂಬರ್‌ 18ರಂದು ಉರಿ ಮತ್ತು ಫೆ.14 2019ರಂದು ಪುಲ್ವಾಮ ದಾಳಿ ನಡೆದ 12 ದಿನಗಳ ಅಂತರದಲ್ಲಿ ಪಾಕಿಸ್ತಾನ ಪೋಷಿತ ಭಯೋತ್ಪಾದಕರ ನೆಲೆಗಳಿಗೆ ಬಾಂಬ್ ಸ್ಫೋಟಿಸುವ ಮೂಲಕ ಬಿಸಿ ಮುಟ್ಟಿಸಿತ್ತು. ಆದರೆ ಈಗ ಪಹಲ್ಗಾಮ್ ದಾಳಿಯಾಗಿ ಹತ್ತು ದಿನಗಳ ನಡೆದರೂ ಮೋದಿ ಮೌನವಾಗಿದ್ದಾರೆ. ಸೇನಾ ಮುಖ್ಯಸ್ಥರು ಮತ್ತು ಹಿರಿಯ ಸಂಪುಟ ಸಹದ್ಯೋಗಿಗಳ ಜೊತೆಗೆ ಸಭೆ ನಡೆಸುತ್ತಿರುವ ಮೋದಿ ಈ ಬಾರಿ ದೊಡ್ಡ ಪ್ಲ್ಯಾನ್ ಮಾಡುತ್ತಿದ್ದಾರಾ ಎನ್ನುವ ಅನುಮಾನಗಳನ್ನು ಹುಟ್ಟು ಹಾಕಿದೆ. ಇದನ್ನೂ ಓದಿ: ಸತ್ತವರು ವಾಪಸ್ ಬರಲ್ಲ ಅಂತ ಬಿಟ್ರೆ ನಾಳೆ ನಿಮ್ಮನೆಗೂ ಉಗ್ರರು ಬರ್ತಾರೆ: ಸಿಎಂ ವಿರುದ್ಧ ಶಿವಾಚಾರ್ಯಶ್ರೀ ಕಿಡಿ

    ಘಟನೆ ನಡೆದು ಹತ್ತು ದಿನಗಳು ಕಳೆದರೂ ಭಾರತದಿಂದ ಯಾವುದೇ ದೊಡ್ಡ ಮಿಲಿಟರಿ ಕಾರ್ಯಾಚರಣೆಯ ಘೋಷಣೆಯಾಗಿಲ್ಲ. ಇದಕ್ಕೆ ಹಲವು ಕಾರಣಗಳು ಇರಬಹುದು ಎನ್ನಲಾಗುತ್ತಿದೆ. ಯುದ್ಧದಿಂದ ದೇಶದ ಆರ್ಥಿಕತೆ, ಜನಜೀವನದ ಮೇಲೆ ದೀರ್ಘ ಪರಿಣಾಮ ಬೀರುವ ಸಾಧ್ಯತೆ ಇದೆ. ಇದನ್ನು ತಪ್ಪಿಸಲು ಮೋದಿ ತಾತ್ಕಾಲಿಕ ಮೌನವಾಗಿರಬಹುದು. ಈಗಾಗಲೇ ಪಾಕ್ ವಿರುದ್ಧ ಭಾರತ ಹಲವು ಕ್ರಮಗಳನ್ನು ಕೈಗೊಂಡಿದೆ. ಸಿಂಧೂ ನದಿ ನೀರು ಒಪ್ಪಂದ ರದ್ದು, ವೀಸಾ ನಿರ್ಬಂಧ, ಪಾಕಿಸ್ತಾನದ ರಾಯಭಾರಿಗಳ ಸಂಖ್ಯೆ ಕಡಿಮೆ ಮಾಡುವುದು ಇವೆಲ್ಲ ‘ಯುದ್ಧವಿಲ್ಲದ ಯುದ್ಧ’ ತಂತ್ರವನ್ನು ಸೂಚಿಸುತ್ತವೆ. ಮಿಲಿಟರಿ ಕ್ರಮದ ಬದಲು, ಆರ್ಥಿಕ-ರಾಜತಾಂತ್ರಿಕ ಒತ್ತಡ ಹೇರಲು ಆದ್ಯತೆಯನ್ನು ನೀಡಲಾಗಿದೆ. ಇದರಿಂದ ಪಾಕಿಸ್ತಾನಕ್ಕೆ ದೀರ್ಘಕಾಲದ ಹಾನಿ ಉಂಟಾಗಬಹುದು. ಆದರೆ ತಕ್ಷಣದ ಯುದ್ಧದ ಅಪಾಯವನ್ನು ತಪ್ಪಿಸುತ್ತದೆ. ಯುದ್ಧ ಘೋಷಣೆ ಬದಲು ದಾಳಿಯ ಹಿಂದಿನ ಕುತಂತ್ರಕ್ಕೆ ಸಾಕ್ಷ್ಯ ಕಲೆ ಹಾಕುವ ಯೋಜನೆಯಿಂದ ಮೋದಿ ಮೌನವಾಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ಪೌರ ಕಾರ್ಮಿಕರ ಬದುಕಲ್ಲಿ ಬದಲಾವಣೆ ತಂದಿದೆ: ಡಿಕೆಶಿ

    ಯುದ್ದದಿಂದ ದೇಶಕ್ಕೆ ದೊಡ್ಡ ಆರ್ಥಿಕ ಪೆಟ್ಟು ಕೊಡಲಿದ್ದು, ಮೋದಿ ಸರ್ಕಾರದ ಐದು ಟ್ರಿಲಿಯನ್ ಆರ್ಥಿಕತೆ ಕನಸಿಗೆ ಭಂಗವೂ ತರಬಹುದು. ಹೀಗಾಗಿ ಯುದ್ಧ ಘೋಷಿಸುವ ಮುನ್ನ ಹಲವು ಬಾರಿ ಯೋಚನೆ ಮಾಡಲಾಗುತ್ತಿದೆ ಎನ್ನಲಾಗುತ್ತಿದೆ. ಈಗಾಗಲೇ ಹಲವು ರಾಜತಾಂತ್ರಿಕ ಪೆಟ್ಟು ಕೊಟ್ಟಿರುವ ಮೋದಿ ಸರ್ಕಾರ ಯುದ್ಧವನ್ನು ಕಡೆಯ ಆಯ್ಕೆ ಎಂದು ಭಾವಿಸಿದಂತೆ ಕಾಣಿಸುತ್ತಿದ್ದು, ಇದಕ್ಕಾಗಿ ಮೋದಿ ಮೌನವಾಗಿರಬಹುದು. ಇದಕ್ಕೆ ಪೂರಕವಾಗಿ ಸಭೆ ನಡೆಸುತ್ತಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಇದನ್ನೂ ಓದಿ: ಎಎಸ್‍ಪಿಗೆ ಸಿಎಂ ಕೈ ಎತ್ತಿದ್ದಾರೆ, ಏಕವಚನದಲ್ಲಿ ಕರೆದಿದ್ದಾರೆ ಎಂಬುದು ಮಾಧ್ಯಮ ಸೃಷ್ಟಿ: ರಾಜಣ್ಣ