Tag: ಪಹಲ್ಗಾಮ್ ದಾಳಿ

  • Pahalgam Attack | ನಿಮ್ಮ ಅವಧಿಯಲ್ಲಿ ಹಿಂದೂಗಳಿಗೆ ಅನ್ಯಾಯ ಆಯ್ತು ಅಂತ ಒಪ್ಪಿಕೊಳ್ಳಿ; ಕೇಂದ್ರದ ವಿರುದ್ಧ ಸಂತೋಷ್ ಲಾಡ್ ಕೆಂಡ

    Pahalgam Attack | ನಿಮ್ಮ ಅವಧಿಯಲ್ಲಿ ಹಿಂದೂಗಳಿಗೆ ಅನ್ಯಾಯ ಆಯ್ತು ಅಂತ ಒಪ್ಪಿಕೊಳ್ಳಿ; ಕೇಂದ್ರದ ವಿರುದ್ಧ ಸಂತೋಷ್ ಲಾಡ್ ಕೆಂಡ

    – ಯಾರೊಬ್ಬರೂ ಅಮಿತ್‌ ಶಾ ರಾಜೀನಾಮೆ ಕೇಳ್ತಿಲ್ಲ ಎಂದ ಸಚಿವ

    ಬೆಂಗಳೂರು: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ನಡೆದಾಗ ಯಾರೊಬ್ಬರು ಭದ್ರತಾ ಸಿಬ್ಬಂದಿ ಇರಲಿಲ್ಲ.. ಮಾತಿಗೆ ಮುನ್ನ ನಿಮ್ಮ ವೈಫಲ್ಯ ಮುಚ್ಚಿಕೊಳ್ಳಲು ಹಿಂದೂ-ಮುಸ್ಲಿಂ ಅಂತಾರೆ. ಹಾಗಾದ್ರೆ ನಿಮ್ಮ ಅವಧಿಯಲ್ಲಿ ಹಿಂದೂಗಳಿಗೆ ಅನ್ಯಾಯ ಆಯ್ತು ಅಂತ ಒಪ್ಪಿಕೊಳ್ಳಿ ಅಂತ ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಕಿಡಿ ಕಾರಿದ್ದಾರೆ.

    ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಹಲ್ಗಾಮ್ ಘಟನೆ ಬಗ್ಗೆ ಇಡೀ ದೇಶಕ್ಕೆ ಗೊತ್ತಿದೆ. ಪ್ರವಾಸಿಗರಿಗೆ ಆಗಿದ್ದು ಭಯಾನಕ ಘಟನೆ. ರಾಜಕೀಯ ಮಾತನಾಡಬಾರದು ಅಂದುಕೊಂಡಿದ್ದೇವೆ. ಆದರೆ ಕೆಲವಾರು ಪ್ರಶ್ನೆ ನಮ್ಮನ್ನ ಕಾಡುತ್ತಿವೆ. ಇಂತಹ ಘಟನೆಗಳು ನಡೆದಾಗ ಯಾವ ಕೇಂದ್ರ ಸಚಿವರೂ ಪ್ರತಿಕ್ರಿಯೆ ನೀಡಲ್ಲ. ನೇರವಾಗಿ ಬಂದು ಉತ್ತರ ಕೊಟ್ಟಿರೋದು ಬೆರಳೆಣಿಕೆಯಷ್ಟು ಸಚಿವರು ಮಾತ್ರ. ಕೇವಲ ಸ್ಟುಡಿಯೋಗಳಲ್ಲಿ ಪರ ವಿರೋಧ ಚರ್ಚೆಗಳು ಆಗ್ತಿವೆ. ಕೇಂದ್ರ ಸರ್ಕಾರದಲ್ಲಿ ಆದ ವೈಫಲ್ಯದ ಬಗ್ಗೆ ಯಾರೂ ಮಾತನಾಡ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

    ಕೇಂದ್ರ ಗೃಹ ಸಚಿವರ ರಾಜೀನಾಮೆ ಯಾರೂ ಕೇಳ್ತಿಲ್ಲ. ನಮ್ಮ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆಕೇಳ್ತಿದ್ದಾರೆ. ಶ್ರೀನಗರದಲ್ಲಿ ಹೆಜ್ಜೆ ಹೆಜ್ಜೆಗೂ ಚೆಕ್‌ಪೋಸ್ಟ್ ಇದೆ. ಒಂದು ಹುಳನೂ ತಪ್ಪಿಸಿಕೊಂಡು ಹೋಗೋಕೆ ಆಗಲ್ಲ. ಗೃಹ ಸಚಿವರನ್ನ ಕೇಳ್ತೇನೆ, ದಾಳಿ ನಡೆದಾಗ ಯಾಕೆ ಒಬ್ಬ ಸೆಕ್ಯೂರಿಟಿನೂ ಇಲ್ಲ ಯಾಕೆ..? ಇದರ ಬಗ್ಗೆ ಚರ್ಚೆ ಆಗಬೇಕೇ ವಿನಃ ಬೇರೆಯದ್ದಕ್ಕಲ್ಲ. ಮಾತಿಗೆ ಮುನ್ನ ನಿಮ್ಮ ವೈಫಲ್ಯ ಮುಚ್ಚಿಕೊಳ್ಳಲು ಹಿಂದೂ-ಮುಸ್ಲಿಂ ಅಂತಾರೆ. ಹಾಗಾದ್ರೆ ನಿಮ್ಮ ಅವಧಿಯಲ್ಲಿ ಹಿಂದೂಗಳಿಗೆ ಅನ್ಯಾಯ ಆಯ್ತು ಅಂತ ಒಪ್ಪಿಕೊಳ್ಳಿ. ಇಂತಹ ದೊಡ್ಡ ಘಟನೆ ನಡೆದರೂ ಪ್ರಧಾನಿ ಮೋದಿ ಬಿಹಾರ ಚುನಾವಣೆ ಪ್ರಚಾರದಲ್ಲಿ ಭಾಗವಹಿಸ್ತಾರೆ ಅಂತ ಕೇಂದ್ರದ ವಿರುದ್ಧ ಹರಿಹಾಯ್ದರು.

    ಮುಂದುವರಿದು ಮಾತನಾಡಿ, ಪುಲ್ವಾಮಾ ದಾಳಿ ಏನಾಯ್ತು, ಯಾರೂ ಚರ್ಚೆ ಮಾಡ್ತಿಲ್ಲ ಯಾಕೆ..? ಯಾಕೆ ಮೆರವಣಿಗೆ ಮಾಡ್ತೀರ, ನೀವು ಹಿಂದೂಗಳನ್ನ ಕೊಂದಿರೋದು. 20 ರಾಜ್ಯಗಳಲ್ಲಿ ನಿಮ್ಮ ಪಕ್ಷದವರೇ ಸಿಎಂ, ನೀವೆ ಪಿಎಂ, ಬರೀ ಹಿಂದೂ ಮುಸ್ಲಿಂ ಬಿಟ್ರೆ ಬೇರೆ ಏನೂ ಇಲ್ಲ. ಸರ್ಕಾರ ಬಂದು ಇವತ್ತು ವೈಫಲ್ಯ ಅಂತ ಹೇಳಿದೆ. ಇವರೇ ಆರ್ಟಿಕಲ್ 370 ರದ್ದು ಮಾಡಿದ್ರು, ಎಲ್ಲಾ ನಮ್ಮ ಕಂಟ್ರೋಲ್‌ನಲ್ಲೇ ಇದೆ ಅಂದ್ರು. ನಾನು ನೋಡಿದಂತೆ ಅಲ್ಲಿನ ಲೋಕಲ್ ಜನ ಬ್ಯೂಟಿಫುಲ್ ಆಗಿದ್ದಾರೆ. ಆದ್ರೆ ನಮಗಿಂತ ಹೆಚ್ಚಾಗಿ ಅಲ್ಲಿನ ಜನ ರಕ್ತ ಕಣ್ಣೀರು ಹಾಕ್ತಿದ್ದಾರೆ. ಅಲ್ಲಿ ಹೇಗೆ ಬಂದೂಕು ಬಂತು, ಅವರು ಹೇಗೆ ಬಂದ್ರು ಅದರ ಬಗ್ಗೆ ಚರ್ಚೆ ಮಾಡ್ತಿಲ್ಲ ಎಂದು ಕಿಡಿ ಕಾರಿದರು.

  • ಉತ್ತರ ಪ್ರದೇಶದಲ್ಲಿ ಸುಮಾರು 1,200 ಪಾಕಿಸ್ತಾನಿ ಪ್ರಜೆಗಳು ಪತ್ತೆ – ಗಡೀಪಾರು ಪಕ್ರಿಯೆ ಶುರು

    ಉತ್ತರ ಪ್ರದೇಶದಲ್ಲಿ ಸುಮಾರು 1,200 ಪಾಕಿಸ್ತಾನಿ ಪ್ರಜೆಗಳು ಪತ್ತೆ – ಗಡೀಪಾರು ಪಕ್ರಿಯೆ ಶುರು

    ಲಕ್ನೋ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ‌ ಉಗ್ರರ ದಾಳಿಯ (Pahalgam Terror Attack) ಬಳಿಕ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧದ ಕ್ರಮಗಳನ್ನು ಹೆಚ್ಚಿಸಿದೆ. ಹಲವು ಬಲವಾದ ಕ್ರಮಗಳ ಭಾಗವಾಗಿ ಪಾಕಿಸ್ತಾನಿ ಪ್ರಜೆಗಳಿಗೆ ದೇಶ ತೊರೆಯುವಂತೆ ಎಚ್ಚರಿಕೆ ನೀಡಿದೆ. ಹಾಗಾಗಿ ಪಾಕ್‌ ಪ್ರಜೆಗಳು ವಾಘಾ ಗಡಿಯ (Wagah Border) ಮೂಲಕ ದೇಶ ತೊರೆಯಲು ಪ್ರಾರಂಭಿಸಿದ್ದಾರೆ.

    ಈ ನಡುವೆ ರಾಜ್ಯ ಸರ್ಕಾಗಳು ಪಾಕ್‌ ಪ್ರಜೆಗಳನ್ನು (Pakistani Nationals) ಪತ್ತೆಹಚ್ಚಿ ಗಡೀಪಾರುವ ಕೆಲಸ ಮಾಡುತ್ತಿವೆ. ಈ ಕಾರ್ಯಾಚರಣೆ ಉತ್ತರ ಪ್ರದೇಶವೊಂದರಲ್ಲೇ ಸುಮಾರು 1000 ದಿಂದ 1,200 ಪಾಕ್‌ ಪ್ರಜೆಗಳು ಪತ್ತೆಯಾಗಿದ್ದಾರೆಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಪಹಲ್ಗಾಮ್‌ನಲ್ಲೊಬ್ಬ ಸೂಪರ್‌ ಹಿರೋ.. ಬಿಜೆಪಿ ಕುಟುಂಬ ಕಾಪಾಡಿದ ಕಾಶ್ಮೀರಿ ಮುಸ್ಲಿಂ!

    ಉತ್ತರ ಪ್ರದೇಶ ಹಿರಿಯ ಪೊಲೀಸ್‌ ಅಧಿಕಾರಿಗಳ ಪ್ರಕಾರ, ರಾಜ್ಯದಲ್ಲಿ 1,000 ರಿಂದ 1,200 ಪಾಕಿಸ್ತಾನಿ ಪ್ರಜೆಗಳು ವಾಸಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ಅಧಿಕೃತ ಗಡೀಪಾರು ಆದೇಶ ಇನ್ನೂ ಬಂದಿಲ್ಲವಾದರೂ, ನಿರ್ದೇಶನ ಹೊರಡಿಸಿದ ತಕ್ಷಣ ವಾಪಸಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಿದ್ಧತೆಗಳು ನಡೆಯುತ್ತಿವೆ. ಈಗಾಗಲೇ ರಾಜ್ಯದಲ್ಲಿರುವ ಪಾಕಿಸ್ತಾನಿಯರನ್ನ ಗುರುತಿಸುವ ಪ್ರಕ್ರಿಯೆ ಶುರುವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಿಂದೂಗಳ ನರಮೇಧ ನಡೆಸಿದ ಉಗ್ರರಿಗೆ ತಕ್ಕ ಶಿಕ್ಷೆ – ಇಬ್ಬರು ಭಯೋತ್ಪಾದಕರ ಮನೆಗಳು ಬ್ಲಾಸ್ಟ್!

    ಅಮಿತ್ ಶಾ ಬಿಗ್‌ ವಾರ್ನಿಂಗ್‌:
    ಉಗ್ರರ ದಾಳಿ ನಡೆದ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಯಾವೊಬ್ಬ ಪಾಕಿಸ್ತಾನಿ ಪ್ರಜೆಯೂ ಕೇಂದ್ರ ಸರ್ಕಾರ ನೀಡಿರುವ ಗಡುವನ್ನು ಮೀರಿ ದೇಶದಲ್ಲಿ ಉಳಿಯದಂತೆ ನೋಡಿಕೊಳ್ಳಬೇಕೆಂದು ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದ್ದಾರೆ. ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕರೆ ಮಾಡಿ ಈ ಬಗ್ಗೆ ಅಮಿತ್ ಶಾ ಮಾತನಾಡಿದ್ದಾರೆ. ಎಲ್ಲಾ ರಾಜ್ಯಗಳು ತಮ್ಮ ವ್ಯಾಪ್ತಿಯಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ಪತ್ತೆಹಚ್ಚಿ ದೇಶದಿಂದ ವಾಪಸ್ ಕಳುಹಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಉಗ್ರರ ದಾಳಿ ನಡೆದ ಪಹಲ್ಗಾಮ್‌ನಲ್ಲಿ ನಿಮ್ಮ ʻPublic TVʼ; ಬೈಸರನ್ ವ್ಯಾಲಿಯಿಂದ ಕನ್ನಡದ ಏಕೈಕ ಚಾನಲ್ ಪ್ರತ್ಯಕ್ಷ ವರದಿ..!

  • ಮಂಗಳೂರಲ್ಲಿ ಪಹಲ್ಗಾಮ್ ದಾಳಿ ಸಮರ್ಥಿಸಿಕೊಂಡ ದುಷ್ಟ – ಪೊಲೀಸರಿಂದ ಕಿಡಿಗೇಡಿಗಾಗಿ ಹುಡುಕಾಟ

    ಮಂಗಳೂರಲ್ಲಿ ಪಹಲ್ಗಾಮ್ ದಾಳಿ ಸಮರ್ಥಿಸಿಕೊಂಡ ದುಷ್ಟ – ಪೊಲೀಸರಿಂದ ಕಿಡಿಗೇಡಿಗಾಗಿ ಹುಡುಕಾಟ

    ಮಂಗಳೂರು: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪಹಲ್ಗಾಮ್‍ನಲ್ಲಿ ನಡೆದ ಉಗ್ರರ ದಾಳಿಯನ್ನು (Pahalgam Attack) ಸಮರ್ಥಿಸಿಕೊಂಡು ಕಿಡಿಗೇಡಿಯೊಬ್ಬ ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕಿ ವಿಕೃತಿ ಮೆರೆದಿರುವುದು ಮಂಗಳೂರಿನಲ್ಲಿ (Mangaluru) ನಡೆದಿದೆ.

    ನಿಚ್ಚು ಮಂಗಳೂರು ಫೇಸ್‍ಬುಕ್ ಪೇಜ್‍ನಲ್ಲಿ, ಉಗ್ರರ ಕೃತ್ಯಕ್ಕೆ ಬೇರೆಯೇ ವ್ಯಾಖ್ಯಾನ ಮಾಡಲಾಗಿದೆ. 2023ರಲ್ಲಿ ಮಹಾರಾಷ್ಟದ ಪಾಲ್ಗರ್‌ನಲ್ಲಿ ಮೂವರು ಮುಸ್ಲಿಮರನ್ನು ಕೊಲ್ಲಲಾಗಿತ್ತು. ಆರೋಪಿ ಚೇತನ್ ಸಿಂಗ್‍ಗೆ ಸಾರ್ವಜನಿಕವಾಗಿ ಹಗ್ಗ ಹಾಕಲಿಲ್ಲ. ಆ ಕಾರಣಕ್ಕೆ ಕಾಶ್ಮೀರದಲ್ಲಿ ಈ ಕೃತ್ಯ ನಡೆದಿದೆ. ಪಾಲ್ಗರ್ ಘಟನೆಯಿಂದಾಗಿ ಕಾಶ್ಮೀರದಲ್ಲಿ ಧರ್ಮ ಕೇಳಿ ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಸಮರ್ಥನೆ ಮಾಡಿಕೊಂಡಿದ್ದಾನೆ.

    ಪೋಸ್ಟ್ ಹಾಕಿದ ನಿಚ್ಚು ಮಂಗಳೂರು ಫೇಸ್‍ಬುಕ್ ಪೇಜ್ ವಿರುದ್ಧ ಉಳ್ಳಾಲದ ಸತೀಶ್ ಕುಮಾರ್ ದೂರು ನೀಡಿದ್ದಾರೆ. ಈ ಸಂಬಂಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಬಿಎನ್‍ಎಸ್ ಸೆಕ್ಷನ್ 192 ಮತ್ತು 353 (1) (ಬಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್‍ಬುಕ್ ಪೇಜ್ ಡಿಪಿಯಲ್ಲಿರುವ ವ್ಯಕ್ತಿಗಾಗಿ ಪೊಲೀಸರ ಹುಡುಕಾಟ ಆರಂಭಿಸಿದ್ದಾರೆ.

    ಆರೋಪಿ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಎಂದು ತಿಳಿದು ಬಂದಿದೆ.

  • Pahalgam Terror Attack | ಸರ್ವಪಕ್ಷ ಸಭೆಯಲ್ಲಿ ಭದ್ರತಾ ಲೋಪ ಒಪ್ಪಿಕೊಂಡ ಕೇಂದ್ರ ಸರ್ಕಾರ

    Pahalgam Terror Attack | ಸರ್ವಪಕ್ಷ ಸಭೆಯಲ್ಲಿ ಭದ್ರತಾ ಲೋಪ ಒಪ್ಪಿಕೊಂಡ ಕೇಂದ್ರ ಸರ್ಕಾರ

    ನವದೆಹಲಿ: ಪಹಲ್ಗಾಮ್‌ನಲ್ಲಿ ಹಿಂದೂಗಳ ನರಮೇಧದ ನಂತರ ಕೇಂದ್ರ ಸರ್ಕಾರ, ಪಾಕಿಸ್ತಾನದ ವಿರುದ್ಧ ಕೆಲವಾರು ನಿರ್ಬಂಧಗಳನ್ನು ಹೇರಿ ಬಿಸಿ ಮುಟ್ಟಿಸಿದೆ. ಅಷ್ಟಕ್ಕೆ ಸುಮ್ಮನಾಗದೇ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ. ಇದಕ್ಕೆ ವಿಪಕ್ಷಗಳು ಕೈಜೋಡಿಸಿವೆ.

    ಏ. 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ವಿಹಾರಧಾಮದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ 26 ಜನರು ಸಾವಿಗೀಡಾಗಿದ್ದಾರೆ. ಉಗ್ರರ ಈ ಕೃತ್ಯಕ್ಕೆ ಭಾರತ ಮಾತ್ರವಲ್ಲ ಅಮೆರಿಕ ಇನ್ನಿತರ ರಾಷ್ಟ್ರಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ, ತಾನು ಮುಂದೆ ಕೈಗೊಳ್ಳಬೇಕಾದ ನಿರ್ಧಾರಗಳ ಕುರಿತಾಗಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲು ಏ. 24ರಂದು ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿತ್ತು.

    ಸಭೆಯಲ್ಲಿ ಸರ್ಕಾರದ ಪರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಜೈಶಂಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಿದ್ದರೆ, ವಿಪಕ್ಷಗಳ ನಾಯಕರಲ್ಲಿ ಪ್ರಧಾನವಾಗಿ ಲೋಕಸಭೆಯ ವಿರೋಧ ಪಕ್ಷಗಳ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿಪಕ್ಷಗಳ ನಾಯಕ ಮಲ್ಲಿಕಾರ್ಜುನ ಖರ್ಗೆ, ಆಮ್ ಆದ್ಮಿ ಪಾರ್ಟಿಯ ಸಂಜಯ್ ಸಿಂಗ್, ತೃಣಮೂಲ ಕಾಂಗ್ರೆಸ್‌ನ ಸುದೀಪ್ ಬಂಡೋಪಾಧ್ಯಾಯ ಸೇರಿದಂತೆ ಹಲವಾರು ನಾಯಕರು ಭಾಗವಹಿಸಿದ್ದರು.

    ಭದ್ರತಾ ಲೋಪ ಒಪ್ಪಿಕೊಂಡ ಸರ್ಕಾರ
    ಈ ಸಂದರ್ಭದಲ್ಲಿ ಸರ್ಕಾರವೂ ಸಹ ಭದ್ರತಾ ವೈಫಲ್ಯದಿಂದಲೇ ಪಹಲ್ಗಾಮ್ ಘಟನೆ ಆಗಿರುವುದಾಗಿ ಒಪ್ಪಿಕೊಂಡಿತು. ಸಭೆಯ ನಂತರ ಮಾತನಾಡಿದ ಕಿರಣ್ ರಿಜಿಜು, ಸಭೆಯಲ್ಲಿ ಭದ್ರತಾ ಲೋಪವಾಗಿರುವ ಬಗ್ಗೆ ವಿಪಕ್ಷಗಳು ಗಮನ ಸೆಳೆದವು. ಸರ್ಕಾರ ಕೂಡ ಅದನ್ನು ಒಪ್ಪುತ್ತದೆ. ಭವಿಷ್ಯದಲ್ಲಿ ಇಂಥ ಲೋಪಗಳು ಆಗದಂತೆ ಎಚ್ಚರಿಕೆ ವಹಿಸುವುದಾಗಿ ಸಭೆಯಲ್ಲಿ ವಿಪಕ್ಷಗಳ ನಾಯಕರಿಗೆ ನಾವು ಮನವರಿಕೆ ಮಾಡಿದೆವು ಎಂದು ತಿಳಿಸಿದ್ದಾಗಿ ಎಬಿಪಿ ನ್ಯೂಸ್ ಹಾಗೂ ಇಂಡಿಯಾ ಟುಡೇ ಜಾಲತಾಣಗಳು ವರದಿ ಮಾಡಿವೆ.

    ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದಿರುವ ಹತ್ಯಾಕಾಂಡವನ್ನು ಯಾರೂ ಮರೆಯುವ ಹಾಗಿಲ್ಲ. ಕಾಶ್ಮೀರದ ಇತಿಹಾಸದಲ್ಲಿ ಅದೊಂದು ಕಪ್ಪು ಚುಕ್ಕೆಯಾಗಲಿದೆ. ಉಗ್ರವಾದವನ್ನು ಬೇರು ಸಹಿತ ಕಿತ್ತು ಹಾಕಬೇಕಿದೆ. ಅದಕ್ಕಾಗಿ ಕೇಂದ್ರ ಸರ್ಕಾರ ಯಾವುದೇ ಕಠಿಣ ಕ್ರಮ ಕೈಗೊಳ್ಳಲೇಬೇಕು. ಈ ವಿಚಾರದಲ್ಲಿ ನಾವೆಲ್ಲರೂ ಪಕ್ಷಾತೀತವಾಗಿ ಕೇಂದ್ರಕ್ಕೆ ಬೆಂಬಲ ನೀಡುತ್ತೇವೆ ಎಂದು ಹೇಳಿದರು.

    ಸಿಂಧೂ ನದಿ ಒಪ್ಪಂದದ ಬಗ್ಗೆ ಹೇಳಿದ್ದೇನು?
    ಸರ್ವಪಕ್ಷ ಸಭೆಯಲ್ಲಿ ಸಿಂಧೂ ನದಿ ನೀರು ಒಪ್ಪಂದವನ್ನು ತಾತ್ಕಾಲಿಕವಾಗಿ ನಿಷ್ಕ್ರಿಯಗೊಳಿಸುವ ವಿಷಯದ ಕುರಿತು ಮಾತನಾಡಿದ ಅಸಾದುದ್ದೀನ್ ಓವೈಸಿ, ನೀರನ್ನು ಸಂಗ್ರಹಿಸಲು ಅಥವಾ ನಿಲ್ಲಿಸಲು ನಮ್ಮಲ್ಲಿ ಯಾವುದೇ ವ್ಯವಸ್ಥೆ ಇಲ್ಲ, ಹಾಗಾದರೆ ಅದನ್ನು ಸ್ಥಗಿತಗೊಳಿಸುವುದರಿಂದ ಏನು ಪ್ರಯೋಜನ? ಅಂತ ಪ್ರಶ್ನೆ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಮಿತ್‌ ಶಾ, ಸರ್ಕಾರದ ಉದ್ದೇಶವನ್ನು ವ್ಯಕ್ತಪಡಿಸಲು ಮತ್ತು ಭಾರತ ಸರ್ಕಾರದ ಭವಿಷ್ಯದ ನಿಲುವು ಏನಾಗುತ್ತದೆ ಎಂಬುದನ್ನು ಸಂದೇಶ ನೀಡಲು ಇದನ್ನು ಮಾಡಲಾಗಿದೆ ಎಂದು ಹೇಳಿದರು.

  • ಸಿಂಧೂ ನದಿ ನೀರು ಹಂಚಿಕೆ ಒಪ್ಪಂದಕ್ಕೆ ಬ್ರೇಕ್‌ – ಪಾಕಿಸ್ತಾನಕ್ಕೆ ಅಧಿಕೃತ ರಾಜತಾಂತ್ರಿಕ ಟಿಪ್ಪಣಿ ಕಳುಹಿಸಿದ ಭಾರತ

    ಸಿಂಧೂ ನದಿ ನೀರು ಹಂಚಿಕೆ ಒಪ್ಪಂದಕ್ಕೆ ಬ್ರೇಕ್‌ – ಪಾಕಿಸ್ತಾನಕ್ಕೆ ಅಧಿಕೃತ ರಾಜತಾಂತ್ರಿಕ ಟಿಪ್ಪಣಿ ಕಳುಹಿಸಿದ ಭಾರತ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ಕೃತ್ಯಕ್ಕೆ ಪ್ರತೀಕಾರ ತೀರಿಸಿಕೊಳ್ಳುವತ್ತ ದಿಟ್ಟ ಹೆಜ್ಜೆ ಹಿಟ್ಟಿರುವ ಭಾರತ ಈಗಾಗಲೇ ಪಾಕ್‌ ಜೊತೆಗಿನ ರಾಜತಾಂತ್ರಿಕ ಸಂಬಂಧವನ್ನು ಕಡಿದುಕೊಂಡಿದೆ. ಇಂದು ಸರ್ವಪಕ್ಷ ಸಭೆಯ ಬಳಿಕ 1960ರಲ್ಲಿ ವಿಶ್ವಬ್ಯಾಂಕ್‌ ಮಧ್ಯಸ್ಥಿಕೆಯಲ್ಲಿ ನಡೆದ ಸಿಂಧೂ ನದಿ ಒಪ್ಪಂದ ಸ್ಥಗಿತಗೊಳಿಸುವ ಕುರಿತು ಭಾರತ, ಪಾಕಿಸ್ತಾನಕ್ಕೆ ಅಧಿಕೃತವಾಗಿ ಹೇಳಿದೆ.

    ಇಂದು ರಾಜನಾಥ್‌ ಸಿಂಗ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯ ಬಳಿಕ ಭಾರತ, ಪಾಕಿಸ್ತಾನಕ್ಕೆ ಔಪಚಾರಿಕ ರಾಜತಾಂತ್ರಿಕ ಟಿಪ್ಪಣಿಯನ್ನು ಕಳುಹಿಸಲಾಗಿದೆ ಎಂದು ಉನ್ನತಮೂಲಗಳು ತಿಳಿಸಿವೆ. ಜಲ ಶಕ್ತಿ ಸಚಿವಾಲಯದ ಕಾರ್ಯದರ್ಶಿ ದೇಬಶ್ರೀ ಮುಖರ್ಜಿ ಅವರು ಪಾಕಿಸ್ತಾನ ಜಲ ಸಂಪನ್ಮೂಲ ಸಚಿವಾಲಯದ ಪಾಕ್‌ ಸಚಿವ ಸೈಯದ್ ಅಲಿ ಮುರ್ತಾಜಾ ಅವರಿಗೆ ಪತ್ರ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

    ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವು ಭಾರತ ಮತ್ತು ಪಾಕಿಸ್ತಾನದ ನಡುವಿನ ಒಂದು ಪ್ರಮುಖ ಒಪ್ಪಂದವಾಗಿದೆ. ಈ ಒಪ್ಪಂದವು ಎರಡೂ ದೇಶಗಳ ನಡುವೆ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಸಹಾಯ ಮಾಡಿದೆ. ಈ ಒಪ್ಪಂದದ ಬಗ್ಗೆ ಯಾವುದೇ ಸಮಸ್ಯೆಗಳಿದ್ದರೆ, ಎರಡೂ ದೇಶಗಳು ಮಾತುಕತೆಗಳ ಮೂಲಕ ಪರಿಹರಿಸಿಕೊಳ್ಳಬೇಕು. ವಿಶ್ವ ಬ್ಯಾಂಕ್ ಕೂಡ ಈ ವಿಷಯದಲ್ಲಿ ಸಹಾಯ ಮಾಡಬಹುದು.

    ಬುಧವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದಿದ್ದ ಕೇಂದ್ರ ಸಂಪುಟ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿತ್ತು. ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿರುವ ಅಟ್ಟಾರಿ-ವಾಘಾ ಗಡಿ ಚೆಕ್‌ಪೋಸ್ಟ್‌ (Attari Border) ಅನ್ನು ತಕ್ಷಣದಿಂದ ಮುಚ್ಚುವುದು, ಸಾರ್ಕ್ ವಿಸಾ ವಿನಾಯಿತಿ ಯೋಜನೆ ಪಾಕಿಸ್ತಾನದವರಿಗೆ ರದ್ದು, ರಾಯಭಾರ ಕಚೇರಿ ಸಿಬ್ಬಂದಿ ಹಂತಹಂತವಾಗಿ ಕಡಿತಗೊಳಿಸುವುದು ಮತ್ತು 1960ರ ಸಿಂಧು ನದಿ ಒಪ್ಪಂದವನ್ನು ರದ್ದು ಮಾಡುವುದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೇಂದ್ರ ಸಂಪುಟ ಸಮಿತಿ ತೆಗೆದುಕೊಂಡಿತ್ತು.

    ಪ್ರಮುಖ ನಿರ್ಣಯಗಳೇನು?
    ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ 1960ರ ಸೆಪ್ಟೆಂಬರ್‌ 19ರಂದು ಸಹಿ ಹಾಕಲಾಗಿದ್ದ ಸಿಂಧೂ ನದಿ ನೀರು ಒಪ್ಪಂದವನ್ನು ತಡೆಹಿಡಿದಿದೆ. ಇದರೊಂದಿಗೆ ಪಾಕಿಸ್ತಾನಕ್ಕೆ ನೀರು ಸರಬರಾಜು ಮಾಡುತ್ತಿದ್ದ ಸಿಂಧೂ ನದಿ ಮತ್ತು ಝೀಲಂ, ಚೆನಾಬ್, ರಾವಿ, ಬಿಯಾಸ್ ಮತ್ತು ಸಟ್ಲೇಜ್‌ ನದಿಗಳಿಂದ ನೀರು ಸರಬರಾಜು ನಿಲ್ಲಿಸುವ ತೀರ್ಮಾನಕ್ಕೆ ಬರಲಾಗಿದೆ. ಜೊತೆಗೆ ಅಟ್ಟಾರಿ-ವಾಘಾ ಗಡಿ ಮುಚ್ಚಲು ಭಾರತ ತೀರ್ಮಾನಿಸಿದೆ.

    ಅಷ್ಟೇ ಅಲ್ಲದೇ ಸಾರ್ಕ್ ವೀಸಾ ವಿನಾಯಿತಿ ಯೋಜನೆ (SVES) ವೀಸಾಗಳ ಅಡಿಯಲ್ಲಿ ಪಾಕಿಸ್ತಾನಿ ಪ್ರಜೆಗಳು ಭಾರತಕ್ಕೆ ಪ್ರಯಾಣಿಸಲು ನೀಡಿದ ಅನುಮತಿಯನ್ನು ತಡೆಹಿಡಿಯಲಾಗುತ್ತಿದೆ. ಈ ಹಿಂದೆ ನೀಡಿದ್ದ ಯಾವುದೇ SVES ವೀಸಾಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗುತ್ತದೆ. ಈ ವೀಸಾ ಅಡಿಯಲ್ಲಿ ಭಾರತದಲ್ಲಿರುವ ಯಾವುದೇ ಪಾಕಿಸ್ತಾನಿ ಪ್ರಜೆ 48 ಗಂಟೆಯೊಳಗೆ ಭಾರತ ತೊರೆಯಬೇಕೆಂದು ಹೇಳಿದೆ. ಜೊತೆಗೆ ನವದೆಹಲಿಯಲ್ಲಿರುವ ಪಾಕಿಸ್ತಾನಿ ಹೈಕಮಿಷನ್‌, ರಕ್ಷಣಾ/ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರನ್ನು ಹಂತಹಂತವಾಗಿ ಭಾರತದಿಂದ ಕಡಿತಗೊಳಿಸುವ ನಿರ್ಧಾರ ತೆಗೆದುಕೊಂಡಿದೆ.

  • Pahalgam Attack | ಕೇಂದ್ರ ಯಾವ್ದೇ ಕ್ರಮ ತೆಗೆದುಕೊಂಡ್ರೂ‌ ಪೂರ್ಣ ಬೆಂಬಲ ಇದೆ: ರಾಹುಲ್‌ ಗಾಂಧಿ

    Pahalgam Attack | ಕೇಂದ್ರ ಯಾವ್ದೇ ಕ್ರಮ ತೆಗೆದುಕೊಂಡ್ರೂ‌ ಪೂರ್ಣ ಬೆಂಬಲ ಇದೆ: ರಾಹುಲ್‌ ಗಾಂಧಿ

    – ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಸರ್ವಪಕ್ಷ ಸಭೆ ಖಂಡನೆ
    – ಶುಕ್ರವಾರ ಅನಂತನಾಗ್‌ ಜಿಲ್ಲೆಗೆ ರಾಹುಲ್‌ ಗಾಂಧಿ ಭೇಟಿ

    ನವದೆಹಲಿ: ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajnath Singh) ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯು (All-party meeting) ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಸರ್ವಾನುಮತದಿಂದ ಖಂಡಿಸಿದೆ.

    ಸಭೆಯ ಬಳಿಕ ಮಾತನಾಡಿದ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ರಾಜಕೀಯ ಪಕ್ಷಗಳು ಇದನ್ನು ಪಹಲ್ಗಾಮ್‌ ದಾಳಿಯನ್ನ ಏಕರೂಪವಾಗಿ ಖಂಡಿಸಿವೆ. ಉಗ್ರರರನ್ನು ಮಟ್ಟಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡರೂ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದ್ದಾರೆ.

    ಇನ್ನೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಪುನಃ ಸ್ಥಾಪಿಸಬೇಕೆಂದು ನಾವು ಬಯಸುತ್ತೇವೆ. ನಾಳೆ (ಏ.25) ರಾಹುಲ್‌ ಗಾಂದಿ ಅವರು ಕಾಶ್ಮೀರದ ಅನಂತನಾಗ್‌ಗೆ ಭೇಟಿ ನೀಡಲಿದ್ದಾರೆ. ಅಲ್ಲಿನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಉಗ್ರರ ದಾಳಿಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲಿದ್ದಾರೆ ಎಂದು ತಿಳಿಸಿದರು.

    ಇನ್ನೂ ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ ಮಾತನಾಡಿ, ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ನಾವು ಕೇಂದ್ರದೊಂದಿಗೆ ಇದ್ದೇವೆ. ದೇಶವು ಒಗ್ಗಟ್ಟಿನಿಂದ ಹೋರಾಡಬೇಕು. ಎಲ್ಲಾ ರಾಜಕೀಯ ಪಕ್ಷಗಳ ಮುಖ್ಯಸ್ಥರು ಇಂದಿನ ಸಭೆಯಲ್ಲಿ ಒಗ್ಗಟ್ಟಿನ ಸಂದೇಶ ನೀಡಿದ್ದಾರೆ ಎಂದರು.

    ಇದಕ್ಕೂ ಮುನ್ನ ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah), ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌, ನಿರ್ಮಲಾ ಸೀತಾರಾಮನ್‌, ಕಿರಣ್‌ ರಿಜಿಜು, ಜೆ.ಪಿ ನಡ್ಡಾ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮಾ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು. ಉಗ್ರರ ದಾಳಿ ಹಾಗೂ ಬುಧವಾರ ಕೇಂದ್ರ ಸಂಪುಟ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಕುರಿತು ಅಮಿತ್‌ ಶಾ ಹಾಗೂ ರಾಜನಾಥ್‌ ಸಿಂಗ್‌ ಸಭೆಗೆ ಮಾಹಿತಿ ನೀಡಿದರು.

  • ಕಾಶ್ಮೀರದ ಉಗ್ರರ ದಾಳಿ ಹೊಣೆಯನ್ನ ಕೇಂದ್ರ ಸರ್ಕಾರವೇ ಹೊರಬೇಕು: ಹೆಚ್.ಸಿ ಬಾಲಕೃಷ್ಣ

    ಕಾಶ್ಮೀರದ ಉಗ್ರರ ದಾಳಿ ಹೊಣೆಯನ್ನ ಕೇಂದ್ರ ಸರ್ಕಾರವೇ ಹೊರಬೇಕು: ಹೆಚ್.ಸಿ ಬಾಲಕೃಷ್ಣ

    – ಯಾರು ಅಮಾಯಕರ ರಕ್ಷಣೆ ಮಾಡಬೇಕಿತ್ತೋ ಅವರು ಮಾಡಿಲ್ಲ; ಶಾಸಕ

    ರಾಮನಗರ: ಜಮ್ಮು-ಕಾಶ್ಮೀರ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ (Pahalgam Terror Attack) ಹೊಣೆಯನ್ನು ಕೇಂದ್ರ ಸರ್ಕಾರವೇ ಹೊರಬೇಕು ಎಂದು ಮಾಗಡಿ ಶಾಸಕ ಹೆಚ್‌.ಸಿ ಬಾಲಕಷ್ಣ (HC Balakrishna) ಹೇಳಿದ್ದಾರೆ.

    ಮಾಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿಕೆಗೆ ಸಹಮತ ವ್ಯಕ್ತಪಡಿಸುತ್ತೇನೆ. ಇದರಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ. ಯಾವ ಸರ್ಕಾರ ಅಧಿಕಾರದಲ್ಲಿ ಇರುತ್ತೋ ಅದೇ ಸರ್ಕಾರ ಹೊಣೆ ಹೊರಬೇಕು. ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆ ಫೆಲ್ಯೂರ್ ಆಗಿದೆ. ಹಾಗಾಗಿ ಅಮಾಯಕರು ಬಲಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ಮಂತ್ರಾಲಯದಿಂದ ತಲಾ 1 ಲಕ್ಷ ಪರಿಹಾರ

    ಕಾಶ್ಮೀರದಲ್ಲಿ ಪ್ರವಾಸಿಗರಿಗೆ ರಕ್ಷಣೆ ನೀಡಬೇಕಿತ್ತು. ಕೆಂದ್ರದಲ್ಲಿ ಅಧಿಕಾರ ನಡೆಸುವವರೇ ಇದಕ್ಕೆ ಜವಾಬ್ದಾರಿ. ಮೃತರ ಕುಟುಂಬಕ್ಕೆ ಇಡೀ ರಾಜ್ಯ ಸರ್ಕಾರ ಸಾಂತ್ವನ ಹೇಳಿದೆ. ಸಿಎಂ ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಸಂತೋಷ್ ಲಾಡ್ ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರನ್ನ ರಕ್ಷಣೆ ಮಾಡಿದ್ದಾರೆ. ನಾವು ನಮ್ಮ ಕೆಲಸ ಮಾಡಿದ್ದೇವೆ. ಯಾರು ಅಮಾಯಕರ ರಕ್ಷಣೆ ಮಾಡಬೇಕಿತ್ತೋ ಅವರು ಮಾಡಿಲ್ಲ ಎಂಬುದು ದೂರು ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: Pahalgam Terrorist Attack | ರಾಜನಾಥ್‌ ಸಿಂಗ್‌ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಶುರು – ರಾಹುಲ್‌, ಖರ್ಗೆ ಭಾಗಿ

    ಕೇಂದ್ರ ಗೃಹ ಮಂತ್ರಿಗಳು ಈಗ ಆ ಜಾಗಕ್ಕೆ ಹೋದ್ರೆ ಸತ್ತವರು ಬದುಕಿ ಬರೋಲ್ಲ. ಘಟನೆ ನಡೆಯದ ಹಾಗೆ ತಡೆಯುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಮುಗಿದ ಮೇಲೆ ಸಾಂತ್ವನ ಎಲ್ಲರೂ ಹೇಳುತ್ತಾರೆ‌. ಘಟನೆ ನಡೆಯುವ ಮುನ್ನವೇ ಮಿಲಿಟರಿ ನಿಯೋಜನೆ ಮಾಡಬೇಕಿತ್ತು. ಸೂಕ್ಷ್ಮ ಪ್ರದೇಶದಲ್ಲಿ ಹೇಗೆ ಕಾರ್ಯ ನಿರ್ವಹಣೆಯ ಮಾಡಬೇಕೆಂದು ಕೇಂದ್ರಕ್ಕೆ ಗೊತ್ತಿರಲಿಲ್ವಾ? ಎಂದು ಕೇಂದ್ರ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ‘ರಾಮಾಯಣ’ ಚಿತ್ರ ಕೈಬಿಟ್ಟಿದ್ಯಾಕೆ ಶ್ರೀನಿಧಿ ಶೆಟ್ಟಿ?- ಇಂಟ್ರೆಸ್ಟಿಂಗ್ ವಿಚಾರ ಬಿಚ್ಚಿಟ್ಟ ‘ಕೆಜಿಎಫ್ 2’ ನಟಿ

  • Pahalgam Terrorist Attack | ರಾಜನಾಥ್‌ ಸಿಂಗ್‌ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಶುರು – ರಾಹುಲ್‌, ಖರ್ಗೆ ಭಾಗಿ

    Pahalgam Terrorist Attack | ರಾಜನಾಥ್‌ ಸಿಂಗ್‌ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಶುರು – ರಾಹುಲ್‌, ಖರ್ಗೆ ಭಾಗಿ

    ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಬೆನ್ನಲ್ಲೇ ಪಾಕ್‌ ವಿರುದ್ಧ ರಾಜತಾಂತ್ರಿಕ ಸಂಬಂಧ ಕಡಿದುಕೊಂಡ ಕೇಂದ್ರ ಸರ್ಕಾರ ಇಂದು ಸರ್ವಪಕ್ಷ ಸಭೆ (All-party meeting) ನಡೆಸುತ್ತಿದೆ. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajnath Singh) ಅವರ ಅಧ್ಯಕ್ಷತೆಯಲ್ಲಿ ಸಭೆ ಶುರುವಾಗಿದೆ. ಸಭೆ ಆರಂಭಿಸವುದಕ್ಕೂ ಮುನ್ನ ಉಗ್ರರ ಗುಂಡಿಗೆ ಬಲಿಯಾದವರಿಗೆ ಸಂತಾಪ ಸೂಚಿಸಲಾಯಿತು.

    ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah), ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌, ನಿರ್ಮಲಾ ಸೀತಾರಾಮನ್‌, ಕಿರಣ್‌ ರಿಜಿಜು, ಜೆ.ಪಿ ನಡ್ಡಾ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮಾ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದಾರೆ. ಸಭೆಗೂ ಮುನ್ನ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಹಾಗೂ ಜೆ.ಪಿ ನಡ್ಡಾ ಅವರು ರಾಷ್ಟ್ರಪತಿಗಳನ್ನು ಭೇಟಿಯಾಗಿ ಉಗ್ರರ ದಾಳಿಯ ಕುರಿತು ಮಾಹಿತಿ ನೀಡಿದ್ದರು. ಇದನ್ನೂ ಓದಿ: ‘ರಾಮಾಯಣ’ ಚಿತ್ರ ಕೈಬಿಟ್ಟಿದ್ಯಾಕೆ ಶ್ರೀನಿಧಿ ಶೆಟ್ಟಿ?- ಇಂಟ್ರೆಸ್ಟಿಂಗ್ ವಿಚಾರ ಬಿಚ್ಚಿಟ್ಟ ‘ಕೆಜಿಎಫ್ 2’ ನಟಿ

    ಇಂದಿನ ಸಭೆಯಲ್ಲಿ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಹಾಗೂ ಬುಧವಾರ ಕೇಂದ್ರ ಸಂಪುಟ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಕುರಿತು ಅಮಿತ್‌ ಶಾ ಹಾಗೂ ರಾಜನಾಥ್‌ ಸಿಂಗ್‌ ಸಭೆಗೆ ಮಾಹಿತಿ ನೀಡಲಿದ್ದಾರೆ. ಜೊತೆಗೆ ಮುಂದಿನ ನಿರ್ಣಯಗಳ ಕುರಿತು ಸರ್ವಪಕ್ಷ ಸದಸ್ಯರೊಂದಿಗೆ ಚರ್ಚೆ ನಡೆಸಲಿದ್ದಾರೆ. ಇದನ್ನೂ ಓದಿ: Pahalgam Terrorist Attack | ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಭರತ್ ಭೂಷಣ್ ಅಂತ್ಯಕ್ರಿಯೆ

    26 ಮಂದಿ ಬಲಿ
    ಜಮ್ಮು-ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯ ಜನಪ್ರಿಯ ಪ್ರವಾಸಿತಾಣ ಪಹಲ್ಗಾಮ್‌ನಲ್ಲಿ ಮಂಗಳವಾರ ಉಗ್ರರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಕನ್ನಡಿಗರು, ವಿದೇಶಿಯರು ಸೇರಿ 26 ಮಂದಿ ಬಲಿಯಾಗಿದ್ದಾರೆ. 2019ರಲ್ಲಿ 40 ಯೋಧರನ್ನು ಬಲಿ ಪಡೆದ ಪುಲ್ವಾಮಾ ದಾಳಿಯ ಬಳಿಕ ಉಗ್ರರು ಕಣಿವೆಯಲ್ಲಿ ನಡೆಸಿದ ಭೀಕರ ದಾಳಿ ಇದಾಗಿದೆ. ಇದುವರೆಗೂ ಭದ್ರತಾಪಡೆಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದ ಉಗ್ರರು, ಇದೇ ಮೊದಲ ಬಾರಿಗೆ ದೊಡ್ಡ ಸಂಖ್ಯೆಯಲ್ಲಿ ಅಮಾಯಕ ಪ್ರವಾಸಿಗರನ್ನು ಟಾರ್ಗೆಟ್‌ ಮಾಡಿದ್ದಾರೆ. ಆ ಮೂಲಕ ಕಣಿವೆಯಲ್ಲಿ ಆತಂಕ, ಭಯದ ವಾತಾವರಣ ಮರುಕಳಿಸಿದೆ. ಅದರಲ್ಲೂ ಪುರುಷನ್ನೇ ಗುರಿಯಾಗಿಸಿಕೊಂಡು, ನೀನು ಹಿಂದೂನಾ, ಮುಸ್ಲಿಮನಾ? ಅಂತ ಖಚಿತಪಡಿಸಿಕೊಂಡು ಕೊಲ್ಲಲಾಗಿದೆ. ಇದನ್ನೂ ಓದಿ: ನೀರು ನಿಲ್ಲಿಸೋದು ಯುದ್ಧಕ್ಕೆ ಆಹ್ವಾನಿಸಿದಂತೆ – ಭಾರತದ ಪ್ರತೀಕಾರ ನಿರ್ಧಾರದಿಂದ ಕೋಪಗೊಂಡ ಪಾಕ್‌

  • ನೀರು ನಿಲ್ಲಿಸೋದು ಯುದ್ಧಕ್ಕೆ ಆಹ್ವಾನಿಸಿದಂತೆ – ಭಾರತದ ಪ್ರತೀಕಾರ ನಿರ್ಧಾರದಿಂದ ಕೋಪಗೊಂಡ ಪಾಕ್‌

    ನೀರು ನಿಲ್ಲಿಸೋದು ಯುದ್ಧಕ್ಕೆ ಆಹ್ವಾನಿಸಿದಂತೆ – ಭಾರತದ ಪ್ರತೀಕಾರ ನಿರ್ಧಾರದಿಂದ ಕೋಪಗೊಂಡ ಪಾಕ್‌

    – ಭಾರತದ ಕ್ರಮಗಳ ಬಳಿಕ ಪಾಕ್ ಪ್ರಧಾನಿ ನೇತೃತ್ವದಲ್ಲಿ ಸಭೆ
    – ಭಾರತದ ಜೊತೆಗಿನ ಎಲ್ಲ ಒಪ್ಪಂದಗಳಿಗೆ ಬ್ರೇಕ್ – ಶಿಮ್ಲಾ ಒಪ್ಪಂದ ಅಮಾನತು
    – ಭಾರತದಲ್ಲಿ ಮುಸ್ಲಿಮರ ಮೇಲೆ ದಬ್ಬಾಳಿಕೆ ಹೆಚ್ಚಾಗಿದೆ: ಎನ್‌ಎಸ್‌ಸಿ ಆರೋಪ

    ಇಸ್ಲಾಮಾಬಾದ್‌: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ (Pahalgam Terrorist Attack) 26 ಮಂದಿ ಅಮಾಯಕರ ಸಾವಿನ ನಂತರ ಭಾರತವು ಪಾಕ್‌ ಜೊತೆಗಿನ ರಾಜತಾಂತ್ರಿಕ ಸಬಂಧವನ್ನು ಕಡಿದುಕೊಂಡಿದೆ. 1960ರ ಸಿಂಧೂ ನದಿ ಒಪ್ಪಂದ ರದ್ದು ಸೇರಿದಂತೆ ಹಲವು ಕಠಿಣ ನಿರ್ಧಾರ ಕೈಗೊಂಡಿದೆ. ಭಾರತದಲ್ಲಿರುವ ಪಾಕ್‌ (Pakistan) ಪ್ರಜೆಗಳು ದೇಶ ತೊರೆಯುವಂತೆ ಎಚ್ಚರಿಕೆ ನೀಡಿದೆ. ಈ ಬೆನ್ನಲ್ಲೇ ಪಾಕಿಸ್ತಾನ ಪ್ರಧಾನಿ ಶಹಬಾಜ್‌ ಷರೀಫ್‌ (Shehbaz Sharif) ಇಂದು ಮಹತ್ವದ ಭದ್ರತಾ ಸಭೆ ನಡೆಸಿದ್ದಾರೆ.

    ಇಸ್ಲಾಮಾಬಾದ್‌ನಲ್ಲಿ (Islamabad) ಪಾಕಿಸ್ತಾನದ ಮೂರು ಸೇನಾಪಡೆಗಳ ಮುಖ್ಯಸ್ಥರು, ಪ್ರಮುಖ ಸಚಿವರು, ಉನ್ನತ ನಾಗರಿಕ ಮತ್ತು ಮಿಲಿಟರಿ ಅಧಿಕಾರಿಗಳೊಂದಿಗೆ ಪಾಕ್‌ ಪ್ರಧಾನಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪಾಕಿಸ್ತಾನ ಪಾಲಿನ ನೀರನ್ನು ತಡೆಯಲು ಭಾರತ ಪ್ರಯತ್ನಿಸಿದ್ರೆ, ಅದನ್ನು ಯುದ್ಧದ ಕೃತ್ಯವೆಂದು ಪರಿಗಣಿಸುವುದಾಗಿ ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಪಹಲ್ಗಾಮ್‌ ದಾಳಿ – ಪಾಕ್‌ ಉಗ್ರರ ಮಾಹಿತಿ ಕೊಟ್ಟವರಿಗೆ 20 ಲಕ್ಷ ಬಹುಮಾನ ಘೋಷಣೆ

    ಭಾರತಕ್ಕೆ ಪಾಕ್ ಏರ್‌ಸ್ಪೇಸ್ ಬಂದ್:
    ಇನ್ನೂ ಭಾರತ ಸರ್ಕಾರ (Indian Government) ಕಠಿಣ ನಿರ್ಧಾರ ಕೈಗೊಂಡಂತೆ ಪಾಕಿಸ್ತಾನ ಸಹ ಭಾರತ ವಿರೋಧಿ ನಿರ್ಧಾರಗಳನ್ನು ಇಂದಿನ ಪ್ರಮುಖ ಸಭೆಯಲ್ಲಿ ತೆಗೆದುಕೊಂಡಿದೆ. ಭಾರತದ ಒಡೆತನದ ಮತ್ತು ಭಾರತದ ವಿಮಾನಯಾನ ಸಂಸ್ಥೆಗಳಿಗೆ ಪಾಕಿಸ್ತಾನದ ವಾಯುಸೀಮೆಯನ್ನು ಸಂಪೂರ್ಣವಾಗಿ ಬಂದ್‌ ಮಾಡಲಾಗಿದೆ. ಜೊತೆಗೆ ಭಾರತದ ಜೊತೆಗಿನ ಎಲ್ಲಾ ಒಪ್ಪಂದಗಳನ್ನು ಕಡಿದುಕೊಳ್ಳಲು ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಂಡಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ದಾಳಿ ಎಸಗಿದ ಉಗ್ರರಿಗೆ, ಸಂಚು ರೂಪಿಸಿದವರಿಗೆ ಕಲ್ಪನೆಗೂ ಮೀರಿದ ರೀತಿ ಶಿಕ್ಷೆ ಕೊಡುತ್ತೇವೆ: ಘರ್ಜಿಸಿದ ಮೋದಿ

    ಮುಸ್ಲಿಮರ ಮೇಲೆ ದಬ್ಬಾಳಿಕೆ ಹೆಚ್ಚಾಗಿದೆ:
    ಮುಂದುವರಿದು… ಭಾರತದಲ್ಲಿ ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರ ಮೇಲಿನ ದಬ್ಬಾಳಿಕೆ ಹೆಚ್ಚಾಗಿದೆ ಎಂದು ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಮಿತಿ (ಎನ್‌ಎಸ್‌ಸಿ) ಆರೋಪಿಸಿದೆ. ಭಾರತ ಸರ್ಕಾರವು ವಕ್ಫ್ ತಿದ್ದುಪಡಿ ಕಾಯ್ದೆಯ ಮೂಲಕ ಮುಸ್ಲಿಂ ಸಮುದಾಯವನ್ನು ಅಂಚಿನಲ್ಲಿಡುತ್ತಿದೆ. ಈ ರೀತಿ ಮಾಡಿ ರಾಜಕೀಯ ಲಾಭ ಪಡೆಯಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಎನ್‌ಎಸ್‌ಸಿ ಆರೋಪಿಸಿದೆ. ಅಲ್ಲದೇ ಕಾಶ್ಮೀರ ಭಾರತ ಮತ್ತು ಪಾಕಿಸ್ತಾನದ ನಡುವಿನ ಬಗೆಹರಿಯದ ವಿವಾದವಾಗಿದೆ ಎಂದು ಹೇಳಿದೆ.

    ಭಾರತದ ಕ್ರಮಗಳಿಗೆ ತತ್ತರಿಸಿದ ಪಾಕ್
    ಇನ್ನೂ ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಬಳಿಕ ಭಾರತದ ಕ್ರಮಗಳಿಂದ ತತ್ತರಿಸಿರುವ ಪಾಕಿಸ್ತಾನ, ಭಾರತ ಸರ್ಕಾರದ ವಿರುದ್ಧ ಕಿಡಿ ಕಾರಿದೆ. ಭಾರತ ತೆಗೆದುಕೊಂಡ ಕ್ರಮಗಳು ಏಕಪಕ್ಷೀಯವಾಗಿದೆ, ಇದು ಅನ್ಯಾಯ, ರಾಜಕೀಯ ಪ್ರೇರಿತ, ಬೇಜವಾಬ್ದಾರಿ ಮತ್ತು ಆಧಾರರಹಿತ ಹೇಳಿದೆ. ಇದನ್ನೂ ಓದಿ: ಭಾರತದಿಂದ ದಾಳಿ ಭೀತಿ – ಕ್ಷಿಪಣಿ ಪರೀಕ್ಷೆಗೆ ಮುಂದಾದ ಪಾಕ್‌

    ಪಾಕ್‌ ಸಭೆಯ ಪ್ರಮುಖ ನಿರ್ಣಯಗಳೇನು?
    * ಸಿಂಧೂ ನದಿ ನೀರು ಒಪ್ಪಂದವನ್ನು ನಿಲ್ಲಿಸುವ ಭಾರತದ ನಿರ್ಧಾರವನ್ನು ಪಾಕಿಸ್ತಾನ ತಿರಸ್ಕರಿಸಿದೆ. ಈ ಒಪ್ಪಂದವು ವಿಶ್ವಬ್ಯಾಂಕ್ ಮಧ್ಯಸ್ಥಿಕೆ ವಹಿಸಿದ ಅಂತಾರಾಷ್ಟ್ರೀಯ ಒಪ್ಪಂದವಾಗಿದ್ದು, ಏಕಪಕ್ಷೀಯವಾಗಿ ಅಮಾನತುಗೊಳಿಸಲಾಗುವುದಿಲ್ಲ ಎಂದು NSC ಹೇಳಿದೆ.
    * ಭಾರತವು ನೀರನ್ನು ನಿಲ್ಲಿಸಲು ಅಥವಾ ಬೇರೆಡೆಗೆ ತಿರುಗಿಸಲು ಪ್ರಯತ್ನಿಸಿದರೆ, ಅದನ್ನು ಯುದ್ಧದ ಕೃತ್ಯವೆಂದು ಪರಿಗಣಿಸಲಾಗುತ್ತದೆ ಮತ್ತು ಪೂರ್ಣ ಬಲದಿಂದ ಪ್ರತಿಕ್ರಿಯಿಸಲಾಗುತ್ತದೆ ಎಂದು ಪಾಕಿಸ್ತಾನ ಹೇಳಿದೆ.
    * ಶಿಮ್ಲಾ ಒಪ್ಪಂದ ಸೇರಿದಂತೆ ಭಾರತದೊಂದಿಗಿನ ಎಲ್ಲಾ ದ್ವಿಪಕ್ಷೀಯ ಒಪ್ಪಂದಗಳನ್ನು ನಾವು ಸ್ಥಗಿತಗೊಳಿಸುತ್ತಿದ್ದೇವೆ ಎಂದು ಪಾಕಿಸ್ತಾನ ಹೇಳಿದೆ.
    * ಜೊತೆಗೆ ಪಾಕಿಸ್ತಾನ ಸಹ ವಾಘಾ ಗಡಿಯನ್ನು ತಕ್ಷಣದಿಂದಲೇ ಮುಚ್ಚುತ್ತಿದ್ದು, ಅನುಮತಿ ಇರುವವರು ಮಾತ್ರ ಏಪ್ರಿಲ್‌ 30ರ ಒಳಗೆ ಹಿಂದಿರುಗಬಹುದು.
    * ಸಾರ್ಕ್ ವೀಸಾ ಯೋಜನೆಯಡಿಯಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳ ವೀಸಾಗಳನ್ನು ರದ್ದುಪಡಿಸಲಾಗಿದೆ. ಸಿಖ್ ಯಾತ್ರಿಕರಿಗೆ ಮಾತ್ರ ವಿನಾಯಿತಿ ನೀಡಲಾಗುವುದು. ಉಳಿದ ಭಾರತೀಯರು 48 ಗಂಟೆಗಳ ಒಳಗೆ ಪಾಕಿಸ್ತಾನ ತೊರೆಯುವಂತೆ ಸೂಚಿಸಲಾಗಿದೆ.
    * ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಸಲಹೆಗಾರರಿಗೆ ಪಾಕಿಸ್ತಾನ ತೊರೆಯುವಂತೆ ಆದೇಶಿಸಲಾಗಿದೆ. ಅಲ್ಲದೆ, ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮಿಷನ್‌ನ ಸಿಬ್ಬಂದಿಯನ್ನ 30ಕ್ಕೆ ಇಳಿಸಲಾಗಿದೆ.
    – ಭಾರತದೊಂದಿಗಿನ ಎಲ್ಲಾ ವ್ಯಾಪಾರ ಒಪ್ಪಂದ ಬಂದ್‌ಗೆ ನಿರ್ಧಾರ ಕೈಗೊಳ್ಳಲಾಗಿದೆ.

  • ಪಹಲ್ಗಾಮ್‌ ದಾಳಿ – ದೆಹಲಿಯಲ್ಲಿ ಪಾಕ್‌ ಹೈಕಮಿಷನ್‌ನಿಂದ ಕೇಕ್‌ ಆರ್ಡರ್‌!

    ಪಹಲ್ಗಾಮ್‌ ದಾಳಿ – ದೆಹಲಿಯಲ್ಲಿ ಪಾಕ್‌ ಹೈಕಮಿಷನ್‌ನಿಂದ ಕೇಕ್‌ ಆರ್ಡರ್‌!

    ನವದೆಹಲಿ: ಪಹಲ್ಗಾಮ್‌ ದಾಳಿಯ (Pahalgam Attack) ನಂತರ ಪಾಕಿಸ್ತಾನ (Pakistan) ವಿರುದ್ಧ ಇಡೀ ದೇಶವೇ ಸಿಟ್ಟು ಹೊರಹಾಕುತ್ತಿದೆ. ಈ ಮಧ್ಯೆ ಪಾಕ್‌ ಹೈಕಮಿಷನ್‌ನ ಬಳಿ ಇಂದು ಬೆಳಗ್ಗೆ ವ್ಯಕ್ತಿಯೊಬ್ಬ ಕೇಕ್‌ (Cake) ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

    ಮಾಧ್ಯಮದ ವ್ಯಕ್ತಿಗಳು ಆ ವ್ಯಕ್ತಿಯನ್ನು ಸುತ್ತುವರಿದು, ಯಾಕೆ ಈ ಆಚರಣೆ? ಎಲ್ಲಿಗೆ ತಗೆದುಕೊಂಡು ಹೋಗಲಾಗುತ್ತದೆ ಎಂದು ಪ್ರಶ್ನಿಸಿದರು. ಆದರೆ ಆ ವ್ಯಕ್ತಿ ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದ್ದಾನೆ.

    ಪಾಕಿಸ್ತಾನ ಹೈಕಮಿಷನ್‌ನ ಉನ್ನತ ರಾಜತಾಂತ್ರಿಕ ಸಾದ್ ಅಹ್ಮದ್ ವಾರೈಚ್ ಅವರನ್ನು ಬುಧವಾರ ತಡರಾತ್ರಿ ಕೇಂದ್ರವು ಸಮನ್ಸ್ ಜಾರಿ ಮಾಡಿರುವ ಬಗ್ಗೆಯೂ ಅವರನ್ನು ಕೇಳಲಾಯಿತು. ಆದರೆ ಆ ವ್ಯಕ್ತಿ ಯಾವುದೇ ಪ್ರತಿಕ್ರಿಯೆ ನೀಡದೇ ನಡೆದುಕೊಂಡು ಮುಂದೆ ಹೋಗಿದ್ದಾನೆ.

    ಪಾಕ್‌ ಹೈಕಮಿಷನ್‌ಗೆ ನೀಡಲಾಗಿದ್ದ ಭದ್ರತೆಯನ್ನು ಈಗಾಗಲೇ ಭಾರತದ ಸರ್ಕಾರ ಕಡಿತ ಮಾಡಿದೆ. ಅಷ್ಟೇ ಅಲ್ಲದೇ 48 ಗಂಟೆಯ ಒಳಗಡೆ ಭಾರತದಲ್ಲಿರುವ ಸಾರ್ಕ್‌ ವೀಸಾದ ಅಡಿಯಲ್ಲಿ ಭಾರತಕ್ಕೆ ಬಂದಿರುವ ವ್ಯಕ್ತಿಗಳು ದೇಶವನ್ನು ತೊರೆಯಬೇಕು ಎಂದು ಸೂಚಿಸಿದೆ.