Tag: ಪಹಲ್ಗಾಮ್‌ ಭಯೋತ್ಪಾದಕ ದಾಳಿ

  • ಭಯೋತ್ಪಾದನೆ ವಿಚಾರದಲ್ಲಿ ಡಬಲ್ ಸ್ಟ್ಯಾಂಡರ್ಡ್‌ ಸರಿಯಲ್ಲ: ಪಾಕ್ ಪ್ರಧಾನಿ ಮುಂದೆಯೇ ಪಹಲ್ಗಾಮ್ ದಾಳಿ ವಿಚಾರ ಪ್ರಸ್ತಾಪಿಸಿದ ಮೋದಿ

    ಭಯೋತ್ಪಾದನೆ ವಿಚಾರದಲ್ಲಿ ಡಬಲ್ ಸ್ಟ್ಯಾಂಡರ್ಡ್‌ ಸರಿಯಲ್ಲ: ಪಾಕ್ ಪ್ರಧಾನಿ ಮುಂದೆಯೇ ಪಹಲ್ಗಾಮ್ ದಾಳಿ ವಿಚಾರ ಪ್ರಸ್ತಾಪಿಸಿದ ಮೋದಿ

    – ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಖಂಡನೆ; ಪಾಕ್‌ಗೆ ಕಪಾಳಮೋಕ್ಷ
    – ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಗೆಲುವು

    ಬೀಜಿಂಗ್‌: ಭಯೋತ್ಪಾದನೆ (Terrorism) ವಿರುದ್ಧ ಭಾರತ ನಡೆಸುತ್ತಿರುವ ಹೋರಾಟಕ್ಕೆ ಈಗ ಬಹುದೊಡ್ಡ ರಾಜತಾಂತ್ರಿಕ ಯಶಸ್ಸು ಸಿಕ್ಕಂತಾಗಿದೆ. ಚೀನಾದ ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಒಕ್ಕೂಟ (SCO)ದ ಶೃಂಗ ಸಭೆಯಲ್ಲಿ ಸದಸ್ಯ ರಾಷ್ಟ್ರಗಳು ಒಮ್ಮತವಾಗಿ ಪಹಲ್ಗಾಮ್‌ ಭಯೋತ್ಪಾದಕ ದಾಳಿಯನ್ನ ಖಂಡಿಸಿವೆ. ಜೊತೆಗೆ ಭಯೋತ್ಪಾದನೆ ತಡೆಯುವ ಭಾರತದ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿವೆ.

    ಪ್ರಧಾನಿ ಮೋದಿ ಭಾಷಣದ ಬಳಿಕ ಎಸ್‌ಸಿಒ ಪಹಲ್ಗಾಮ್‌ ದಾಳಿ (Pahalgam Terror Attack) ಖಂಡಿಸಿ ಹೇಳಿಕೆ ಬಿಡುಗಡೆ ಮಾಡಿತು. ದಾಳಿಯನ್ನು ಒಕ್ಕೊರಲಿನಿಂದ ಖಂಡಿಸಿದ್ದು, ಭಾರತಕ್ಕೆ ಬೆಂಬಲ ಸೂಚಿಸಿತು. 26 ಮಂದಿ ಅಮಾಯಕರ ಸಾವಿಗೆ ಕಾರಣವಾದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು, ಎಸ್‌ಸಿಒ ಸದಸ್ಯ ರಾಷ್ಟ್ರಗಳು ಬಲವಾಗಿ ಖಂಡಿಸಿದವು. ಮೃತರು ಮತ್ತು ಗಾಯಗೊಂಡವರ ಕುಟುಂಬಗಳಿಗೆ ತಮ್ಮ ಆಳವಾದ ಸಂತಾಪ ವ್ಯಕ್ತಪಡಿಸಿದವು. ಅಮಾನವೀಯ ದಾಳಿಯ ಅಪರಾಧಿಗಳು ಮತ್ತು ಪ್ರಾಯೋಜಕರನ್ನ ನ್ಯಾಯದ ಕಟಕಟೆಗೆ ತರಬೇಕು ಎಂದು ಒತ್ತಾಯಿಸಿದವು.

    ಶೆಹಬಾಜ್‌ ಷರೀಫ್‌ ಸಭೆಯಲ್ಲಿ ಪಾಲ್ಗೊಂಡಿದ್ದಾಗಲೇ ಈ ಬೆಳವಣಿಗೆ ನಡೆದಿರುವುದು ಪಾಕಿಸ್ತಾನದ ಪ್ರಧಾನಿಗೆ (Pakistan PrimeMinister) ಕಪಾಳಮೋಕ್ಷ ಮಾಡಿದಂತಾಗಿದೆ. ಇದನ್ನೂ ಓದಿ: ರಷ್ಯಾದಿಂದ ತೈಲ ಖರೀದಿಸಿ ಬ್ರಾಹ್ಮಣರು ಶ್ರೀಮಂತರಾಗುತ್ತಿದ್ದಾರೆ: ಭಾರತದ ವಿರುದ್ಧ ಟ್ರಂಪ್‌ ಆಪ್ತನಿಂದ ಜಾತಿ ಅಸ್ತ್ರ

    ಡಬಲ್ ಸ್ಟ್ಯಾಂಡರ್ಡ್‌ ಸರಿಯಲ್ಲ; ಮೋದಿ
    ಇನ್ನೂ ಎಸ್‌ಸಿಒ ಸಭೆಯಲ್ಲಿ ಪಾಕ್‌ ಪ್ರಧಾನಿ ಎದುರಲ್ಲೇ ಪಹಲ್ಗಾಮ್‌ ಭಯೋತ್ಪಾದಕ ದಾಳಿ ಪ್ರಸ್ತಾಪಿಸಿದ ನರೇಂದ್ರ ಮೋದಿ (Narendra Modi), ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಬೆಂಬಲ ಕೋರಿದರು. ಅಲ್ಲದೇ ಭಯೋತ್ಪಾದನೆಯ ವಿಚಾರದಲ್ಲಿ ಡಬಲ್ ಸ್ಟ್ಯಾಂಡರ್ಡ್‌ ಸ್ವೀಕಾರಾರ್ಹವಲ್ಲ, ಎಸ್‌ಸಿಒ ಸದಸ್ಯ ರಾಷ್ಟ್ರಗಳು ಒಂದೇ ಧ್ವನಿಯಲ್ಲಿ ಹೇಳಬೇಕು ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು. ಇದನ್ನೂ ಓದಿ: ರಾಜತಾಂತ್ರಿಕ ಯಶಸ್ಸು – ಗಡಿಯಾಚೆಗಿನ ಭಯೋತ್ಪಾದನೆ ತಡೆಗೆ ಭಾರತಕ್ಕೆ ಚೀನಾ ಬೆಂಬಲ

    ಇದಕ್ಕೂ ಮುನ್ನ, ಕಳೆದ 4 ದಶಕಗಳಿಂದಲೂ ಭಾರತ ಭಯೋತ್ಪಾದನೆಯಿಂದ ಬಳಲುತ್ತಿದೆ. ಈ ಭಯೋತ್ಪಾದನಾ ಪಿಡುಗಿಗೆ ಅನೇಕ ತಾಯಂದಿರು ತಮ್ಮ ಮಕ್ಕಳನ್ನ ಕಳೆದುಕೊಂಡಿದ್ದಾರೆ. ಇತ್ತೀಚಿನ ಪಹಲ್ಗಾಮ್‌ ದಾಳಿಯಲ್ಲಿ ನಾವು ಈ ಭಯೋತ್ಪಾದನೆಯ ಕೊಳಕು ಮನಸ್ಥಿತಿಯನ್ನ ನೋಡಿದ್ದೇವೆ. ಈ ಬಿಕ್ಕಟ್ಟಿನ ಸಮಯದಲ್ಲಿ ನಮ್ಮೊಟ್ಟಿಗೆ ನಿಂತ ಸ್ನೇಹಿತರಿಗೆ ನಾನು ಧನ್ಯವಾದ ಹೇಳುತ್ತೇನೆ. ಇದು ಕೇವಲ ಭಾರತದ ಆತ್ಮದ ಮೇಲಿನ ದಾಳಿಯಾಗಿರಲಿಲ್ಲ. ಬದಲಾಗಿ ಮಾನವೀಯತೆ ಮೇಲೆ ನಂಬಿಕೆಯಿಟ್ಟಿರುವ ಪ್ರತಿಯೊಂದು ದೇಶಕ್ಕೂ ಬಹಿರಂಗ ಸವಾಲಾಗಿತ್ತು. ಆದಾಗ್ಯೂ ಕೆಲ ದೇಶಗಳು ಭಯೋತ್ಪಾದನೆಗೆ ಬಹಿರಂಗ ಬೆಂಬಲ ನೀಡಿದವು, ಇದು ಎಷ್ಟು ಸರಿ? ಎಂದು ಬೇಸರ ಹೊರಹಾಕಿದರು. ಇದನ್ನೂ ಓದಿ: ಪಾಕಿಸ್ತಾನ ಮ್ಯಾಪ್‌ ವಿಚಾರಕ್ಕೆ ಸಿಟ್ಟಾಗಿ SCO ಸಭೆಯಿಂದ ಎದ್ದು ಹೊರಬಂದಿದ್ದ ಅಜಿತ್‌ ದೋವಲ್‌

    ಪ್ರತಿಯೊಂದು ದೇಶದ ಅಭಿವೃದ್ಧಿಗೆ ಭದ್ರತೆ, ಶಾಂತಿ ಮತ್ತು ಸ್ಥಿರತೆ ನಿರ್ಣಾಯಕವಾದದ್ದು. ಆದ್ರೆ ಈ ಬೆಳವಣಿಗೆಗೆ ಭಯೋತ್ಪಾದನೆ ಒಂದು ದೊಡ್ಡ ಸವಾಲಾಗಿದೆ. ಅದಕ್ಕಾಗಿಯೇ ಭಾರತ ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ತೊಡಗಿದ್ದು, ನಾವೆಲ್ಲರೂ ಒಟ್ಟಾಗಿ ನಿಲ್ಲಬೇಕೆಂದು ಬಯಸುತ್ತದೆ ಎಂದು ಒತ್ತಿ ಹೇಳಿದರು. ಇದನ್ನೂ ಓದಿ: ಚೀನಾದಲ್ಲಿ ಪುಟಿನ್‌ ಜೊತೆ ಒಂದೇ ಕಾರಿನಲ್ಲಿ ಮೋದಿ ಪ್ರಯಾಣ

  • ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಕ್‌ ವಿರುದ್ಧ ಮೋದಿ ಕಟು ವಾಗ್ದಾಳಿ – ಬುದ್ಧನ ಶಾಂತಿ ತತ್ವ ಪ್ರತಿಪಾದಿಸಿದ ಪ್ರಧಾನಿ

    ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಕ್‌ ವಿರುದ್ಧ ಮೋದಿ ಕಟು ವಾಗ್ದಾಳಿ – ಬುದ್ಧನ ಶಾಂತಿ ತತ್ವ ಪ್ರತಿಪಾದಿಸಿದ ಪ್ರಧಾನಿ

    ಬ್ರೆಸಿಲಿಯಾ: ರಿಯೊ ಡಿ ಜನೈರೊದಲ್ಲಿ ನಡೆದ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ (BRICS Summit) ಪ್ರಧಾನಿ ನರೇಂದ್ರ ಮೋದಿ (Narendra Modi) ಭಯೋತ್ಪಾದನೆ ಬೆಂಬಲಿಸುತ್ತಿರುವ ಪಾಕಿಸ್ತಾನದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

    ಭಯೋತ್ಪಾದನೆ (Terrorism) ಮಾನವೀಯತೆಗೆ ಅತಿ ದೊಡ್ಡ ಬೆದರಿಕೆ ಎಂದು ಕರೆದ ಮೋದಿ, ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದ (Jammu Kashmir) ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸುವಲ್ಲಿ ಭಾರತದ ಜೊತೆ ನಿಂತ ಎಲ್ಲಾ ರಾಷ್ಟ್ರಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಇದನ್ನೂ ಓದಿ: ಯೋಗಿ ಮಾತಿಗೂ ಕಿಮ್ಮತ್ತಿಲ್ಲ – ವಿದ್ಯಾರ್ಥಿನಿಗೆ ಶುಲ್ಕ ವಿನಾಯ್ತಿ ಕೊಡಲು ನಿರಾಕರಿಸಿ‌ದ RSS ಮೂಲದ ಶಿಕ್ಷಣ ಸಂಸ್ಥೆ

    ಶೃಂಗಸಭೆ ಉದ್ದೇಶಿಸಿ ಭಾಷಣ ಮಾಡಿದ ಮೋದಿ, ಭಾರತ ಭಯೋತ್ಪಾದನೆಯ ಬಲಿಪಶು ರಾಷ್ಟ್ರವಾಗಿದ್ದರೆ, ಪಾಕಿಸ್ತಾನ ಅದರ ಬೆಂಬಲಿಗ ರಾಷ್ಟ್ರವಾಗಿದೆ ಎಂದು ಬ್ರಿಕ್ಸ್‌ ಶೃಂಗಸಭೆಯಲ್ಲಿ ವಿಶ್ವ ನಾಯಕರಿಗೆ ಮನವರಿಕೆ ಮಾಡಿಕೊಟ್ಟ ಪ್ರಧಾನಿ ಮೋದಿ, ಬಲಿಪಶುಗಳು ಮತ್ತು ಬೆಂಬಲಿಗರನ್ನು ಒಂದೇ ತಕ್ಕಡಿಯಲ್ಲಿ ತೂಗಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿದ್ದಾರೆ.

    ಭಯೋತ್ಪಾದನೆಗೆ ಬೆಂಬಲ ನೀಡುವುದು, ಭಯೋತ್ಪಾದಕರಿಗೆ ಮೌನ ಒಪ್ಪಿಗೆ ನೀಡುವುದನ್ನು ಸಹಿಸಲಾಗುವುದಿಲ್ಲ. ಈ ಬಗ್ಗೆ ನಿರ್ಣಾಯಕ ನಿರ್ಧಾರ ತೆಗೆದುಕೊಳ್ಳುವಂತೆ ಎಲ್ಲಾ ರಾಷ್ಟ್ರಗಳಿಗೆ ಮನವಿ ಮಾಡಿದ್ರು. ಅಲ್ಲದೇ ಭಾರತ ಮಹಾತ್ಮ ಗಾಂಧಿ, ಗೌತಮ ಬುದ್ಧರಿಂದ ಪ್ರೇರಿತರಾಗಿ ಶಾಂತಿಯ ಹಾದಿಯಲ್ಲಿ ಮುಂದುವರಿಯುತ್ತಿದೆ. ಎಷ್ಟೇ ಕಠಿಣ ಪರಿಸ್ಥಿತಿ ಬಂದರೂ, ಮಾನವಕುಲದ ಕಲ್ಯಾಣಕ್ಕೆ ಶಾಂತಿಯೇ ಅತ್ಯುತ್ತಮ ಮಾರ್ಗವಾಗಿದೆ ಎಂದು ಪ್ರತಿಪಾದಿಸಿದ್ರು. ಇದನ್ನೂ ಓದಿ: ಅಧಿಕೃತ ನಿವಾಸದಿಂದ ತಕ್ಷಣವೇ ಚಂದ್ರಚೂಡ್ ತೆರವಿಗೆ ಕೇಂದ್ರಕ್ಕೆ ಸುಪ್ರೀಂ ಪತ್ರ

    ಪಾಕಿಸ್ತಾನವು ತನ್ನ ನೆಲದಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡುವ ಮೂಲಕ ಭಯೋತ್ಪಾದನೆಯನ್ನ ರಾಜ್ಯ ನೀತಿಯಾಗಿ ಹೇಗೆ ಬಳಸುತ್ತಿದೆ ಎಂಬುದನ್ನು ಭಾರತವು 17ನೇ ಬಾರಿಗೆ ಸ್ಪಷ್ಟ ಪುರಾವೆಗಳೊಂದಿಗೆ ತೋರಿಸಿದೆ. ಇತ್ತೀಚಿಗೆ ಚೀನಾದ ರಾಜಧಾನಿ ಬೀಜಿಂಗ್‌ನಲ್ಲಿ ನಡೆದ ಶಾಂಘೈ ಸಹಕಾರ ಒಕ್ಕೂಟದ ರಕ್ಷಣಾ ಸಚಿವರ ಸಭೆಯಲ್ಲಿ, ಪಹಲ್ಗಾಮ್‌ ದಾಳಿ ಉಲ್ಲೇಖವಿರದ ಜಂಟಿ ಹೇಳಿಕೆಗೆ ಸಹಿ ಮಾಡಲು, ಭಾರತ ನಿರಾಕರಿಸಿತ್ತು. ಇದನ್ನೂ ಓದಿ: ಭಾಷೆ ಹೆಸರಲ್ಲಿ ಜನರನ್ನು ವಿಭಜಿಸಬಾರದು: ಮರಾಠಿ-ಹಿಂದಿ ಸಂಘರ್ಷ ಬಗ್ಗೆ ಕಂಗನಾ ಪ್ರತಿಕ್ರಿಯೆ

    ಉಗ್ರವಾದಕ್ಕೆ ಖಂಡನೆ
    ಇನ್ನೂ ಪ್ರಧಾನಿ ಮೋದಿ ಅವರ ಭಾಷಣದ ಬಳಿಕ ಬ್ರಿಕ್ಸ್‌ ಸದಸ್ಯ ರಾಷ್ಟ್ರಗಳು ಜಂಟಿ ಹೇಳಿಕೆ ಅಥವಾ ʻರಿಯೊ ಡಿ ಜನೈರೊ ಘೋಷಣೆʼಯನ್ನು ಹೊರಡಿಸಿದವು. ಯಾವುದೇ ರೀತಿಯ ಭಯೋತ್ಪಾದಕ ಕೃತ್ಯಗಳನ್ನು ಖಂಡಿಸುವುದಾಗಿ ಸ್ಪಷ್ಟಪಡಿಸಿರುವ ಬ್ರಿಕ್ಸ್‌ ನಾಯಕರು, ಭಯೋತ್ಪಾದನೆಗೆ ಯಾರೇ ಬೆಂಬಲ ನೀಡಿದರೂ ಅದನ್ನು ಉಗ್ರವಾಗಿ ಖಂಡಿಸುವುದಾಗಿ ಹೇಳಿದ್ದಾರೆ.

    ನೆನಪಿದೆಯಾ ಪಹಲ್ಗಾಮ್‌ ಉಗ್ರರ ದಾಳಿ
    ಕಳೆದ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಬೈಸರನ್‌ ಕಣಿವೆ ಪ್ರದೇಶದಲ್ಲಿರುವ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿತ್ತು. ಇದರಲ್ಲಿ ಓರ್ವ ವಿದೇಶಿ ಸೇರಿ 26 ಮಂದಿ ಸಾವನ್ನಪ್ಪಿದ್ದರು. ನೇಕರು ಗಾಯಗೊಂಡರು. ಇದಕ್ಕೆ ಪ್ರತೀಕಾರವಾಗಿ ಭಾರತ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿತ್ತು. ಇದನ್ನೂ ಓದಿ:  ಹಾವಿನ ದ್ವೇಷ 12 ವರುಷ – ಹಾಗೇ ಪ್ರೀತಿಯೂ ಪುರಾಣದಿಂದಲೇ ಹುಟ್ಟಿದ್ದಾ?

  • ಇತಿಹಾಸದಲ್ಲೇ ಮೊದಲು – ತಾಲಿಬಾನ್‌ ವಿದೇಶಾಂಗ ಸಚಿವರ ಜೊತೆ ಜೈಶಂಕರ್‌ ಮಾತುಕತೆ

    ಇತಿಹಾಸದಲ್ಲೇ ಮೊದಲು – ತಾಲಿಬಾನ್‌ ವಿದೇಶಾಂಗ ಸಚಿವರ ಜೊತೆ ಜೈಶಂಕರ್‌ ಮಾತುಕತೆ

    ನವದೆಹಲಿ: ಇತಿಹಾಶದಲ್ಲೇ ಮೊದಲ ಬಾರಿಗೆ ತಾಲಿಬಾನ್‌ (Taliban) ವಿದೇಶಾಂಗ ಸಚಿವರ ಜೊತೆ ಎಸ್‌.ಜೈಶಂಕರ್‌ (S.Jaishankar) ಮಾತುಕತೆ ನಡೆಸಿದ್ದಾರೆ.

    ಪ್ರಾದೇಶಿಕ ಚಲನಶೀಲತೆಯಲ್ಲಿ ಹೊಸ ಅಧ್ಯಾಯ ಇದು ಎನ್ನಲಾಗಿದೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಗುರುವಾರ ತಾಲಿಬಾನ್‌ನ ಹಂಗಾಮಿ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರೊಂದಿಗೆ ದೂರವಾಣಿ ಕರೆಯಲ್ಲಿ ಮಾತನಾಡಿದ್ದಾರೆ. ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತದ ಜೊತೆ ಭಾರತವು ನಡೆಸಿದ ಮೊದಲ ಸಚಿವ ಮಟ್ಟದ ಸಂಪರ್ಕ ಇದಾಗಿರುವುದರಿಂದ ಈ ಕರೆ ಮಹತ್ವದ್ದಾಗಿದೆ. ಇದನ್ನೂ ಓದಿ: ಕೊನೆಗೂ ಭಾರತದ ಮುಂದೆ ಮಂಡಿಯೂರಿದ ಪಾಕ್‌ – ಶಾಂತಿ ಮಾತುಕತೆಗೆ ಪಾಕ್‌ ಪ್ರಧಾನಿ ಆಹ್ವಾನ

    ಜಮ್ಮು ಮತ್ತು ಕಾಶ್ಮೀರದಲ್ಲಿ ಧಾರ್ಮಿಕ ಪ್ರೇರಿತ ದಾಳಿಯಲ್ಲಿ ಪಾಕಿಸ್ತಾನದ ನಂಟು ಹೊಂದಿರುವ ಭಯೋತ್ಪಾದಕರು, 26 ನಾಗರಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಪಹಲ್ಗಾಮ್‌ ದಾಳಿಯನ್ನು ಅಫ್ಘಾನಿಸ್ತಾನ ಖಂಡಿಸಿದೆ.

    ಇಂದು ಸಂಜೆ ಅಫ್ಘಾನ್ ವಿದೇಶಾಂಗ ಸಚಿವ ಮೌಲವಿ ಅಮೀರ್ ಖಾನ್ ಮುತ್ತಕಿ ಅವರೊಂದಿಗೆ ಉತ್ತಮ ಸಂಭಾಷಣೆ ನಡೆಸಲಾಯಿತು. ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಅವರು ಖಂಡಿಸಿದ್ದಕ್ಕೆ ನಮ್ಮ ಹೃದಯಪೂರ್ವಕ ಧನ್ಯವಾದಗಳು. ಚರ್ಚೆಯ ಸಮಯದಲ್ಲಿ ಅವರು ಅಫ್ಘಾನ್ ಜನರೊಂದಿಗಿನ ನಮ್ಮ (ಭಾರತದ) ಸಾಂಪ್ರದಾಯಿಕ ಸ್ನೇಹ ಮತ್ತು ಅವರ ಅಭಿವೃದ್ಧಿ ಅಗತ್ಯಗಳಿಗೆ ನಿರಂತರ ಬೆಂಬಲವನ್ನು ಒತ್ತಿ ಹೇಳಿದರು. ಸಹಕಾರವನ್ನು ಮುಂದಕ್ಕೆ ಕೊಂಡೊಯ್ಯುವ ಮಾರ್ಗಗಳು ಮತ್ತು ವಿಧಾನಗಳ ಬಗ್ಗೆ ಚರ್ಚಿಸಲಾಯಿತು ಎಂದು ಎಕ್ಸ್‌ನಲ್ಲಿ ಜೈಶಂಕರ್‌ ಪೋಸ್ಟ್‌ ಹಾಕಿದ್ದಾರೆ. ಇದನ್ನೂ ಓದಿ: ಡಮ್ಮಿ ಜೆಟ್‌, 15 ಬ್ರಹ್ಮೋಸ್‌ ಕ್ಷಿಪಣಿ ದಾಳಿ, 11 ಏರ್‌ಬೇಸ್‌ ಧ್ವಂಸ – ಪಾಕ್‌ ಕರೆಯ ಹಿಂದಿದೆ ಭಾರತದ ಪರಾಕ್ರಮದ ಕಥೆ

    ಜಮ್ಮು ಮತ್ತು ಕಾಶ್ಮೀರದ ಘಟನೆಗಳಿಗೆ ತಾಲಿಬಾನ್ ಕಾರಣ ಎಂಬ ಪಾಕಿಸ್ತಾನ ಸುಳ್ಳು ಸುದ್ದಿ ಹರಡಿದೆ ಎಂದು ಜೈಶಂಕರ್‌ ಇದೇ ವೇಳೆ ತಿಳಿಸಿದ್ದಾರೆ. ಪಾಕಿಸ್ತಾನಿ ಮಾಧ್ಯಮಗಳಲ್ಲಿ ಸುಳ್ಳು ಮತ್ತು ಆಧಾರರಹಿತ ವರದಿಗಳ ಮೂಲಕ ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ಅಪನಂಬಿಕೆಯನ್ನು ಸೃಷ್ಟಿಸುವ ಇತ್ತೀಚಿನ ಪ್ರಯತ್ನಗಳನ್ನು ಮುತಾಕಿ ದೃಢವಾಗಿ ತಿರಸ್ಕರಿಸಿದ್ದಾರೆ ಎಂದು ಬರೆದಿದ್ದಾರೆ.

  • ಶೋಪಿಯನ್‌ನಲ್ಲಿ ಉಗ್ರರ ಹತ್ಯೆ- ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದ ಭದ್ರತಾ ಪಡೆ

    ಶೋಪಿಯನ್‌ನಲ್ಲಿ ಉಗ್ರರ ಹತ್ಯೆ- ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದ ಭದ್ರತಾ ಪಡೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಶೋಪಿಯಾನ್ (Shopian) ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ(Keller Forest) ಪ್ರದೇಶದಲ್ಲಿ ಮೂವರು ಉಗ್ರರ ಹತ್ಯೆ ಬೆನ್ನಲ್ಲೇ ಭದ್ರತಾ ಪಡೆಗಳು ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಕ್ಕೆ ಪಡೆದುಕೊಂಡಿವೆ.

    ಮೇ 13ರಂದು ‘ಆಪರೇಷನ್ ಕೆಲ್ಲರ್’ ಅಡಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆ ಮೂವರು ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದಿದೆ. ಅದಾದ ಒಂದು ದಿನದ ಬಳಿಕ ಬುಧವಾರ ಭದ್ರತಾ ಪಡೆಗಳು ರೈಫಲ್, ಗ್ರೆನೇಡ್‌ಗಳು ಸೇರಿದಂತೆ ಬೃಹತ್ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ. ಈ ಶಸ್ತ್ರಾಸ್ತ್ರಗಳು, ಸಾವನ್ನಪ್ಪಿದ್ದ ಮೂವರು ಉಗ್ರರಿಗೆ ಸೇರಿರಬಹುದು ಎನ್ನಲಾಗಿದೆ.ಇದನ್ನೂ ಓದಿ: ʻಬಿಬಿಎಂಪಿʼ ಹೆಸರು ಇತಿಹಾಸ ಪುಟಕ್ಕೆ – ಮೇ 15ರಿಂದ ʻಗ್ರೇಟರ್‌ ಬೆಂಗಳೂರುʼ ಆಡಳಿತ ಜಾರಿ

    ಎನ್‌ಕೌಂಟರ್ ಆದ ಮೂವರು ಭಯೋತ್ಪಾದಕರು ಎಲ್‌ಇಟಿ ಸಂಘಟನೆಗೆ ಸೇರಿದವರಾಗಿದ್ದು, ಆ ಪೈಕಿ ಇಬ್ಬರನ್ನು ಶೋಪಿಯಾನ್‌ನ ಸ್ಥಳೀಯರು ಎನ್ನಲಾಗಿದೆ. ಶಾಹಿದ್ ಕುಟ್ಟಯ್ ಮತ್ತು ಅದ್ನಾನ್ ಶಫಿ ದಾರ್ ಎಂದು ಗುರುತಿಸಲಾಗಿದ್ದು, ಇನ್ನೋರ್ವನ ಗುರುತು ಪತ್ತೆಯಾಗಿಲ್ಲ.

    ದಕ್ಷಿಣ ಕಾಶ್ಮೀರ ಜಿಲ್ಲೆಯ ಶುಕ್ರೂ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಅಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆ ಪ್ರಾರಂಭಿಸಿದಾಗ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿತ್ತು.

    ಏ.22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆಂದು ಶಂಕಿಸಲಾಗಿರುವ ಮೂವರು ಪಾಕಿಸ್ತಾನಿ ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್, ಅಲಿ ಭಾಯ್ ಮತ್ತು ಹಾಶಿಮ್ ಮೂಸಾ ಪೋಸ್ಟರ್‌ಗಳನ್ನು ಭದ್ರತಾ ಪಡೆಗಳು ಪೋಸ್ಟ್ ಮಾಡಿದ ಬೆನ್ನಲ್ಲೇ ಗುಂಡಿನ ದಾಳಿ ನಡೆದಿತ್ತು.ಇದನ್ನೂ ಓದಿ: ಕರ್ನಲ್ ಸೋಫಿಯಾ ಪತಿ ಮನೆ ಮೇಲೆ RSS ದಾಳಿ ವದಂತಿ – ಸುಳ್ಳು ಸುದ್ದಿ ನಂಬದಂತೆ ಬೆಳಗಾವಿ ಎಸ್ಪಿ ಮನವಿ

  • ಕಷ್ಟದ ಸಮಯದಲ್ಲಿ ಜೊತೆಗಿರುತ್ತೇವೆ – ಪಾಕ್‌ಗೆ ಚೀನಾ ಬೆಂಬಲ

    ಕಷ್ಟದ ಸಮಯದಲ್ಲಿ ಜೊತೆಗಿರುತ್ತೇವೆ – ಪಾಕ್‌ಗೆ ಚೀನಾ ಬೆಂಬಲ

    – ಇತ್ತ ಭಾರತಕ್ಕೆ ರಷ್ಯಾ ಬೆಂಬಲ

    ಇಸ್ಲಾಮಾಬಾದ್‌/ಬೀಜಿಂಗ್‌: ಪಹಲ್ಗಾಮ್‌ನಲ್ಲಿ (Pahalgam) ಹಿಂದೂಗಳ ನರಮೇಧ ನಡೆದ ಬಳಿ ಭಾರತದ ಪ್ರತಿಕ್ರಮಕ್ಕೆ ಪಾಕಿಸ್ತಾನ ತತ್ತರಿಸಿದೆ. ಈ ನಡುವೆ ಚೀನಾ, ಪಾಕಿಸ್ತಾನಕ್ಕೆ ತನ್ನ ಬೆಂಬಲವನ್ನು ಮತ್ತೊಮ್ಮೆ ಖಚಿತಪಡಿಸಿದೆ. ಪಾಕಿಸ್ತಾನದಲ್ಲಿರುವ (Pakistan) ಚೀನಾ ರಾಯಭಾರಿ ಜಿಯಾಂಗ್ ಜೈಡಾಂಗ್ (Jiang Zaidong), ಸಂಕಷ್ಟ ಸಮಯದಲ್ಲಿ ಯಾವಾಗಲೂ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತದೆ ಎಂದು ಹೇಳಿದ್ದಾರೆ.

    ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ (Asif Ali Zardari) ಅವರನ್ನು ಭೇಟಿಯಾದ ಜೈಡಾಂಗ್‌, ಭಾರತದೊಂದಿಗೆ ನಡೆಯುತ್ತಿರುವ ಪರಿಸ್ಥಿತಿಗಳ ಕುರಿತು ದೀರ್ಘವಾಗಿ ಚರ್ಚಿಸಿದರು. ಇದೇ ವೇಳೆ ದಕ್ಷಿಣ ಏಷ್ಯಾದಲ್ಲಿ ಶಾಂತಿ ಮತ್ತು ಸ್ಥಿರತೆ ಖಚಿತಪಡಿಸಿಕೊಳ್ಳಲು ಚೀನಾ ಯಾವಾಗಲೂ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತದೆ ಎಂದು ಅಭಯ ನೀಡಿದ್ದಾರೆ. ಇದನ್ನೂ ಓದಿ: ಭಾರತ-ಪಾಕ್‌ ನಡುವೆ ಯುದ್ಧ ಛಾಯೆ – ಮೇ 7ರಂದು ದೇಶಾದ್ಯಂತ ಮಾಕ್ ಡ್ರಿಲ್

    ಭಾರತದ ಕ್ರಮಕ್ಕೆ ತತ್ತರಿಸಿದ ಪಾಕ್:‌
    ಇದೇ ವೇಳೆ ಪಾಕ್‌ನಲ್ಲಿರುವ ಚೀನಾ ರಾಯಭಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾರತ ತೆಗೆದುಕೊಂಡ ಇತ್ತೀಚಿನ ಕ್ರಮಗಳ ಬಗ್ಗೆ ಆಸಿಫ್‌ ಅಲಿ ಜರ್ದಾರಿ ಕಳವಳ ವ್ಯಕ್ತಪಡಿಸಿದರು. ಭಾರತದ ಕ್ರಮಗಳು ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗೆ ಅಪಾಯ ಉಂಟುಮಾಡಬಹುದು ಎಂದು ಆತಂಕಪಟ್ಟರು. ಇದನ್ನೂ ಓದಿ: ಯುದ್ಧ ಕಾರ್ಮೋಡ; ಭಾರತ ಸಮರಭ್ಯಾಸ – ಪಾಕ್‌ನಿಂದ ಫತಾಹ್ ಕ್ಷಿಪಣಿ ಪರೀಕ್ಷೆ

    ಇದಕ್ಕೂ ಮೊದಲು, ಭಾರತವು ಸಿಂಧೂ ನದಿ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವುದು, ಅಟ್ಟಾರಿ-ವಾಘಾ ಗಡಿಯನ್ನು ಮುಚ್ಚುವುದು ಮತ್ತು ಪಾಕಿಸ್ತಾನದೊಂದಿಗಿನ ರಾಜತಾಂತ್ರಿಕ ಸಂಬಂಧಗಳನ್ನು ಕಡಿತಗೊಳಿಸುವ ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಂಡಿತ್ತು. ಆಗಲೂ ಚೀನಾ ಪಾಕ್‌ ನಡೆಗೆ ಬೆಂಬಲ ವ್ಯಕ್ತಪಡಿಸಿತ್ತು. ಇದನ್ನೂ ಓದಿ: ಕಾಶ್ಮೀರದಲ್ಲಿ 2 ಜಲವಿದ್ಯುತ್ ಯೋಜನೆಗಳಿಗೆ ಚಾಲನೆ – ಪಾಕ್‌ಗೆ ಶಾಕ್‌

    ಭಾರತಕ್ಕೆ ರಷ್ಯಾ ಬೆಂಬಲ:
    ಪಾಕ್‌ ವಿರುದ್ಧ ತೆಗೆದುಕೊಳ್ಳುವ ಕ್ರಮಕ್ಕೆ ಭಾರತಕ್ಕೆ ಜಾಗತಿಕವಾಗಿ ಭಾರೀ ಬೆಂಬಲ ವ್ಯಕ್ತವಾಗ್ತಿದೆ. ಮಿತ್ರರಾಷ್ಟ್ರವಾಗಿರುವ ರಷ್ಯಾದಿಂದಲೂ ಉಗ್ರರ ವಿರುದ್ಧ ಭಾರತದ ಹೋರಾಟಕ್ಕೆ ಬೆಂಬಲ ಸಿಕ್ಕಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ಮೋದಿಗೆ ದೂರವಾಣಿ ಕರೆ ಮಾಡಿ ಬೆಂಬಲ ಸೂಚಿಸಿದ್ದಾರೆ. ಪಹ್ಲಗಾಮ್ ಉಗ್ರರ ದಾಳಿಯನ್ನು ಪುಟಿನ್ ಬಲವಾಗಿ ಖಂಡಿಸಿದ್ದಾರೆ. ಉಗ್ರರ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಪುಟಿನ್ ಹೇಳಿದ್ದಾರೆಂದು ವಿದೇಶಾಂಗ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ.

  • ಕನ್ನಡ.. ಕನ್ನಡ ಇದಕ್ಕೇನೇ ಭಯೋತ್ಪಾದಕ ದಾಳಿ ನಡೆದಿದ್ದು – ವಿವಾದ ಮೈಮೇಲೆಳೆದುಕೊಂಡ ಸೋನು ನಿಗಮ್

    ಕನ್ನಡ.. ಕನ್ನಡ ಇದಕ್ಕೇನೇ ಭಯೋತ್ಪಾದಕ ದಾಳಿ ನಡೆದಿದ್ದು – ವಿವಾದ ಮೈಮೇಲೆಳೆದುಕೊಂಡ ಸೋನು ನಿಗಮ್

    -ಕನ್ನಡ ಹಾಡು ಹೇಳಿ ಎಂದಿದ್ದಕ್ಕೆ ಎಡವಟ್ಟಾಗಿ ಮಾತಾಡಿದ ಗಾಯಕ

    ಬೆಂಗಳೂರು: ಕಾರ್ಯಕ್ರಮವೊಂದರಲ್ಲಿ ಕನ್ನಡ (Kannada) ಹಾಡು ಹೇಳಿ ಎಂದಿದ್ದಕ್ಕೆ, ಇದಕ್ಕೇನೇ ಪಹಲ್ಗಾಮ್ ದಾಳಿ ನಡೆದಿದ್ದು ಎಂದು ಗಾಯಕ ಸೋನು ನಿಗಮ್ (Sonu Nigam) ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದಾರೆ.

    ಬೆಂಗಳೂರಿನ (Bengaluru) ಈಸ್ಟ್ ಪಾಯಿಂಟ್ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ ಭಾಗವಹಿಸಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿದನು. ಅದಕ್ಕೆ ಸೋನು ನಿಗಮ್ ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿ, ತಮಗೆ ಕನ್ನಡ ಮೇಲಿರುವ ಪ್ರೀತಿ, ಇಲ್ಲಿನ ಜನರ ಮೇಲಿರುವ ಗೌರವದ ಬಗ್ಗೆ ಹೇಳಿಕೊಂಡರು.ಇದನ್ನೂ ಓದಿ: Mangaluru | ಕಾರಿಗೆ ಮೀನಿನ ಟೆಂಪೋ ಗುದ್ದಿಸಿ ಸಾರ್ವಜನಿಕವಾಗಿ ಸುಹಾಸ್ ಶೆಟ್ಟಿ ಹತ್ಯೆ


    ನನ್ನ ವೃತ್ತಿಜೀವನದಲ್ಲಿ ನಾನು ಬೇರೆ ಬೇರೆ ಭಾಷೆಗಳಲ್ಲಿ ಹಾಡಿದ್ದೇನೆ. ಆ ಪೈಕಿ ನಾನು ಹಾಡಿದ ಅತ್ಯುತ್ತಮ ಹಾಡುಗಳು ಕನ್ನಡದಲ್ಲಿವೆ. ನಾನು ಕರ್ನಾಟಕಕ್ಕೆ ಬಂದಾಗಲೆಲ್ಲಾ ತುಂಬಾ ಪ್ರೀತಿ, ಗೌರವದಿಂದ ಬರುತ್ತೇನೆ. ನೀವೆಲ್ಲ ನನ್ನನ್ನು ನಿಮ್ಮ ಕುಟುಂಬದವರಂತೆ ನೋಡಿಕೊಂಡಿದ್ದೀರಿ. ಪ್ರತಿ ಬಾರಿ ನಾನು ಯಾವುದೇ ಕಾರ್ಯಕ್ರಮಕ್ಕೆ ಹೋದಾಗಲೂ, ಯಾರಾದರೂ ಕನ್ನಡ ಎಂದು ಕೂಗಿದಾಗ ಅವರಿಗಾಗಿ ಒಂದು ಸಾಲು ಕನ್ನಡ ಹಾಡನ್ನಾದರೂ ಹಾಡಿರುತ್ತೇನೆ. ಆ ಹುಡುಗನ ವಯಸ್ಸಿಗಿಂತ ಮೊದಲಿನಿಂದಲೂ ನಾನು ಕನ್ನಡ ಹಾಡು ಹಾಡುತ್ತಿದ್ದೇನೆ. ಆದರೆ ಕನ್ನಡ, ಕನ್ನಡ ಎಂದು ಕಿರುಚಿಕೊಂಡು ಆ ಹುಡುಗ ಹೇಳಿದ್ದು ನನಗೆ ಇಷ್ಟವಾಗಲಿಲ್ಲ. ಇದೇ ಕಾರಣದಿಂದ ಪಹಲ್ಗಾಮ್ ದಾಳಿಯಾಗಿದ್ದು ಎಂದು ಹೇಳಿ ವಿವಾದ ಮೈಮೇಲೆ ಎಳೆದುಕೊಂಡರು.

    ಸೋನು ನಿಗಮ್ ಮಾತಿಗೆ ಕನ್ನಡಪರ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗಿದ್ದು, ಕನ್ನಡ ಹಾಡುವಂತೆ ಹೇಳಿದ್ದಕ್ಕೂ, ಭಯೋತ್ಪಾದಕರ ದಾಳಿಗೂ ಏನು ಸಂಬಂಧ? ಎಂದು ಆಕ್ರೋಶ ಹೊರಹಾಕಿದ್ದಾರೆ. ಸೋನು ನಿಗಮ್‌ರನ್ನು ಕನ್ನಡ ಚಿತ್ರೋದ್ಯಮದಿಂದ ದೂರ ಇಡಿ ಹಾಗೂ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.ಇದನ್ನೂ ಓದಿ: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ

  • Pahalgam Terrorist Attack | ನಾಳೆ ಮೋದಿ ನೇತೃತ್ವದಲ್ಲಿ 2ನೇ ಸುತ್ತಿನ ಹೈವೋಲ್ಟೇಜ್‌ ಸಭೆ

    Pahalgam Terrorist Attack | ನಾಳೆ ಮೋದಿ ನೇತೃತ್ವದಲ್ಲಿ 2ನೇ ಸುತ್ತಿನ ಹೈವೋಲ್ಟೇಜ್‌ ಸಭೆ

    ನವದೆಹಲಿ: ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ಕೃತ್ಯಕ್ಕೆ (Pahalgam Terrorist Attack) ದೇಶಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಈ ನಡುವೆ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಬುಧವಾರ (ಏ.30) ಮಹತ್ವದ ಸರಣಿ ಸಭೆಗಳನ್ನು ನಡೆಸಲು ನಿರ್ಧರಿಸಲಾಗಿದೆ.

    ಬೆಳಗ್ಗೆ 11 ಗಂಟೆ ಸುಮಾರಿಗೆ ರಾಷ್ಟ್ರೀಯ ಭದ್ರತೆಯ ಕುರಿತು ದೇಶದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಭದ್ರತಾ ಸಂಪುಟ ಸಮಿತಿ (CCS) ಸಭೆ ನಡೆಸಲಿದೆ. ಇದಾದ ಬಳಿಕ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ (CCPA), ನಂತರ ಕೇಂದ್ರ ಸಂಪುಟ ಸಮಿತಿ ಮೋದಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಿದೆ. ಇದನ್ನೂ ಓದಿ: 48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಪಾಕ್‌ ಪ್ರಜೆಗಳಿಗೆ ಭಾರತ ವಾರ್ನಿಂಗ್‌ – ಪಾಕ್‌ ಸಂಬಂಧಕ್ಕೆ ಎಳ್ಳುನೀರು

    ಪಹಲ್ಗಾಮ್ ದಾಳಿಯ ನಂತರ ನಡೆಯುತ್ತಿರುವ ಅತ್ಯುನ್ನತ ಮಟ್ಟದ 2ನೇ ಸುತ್ತಿನ ಸಭೆ ಇದಾಗಿದ್ದು, ಭದ್ರತೆ ಸಿದ್ಧತೆಗಳ ಕುರಿತು ಚರ್ಚೆ ನಡೆಯಲಿದೆ. ಜೊತೆಗೆ ಪಾಕಿಸ್ತಾನದ ವಿರುದ್ಧ ಇನ್ನಷ್ಟು ಕಠಿಣ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಏ.20ರಂದೇ ನಡೆಯಬೇಕಿದ್ದ ಪಹಲ್ಗಾಮ್ ದಾಳಿ 2 ದಿನ ತಡವಾಗಿದ್ದೇಕೆ? – NIA ತನಿಖೆಯಲ್ಲಿ ರೋಚಕ ಅಂಶ

    ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ಪ್ರಧಾನಿ ಮೋದಿ ಅಧ್ಯಕ್ಷತೆ ವಹಿಸಲಿದ್ದಾರೆ. ಅಲ್ಲದೇ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ, ಆರೋಗ್ಯ ಸಚಿವ ಜೆ.ಪಿ ನಡ್ಡಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರ ಹಿರಿಯ ಸಚಿವರೂ ಪಾಲ್ಗೊಳ್ಳಲಿದ್ದಾರೆ. ಇದಾದ ಬಳಿಕ ಆರ್ಥಿಕ ವ್ಯವಹಾರಗಳ ಸಮಿತಿ ಸಭೆ ನಡೆಸಲಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ 48 ಪ್ರವಾಸಿ ತಾಣಗಳು ಬಂದ್‌ – ಉಗ್ರರ ಸಂಭಾವ್ಯ ದಾಳಿಯ ಎಚ್ಚರಿಕೆ ಕೊಟ್ಟ ಗುಪ್ತಚರ

    ಏ.23ರಂದು ಪ್ರಧಾನಿ ಮೋದಿ ನೇತೃತ್ವದಲ್ಲೇ ಸತತ 3 ಗಂಟೆಗಳ ಕಾಲ ಕೇಂದ್ರ ಸಂಪುಟ ಸಮಿತಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಅಟ್ಟಾರಿ-ವಾಘಾ ಗಡಿ ಚೆಕ್‌ಪೋಸ್ಟ್‌ (Attari Border) ಅನ್ನು ತಕ್ಷಣದಿಂದ ಮುಚ್ಚುವುದು, ಸಾರ್ಕ್ ವಿಸಾ ವಿನಾಯಿತಿ ಯೋಜನೆ ಪಾಕಿಸ್ತಾನದವರಿಗೆ ರದ್ದು, ರಾಯಭಾರ ಕಚೇರಿ ಸಿಬ್ಬಂದಿ ಹಂತಹಂತವಾಗಿ ಕಡಿತಗೊಳಿಸುವುದು ಮತ್ತು 1960ರ ಸಿಂಧೂ ನದಿ ಒಪ್ಪಂದವನ್ನು ರದ್ದು ಮಾಡುವುದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಸಮಿತಿ ತೆಗೆದುಕೊಂಡಿತ್ತು. ಈ ಮೂಲಕ ಪಾಕಿಸ್ತಾನ ಜೊತೆಗಿನ ರಾಜತಾಂತ್ರಿಕ ಸಂಬಂಧಕ್ಕೆ ಎಳ್ಳುನೀರು ಬಿಡಲಾಗಿತ್ತು. ಇದನ್ನೂ ಓದಿ: Pahalgam Attack | ಟಿಆರ್‌ಎಫ್‌ಗೆ ಭಾರತೀಯ ಯುವಕರೇ ಟಾರ್ಗೆಟ್‌ – ಈ ಭಯೋತ್ಪಾದಕ ಗುಂಪು ಹೇಗೆ ಕೆಲಸ ಮಾಡುತ್ತೆ?

  • ಏ.20ರಂದೇ ನಡೆಯಬೇಕಿದ್ದ ಪಹಲ್ಗಾಮ್ ದಾಳಿ 2 ದಿನ ತಡವಾಗಿದ್ದೇಕೆ? – NIA ತನಿಖೆಯಲ್ಲಿ ರೋಚಕ ಅಂಶ

    ಏ.20ರಂದೇ ನಡೆಯಬೇಕಿದ್ದ ಪಹಲ್ಗಾಮ್ ದಾಳಿ 2 ದಿನ ತಡವಾಗಿದ್ದೇಕೆ? – NIA ತನಿಖೆಯಲ್ಲಿ ರೋಚಕ ಅಂಶ

    ಶ್ರೀನಗರ: ಪಹಲ್ಗಾಮ್‌ನಲ್ಲಿ (Pahalgam Terrorist Attack) ನಡೆದ ಭಯೋತ್ಪಾದಕ ದಾಳಿಯ ಕುರಿತು ಬೆಚ್ಚಿ ಬೀಳಿಸುವ ಅಂಶವೊಂದು ಎನ್‌ಐಎ (NIA) ತನಿಖೆಯಲ್ಲಿ ಬೆಳಕಿಗೆ ಬಂದಿದೆ.

    ಏ.22 ರಂದು ಪಹಲ್ಗಾಮ್‌ನ ಬೈಸರನ್ ವ್ಯಾಲಿಯಲ್ಲಿ ನಡೆದ ಹಿಂದೂಗಳ ನರಮೇಧ, ಅದಕ್ಕೂ ಎರಡು ದಿನಗಳ ಹಿಂದೆಯೇ ನಡೆಯಬೇಕಿತ್ತು. ಏ.20ರಂದು ಭಯೋತ್ಪಾದಕರು ದಾಳಿಯ ಸಂಚು ರೂಪಿಸಿಕೊಂಡು ಸ್ಥಳಕ್ಕೆ ಬಂದಿದ್ದರು. ಆದರೆ ಅಂದು ಹವಾಮಾನದಲ್ಲಿ ತೀವ್ರ ಬದಲಾವಣೆ, ತೀವ್ರವಾದ ಮಳೆ ಮತ್ತು ಮಂಜು ಮುಸುಕಿದಂತಹ ವಾತಾವರಣವಿದ್ದ ಕಾರಣದಿಂದ ಯೋಜನೆಯನ್ನು ಮುಂದೂಡಿದ್ದರು ಎಂಬುದು ಎನ್‌ಐಎ ತನಿಖೆಯಲ್ಲಿ ಬಯಲಾಗಿದೆ.ಇದನ್ನೂ ಓದಿ: ಐಪಿಎಲ್‌ಗಾಗಿ ಮಟನ್‌, ಪಿಜ್ಜಾ ತ್ಯಜಿಸಿದ್ದ ವೈಭವ್‌ – ಡಯಟ್‌ ಸೀಕ್ರೆಟ್‌ ರಿವೀಲ್‌ ಮಾಡಿದ ಕೋಚ್‌

    ದಾಳಿ ಸಂಚು ರೂಪಿಸಿದ್ದ ಭಯೋತ್ಪಾದಕರ ಟಾರ್ಗೆಟ್ ಬಹುದೊಡ್ಡದಾಗಿತ್ತು. ದೊಡ್ಡ ಬೇಟೆಗಾಗಿ ಕಾದು ಬಂದಿದ್ದ ಉಗ್ರರಿಗೆ ಅಂದು ಹವಾಮಾನ ಕೈಕೊಟ್ಟಿತ್ತು. ವಾತಾವರಣದಲ್ಲಿ ಹಠಾತ್ ಬದಲಾವಣೆಯಿಂದಾಗಿ ಬೈಸರನ್ ವ್ಯಾಲಿಯಲ್ಲಿ ಜನರ ಸಂಖ್ಯೆ ಕಡಿಮೆಯಾಗಿತ್ತು. ಹೀಗಾಗಿ ಹೆಚ್ಚು ಜನರನ್ನು ಹತ್ಯೆ ಮಾಡುವ ಉದ್ದೇಶದಿಂದಲೇ ದಾಳಿ ಮಾಡುವ ಯೋಜನೆಯನ್ನು ಮುಂದೂಡಿದ್ದರು ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ.

    ಏ.22ರಂದು ನಡೆದಿದ್ದೇನು?
    ಹತ್ಯೆಯಾದ ದಿನ ಉಗ್ರರು ಸುತ್ತಮುತ್ತಲಿನ ಕಾಡು ಬೆಟ್ಟದಂತಿರುವ ಪ್ರದೇಶದಿಂದ ನುಗ್ಗಿ ಬಂದು ಗುಂಡು ಹಾರಿಸಿದ್ದರು ಎಂದು ಅಂದಾಜಿಸಲಾಗಿತ್ತು. ಎನ್‌ಐಎ ತನಿಖೆಯಲ್ಲಿ ವಿಷಯ ಬೆಳಕಿಗೆ ಬಂದಿದೆ. ಉಗ್ರರು ಏ.22 ರಂದು ಮಧ್ಯಾಹ್ನ 2:30ಕ್ಕೆ ಫುಡ್ ಸ್ಟಾಲ್ ಹಿಂಭಾಗದಲ್ಲಿ ಪ್ರವಾಸಿಗರಿಗಾಗಿ ಕಾದು ಕುಳಿತಿದ್ದರು. ಜನ ಸಮೂಹ ದೊಡ್ಡಗಾಗಿ ಸೇರುತ್ತಿದ್ದಂತೆ ಎದ್ದು ನಿಂತು ಹೆಸರು, ಧರ್ಮ ಕೇಳಿ ಏಕಾಏಕಿ ಗುಂಡಿನ ದಾಳಿ ಆರಂಭಿಸಿದ್ದರು ಎಂದು ತಿಳಿದು ಬಂದಿದೆ.ಇದನ್ನೂ ಓದಿ: ಕಾಶ್ಮೀರದಲ್ಲಿ 48 ಪ್ರವಾಸಿ ತಾಣಗಳು ಬಂದ್‌ – ಉಗ್ರರ ಸಂಭಾವ್ಯ ದಾಳಿಯ ಎಚ್ಚರಿಕೆ ಕೊಟ್ಟ ಗುಪ್ತಚರ

  • ಲಂಡನ್‌ನಲ್ಲಿ ಭಾರತೀಯರ ಪ್ರತಿಭಟನೆ ವೇಳೆ ಕತ್ತು ಕೊಯ್ಯುವ ಸನ್ನೆ ಮಾಡಿದ ಪಾಕ್ ಅಧಿಕಾರಿ

    ಲಂಡನ್‌ನಲ್ಲಿ ಭಾರತೀಯರ ಪ್ರತಿಭಟನೆ ವೇಳೆ ಕತ್ತು ಕೊಯ್ಯುವ ಸನ್ನೆ ಮಾಡಿದ ಪಾಕ್ ಅಧಿಕಾರಿ

    – ಮೆಲ್ಬರ್ನ್ ಸೇರಿ ವಿದೇಶದ ಹಲವೆಡೆ ಪಹಲ್ಗಾಮ್ ಘಟನೆ ಖಂಡಿಸಿ ಪ್ರತಿಭಟನೆ

    ಲಂಡನ್‌: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ (Pahalgam Terror Attack) ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ವಿರೋಧ, ಖಂಡನೆಗಳು ವ್ಯಕ್ತವಾಗ್ತಿವೆ. ಬೇರೆ ದೇಶಗಳಲ್ಲಿರುವ ಭಾರತೀಯರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕುತ್ತಿದ್ದಾರೆ. ಹಾಗೆಯೇ ಲಂಡನ್ (London) ರಾಯಭಾರಿ ಕಚೇರಿ ಬಳಿ ಪ್ರತಿಭಟನೆ ಮಾಡುವಾಗ ಪಾಕ್ ರಾಯಭಾರಿ ಅಧಿಕಾರಿ ತೈಮೂರ್ ರಾಹತ್ ಪ್ರಚೋದನೆ ನೀಡಿದ್ದಾನೆ.

    ಅಭಿನಂದನ್ ವರ್ಧಮಾನ್ ಫೋಟೋ ಇರುವ ಪೋಸ್ಟರ್ ಹಿಡಿದುಕೊಂಡು ಕತ್ತು ಕೊಯ್ಯುತ್ತೇವೆ ಎಂದು ಸನ್ನೆ ಮಾಡಿ ತೋರಿಸಿದ್ದಾನೆ. ಇದಕ್ಕೆ ಪ್ರತಿಭಟನಾಕಾರರು ಸ್ಥಳದಲ್ಲೇ ತಿರುಗೇಟು ಕೊಟ್ಟಿದ್ದಾರೆ. ನಿಮಗೂ ತೊಳೆದುಕೊಳ್ಳಲು ನೀರು ಇರಲ್ಲ ಅಂತ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್‌ನಲ್ಲಿ ನಡೆದಿದ್ದು ಘೋರ ದುರಂತ – ಭಾರತ, ಪಾಕ್‌ ಉದ್ವಿಗ್ನತೆ ಬಗೆಹರಿಸಿಕೊಳ್ಳಲಿವೆ: ಟ್ರಂಪ್

    ಮತ್ತೊಂದು ಭಯಾನಕ ವಿಡಿಯೋ ವೈರಲ್‌
    ಈ ಮಧ್ಯೆ, ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಬುಧವಾರ ನಡೆದ ಉಗ್ರರ ದಾಳಿಯ ಮತ್ತೊಂದು ಭಯಾನಕ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಿಳಿ ಶರ್ಟ್ ಧರಿಸಿದ್ದ ವ್ಯಕ್ತಿಗೆ ಉಗ್ರ ಪಾಯಿಂಟ್ ಬ್ಲಾಕ್‌ನಲ್ಲಿ ಶೂಟ್ ಮಾಡಿ, ಬಳಿಕ ಜನಸಮುದಾದತ್ತ ತೆರಳಿ ಅಲ್ಲಿ ರಕ್ತಪಾತ ನಡೆಸಿದ್ದಾನೆ. ಇದನ್ನೂ ಓದಿ: ಪಾಕಿಸ್ತಾನದ ಲಾಹೋರ್‌ ಏರ್‌ಪೋರ್ಟ್‌ನಲ್ಲಿ ಭಾರೀ ಅಗ್ನಿ ದುರಂತ – ರನ್‌ವೇ ಬಂದ್‌, ವಿಮಾನಗಳ ಹಾರಾಟ ಸ್ಥಗಿತ

    ಆ ಉಗ್ರ ಮತ್ತೆ ಮುಂದೆ ಹೋಗಿ ಅಲ್ಲಿದ್ದ ಜನಸಮೂಹದ ಮೇಲೆ ಗುಂಡಿನ ದಾಳಿ ಮಾಡುತ್ತಾನೆ. ದಾಳಿ ವೇಳೆ ಕೆಲ ಮಕ್ಕಳು ಆಟವಾಡುತ್ತಿರುವುದು, ಚೀರಾಟ, ಕೂಗಾಟದ ಸದ್ದು ಕೇಳಿಬರುತ್ತದೆ. ಉಗ್ರರು ದಟ್ಟ ಕಾನನ ಮಧ್ಯೆ ಬಂದು ಗಿಡಗಳಿಂದ ಇಳಿದು ದಾಳಿ ನಡೆಸಿರೋದು ಗೊತ್ತಾಗಿದೆ. ಇದನ್ನೂ ಓದಿ: ಶಿಮ್ಲಾ ಒಪ್ಪಂದಕ್ಕೆ ಸಹಿ ಹಾಕಿದ್ದ ಮೇಜಿಂದ ಪಾಕ್ ಧ್ವಜ ತೆಗೆದು ಹಾಕಿದ ಭಾರತ

    ಇನ್ನೂ ಶಂಕಿತ ಉಗ್ರ ಆದಿಲ್ 2018ರಲ್ಲಿ ಪಾಕಿಸ್ಥಾನಕ್ಕೆ ಸ್ಟೂಡೆಂಟ್ ವೀಸಾದಲ್ಲಿ ಹೋಗಿ, 2024ಕ್ಕೆ ನಾಲ್ವರು ಉಗ್ರರೊಂದಿಗೆ ವಾಪಸ್ಸಾಗಿ ಈ ದಾಳಿ ನಡೆಸಿರೋದು ಗೊತ್ತಾಗಿದೆ. ಈ ದಾಳಿಯಲ್ಲಿ ಕರ್ನಾಟಕದ ಮೂವರು ಸೇರಿದಂತೆ 26 ಜನರು ಬಲಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ.