Tag: ಪಾಂಡಿಚೆರಿ

  • ಲಾರಿ ಡಿಕ್ಕಿ – ಹೆದ್ದಾರಿಯಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದ ಏಳು ಲಕ್ಷ ಮೌಲ್ಯದ ಮದ್ಯ

    ಲಾರಿ ಡಿಕ್ಕಿ – ಹೆದ್ದಾರಿಯಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದ ಏಳು ಲಕ್ಷ ಮೌಲ್ಯದ ಮದ್ಯ

    ಕಾರವಾರ: ಮದ್ಯ ಸಾಗಾಟ ಮಾಡುತ್ತಿದ್ದ ಲಾರಿಗೆ ಹಿಂದಿನಿಂದ ಬಾಕ್ಸೈಟ್ ಅದಿರು ತುಂಬಿದ್ದ ಲಾರಿ ಡಿಕ್ಕಿ ಹೊಡೆದು ಏಳು ಲಕ್ಷ ಮೌಲ್ಯದ ಗೋವಾ (Goa) ಮದ್ಯದ ಬಾಟಲಿಗಳು ರಸ್ತೆಗೆ ಬಿದ್ದು ನಾಶವಾದ ಘಟನೆ ಅಂಕೋಲ (Ankola) ತಾಲೂಕಿನ ತೊಡೂರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.

    ಗೋವಾದಿಂದ ಪಾಂಡಿಚೆರಿಗೆ (Pondicherry) ಕೊಂಡೊಯ್ಯುತಿದ್ದ ಗೋವಾ ಮದ್ಯದ ಲಾರಿಗೆ ಮಂಗಳೂರು (Mangaluru) ಕಡೆ ತೆರಳುತಿದ್ದ ಬಾಕ್ಸೈಟ್ (Bauxite) ಅದಿರು ತುಂಬಿದ ಲಾರಿ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ.

    ಘಟನೆಯಲ್ಲಿ ಅದೃಷ್ಟವಶಾತ್ ಚಾಲಕ ಸಹಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಲಿಂಗಕಾಮಿಗಳು ಅಂತಾ ಹೇಳಿಕೊಂಡ್ರೆ ಮರಣದಂಡನೆ – ಮಸೂದೆ ಪಾಸ್‌ ಮಾಡಿದ ಉಗಾಂಡ

  • ಪಟಾಕಿ ಸ್ಫೋಟಗೊಂಡು ಅಪ್ಪ, ಮಗನ ದೇಹ ಛಿದ್ರ ಛಿದ್ರ

    ಪಟಾಕಿ ಸ್ಫೋಟಗೊಂಡು ಅಪ್ಪ, ಮಗನ ದೇಹ ಛಿದ್ರ ಛಿದ್ರ

    ಪಾಂಡಿಚೆರಿ: ಅಪ್ಪ- ಮಗ ಪಟಾಕಿಗಳನ್ನು ತೆಗೆದುಕೊಂಡು ಸ್ಕೂಟರ್‍ನಲ್ಲಿ ತೆರಳುತ್ತಿದ್ದರು. ಈ ವೇಳೆ ನಡುರಸ್ತೆಯಲ್ಲಿ ಇದ್ದಕ್ಕಿದ್ದ ಹಾಗೇ ಪಟಾಕಿ ಸ್ಫೋಟಗೊಂಡು, ಅಪ್ಪ- ಮಗನ ದೇಹ ಛಿದ್ರ ಛಿದ್ರವಾಗಿ ಬಿದ್ದಿರುವ ಘಟನೆ ಪುದುಚೇರಿ-ವಿಲ್ಲುಪುರಂ ಗಡಿಯಲ್ಲಿ ಈ ಘಟನೆ ನಡೆದಿದೆ.

    ತಂದೆ ಕಲೈನೇಸನ್ ಮತ್ತು ಅವರ ಮಗ ಪ್ರದೀಪ್ (7) ಮೃತರಾಗಿದ್ದಾರೆ. ಪಟಾಕಿಗಳ ಬಾಕ್ಸ್‍ನೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಬೆಂಕಿ ಹೊತ್ತಿಕೊಂಡು ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಿನ್ನೆ ವಿಲ್ಲುಪುರಂ ಜಿಲ್ಲೆಯ ಕೊಟ್ಟಕುಪ್ಪಂ ಪೂರ್ವ ಕರಾವಳಿ ರಸ್ತೆಯಲ್ಲಿರುವ ಕೂನಿಮೇಡು ಗ್ರಾಮಕ್ಕೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇದನ್ನೂ ಓದಿ:ಪತ್ನಿಯ ಎದೆಹಾಲು ಕದ್ದು ಕುಡಿದ ಆಯುಷ್ಮಾನ್ ಖುರಾನಾ

    ವೀಡಿಯೋದಲ್ಲಿ ಏನಿದೆ?
    ಕಲೈನಾಸನ್ ಸ್ಕೂಟರ್ ಓಡಿಸುತ್ತಿದ್ದಾಗ, ಅವರ ಮಗ ಪ್ರದೀಪ್ ಮುಂಭಾಗದಲ್ಲಿ ಕುಳಿತುಕೊಂಡಿದ್ದ. ತಿರುವಿನಲ್ಲಿ ವೇಗವಾಗಿ ಬಂದ ಸ್ಕೂಟರ್ ಸ್ಫೋಟಗೊಂಡು ಬಾಲಕ ಮತ್ತು ಆತನ ತಂದೆ ಸ್ಥಳದಲ್ಲೇ ಸಾವನ್ನಪ್ಪಿರುವ ದೃಶ್ಯ ಸಿಸಿಟಿವಿ ವೀಡಿಯೋದಲ್ಲಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಸಾಧ್ಯತೆ

    ಈ ಘಟನೆಯಲ್ಲಿ ಸ್ಫೋಟಗೊಂಡ ಸ್ಕೂಟರ್ ಪಕ್ಕದಲ್ಲಿ ಬರುತ್ತಿದ್ದ ಮೂವರು ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಪುದುಚೇರಿಯ ಜವಾಹರಲಾಲ್ ಇನ್ಸ್ಟಿಟ್ಯೂಟ್ ಆಫ್ ಪೋಸ್ಟ್ ಗ್ರಾಜುಯೇಟ್ ಮೆಡಿಕಲ್ ಎಜುಕೇಶನ್ ಆ್ಯಂಡ್ ರಿಸರ್ಚ್‍ಗೆ ಕರೆದೊಯ್ಯಲಾಯಿತು. ಒಂದು ಲಾರಿ ಹಾಗೂ ಎರಡು ದ್ವಿಚಕ್ರ ವಾಹನಗಳಿಗೂ ಹಾನಿಯಾಗಿದೆ. ಘಟನೆ ನಡೆದ ಕೂಡಲೇ ವಿಲ್ಲುಪುರಂ ಜಿಲ್ಲಾ ಡಿಐಜಿ ಪಾಂಡಿಯನ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.  ಇದನ್ನೂ ಓದಿ: ಗೌಡ್ರ ಕುಟುಂಬದಲ್ಲಿ ಸಂಭ್ರಮ – ನಿಖಿಲ್, ರೇವತಿ ದಂಪತಿಗೆ ಗಂಡು ಮಗು