Tag: ಪಾಕಿಸ್ತಾನ ಪ್ರಧಾನಿ

  • ಭಾರತದ ದಾಳಿಯನ್ನು ವಿಫಲಗೊಳಿಸಿದ್ದೇವೆ: ಬುರುಡೆ ಬಿಟ್ಟ ಪಾಕ್‌ ಪ್ರಧಾನಿ

    ಭಾರತದ ದಾಳಿಯನ್ನು ವಿಫಲಗೊಳಿಸಿದ್ದೇವೆ: ಬುರುಡೆ ಬಿಟ್ಟ ಪಾಕ್‌ ಪ್ರಧಾನಿ

    – 80 ಜೆಟ್‌ಗಳಲ್ಲಿ 5 ನ್ನು ಪಾಕ್‌ ವಾಯು ಸೇನೆ ಹೊಡೆದುರುಳಿಸಿದೆ ಎಂದ ಶೆಹಬಾಜ್‌ 

    ಇಸ್ಲಾಮಾಬಾದ್: ಭಾರತದ ದಾಳಿಯನ್ನು ವಿಫಲಗೊಳಿಸಿದ್ದೇವೆ ಎಂದು ಮತ್ತೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಷರೀಫ್‌ (Shehbaz Sharif) ಬುರುಡೆ ಬಿಟ್ಟಿದ್ದಾರೆ.

    ತಡರಾತ್ರಿ ಪಾಕ್ ಮತ್ತು ಪಿಒಕೆ ಹಲವಾರು ಸ್ಥಳಗಳಲ್ಲಿ ಭಾರತ ಕ್ಷಿಪಣಿ ದಾಳಿ ನಡೆಸಿದ ನಂತರ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಬುಧವಾರ ರಾಷ್ಟ್ರೀಯ ಅಸೆಂಬ್ಲಿಯನ್ನುದ್ದೇಶಿಸಿ ಮಾತನಾಡಿದರು. ಈ ದಾಳಿ ಅಚ್ಚರಿ ಮೂಡಿಸಿತು. ಇಡೀ ದೇಶವನ್ನೇ ಬೆಚ್ಚಿಬೀಳಿಸಿತು. ಭಾರತೀಯ ವಿಮಾನಗಳು ತಮ್ಮ ದೇಶವನ್ನು ಪ್ರವೇಶಿಸಿದರೆ ಸಮುದ್ರಕ್ಕೆ ಎಸೆಯಲು ಪಾಕಿಸ್ತಾನ ವಾಯುಪಡೆ ಸಿದ್ಧವಾಗಿದೆ ಮತ್ತು ಅದಕ್ಕಾಗಿ ಕಾಯುತ್ತಿದೆ. ಪಾಕಿಸ್ತಾನವು 5 ರಫೇಲ್ ಜೆಟ್‌ಗಳು ಮತ್ತು 2 ಡ್ರೋನ್‌ಗಳನ್ನು ಹೊಡೆದುರುಳಿಸಿದೆ ಎಂದು ಹಸಿಹಸಿ ಸುಳ್ಳು ಹೇಳಿದ್ದಾರೆ. ಇದನ್ನೂ ಓದಿ: ಲಡಾಖ್‍ನಲ್ಲಿ ಪ್ರವಾಸಿಗರಿಗೆ ಉಚಿತ ವಸತಿ!

    ಪಾಕಿಸ್ತಾನ ವಾಯುಪಡೆಯು ಪ್ರತೀಕಾರ ತೀರಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು. ಈ ರಾತ್ರಿಯನ್ನು ಐತಿಹಾಸಿಕ ರಾತ್ರಿಯನ್ನಾಗಿ ಮಾಡಿತು. ದಾಳಿಯಲ್ಲಿ ಮಕ್ಕಳು, ಪುರುಷರು ಮತ್ತು ಮಹಿಳೆಯರು ಸೇರಿದಂತೆ ಅನೇಕ ಪಾಕಿಸ್ತಾನಿಗಳು ಪ್ರಾಣ ಕಳೆದುಕೊಂಡಿದ್ದಾರೆ. ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಜನರಿಗೆ ಪಾಕ್‌ ಪ್ರಧಾನಿ ಸಂತಾಪ ಸೂಚಿಸಿದ್ದಾರೆ.

    ಏ.22 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪಾಕಿಸ್ತಾನವನ್ನು ಭಾರತ ದೂಷಿಸಿದೆ. ಆದರೆ, ಬಲೂಚಿಸ್ತಾನದಲ್ಲಿ ನಡೆದ ರೈಲು ಅಪಹರಣವಾಯಿತು. ಈ ದಾಳಿಗೆ ಭಾರತವೇ ಕಾರಣ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಆಪರೇಷನ್‌ ಸಿಂಧೂರ, 4 ದಿನ ಕ್ವಾರಂಟೈನ್‌ – ಕಾರ್ಯಾಚರಣೆ ಯಶಸ್ವಿಯಾಗಿದ್ದು ಹೇಗೆ? ಇಲ್ಲಿದೆ ಇನ್‌ಸೈಡ್‌ ಸ್ಟೋರಿ

    ಪಹಲ್ಗಾಮ್ ದಾಳಿಯು ನಾನು ಟರ್ಕಿಯಲ್ಲಿದ್ದಾಗ ನಡೆದಿದೆ. ಈ ದಾಳಿಯಲ್ಲಿ ಪಾಕಿಸ್ತಾನ ಭಾಗಿಯಾಗಿಲ್ಲ. ಈ ವಿಷಯದ ಬಗ್ಗೆ ತನಿಖೆಗೆ ಆಹ್ವಾನ ನೀಡಿದ್ದೇನೆ. ತನಿಖೆಗೆ ಸಹಕರಿಸಲು ಪಾಕಿಸ್ತಾನ ಸಿದ್ಧವಾಗಿದೆ. ಆದಾಗ್ಯೂ, ಭಾರತ ಈ ಪ್ರಸ್ತಾಪವನ್ನು ತಿರಸ್ಕರಿಸಿತು ಎಂದು ಹೇಳಿಕೆ ನೀಡಿದ್ದಾರೆ.

    ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತೀಯ ವಾಯುಪಡೆಯು ಯಾವುದೇ ದಿನ ದಾಳಿ ನಡೆಸುತ್ತದೆ ಎಂಬ ಮಾಹಿತಿ ನಮಗೆ ಬರುತ್ತಿದೆ. ಪಾಕಿಸ್ತಾನ ವಾಯುಪಡೆಯು ಪ್ರತೀಕಾರ ತೀರಿಸಿಕೊಳ್ಳಲು ಸಿದ್ಧವಾಗಿದೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಬಾಲಾಕೋಟ್‌, ಬ್ರಹ್ಮೋಸ್‌ ಬಳಿಕ ʻಆಪರೇಷನ್‌ ಸಿಂಧೂರʼ – ಪಾಕ್‌ ನಂಬಿದ್ದ ʻಮೇಡ್‌ ಇನ್‌ ಚೈನಾʼ ರೆಡಾರ್‌ ಫೇಲ್‌

    ಭಾರತ ನಡೆಸುತ್ತಿರುವ ದಾಳಿಗಳ ಬಗ್ಗೆ ನಮಗೆ ಮಾಹಿತಿ ಇದೆ. ದಾಳಿಯಲ್ಲಿ ಒಟ್ಟು 80 ಯುದ್ಧ ವಿಮಾನಗಳು ಭಾಗಿಯಾಗಿದ್ದು, ದೇಶದ ಆರು ಸ್ಥಳಗಳಲ್ಲಿ ಅವು ದಾಳಿ ನಡೆಸಿವೆ. ಇದಕ್ಕೆ ಪಿಎಎಫ್ ಸಿದ್ಧವಾಗಿತ್ತು. ಭಾರತೀಯ ಯುದ್ಧ ವಿಮಾನಗಳು ಪೇಲೋಡ್ ಅನ್ನು ಬಿಡುಗಡೆ ಮಾಡಿದ ನಂತರ ಅವುಗಳ ಮೇಲೆ ದಾಳಿ ಮಾಡಿತು. ಐದು ರಫೇಲ್ ಜೆಟ್‌ಗಳನ್ನು ಹೊಡೆದುರುಳಿಸಲು ಸಾಧ್ಯವಾಯಿತು. ಒಂದು ವಿಮಾನ ಪಂಜಾಬ್‌ನ ಭಟಿಂಡಾದಲ್ಲಿ ಬಿದ್ದಿತು. ಪ್ರತಿದಾಳಿಯಲ್ಲಿ ಎರಡು ಡ್ರೋನ್‌ಗಳನ್ನು ಸಹ ಹೊಡೆದುರುಳಿಸಲಾಗಿದೆ. ಇದು ಸಾಂಪ್ರದಾಯಿಕ ಯುದ್ಧವಾಗಿತ್ತು. ಪಾಕಿಸ್ತಾನವು ಈ ಸಾಂಪ್ರದಾಯಿಕ ಯುದ್ಧದಲ್ಲಿ ಭಾರತವನ್ನು ಸೋಲಿಸಲು ಸಾಧ್ಯವಾಯಿತು. ಪಾಕಿಸ್ತಾನ ಸೇನೆಯು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಮರ್ಥವಾಗಿದೆ. ಕಠಿಣ ಸಮಯದಲ್ಲಿ ಅವರಿಗೆ ಸಹಾಯ ಮಾಡಲು ಸಾಧ್ಯವಾಗುತ್ತದೆ ಎಂದು ಜಗತ್ತಿಗೆ ಈಗ ತಿಳಿದಿದೆ ಎಂದು ಪಾಕ್‌ ಪ್ರಧಾನಿ ಬುರುಡೆ ಬಿಟ್ಟಿದ್ದಾರೆ.

  • ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಇದ್ರೆ ನೀವು ಕ್ರಿಕೆಟ್‌ ನೋಡಿ ಎಂಜಾಯ್‌ ಮಾಡ್ತಿದ್ದೀರಾ – ಪಾಕ್‌ ಪ್ರಧಾನಿಗೆ ಜನ ಕ್ಲಾಸ್‌

    ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಇದ್ರೆ ನೀವು ಕ್ರಿಕೆಟ್‌ ನೋಡಿ ಎಂಜಾಯ್‌ ಮಾಡ್ತಿದ್ದೀರಾ – ಪಾಕ್‌ ಪ್ರಧಾನಿಗೆ ಜನ ಕ್ಲಾಸ್‌

    ಇಸ್ಲಾಮಾಬಾದ್: ದೇಶದಲ್ಲಿ ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟು ತಲೆದೂರಿರುವ ಸಂದರ್ಭದಲ್ಲಿ ಪಾಕಿಸ್ತಾನ (Pakistan) ಪ್ರಧಾನಿ ಶೆಹಬಾಜ್‌ ಶರೀಫ್‌ (Shehbaz Sharif) ಅವರ ವರ್ತನೆಗೆ ಭಾರೀ ಟೀಕೆ ವ್ಯಕ್ತವಾಗಿದೆ.

    ಇಡೀ ದೇಶವೇ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದೆ. ಆಹಾರ ಪದಾರ್ಥಗಳಿಗೆ ಹಾಹಾಕಾರ ಶುರುವಾಗಿದ್ದು, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಅಲ್ಲದೇ ರಾಜಕೀಯ ಬಿಕ್ಕಟ್ಟು ಕೂಡ ಎದುರಾಗಿದೆ. ಇಂತಹ ಸನ್ನಿವೇಶದಲ್ಲಿ ಪಾಕ್‌ ಪ್ರಧಾನಿ ಕ್ರಿಕೆಟ್‌ ವೀಕ್ಷಿಸಿ ಎಂಜಾಯ್‌ ಮಾಡುತ್ತಿದ್ದಾರೆಂದು ದೇಶದ ಜನತೆ ಕಿಡಿಕಾರಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಮತ್ತೆ ಇಂಧನ ಬೆಲೆ ಏರಿಕೆ – 1 ಲೀಟರ್ ಪೆಟ್ರೋಲ್‌ಗೆ 272 ರೂ.

    ʼಪವರ್‌ ಹಿಟ್ಟಿಂಗ್‌ ಮಾಡಿದ ಮತ್ತೊಬ್ಬ ಅಫ್ರಿದಿʼ ಎಂದು ಪಾಕಿಸ್ತಾನ ಸೂಪರ್‌ ಲೀಗ್‌ಗೆ ಸಂಬಂಧಿಸಿದಂತೆ ಶಾಹೀನ್ ಅಫ್ರಿದಿಯನ್ನು ಹಾಡಿಹೊಗಳಿ ಪಾಕ್‌ ಪ್ರಧಾನಿ ಟ್ವೀಟ್‌ ಮಾಡಿದ್ದರು. ಇದಕ್ಕೆ ಭಾರೀ ಟೀಕೆ ವ್ಯಕ್ತವಾಗಿದೆ.

    ಮತ್ತೊಂದು ಟ್ವೀಟ್‌ನಲ್ಲಿ, ಪಂದ್ಯಾವಳಿಯನ್ನು ಯಶಸ್ವಿಯಾಗಿ ಆಯೋಜಿಸಿದ್ದ ಸ್ಥಳೀಯ ಸರ್ಕಾರ ಮತ್ತು ನಿರ್ವಾಹಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

    ಪಾಕ್‌ ಪ್ರಧಾನಿ ಟ್ವೀಟ್‌ಗೆ ದೇಶದ ಜನತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೊದಲು ದೇಶದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟನ್ನು ಸರಿಪಡಿಸುವ ಕಡೆ ಗಮನಕೊಡಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಕೋರ್ಟ್‌ನತ್ತ ತೆರಳಿದ ಪಾಕ್ ಮಾಜಿ ಪ್ರಧಾನಿ – ಇಮ್ರಾನ್ ಮನೆಗೆ ನುಗ್ಗಿದ ಪೊಲೀಸರು

    ಪ್ರಧಾನಿ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ, ಮಿಸ್ಟರ್ ಪ್ರಧಾನ ಮಂತ್ರಿಗಳು ಕ್ರಿಕೆಟ್ ನೋಡುವುದರಲ್ಲಿ ನಿರತರಾಗಿದ್ದಾರೆ. ಏಕೆಂದರೆ ಪಾಕಿಸ್ತಾನವು ಅತ್ಯಧಿಕ ಹಣದುಬ್ಬರ ದರವನ್ನು ದಾಖಲಿಸಿದೆ. ಇದುವರೆಗೆ IMFನೊಂದಿಗೆ ಯಾವುದೇ ಒಪ್ಪಂದ ಸಾಧ್ಯವಾಗಿಲ್ಲ. ತಾಯ್ನಾಡಿಗಾಗಿ ಕಳೆದ 11 ತಿಂಗಳಲ್ಲಿ ನಿಮ್ಮ ಉತ್ತಮ ಸೇವೆಗಳಿಗೆ ತುಂಬಾ ಧನ್ಯವಾದಗಳು ಎಂದು ಮತ್ತೊಬ್ಬರು ಕಾಲೆಳೆದಿದ್ದಾರೆ.

  • 24 ಗಂಟೆಯಲ್ಲಿ ಪಾಕ್ ನೂತನ ಪ್ರಧಾನಿಗೆ 2 ಬಾರಿ ಅಪಮಾನ- 17 ಕೆಲಸಗಾರರ ವಜಾ

    24 ಗಂಟೆಯಲ್ಲಿ ಪಾಕ್ ನೂತನ ಪ್ರಧಾನಿಗೆ 2 ಬಾರಿ ಅಪಮಾನ- 17 ಕೆಲಸಗಾರರ ವಜಾ

    ದುಬೈ: ಇತ್ತೀಚೆಗಷ್ಟೇ ಪೀಠ ಅಲಂಕರಿಸಿದ ಪಾಕಿಸ್ತಾನದ ನೂತನ ಪ್ರಧಾನಿ ಶಹಾಬಾಜ್ ಷರೀಫ್‌ಗೆ ಸೌದಿ ಅರೇಬಿಯಾದಲ್ಲಿ ಅಪಮಾನವಾಗಿದ್ದು, ಕಳೆದ 24 ಗಂಟೆಯಲ್ಲಿ 2ನೇ ಬಾರಿಗೆ ಈ ಘಟನೆ ನಡೆದಿದೆ. ಘಟನೆ ವೇಳೆ ಪ್ರಧಾನಿಗೆ ಸೂಕ್ತ ರಕ್ಷಣೆ ನೀಡದ ಹಿನ್ನೆಲೆಯಲ್ಲಿ 17 ರಕ್ಷಣಾ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ.

    Shehbaz Sharif

    ಪಾಕಿಸ್ತಾನದ ನೂತನ ಪ್ರಧಾನ ಮಂತ್ರಿ ಶಹಬಾಜ್ ಷರೀಫ್ ಇತ್ತೀಚೆಗೆ ತಮ್ಮ ತಂಡದೊಂದಿಗೆ ಸೌದಿ ಅರೇಬಿಯಾದ ಮೆದಿಯಾನಾದಲ್ಲಿರುವ ಮಸ್ಜಿದ್-ಇ-ನಬಾವಿಗೆ ತೆರಳಿದಾಗ ಅಲ್ಲಿನ ಪಾಕ್ ಮೂಲದ ಜನರು ಅವರಿಗೆ ಅವಮಾನ ಮಾಡಿದ್ದು, ಈ ವೀಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಕಳೆದ 24 ಗಂಟೆಯಲ್ಲಿ 2ನೇ ಬಾರಿಗೆ ಪಾಕ್ ಪ್ರಧಾನಿಗೆ ಅಪಮಾನ ಆಗಿದೆ. ಇದನ್ನೂ ಓದಿ; ಚೀನಾದ 6 ಅಂತಸ್ತಿನ ಕಟ್ಟಡ ಕುಸಿತ – 39 ಜನ ನಾಪತ್ತೆ

    ಶಹಾಬಾಜ್ ನಡೆದು ಬರುತ್ತಿದ್ದ ವೇಳೆ, ಜನರು ಅವರಿಗೆ `ಕಳ್ಳ- ಕಳ್ಳ’, ಪಾಕಿಸ್ತಾನಿ ವಿರೋಧಿ, ಶೆಹಾಬಾಜ್ ವಿದೇಶಿಗರ ಮಾತಿನಂತೆ ಸರ್ಕಾರ ನಡೆಸುತ್ತಿರುವ ದೇಶ ದ್ರೋಹಿ ಎಂದು ಅಲ್ಲಗಳೆದಿದ್ದಾರೆ. ಈ ವಿಚಾರವಾಗಿ ಪಾಕ್‌ನ ಈಗಿನ ಮಾಹಿತಿ ಸಚಿವಾಲಯದ ಸಚಿವರಾಗಿರುವ ಮರಿಯುಮ್ ಔರಂಗಜೇಬ್ ಮಾತನಾಡಿದ್ದು, ಹಳೆದ ಸರ್ಕಾರ ಪೂರ್ತಿ ಪಾಕಿಸ್ತಾನವನ್ನು ಹಾಳು ಮಾಡಿದೆ. ಆದರೆ ನಾವು ನಮ್ಮ ದೇಶವನ್ನು ಸರಿ ದಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಂಸತ್ತಿನಲ್ಲಿ ಅಶ್ಲೀಲ ವೀಡಿಯೋ ವೀಕ್ಷಣೆ – ಬ್ರಿಟನ್ ಶಾಸಕ ರಾಜೀನಾಮೆ

    2ನೇ ಬಾರಿಗೆ ಶಹಾಬಾಜ್ ಷರೀಫ್ ಭಾರೀ ಭದ್ರತೆಯಲ್ಲಿ ಪ್ರವೇಶಿದ್ದು, ಈ ವೇಳೆ ಸಾರ್ವಜನಿಕರನ್ನು ನಿರ್ಬಂಧಿಸಲಾಗಿತ್ತು. ಆದರೂ ಜನರು ತಾವಿದ್ದಲ್ಲಿಂದಲೇ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ನನ್ನು ಕೆಳಗಿಳಿಸಿ ಶಹಾಬಾಜ್ ಹೇಗೆ ಪ್ರಧಾನಿಯಾದರು ಎಂಬುದರ ಬಗ್ಗೆ ಬ್ಲಾಗ್‌ವೊಂದರಲ್ಲಿ ಬರೆದು ಅಪಮಾನ ಮಾಡಲಾಗಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ. ಇದನ್ನೂ ಓದಿ: ರೈಲು ನಿಲ್ದಾಣದಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್

    IMRANKHAN

    ಇದಕ್ಕೂ ಮುನ್ನ, ಷರೀಫ್ ನೇತೃತ್ವದ ನಿಯೋಗವು ಮದೀನಾದ ಮಸೀದಿ-ಎ-ನಬವಿಯನ್ನು ಪ್ರವೇಶಿಸಿದಾಗಲೂ `ಚೋರ್ ಚೋರ್’ ಎಂಬ ಘೋಷಣೆ ಕೇಳಿಬಂದಿತ್ತು. ಅದೇ ರೀತಿ ಸೌದಿ ಅರೇಬಿಯಾದಲ್ಲಿ ಅಧಿಕಾರಿಗಳು ನಿಯೋಗದ ವಿರುದ್ಧ ಘೋಷಣೆ ಕೂಗುತ್ತಿದ್ದ ಕೆಲವು ಪಾಕಿಸ್ತಾನಿ ಯಾತ್ರಿಕರನ್ನು ಮಸೀದಿಯ ಪಾವಿತ್ರ‍್ಯಕ್ಕೆ ಅಗೌರವ ತೋರಿದ ಕಾರಣ ನೀಡಿ ಬಂಧಿಸಲಾಗಿದೆ ಎಂದು ಸೌದಿ ರಾಯಭಾರಿ ಕಚೇರಿಯ ಮಾಧ್ಯಮ ನಿರ್ದೇಶಕರು ತಿಳಿಸಿದ್ದಾರೆ.

  • ಶೆಹಬಾಜ್ ಷರೀಫ್ ಪಾಕ್ ಪ್ರಧಾನಿಯಾಗುವಂತೆ ಭಾರತದ ಹಳ್ಳಿಯಲ್ಲಿ ಪ್ರಾರ್ಥನೆ

    ಶೆಹಬಾಜ್ ಷರೀಫ್ ಪಾಕ್ ಪ್ರಧಾನಿಯಾಗುವಂತೆ ಭಾರತದ ಹಳ್ಳಿಯಲ್ಲಿ ಪ್ರಾರ್ಥನೆ

    ಚಂಡೀಗಢ: ಇತ್ತೀಚಿನ ದಿನಗಳಲ್ಲಿ ಭಾರತ ಮೂಲದ ಹಲವು ವ್ಯಕ್ತಿಗಳು ಪ್ರಪಂಚದಾದ್ಯಂತ ರಾಜಕೀಯ ವ್ಯವಹಾರಗಳಲ್ಲಿ ಚುಕ್ಕಾಣಿ ಹಿಡಿದಿರುವುದನ್ನು ನಾವು ನೋಡಿದ್ದೇವೆ. ಅಮೆರಿಕ ಸಂಯುಕ್ತ ಸಂಸ್ಥಾನದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಸೇರಿದಂತೆ ಹಲವರು ಉನ್ನತ ಮಟ್ಟದ ಸ್ಥಾನವನ್ನು ಏರಿದ್ದಾರೆ. ಇದೀಗ ಭಾರತೀಯ ಮೂಲದ ವ್ಯಕ್ತಿ ಪಾಕಿಸ್ತಾನವನ್ನು ಮುನ್ನಡೆಸಲಿದ್ದಾರೆ ಎಂದು ನಿರೀಕ್ಷಿಸಲಾಗುತ್ತಿದೆ.

    ಪಾಕಿಸ್ತಾನದ ಪ್ರಧಾನಿ ಪಟ್ಟದಿಂದ ಇಮ್ರಾನ್ ಖಾನ್ ಪದಚ್ಯುತಿಗೊಂಡ ಬಳಿಕ ಶೆಹಬಾಜ್ ಷರೀಫ್ ನೂತನ ಪ್ರಧಾನಿಯಾಗಲಿದ್ದಾರೆ ಎಂದು ವರದಿಯಾಗಿದೆ. ಭಾರತದಲ್ಲೂ ಇವರೇ ಪಾಕಿಸ್ತಾನದ ಪ್ರಧಾನಿಯಾಗಬೇಕೆಂದು ಈ ಪುಟ್ಟ ಹಳ್ಳಿಯೊಂದರಲ್ಲಿ ಪ್ರಾರ್ಥನೆ ಮಾಡಲಾಗುತ್ತಿದೆ. ಮುಂದಿನ ಪ್ರಧಾನಿ ಇವರೇ ಎಂದು ಸಂಭ್ರಮಾಚರಣೆಯೂ ನಡೆಯುತ್ತಿದೆ. ಇದಕ್ಕೆ ಕಾರಣ ಶೆಹಬಾಜ್ ಷರೀಫ್ ಒಬ್ಬ ಭಾರತದೊಂದಿಗೆ ಸಂಪರ್ಕವುಳ್ಳ ವ್ಯಕ್ತಿ.

    ಭಾರತ ಹಾಗೂ ಪಾಕಿಸ್ತಾನದ ಸಂಬಂಧ ಸೌಹಾರ್ದಯುತವಾಗಿಲ್ಲದಿದ್ದರೂ ಅಮೃತಸರದ ಗಡಿ ಗ್ರಾಮ ಜಟಿ ಉಮ್ರಾದಲ್ಲಿ ಶೆಹಬಾಜ್ ಷರೀಫ್ ಮುಂದಿನ ಪ್ರಧಾನಿಯಾಗಲಿ ಎಂದು ಸ್ಥಳೀಯರು ಇಲ್ಲಿನ ಗುರುದ್ವಾರದಲ್ಲಿ ಪ್ರಾರ್ಥನೆ ನಡೆಸುತ್ತಿದ್ದಾರೆ. ಇದಕ್ಕೆ ಕಾರಣ ಈ ಪುಟ್ಟ ಗ್ರಾಮ ಷರೀಫ್ ಕುಟುಂಬದ ಪೂರ್ವಜರ ಊರು. ಇದನ್ನೂ ಓದಿ: ಚೌಕಿದಾರ್ ಚೋರ್ ಹೇ ಎಂದ ಪಾಕಿಸ್ತಾನಿ ಪ್ರತಿಭಟನಾಕಾರರು

    ತಮ್ಮ ಮಣ್ಣಿಗೆ ಸಂಬಂಧ ಪಟ್ಟವರು ಉನ್ನತ ಹುದ್ದೆಗೆ ಬಂದರೆ ಅದು ಆ ಗ್ರಾಮಕ್ಕೆ ಹೆಮ್ಮೆಯ ವಿಚಾರ. ಅವಿಭಜಿತ ಭಾರತದ ಪಂಜಾಬ್‌ನಲ್ಲಿರುವ ಈ ಗ್ರಾಮ ಹಿಂದೂ ಬಹುಸಂಖ್ಯಾತ ಗ್ರಾಮವಾಗಿತ್ತು. ಭಾರತ-ಪಾಕಿಸ್ತಾನ ವಿಭಜನೆಯ ಬಳಿಕ ಷರೀಫ್ ಕುಟುಂಬ ಪಾಕಿಸ್ತಾನಕ್ಕೆ ವಲಸೆ ಹೋಗಿದ್ದರು. ಆದರೂ ಷರೀಫ್ ಇನ್ನೂ ಈ ಗ್ರಾಮದೊಂದಿಗೆ ಸಂಪರ್ಕದಲ್ಲಿದ್ದಾರೆ.

    ವಾಸ್ತವವಾಗಿ ಷರೀಫ್ ಕುಟುಂಬ ಕಾಶ್ಮೀರ ಮೂಲದವರು. ಅವರ ತಂದೆ ಅನಂತನಾಗ್‌ನಿಂದ ಪಂಜಾಬ್‌ನ ಈ ಹಳ್ಳಿಗೆ ಬಂದಿದ್ದರು. ಅವರ ತಾಯಿ ಪುಲ್ವಾಮಾಗೆ ಸೇರಿದವರು. ವಿಭಜನೆಯ ಬಳಿಕ ಕುಟುಂಬ ಪಾಕಿಸ್ತಾನಕ್ಕೆ ತೆರಳಲು ನಿರ್ಧರಿಸಿತು. ಬಳಿಕ ಲಾಹೋರ್‌ನಲ್ಲಿ ವ್ಯಾಪಾರ ಪ್ರಾರಂಭಿಸಿದ ಷರೀಫ್ ತಂದೆ ಉನ್ನತಿ ಪಡೆದರು. ಪ್ರಸ್ತುತ ಷರೀಫ್ ಅವರ ಇತ್ತೆಫಾಕ್ ಗ್ರೂಪ್ ಪಾಕಿಸ್ತಾನದ ಅತಿದೊಡ್ಡ ಕಂಪನಿಗಳಲ್ಲಿ ಒಂದಾಗಿದೆ. ಇದನ್ನೂ ಓದಿ: ಇಂದಿನಿಂದ ಪಾಕಿಸ್ತಾನದಲ್ಲಿ ಮತ್ತೆ ಸ್ವಾತಂತ್ರ್ಯ ಹೋರಾಟ ಪ್ರಾರಂಭ: ಇಮ್ರಾನ್ ಖಾನ್

    ಶೆಹಬಾಜ್ ಷರೀಫ್ ಹಾಗೂ ಅವರ ಸಹೋದರ ನವಾಜ್ ಷರೀಫ್ ಭಾರತದ ಗ್ರಾಮದಲ್ಲಿ ಹುಟ್ಟಿರಲಿಲ್ಲ. ಇಬ್ಬರೂ ಸ್ವಾತಂತ್ರ್ಯದ ಬಳಿಕ ಲಾಹೋರ್‌ನಲ್ಲಿ ಜನಿಸಿದರು. ಆದರೆ ಷರೀಫ್ ಕುಟುಂಬ ಇಂದಿಗೂ ಈ ಹಳ್ಳಿಯೊಂದಿಗೆ ಸಂಬಂಧ ಇಟ್ಟುಕೊಂಡಿದೆ. ಹಲವು ಬಾರಿ ಷರೀಫ್ ತಮ್ಮ ಪೂರ್ವಜರ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಈ ಗ್ರಾಮದಲ್ಲಿ ಈಗಲೂ ಇರುವ ಏಕೈಕ ಮುಸಲ್ಮಾನ ಮನೆ ಎಂದರೆ ಅದು ಷರೀಫ್ ಕುಟುಂಬದ್ದು.

  • ಭಾರತವನ್ನು ಬೆಂಬಲಿಸುತ್ತಿರುವ ಪ್ರಬಲ ರಾಷ್ಟ್ರವೊಂದು ಪಾಕಿಸ್ತಾನದ ಮೇಲೆ ಕೋಪಗೊಂಡಿದೆ: ಇಮ್ರಾನ್‌ ಖಾನ್‌

    ಭಾರತವನ್ನು ಬೆಂಬಲಿಸುತ್ತಿರುವ ಪ್ರಬಲ ರಾಷ್ಟ್ರವೊಂದು ಪಾಕಿಸ್ತಾನದ ಮೇಲೆ ಕೋಪಗೊಂಡಿದೆ: ಇಮ್ರಾನ್‌ ಖಾನ್‌

    ಇಸ್ಲಾಮಾಬಾದ್: ಭಾರತವನ್ನು ಬೆಂಬಲಿಸುತ್ತಿರುವ ಬಲಿಷ್ಠ ರಾಷ್ಟ್ರವೊಂದು ಪಾಕಿಸ್ತಾನದ ವಿರುದ್ಧ ಕೋಪಗೊಂಡಿದೆ ಎಂದು ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್‌ ಖಾನ್‌ ಹೇಳಿದ್ದಾರೆ.

    ತಮ್ಮ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಯಾದ ಬಳಿಕ ಇಮ್ರಾನ್‌ ಖಾನ್‌ ಈ ಹೇಳಿಕೆ ನೀಡಿದ್ದಾರೆ. ಇಸ್ಲಾಮಾಬಾದ್ ಭದ್ರತಾ ವ್ಯವಸ್ಥೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ವತಂತ್ರ ವಿದೇಶಾಂಗ ನೀತಿಯು ದೇಶಕ್ಕೆ ನಿರ್ಣಾಯಕವಾಗಿದೆ. ಪಾಕಿಸ್ತಾನವು ತನ್ನ ಗರಿಷ್ಠ ಸಾಮರ್ಥ್ಯವನ್ನು ಮುಟ್ಟಲು ಸಾಧ್ಯವಾಗದಿರಲು ಕಾರಣ ಇತರ ಶಕ್ತಿಶಾಲಿ ರಾಷ್ಟ್ರಗಳ ಮೇಲಿನ ಅವಲಂಬನೆ ಎಂದು ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ನೀವು ಪ್ರಧಾನಿಯಾಗಿಲ್ಲದಿದ್ದಾಗ ಪಾಕಿಸ್ತಾನ ಅದ್ಭುತವಾಗಿತ್ತು: ಇಮ್ರಾನ್‌ಗೆ ಮಾಜಿ ಪತ್ನಿ ತರಾಟೆ

    ಸ್ವತಂತ್ರ ವಿದೇಶಾಂಗ ನೀತಿಯನ್ನು ಹೊಂದಿರದ ದೇಶವು ತನ್ನ ಜನತೆಯ ಹಿತಾಸಕ್ತಿಯನ್ನು ಕಾಯ್ದುಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಇಮ್ರಾನ್‌ ಖಾನ್‌ ಒತ್ತಿ ಹೇಳಿದ್ದಾರೆ.

    ವಿದೇಶಿ ನೆರವಿನ ಮೂಲಕ ಇತರ ದೇಶಗಳ ಇಚ್ಛೆಗೆ ಮಣಿಯುವುದಕ್ಕಿಂತ ರಾಷ್ಟ್ರದ ಹಿತಾಸಕ್ತಿಗಳನ್ನು ಧ್ಯೇಯವಾಗಿಟ್ಟುಕೊಂಡು ಸ್ವತಂತ್ರ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಅತ್ಯಂತ ಮುಖ್ಯ ಎಂದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಫಲಿತಾಂಶ ಏನೇ ಬರಲಿ, ಇನ್ನೂ ಬಲಿಷ್ಠವಾಗಿ ಮರಳುತ್ತೇನೆ: ಇಮ್ರಾನ್ ಖಾನ್

    ಅಮೆರಿಕವನ್ನು ಉಲ್ಲೇಖಿಸಿ ಮಾತನಾಡಿದ ಅವರು, ನಾನು ಇತ್ತೀಚಿನ ರಷ್ಯಾಗೆ ಭೇಟಿ ಕೊಟ್ಟಿದ್ದಕ್ಕೆ ಪ್ರಬಲ ದೇಶ ಅಸಮಾಧಾನವನ್ನು ವ್ಯಕ್ತಪಡಿಸಿದೆ. ಮತ್ತೊಂದೆಡೆ ಮಿತ್ರರಾಷ್ಟ್ರವಾದ ಭಾರತವು ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳಲು ಸಹಕರಿಸುತ್ತಿದೆ ಎಂದಿದ್ದಾರೆ.

    ಉಕ್ರೇನ್‌ ವಿರುದ್ಧ ಮಿಲಿಟರಿ ಕಾರ್ಯಾಚರಣೆ ಆರಂಭಿಸಿದ ನಂತರ ಫೆ.24ರಂದು ಇಮ್ರಾನ್‌ ಖಾನ್‌ ಕ್ರೆಮ್ಲಿನ್‌ಗೆ ತೆರಳಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರನ್ನು ಭೇಟಿಯಾಗಿದ್ದರು. ಇದನ್ನೂ ಓದಿ: ಯಾರೀ ಶೆಹಬಾಜ್‌ ಷರೀಫ್‌- ಇವರೇ ಪಾಕಿಸ್ತಾನದ ಮುಂದಿನ ಪ್ರಧಾನಿ?

  • ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಪಾಕ್‌ ಪ್ರಧಾನಿಗೆ 50,000 ರೂ. ದಂಡ

    ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಪಾಕ್‌ ಪ್ರಧಾನಿಗೆ 50,000 ರೂ. ದಂಡ

    ಇಸ್ಲಾಮಾಬಾದ್:‌ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ಅವರಿಗೆ ಚುನಾವಣಾ ಆಯೋಗವು 50,000 ರೂ. ದಂಡ ವಿಧಿಸಿದೆ.

    ಖೈಬರ್-ಪಖ್ತುಂಖ್ವಾದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮುನ್ನ ಸ್ವಾತ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಪಾಲ್ಗೊಂಡು ಭಾಷಣ ಮಾಡುವ ಮೂಲಕ ಪಾಕ್‌ ಪ್ರಧಾನಿ, ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಪರಿಣಾಮವಾಗಿ ಆಯೋಗ ದಂಡ ಹಾಕಿದೆ. ಇದನ್ನೂ ಓದಿ: ಭಾರತದ ವಿದೇಶಾಂಗ ನೀತಿಯನ್ನು ಹೊಗಳಿದ ಪಾಕ್ ಪ್ರಧಾನಿ

    ಸಾರ್ವಜನಿಕ ರ‍್ಯಾಲಿ ಆಯೋಜಿಸುವುದನ್ನು ಪಾಕಿಸ್ತಾನದ ಚುನಾವಣಾ ಆಯೋಗವು ನಿರ್ಬಂಧಿಸಿತ್ತು. ಆದರೆ ಪ್ರಧಾನ ಮಂತ್ರಿ, ಆಯೋಗದ ಆದೇಶವನ್ನು ಉಲ್ಲಂಘಿಸಿದ್ದರು.

    ಮಾ.31ರಂದು ಖೈಬರ್-ಪಖ್ತುಂಖ್ವಾದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಎರಡನೇ ಹಂತದ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಆಡಳಿತದಲ್ಲಿರುವ ಯಾರೂ ಸಹ ಚುನಾವಣೆ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ರ‍್ಯಾಲಿ ನಡೆಸುವಂತಿಲ್ಲ ಎಂದು ನೀತಿ ಸಂಹಿತೆಯಲ್ಲಿ ಉಲ್ಲೇಖಿಸಲಾಗಿತ್ತು. ಇದನ್ನೂ ಓದಿ: ಇಮ್ರಾನ್‍ಖಾನ್ ಕುರ್ಚಿಗೆ ಇಕ್ಕಟ್ಟು: ಮಾರ್ಚ್ 28ಕ್ಕೆ ಭವಿಷ್ಯ ನಿರ್ಧಾರ

    PAK

    ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಕಾರಣ ಇಮ್ರಾನ್‌ ಖಾನ್‌ಗೆ ಆಯೋಗ ಎರಡು ಬಾರಿ ನೋಟಿಸ್‌ ನೀಡಿದೆ. ಕೊನೆಯ ನೋಟಿಸ್‌ ಮಾ.21ರಂದು ಕಳುಹಿಸಲಾಗಿದೆ.

    ನೋಟೀಸ್ ವಿರುದ್ಧ ಪ್ರಧಾನಿ ಹಾಗೂ ಯೋಜನೆ ಮತ್ತು ಅಭಿವೃದ್ಧಿ ಸಚಿವ ಅಸಾದ್ ಉಮರ್ ಇಸ್ಲಾಮಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿದಂತೆ ಹೊಸ ಶಾಸನದ ಹೊರತಾಗಿಯೂ ನೋಟಿಸ್‌ಗಳನ್ನು ನೀಡಲಾಗಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಆದರೆ ಚುನಾವಣಾ ಆಯೋಗಕ್ಕೆ ನಿರ್ಬಂಧ ವಿಧಿಸಲು ಹೈಕೋರ್ಟ್‌ ನಿರಾಕರಿಸಿದೆ. ಇದನ್ನೂ ಓದಿ: ಹಿಜಬ್‌ ನಿಷೇಧಿಸಿ ಕರ್ನಾಟಕ ಹೈಕೋರ್ಟ್‌ ಇಸ್ಲಾಂ ಬಗ್ಗೆ ಭೀತಿ ಹುಟ್ಟುವಂತೆ ಮಾಡಿದೆ: ಇಮ್ರಾನ್‌ ಖಾನ್‌

  • ಸಂಗೀತ ಲೋಕವನ್ನು ದಶಕಗಳ ಕಾಲ ಆಳಿದ ರಾಣಿ ಲತಾ ಮಂಗೇಶ್ಕರ್‌: ಪಾಕ್‌ ಸಚಿವ

    ನವದೆಹಲಿ: ಖ್ಯಾತ ಹಿನ್ನೆಲೆ ಗಾಯಕಿ, ಭಾರತ ರತ್ನ ಪುರಸ್ಕೃತೆ ಲತಾ ಮಂಗೇಶ್ಕರ್‌ ಅವರ ನಿಧನಕ್ಕೆ ಪಾಕಿಸ್ತಾನದ ಮಾಹಿತಿ ಸಚಿವ ಫವಾದ್‌ ಚೌದರಿ ಸಂತಾಪ ಸೂಚಿಸಿದ್ದಾರೆ.

    ಸಂಗೀತ ಲೋಕದ ದಂತಕಥೆ ಇನ್ನಿಲ್ಲ. ಸಂಗೀತ ಜಗತ್ತನ್ನು ದಶಕಗಳ ಕಾಲ ಆಳಿದ ಸುಮಧುರ ಕಂಠದ ರಾಣಿ ಲತಾ ಮಂಗೇಶ್ಕರ್‌. ಅವರು ಸಂಗೀತ ಕಿರೀಟವಿಲ್ಲದ ರಾಣಿಯಾಗಿದ್ದರು. ಅವರ ಧ್ವನಿಯು ಎಲ್ಲಾ ಕಾಲಕ್ಕೂ ಜನರ ಹೃದಯವನ್ನು ಆಳುತ್ತಿರುತ್ತದೆ ಎಂದು ಟ್ವೀಟ್‌ ಮಾಡಿ ಸ್ಮರಿಸಿದ್ದಾರೆ. ಇದನ್ನೂ ಓದಿ: ರಾಜ್ಯಾದ್ಯಂತ ಎರಡು ದಿನ ಶೋಕಾಚರಣೆ

    ಫವಾದ್‌ ಚೌದರಿ ಅವರು ಉರ್ದು ಹಾಗೂ ಇಂಗ್ಲಿಷ್‌ನಲ್ಲಿ ಟ್ವೀಟ್‌ ಮಾಡಿ ಲತಾ ಮಂಗೇಶ್ಕರ್‌ ಅವರಿಗೆ ಸಂತಾಪ ಸೂಚಿಸಿದ್ದಾರೆ.

    ಲತಾ ಮಂಗೇಶ್ಕರ್‌ ಅವರು ಭಾರತದ ಗಡಿಯಾಚೆಗೂ ಅಪಾರ ಅಭಿಮಾನಿಗಳ ಬಳಗವನ್ನು ಹೊಂದಿದ್ದಾರೆ. ಪಾಕಿಸ್ತಾನ ಸರ್ಕಾರಿ ಟೆಲಿವಿಷನ್‌ ಕೂಡ ಲತಾ ಅವರ ಜೀವನ, ಸಾಧನೆ ಸುದ್ದಿಯನ್ನು ಪ್ರಸಾರ ಮಾಡಿದೆ. ಇದನ್ನೂ ಓದಿ: ಲತಾ ಮಂಗೇಶ್ಕರ್‌ಗೆ ಕಲಾವಿದ ಬಾದಲ್ ನಂಜುಂಡಸ್ವಾಮಿ ವಿಶೇಷ ನಮನ

    ಕೊರೊನಾ ಸೋಂಕು ಹಾಗೂ ಅಂಗಾಂಗ ವೈಫಲ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರು ಇಂದು ಕೊನೆಯುಸಿರೆಳೆದರು. ಮುಂಬೈನ ಕ್ಯಾಂಡಿ ಆಸ್ಪತ್ರೆಯ ತ್ರೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

  • ಇಮ್ರಾನ್ ಖಾನ್ ಡ್ರಗ್ಸ್ ತೆಗೆದುಕೊಂಡು ಕ್ರಿಕೆಟ್ ಆಡುತ್ತಿದ್ದ: ಪಾಕ್ ಮಾಜಿ ಕ್ರಿಕೆಟಿಗ

    ಇಮ್ರಾನ್ ಖಾನ್ ಡ್ರಗ್ಸ್ ತೆಗೆದುಕೊಂಡು ಕ್ರಿಕೆಟ್ ಆಡುತ್ತಿದ್ದ: ಪಾಕ್ ಮಾಜಿ ಕ್ರಿಕೆಟಿಗ

    ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ, ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಡ್ರಗ್ ತೆಗೆದುಕೊಂಡು ಕ್ರಿಕೆಟ್ ಆಡುತ್ತಿದ್ದ ಎಂದು ಪಾಕ್ ಮಾಜಿ ವೇಗದ ಬೌಲರ್ ಸರ್ಫಾರಾಜ್ ನವಾಜ್ ಆರೋಪಿಸಿದ್ದಾರೆ.

    1970-80ರ ದಶಕದಲ್ಲಿ ಪಾಕಿಸ್ತಾನ ತಂಡದಲ್ಲಿ ನವಾಜ್ ಹಾಗೂ ಇಮ್ರಾನ್ ಖಾನ್ ಅಗ್ರ ವೇಗದ ಬೌಲರ್ ಗಳಾಗಿ ಗುರುತಿಸಿಕೊಂಡಿದ್ದರು. ಇಮ್ರಾನ್ ಖಾನ್ ಕುರಿತು ನವಾಜ್ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇಮ್ರಾನ್ ಡ್ರಗ್ ಸೇವಿಸುತ್ತಿದದ್ದು ನಾನು ಮಾತ್ರ ನೋಡಿಲ್ಲ. ನಾನು ಹೇಳಿರುವುದು ಸುಳ್ಳು ಎಂದಾದರೆ ನ್ಯಾಯಾಲಯಕ್ಕೆ ನನ್ನನ್ನು ಎಳೆಯಲು ಅವರು ಸ್ವತಂತ್ರರು ಎಂದು ನವಾಜ್ ಹೇಳಿದ್ದಾರೆ.

    1987ರ ಘಟನೆ ಕುರಿತು ಮಾತನಾಡಿರುವ ಸರ್ಫಾರಾಜ್ ನವಾಜ್, ಇಂಗ್ಲೆಂಡ್ ವಿರುದ್ಧ ಪಂದ್ಯದಲ್ಲಿ ಇಮ್ರಾನ್ ಖಾನ್ ಬೌಲಿಂಗ್ ಮಾಡಲು ಸಮಸ್ಯೆ ಎದುರಿಸಿದ್ದ. ಈ ವೇಳೆ ಇಸ್ಲಾಮಾಬಾದ್‍ನ ಮನೆಗೆ ಬಂದ ಇಮ್ರಾನ್ ಗಾಂಜಾ ಸೇವಿಸಿದ್ದ ಎಂದು ಹೇಳಿದ್ದಾರೆ.

    ಇಮ್ರಾನ್ ಖಾನ್ ಕೇವಲ ಗಾಂಜಾ ಮಾತ್ರವಲ್ಲದೇ ಕೊಕೇನ್ ಕೂಡ ತೆಗದುಕೊಳ್ಳುತ್ತಿದ್ದ. 1987 ರಲ್ಲಿ ಲಂಡನ್‍ನಲ್ಲಿ ನಡೆದ ಪಂದ್ಯದಲ್ಲಿ ಆತ ಉತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿರಲಿಲ್ಲ. ಆ ವೇಳೆ ನನ್ನ ಮನೆಗೆ ಬಂದು ಅಲ್ಲಿಯೂ ಡ್ರಗ್ ಸೇವನೆ ಮಾಡಿದ್ದ. ಈ ವೇಳೆ ಮೊಹ್ಸಿನ್ ಖಾನ್, ಅಬ್ದುಲ್ ಖಾದಿರ್, ಸಲೀಮ್ ಮಲಿಕ್ ಕೂಡ ಜೊತೆಯಲ್ಲಿ ಆಗಮಿಸಿದ್ದರು ಎಂದು ನವಾಜ್ ಆರೋಪಿಸಿದ್ದಾರೆ.

    ನನ್ನ ಮಾತುಗಳು ಸುಳ್ಳು ಎನ್ನುವುದಾದರೆ, ಆತ ನನ್ನ ಮುಂದೆ ಬಂದು ಸಮರ್ಥನೆ ಮಾಡಿಕೊಳ್ಳಲಿ. ಆತ ಡ್ರಗ್ ಸೇವನೆ ಮಾಡುವುದನ್ನು ನಾನು ಒಬ್ಬನೇ ನೋಡಿಲ್ಲ, ಲಂಡನ್‍ನಲ್ಲಿ ಹಲವರು ನೋಡಿದ್ದಾರೆ ಎಂದು ನವಾಜ್ ವಿಡಿಯೋದಲ್ಲಿ ಹೇಳಿದ್ದಾರೆ.

    ಇಮ್ರಾನ್ ಖಾನ್ 1990ರ ದಶಕದಲ್ಲಿ ವಿಶ್ವ ಕ್ರಿಕೆಟ್‍ನಲ್ಲಿ ಬೆಸ್ಟ್ ಆಲ್‍ರೌಂಡರ್ ಎಂದು ಖ್ಯಾತಿ ಪಡೆದಿದ್ದರು. 1992 ರಲ್ಲಿ ಪಾಕ್ ತಂಡವನ್ನು ಮುನ್ನಡೆಸಿದ್ದ ಇಮ್ರಾನ್ ಖಾನ್ ಪಾಕ್‍ಗೆ ವಿಶ್ವಕಪ್ ತಂದುಕೊಟ್ಟಿದ್ದರು. ಕ್ರಿಕೆಟ್‍ನಿಂದ ಇಮ್ರಾನ್ ಖಾನ್ ನಿವೃತ್ತಿ ಹೊಂದಿದ 28 ವರ್ಷಗಳ ಬಳಿಕ ಅವರ ವಿರುದ್ಧ ಸರ್ಫರಾಜ್ ನವಾಜ್ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

    ಪಾಕಿಸ್ತಾನದ ಪ್ರಧಾನಿ ವಿರುದ್ಧ ನವಾಜ್ ಮಾತ್ರವಲ್ಲದೇ, ಇಮ್ರಾನ್ ಖಾನ್ ಮಾಜಿ ಪತ್ನಿ ರೆಹಮ್ ಖಾನ್ ಕೂಡ ಇಂತಹದ್ದೇ ಆರೋಪಗಳನ್ನು ಮಾಡಿದ್ದರು. ಇಮ್ರಾನ್ ಖಾನ್ ಹಲವು ಮಹಿಳೆಯರೊಂದಿಗೆ ಸಂಪರ್ಕ ಹೊಂದಿದ್ದರು. ಅಲ್ಲದೇ ಮಾದಕ ದ್ರವ್ಯ ಸೇವಿಸುತ್ತಿದ್ದ ಎಂದು ಆರೋಪಿಸಿದ್ದರು. ವಿವಾಹಿತ ಸಂಬಂಧದಲ್ಲಿದ್ದ ವೇಳೆ ಆತ ನನ್ನ ಮೇಲೆ ದೈಹಿಕವಾಗಿ ಹಲ್ಲೆ ಕೂಡ ಮಾಡಿದ್ದ. ಮದುವೆಯಾದ ಪುರುಷನೊಬ್ಬನೊಂದಿಗೂ ಆತ ಸಂಬಂಧ ಹೊಂದಿದ್ದ ಎಂದು ತಮ್ಮ ಪುಸ್ತಕದಲ್ಲಿ ಆರೋಪಿಸಿದ್ದರು.