Tag: ಪಾಕಿಸ್ಥಾನ

  • ಹೈದರಾಬಾದ್ ಬಿರಿಯಾನಿಯಿಂದಾಗಿ ಸ್ವಲ್ಪ ಸ್ಲೋ – ಅಭ್ಯಾಸ ಪಂದ್ಯದ ಸೋಲಿಗೆ ಪಾಕ್ ಆಟಗಾರನ ಪ್ರತಿಕ್ರಿಯೆ

    ಹೈದರಾಬಾದ್ ಬಿರಿಯಾನಿಯಿಂದಾಗಿ ಸ್ವಲ್ಪ ಸ್ಲೋ – ಅಭ್ಯಾಸ ಪಂದ್ಯದ ಸೋಲಿಗೆ ಪಾಕ್ ಆಟಗಾರನ ಪ್ರತಿಕ್ರಿಯೆ

    ಹೈದರಾಬಾದ್: ವಿಶ್ವಕಪ್  (ODI World Cup) ಆರಂಭಕ್ಕೂ ಮುನ್ನ ನಡೆದಿರುವ ಎರಡೂ ಅಭ್ಯಾಸ ಪಂದ್ಯಗಳಲ್ಲಿ ಪಾಕಿಸ್ತಾನ (Pakistan) ಸೋಲು ಕಂಡಿದೆ. ಈ ಬಗ್ಗೆ ಪಾಕ್ ತಂಡದ ಉಪನಾಯಕ ಶಾದಾಬ್ ಖಾನ್ (Shadab Khan), ನಾವು ಪ್ರತಿದಿನ ಹೈದರಾಬಾದ್ ಬಿರಿಯಾನಿ ತಿನ್ನುತ್ತಿದ್ದೇವೆ. ಅದಕ್ಕೆ ಸ್ಲೋ ಆಗಿದ್ದೇವೆ ಎಂದು ತಮಾಷೆಯಾಗಿ ಪ್ರತಿಕ್ರಿಯೆ ನೀಡಿದ್ದಾರೆ.

    ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದ ಬಳಿಕ ಖಾನ್ ಮಾತನಾಡಿದ್ದಾರೆ. ನಾವು ಭಾರತಕ್ಕೆ ಏಳು ವರ್ಷಗಳ ಬಳಿಕ ಬಂದಿದ್ದೇವೆ. ನಮ್ಮ ತಂಡ ಹೈದರಾಬಾದ್‍ಗೆ ಆಗಮಿಸಿ ಒಂದು ವಾರ ಕಳೆದಿದೆ. ಇಲ್ಲಿ ಬಂದ ಮೇಲೆ ಇಲ್ಲಿನ ಬಿರಿಯಾನಿಯನ್ನು ಯಾಕೆ ರುಚಿ ನೋಡಬಾರದು ಎಂದು ಪ್ರತಿದಿನ ಬಿರಿಯಾನಿ ತಿನ್ನುತ್ತಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಸೋಶಿಯಲ್‌ ಮೀಡಿಯಾದಲ್ಲಿ ಧೂಳೆಬ್ಬಿಸಿದ ಮಹಿ ನ್ಯೂ ಲುಕ್‌; ಯಾರಿದು ಹೀರೋ ಅಂತಿದ್ದಾರೆ ಫ್ಯಾನ್ಸ್‌

    ಮಂಗಳವಾರ ಹೈದರಾಬಾದ್‍ನ ಉಪ್ಪಲ್ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನ 15 ರನ್‍ಗಳಿಂದ ಸೋಲು ಕಂಡಿದೆ. ಇದಕ್ಕೂ ಮುನ್ನ ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ಸೋತಿತ್ತು. ಇದೇ ವಿಚಾರದ ಬಗ್ಗೆ ಪ್ರತಿಕ್ರಿಸಿರುವ ಶಾಬಾದ್ ಖಾನ್, ಹೈದರಾಬಾದಿ ಬಿರಿಯಾನಿಯಿಂದಾಗಿ ಸ್ವಲ್ಪ ಸ್ಲೋ ಆಗಿದ್ದೇವೆ ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.

    ಎರಡೂ ಅಭ್ಯಾಸ ಪಂದ್ಯಗಳನ್ನು ಸೋತಿರುವ ಪಾಕಿಸ್ತಾನ ವಿಶ್ವಕಪ್‍ನಲ್ಲಿ ಶುಭಾರಂಭ ಮಾಡಲು ಕಾಯುತ್ತಿದೆ. ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಎರಡೂ ಪಂದ್ಯಗಳಲ್ಲಿ ಪಾಕಿಸ್ತಾನ 300ಕ್ಕೂ ಅಧಿಕ ರನ್ ಗಳಿಸಿತ್ತು. ಆಸ್ಟ್ರೇಲಿಯಾ ವಿರುದ್ಧದ 352 ರನ್‍ಗಳ ಗುರಿ ಬೆನ್ನಟ್ಟಿದಾಗ ಅಂತಿಮವಾಗಿ 337 ರನ್‍ಗಳಿಗೆ ಆಲೌಟ್ ಆಗಿತ್ತು.

    ಐಸಿಸಿ ಏಕದಿನ ವಿಶ್ವಕಪ್‍ಗೆ ಕ್ಷಣಗಣನೆ ಆರಂಭವಾಗಿದೆ. ಟೂರ್ನಿಯಲ್ಲಿ 10 ತಂಡಗಳು ಪೈಪೋಟಿ ನಡೆಸಲು ಎಲ್ಲಾ ರೀತಿಯಲ್ಲಿ ಸಜ್ಜಾಗಿವೆ. ಗುರುವಾರ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಅಕ್ಟೋಬರ್ 6 ರಂದು ಪಾಕಿಸ್ತಾನ ತಂಡ ನೆದರ್‌ಲ್ಯಾಂಡ್ಸ್ ವಿರುದ್ಧ ಹೈದರಾಬಾದ್‍ನ ಉಪ್ಪಲ್ ಸ್ಟೇಡಿಯಂನಲ್ಲೇ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಇದನ್ನೂ ಓದಿ: Asian Games 2023: ಚೊಚ್ಚಲ ಅಂತಾರಾಷ್ಟ್ರೀಯ T20 ಶತಕ ಸಿಡಿಸಿ ಗಿಲ್‌ ದಾಖಲೆ ಮುರಿದ ಯಶಸ್ವಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾನು ಸುಸ್ತಾಗಿದ್ದೇನೆ, ಗಾಯಗೊಂಡಿಲ್ಲ: ನಸೀಮ್ ಶಾ

    ನಾನು ಸುಸ್ತಾಗಿದ್ದೇನೆ, ಗಾಯಗೊಂಡಿಲ್ಲ: ನಸೀಮ್ ಶಾ

    ಇಸ್ಲಾಮಬಾದ್: ಕಳೆದ ಕೆಲವು ದಿನಗಳಿಂದ ಪಾಕಿಸ್ತಾನದ (Pakistan) ವೇಗಿ ನಸೀಮ್ ಶಾ (Naseem Shah) ಅವರ ವಿಚಾರವಾಗಿ ಹರಿದಾಡಿದ್ದ ಆತಂಕದ ವರದಿಗಳಿಗೆ ಅವರು ಸ್ಪಷ್ಟನೆ ನೀಡಿದ್ದಾರೆ. ಅವರು ಪಂದ್ಯದ ವೇಳೆ ಗಾಯಗೊಂಡಿದ್ದು ವಿಶ್ರಾಂತಿಯಲ್ಲಿದ್ದಾರೆ ಎಂಬ ವಿಚಾರ ಎಲ್ಲೆಡೆ ಹರಿದಾಡಿತ್ತು. ಅದಕ್ಕೆ ನಾನು ಸುಸ್ತಾಗಿದ್ದೇನೆ, ಗಾಯಗೊಂಡಿಲ್ಲ ಎಂದು ಕ್ರಿಕೆಟ್ ಅಭಿಮಾನಿಗಳ ಆತಂಕಕ್ಕೆ ತೆರೆ ಎಳೆದಿದ್ದಾರೆ.

    ಇತ್ತೀಚಿನ ಲಂಕಾ ಪ್ರೀಮಿಯರ್ ಲೀಗ್‍ನಲ್ಲಿ ನಸೀಮ್ ಅನುಪಸ್ಥಿತಿಯ ನಂತರ ಊಹಾಪೋಹಗಳಿಗೆ ತೀವ್ರವಾಗಿ ಹರಿದಾಡಿದ್ದವು. ಇದು ವಿಶ್ವಕಪ್ (ODI World Cup) ಹೊತ್ತಿನಲ್ಲಿ ಕ್ರಿಕೆಟ್ ಅಭಿಮಾನಿಗಳ ಚಿಂತೆಯನ್ನು ಹೆಚ್ಚಿಸಿತ್ತು. ಭರವಸೆಯ ಯುವ ಬೌಲರ್ ನಿರ್ಗಮಿಸುವ ಮೊದಲು ನಡೆಯುತ್ತಿರುವ ಲಂಕಾ ಪ್ರೀಮಿಯರ್ ಲೀಗ್‍ನಲ್ಲಿ ಕೊಲಂಬೊ ಸ್ಟ್ರೈಕರ್‌ಗಳನ್ನು ಪ್ರತಿನಿಧಿಸುತ್ತಿದ್ದರು. ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15 ವರ್ಷ ಪೂರೈಸಿದ ವಿರಾಟ್‌ – ಕಿಂಗ್‌ ಆದ ಕೊಹ್ಲಿಯ ರೋಚಕ ಜರ್ನಿ

    ಸ್ಟ್ರೈಕರ್ಸ್ ಪರ ಆಡಿರುವ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಅವರು ವಿಶ್ರಾಂತಿ ತೆಗೆದುಕೊಳ್ಳುವಂತೆ ಸಲಹೆ ನೀಡಿದರು. ಮುಂಬರುವ ಅಂತಾರಾಷ್ಟ್ರೀಯ ಪಂದ್ಯಗಳ ಗುರಿಯಾಗಿಸಿ ವಿಶ್ರಾಂತಿ ಪಡೆಯುವ ಪ್ರಾಮುಖ್ಯತೆಯನ್ನು ಬಾಬರ್ ಒತ್ತಿ ಹೇಳಿದರು. ನಾನು ಬ್ಯಾಕ್-ಟು-ಬ್ಯಾಕ್ ಪಂದ್ಯಗಳನ್ನು ಆಡುತ್ತಿದ್ದೆ ಮತ್ತು ವಿಶ್ರಾಂತಿ ಪಡೆಯಲು ಸಮಯವಿರಲಿಲ್ಲ. ಈಗ ವಿಶ್ರಾಂತಿಯಲ್ಲಿದ್ದೇನೆ ಎಂದಿದ್ದಾರೆ.

    ನಸೀಮ್ ಏಳು ಪಂದ್ಯಗಳಲ್ಲಿ 10 ವಿಕೆಟ್‍ಗಳನ್ನು ಪಡೆಯುವ ಮೂಲಕ ಉತ್ತಮ ಬೌಲರ್ ಎಂಬ ಖ್ಯಾತಿಗಳಿಸಿದ್ದಾರೆ. ಶಾ ಎಲ್‍ಪಿಎಲ್ ವೇದಿಕೆಯಲ್ಲಿ ಪ್ರಮುಖ ಸಾಗರೋತ್ತರ ಆಟಗಾರರಲ್ಲಿ ಒಬ್ಬರಾಗಿ ತಮ್ಮ ಛಾಪು ಮೂಡಿಸಿದ್ದಾರೆ. ಗಾಲೆ ಟೈಟಾನ್ಸ್ ಪರ ಆಡುತ್ತಿರುವ ದಕ್ಷಿಣ ಆಫ್ರಿಕಾದ ತಬ್ರೈಜ್ ಶಮ್ಸಿ ನಂತರದ (8 ಪಂದ್ಯಗಳಲ್ಲಿ 12 ವಿಕೆಟ್) ಸ್ಥಾನದಲ್ಲಿ ನಸೀಮ್ ಇದ್ದಾರೆ.

    ಏಷ್ಯಾಕಪ್‍ನಲ್ಲಿ (Asia Cup) ಪಾಕಿಸ್ತಾನ ಸೆ.2 ರಂದು ಸಾಂಪ್ರದಾಯಿಕ ಎದುರಾಳಿಯಾದ ಭಾರತದ (Team India) ವಿರುದ್ಧ ಆಡಲಿದೆ. ಅಲ್ಲದೇ ಅಕ್ಟೋಬರ್ 14 ರಂದು ಅಹಮದಾಬಾದ್‍ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‍ನಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿವೆ. ಇದನ್ನೂ ಓದಿ: ಇಂದಿನಿಂದ IND vs IRE ಟಿ20 ಸರಣಿ ಆರಂಭ – 11 ತಿಂಗಳ ಬಳಿಕ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ ಬುಮ್ರಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಾಕ್ ವಿಶ್ವಕಪ್ ಆಡಲಿರುವ ಸ್ಥಳಗಳಿಗೆ ನಿಯೋಗ ಕಳುಹಿಸಿ ಪರಿಶೀಲನೆಗೆ ಮುಂದಾದ PCB

    ಪಾಕ್ ವಿಶ್ವಕಪ್ ಆಡಲಿರುವ ಸ್ಥಳಗಳಿಗೆ ನಿಯೋಗ ಕಳುಹಿಸಿ ಪರಿಶೀಲನೆಗೆ ಮುಂದಾದ PCB

    ಇಸ್ಲಾಮಾಬಾದ್: ಐಸಿಸಿ ಏಕದಿನ ವಿಶ್ವಕಪ್ (World Cup) ಪಂದ್ಯಕ್ಕಾಗಿ ಭಾರತಕ್ಕೆ ಪ್ರಯಾಣಿಸಲಿರುವ ಪಾಕ್‍ಗೆ (Pakistan) ಅನುಮತಿ ನೀಡುವ ಮೊದಲು ಪಂದ್ಯ ನಡೆಯುವ ಪ್ರದೇಶಗಳನ್ನು ಪರಿಶೀಲಿಸಲು ಭದ್ರತಾ ನಿಯೋಗವನ್ನು ಕಳುಹಿಸಲು ಪಾಕಿಸ್ತಾನ ತಿರ್ಮಾನಿಸಿದೆ.

    ಈದ್ ರಜೆಯ ಮುಗಿದ ಬಳಿಕ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (PCB) ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ. ನಂತರ ಭದ್ರತಾ ನಿಯೋಗವನ್ನು ಭಾರತಕ್ಕೆ ಯಾವಾಗ ಕಳುಹಿಸಬೇಕು ಎಂಬುದರ ಬಗ್ಗೆ ಸರ್ಕಾರ ನಿರ್ಧರಿಸಲಿದೆ ಎಂದು ಕ್ರೀಡಾ ಸಚಿವಾಲಯದ ಅಧಿಕೃತ ಮೂಲಗಳು ತಿಳಿಸಿವೆ. ಇದನ್ನೂ ಓದಿ: Lausanne Diamond League: ಚಿನ್ನಕ್ಕೆ ಮುತ್ತಿಟ್ಟ ನೀರಜ್‌ ಚೋಪ್ರಾ

    ಭಾರತ (Team India), ಪಾಕಿಸ್ತಾನ ನಡುವಿನ ಪಂದ್ಯ ನಡೆಯಲಿರುವ ಸ್ಥಳವಾದ ಚೆನ್ನೈ, ಬೆಂಗಳೂರು, ಹೈದರಾಬಾದ್, ಕೋಲ್ಕತ್ತಾ ಮತ್ತು ಅಹಮದಾಬಾದ್‍ಗೆ ನಿಯೋಗ ಭೇಟಿ ನೀಡಲಿದೆ. ಭಾರತಕ್ಕೆ ಪ್ರವಾಸ ಮಾಡುವ ಮುನ್ನ ಸಾಮಾನ್ಯವಾಗಿ ನಿಯೋಗವನ್ನು ಕಳುಹಿಸಲು ಸರ್ಕಾರದಿಂದ ಅನುಮತಿ ಪಡೆಯುವುದು ಕ್ರಿಕೆಟ್ ಮಂಡಳಿಯ ಕರ್ತವ್ಯವಾಗಿದೆ ಎಂದು ಪಾಕ್‍ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ನಿಯೋಗವು ಭಾರತದಲ್ಲಿನ ಅಧಿಕಾರಿಗಳೊಂದಿಗೆ ಸಂವಾದ ನಡೆಸಲಿದೆ. ಪಂದ್ಯಾವಳಿಗೆ ತೆರಳುವ ನಮ್ಮ ಆಟಗಾರರು, ಅಧಿಕಾರಿಗಳು, ಅಭಿಮಾನಿಗಳು ಮತ್ತು ಮಾಧ್ಯಮದ ಭದ್ರತೆ ಮತ್ತು ಇತರ ವ್ಯವಸ್ಥೆಗಳ ಬಗ್ಗೆ ಅವರೊಂದಿಗೆ ಚರ್ಚಿಸಲಿದೆ. ಇದರೊಂದಿಗೆ ಆಟಗಾರರು ಉಳಿಯುವ ಸ್ಥಳ ಹಾಗೂ ಕ್ರೀಡಾಂಗಣವನ್ನು ನಿಯೋಗ ಪರಿಶೀಲಿಸಲಿದೆ ಎಂದು ಪಾಕ್ ಅಧಿಕಾರಿಗಳು ತಿಳಿಸಿದ್ದಾರೆ.

    ಈಗಾಗಲೇ ಗೊತ್ತುಪಡಿಸಿದ ಸ್ಥಳದ ಬದಲಿಗೆ ಬೇರೆ ಯಾವುದಾದರೂ ಸ್ಥಳದಲ್ಲಿ ಆಡುವುದು ಸೂಕ್ತ ಎನಿಸಿದರೆ ನಿಯೋಗ ತನ್ನ ವರದಿಯಲ್ಲಿ ಉಲ್ಲೇಖಿಸಲಿದೆ. ನಿಯೋಗವು ಯಾವುದಾದರೂ ಸಮಸ್ಯೆಗಳನ್ನು ಗುರುತಿಸಿದರೆ ಪಿಸಿಬಿ, ಐಸಿಸಿ ಮತ್ತು ಬಿಸಿಸಿಐಯೊಂದಿಗೆ ವರದಿಯನ್ನು ಹಂಚಿಕೊಳ್ಳಲಿದೆ.

    ಈ ಹಿಂದೆ ಪಾಕಿಸ್ತಾನವು ಟಿ20 ವಿಶ್ವಕಪ್‍ಗಾಗಿ ಭಾರತಕ್ಕೆ ತೆರಳಿದಾಗ ಪಾಕ್ ಸರ್ಕಾರವು ನಿಯೋಗವನ್ನು ತಪಾಸಣೆಗೆ ಕಳುಹಿಸಿತ್ತು. ಈ ವೇಳೆ ನಿಯೋಗದ ಶಿಫಾರಸಿನ ಮೇರೆಗೆ ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಭಾರತ ವಿರುದ್ಧದ ಪಂದ್ಯವನ್ನು ಕೋಲ್ಕತ್ತಾಗೆ ಸ್ಥಳಾಂತರಿಸಲಾಗಿತ್ತು.

    ಈ ಬಾರಿಯ ವಿಶ್ವಕಪ್ ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಭಾರತದ 10 ನಗರಗಳಲ್ಲಿ ನಡೆಯಲಿದೆ. ಇದನ್ನೂ ಓದಿ: Byju’sಗೆ ಗುಡ್‌ಬೈ – Dream11 ತೆಕ್ಕೆಗೆ ಟೀಂ ಇಂಡಿಯಾ ಜೆರ್ಸಿ ಪ್ರಾಯೋಜಕತ್ವ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಾಕ್ ಕುತಂತ್ರಕ್ಕೆ ಭಾರತದಲ್ಲಿ ‘ಯುದ್ಧವೂ ಇಲ್ಲ, ಶಾಂತಿಯೂ ಇಲ್ಲ’: ಬಿಪಿನ್ ರಾವತ್

    ಪಾಕ್ ಕುತಂತ್ರಕ್ಕೆ ಭಾರತದಲ್ಲಿ ‘ಯುದ್ಧವೂ ಇಲ್ಲ, ಶಾಂತಿಯೂ ಇಲ್ಲ’: ಬಿಪಿನ್ ರಾವತ್

    ನವದೆಹಲಿ: ಉಗ್ರರನ್ನು ಮುಂದಿಟ್ಟುಕೊಂಡು ಪಾಕಿಸ್ತಾನ ಭಾರತದ ಮೇಲೆ ದಾಳಿ ನಡೆಸುತ್ತಿದೆ. ಈ ಬಗ್ಗೆ ಗೊತ್ತಿದ್ದರೂ ನಾವು ಯುದ್ಧ ಮಾಡಲು ಆಗುತ್ತಿಲ್ಲ. ಇದರಿಂದ ಭಾರತದಲ್ಲಿ ಶಾಂತಿಯೂ ಇಲ್ಲ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.

    ಇಂದು ರಕ್ಷಣಾ ಸಂವಹನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಕಿಸ್ತಾನದ ಕುತಂತ್ರದ ಬಗ್ಗೆ ತಿಳಿದಿದ್ದರೂ ಕ್ರಮ ತೆಗದುಕೊಳ್ಳಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಪಾಕಿಸ್ತಾನ ಉಗ್ರರನ್ನು ಮುಂದೆ ಬಿಟ್ಟು ನಡೆಸುತ್ತಿರುವ ದಾಳಿಯಲ್ಲಿ ಹೋರಾಡುವುದರಲ್ಲಿಯೇ ಭಾರತ ನಿರತವಾಗಿದೆ. ಯುದ್ಧವೂ ಇಲ್ಲ, ಶಾಂತಿಯೂ ಇಲ್ಲದಂತಹ ಸ್ಥಿತಿಯಲ್ಲಿ ನಾವಿದ್ದೇವೆ ಎಂದು ತಿಳಿಸಿದರು.

    ಆಧುನಿಕ ಯುದ್ಧ ಭೂಮಿಯಲ್ಲಿ ಜಯಗಳಿಸುವುದು ತಡೆರಹಿತ ಸಂವಹನದ ಮೇಲೆ ನಿಂತಿದೆ. ನಮ್ಮ ರಕ್ಷಣಾ ಸಂವಹನ ಸೇನೆ, ನೌಕಾಪಡೆ, ವಾಯುಪಡೆ ಮೂರು ಪಡೆಗಳನ್ನು ಒಂದು ಮಾಡಿದೆ. ಆದರೆ ಇಂದು ಭಾರತೀಯ ಸೇನೆ ರಾಜಿ ಮಾಡಿಕೊಳ್ಳಬೇಕಾದ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಸೇನೆಯ ಗೌಪ್ಯತೆಯನ್ನು ಕಾಪಾಡಿಕೊಳ್ಳುವ ಸಂವಹನ ವ್ಯವಸ್ಥೆಯನ್ನು ಅಭಿವೃದ್ಧಿಗೊಳಿಸಬೇಕಾದ ಅವಶ್ಯಕತೆಯಿದೆ ಎಂದರು.

    ಭದ್ರತಾ ಪಡೆ ವ್ಯವಸ್ಥೆಯಲ್ಲಿ ಗೌಪ್ಯತೆ ಮುಖ್ಯವಾಗಿರುತ್ತದೆ. ನಾವು ಅದರಲ್ಲಿ ರಾಜಿ ಮಾಡಿಕೊಂಡರೆ ಯಾವ ಯೋಜನೆಯೂ ಯಶಸ್ವಿ ಆಗುವುದಿಲ್ಲ. ಆದ್ದರಿಂದ ಸ್ಥಳೀಯ ವ್ಯವಸ್ಥೆಗಳನ್ನು ಅಭಿವೃದ್ಧಿಗೊಳಿಸುವುದು ಮುಖ್ಯವಾಗಿದೆ. ಆದರೆ ನಾವು ಇಂದು ಎಲ್ಲದರಲ್ಲೂ ರಾಜಿ ಮಾಡಿಕೊಳ್ಳುತ್ತಿದ್ದೇವೆ ಎಂದು ಅಸಮಾಧಾನವನ್ನು ಹೊರಹಾಕಿದರು.

    ಸೇನೆ, ನೌಕಾಪಡೆ ಮತ್ತೆ ವಾಯು ಪಡೆಗಳ ಸಂಪರ್ಕವನ್ನು ಸಂಯೋಜಿಸಲಾಗುವುದು, ಸಮಸ್ಯೆಯ ಪರಸ್ಪರ ಕಾರ್ಯಸಾಧ್ಯತೆಯನ್ನು ತಿಳಿಸಲಾಗುವುದು. ಜಂಟಿ ಕಾರ್ಯಾಚರಣೆಗಾಗಿ ಯೋಜನೆ, ಗುಪ್ತಚರ, ವ್ಯವಸ್ಥೆ ಮತ್ತು ಸಂವಹನ ಅಗತ್ಯ. ಹೀಗಾಗಿ ಮುಂದಿನ ವರ್ಷ ಹೊಸ ರಕ್ಷಣಾ ಖರೀದಿ ನೀತಿಯನ್ನು ನಿರೀಕ್ಷಿಸಲಾಗಿದೆ ಎಂದು ಜನರಲ್ ರಾವತ್ ಹೇಳಿದರು.

  • ಕರ್ತಾರ್ ಪುರ ಕಾರಿಡಾರ್ ಒಪ್ಪಂದಕ್ಕೆ ಸಹಿ ಹಾಕಿದ ಭಾರತ- ಪಾಕಿಸ್ತಾನ

    ಕರ್ತಾರ್ ಪುರ ಕಾರಿಡಾರ್ ಒಪ್ಪಂದಕ್ಕೆ ಸಹಿ ಹಾಕಿದ ಭಾರತ- ಪಾಕಿಸ್ತಾನ

    ಗುರ್ದಾಸ್‍ಪುರ: ಭಾರತ ಹಾಗೂ ಪಾಕಿಸ್ತಾನ ಉಭಯ ದೇಶಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಇದೆ. ಈ ನಡುವೆಯೂ ಕರ್ತಾರ್ ಪುರ ಕಾರಿಡಾರ್ ನ ಕಾರ್ಯಾಚರಣೆಯ ವಿಧಾನಗಳ ಕುರಿತಾದ ಒಪ್ಪಂದಕ್ಕೆ ಭಾರತ ಹಾಗೂ ಪಾಕಿಸ್ತಾನ ಇಂದು ಸಹಿ ಹಾಕಿದೆ.

    ಭಾರತದ ಪರವಾಗಿ ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಎಸ್.ಸಿ.ಎಲ್ ದಾಸ್ ಒಪ್ಪಂದಕ್ಕೆ ಸಹಿ ಹಾಕಿದರೆ. ಅತ್ತ ಪಾಕಿಸ್ತಾನ ವಿದೇಶಾಂಗ ಕಚೇರಿ ವಕ್ತಾರ ಮೊಹಮ್ಮದ್ ಫೈಸಲ್ ಅವರು ಪಾಕಿಸ್ತಾನದ ಕಡೆಯಿಂದ ಒಪ್ಪಂದಕ್ಕೆ ಸಹಿ ಹಾಕಿದರು. ಈ ಒಪ್ಪಂದಕ್ಕೆ ಸಹಿ ಹಾಕುವುದರೊಂದಿಗೆ, ಭಾರತೀಯ ಯಾತ್ರಿಕರು ಹಾಗೂ ವ್ಯಕ್ತಿಗಳಿಗೆ ಕಾರಿಡಾರ್ ಬಳಕೆ ಮಾಡುವ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ಈ ಮೂಲಕ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನರೋವಾಲ್ ಜಿಲ್ಲೆಯಲ್ಲಿರುವ ಅಂತರರಾಷ್ಟ್ರೀಯ ಗಡಿಯಿಂದ ಕೇವಲ ನಾಲ್ಕು ಕಿ.ಮೀ ದೂರದಲ್ಲಿರುವ ಕರ್ತಾರ್ ಪುರದ ದರ್ಬಾರ್ ಸಾಹಿಬ್ ಹಾಗೂ ಪಂಜಾಬ್‍ನ ಡೇರಾ ಬಾಬಾ ನಾನಕ್ ದೇಗುಲ ಯಾತ್ರೆ ವೀಸಾ ಮುಕ್ತವಾಗಿರಲಿದೆ.

    2018ರ ನವೆಂಬರ್ 22ರಂದು ಸಂಪುಟ ಸಭೆಯಲ್ಲಿ ಗುರು ನಾನಕ್ ದೇವ್ ಅವರ 550ನೇ ಜಯಂತೋತ್ಸವವನ್ನು ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿತ್ತು. ಅಲ್ಲದೆ ಭಾರತೀಯ ಯಾತ್ರಿಕರಿಗೆ ಕರ್ತಾರ್ ಪುರದ ಗುರುದ್ವಾರ ದರ್ಬಾರ್ ಸಾಹಿಬ್‍ಗೆ ಭೇಟಿ ನೀಡಲು ಅನುಕೂಲವಾಗುವಂತೆ ದೇರಾ ಬಾಬಾ ನಾನಕ್ ದೇಗುಲದಿಂದ ಅಂತಾರಾಷ್ಟ್ರೀಯ ಗಡಿಯಲ್ಲಿ ಕರ್ತಾರ್ ಪುರ ಸಾಹಿಬ್ ಕಾರಿಡಾರ್ ನಿರ್ಮಿಸಲು ನಿರ್ಧರಿಸಲಾಗಿತ್ತು.

    ಆದರೆ, ಪಾಕಿಸ್ತಾನ ಪ್ರತಿ ಯಾತ್ರಿಕರಿಗೆ 20 ಡಾಲರ್ ಸೇವಾ ಶುಲ್ಕ ಹಾಕುವುದಾಗಿ ಹೇಳಿದ್ದು, ಪಾಕಿನ ಕ್ರಮಕ್ಕೆ ಭಾರತ ತೀವ್ರ ಅಸಮಾಧಾನ ಹೊರಹಾಕಿದೆ. ಪಾಕಿಸ್ತಾನ ಸೇವಾ ಶುಲ್ಕದ ಪ್ರಸ್ತಾವನೆಯನ್ನು ಮರುಪರಿಶೀಲಿಸಿ, ಅದನ್ನು ಕಡಿಮೆ ಮಾಡುವಂತೆ ಭಾರತ ಪಾಕ್ ಗೆ ಮನವಿ ಮಾಡಿದೆ.

    ವೀಸಾ ಮುಕ್ತವಾಗಿರುವ ಕಾರಣಕ್ಕೆ ಈ ಯಾತ್ರೆಗೆ ಹೋಗುವ ಯಾತ್ರಿಕರು ಸೂಕ್ತ ಪಾಸ್ ಪೋರ್ಟ್ ಮಾತ್ರ ಕೊಂಡೊಯ್ಯಬೇಕು. ಭಾರತೀಯ ಮೂಲದ ಯಾತ್ರಿಕರು ಪಾಸ್‍ಪೋರ್ಟ್ ನೊಂದಿಗೆ ಒಇಸಿ ಅನ್ನು (ಸಾಗರೋತ್ತರ ಪೌರತ್ವ ಕಾರ್ಡ್) ಕೂಡ ಕೊಂಡೊಯ್ಯಬೇಕಾಗುತ್ತದೆ. ಈ ಕಾರಿಡಾರ್ ಮುಂಜಾನೆಯಿಂದ ರಾತ್ರಿಯವರೆಗೆ ತೆರೆದಿರುತ್ತದೆ. ಹೀಗಾಗಿ ಬೆಳಗ್ಗೆ ಯಾತ್ರೆಗೆ ತೆರಳಿದ ಯಾತ್ರಿಕರು ಅದೇ ದಿನ ರಾತ್ರಿಯೊಳಗೆ ಹಿಂದಿರುಗಬೇಕಿದೆ.

    ಪಾಕಿಸ್ತಾನ ಬಾಬಾ ನಾನಕ್ ಅವರ ದರ್ಶನ ಹಾಗೂ ಪ್ರಸಾದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ. ಹಾಗೆಯೆ ಯಾತ್ರಿಕರು ಆನ್‍ಲೈನ್ ಮೂಲಕ ಯಾತ್ರೆಗೆ ನೋಂದಣಿ ಮಾಡಿಕೊಳ್ಳಬಹುದಾದ ವ್ಯವಸ್ಥೆಯನ್ನು ಕೂಡ ಕೇಂದ್ರ ಸರ್ಕಾರ ಮಾಡಿದ್ದು, https://mha.gov.in/ ಮೂಲಕ ನೊಂದಣಿ ಆಗಬಹುದಾಗಿದೆ.

  • ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಐಸಿಜೆ ತೀರ್ಪನ್ನು ಶ್ಲಾಘಿಸಿದ ಪಾಕ್ ಪ್ರಧಾನಿ

    ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಐಸಿಜೆ ತೀರ್ಪನ್ನು ಶ್ಲಾಘಿಸಿದ ಪಾಕ್ ಪ್ರಧಾನಿ

    – ಈ ಬಗ್ಗೆ ಪಾಕ್ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ತೇವೆ

    ಇಸ್ಲಾಮಾಬಾದ್: ಭಾರತೀಯ ಕಮಾಂಡರ್ ಕುಲಭೂಷಣ್ ಜಾಧವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಜೆ ನೀಡಿರುವ ತೀರ್ಪಿಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಟ್ವೀಟ್ ಮೂಲಕ ಶ್ಲಾಘಿಸಿದ್ದಾರೆ.

    ಕುಲಭೂಷಣ್ ಜಾಧವ್ ಪ್ರಕರಣದ ವಿಚಾರವಾಗಿ ಬುಧವಾರ ಐಸಿಜೆ ಕೋರ್ಟ್ ಪಾಕ್ ನೀಡಿರುವ ಗಲ್ಲು ಶಿಕ್ಷೆಗೆ ತಡೆ ನೀಡಿ ರಾಜತಾಂತ್ರಿಕ ನೆರವು ನೀಡಬೇಕೆಂದು ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಈಗ ಇಮ್ರಾನ್ ಖಾನ್ ಟ್ವೀಟ್ ಮಾಡಿ, ಕಮಾಂಡರ್ ಕುಲಭೂಷಣ್ ಜಾಧವ್ ಅವರನ್ನು ಖುಲಾಸೆಗೊಳಿಸಿ, ಬಿಡುಗಡೆ ಮಾಡದಿರುವ ಐಸಿಜೆ ನಿರ್ಧಾರವನ್ನು ಶ್ಲಾಘಿಸುತ್ತೇನೆ. ಆದರೆ ಪಾಕಿಸ್ತಾನದ ಜನರ ವಿರುದ್ಧ ಮಾಡಿರುವ ಅಪರಾಧಗಳಲ್ಲಿ ಅವರು ತಪ್ಪಿತ್ತಸ್ಥರಾಗಿದ್ದಾರೆ. ಪಾಕಿಸ್ತಾನವು ಕಾನೂನಿನ ಪ್ರಕಾರ ತನ್ನ ಕ್ರಮವನ್ನು ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.

    ಏನಿದು ಪ್ರಕರಣ?
    ಭಾರತದ ಪರ ಗೂಢಚರ್ಯೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ, ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. 2017ರ ಏಪ್ರಿಲ್ ನಲ್ಲಿ ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್‍ಪಿಆರ್) ತಿಳಿಸಿತ್ತು.

    ವಿಚಾರಣೆ ವೇಳೆ ರಾ ಪರ ನಾನು ಗೂಢಚರ್ಯೆ ನಡೆಸುತ್ತಿದ್ದ ವಿಚಾರವನ್ನು ಕುಲಭೂಷಣ ಜಾಧವ್ ತಪ್ಪೊಪ್ಪಿಕೊಂಡಿದ್ದರು ಎಂದು ಐಎಸ್‍ಪಿಆರ್ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿತ್ತು. ಕೂಲಭೂಷಣ್ ಜಾಧವ್ ನೌಕಾ ಸೇನೆಯ ನಿವೃತ್ತ ಅಧಿಕಾರಿಯಾಗಿದ್ದರು. ಆದರೆ ಅವರು ರಾ ಪರವಾಗಿ ಗೂಢಚರ್ಯೆ ನಡೆಸುತ್ತಿರುವ ಆರೋಪವನ್ನು ಭಾರತ ಸರ್ಕಾರ ನಿರಾಕರಿಸಿತ್ತು. 2016ರ ಮಾರ್ಚ್ 3ರಂದು ಬಲೂಚಿಸ್ತಾನದ ಮಶೇಕಲ್ ಎಂಬಲ್ಲಿ ಕುಲಭೂಷಣ್ ಜಾಧವ್ ಅವರು ಅರೆಸ್ಟ್ ಅಗಿದ್ದರು. ಅಲ್ಲದೆ 2017ರಲ್ಲಿ ಪಾಕಿಸ್ತಾನದ ಮಿಲಿಟರಿ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು.

    ವಿಯೆನ್ನಾ ಒಪ್ಪಂದದ ಪ್ರಕಾರ ಕುಲಭೂಷಣ್‍ಗೆ ಭಾರತ ರಾಜತಾಂತ್ರಿಕ ನೆರವು ನೀಡಲು ಅವಕಾಶ ಮಾಡಿಕೊಡಬೇಕಿತ್ತು. ಈ ಕುರಿತು 16 ಬಾರಿ ಭಾರತದ ಮಾಡಿದ್ದ ಮನವಿಯನ್ನು ಪಾಕಿಸ್ತಾನ ತಿರಸ್ಕರಿಸಿತ್ತು. ಹೀಗಾಗಿ ಭಾರತ ಮೇ 2017ರಂದು ಅಂತರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಿತ್ತು. ಪ್ರಕರಣವನ್ನು ಕೈಗೆತ್ತಿಕೊಂಡ 10 ಸದಸ್ಯರುಳ್ಳ ನ್ಯಾಯಪೀಠ 18 ಮೇ 2017ರಂದು ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಿತ್ತು.

    ಭಾರತ ಗಲ್ಲುಶಿಕ್ಷೆಯನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಿಕೊಂಡಿದ್ದು, ನಿವೃತ್ತ ನೌಕಾ ಸೇನಾಧಿಕಾರಿ ಕುಲಭೂಷಣ್‍ರನ್ನು ಇರಾನ್‍ನಿಂದ ಪಾಕಿಸ್ತಾನ ಕಿಡ್ನಾಪ್ ಮಾಡಿತ್ತು ಎಂಬ ಅಂಶವನ್ನು ಕೋರ್ಟ್ ನಲ್ಲಿ ಭಾರತ ಮಂಡಿಸಿತ್ತು.

  • ಆರ್ಥಿಕವಾಗಿ ಕುಸಿದಿರುವ ಪಾಕಿಗೆ ಎಫ್‍ಎಟಿಎಫ್‍ನಿಂದ ಕೊನೆಯ ಎಚ್ಚರಿಕೆ

    ಆರ್ಥಿಕವಾಗಿ ಕುಸಿದಿರುವ ಪಾಕಿಗೆ ಎಫ್‍ಎಟಿಎಫ್‍ನಿಂದ ಕೊನೆಯ ಎಚ್ಚರಿಕೆ

    ನವದೆಹಲಿ: ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್‍ಎಟಿಎಫ್) ಎಚ್ಚರಿಕೆ ನೀಡಿದೆ.

    ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್‍ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್‍ಎಟಿಎಫ್ ಅಲ್ಲಿ ಪಾಕಿಸ್ತಾನ ಬೂದು ಬಣ್ಣದ ಪಟ್ಟಿಯಲ್ಲಿದೆ. ಆದರೆ ಉಗ್ರರಿಗೆ ಹಣ ನೀಡಿ ಸಹಾಯ ಮಾಡುತ್ತಿರುವ ಜಾಲದ ವಿರುದ್ಧ ಅಕ್ಟೋಬರ್ ಒಳಗೆ ಕ್ರಮ ಕೈಗೊಳ್ಳಲು ಪಾಕಿಸ್ಥಾನ ವಿಫಲವಾದರೆ ಎಫ್‍ಎಟಿಎಫ್‍ನ ಕಪ್ಪು ಪಟ್ಟೆಗೆ ಪಾಕ್ ಸೇರಲಿದೆ.

    ಈ ಹಿಂದೆ ಉಗ್ರರ ದಮನದ ಕ್ರಿಯಾ ಯೋಜನೆ ಸಿದ್ಧಪಡಿಸಿ ಕ್ರಮ ಕೈಗೊಳ್ಳಲು ಜನವರಿಯವರೆಗೂ ಪಾಕ್‍ಗೆ ಗಡುವು ನೀಡಲಾಗಿತ್ತು. ಆದರೆ ಅದನ್ನು ಪೂರೈಸುವಲ್ಲಿ ಪಾಕ್ ವಿಫಲವಾಗಿತ್ತು. ಅಷ್ಟೇ ಅಲ್ಲ, ಮೇ 2019ರೊಳಗೆ ಉಗ್ರರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಗಡುವು ನೀಡಿತ್ತು. ಆದರೆ ಈ ಅವಕಾಶವನ್ನು ಕೂಡ ಉಪಯೋಗಿಸಿಕೊಳ್ಳುವಲ್ಲಿ ಪಾಕ್ ವಿಫಲವಾಗಿದೆ.

    ಅಕ್ಟೋಬರ್ 2019ರ ಒಳಗಾಗಿ ಉಗ್ರರ ವಿರುದ್ಧ ಕ್ರಿಯಾ ಯೋಜನೆ ಸಿದ್ಧಪಡಿಸಿ ಕ್ರಮ ತೆಗೆದುಕೊಳ್ಳುವಂತೆ ಎಫ್‍ಎಟಿಎಫ್ ಪಾಕಿಸ್ತಾನವನ್ನು ಆಗ್ರಹಿಸಿದೆ. ಇದೇ ಕೊನೆಯ ಅವಕಾಶವಾಗಿದ್ದು, ಮತ್ತೆ ಪಾಕ್ ವಿಫಲವಾದಲ್ಲಿ ಕಪ್ಪು ಪಟ್ಟಿಗೆ ಸೇರಿಸುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದೆ.

    ಫ್ಲೋರಿಡಾದಲ್ಲಿ ನಡೆದ ಸಭೆಯಲ್ಲಿ ಪಾಕ್ ಮೇಲೆ ಮತ್ತಷ್ಟು ಒತ್ತಡ ಹೇರುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ. ಅಕ್ಟೋಬರ್ ನಲ್ಲಿ ನಡೆಯುವ ಮಹಾ ಸಭೆಯಲ್ಲಿ ಈ ಸಂಬಂಧ ವೋಟಿಂಗ್ ನಡೆಯಲಿದ್ದು ಅದರ ಆಧಾರದ ಮೇಲೆ ನಿರ್ಣಯ ತೆಗೆದುಕೊಳ್ಳಲಾಗುವುದು. ಈ ವೋಟಿಂಗ್ ಮೇಲೆ ಪಾಕಿಸ್ತಾನದ ಭವಿಷ್ಯ ನಿಂತಿದೆ.

    ಈ ಹಿಂದೆ ಜೈಷ್-ಇ-ಮೊಹಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜಾರ್‍ನನ್ನು ವಿಶ್ವಸಂಸ್ಥೆ ಜಾಗತೀಕ ಉಗ್ರರ ಪಟ್ಟಿಗೆ ಸೇರಿಸಿದೆ. ಈ ಹಿನ್ನೆಲೆಯಲ್ಲಿ ಭಾರತವು ಎಫ್‍ಎಟಿಎಫ್‍ಗೆ ಪಾಕಿಸ್ಥಾನವನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಮನವಿ ಮಾಡಿತ್ತು. ಅಲ್ಲದೆ ಪಾಕಿಸ್ಥಾನವನ್ನು ಕಪ್ಪು ಪಟ್ಟಿಗೆ ಸೇರಿಸುವುದನ್ನು ತಡೆಯಲು ಕನಿಷ್ಠ ಮೂರು ರಾಷ್ಟ್ರಗಳ ಬೆಂಬಲ ಪಾಕ್‍ಗೆ ಇರಬೇಕು. ಈಗಾಗಲೇ ಚೀನಾ, ಮಲೇಷ್ಯಾ ಹಾಗೂ ಟರ್ಕಿ ದೇಶಗಳು ಪಾಕ್ ಪರ ನಿಂತಿದೆ ಎನ್ನಲಾಗುತ್ತಿದೆ.

    ಕಳೆದ ವರ್ಷದ ಪಾಕಿಸ್ಥಾನವನ್ನು ಬೂದು ಬಣ್ಣದ ಪಟ್ಟಿಗೆ ಸೇರಿಸಿದ ಮೇಲೆ ಎಫ್‍ಎಟಿಎಫ್ ಪಾಕ್‍ಗೆ 27 ಅಂಶಗಳುಳ್ಳ ಕ್ರಿಯಾ ಯೋಜನೆ ಪಟ್ಟಿಯನ್ನು ನೀಡಿತ್ತು. ಹಾಗೆಯೇ ಇದನ್ನು ಪೂರ್ಣಗೊಳಿಸಿದರೆ ಪಾಕಿಸ್ಥಾನವನ್ನು ಬೂದು ಬಣ್ಣದ ಪಟ್ಟಿಯಿಂದ ತೆಗೆಯಲಾಗುತ್ತದೆ ಎಂದು ಸೂಚಿಸಿತ್ತು. ಕಳೆದ ತಿಂಗಳು ಚೀನಾದಲ್ಲಿ ನಡೆದ ಸಭೆಯಲ್ಲಿ 27 ಅಂಶಗಳಲ್ಲಿ 18 ಅಂಶಗಳನ್ನು ಇನ್ನೂ ಪಾಕಿಸ್ಥಾನ ಬಾಕಿ ಉಳಿಸಿಕೊಂಡಿದೆ ಎನ್ನಲಾಗಿದೆ. ಅಲ್ಲದೆ ಅಕ್ಟೋಬರ್‍ನಲ್ಲಿ ಎಫ್‍ಎಟಿಎಫ್ ಸಭೆಯಲ್ಲಿ ನಡೆಯುವ ವೋಟಿಂಗ್‍ನಲ್ಲಿ 36 ಮತದಲ್ಲಿ ಕನಿಷ್ಠ 15 ಮತ ಇಸ್ಲಾಮಾಬಾದ್ ಪಡೆದರೆ ಬೂದು ಪಟ್ಟಿಯಿಂದ ಅದನ್ನು ಮುಕ್ತಗೊಳಿಸಲಾಗುತ್ತದೆ ಎಂದು ಎಫ್‍ಎಟಿಎಫ್ ತಿಳಿಸಿದೆ.

    ಏರ್ ಸ್ಟ್ರೈಕ್ ಮೂಲಕ ಶಾಕ್ ಕೊಟ್ಟು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನವನ್ನು ಏಕಾಂಗಿಯಾಗಿಸುವ ನಿಟ್ಟಿನಲ್ಲಿ ಭಾರತ ನಿರಂತರ ಪ್ರಯತ್ನ ನಡೆಸುತ್ತಿರುವುದು ಪಾಕಿಗೆ ಈಗ ಭಾರೀ ತಲೆನೋವು ತಂದಿಟ್ಟಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ನಡೆಸುವ ತೆರೆಮರೆಯ ಲಾಬಿಯಿಂದ ಎಫ್‍ಎಟಿಎಫ್ ಕಪ್ಪು ಪಟ್ಟಿಗೆ ಸೇರಬಹುದಾದ ಭೀತಿ ಆವರಿಸಿದೆ ಎಂದು ಪಾಕ್ ವಿದೇಶಾಂಗ ಸಚಿವ ಖುರೇಷಿ ಈ ಹಿಂದೆಯೇ ಆತಂಕ ವ್ಯಕ್ತಪಡಿಸಿದ್ದರು.

    ಬೂದು ಪಟ್ಟಿಯಲ್ಲಿ (ಗ್ರೇ ಲಿಸ್ಟ್) ಪಾಕಿಸ್ತಾನ ಮುಂದುವರಿಯುತ್ತಿರುವುದರಿಂದ ವಾರ್ಷಿಕವಾಗಿ 68 ಸಾವಿರ ಕೋಟಿ ರೂ. ನಷ್ಟ ಅನುಭವಿಸುತ್ತಿದೆ ಎಂದು ಖುರೇಷಿ ತಿಳಿಸಿದ್ದಾರೆ. ಈಗ ಭಾರತ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲು ಹರಸಹಾಸ ಪಡುತ್ತಿದೆ. ಇದಕ್ಕಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಲಾಬಿ ಮಾಡುತ್ತಿದೆ ಎಂದು ಹೇಳಿದ್ದಾರೆ. ಒಂದು ವೇಳೆ ಕಪ್ಪು ಪಟ್ಟಿಗೆ ಸೇರಿದ್ದೇ ಆದಲ್ಲಿ ನಮಗೆ ಭಾರೀ ನಷ್ಟವಾಗಲಿದೆ ಎಂದು ತಿಳಿಸಿದ್ದರು.

    ಆಗಿದ್ದು ಏನು?
    ಪುಲ್ವಾಮಾ ದಾಳಿಯಾದ ನಂತರ ಪಾಕಿಸ್ತಾನವನ್ನು ಯಾವುದೇ ಕಾರಣಕ್ಕೂ ಗ್ರೇ ಪಟ್ಟಿಯಿಂದ ಹೊರಗಡೆ ಇಡಬಾರದು ಎಂದು ಭಾರತ ಒತ್ತಾಯಿಸಿತ್ತು. ಇದರ ಬೆನ್ನಲ್ಲೇ ಫ್ರಾನ್ಸ್ ಸಹ ಪಾಕಿಸ್ತಾನವನ್ನು ಗ್ರೇ ಪಟ್ಟಿಯಲ್ಲೇ ಇರಿಸುವಂತೆ ಎಫ್‍ಎಟಿಎಫ್ ಮೇಲೆ ಒತ್ತಡ ಹಾಕಿತ್ತು.

    ಉಗ್ರಗಾಮಿಗಳಿಗೆ ಪ್ರೋತ್ಸಾಹ ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದ ಒತ್ತಡ ಜಾಸ್ತಿಯಾದ ಹಿನ್ನೆಲೆಯಲ್ಲಿ ಎಫ್‍ಎಟಿಎಫ್ ಪಾಕಿಸ್ತಾನವನ್ನು ಮುಂದಿನ ಅಕ್ಟೋಬರ್ ವರೆಗೆ ಗ್ರೇ ಪಟ್ಟಿಯಲ್ಲಿ ಮುಂದುವರಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಗ್ರೇ ಪಟ್ಟಿಯಿಂದ ಹೊರಗೆ ಬರಲು ಪಾಕಿಸ್ತಾನ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಮನವಿ ಮಾಡಿತ್ತು. ಆದರೆ ಪಾಕ್ ಮನವಿಯನ್ನು ಇತರೇ ರಾಷ್ಟ್ರಗಳು ಗಂಭೀರವಾಗಿ ಸ್ವೀಕರಿಸಿರಲಿಲ್ಲ.

    1989ರಲ್ಲಿ ಎಫ್‍ಎಟಿಎಫ್ ಸ್ಥಾಪಿಸಲಾಗಿದ್ದು, ಉಗ್ರರಿಗೆ ಹಣಕಾಸು ಪೂರೈಕೆ ತಡೆ, ಅಕ್ರಮ ಹಣ ವರ್ಗಾವಣೆ, ಅಂತರಾಷ್ಟ್ರೀಯ ಹಣಕಾಸು ವ್ಯವಸ್ಥೆ ಬೆದರಿಕೆ ಒಡ್ಡುವ ಕೃತ್ಯಗಳನ್ನು ತಡೆಯುವ ಕೆಲಸವನ್ನು ಈ ಕ್ರಿಯಾಪಡೆ ಮಾಡುತ್ತದೆ. ವಿಶ್ವದ ಒಟ್ಟು 38 ರಾಷ್ಟ್ರಗಳು ಎಫ್‍ಎಟಿಎಫ್ ಸದಸ್ಯ ರಾಷ್ಟ್ರಗಳಾಗಿವೆ. ತಾನು ನಿಗದಿಪಡಿಸಿದ ಕ್ರಮಗಳನ್ನು ಅನುಸರಿಸದೇ ಇದ್ದರೆ ಎಫ್‍ಎಟಿಎಫ್ ದೇಶಗಳನ್ನು ಗ್ರೇ ಅಥವಾ ಬ್ಲಾಕ್ ಲಿಸ್ಟ್ ಗೆ ಹಾಕುತ್ತದೆ. 2019ರ ಅಕ್ಟೋಬರ್ ಒಳಗಡೆ ಪಾಕಿಸ್ತಾನ ಎಫ್‍ಎಟಿಎಫ್ 27 ಬೇಡಿಕೆಯನ್ನು ಈಡೇರಿಸದೇ ಇದ್ದರೆ ಕಪ್ಪು ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ.

    ಏನಿದು ಗ್ರೇ ಲಿಸ್ಟ್?
    ಫುಟ್ ಬಾಲ್ ಪಂದ್ಯಗಳಲ್ಲಿ ತಪ್ಪು ಮಾಡಿದ ಆಟಗಾರಿಗೆ ಹೇಗೆ ಹಳದಿ ಕಾರ್ಡ್ ನೀಡಿ ಎಚ್ಚರಿಕೆ ನೀಡುತ್ತಾರೋ ಅದೇ ರೀತಿಯಾಗಿ ರಾಷ್ಟ್ರವೊಂದಕ್ಕೆ ಮೊದಲ ಎಚ್ಚರಿಕೆ ನೀಡಲು ಈ ಪಟ್ಟಿಗೆ ಸೇರಿಸಲಾಗುತ್ತದೆ. ಗ್ರೇ ಪಟ್ಟಿಗೆ ಒಂದು ದೇಶ ಸೇರಿದರೆ ಅದಕ್ಕೆ ಹಲವು ಸಮಸ್ಯೆಗಳಾಗುತ್ತದೆ. ವಿವಿಧ ಹಣಕಾಸು ಸಂಸ್ಥೆಗಳು(ಐಎಂಎಫ್, ವಿಶ್ವಬ್ಯಾಂಕ್) ಸಾಲ ನೀಡಲು ಹಿಂದೇಟು ಹಾಕಬಹುದು. ಆರ್ಥಿಕ ನಿರ್ಬಂಧ ಹೇರಬಹುದು. ರಾಷ್ಟ್ರಗಳು ವ್ಯಾಪಾರವನ್ನು ಕಡಿತಗೊಳಿಸಬಹುದು. ರೇಟಿಂಗ್ ಏಜೆನ್ಸಿಗಳು ದೇಶಕ್ಕೆ ಕಡಿಮೆ ರೇಟಿಂಗ್ ಕೊಡಹುದು.

    ಏನಿದು ಕಪ್ಪು ಪಟ್ಟಿ?
    ಎಫ್‍ಎಟಿಎಫ್ ನಿಗದಿ ಪಡಿಸಿದ ಮಾನದಂಡಕ್ಕೆ ಅನುಗುಣವಾಗಿ ಕೆಲಸ ಮಾಡದೇ ಇದ್ದರೆ ಗ್ರೇ ಪಟ್ಟಿಯಲ್ಲಿರುವ ದೇಶವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ.

    ಪಾಕಿಸ್ತಾನಕ್ಕೆ ಹೊಸದೆನಲ್ಲ:
    ಕುತಂತ್ರಿ ಪಾಕಿಸ್ತಾನಕ್ಕೆ ಗ್ರೇ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ಹೊಸದೆನಲ್ಲ. ಈ ಹಿಂದೆ 2012 ರಿಂದ 2015 ರವರೆಗೆ ಗ್ರೇ ಪಟ್ಟಿಯಲ್ಲಿತ್ತು. ಭಾರತದ ನಿರಂತರ ಒತ್ತಡದ ಬಳಿಕ 2018ರ ಜೂನ್ ಕೊನೆಯಲ್ಲಿ ಗ್ರೇ ಪಟ್ಟಿಗೆ ಪಾಕಿಸ್ತಾನವನ್ನು ಸೇರಿಸಲಾಗಿತ್ತು. ಈಗಾಗಲೇ ಆರ್ಥಿಕ ಸಂಕಷ್ಟಕ್ಕೆ ಪಾಕಿಸ್ತಾನ ಸಿಲುಕಿದ್ದು ವಿಶ್ವದ ರಾಷ್ಟ್ರಗಳಿಂದ ಭಿಕ್ಷೆ ಬೇಡಿ ತಿನ್ನುವ ಪರಿಸ್ಥಿತಿಗೆ ಬಂದಿದೆ. ಒಂದು ವೇಳೆ ಕಪ್ಪು ಪಟ್ಟಿಗೆ ಸೇರ್ಪಡೆಯಾದರೆ ಈಗಾಗಲೇ ವಿವಿಧ ರಾಷ್ಟ್ರಗಳಿಂದ ಸಾಲ ಮಾಡಿ ಪಾಕಿಸ್ತಾನದ ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಟ್ಟು ಡೋಲಾಯಮಾನವಾಗಬಹುದು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]